ಲಖನೌ: ಬಹುಜನ ಸಮಾಜ ಪಕ್ಷದ (BSP) ವರಿಷ್ಠ ನಾಯಕಿ ಮಾಯಾವತಿ (Mayawati) ಅವರು ಸೋದರಳಿಯ ಆಕಾಶ್ ಆನಂದ್ (Akash Anand) ಅವರನ್ನು ತಮ್ಮ ಉತ್ತರಾಧಿಕಾರಿ ಹುದ್ದೆಯಿಂದ ವಜಾಗೊಳಿಸಿದ್ದಾರೆ. ನೇಮಕ ಮಾಡಿದ ಐದೇ ತಿಂಗಳಲ್ಲಿ ಬಿಎಸ್‌ಪಿಯ ರಾಷ್ಟ್ರೀಯ ಸಂಚಾಲಕ ಹುದ್ದೆಯಿಂದಲೂ ಮಾಯಾವತಿಯವರು ವಜಾಗೊಳಿಸಿದ್ದಾರೆ. ಲೋಕಸಭೆ ಚುನಾವಣೆ ಹೊತ್ತಿನಲ್ಲಿಯೇ ಮಾಯಾವತಿಯವರು ಇಂತಹ ತೀರ್ಮಾನ ತೆಗೆದುಕೊಂಡಿರುವುದು ಭಾರಿ ಚರ್ಚೆಗೂ ಗ್ರಾಸವಾಗಿದೆ.
ಆಕಾಶ್ ಆನಂದ್ ಅವರನ್ನು ಜವಾಬ್ದಾರಿಯಿಂದ ಮುಕ್ತಿಗೊಳಿಸಿರುವ ಕುರಿತು ಮಾಯಾವತಿಯವರೇ ಜಾಲತಾಣದಲ್ಲಿ ಮಾಹಿತಿ ನೀಡಿದ್ದಾರೆ. “ಆಕಾಶ್ ಆನಂದ್ ಅವರಿಗೆ ಪಕ್ಷದಲ್ಲಿ ಉನ್ನತ ಸ್ಥಾನಗಳನ್ನು ನಿಯೋಜಿಸಲಾಗಿತ್ತು. ಆದರೆ, ಬದಲಾದ ಸಾಮಾಜಿಕ ವ್ಯವಸ್ಥೆ, ಬೆಳವಣಿಗೆಗಳನ್ನು ಗಮನದಲ್ಲಿಟ್ಟುಕೊಂಡು ಅವರನ್ನು ರಾಷ್ಟ್ರೀಯ ಸಂಚಾಲಕ ಹಾಗೂ ಉತ್ತರಾಧಿಕಾರಿ ಹುದ್ದೆಯಿಂದ ತೆರವುಗೊಳಿಸಲಾಗಿದೆ. ಈಗಲೂ ಪಕ್ಷವು ಡಾ.ಬಿ.ಆರ್.ಅಂಬೇಡ್ಕರ್ ಅವರ ಚಿಂತನೆಗಳನ್ನು ಪಾಲಿಸಲು ಕಟಿಬದ್ಧವಾಗಿದೆ” ಎಂದು ತಿಳಿಸಿದ್ದಾರೆ.
