MLC Election: ವಿಧಾನ ಪರಿಷತ್‌ ಚುನಾವಣೆ; ಯತೀಂದ್ರ ಸಿದ್ದರಾಮಯ್ಯ ಅವಿರೋಧ ಆಯ್ಕೆ - Vistara News

ಪ್ರಮುಖ ಸುದ್ದಿ

MLC Election: ವಿಧಾನ ಪರಿಷತ್‌ ಚುನಾವಣೆ; ಯತೀಂದ್ರ ಸಿದ್ದರಾಮಯ್ಯ ಅವಿರೋಧ ಆಯ್ಕೆ

MLC Election: ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್‌ ಅವರು ದೆಹಲಿ ಭೇಟಿ ವೇಳೆ ಕಾಂಗ್ರೆಸ್‌ ಅಭ್ಯರ್ಥಿಗಳ ಬಗ್ಗೆ ಹೈಕಮಾಂಡ್‌ ನಾಯಕರ ಬಳಿ ಚರ್ಚೆ ನಡೆಸಿದ್ದು, ಈ ವೇಳೆ ಯತೀಂದ್ರ ಸಿದ್ದರಾಮಯ್ಯ ಅವರನ್ನು ಅಭ್ಯರ್ಥಿಯಾಗಿ ಆಯ್ಕೆ ಮಾಡಲು ಗ್ರೀನ್‌ ಸಿಗ್ನಲ್‌ ನೀಡಿದ್ದಾರೆ.

VISTARANEWS.COM


on

MLC Election
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಜೂನ್‌ 13ರಂದು ವಿಧಾನ ಪರಿಷತ್‌ ಚುನಾವಣೆ (MLC Election) ಹಿನ್ನೆಲೆಯಲ್ಲಿ ಕಾಂಗ್ರೆಸ್‌ನ 7 ಸ್ಥಾನಗಳ ಪೈಕಿ ಒಂದು ಸ್ಥಾನಕ್ಕೆ ಸಿಎಂ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯ (Yathindra Siddaramaiah) ಅವರು ಅವಿರೋಧ ಅಭ್ಯರ್ಥಿಯಾಗಿ ಆಯ್ಕೆಯಾಗಿದ್ದಾರೆ. ಯತೀಂದ್ರ ಅವರ ಉಮೇದುವಾರಿಕೆಯನ್ನು ನವದೆಹಲಿಯಲ್ಲಿ ಗುರುವಾರ ಕಾಂಗ್ರೆಸ್‌ ಹೈಕಮಾಂಡ್‌ ಅನುಮೋದಿಸಿದೆ.

ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್‌ ಅವರು ದೆಹಲಿ ಭೇಟಿ ವೇಳೆ ಕಾಂಗ್ರೆಸ್‌ ಅಭ್ಯರ್ಥಿಗಳ ಬಗ್ಗೆ ಹೈಕಮಾಂಡ್‌ ನಾಯಕರ ಬಳಿ ಚರ್ಚೆ ನಡೆಸಿದ್ದು, ಈ ವೇಳೆ ಯತೀಂದ್ರ ಸಿದ್ದರಾಮಯ್ಯ ಅವರನ್ನು ಅಭ್ಯರ್ಥಿಯಾಗಿ ಆಯ್ಕೆ ಮಾಡಲು ಗ್ರೀನ್‌ ಸಿಗ್ನಲ್‌ ನೀಡಿದ್ದಾರೆ. ಇನ್ನು ಉಳಿದ 6 ಕ್ಷೇತ್ರಗಳಿಗೆ ಪೈಪೋಟಿ ಹೆಚ್ಚಾಗಿದ್ದು, ಈ ಸ್ಥಾನಗಳಲ್ಲಿ ಮೈಸೂರು ಭಾಗದ ಪುಷ್ಪ ಅಮರನಾಥ್‌ ಪ್ರಬಲ ಆಕಾಂಕ್ಷಿಯಾಗಿದ್ದಾರೆ.

ಈ ಬಾರಿ 7 ಸ್ಥಾನಗಳಿಗೆ 65 ಮಂದಿ ಆಕಾಂಕ್ಷಿಗಳ ಶಾರ್ಟ್‌ ಲಿಸ್ಟ್‌ ಸಿದ್ಧಪಡಿಸಲಾಗಿದ್ದು, ಇದರಲ್ಲಿ ಸಿಎಂ ಸಿದ್ದರಾಮಯ್ಯ ಅವರಿಗೆ ತಮ್ಮ ಕ್ಷೇತ್ರ ಬಿಟ್ಟುಕೊಟ್ಟ ಯತೀಂದ್ರಗೆ ಮುಂದಿನ ದಿನಗಳಲ್ಲಿ ಉನ್ನತ ಸ್ಥಾನಮಾನ ನೀಡುವುದಾಗಿ ಕಾಂಗ್ರೆಸ್‌ ಹೈಕಮಾಂಡ್‌ ಈ ಹಿಂದೆ ಹೇಳಿತ್ತು. ಅದರಂತೆ ಯತೀಂದ್ರ ಅವರಿಗೆ ಟಿಕೆಟ್‌ ಪಟ್ಟ ಎನ್ನಲಾಗಿದೆ.

ಈ ಬಗ್ಗೆ ಗುರುವಾರ ಮಾತನಾಡಿದ್ದ ಡಿಸಿಎಂ ಡಿಕೆ ಶಿವಕುಮಾರ್, ದೆಹಲಿಗೆ ಹೋಗಿ ಪಟ್ಟಿ ನೀಡಿ ಬಂದಿದ್ದೇವೆ. 11 ಸ್ಥಾನಕ್ಕೆ 300 ಆಕಾಂಕ್ಷಿಗಳು ಇದ್ದರು. ನಾವು 65 ಮಂದಿಯ ಶಾರ್ಟ್​ ಲಿಸ್ಟ್​ ನೀಡಿದ್ದೇವೆ. ಯತೀಂದ್ರ ಅವರದ್ದು ಮೊದಲೇ ಕಮಿಟ್ ಮೆಂಟ್ ಇದೆ. ಹಾಗಾಗಿ ಅವರಿಗೆ ಟಿಕೆಟ್ ನೀಡುವುದಕ್ಕೆ ಹೈಕಮಾಂಡ್ ಕೂಡ ಸಮ್ಮತಿ ನೀಡಿದೆ. ಇವರ ಜತೆಗೆ ವಿಧಾನಸಭಾ ಟಿಕೆಟ್ ತ್ಯಾಗ ಮಾಡಿದ ಹಿರಿಯರು, ಸೋತವರು ಇದ್ದಾರೆ ಎಂದು ತಿಳಿಸಿದ್ದರು.

