ಬೆಂಗಳೂರು: ತೆಲಂಗಾಣ ಮುಖ್ಯಮಂತ್ರಿ ಎ.ರೇವಂತ್ ರೆಡ್ಡಿ ಮಂಗಳವಾರ ಆಲ್‌ರೌಂಟರ್ ಕ್ರಿಕೆಟಿಗ ಮೊಹಮ್ಮದ್ ಸಿರಾಜ್ ಅವರಿಗೆ ಭಾರತೀಯ ಕ್ರಿಕೆಟ್ಗೆ ನೀಡಿದ ಅತ್ಯುತ್ತಮ ಕೊಡುಗೆಗಾಗಿ ಹಲವಾರು ಬಹುಮಾನಗಳನ್ನು ಘೋಷಿಸಿದ್ದಾರೆ. ವಿಶೇಷವಾಗಿ ಭಾರತ ಕ್ರಿಕೆಟ್ ತಂಡ ಐಸಿಸಿ ಪುರುಷರ ಟಿ 20 ವಿಶ್ವಕಪ್ ಗೆಲ್ಲುವಲ್ಲಿ ಅವರ ಪಾತ್ರಕ್ಕಾಗಿ ಬಹುಮಾನ ನೀಡಿದ್ದಾರೆ. ಭಾರತದ ಟಿ 20 ವಿಶ್ವಕಪ್ ಗೆಲುವಿನ ನಂತರ ಕಳೆದ ವಾರ ತಮ್ಮ ತವರು ಹೈದರಾಬಾದ್ಗೆ ಮರಳಿದ ಸಿರಾಜ್, ಮುಖ್ಯಮಂತ್ರಿಯನ್ನು ಅವರ ನಿವಾಸದಲ್ಲಿ ಸೌಜನ್ಯದಿಂದ ಭೇಟಿಯಾದರು.
అంతర్జాతీయ క్రికెట్లో భారత దేశానికి, మన తెలంగాణ రాష్ట్రానికి గొప్ప పేరు ప్రఖ్యాతులు తెచ్చిన అల్ రౌండ్ క్రికెటర్ @mdsirajofficial గారిని ముఖ్యమంత్రి @revanth_anumula గారు అభినందించారు. #T20WorldCup ను గెలుచుకున్న అనంతరం హైదరాబాద్కు వచ్చిన్న సిరాజ్ ముఖ్యమంత్రిగారిని ఆయన… pic.twitter.com/hDf6s2ezr0
— Telangana CMO (@TelanganaCMO) July 9, 2024
ಸಭೆಯಲ್ಲಿ, ಸಿಎಂ ರೇವಂತ್ ರೆಡ್ಡಿ ಅವರು ಸಿರಾಜ್ ಅವರನ್ನು ಸನ್ಮಾನಿಸಿದರು, ಅವರ ಅಸಾಧಾರಣ ಪ್ರತಿಭೆಯನ್ನು ಶ್ಲಾಘಿಸಿದರು ಮತ್ತು ಅಂತರರಾಷ್ಟ್ರೀಯ ಕ್ರಿಕೆಟ್ನಲ್ಲಿ ಸಿರಾಜ್ ಮೂಡಿಸಿರುವ ಛಾಪನ್ನು ಕೊಂಡಾಡಿದರು. “ಮೊಹಮ್ಮದ್ ಸಿರಾಜ್ ನಮ್ಮ ದೇಶಕ್ಕೆ ಅಪಾರ ಹೆಮ್ಮೆ ಮತ್ತು ತೆಲಂಗಾಣ ರಾಜ್ಯಕ್ಕೆ ಹೆಚ್ಚಿನ ಗೌರವವನ್ನು ತಂದಿದ್ದಾರೆ” ಎಂದು ಮುಖ್ಯಮಂತ್ರಿ ಹೇಳಿದರು. “ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ಭಾರತಕ್ಕೆ ಮತ್ತು ನಮ್ಮ ರಾಜ್ಯಕ್ಕೆ ಹೆಚ್ಚಿನ ಖ್ಯಾತಿಯನ್ನು ತಂದುಕೊಟ್ಟ ಆಲ್ರೌಂಡ್ ಕ್ರಿಕೆಟಿಗ ಮೊಹಮ್ಮದ್ ಸಿರಾಜ್ ಅವರನ್ನು ಮುಖ್ಯಮಂತ್ರಿ ರೇವಂತ್ ರೆಡ್ಡಿ ಅಭಿನಂದಿಸಿದ್ದಾರೆ. ಟಿ 20 ವಿಶ್ವಕಪ್ ಗೆದ್ದ ನಂತರ ಹೈದರಾಬಾದ್ಗೆ ಬಂದ ಸಿರಾಜ್, ಮುಖ್ಯಮಂತ್ರಿಯನ್ನು ಅವರ ನಿವಾಸದಲ್ಲಿ ಭೇಟಿಯಾದರು. ಈ ಸಂದರ್ಭದಲ್ಲಿ ಸಿರಾಜ್ ಅವರನ್ನು ಗೌರವಿಸಲಾಯಿತು” ಎಂದು ಎಕ್ಸ್ನಲ್ಲಿ ಪೋಸ್ಟ್ ಹಾಕಲಾಗಿದೆ.
