UPSC Results 2023: ಎಂಎನ್‌ಸಿ ಕೆಲಸ ಬಿಟ್ಟ ಆದಿತ್ಯಗೆ ಯುಪಿಎಸ್‌ಸಿ ಫಸ್ಟ್‌ ರ‍್ಯಾಂಕ್;‌ ಯಾರಿವರು? - Vistara News

ಪ್ರಮುಖ ಸುದ್ದಿ

UPSC Results 2023: ಎಂಎನ್‌ಸಿ ಕೆಲಸ ಬಿಟ್ಟ ಆದಿತ್ಯಗೆ ಯುಪಿಎಸ್‌ಸಿ ಫಸ್ಟ್‌ ರ‍್ಯಾಂಕ್;‌ ಯಾರಿವರು?

UPSC Results 2023: ಯುಪಿಎಸ್‌ಸಿ ಫಲಿತಾಂಶ ಪ್ರಕಟವಾಗಿದ್ದು, ಉತ್ತರ ಪ್ರದೇಶದ ಆದಿತ್ಯ ಶ್ರೀವಾಸ್ತವ್‌ ಅವರು ದೇಶಕ್ಕೇ ಮೊದಲ ರ‍್ಯಾಂಕ್‌ ಗಳಿಸಿದ್ದಾರೆ. ಐಐಟಿ ಕಾನ್ಪುರದಲ್ಲಿ ಅಧ್ಯಯನ ಮಾಡಿರುವ ಇವರು ಯುಪಿಎಸ್‌ಸಿಗೆ ತಯಾರಿ ನಡೆಸಲು ಎಂಎನ್‌ಸಿ ಕೆಲಸವನ್ನೇ ಬಿಟ್ಟಿದ್ದರು. ಸತತ ಪ್ರಯತ್ನದ ಬಳಕ ಇವರೀಗ ಮೊದಲ ರ‍್ಯಾಂಕ್‌ ಪಡೆದಿದ್ದಾರೆ. ಇವರು ಯಾರು? ಹಿನ್ನೆಲೆ ಏನು ಎಂಬುದರ ಕುರಿತ ಮಾಹಿತಿ ಹೀಗಿದೆ…

VISTARANEWS.COM


on

Aditya Srivastava
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ನವದೆಹಲಿ: ಕೇಂದ್ರ ಲೋಕ ಸೇವಾ ಆಯೋಗ (UPSC) ನಡೆಸಿದ ನಾಗರಿಕ ಸೇವೆಗಳ ಪರೀಕ್ಷೆಯ (UPSC Results 2023) ಫಲಿತಾಂಶ ಪ್ರಕಟವಾಗಿದ್ದು, ಆದಿತ್ಯ ಶ್ರೀವಾಸ್ತವ್‌ (Aditya Srivastava) ಅವರು ದೇಶದಲ್ಲೇ ಮೊದಲ ರ‍್ಯಾಂಕ್‌ ಗಳಿಸಿದ್ದಾರೆ. ಆ ಮೂಲಕ ಇವರು ಮಹತ್ವದ ಸಾಧನೆ ಮಾಡಿದ್ದಾರೆ. ಯುಪಿಎಸ್‌ಸಿ ಪರೀಕ್ಷೆಗೆ ತಯಾರಾಗುತ್ತಿರುವ ಯಾರಿಗೇ ಆಗಲಿ ಆದಿತ್ಯ ಶ್ರೀವಾಸ್ತವ್‌ ಅವರು ಮಾದರಿಯಾಗಿದ್ದಾರೆ. ಹಾಗಾದರೆ, ಯಾರಿವರು ಆದಿತ್ಯ ಶ್ರೀವಾಸ್ತವ್?‌ ಇವರ ಹಿನ್ನೆಲೆ ಏನು ಎಂಬುದರ ಮಾಹಿತಿ ಇಲ್ಲಿದೆ.