ಇದನ್ನೂ ಓದಿ | Valmiki Corporation Scam: ಸಚಿವ ನಾಗೇಂದ್ರ ತಲೆದಂಡ ಫಿಕ್ಸ್‌; ರಾಜೀನಾಮೆ ಕೊಡಲು ಸಿಎಂ ಸೂಚನೆ

ಅಕಾಂಕ್ಷಿಗಳಲ್ಲಿ ಹೈದರಾಬಾದ್ ಕರ್ನಾಟಕ, ಮುಂಬೈ ಕರ್ನಾಟಕ, ಬಯಲು ಸೀಮೆ ಸೇರಿ ಎಲ್ಲಾ ಭಾಗದವರಿದ್ದಾರೆ. 21 ಮಂದಿ ಕರಾವಳಿ ಭಾಗದಲ್ಲಿ, 11 ಮಂದಿ ಮೈಸೂರು ಭಾಗದ ಆಕಾಂಕ್ಷಿಗಳು ಇದ್ದಾರೆ ಎಂದು ಡಿಸಿಎಂ ತಿಳಿಸಿದ್ದರು. ಪರಿಷತ್‌ ಚುನಾವಣೆಯಲ್ಲಿ 11 ಕ್ಷೇತ್ರಗಳ ಪೈಕಿ ವಿಧಾನಸಭೆಯಲ್ಲಿನ ಸಂಖ್ಯಾಬಲ ಆಧಾರದಲ್ಲಿ ಪಕ್ಷಕ್ಕೆ ಗೆಲ್ಲುವ ಅವಕಾಶವಿರುವ 7 ಅಭ್ಯರ್ಥಿಗಳನ್ನು ಫೈನಲ್‌ ಮಾಡಲು ಕಸರತ್ತು ನಡೆದಿದೆ ಎಂದು ಡಿಕೆಶಿ ಹೇಳಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Citroen C3 Aircross : ಧೋನಿ ಹೆಸರಿನಲ್ಲಿ ಬಿಡುಗಡೆಯಾಗಿದೆ ಈ ಕಾರು, ಕೇವಲ 100 ಕಾರಷ್ಟೇ ಉತ್ಪಾದನೆ

Citroen C3 Aircross: ಸಿ3 ಏರ್ ಕ್ರಾಸ್ ಧೋನಿ ಆವೃತ್ತಿಯ ಹೊರಭಾಗದಲ್ಲಿ ಧೋನಿಯ ಹೆಸರು ಮತ್ತು ಅವರ ಜೆರ್ಸಿ ಸಂಖ್ಯೆ 7 ನೊಂದಿಗೆ ಹೊಸ ಡೆಕಾಲ್ ನೀಡಲಾಗಿದೆ. ಒಳಭಾಗದಲ್ಲಿ ಲಿಮಿಟೆಡ್ ರನ್​ ಮಾಡೆಲ್ ಆಗಿದ್ದು. ಹೊಸ ಬಣ್ಣ-ಸಂಯೋಜಿತ ಸೀಟ್ ಕವರ್ ಗಳು ಮತ್ತು ಕುಶನ್ ಪಿಲ್ಲೊ, ಸೀಟ್ ಬೆಲ್ಟ್ ಕುಶನ್ ಗಳು, ಹೆಚ್ಚು ಪ್ರಕಾಶಮಾನವಾಗಿರವು ಡೋರ್ ಸಿಲ್ ಪ್ಲೇಟ್ ಗಳು ಮತ್ತು ಮುಂಭಾಗದ ಡ್ಯಾಶ್ ಕ್ಯಾಮ್ ನೀಡಲಾಗಿದೆ.

VISTARANEWS.COM


on

Citroen C3 Aircross
Koo

ಬೆಂಗಳೂರು: ಸಿಟ್ರೋಯನ್​ ತನ್ನ ಮಧ್ಯಮ ಗಾತ್ರದ ಎಸ್​ಯುವಿ ಕಾರಾಗಿರುವ ಸಿ3 ಏರ್ ಕ್ರಾಸ್ (Citroen C3 Aircross) ಧೋನಿ ಎಡಿಷನ್ ಹೊಸ ವಿಶೇಷ ಆವೃತ್ತಿ ಹೊರತಂದಿದೆ. 11.82 ಲಕ್ಷ ರೂ.ಗಳ ಬೆಲೆ ಹೊಂದಿರುವ ಧೋನಿ ಎಡಿಷನ್ ಅನೇಕ ರೂಪಾಂತರಗಳು 5 ಮತ್ತು 7 ಸೀಟರ್​ ಕಾನ್ಫಿಗರೇಶನ್ ಗಳಲ್ಲಿ ಲಭ್ಯವಿದೆ. ಮ್ಯಾನುವಲ್ ಮತ್ತು ಆಟೋಮ್ಯಾಟಿಕ್ ಗೇರ್ ಬಾಕ್ಸ್ ಆಯ್ಕೆಗಳೊಂದಿಗೆ ಬರುತ್ತದೆ. ಈ ವಿಶೇಷ ಆವೃತ್ತಿಯ ಮಾದರಿಯು 100 ಯುನಿಟ್ ಗಳಿಗೆ ಸೀಮಿತವಾಗಿದೆ ಎಂಬುದೇ ವಿಶೇಷ. ಈ ಎಡಿಷನ್​ನಲ್ಲಿ ಸಿ3 ಏರ್ ಕ್ರಾಸ್ ಗಿಂತ ಸಣ್ಣ ಪ್ರಮಾಣದ ಇಂಟೀರಿಯರ್​ ಬದಲಾವಣೆ ಮಾಡಲಾಗಿದೆ.

