Site icon Vistara News

Monsoon : ಮಳೆ ವರದಿ; ಕರ್ನಾಟಕದಲ್ಲಿ ಜೂನ್ 1ರಂದೇ ಮಾನ್ಸೂನ್ ಮಳೆ ಆರಂಭ

Mansoon

ಬೆಂಗಳೂರು: ಜೂನ್ ಮೊದಲ ವಾರದಲ್ಲಿ ಕರ್ನಾಟಕಕ್ಕೆ ಮುಂಗಾರು ಪ್ರವೇಶಿಸಲಿದ್ದು, ಜೂನ್ 13 ಅಥವಾ 14ರಂದು ಬೆಂಗಳೂರಿನಲ್ಲಿ ಮಾನ್ಸೂನ್​ ಮಳೆಗಾಲ (Monsoon) ಆರಂಭವಾಲಿದೆ ಎಂದು ಹವಾಮಾನ ಇಲಾಖೆ (Weather Forcast) ತಿಳಿಸಿದೆ. ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ಕಾಣಿಸಿಕೊಂಡರೆ ಮಾನ್ಸೂನ್ ಆಗಮನವನ್ನು ತಡವಾಗಬಹುದು ಎಂಬುದಾಗಿ ಎಂದು ಅಧಿಕಾರಿಗಳು ಒತ್ತಿ ಹೇಳಿದರು. ವರದಿಯ ಪ್ರಕಾರ, ನೈಋತ್ಯ ಮಾನ್ಸೂನ್ ಈಗಾಗಲೇ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಕ್ರೊಡೀಕರಣಗೊಂಡಿದೆ. ನೈಋತ್ಯ ಮುಂಗಾರು ಜೂನ್ 1 ಅಥವಾ 2ರಂದು ಕೇರಳ ಕರಾವಳಿಗೆ ತಲುಪುವ ಸಾಧ್ಯತೆ ಇದೆ. ಇದು ಜೂನ್ 6 ಅಥವಾ 7 ರಂದು ದಕ್ಷಿಣ ಕನ್ನಡದ ಮೂಲಕ ಕರ್ನಾಟಕ ಕರಾವಳಿಯನ್ನು ಪ್ರವೇಶಿಸಲಿದ್ದು, ಜೂನ್ 14 ರ ವೇಳೆಗೆ ಕ್ರಮೇಣ ದಕ್ಷಿಣ ಒಳನಾಡಿನ ಪ್ರದೇಶಗಳಿಗೆ ಹರಡಲಿದೆ ಎಂದು ಹಿರಿಯ ಹವಾಮಾನ ತಜ್ಞ ಸಿ.ಎಸ್.ಪಾಟೀಲ್ ಹೇಳಿದ್ದಾರೆ.

ಜೂನ್ ಮೊದಲ ವಾರದವರೆಗೂ ಬೆಂಗಳೂರಿನಲ್ಲಿ ಮುಂಗಾರು ಪೂರ್ವ ಮಳೆಯಾಗಲಿದೆ. ಕಳೆದ ಕೆಲವು ದಿನಗಳಿಂದ ಬೆಂಗಳೂರಿನಲ್ಲಿ ಮಳೆ ನಿಂತಿದ್ದರೂ, ಈ ತಿಂಗಳ ಅಂತ್ಯದ ವೇಳೆಗೆ ನಗರಕ್ಕೆ ಮತ್ತೆ ಮಳೆ ಮರಳಲಿದೆ. ಜೂನ್ ಎರಡನೇ ವಾರದಲ್ಲಿ ಮುಂಗಾರು ನಗರಕ್ಕೆ ಆಗಮಿಸಲಿದೆ.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಈಗಾಗಲೇ ಮಳೆಗಾಲವನ್ನು ಎದುರಿಸಲು ಸಜ್ಜಾಗುತ್ತಿದೆ, ಏಕೆಂದರೆ ನಗರವು ಪ್ರವಾಹ ಮತ್ತು ಜಲಾವೃತತೆಗೆ ಸಾಕ್ಷಿಯಾಗುವ ಸಾಧ್ಯತೆಯಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಅವರು ಬುಧವಾರ ನಗರದ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು ಮತ್ತು ಮಳೆಗಾಲದಲ್ಲಿ ಯಾವುದೇ ರೀತಿಯ ಪರಿಸ್ಥಿತಿಯನ್ನು ಎದುರಿಸಲು ಸಿದ್ಧರಾಗುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಕರಾವಳಿಯಲ್ಲಿ ಬಿರುಗಾಳಿ ಮಳೆ; ಕಡಲಿಗಿಳಿಯದಂತೆ ಮೀನುಗಾರರಿಗೆ ಅಲರ್ಟ್!

ಬೆಂಗಳೂರು: ರಾಜ್ಯಾದ್ಯಂತ ವರುಣಾರ್ಭಟ ಮುಂದುವರಿದಿದ್ದು, ಗುಡುಗು, ಮಿಂಚು ಸಹಿತ (Rain News) ಬಿರುಗಾಳಿಯೊಂದಿಗೆ ಮಳೆಯಾಗಲಿದೆ. ಕರಾವಳಿಯ ಉಡುಪಿ, ಉತ್ತರ ಕನ್ನಡ ಜಿಲ್ಲೆಯ ಹೆಚ್ಚಿನ ಸ್ಥಳಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗಾಳಿ ವೇಗವು ಗಂಟೆಗೆ 40-50 ಕಿ.ಮೀ ವ್ಯಾಪ್ತಿಯಲ್ಲಿ (Karnataka Weather Forecast) ಬೀಸಲಿದೆ.

ಇದನ್ನೂ ಓದಿ: Superstar Rajinikanth : ನಟ ರಜನಿಕಾಂತ್​​ಗೆ ವಿಶೇಷ ಗಿಫ್ಟ್​ ಕೊಟ್ಟ ಲುಲು ಮಾಲ್​ನ ಮಾಲೀಕ ಯೂಸುಫ್​​ ಅಲಿ

ಇನ್ನೂ ದಕ್ಷಿಣ ಒಳನಾಡಿನ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ರಾಮನಗರ ಮತ್ತು ಶಿವಮೊಗ್ಗದಲ್ಲೂ ವ್ಯಾಪಕ ಮಳೆಯಾಗಲಿದೆ.

ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಗಾಳಿಯೊಂದಿಗೆ (40-50 ಕಿಮೀ) ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಬಳ್ಳಾರಿ, ಚಿತ್ರದುರ್ಗ, ಚಿಕ್ಕಬಳ್ಳಾಪುರದ ಹಲವು ಕಡೆಗಳಲ್ಲಿ ಗಾಳಿಯು ರಭಸವಾಗಿ ಬೀಸಲಿದ್ದು, ಗುಡುಗು ಸಹಿತ ಮಳೆ ಲಘು ಮಳೆಯಾಗಲಿದೆ. ತುಮಕೂರು ಮತ್ತು ವಿಜಯನಗರ ಸೇರಿದಂತೆ ಬೀದರ್, ಕೊಪ್ಪಳ, ರಾಯಚೂರು ಮತ್ತು ಯಾದಗಿರಿಯಲ್ಲೂ ಗಾಳಿ ಸಹಿತ ಭಾರಿ ಮಳೆಯಾಗಲಿದೆ.

Exit mobile version