ಆದಿತ್ಯ ಶ್ರೀವಾಸ್ತವ್‌ ಅವರು ಉತ್ತರ ಪ್ರದೇಶದ ಲಖನೌ ಮೂಲದವರು. ಇವರು ಪ್ರಾಥಮಿಕ ಹಾಗೂ ಮಾಧ್ಯಮಿಕ ಶಿಕ್ಷಣವನ್ನು ಲಖನೌನಲ್ಲಿಯೇ ಮುಗಿಸಿದ್ದಾರೆ. ಐಐಟಿ ಕಾನ್ಪುರದಲ್ಲಿ ಎಂ.ಟೆಕ್‌ ಸ್ನಾತಕೋತ್ತರ ಪದವಿ ಪಡೆದ ಇವರು 15 ತಿಂಗಳು ಬಹುರಾಷ್ಟ್ರೀಯ ಕಂಪನಿಯೊಂದರಲ್ಲಿ ಕೆಲಸ ಮಾಡಿದ್ದರು. ಆದರೆ, ಐಎಎಸ್‌ ಅಧಿಕಾರಿಯಾಗಬೇಕು ಎಂಬ ಕನಸು ಹೊತ್ತ ಇವರು ಎಲೆಕ್ಟ್ರಿಕಲ್‌ ಎಂಜಿನಿಯರ್ ಉದ್ಯೋಗ ಬಿಟ್ಟು ಐಎಎಸ್‌ಗೆ ಅಧ್ಯಯನ ಮಾಡಲು ಆರಂಭಿಸಿದರು.

2017ರಿಂದಲೂ ಸತತ ಪ್ರಯತ್ನ

ಹಣಕಾಸು ಪರಿಸ್ಥಿತಿಯ ಹಿನ್ನೆಲೆಯಲ್ಲಿ ಎಂಎನ್‌ಸಿಯಲ್ಲಿ ಕೆಲಸ ಮಾಡಿದ ಆದಿತ್ಯ ಶ್ರೀವಾಸ್ತವ್‌ ಅವರು ನಾಗರಿಕ ಸೇವೆಯ ಕಾರಣಕ್ಕಾಗಿ 2017ರಲ್ಲಿ ಉದ್ಯೋಗ ತೊರೆದು, ಐಎಎಸ್‌ಗೆ ತಯಾರಿ ನಡೆಸಿದರು. ಸತತ ಪ್ರಯತ್ನದ ಮೂಲಕ ಇವರು ಈಗ ಯುಪಿಎಸ್‌ಸಿಯಲ್ಲಿ ಮೊದಲ ರ‍್ಯಾಂಕ್‌ ಗಳಿಸಿದ್ದಾರೆ.

ಆದಿತ್ಯ ಶ್ರೀವಾಸ್ತವ್‌ ಸಂದರ್ಶನ‌ (ಅಣಕು ಸಂದರ್ಶನ)

2023ರ ಸೆಪ್ಟೆಂಬರ್ 15, 16, 17, 23 ಮತ್ತು 24ರಂದು ನಡೆದ ಪರೀಕ್ಷೆಗಳಲ್ಲಿ ನಾಗರಿಕ ಸೇವೆಗಳ ಮುಖ್ಯ ಸಂದರ್ಶನ ಪರೀಕ್ಷೆಗೆ ಅರ್ಹತೆ ಪಡೆದ ಅಭ್ಯರ್ಥಿಗಳನ್ನು ಸೇವಾ ಆಯೋಗವು 2024ರ ಮೊದಲ ಎರಡು ತಿಂಗಳಲ್ಲಿ ಸಂದರ್ಶಿಸಿತು. 2023ರ ಸೆಪ್ಟೆಂಬರ್‌ನಲ್ಲಿ ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ ನಡೆಸಿದ ನಾಗರಿಕ ಸೇವೆಗಳ ಲಿಖಿತ ಪರೀಕ್ಷೆಯ ಫಲಿತಾಂಶ ಮತ್ತು 2024ರ ಜನವರಿ- ಏಪ್ರಿಲ್‌ಲ್ಲಿ ನಡೆದ ವ್ಯಕ್ತಿತ್ವ ಪರೀಕ್ಷೆಯ ಸಂದರ್ಶನಗಳ ಆಧಾರದ ಮೇಲೆ ಒಟ್ಟು 1,016 ಅಭ್ಯರ್ಥಿಗಳನ್ನು ನೇಮಕಾತಿಗೆ ಶಿಫಾರಸು ಮಾಡಲಾಗಿದೆ. ಭಾರತೀಯ ಆಡಳಿತ ಸೇವೆ, ಭಾರತೀಯ ವಿದೇಶಾಂಗ ಸೇವೆ, ಭಾರತೀಯ ಪೊಲೀಸ್ ಸೇವೆ ಮತ್ತು ಕೇಂದ್ರ ಸೇವೆಗಳಲ್ಲಿ ಗುಂಪು ʼಎʼ ಮತ್ತು ಗುಂಪು ʼಬಿʼ ಹುದ್ದೆಗಳಿಗೆ ಇವರು ನಿಯುಕ್ತರಾಗುತ್ತಾರೆ.