ಸಿ3 ಏರ್ ಕ್ರಾಸ್ ಧೋನಿ ಆವೃತ್ತಿಯ ಹೊರಭಾಗದಲ್ಲಿ ಧೋನಿಯ ಹೆಸರು ಮತ್ತು ಅವರ ಜೆರ್ಸಿ ಸಂಖ್ಯೆ 7 ನೊಂದಿಗೆ ಹೊಸ ಡೆಕಾಲ್ ನೀಡಲಾಗಿದೆ. ಒಳಭಾಗದಲ್ಲಿ ಲಿಮಿಟೆಡ್ ರನ್​ ಮಾಡೆಲ್ ಆಗಿದ್ದು. ಹೊಸ ಬಣ್ಣ-ಸಂಯೋಜಿತ ಸೀಟ್ ಕವರ್ ಗಳು ಮತ್ತು ಕುಶನ್ ಪಿಲ್ಲೊ, ಸೀಟ್ ಬೆಲ್ಟ್ ಕುಶನ್ ಗಳು, ಹೆಚ್ಚು ಪ್ರಕಾಶಮಾನವಾಗಿರವು ಡೋರ್ ಸಿಲ್ ಪ್ಲೇಟ್ ಗಳು ಮತ್ತು ಮುಂಭಾಗದ ಡ್ಯಾಶ್ ಕ್ಯಾಮ್ ನೀಡಲಾಗಿದೆ.

ಪ್ರತಿ ಧೋನಿ ಎಡಿಷನ್​ ಕಾರಿನ ಗ್ಲೋವ್ ಬಾಕ್ಸ್​ನಲ್ಲಿ ವಿಶೇಷ ‘ಧೋನಿ ಗೂಡಿ’ ಒಳಗೊಂಡಿರುತ್ತದೆ ಎಂದು ಸಿಟ್ರನ್ ಹೇಳುತ್ತಾರೆ. ಅಂದರೆ ಅದೃಷ್ಟಶಾಲಿ ವಿಜೇತರು ಸ್ವತಃ ಧೋನಿಯಿಂದ ಸಹಿ ಮಾಡಿದ ಗ್ಲವ್ಸ್​​ ಸ್ವೀಕರಿಸಲಿದ್ದಾರೆ.

ಇದನ್ನೂ ಓದಿ: Bajaj CNG Bike: ವಿಶ್ವದ ಮೊದಲ ಸಿಎನ್‌ಜಿ ಬೈಕ್‌; ಬಜಾಜ್‌ನಿಂದ ಜುಲೈ 5ರಂದು ಬಿಡುಗಡೆ

ಉಳಿದಂತೆ ಧೋನಿ ಆವೃತ್ತಿಯು ಸ್ಟ್ಯಾಂಡರ್ಡ್ ಸಿ 3 ಏರ್ ಕ್ರಾಸ್ ನಂತೆಯೇ ಇದೆ. ಇದು 110 ಬಿಹೆಚ್ ಪಿ, 1.2-ಲೀಟರ್ ಮೂರು ಸಿಲಿಂಡರ್ ಟರ್ಬೊ-ಪೆಟ್ರೋಲ್ ಎಂಜಿನ್ ಹೊಂದಿದೆ. ಇದು 6-ಸ್ಪೀಡ್ ಮ್ಯಾನುವಲ್ ಮತ್ತು ಆಟೋಮ್ಯಾಟಿಕ್ ಗೇರ್ ಬಾಕ್ಸ್ ಆಯ್ಕೆಗಳೊಂದಿಗೆ ಬರುತ್ತದೆ.

ಸಚಿನ್​ ಹೆಸರಿನ ಫಿಯೆಟ್​ ಕಾರು ಬಂದಿತ್ತು

ಖ್ಯಾತ ಕ್ರಿಕೆಟಿಗರೊಬ್ಬರು ಕಾರು ತಯಾರಕರೊಂದಿಗೆ ಒಪ್ಪಂದ ಮಾಡಿಕೊಳ್ಳುತ್ತಿರುವುದು ಇದೇ ಮೊದಲಲ್ಲ. 2002 ರಲ್ಲಿ ಫಿಯೆಟ್ ತಂಡವು ಸಚಿನ್ ತೆಂಡೂಲ್ಕರ್ ಅವರೊಂದಿಗೆ ಕೈಜೋಡಿಸಿ ಪಾಲಿಯೋ ಎಸ್ 10 ಅನ್ನು ಹೊರತಂದಿತ್ತು. ಈ ಸೀಮಿತ ರನ್ ಮಾದರಿಯನ್ನು (ಕೇವಲ 500 ಮಾತ್ರ ಉತ್ಪಾದಿಸಲಾಗಿತ್ತು. ಪ್ರತಿಯೊಂದೂ ಅದರ ಸರಣಿ ಸಂಖ್ಯೆಯನ್ನು ಸೂಚಿಸುವ ಅಲ್ಯೂಮಿನಿಯಂ ಫಲಕವನ್ನು ಪಡೆದುಕೊಂಡಿತ್ತು ) ಹೊರಗೆ ಹಲವಾರು ಕಾಸ್ಮೆಟಿಕ್ ನವೀಕರಣಗಳೊಂದಿಗೆ ಬಂದಿತ್ತಯ. ವಿಶೇಷ ಬಣ್ಣ ಮತ್ತು ಸಚಿನ್ ಅವರ ಆಟೋಗ್ರಾಫ್ ನಿಂದ ಹಿಡಿದು ಹಿಂಭಾಗದ ಸ್ಪಾಯ್ಲರ್ ಮತ್ತು ಹೊಸ ಅಲಾಯ್ ಚಕ್ರಗಳವರೆಗೆ ವಿಶೇಷತೆ ಇತ್ತು.