“2024 ರ ಟಿ 20 ವಿಶ್ವಕಪ್ನಲ್ಲಿ ಸಿರಾಜ್ ಅವರ ಅತ್ಯುತ್ತಮ ಪ್ರದರ್ಶನವನ್ನು ಮುಖ್ಯಮಂತ್ರಿ ಶ್ಲಾಘಿಸಿದ್ದಾರೆ. ರಾಜ್ಯ ಸರ್ಕಾರದ ಪರವಾಗಿ ಸಿರಾಜ್ ಗೆ ಮನೆ ಕಟ್ಟುವ ನಿವೇಶನ ಮತ್ತು ಉದ್ಯೋಗವನ್ನು ಮಂಜೂರು ಮಾಡಲು ಅಧಿಕಾರಿಗಳಿಗೆ ಆದೇಶ ನೀಡಲಾಗಿದೆ. ಹೈದರಾಬಾದ್ ಅಥವಾ ಹತ್ತಿರದ ಪ್ರದೇಶಗಳಲ್ಲಿ ಸೂಕ್ತ ಸ್ಥಳವನ್ನು ಹುಡುಕಲು ಮತ್ತು ಸರ್ಕಾರಿ ಉದ್ಯೋಗಗಳನ್ನು ಒದಗಿಸಲು ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಲು ಮುಖ್ಯಮಂತ್ರಿ ಅಧಿಕಾರಿಗಳಿಗೆ ಆದೇಶಿಸಿದ್ದಾರೆ” ಎಂದು ತಿಳಿಸಲಾಗಿದೆ.
ಇದನ್ನೂ ಓದಿ: Gautam Gambhir : ಆರ್ಸಿಬಿಯ ಮಾಜಿ ಬ್ಯಾಟರ್ ಬ್ಯಾಟಿಂಗ್ ಕೋಚ್ ಆಗಲಿ ಎಂದು ಬೇಡಿಕೆ ಇಟ್ಟ ಗಂಭೀರ್
ಸಿರಾಜ್ ಅವರ ಸಾಧನೆಗೆ ಮೆಚ್ಚುಗೆಯ ಸಂಕೇತವಾಗಿ, ರಾಜ್ಯ ಸರ್ಕಾರವು ಸಿರಾಜ್ಗೆ ವಸತಿ ನಿವೇಶನ ಮತ್ತು ಸರ್ಕಾರಿ ಉದ್ಯೋಗವನ್ನು ಬಹುಮಾನವಾಗಿ ನೀಡಲಿದೆ ಎಂದು ಮುಖ್ಯಮಂತ್ರಿ ಘೋಷಿಸಿದರು. ಹೈದರಾಬಾದ್ ಅಥವಾ ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸೂಕ್ತವಾದ ಭೂಮಿಯನ್ನು ಗುರುತಿಸಲು ಮತ್ತು ವೇಗದ ಬೌಲರ್ಗೆ ಸರ್ಕಾರಿ ಸ್ಥಾನವನ್ನು ಒದಗಿಸುವ ಪ್ರಕ್ರಿಯೆಯನ್ನು ತ್ವರಿತಗೊಳಿಸಲು ತೆಲಂಗಾಣ ಸಿಎಂ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಮುಂಬೈನಲ್ಲಿ ಟೀಮ್ ಇಂಡಿಯಾದ ವಿಜಯೋತ್ಸವದ ಮೆರವಣಿಗೆಯ ನಂತರ ಹೈದರಾಬಾದ್ನಲ್ಲಿ ವಿಜಯೋತ್ಸವದಲ್ಲಿ ಭಾಗವಹಿಸಿದ ಸಿರಾಜ್, ಸಿಎಂ ಅಧಿಕೃತ ನಿವಾಸಕ್ಕೆ ಭೇಟಿ ನೀಡಿದ್ದರು. ಅಲ್ಲಿ ಭಾರತದ ಮಾಜಿ ನಾಯಕ ಮೊಹಮ್ಮದ್ ಅಜರುದ್ದೀನ್ ಮತ್ತು ಅವರ ಮಗ ಉಪಸ್ಥಿತರಿದ್ದರು