ಫಲಿತಾಂಶವನ್ನು ಪರಿಶೀಲಿಸಲು ಹೀಗೆ ಮಾಡಿ:

1) ನಿಮ್ಮ ಬ್ರೌಸರ್‌ನಲ್ಲಿ upsc.gov.in ತೆರೆಯಿರಿ

2) What’s New ಸೆಕ್ಷನ್‌ನ ಅಡಿಯಲ್ಲಿ ‘UPSC Civil Services Examination 2023 Final Results’ ಎಂಬುದರ ಮೇಲೆ ಕ್ಲಿಕ್ ಮಾಡಿ.

3) ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳ ಹೆಸರನ್ನು ಪಿಡಿಎಫ್ ಮೂಲಕ ನೀಡಲಾಗಿರುವುದು ತೆರೆಯುತ್ತದೆ.

ಇದನ್ನೂ ಓದಿ: UPSC CSE 2024: ಯುಪಿಎಸ್‌ಸಿ ಪರೀಕ್ಷೆಗೆ ಅರ್ಜಿ ಸಲ್ಲಿಸುವ ನಿಯಮದಲ್ಲಿದೆ ಕೆಲವು ಬದಲಾವಣೆ; ಇಲ್ಲಿದೆ ಮಾಹಿತಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ

Latest

ಸಿಎಂ ವಿಜಯ್‌ ಮೊದಲ ಭಾಷಣ : “8 ಕೋಟಿ ಜನರೂ ನನ್ನವರೇ” ಎಂದ ವಿಜಯ್‌

VISTARANEWS.COM


on

ತಮಿಳುನಾಡಿನ ನೂತನ ಮುಖ್ಯಮಂತ್ರಿ ಜೋಸೆಫ್‌ ವಿಜಯ್‌ ಪದಗ್ರಹಣದ ಬಳಿಕ ತಮ್ಮ ಮೊದಲ ಭಾಷಣದಲ್ಲಿ ಜನತೆಗೆ ತಾನು ಕೊಟ್ಟಿರುವ ಎಲ್ಲಾ ಭರವಸೆಗಳನ್ನು ಈಡೇರಿಸುವುದಾಗಿ ಸ್ಪಷ್ಟಪಡಿಸಿದರು.

“ನಾನು ಕೊಟ್ಟಿರುವ ಎಲ್ಲಾ ಭರವಸೆಗಳನ್ನು ಈಡೇರಿಸುತ್ತೇನೆ. ತಮಿಳುನಾಡಿನ 8 ಕೋಟಿ ಜನರೂ ನನ್ನವರೇ. ನಾನು ನಿಮ್ಮಲ್ಲೊಬ್ಬ., ನಿಮ್ಮ ಕುಟುಂಬದ ಸದಸ್ಯ, ನಿಮ್ಮ ಮನೆ ಮಗನಾಗಿ ಕೆಲಸ ಮಾಡುತ್ತೇನೆ” ಎಂದು ವಿಜಯ್‌ ಹೇಳಿದರು.

“ಇಲ್ಲಿರುವುದು ಒಂದೇ ಪವರ್‌ ಸೆಂಟರ್‌. ಆ ಕಡೆ ಒಂದು, ಈ ಕಡೆ ಒಂದು ಪವರ್‌ ಸೆಂಟರ್‌ ಇಲ್ಲ. ತಮಿಳುನಾಡಿನಲ್ಲಿ ಹೊಸ ಯುಗಾರಂಭ ಆಗಿದೆ” ಎಂದು ಅವರು ಘೋಷಿಸಿದರು.

ಹಿಂದೂ, ಕ್ರೈಸ್ತ ಹಾಗೂ ಮುಸ್ಲಿಂ ಸೇರಿದಂತೆ ಎಲ್ಲ ಧರ್ಮಗಳ ಜನರ ಹಿತ ಕಾಪಾಡುವುದಾಗಿ ಹೇಳಿದ ವಿಜಯ್‌, “ನಿಜವಾದ ಜಾತ್ಯಾತೀತ ಹಾಗೂ ಸಮಾಜವಾದಿ ಆಡಳಿತ ಆರಂಭವಾಗಿದೆ” ಎಂದು ತಿಳಿಸಿದರು.