Continue Reading

Latest

IIT Bombay: ಹಿಂದೂ ದೇವರ ಅವಹೇಳನಕಾರಿ ನಾಟಕ; ಐಐಟಿ ವಿದ್ಯಾರ್ಥಿಗಳಿಗೆ ದಂಡ

IIT Bombay: ಧರ್ಮ ಹಾಗೂ ದೇವರುಗಳ ವಿಷಯ ತುಂಬಾ ಸೂಕ್ಷ್ಮವಾದದ್ದು. ಇದನನು ಕೆದಕಿದರೆ ದೇಶದಲ್ಲಿನ ಶಾಂತಿ ಕದಡಿದ ಹಾಗೆ.ಅದರಲ್ಲೂ ದೇಶದ ಪ್ರಜೆಗಳಾದ ವಿದ್ಯಾರ್ಥಿಗಳು ಈ ವಿಷಯದ ಕುರಿತು ಹೆಚ್ಚಿನ ನಿಗಾವಹಿಸಬೇಕು. ಐಐಟಿ ಬಾಂಬೆಯ ಬಯಲು ರಂಗಮಂದಿರದಲ್ಲಿ ನಡೆದ ಇನ್ ಸ್ಟಿಟ್ಯೂಟ್ ನ ಪರ್ಫಾರ್ಮಿಂಗ್ ಆರ್ಟ್ಸ್ ಫೆಸ್ಟಿವಲ್ ನಲ್ಲಿ “ರಾಹೋವನ್” ಶೀರ್ಷಿಕೆಯ ನಾಟಕವಾಡಿದ ವಿದ್ಯಾರ್ಥಿಗಳು ಇದರಲ್ಲಿ ಹಿಂದೂ ಧರ್ಮಕ್ಕೆ ಅಗೌರವ ತೋರಿದಲ್ಲದೇ ರಾಮ ಮತ್ತು ಸೀತೆಯನ್ನು ಅವಹೇಳನ ಮಾಡಿದ್ದರು. ಇದಕ್ಕೆ ತೀವ್ರವಾದ ವಿರೋಧ ವ್ಯಕ್ತಗೊಂಡ ಹಿನ್ನೆಲೆಯಲ್ಲಿ ಐಐಟಿ ವಿದ್ಯಾರ್ಥಿಗಳಿಗೆ ದಂಡ ವಿಧಿಸಿದೆ.

VISTARANEWS.COM


on

IIT Bombay
Koo

ಮುಂಬೈ : ರಾಮ ಮತ್ತು ಸೀತೆ ಹಿಂದೂ(Hindu)ಗಳ ಆರಾಧ್ಯ ದೇವರು. ಹಾಗಾಗಿ ಈ ದೇವರ ಹೆಸರಿಗೆ ಅವಮಾನ ಮಾಡಿದರೆ ಯಾರೂ ಸುಮ್ಮನೆ ಇರುವುದಿಲ್ಲ. ಆದರೆ ಇದೀಗ ಐಐಟಿ ಬಾಂಬೆಯಲ್ಲಿ (IIT Bombay) ಹಿಂದೂ ದೇವರಿಗೆ ಅವಹೇಳನ ಮಾಡುವಂತಹ ನಾಟಕವಾಡಿದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ (Student) ದಂಡ ವಿಧಿಸಲಾಗಿದೆ.

ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ(ಐಐಟಿ) ಬಾಂಬೆಯ ಬಯಲು ರಂಗಮಂದಿರದಲ್ಲಿ ಈ ವರ್ಷ ಮಾರ್ಚ್ 31ರಂದು ನಡೆದ ಇನ್‌ಸ್ಟಿಟ್ಯೂಟ್‌ನ ಪರ್ಫಾರ್ಮಿಂಗ್ ಆರ್ಟ್ಸ್ ಫೆಸ್ಟಿವಲ್‌ನಲ್ಲಿ “ರಾಹೋವನ್” ಶೀರ್ಷಿಕೆಯ ನಾಟಕದಲ್ಲಿ ವಿದ್ಯಾರ್ಥಿಗಳು ರಾಮಾಯಣದ ಕಥಾ ಹಂದರವನ್ನು ಹೊಂದಿರುವ ನಾಟಕವಾಡಿದ್ದರು. ಇದರಲ್ಲಿ ಹಿಂದೂ ಧರ್ಮಕ್ಕೆ ಅಗೌರವ ತೋರಿದಲ್ಲದೇ ರಾಮ ಮತ್ತು ಸೀತೆಯನ್ನು ಅವಹೇಳನ ಮಾಡಿದ್ದರು.

ಈ ನಾಟಕವನ್ನು ವಿರೋಧಿಸಿ ಕಾಲೇಜಿನ ಒಂದು ವಿಭಾಗ ಪ್ರತಿಭಟನೆ ಮಾಡಿತ್ತು. ಸಾಮಾಜಿಕ ಮಾಧ್ಯಮ ಪ್ಲಾಟ್ ಫಾರ್ಮ್ ಎಕ್ಸ್‌ನಲ್ಲಿನ ‘ಐಐಟಿ ಬಿ ಫಾರ್ ಭಾರತ್’ ಹ್ಯಾಂಡಲ್‌ನಲ್ಲಿ ಈ ನಾಟಕವನ್ನು ಖಂಡಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಐಐಟಿ ವಿದ್ಯಾರ್ಥಿಯೊಬ್ಬನಿಗೆ 1.2 ಲಕ್ಷ ರೂ. ದಂಡ ವಿಧಿಸಿದೆ. ಇತರ ಏಳು ವಿದ್ಯಾರ್ಥಿಗಳಿಗೆ ತಲಾ 40,000 ರೂ. ದಂಡ ವಿಧಿಸಲಾಗಿದೆ.

ಇದನ್ನೂ ಓದಿ: Murder Case: ಅಶ್ಲೀಲ ವಿಡಿಯೊ ಚಟ; ಮಗಳನ್ನೇ ಲೈಂಗಿಕಕ್ರಿಯೆಗೆ ಒತ್ತಾಯಿಸಿ ಕೊಂದ ಪಾಪಿ ತಂದೆ

ಅಲ್ಲದೇ ನಾಟಕಕ್ಕೆ ಸಂಬಂಧಿಸಿದ ದೂರುಗಳ ಪರಿಹಾರಕ್ಕೆ ಶಿಸ್ತು ಸಭೆ ಕರೆದ ಐಐಟಿ ಅಲ್ಲಿನ ಚರ್ಚೆಗಳ ಆಧಾರದ ಮೇಲೆ ಶಿಕ್ಷಾರ್ಹ ಕ್ರಮಗಳನ್ನು ಶಿಫಾರಸು ಮಾಡಿದೆ. ಅದರಂತೆ ಜುಲೈ 20, 2024ರಂದು ವಿದ್ಯಾರ್ಥಿ ವ್ಯವಹಾರ ಡೀನ್ ಕಚೇರಿ ಯಲ್ಲಿ ರೂ. 1.2ಲಕ್ಷ ದಂಡವನ್ನು ಪಾವತಿಸಬೇಕಾಗಿ ಹೇಳಿದೆ. ಮತ್ತು ಸಂಸ್ಥೆಯ ಜಿಮ್ಖಾನಾ ಪ್ರಶಸ್ತಿಗಳಿಂದ ಯಾವುದೇ ಮಾನ್ಯತೆ ಪಡೆಯದಂತೆ ನಿರ್ಬಂಧ ಹೇರಿದರೆ ಕಿರಿಯ ಏಳು ವಿದ್ಯಾರ್ಥಿಗಳಿಗೆ 40,000 ದಂಡದ ಜೊತೆಗೆ ಹಾಸ್ಟೆಲ್ ಸೌಲಭ್ಯದಿಂದ ಅಮಾನತುಗೊಳಿಸಲಾಗಿದೆ. ಒಂದು ವೇಳೆ ದಂಡವನ್ನು ತಪ್ಪಿಸಿದರೆ ಮತ್ತಷ್ಟು ನಿರ್ಬಂಧಕ್ಕೆ ಒಳಪಡಿಸುವುದಾಗಿ ತಿಳಿಸಿದೆ.

