ಬೆಂಗಳೂರು: ನಗರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು (Modi in Karnataka) ಬಿಜೆಪಿ ವಿಜಯ ಸಂಕಲ್ಪ ಸಮಾವೇಶ ಮುಗಿಸಿ ತೆರಳುವಾಗ ಭದ್ರತಾ ಲೋಪ ಉಂಟಾಗಿದೆ. ಅರಮನೆ ಮೈದಾನದಿಂದ ಎಚ್‌ಕ್ಯುಟಿಸಿ ಹೆಲಿಪ್ಯಾಡ್‌ಗೆ ತೆರಳುವಾಗ ಮೇಕ್ರಿ ಸರ್ಕಲ್‌ನಲ್ಲಿ ರಾಜ್ಯ ಯುವ ಕಾಂಗ್ರೆಸ್ ಘಟಕದ ಅಧ್ಯಕ್ಷ ಮೊಹಮ್ಮದ್ ನಲಪಾಡ್ ಹಾಗೂ ಬೆಂಬಲಿಗರು ರಸ್ತೆಗೆ ನುಗ್ಗಿ ಪ್ರಧಾನಿ ಮೋದಿ ಅವರಿಗೆ ಚೆಂಬು ಪ್ರದರ್ಶಿಸಿದ್ದಾರೆ. ಹೀಗಾಗಿ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಶನಿವಾರ ಸಂಜೆ ಅರಮನೆ ಮೈದಾನದಲ್ಲಿ ಆಯೋಜಿಸಿದ್ದ ಬಿಜೆಪಿ ವಿಜಯ ಸಂಕಲ್ಪ ಯಾತ್ರೆಯಲ್ಲಿ ಪಾಲ್ಗೊಂಡ ನಂತರ ಎಚ್‌ಕ್ಯುಟಿಸಿ ಹೆಲಿಪ್ಯಾಡ್‌ಗೆ ತೆರಳಲು ಮೋದಿ ಅವರು ಕಾರಿನಲ್ಲಿ ತೆರಳುತ್ತಿದ್ದರು. ಈ ವೇಳೆ ರಾಜ್ಯ ಯುವ ಕಾಂಗ್ರೆಸ್ ಘಟಕದ ಅಧ್ಯಕ್ ಮೊಹಮ್ಮದ್ ನಲಪಾಡ್ ಹಾಗೂ ಹಲವು ಕಾಂಗ್ರೆಸ್ ಕಾರ್ಯಕರ್ತರು ರಸ್ತೆಗೆ ನುಗ್ಗಿ ಚೆಂಬು ಪ್ರದರ್ಶನ ಮಾಡಿದ್ದಾರೆ. ತಕ್ಷಣ ಅವರನ್ನು ಪೊಲೀಸರು ವಶಕ್ಕೆ ಪಡೆದು ಕಾರಿನಲ್ಲಿ ಕರೆದೊಯ್ದರು.
ಇದನ್ನೂ ಓದಿ | Trust Of The Nation 2024 : ನರೇಂದ್ರ ಮೋದಿ ಮೂರನೇ ಬಾರಿ ಪ್ರಧಾನಿಯಾಗುವುದು ಖಚಿತ; ಡೈಲಿಹಂಟ್ ಸಮೀಕ್ಷೆ
ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದು, ನಲಪಾಡ್ ಮೇಲೆ ಕೇಸ್ ದಾಖಲಿಸಲು ತಯಾರಿ ನಡೆಸಲಾಗಿದೆ. ಹೀಗಾಗಿ ಅವರನ್ನು ಸದಾಶಿವನಗರ ಠಾಣೆಗೆ ಕರೆದೊಯ್ಯಲಾಗಿದೆ.
ಇನ್ನು ಎಚ್‌ಕ್ಯುಟಿಸಿ ಹೆಲಿಪ್ಯಾಡ್‌ನಿಂದ ಹೆಲಿಕಾಪ್ಟರ್ ಮುಖಾಂತರ ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಪ್ರಯಾಣಿಸಿದ ಮೋದಿ ಅವರು, ಅಲ್ಲಿಂದ ದೆಹಲಿಗೆ ಪ್ರಯಾಣ ಬೆಳಸಿದರು.