1. विदित है कि बीएसपी एक पार्टी के साथ ही बाबा साहेब डा भीमराव अम्बेडकर के आत्म-सम्मान व स्वाभिमान तथा सामाजिक परिवर्तन का भी मूवमेन्ट है जिसके लिए मान्य. श्री कांशीराम जी व मैंने खुद भी अपनी पूरी ज़िन्दगी समर्पित की है और इसे गति देने के लिए नई पीढ़ी को भी तैयार किया जा रहा है।
— Mayawati (@Mayawati) May 7, 2024
ಮಾಯಾವತಿ ಅವರು 2019ರಲ್ಲಿ ಆಕಾಶ್ ಆನಂದ್ ಅವರನ್ನು ಬಿಎಸ್‌ಪಿ ರಾಷ್ಟ್ರೀಯ ಸಂಚಾಲಕರನ್ನಾಗಿ ನೇಮಿಸಿದ್ದರು. 2023ರ ಡಿಸೆಂಬರ್‌ನಲ್ಲಿ ಅವರು ಸೋದರಳಿಯನನ್ನೇ ಉತ್ತರಾಧಿಕಾರಿ ಎಂಬುದಾಗಿ ಘೋಷಿಸಿದ್ದರು. ಆದರೆ, ಈಗ ದಿಢೀರನೆ ಅವರನ್ನು ಎರಡೂ ಹುದ್ದೆಗಳಿಂದ ತೆರವುಗೊಳಿಸಲು ಏನು ಕಾರಣ ಎಂಬುದು ಸ್ಪಷ್ಟವಾಗಿಲ್ಲ. ಆದಾಗ್ಯೂ, ಮೊದಲಿನಂತೆ ಸಹೋದರ, ಆಕಾಶ್ ಆನಂದ್ ಅವರ ತಂದೆ ಆನಂದ್ ಕುಮಾರ್ ಅವರು ಜವಾಬ್ದಾರಿ ನಿಭಾಯಿಸಲಿದ್ದಾರೆ ಎಂಬುದಾಗಿ ಮಾಯಾವತಿ ಹೇಳೀದ್ದಾರೆ.
ಯಾರಿವರು ಆಕಾಶ್ ಆನಂದ್?
ಆಕಾಶ್ ಆನಂದ್ ತಮ್ಮ 22ನೇ ವಯಸ್ಸಿನಲ್ಲಿ 2017ರಲ್ಲಿ ರಾಜಕಾರಣವನ್ನು ಪ್ರವೇಶಿಸಿದರು. ಲಂಡನ್‌ನಲ್ಲಿ ಓದಿರುವ ಆಕಾಶ್ ಎಂಬಿಎ ಪದವೀಧರರು. ಉತ್ತರ ಪ್ರದೇಶದ ಸಹರಾನ್‌ಪುರದಲ್ಲಿ ನಡೆದ ರ‍್ಯಾಲಿಯಲ್ಲಿ ಮಾಯಾವತಿಯವರೊಂದಿಗೆ ಅವರ ರಾಜಕೀಯ ಚೊಚ್ಚಲ ಪ್ರವೇಶವಾಗಿತ್ತು, ಅಲ್ಲಿ ಅವರು ಅಖಿಲೇಶ್ ಯಾದವ್ ಮತ್ತು ಅಜಿತ್ ಸಿಂಗ್ ಅವರೊಂದಿಗೆ ವೇದಿಕೆ ಹಂಚಿಕೊಂಡಿದ್ದರು.
ಸಾಮಾನ್ಯವಾಗಿ ಬಹುಜನ ಸಮಾಜ ಪಾರ್ಟಿಯ ಪಾದಯಾತ್ರೆಗಳಂಥ ರಾಜಕೀಯ ಚಟುವಟಿಕೆಗಳನ್ನು ನಡೆಸುವುದಿಲ್ಲ. ಆದರೆ, ಆಕಾಶ್ ಆನಂದ್ ಅವರು ಈ ಪದ್ಧತಿಯನ್ನು ಮುರಿದು ಇದೇ ಮೊದಲ ಬಾರಿಗೆ, 14 ದಿನಗಳ ಸರ್ವಜನ ಹಿತಾಯ, ಸರ್ವಜನ ಸುಖಾಯ ಸಂಕಲ್ಪ ಯಾತ್ರೆಯನ್ನು ಕೈಗೊಂಡಿದ್ದರು. ಮಧ್ಯಪ್ರದೇಶ, ಛತ್ತೀಸ್‌ಗಢ ಮತ್ತು ತೆಲಂಗಾಣದಲ್ಲಿ ಬಿಎಸ್‌ಪಿಗಾಗಿ ವ್ಯಾಪಕವಾಗಿ ಕೆಲಸ ಮಾಡಿದ್ದಾರೆ.
ಇದನ್ನೂ ಓದಿ: Politicians Scandals : ದೇಶದ ರಾಜಕಾರಣದಲ್ಲಿ ಸಂಚಲನ ಮೂಡಿಸಿದ್ದ ಲೈಂಗಿಕ ಹಗರಣಗಳಿವು!