Continue Reading

ಕ್ರೀಡೆ

Manish Pandey: ಕ್ರಿಕೆಟಿಗ ಮನೀಷ್​ ಪಾಂಡೆ ದಾಂಪತ್ಯದಲ್ಲಿ ಬಿರುಕು!

Manish Pandey: 2019ರಲ್ಲಿ ಕ್ರಿಕೆಟಿಗ ಮನೀಶ್ ಪಾಂಡೆ ಚಿತ್ರನಟಿ ಆಶ್ರಿತಾ ಶೆಟ್ಟಿ(Ashrita Shetty) ಅವರ ಕೈ ಹಿಡಿಯುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿರಿಸಿದ್ದರು. ಆಶ್ರಿತಾ ಶೆಟ್ಟಿ ಅವರು ಅರ್ಜುನ್ ಕಾಪಿಕಾಡ್ ಅಭಿನಯದ ‘ತೆಲಿಕೆದ ಬೊಳ್ಳಿ’ ತುಳು ಚಿತ್ರದ ಮೂಲಕ ತಮ್ಮ ನಟನಾ ವೃತ್ತಿಯನ್ನು ಪ್ರಾರಂಭಿಸಿದ್ದರು

VISTARANEWS.COM


on

Manish Pandey
Koo

ಬೆಂಗಳೂರು: ಟೀಮ್​ ಇಂಡಿಯಾದ, ಕರ್ನಾಟಕ ಮೂಲದ ಕ್ರಿಕೆಟಿಗ ಮನೀಷ್​ ಪಾಂಡೆ(Manish Pandey) ದಾಂಪತ್ಯದಲ್ಲಿ ಬಿರುಕು ಮೂಡಿದೆ ಎಂಬ ಸುದ್ದಿಯೊಂದು ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಈ ಚರ್ಚೆಗೆ ಕಾರಣವಾಗಿರುವುದು ದಂಪತಿಗಳ ಇನ್​ಸ್ಟಾಗ್ರಾಮ್​ ಖಾತೆಯ ಪೋಸ್ಟ್​.

2019ರಲ್ಲಿ ಕ್ರಿಕೆಟಿಗ ಮನೀಶ್ ಪಾಂಡೆ ಚಿತ್ರನಟಿ ಆಶ್ರಿತಾ ಶೆಟ್ಟಿ(Ashrita Shetty) ಅವರ ಕೈ ಹಿಡಿಯುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿರಿಸಿದ್ದರು. ಆಶ್ರಿತಾ ಶೆಟ್ಟಿ ಅವರು ಅರ್ಜುನ್ ಕಾಪಿಕಾಡ್ ಅಭಿನಯದ ‘ತೆಲಿಕೆದ ಬೊಳ್ಳಿ’ ತುಳು ಚಿತ್ರದ ಮೂಲಕ ತಮ್ಮ ನಟನಾ ವೃತ್ತಿಯನ್ನು ಪ್ರಾರಂಭಿಸಿದ್ದರು. ಇದೀಗ ಈ ಜೋಡಿ ಸದ್ಯದಲ್ಲೇ ದೂರವಾಗುವ ಸಾಧ್ಯತೆ ಇದೆ ಎಂಬ ಮಾತುಗಳು ಕೇಳಿ ಬಂದಿವೆ.

ಹೌದು, ಮನೀಶ್ ಪಾಂಡೆ ಮತ್ತು ಆಶ್ರಿತಾ ಶೆಟ್ಟಿ ತಮ್ಮ ತಮ್ಮ ಇನ್ ಸ್ಟಾಗ್ರಾಂ ಖಾತೆಗಳಲ್ಲಿ ಅಪ್ಲೋಡ್ ಮಾಡಿದ್ದ ಮದುವೆ(Manish Pandey-Ashrita Shetty Wedding Pics) ಮತ್ತು ಅವರಿಬ್ಬರ ಫೋಟೋಗಳನ್ನು ಇಬ್ಬರೂ ಡಿಲೀಟ್ ಮಾಡಿದ್ದಾರೆ. ಹೀಗಾಗಿ ಇವರ ದಾಂಪತ್ಯದಲ್ಲಿ ಏರುಪೇರಾಗಿದ್ದು, ಇಬ್ಬರೂ ಪರಸ್ಪರ ಬೇರೆಯಾಗುತ್ತಿದ್ದಾರೆ ಎಂಬ ಊಹಾಪೋಹಗಳು ಹರಿದಾಡುತ್ತಿವೆ.

ಮನೀಶ್ ಪಾಂಡೆ ಅವರು ಐಪಿಎಲ್ 2024ರ ಟೂರ್ನಿಯಲ್ಲಿ ತಾವು ಪ್ರತಿನಿಧಿಸಿದ್ದ ಕೆಕೆಆರ್ ತಂಡದ ಮತ್ತು ಟ್ರೋಫಿ ಜೊತೆಗಿರುವ ಫೋಟೋಗಳನ್ನು ತಮ್ಮ ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ಅಪ್ಲೋಡ್ ಮಾಡಿದ್ದಾರೆ. ಅವರ ಫೋಟೋಗಳ ಲಿಸ್ಟ್ ನಲ್ಲಿ ಪತ್ನಿ ಆಶ್ರಿತಾ ಜತೆಗಿರುವ ಫೋಟೋ ಮಾಯವಾಗಿದೆ. ಇದು ಅಭಿಮಾನಿಗಳ ಶಂಕೆಗೆ ಕಾರಣವಾಗಿದ್ದು ಇಬ್ಬರೂ ಪರಸ್ಪರ ಬೇರೆ ಬೇರೆಯಾಗುತ್ತಿದ್ದಾರೆಯೇ ಎಂಬ ಮಾತುಗಳು ಕೇಳಿ ಬಂದಿವೆ. ಆದರೆ ಈ ಬಗ್ಗೆ ಈ ಜೋಡಿ ಇದುವರೆಗೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

