Site icon Vistara News

Moral policing : ನೈತಿಕ ಪೊಲೀಸ್​ಗಿರಿ; ಮುಸ್ಲಿಮರ ಗುಂಪಿನಿಂದ ಹಿಂದೂ ಯುವಕನ ಮೇಲೆ ಹಲ್ಲೆ

Moral policing

ಚಿತ್ರದುರ್ಗ: ಜತೆಗೆ ಕೆಲಸ ಮಾಡುವ ಮುಸ್ಲಿಂ ಯುವತಿಯೊಬ್ಬಳನ್ನು ಬೈಕ್​ನಲ್ಲಿ ಡ್ರಾಪ್ ಮಾಡಿರುವುದನ್ನು ಆಕ್ಷೇಪಿಸಿ ಮುಸ್ಲಿಂ ಯುವಕರ ಗುಂಪು ಹಿಂದೂ ಯುವಕನ ಮೇಲೆ ಹಲ್ಲೆ ನಡೆಸಿದ ನೈತಿಕ ಪೊಲೀಸ್​ಗಿರಿ (Moral policing) ಪ್ರದರ್ಶಿಸಿದ ಪ್ರಕರಣ ಚಿತ್ರದುರ್ಗದಲ್ಲಿ ವರದಿಯಾಗಿದೆ. ಈ ಬಗ್ಗೆ ವಿರೋಧ ವ್ಯಕ್ತಗೊಂಡಿದ್ದು ನೈತಿಕ ಪೊಲೀಸ್​ಗಿರಿ ಪ್ರದರ್ಶಿಸಿದವರನ್ನು ಶಿಕ್ಷಿಸಬೇಕು ಎಂಬ ಒತ್ತಾಯ ಕೇಳಿ ಬಂದಿದ.

ಈರಜ್ಜನ ಹಟ್ಟಿ ನಿವಾಸಿ ಉಮೇಶ್ (25) ಹಲ್ಲೆಗೆ ಒಳಗಾದವರು. ಅವರ ಮರ್ಮಾಂಗ ಸೇರಿದಂತೆ ಹಲವೆಡೆ ಮಾರಕ ಹಲ್ಲೆಯನ್ನು ನಡೆಸಲಾಗಿದೆ. ಉಮೇಶ್ ಹಾಗೂ ಅವರು ಡ್ರಾಪ್ ಮಾಡಿದ ಮುಸ್ಲಿಂ ಯುವತಿ ಒಂದೇ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದರು. ಅಂತೆಯೇ ಅವರು ಬೈಕ್​ನಲ್ಲಿ ಜತೆಯಾಗಿ ಹೋಗುತ್ತಿದ್ದಾಗ ಪುಂಡರ ಗುಂಪು ನಗರದ SJM ಕಾಲೇಜು ಬಳಿ ಅಡ್ಡಗಟ್ಟಿ ಹಲ್ಲೆ ನಡೆಸಿದೆ.

ಉಮೇಶ್ ನ ಅಡ್ಡಗಟ್ಟಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಸತತವಾಗಿ ಹಲ್ಲೆ ನಡೆಸಲಾಗಿದೆ ಎಂದು ಆರೋಪಿಸಲಾಗಿದೆ. ತೆಲೆ, ಮರ್ಮಾಂಗ ಭಾಗಕ್ಕೆ ಹೊಡೆದಿದ್ದಾರೆ ಎಂದು ಹೇಳಲಾಗಿದೆ. ಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಉಮೇಶ್​ ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ

ಕಾರ್ಪೋರೇಟರ್‌ ಮಗಳ ಕೊಲೆ; ಪ್ರೀತಿಸಲು ನಿರಾಕರಿಸಿದ್ದಕ್ಕೆ 9 ಬಾರಿ ಚಾಕುವಿನಿಂದ ಇರಿದ ಫಯಾಜ್‌!

ಹುಬ್ಬಳ್ಳಿ: ಪ್ರೀತಿಸಲು‌ ನಿರಾಕರಿಸಿದಳು (Refusal to love) ಎಂಬ ಕಾರಣಕ್ಕಾಗಿ ಪಾಗಲ್‌ ಪ್ರೇಮಿಯೊಬ್ಬ ಹುಬ್ಬಳ್ಳಿಯಲ್ಲಿ ಕಾರ್ಪೋರೇಟರ್‌ವೊಬ್ಬರ ಮಗಳನ್ನು ಭೀಕರವಾಗಿ ಕೊಲೆ (Stab wound) ಮಾಡಿದ್ದಾನೆ. ಚಾಕುವಿನಿಂದ 9 ಬಾರಿ ಇರಿದು (Murder Case) ಕೊಂದಿದ್ದಾನೆ.