ತಮ್ಮ ಸರ್ಕಾರ ರಚನೆಗೆ ಬೆಂಬಲ ನೀಡಿದ ಕಾಂಗ್ರೆಸ್‌, ವಿಸಿಕೆ ಹಾಗೂ ಎಡಪಕ್ಷಗಳಿಗೆ ಧನ್ಯವಾದ ಅರ್ಪಿಸಿದ ವಿಜಯ್‌, “ನನ್ನ ಸಹೋದರ ರಾಹುಲ್‌ ಗಾಂಧಿಗೆ ವಿಶೇಷ ಧನ್ಯವಾದ” ಎಂದರು.

“ನನ್ನ ಜನರ ಹಣ ಲೂಟಿ ಮಾಡಲು ನಾನು ಬಿಡುವುದಿಲ್ಲ” ಎಂದು ಭ್ರಷ್ಟಾಚಾರ ವಿರುದ್ಧ ಕಠಿಣ ನಿಲುವು ತಾಳುವುದಾಗಿ ಸಿಎಂ ವಿಜಯ್‌ ಸ್ಪಷ್ಟಪಡಿಸಿದರು.

Continue Reading

Latest

ತಮಿಳುನಾಡು ಸಿಎಂ ಆಗಿ ವಿಜಯ್‌ ಪದಗ್ರಹಣ

VISTARANEWS.COM


on

ತಮಿಳುನಾಡಿನ ನೂತನ ಮುಖ್ಯಮಂತ್ರಿಯಾಗಿ ಜೋಸೆಫ್‌ ವಿಜಯ್‌ ಇಂದು ಪ್ರಮಾಣ ವಚನ ಸ್ವೀಕರಿಸಿದರು. ಚೆನ್ನೈನ ನೆಹರೂ ಮೈದಾನದಲ್ಲಿ ನಡೆದ ಭವ್ಯ ಸಮಾರಂಭದಲ್ಲಿ ದೇವರ ಹೆಸರಿನಲ್ಲಿ ವಿಜಯ್‌ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಮಾಡಿದರು.

ಟಿವಿಕೆ ಪಕ್ಷ ಕಾಂಗ್ರೆಸ್‌, ವಿಸಿಕೆ ಮತ್ತು ಎಡಪಕ್ಷಗಳ ಬೆಂಬಲದೊಂದಿಗೆ ಸರ್ಕಾರ ರಚನೆ ಮಾಡಿದೆ. ಸಚಿವ ಸಂಪುಟದಲ್ಲಿ ಎನ್‌. ಆನಂದ್‌, ಆಥವ್‌ ಅರ್ಜುನ್‌, ಡಾ. ಅರುಣ್‌ ರಾಜ್‌, ಕೆ.ಎ. ಸೆಂಗೋಟ್ಟಿಯ್ಯನ್‌, ಪಿ. ವೆಂಕಟರಮಣನ್‌, ಆರ್‌. ನಿರ್ಮಲ್‌ ಕುಮಾರ್‌, ಎ.ರಾಜ್‌ ಮೋಹನ್‌, ಟಿ.ಕೆ. ಪ್ರಭು, ಸೆಲ್ವಿ ಎಸ್‌. ಕೀರ್ತನಾ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.

ಸಮಾರಂಭದಲ್ಲಿ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ, ಚಿತ್ರನಟಿ ತ್ರಿಶಾ, ವಿಜಯ್‌ ತಂದೆತಾಯಿ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು. ವಿಜಯ್‌ ಪದಗ್ರಹಣ ಸಮಾರಂಭಕ್ಕೆ ಸಾವಿರಾರು ಅಭಿಮಾನಿಗಳು ಸಾಕ್ಷಿಯಾದರು.

Continue Reading

ಪ್ರಮುಖ ಸುದ್ದಿ

ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ವಿಜಯ್‌ : ನಾಳೆಯೇ ಪ್ರಮಾಣವಚನ ಸಾಧ್ಯತೆ

VISTARANEWS.COM


on

ವಿಜಯ್ ನೇತೃತ್ವದ ಟಿವಿಕೆ, ಸರ್ಕಾರ ರಚನೆಗೆ ಹಕ್ಕು ಮಂಡಿಸಿದೆ. ಇಂದು ಸಂಜೆ ರಾಜ್ಯಪಾಲರನ್ನು ಭೇಟಿಯಾದ ವಿಜಯ್‌, ತಮಗೆ ಒಟ್ಟು 120 ಶಾಸಕರ ಬೆಂಬಲವಿರುವುದಾಗಿ ತಿಳಿಸಿದ್ದಾರೆ.