2009ರ ಐಪಿಎಲ್ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪರ ಸ್ಫೋಟಕ ಬ್ಯಾಟಿಂಗ್ ನಡೆಸಿದ್ದ ಮನೀಷ್‌ ಪಾಂಡೆ, ಚೊಚ್ಚಲ ಶತಕ ಸಿಡಿಸಿದ ಮೊದಲ ಆನ್‌ಕ್ಯಾಪ್ಡ್ ಆಟಗಾರ ಎಂಬ ದಾಖಲೆ ನಿರ್ಮಿಸಿದ್ದರು. ಇದುವರೆಗೂ 171 ಐಪಿಎಲ್​ ಪಂದ್ಯಗಳನ್ನಾಡಿದ ಅವರು ಒಂದು ಶತಕ ಹಾಗೂ 22 ಅರ್ಧಶತಕ ಬಾರಿಸಿದ್ದಾರೆ. ಒಟ್ಟು 3850 ರನ್ ಗಳಿಸಿದ್ದಾರೆ. ಇದರಲ್ಲಿ ಅಜೇಯ 114 ರನ್‌ ಗರಿಷ್ಠ ಮೊತ್ತವಾಗಿದೆ. ಈ ಬಾರಿ ಕೆಕೆಆರ್​ ಪರ ಕೇವಲ 1 ಪಂದ್ಯ ಆಡಿ 42 ರನ್​ ಬಾರಿಸಿದ್ದರು.

ಇದನ್ನೂ ಓದಿ Hardik Pandya: ಕೌಟುಂಬಿಕ ಸಮಸ್ಯೆ ಬದಿಗೊತ್ತಿ ಭಾರತ ತಂಡದ ಯಶಸ್ಸಿಗಾಗಿ ಕ್ರಿಕೆಟ್​ ಅಭ್ಯಾಸ ಆರಂಭಿಸಿದ ಹಾರ್ದಿಕ್​ ಪಾಂಡ್ಯ

2015ರಲ್ಲಿ ಜಿಂಬಾಬ್ವೆ ವಿರುದ್ಧದ ಏಕದಿನ ಮತ್ತು ಟಿ20 ಸರಣಿಯನ್ನಾಡುವ ಮೂಲಕ ಟೀಮ್​ ಇಂಡಿಯಾಕ್ಕೆ ಪದಾರ್ಪಣೆ ಮಾಡಿದ ಮನೀಷ್‌, ಇದುವರೆಗೂ 29 ಏಕದಿನ ಮತ್ತು 39 ಟಿ20 ಕ್ರಿಕೆಟ್​ ಪಂದ್ಯಗಳನ್ನಾಡಿದ್ದಾರೆ. ಏಕದಿನದಲ್ಲಿ 566 ರನ್​ ಮತ್ತು ಟಿ20ಯಲ್ಲಿ 709 ರನ್​ ಬಾರಿಸಿದ್ದಾರೆ. ಏಕದಿನದಲ್ಲಿ ಒಂದು ಶತಕ ಮತ್ತು 2 ಅರ್ಧಶತಕ ಒಳಗೊಂಡಿದೆ. 2021ರಲ್ಲಿ ಶ್ರೀಲಂಕಾ ವಿರುದ್ಧ ಕೊಪನೆಯ ಬಾರಿ ಏಕದಿನ ಪಂದ್ಯವನ್ನಾಡಿದ್ದರು. ಇದಾದ ಬಳಿಕ ಫಾರ್ಮ್​ ಕಳೆದುಕೊಂಡು ಮತ್ತೆ ತಂಡಕ್ಕೆ ಕಮ್​ಬ್ಯಾಕ್​ ಮಾಡುವಲ್ಲಿ ವಿಫಲರಾಗಿದ್ದರು. ಬ್ಯಾಟಿಂಗ್​ ಜತೆಗೆ ಚುರುಕಿನ ಫೀಲ್ಡಿಂಗ್​ಗೆ ಇವರು ಹೆಸರುವಾಸಿ.

Continue Reading

Latest

Genitals Removed Case: ಮಲಗುವಾಗ ಗಂಡಾಗಿದ್ದ, ಎದ್ದಾಗ ಹೆಣ್ಣಾಗಿದ್ದ! ಬಲವಂತದಿಂದ ಲಿಂಗ ಪರಿವರ್ತನೆ

Genitals Removed Case ಕಾಲ ಕೆಟ್ಟೋಗಿದೆ ಎಂದು ಆಗಾಗ ಹಿರಿಯರು ಹೇಳುತ್ತಿರುವ ಮಾತು ಈಗ ನಿಜವಾಗುತ್ತಿದೆ. ಈ ಕಾಲದಲ್ಲಿ ಯಾರನ್ನೂ ನಂಬದೇ ಇರುವಂತಹ ಪರಿಸ್ಥಿತಿ ಉಂಟಾಗಿದೆ. ಉತ್ತರ ಪ್ರದೇಶದ ಮುಜಾಹಿದ್ ಎಂಬ ಯುವಕನೊಬ್ಬನ ರಾತ್ರಿ ಬೆಳಗಾಗುವುದರೊಳಗೆ ಯುವತಿ ಆಗಿದ್ದಾನೆ. ಏನಿದು ಹುಚ್ಚಾಟ ಏನಿಸಬಹುದು ಆದರೆ ನಿಜ! ಈತನ ಪರಿಚಯದ ವ್ಯಕ್ತಿಯೊಬ್ಬ ಸ್ಥಳೀಯ ವೈದ್ಯಕೀಯ ಕಾಲೇಜಿನ ವೈದ್ಯರೊಂದಿಗೆ ಸೇರಿಕೊಂಡು ಲಿಂಗ ಬದಲಾವಣೆ ಶಸ್ತ್ರಚಿಕಿತ್ಸೆಗೆ ಒಳಪಡಿಸಿ ಮೋಸ ಮಾಡಿದ್ದಾನೆ.. ಹಾಗಾಗಿ ಈ ಪ್ರಕರಣದ ಬಗ್ಗೆ ಎಲ್ಲೆಡೆ ಆಕ್ರೋಶ ವ್ಯಕ್ತವಾಗಿದೆ.