ಹುಬ್ಬಳ್ಳಿಯ ಬಿವಿಬಿ ಕಾಲೇಜು (Hubballi BVB College) ಆವರಣದಲ್ಲಿ ಕೊಲೆ ನಡೆದಿದೆ. ನೇಹಾ ಹಿರೇಮಠ ಕೊಲೆಯಾದ ಯುವತಿಯಾಗಿದ್ದಾಳೆ. ಚಾಕುವಿನಿಂದ ಇರಿದು ಬರ್ಬರವಾಗಿ ಕೊಲೆ ಮಾಡಲಾಗಿದೆ. ನೇಹಾ ಪಾಲಿಕೆ ಸದಸ್ಯ ನಿರಂಜನ ಹಿರೇಮಠ ಅವರ ಮಗಳಾಗಿದ್ದಾಳೆ. ಫೈಜಲ್ ಎಂಬಾತ ಆರೋಪಿ ಎಂದು ಗುರುತಿಸಲಾಗಿದೆ.
ಪ್ರೀತಿಸಲು ನಿರಾಕರಿಸಿದ್ದಕ್ಕೆ ಕೊಲೆ

ನೇಹಾ ಹಿರೇಮಠ ಹುಬ್ಬಳ್ಳಿಯ ಬಿವಿಬಿ‌ ಕಾಲೇಜಿನಲ್ಲಿ ಓದುತ್ತಿದ್ದಾಳೆ. ಈ ವೇಳೆ ಆರೋಪಿ ಪ್ರೀತಿಸುವಂತೆ ಹಿಂದೆ ಬಿದ್ದಿದ್ದ. ಆದರೆ, ನೇಹಾ ನಿರಾಕರಣೆ ಮಾಡುತ್ತಲೇ ಬಂದಿದ್ದಾಳೆ. ಇದರಿಂದ ರೊಚ್ಚಿಗೆದ್ದ ಆತ ಗುರುವಾರ ಕಾಲೇಜು ಕ್ಯಾಂಪಸ್‌ಗೆ ಬಂದಿದ್ದಾನೆ. ಪುನಃ ಆಕೆ ಬಳಿ ಪ್ರೇಮ ನಿವೇದನೆ ಮಾಡಿಕೊಂಡಿದ್ದಾನೆ. ಆದರೆ, ನೇಹಾ ಪ್ರೀತಿಸಲು‌ ನಿರಾಕರಿಸಿದ್ದಾಳೆ. ಹೀಗಾಗಿ ಮೊದಲೇ ನಿರ್ಧರಿಸಿ ಬಂದಿದ್ದ ಆರೋಪಿಯು ನೇಹಾಳಿಗೆ ಕಾಲೇಜು ಕ್ಯಾಂಟೀನ್‌ನಲ್ಲಿಯೇ ಚಾಕುವಿನಿಂದ ಇರಿದಿದ್ದಾನೆ.

ಯುವತಿಗೆ ಮನಬಂದಂತೆ ಚಾಕುವಿನಿಂದ ಇರಿದಿದ್ದಾನೆ. ಒಟ್ಟು ಒಂಭತ್ತು ಬಾರಿ ಚಾಕುವಿನಿಂದ ಚುಚ್ಚಿದ್ದು, ನೇಹಾಳಿಗೆ ತೀವ್ರ ರಕ್ತಸ್ರಾವವಾಗಿದೆ. ಸ್ಥಳೀಯರು ತಕ್ಷಣವೇ ಕಿಮ್ಸ್ ಆಸ್ಪತ್ರೆಗೆ ಆಕೆಯನ್ನು ರವಾನೆ ಮಾಡಿದ್ದಾರೆ. ಆದರೆ, ಅಷ್ಟರಲ್ಲಾಗಲೇ ನೇಹಾ ಮೃತಪಟ್ಟಿದ್ದಾಳೆ ಎಂದು ವೈದ್ಯರು ಘೋಷಿಸಿದ್ದಾರೆ.

ಆರೋಪಿ ಫೈಜಲ್ ಕೊಂಡಿಕೊಪ್ಪನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹುಬ್ಬಳ್ಳಿಯ ವಿದ್ಯಾನಗರ ಠಾಣೆ‌ ಪೊಲೀಸರಿಂದ ಆರೋಪಿಯ ವಿಚಾರಣೆ ನಡೆಸಿದ್ದಾರೆ.

Exit mobile version