ಟಿವಿಕೆ ಮೈತ್ರಿಗೆ ದೊರೆತ ಶಾಸಕರ ಬೆಂಬಲ ಹೀಗಿದೆ:

  • ಟಿವಿಕೆ – 107
  • ಕಾಂಗ್ರೆಸ್‌ – 5
  • ಸಿಪಿಐ – 2
  • ಸಿಪಿಎಂ – 2
  • ವಿಸಿಕೆ – 2
  • ಐಯುಎಂಎಲ್‌ – 2

ಒಟ್ಟು 120 ಶಾಸಕರ ಬೆಂಬಲದೊಂದಿಗೆ ಸರ್ಕಾರ ರಚನೆಗೆ ಟಿವಿಕೆ ಮುಂದಾಗಿದೆ. ಕಳೆದ ನಾಲ್ಕು ದಿನಗಳಲ್ಲಿ ನಾಲ್ಕನೇ ಬಾರಿಗೆ ವಿಜಯ್‌ ರಾಜ್ಯಪಾಲರನ್ನು ಭೇಟಿಯಾಗಿದ್ದಾರೆ. ನಾಳೆ ಭಾನುವಾರ ಮಧ್ಯಾಹ್ನ 3 ಗಂಟೆಗೆ ವಿಜಯ್‌ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆ ಇದೆ. ಚೆನ್ನೈ ನ ನೆಹರೂ ಮೈದಾನದಲ್ಲಿ ವಿಜಯ್‌ ಪದಗ್ರಹಣ ನಡೆಯುವ ನಿರೀಕ್ಷೆಯಿದೆ.

ಟಿವಿಕೆ ಬೆಂಬಲಿಗರಲ್ಲಿ ಈಗಾಗಲೇ ಸಂಭ್ರಮ ಮನೆಮಾಡಿದ್ದು, ಸಿಎಂ ಆಗಿ ವಿಜಯ್‌ ಪದಗ್ರಹಣದೊಂದಿಗೆ ತಮಿಳುನಾಡು ರಾಜಕೀಯದಲ್ಲಿ ಹೊಸ ಅಧ್ಯಾಯ ಆರಂಭವಾಗಲಿದೆ.

Continue Reading

Latest

ರಾಜ್ಯಪಾಲರ ಭೇಟಿಗೆ ವಿಜಯ್‌ :ವಿಸಿಕೆ ಬೆಂಬಲ ಬಹುತೇಕ ಫೈನಲ್‌?

VISTARANEWS.COM


on

ತಮಿಳುನಾಡಿನಲ್ಲಿ ಸರ್ಕಾರ ರಚನೆ ಕಸರತ್ತು ತೀವ್ರಗೊಂಡಿದೆ. ವಿಜಯ್‌ ನೇತೃತ್ವದ ಟಿವಿಕೆ ಸರ್ಕಾರ ರಚನೆಗೆ ಸಂಖ್ಯಾಬಲ ಹೆಚ್ಚಿಸಿಕೊಳ್ಳುವ ಪ್ರಯತ್ನ ಮುಂದುವರಿಸಿದೆ. ವಿಸಿಕೆ ಬೆಂಬಲ ಪಡೆಯುವಲ್ಲಿ ವಿಜಯ್ ಪಡೆ ಬಹುತೇಕ ಯಶಸ್ವಿಯಾಗಿದೆ ಎನ್ನಲಾಗುತ್ತಿದೆ. ಚೆನ್ನೈನ ಮಾಮಲ್ಲಪುರಂನ ಖಾಸಗಿ ಹೋಟೆಲ್‌ನಲ್ಲಿ ಮಧ್ಯಾಹ್ನ ಟಿವಿಕೆ ಶಾಸಕರ ಸಭೆ ನಡೆಯಲಿದೆ.
ಇಂದು ಸಂಜೆ 4 ಗಂಟೆಗೆ ವಿಸಿಕೆ ಸುದ್ದಿಗೋಷ್ಠಿ ನಡೆಸಲಿದ್ದು, ಬೆಂಬಲ ಘೋಷಣೆ ಮಾಡುವ ಸಾಧ್ಯತೆ ಹೆಚ್ಚಾಗಿದೆ. ಈಗಾಗಲೇ ಕಾಂಗ್ರೆಸ್‌ ಹಾಗೂ ಎಡಪಕ್ಷಗಳು ಟಿವಿಕೆಗೆ ಬೆಂಬಲ ಸೂಚಿಸಿವೆ.
ಸದ್ಯ ವಿಜಯ್ ನೇತೃತ್ವದ ಮೈತ್ರಿಗೆ 116 ಶಾಸಕರ ಬೆಂಬಲವಿದೆ. ವಿಸಿಕೆ ಯ ಇಬ್ಬರು ಶಾಸಕರು ಬೆಂಬಲ ನೀಡಿದರೆ ಸರ್ಕಾರ ರಚನೆಗೆ ಅಗತ್ಯ ಸಂಖ್ಯಾಬಲ ಸಿಗಲಿದೆ.
ಇಂದು ಸಂಜೆ ವಿಜಯ್‌ ಅವರು ತಮಿಳುನಾಡು ರಾಜ್ಯಪಾಲ ರಾಜೇಂದ್ರ ಅರ್ಲೇಕರ್‌ ಅವರನ್ನು ಭೇಟಿಯಾಗಿ ಸರ್ಕಾರ ರಚನೆಯ ಹಕ್ಕು ಮಂಡಿಸುವ ಸಾಧ್ಯತೆಯಿದೆ.
ಸಂಖ್ಯಾಬಲ ಹೀಗಿದೆ:
ಟಿವಿಕೆ – 107
ಕಾಂಗ್ರೆಸ್‌ – 5
ಎಡಪಕ್ಷಗಳು – 4
ವಿಸಿಕೆ – 2