VISTARANEWS.COM


on

Genitals Removed Case
Koo

ಮಲಗುವಾಗ ಪುರುಷನಾಗಿದ್ದ ವ್ಯಕ್ತಿ ನಿದ್ರೆಯಿಂದ ಎಚ್ಚರವಾಗುವಷ್ಟರಲ್ಲಿ ಮಹಿಳೆ(woman)ಯಾಗಿ ಬದಲಾದರೆ? ಈ ರೀತಿ ಲಿಂಗ ಬದಲಾಣೆಯಾದ (Genitals Removed Case) ಘಟನೆ ಇದೀಗ ಉತ್ತರ ಪ್ರದೇಶದಲ್ಲಿ ನಡೆದಿದೆ.

ಮುಜಾಹಿದ್ ಎಂಬ 20 ವರ್ಷದ ಯುವಕ ಇಂತಹ ಘೋರ ಕೃತ್ಯಕ್ಕೆ ಒಳಗಾದ ವ್ಯಕ್ತಿ. ಈತನಿಗೆ ವ್ಯಕ್ತಿಯೊಬ್ಬ ಉತ್ತರ ಪ್ರದೇಶದ ಮುಜಾಫರ್ ನಗರದ ಸ್ಥಳೀಯ ವೈದ್ಯಕೀಯ ಕಾಲೇಜಿನ ವೈದ್ಯರೊಂದಿಗೆ ಸೇರಿಕೊಂಡು ಲಿಂಗ ಬದಲಾವಣೆ ಶಸ್ತ್ರಚಿಕಿತ್ಸೆಗೆ ಒಳಪಡಿಸಿ ಮೋಸ ಮಾಡಿದ್ದಾನೆ. ಇದು ಆತನ ಜೀವನಕ್ಕೊಂದು ಭಯಾನಕ ತಿರುವು ನೀಡಿದಂತಾಗಿದೆ. ಈ ಪ್ರಕರಣದ ಬಗ್ಗೆ ಎಲ್ಲೆಡೆ ಆಕ್ರೋಶ ವ್ಯಕ್ತವಾಗಿದೆ. ಈ ಭಯಾನಕ ಕೃತ್ಯದ ಬಗ್ಗೆ ಸಮಗ್ರ ತನಿಖೆ ನಡೆಸುವಂತೆ ಆಗ್ರಹಿಸಿ ಭಾರತೀಯ ಕಿಸಾನ್ ಯೂನಿಯನ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.

ಮುಜಾಹಿದ್ ಸಂಜಕ್ ಗ್ರಾಮದ ವ್ಯಕ್ತಿಯಾಗಿದ್ದ. ಓಂಪ್ರಕಾಶ್ ಎಂಬ ವ್ಯಕ್ತಿ ಮನ್ಸೂರ್ ಪುರದ ಬೇಗ್ರಾಜ್‌ಪುರ ವೈದ್ಯಕೀಯ ಕಾಲೇಜಿನ ವೈದ್ಯರಿಗೆ ಮುಜಾಹಿದ್‌ಗೆ ಶಸ್ತ್ರಚಿಕಿತ್ಸೆ ಮಾಡುವಂತೆ ಹೇಳಿದ್ದಾನೆ. ಆತನ ಮಾತು ಕೇಳಿ ವೈದ್ಯರು ಮುಜಾಹಿದ್‌ನ ಜನನಾಂಗವನ್ನು ತೆಗೆದುಹಾಕಿ ಬಲವಂತವಾಗಿ ಲಿಂಗ ಬದಲಾವಣೆ ಮಾಡಿದ್ದಾರೆ.

ಮುಜಾಹಿದ್ ಗೆ ವೈದ್ಯಕೀಯ ಸಮಸ್ಯೆ ಇದೆ. ಹಾಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವಂತೆ ಕಳೆದ ಎರಡು ವರ್ಷಗಳಿಂದ ಓಂಪ್ರಕಾಶ್ ಕಿರುಕುಳ ನೀಡುತ್ತಿದ್ದ. ತನ್ನನ್ನು ಆಸ್ಪತ್ರೆಗೆ ಕರೆತಂದು ನಂತರ ಅರವಳಿಕೆ ಇಂಜೆಕ್ಷನ್ ನೀಡಿ ಲಿಂಗ ಬದಲಾವಣೆಯ ಸರ್ಜರಿ ಮಾಡಿದ್ದಾರೆ ಎಂದು ಮುಜಾಹಿದ್ ಆರೋಪಿಸಿದ್ದಾನೆ. ಅಷ್ಟೇ ಅಲ್ಲದೇ ಇನ್ನು ಮುಂದೆ ತನ್ನ ಕುಟುಂಬದವರು ತನ್ನನ್ನು ಸ್ವೀಕರಿಸುವುದಿಲ್ಲ. ಹಾಗಾಗಿ ತನ್ನ ಜೊತೆ ಇರುವಂತೆ , ತನ್ನನ್ನೇ ಮದುವೆಯಾಗುವಂತೆ ಓಂಪ್ರಕಾಶ್ ಬೆದರಿಕೆ ಹಾಕಿರುವುದಾಗಿ ಮುಜಾಹಿದ್ ತಿಳಿಸಿದ್ದಾನೆ.

ಈ ಬಗ್ಗೆ ರೈತ ಮುಖಂಡರು, ಕಿಸಾನ್‌ ಸಂಘದ ಕಾರ್ಯಕರ್ತರು ವೈದ್ಯಕೀಯ ಕಾಲೇಜಿನ ಮುಂದೆ ಪ್ರತಿಭಟನೆ ನಡೆಸಿ ವೈದ್ಯಕೀಯ ಕಾಲೇಜು, ಆಸ್ಪತ್ರೆಗಳಲ್ಲಿ ನಡೆಯುವ ಮಾನವ ಅಂಗಗಳ ಕಳ್ಳಸಾಗಾಣಿಕೆಯಂತಹ ದುಷ್ಕೃತ್ಯಗಳನ್ನು ನಿಲ್ಲಿಸಬೇಕು. ಅದಕ್ಕಾಗಿ ಓಂಪ್ರಕಾಶ್ ಮತ್ತು ವೈದ್ಯಕೀಯ ಕಾಲೇಜಿನ ಮೇಲೆ ಕ್ರಮ ಕೈಗೊಳ್ಳಬೇಕು ಹಾಗೂ ಮುಜಾಹಿದ್ ಗೆ ಕನಿಷ್ಠ 2 ಕೋಟಿ ಪರಿಹಾರ ನೀಡಬೇಕೆಂದು ಎಂದು ಒತ್ತಾಯಿಸಿದ್ದಾರೆ. ಈ ಬಗ್ಗೆ ಕೂಲಂಕುಷವಾಗಿ ತನಿಖೆ ನಡೆಸುವುದಾಗಿ ಪೊಲೀಸರು ಭರವಸೆ ನೀಡಿದ್ದಾರೆ.

