ಬೆಂಗಳೂರು: ರಾಜ್ಯ ಸರ್ಕಾರಕ್ಕೆ ಸಾಲು ಸಾಲು ಪ್ರತಿಭಟನೆಗಳ (Protest) ಬಿಸಿ ತಟ್ಟಿದೆ. ಒಂದೆಡೆ ಮುಡಾ ಹಗರಣ, ವಾಲ್ಮೀಕಿ ನಿಗಮ ಹಗರಣ ಖಂಡಿಸಿ ವಿಧಾನ ಮಂಡಲ ಅಧಿವೇಶನ ಆರಂಭದ ದಿನದಂದೇ ಬಿಜೆಪಿ ನಾಯಕರು ಪ್ರತಿಭಟನೆ ನಡೆಸಿದ್ದರೆ, ಮತ್ತೊಂದೆಡೆ ಗೌರವ ಧನ ಹೆಚ್ಚಳ ಸೇರಿ ಇನ್ನಿತರ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ನಗರದ ಫ್ರೀಡಂ ಪಾರ್ಕ್‌ನಲ್ಲಿ ಅಕ್ಷರ ದಾಸೋಹ ನೌಕರರು (Midday meal workers) ಸೋಮವಾರ ಅನಿರ್ದಿಷ್ಟಾವಧಿ ಹೋರಾಟ ಆರಂಭಿಸಿದ್ದಾರೆ.
ಸರ್ಕಾರಿ ಶಾಲೆಗಳಲ್ಲಿ ಮಧ್ಯಾಹ್ನದ ಬಿಸಿಯೂಟ ನೌಕರರಾಗಿ ಕೆಲಸ ಮಾಡಿ ನಿವೃತ್ತಿ ಹೊಂದುವ ಪ್ರತಿಯೊಬ್ಬರಿಗೂ 1 ಲಕ್ಷ ರೂ. ಇಡಿಗಂಟು ನೀಡಬೇಕು. ಅಲ್ಲದೇ ಗೌರವ ಧನ ಹೆಚ್ಚಳ ಹಾಗೂ ಇನ್ನಿತರ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಅಕ್ಷರ ದಾಸೋಹ ನೌಕರರ ಪ್ರತಿಭಟನೆ ನಡೆಸುತ್ತಿದ್ದಾರೆ. ರಾಜ್ಯದ ನಾನಾ ಮೂಲೆಗಳಿಂದ ಪ್ರತಿಭಟನೆಯಲ್ಲಿ ಭಾಗವಹಿಸಲು ನೌಕರರು ಆಗಮಿಸಿದ್ದಾರೆ.
ಮುಡಾ ಹಗರಣ ಸಿಬಿಐ ತನಿಖೆಗೆ ನೀಡಿ; ವಿಜಯೇಂದ್ರ ಆಗ್ರಹ
ಬೆಂಗಳೂರು: ಮುಡಾ ಹಗರಣ, ವಾಲ್ಮೀಕಿ ನಿಗಮ ಹಗರಣಗಳನ್ನು ಖಂಡಿಸಿ ಬಿಜೆಪಿ ಶಾಸಕರಿಂದ ವಿಧಾನಸೌಧದ ಪಶ್ಚಿಮ ಬಾಗಿಲ ಮುಂಭಾಗ ಪ್ರತಿಭಟನೆ ನಡೆಸಲಾಯಿತು. ಶಾಸಕರ ಭವನದಿಂದ ವಿಧಾನಸೌಧಕ್ಕೆ ಪ್ರತಿಭಟನಾ ಮೆರವಣಿಗೆಯಲ್ಲಿ ಹೊರಟ ಬಿಜೆಪಿ ಶಾಸಕರು, ಹಗರಣಗಳ ತನಿಖೆಯನ್ನು ಸಿಬಿಐಗೆ ನೀಡುವಂತೆ ರಾಜ್ಯ ಸರ್ಕಾರವನ್ನು ಆಗ್ರಹಿಸಿದರು.
ಈ ವೇಳೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು, ಮಾತನಾಡಿ, ಸಿಎಂಗೆ ತಾಕತ್ ಇದ್ದರೆ ಮುಡಾ ಪ್ರಕರಣವನ್ನು ಸಿಬಿಐ ತನಿಖೆಗೆ ಕೋಡಬೇಕು. ನ್ಯಾಯಾಂಗ ತನಿಖೆ ಅಂತ ನಾಟಕಮಾಡುತ್ತಿದ್ದಾರೆ. ಇದೊಂದು ದೊಡ್ಡ ಹಗರಣ. ಸದನದ ಒಳಗೆ ಹಾಗೂ ಹೊರಗೆ ನಾವು ಹೋರಾಟ ಮಾಡುತ್ತೇವೆ ಎಂದರು.
ಸಿಎಂ ರಾಜೀನಾಮೆ ಕೋಡಬೇಕು. ದಲಿತರ ಹೆಸರಲ್ಲಿ ಅಧಿಕಾರಕ್ಕೆ ಬಂದು ದಲಿತರ ಹಣ ದೊಚಿದ್ದಾರೆ. ಕಾಂಗ್ರೆಸ್ ಸರ್ಕಾರದ ಬಂಡವಾಳ ಬಯಲಾಗಿದೆ. ಸಿಎಂ ನೈತಿಕತೆ ಕಳೆದುಕೊಂಡಿದ್ದಾರೆ. ನಾಗೇಂದ್ರ ಈಗಾಗಲೇ ಇಡಿ ಕಸ್ಟಡಿಯಲ್ಲಿದ್ದಾರೆ, ದದ್ದಲ್ ಕಾಣೆಯಾಗಿದ್ದಾರೆ. ಸಿಎಂ ಇದಕ್ಕೆ ಉತ್ತರ ಕೋಡಬೇಕು. ಡಿಸಿಎಂ ಆರೋಪಿಗಳಿಗೆ ಕ್ಲೀನ್ ಚಿಟ್ ಕೊಡುತ್ತಿದ್ದಾರೆ. ಹೀಗಾಗಿ ಮುಡಾ ಹಗರಣ ಸಿಬಿಐಗೆ ವಹಿಸಬೇಕು ಎಂದು ಒತ್ತಾಯಿಸಿದರು.
ಇದನ್ನೂ ಓದಿ | KP Sharma Oli: ನೇಪಾಳದ ನೂತನ ಪ್ರಧಾನಿ ಕೆ.ಪಿ.ಶರ್ಮ ಒಲಿಗೆ ಮೋದಿ ಅಭಿನಂದನೆ
ವಾಲ್ಮೀಕಿ ನಿಗಮದ ಹಗರಣಕ್ಕೆ ಸದನದಲ್ಲಿ ಸಿಎಂ ಉತ್ತರ ಕೋಡಬೇಕು. ವಾಲ್ಮೀಕಿ ನಿಗಮದ ಬಗ್ಗೆ ನಿಳುವಳಿ ಸೂಚನೆ ಕೊಟ್ಟಿದ್ದೇವೆ. ಇವತ್ತು ಚರ್ಚೆಗೆ ಅವಕಾಶ ಕೋಡುತ್ತೇವೆ. ಮುಡಾ ಹಗರದಲ್ಲಿ ಯಾರ ಮೇಲೆಯಾದರೂ ಆರೋಪ ಇರಲಿ, ಸಿಬಿಐ ತನಿಖೆಗೆ ನೀಡಿ ಎಂದು ಆಗ್ರಹಿಸಿದರು