“ಕರ್ನಾಟಕಕ್ಕೆ ಮೋದಿ ಸರ್ಕಾರ ಕೊಟ್ಟ ಕೊಡುಗೆ ಚೆಂಬು” ಎಂದು ಕಾಂಗ್ರೆಸ್ ಜಾಹೀರಾತು ನೀಡಿತ್ತು, ಇದಕ್ಕೆ ಬಿಜೆಪಿ ನಾಯಕರು ಆಕ್ರೋಶ ಹೊರಹಾಕಿದ್ದರು. ಬಿಜೆಪಿ ಎಂದರೆ ಕನ್ನಡಿಗರಿಗೆ ಅನ್ಯಾಯ, ಹೀಗಾಗಿ ಈ ಬಾರಿ ಚುನಾವಣೆಯಲ್ಲಿ ಬಿಜೆಪಿಯವರಿಗೆ ವಾಪಸ್ ನೀಡೋಣ ಚೆಂಬು ಎಂದು ಕಾಂಗ್ರೆಸ್ ನಾಯಕರು ಟ್ವೀಟ್ ಮಾಡಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ್ದ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು, ತಮಿಳುನಾಡಿಗೆ ನೀರು ಬಿಟ್ಟು ಕಾವೇರಿಯ ಮಡಿಲು ಖಾಲಿ ಮಾಡಿ, ನೀವು ಜನರಿಗೆ ಚೆಂಬು ಕೊಟ್ಟಿದ್ದೀರಾ ಎಂದು ತಿರುಗೇಟು ನೀಡಿದ್ದರು. ಅಲ್ಲದೇ ಶನಿವಾರ ಚಿಕ್ಕಬಳ್ಳಾಪುರದಲ್ಲಿ ನಡೆದ ಬಿಜೆಪಿ ಸಮಾವೇಶದಲ್ಲಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಕಾಂಗ್ರೆಸ್ ವಿರುದ್ಧ ಹರಿಹಾಯ್ದಿದ್ದಾರೆ. ಚೆಂಬು ಜಾಹೀರಾತು ನೀಡಿರುವ ಕಾಂಗ್ರೆಸ್, 2004ರಿಂದ 2014ರವರೆಗೆ ಹಲವು ಹಗರಣ ನಡೆಸಿ, ಜನರ ಕೈಗೆ ಖಾಲಿ ಚೆಂಬು ನೀಡಿತ್ತು ಎಂದು ವಾಗ್ದಾಳಿ ನಡೆಸಿದ್ದಾರೆ.
ಟ್ಯಾಕ್ಸ್ ಸಿಟಿ ಬೆಂಗಳೂರನ್ನು ಟ್ಯಾಂಕರ್ ಸಿಟಿ ಮಾಡಿದ ಸರ್ಕಾರ, ಹೆಣ್ಣು ಮಕ್ಕಳ ಮೇಲೂ ಹಲ್ಲೆ: ಮೋದಿ ವಾಗ್ದಾಳಿ
ಬೆಂಗಳೂರು: ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ (Karnataka Congress Government) ಅಧಿಕಾರಕ್ಕೆ ಬಂದು ಕೆಲವೇ ತಿಂಗಳಲ್ಲಿ ಬೆಂಗಳೂರಿನ ಪರಿಸ್ಥಿತಿಯನ್ನು ಹಾಳು ಮಾಡಿದೆ. ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ ಎಂದು ಪ್ರಧಾನಿ ನರೇಂದ್ರ ಮೋದಿ (PM Narendra Modi) ಆಕ್ರೋಶವನ್ನು ಹೊರಹಾಕಿದರು. ಬೆಂಗಳೂರಿನಲ್ಲಿ ಏರ್ಪಡಿಸಲಾಗಿದ್ದ ಬೃಹತ್ ಸಮಾವೇಶದಲ್ಲಿ ಪಾಲ್ಗೊಂಡ ಮೋದಿ (Modi in Karnataka) ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.
ಬೆಂಗಳೂರಿನ ಅರಮನೆ ಮೈದಾನದಲ್ಲಿ ಏರ್ಪಡಿಸಲಾಗಿದ್ದ ಬಿಜೆಪಿ ವಿಜಯ ಸಂಕಲ್ಪ ಸಮಾವೇಶದಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಬೆಂಗಳೂರು ಸೇರಿದಂತೆ ಕರ್ನಾಟಕದ ಎಲ್ಲ ಕಡೆ ಬಜೆಟ್ ಕಡಿತ ಮಾಡಲಾಗುತ್ತಿದೆ. ಅಭಿವೃದ್ಧಿ ಗೌಣವಾಗಿದೆ. ಎಲ್ಲೆಲ್ಲೂ ಭ್ರಷ್ಟಾಚಾರ ನಡೆಯುತ್ತಿದೆ. ಜನರ ಸಮಸ್ಯೆ ಬಗ್ಗೆ ಈ ಸರ್ಕಾರ ಗಮನ ಕೊಡುತ್ತಿಲ್ಲ. ಕರ್ನಾಟಕದಲ್ಲಿ ಹೆಣ್ಣು ಮಕ್ಕಳ ಮೇಲೆ ಹಲ್ಲೆ ಆಗುತ್ತಿದೆ. ಭಜನೆ ಮಾಡಿದರೂ ಹಲ್ಲೆ ಮಾಡಲಾಗುತ್ತಿದೆ. ಬೀದಿಗಳಲ್ಲಿ ಬಾಂಬ್ ಸ್ಫೋಟಗೊಳ್ಳುತ್ತಿದೆ ಎಂದು ಸರ್ಕಾರದ ವಿರುದ್ಧ ಕಿಡಿಕಾರಿದರು.