ಇದನ್ನೂ ಓದಿ: ಅಶ್ಲೀಲ ವಿಡಿಯೊ ಚಟ; ಮಗಳನ್ನೇ ಲೈಂಗಿಕಕ್ರಿಯೆಗೆ ಒತ್ತಾಯಿಸಿ ಕೊಂದ ಪಾಪಿ ತಂದೆ

ಈ ಬಗ್ಗೆ ಮುಜಾಹಿದ್ ಪೊಲೀಸರಿಗೆ ದೂರು ನೀಡಿದ ಕಾರಣ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಓಂಪ್ರಕಾಶ್ ನನ್ನು ಬಂಧಿಸಿದ್ದಾರೆ. ಈ ಬಗ್ಗೆ ತನಿಖೆ ನಡೆಯುತ್ತಿದೆ.

Continue Reading
Advertisement
Protest by BJP in Yallapur against petrol and diesel price hike
ಉತ್ತರ ಕನ್ನಡ11 mins ago

Uttara Kannada News: ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ವಿರೋಧಿಸಿ ಯಲ್ಲಾಪುರದಲ್ಲಿ ಬಿಜೆಪಿಯಿಂದ ಪ್ರತಿಭಟನೆ

Renuka swamy Murder case
ಬೆಂಗಳೂರು21 mins ago

Renuka Swamy Murder : ನಟ ದರ್ಶನ್ ಹಲ್ಲೆ ಮಾಡುವುದನ್ನು ವಿಡಿಯೊ ಮಾಡಿದ್ದ ಮೂವರು ಅರೆಸ್ಟ್‌; ಸಿಕ್ಕೇ ಬಿಡ್ತಾ ದೊಡ್ಡ ಸಾಕ್ಷಿ!

International Yoga Day 2024
ಫ್ಯಾಷನ್31 mins ago

International Yoga Day 2024: ಯೋಗಾಭ್ಯಾಸಕ್ಕೆ ಪುರುಷರ ಉಡುಗೆಗಳು ಹೀಗಿರಬೇಕು

Amithab Bacchan
Latest44 mins ago

Amithab Bacchan :14ನೇ ವರ್ಷಕ್ಕೆ ಕಾಲಿಟ್ಟ ʼರಾವಣ್ʼ ಚಿತ್ರ; ಮಗನನ್ನು ಹೊಗಳಿ ಸೊಸೆಯನ್ನು ನಿರ್ಲಕ್ಷಿಸಿದ ಅಮಿತಾಭ್!

BCCI
ಕ್ರೀಡೆ46 mins ago

BCCI: ಟೀಮ್​ ಇಂಡಿಯಾದ ತವರಿನ ಕ್ರಿಕೆಟ್​ ಸರಣಿಯ ವೇಳಾಪಟ್ಟಿ ಪ್ರಕಟ

Amitabh Bachchan touched Aswini Dutt feet
ಬಾಲಿವುಡ್49 mins ago

Amitabh Bachchan: ಅಶ್ವಿನಿ ದತ್ ಕಾಲಿಗೆ ನಮಸ್ಕರಿಸಿದ ಅಮಿತಾಭ್‌; ʻಬಿಗ್‌ ಬಿʼ ಕೊಂಡಾಡಿದ ರಾಮ್ ಗೋಪಾಲ್ ವರ್ಮಾ!

Citroen C3 Aircross
ಪ್ರಮುಖ ಸುದ್ದಿ54 mins ago

Citroen C3 Aircross : ಧೋನಿ ಹೆಸರಿನಲ್ಲಿ ಬಿಡುಗಡೆಯಾಗಿದೆ ಈ ಕಾರು, ಕೇವಲ 100 ಕಾರಷ್ಟೇ ಉತ್ಪಾದನೆ

Mysuru News
ಮೈಸೂರು56 mins ago

Mysuru News : ಪತ್ನಿ ಶೀಲ ಶಂಕಿಸಿ ಬೆಂಕಿ ಹಚ್ಚಿ ಸುಟ್ಟು ಹಾಕಿದವನಿಗೆ ಜೀವಾವಧಿ ಶಿಕ್ಷೆ

Yuva spoorthi samvaada programme on June 22 in Shivamogga
ಕರ್ನಾಟಕ1 hour ago

Shivamogga News: ಶಿವಮೊಗ್ಗದಲ್ಲಿ ಜೂ.22ರಂದು ಯುವ ಸ್ಫೂರ್ತಿ ಸಂವಾದ ಕಾರ್ಯಕ್ರಮ

IIT Bombay
Latest1 hour ago

IIT Bombay: ಹಿಂದೂ ದೇವರ ಅವಹೇಳನಕಾರಿ ನಾಟಕ; ಐಐಟಿ ವಿದ್ಯಾರ್ಥಿಗಳಿಗೆ ದಂಡ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Actor Darshan
ಮೈಸೂರು3 days ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು3 days ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ4 days ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ4 days ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ4 days ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ5 days ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ6 days ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

Actor Darshan
ಬೆಂಗಳೂರು6 days ago

Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

actor Darshan
ಬೆಂಗಳೂರು6 days ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತಿಬ್ಬರು ಸರೆಂಡರ್‌; ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆ

Actor Darshan
ಸಿನಿಮಾ6 days ago

Actor Darshan : ರೇಣುಕಾಸ್ವಾಮಿ ‌ಮೃತದೇಹ ಬಿಸಾಡಿ ಬಳಿಕ ಸಾಕ್ಷ್ಯಇದ್ದ 2 ಮೊಬೈಲ್‌ಗಳನ್ನು ಮೋರಿಗೆ ಎಸೆದ್ರಾ ಆರೋಪಿಗಳು?

ಟ್ರೆಂಡಿಂಗ್‌