Continue Reading
Advertisement
Latest5 hours ago

ಸಿಎಂ ಆದ ಮರುದಿನವೇ ಮಾಜಿ ಸಿಎಂ ಸ್ಟಾಲಿನ್‌ ಭೇಟಿಯಾದ ವಿಜಯ್‌

Latest1 day ago

ಪ್ರಧಾನಿ ಸಂಚರಿಸುವ ಮಾರ್ಗದಲ್ಲಿ ಜಿಲೆಟಿನ್‌ ಕಡ್ಡಿ ಪತ್ತೆ

ಚಿತ್ರದುರ್ಗ1 day ago

ಡಿ. ಸುಧಾಕರ್‌ ನಿಧನ ರಾಜಕೀಯ ಕ್ಷೇತ್ರಕ್ಕೆ ದೊಡ್ಡ ನಷ್ಟ: ಸಿಎಂ ಸಿದ್ದರಾಮಯ್ಯ

Latest1 day ago

ಸಿಎಂ ವಿಜಯ್‌ ಮೊದಲ ಭಾಷಣ : “8 ಕೋಟಿ ಜನರೂ ನನ್ನವರೇ” ಎಂದ ವಿಜಯ್‌

Latest1 day ago

ತಮಿಳುನಾಡು ಸಿಎಂ ಆಗಿ ವಿಜಯ್‌ ಪದಗ್ರಹಣ

ಪ್ರಮುಖ ಸುದ್ದಿ2 days ago

ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ವಿಜಯ್‌ : ನಾಳೆಯೇ ಪ್ರಮಾಣವಚನ ಸಾಧ್ಯತೆ

Latest2 days ago

ರಾಜ್ಯಪಾಲರ ಭೇಟಿಗೆ ವಿಜಯ್‌ :ವಿಸಿಕೆ ಬೆಂಬಲ ಬಹುತೇಕ ಫೈನಲ್‌?

Latest2 days ago

ಪಶ್ಚಿಮ ಬಂಗಾಳ ಮುಖ್ಯಮಂತ್ರಿಯಾಗಿ ಸುವೇಂದು ಅಧಿಕಾರಿ ಪದಗ್ರಹಣ

Rakshit Shetty Richard Anthony Produce By Hombale
ದೇಶ3 days ago

ಸುವೇಂದು ಅಧಿಕಾರಿ ಪ.ಬಂಗಾಳದ ಹೊಸ ಸಿಎಂ, ಶನಿವಾರ ಪ್ರಮಾಣವಚನ

ಪ್ರಮುಖ ಸುದ್ದಿ3 days ago

ಹಡಗಿನಲ್ಲಿ ಹ್ಯಾಂಟವೈರಸ್‌ ದಾಂಗುಡಿ, ಕೊರೋನಾವನ್ನೂ ಮೀರಿಸುತ್ತಾ ಈ ಪಿಡುಗು?

galipata neetu
ಕಿರುತೆರೆ2 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