Live : ಬೆಂಗಳೂರಿನ ಅರಮನೆ ಮೈದಾನದಲ್ಲಿ ವಿಜಯ ಸಂಕಲ್ಪ ಸಮಾವೇಶವನ್ನುದ್ದೇಶಿಸಿ ಪ್ರಧಾನಿ ಶ್ರೀ @narendramodi#NaMoAgainInKarnataka #ಮತ್ತೊಮ್ಮೆಮೋದಿಸರ್ಕಾರ https://t.co/lcOPEXsfdv
— BJP Karnataka (@BJP4Karnataka) April 20, 2024
ನಾವು ಅಧಿಕಾರಕ್ಕೆ ಬರುವಾಗ ಭಾರತವು ಆರ್ಥಿಕವಾಗಿ ಭಾರಿ ಹಿಂದಿತ್ತು. ಈಗ ಜಾಗತಿಕವಾಗಿ ಆರ್ಥಿಕ ಪ್ರಗತಿಯಲ್ಲಿ 5ನೇ ಸ್ಥಾನದಲ್ಲಿದ್ದೇವೆ. ಇದಕ್ಕೆ ಕಾರಣವಾಗಿದ್ದು, ನಿಮ್ಮ ಮತ. ಕಳೆದ 10 ವರ್ಷದಲ್ಲಿ ಭಾರತವು ಸಾಕಷ್ಟು ಸುಧಾರಣೆಯನ್ನು ಕಂಡಿದ್ದಲ್ಲದೆ, ಆರ್ಥಿಕ ಕ್ರಾಂತಿಯಾಗಿದೆ. ಈಗ ಭಾರತವು ಹಿಂಬಾಲಿಸುವ ದೇಶವಾಗಿ ಉಳಿದಿಲ್ಲ. 2014 ಹಾಗೂ 2019ರಲ್ಲಿ ಪೂರ್ಣ ಬಹುಮತಗಳೊಂದಿಗೆ ಭರ್ಜರಿ ಗೆಲುವನ್ನು ನಮಗೆ ಕೊಟ್ಟಿದ್ದೀರಿ. ಈ ಬಾರಿಯೂ ಅಂಥದ್ದೇ ಗೆಲುವನ್ನು ನೀವು ಕೊಡುತ್ತೀರಿ ಎಂಬ ವಿಶ್ವಾಸ ನನಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.
ನೀವೀಗ ಎನ್‌ಡಿಎ ಹಾಗೂ ಇಂಡಿಯಾ ಅಲೆಯನ್ಸ್ ಪ್ರಚಾರಗಳನ್ನು ನೋಡಿದ್ದೀರಿ. ಆದರೆ, ಇಂಡಿ ಅಲೆಯನ್ಸ್‌ನವರು ಸುಳ್ಳು ಆರೋಪವನ್ನು ಮಾಡುತ್ತಲೇ ಬರುತ್ತಿದ್ದಾರೆ. ಆದರೆ, ನಿಮ್ಮ ಮೋದಿ ಉದ್ದೇಶ ಏನು? ಭಾರತವನ್ನು ಅಭಿವೃದ್ಧಿ ಪಥದತ್ತ ಕೊಂಡೊಯ್ಯುವುದೇ ನನ್ನ ಗುರಿ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.
ಕಡಿಮೆ ವೆಚ್ಚದಲ್ಲಿ ಸಿಗುತ್ತಿದೆ 1 GB ಡೇಟಾ
ನಾವು ನಮ್ಮ ಕೆಲಸ ಹಾಗೂ ಟ್ರ್ಯಾಕ್ ರೆಕಾರ್ಡ್ ಇಟ್ಟುಕೊಂಡು ಮತ ಕೇಳುತ್ತಿದ್ದೇವೆ. ನಮ್ಮ ಸರ್ಕಾರ ರೇರಾ ಕಾಯ್ದೆಯನ್ನು ಜಾರಿಗೆ ತಂದಿದ್ದೇವೆ. ಇದರಿಂದ ಸಾಮಾನ್ಯರಿಗೆ ಆಗುತ್ತಿದ್ದ ಅನ್ಯಾಯವನ್ನು ತಡೆದಿದ್ದೇವೆ. 2014ಕ್ಕಿಂತ ಮೊದಲು ನಿಮಗೆ 2.5 ಲಕ್ಷ ರೂಪಾಯಿ ಇದ್ದರೂ ನೀವು ತೆರಿಗೆ ಕಟ್ಟಬೇಕಿತ್ತು. ಆದರೆ, ಇಂದು ನೀವು 7 ಲಕ್ಷದ ವರೆಗೆ ಆದಾಯ ಹೊಂದಿದರೂ ಒಂದು ರೂಪಾಯಿ ಟ್ಯಾಕ್ಸ್ ಕಟ್ಟುತ್ತಿಲ್ಲ. ಇನ್ನು ಜಿಎಸ್‌ಟಿ ಜಾರಿಯಿಂದ ಪರೋಕ್ಷ ತೆರಿಗೆ ಕಟ್ಟುವುದು ತಪ್ಪಿದೆ. ಇದೆಲ್ಲವೂ ಸಾಧ್ಯವಾಗಿದ್ದು ನಮ್ಮ ಸರ್ಕಾರದಿಂದ ಮಾತ್ರ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದರು.