ಹಾಸನ: ಹಾಸನ ನಗರದಲ್ಲಿ ಗುರುವಾರ ಬೆಳಗ್ಗೆ ಬರ್ಬರ ಕೊಲೆಯೊಂದು ನಡೆದಿದೆ. ನಟೋರಿಯಸ್ ರೌಡಿ ರವಿ ಅಲಿಯಾಸ್ ಚೈಲ್ಡ್ ರವಿ (45) ಎಂಬಾತನನ್ನು ದುಷ್ಕರ್ಮಿಗಳು ಕೊಲೆ ಮಾಡಿದ್ದಾರೆ. ಹಾಸನದ ಹೇಮಾವತಿನಗರದಲ್ಲಿ ಘಟನೆ ನಡೆದಿದೆ. ಮಾರಕಾಸ್ತ್ರಗಳೊಂದಿಗೆ ದಾಳಿ ನಡೆಸಿದ ದುಷ್ಕರ್ಮಿಗಳು ಕೊಲೆ ಮಾಡಿ ಪರಾರಿಯಾಗಿದ್ದಾರೆ.
ರೌಡಿ ರವಿ ಕುಡಿಯುವ ನೀರು ತೆಗೆದುಕೊಂಡು ಬೈಕ್‌ನಲ್ಲಿ ತೆರಳುತ್ತಿದ್ದಾಗ ಏಕಾಏಕಿ ದಾಳಿ ಮಾಡಿದ ದುಷ್ಕರ್ಮಿಗಳು ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದಾರೆ. ತೀವ್ರ ರಕ್ತ ಸ್ರಾವದಿಂದಾಗಿ ಆತ ಅಲ್ಲೇ ಕೊಲೆಯಾಗಿದ್ದಾನೆ. ಕೊಲೆಯಾದ ರವಿಯ ವಿರುದ್ಧ ಕೊಲೆ, ದರೋಡೆ ಸೇರಿದಂತೆ ಹಲವು ಪ್ರಕರಣಗಳಿದ್ದವು. ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ ನಡೆಸುತ್ತಿದ್ದಾರೆ. ಪೆನ್‌ಷನ್ ಮೊಹಲ್ಲಾ ಪೊಲೀಸ್ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ದೂರು ದಾಖಲಿಸುತ್ತಿದ್ದಾರೆ.
ಬಿಜೆಪಿ ಮುಖಂಡನ ಮೇಲೆ ತಲ್ವಾರ್‌ನಿಂದ ಹಲ್ಲೆ
ಮಂಗಳೂರು/ಯಾದಗಿರಿ: ಚುನಾವಣೆ ಫಲಿತಾಂಶ ಪ್ರಕಟವಾದ ಬಳಿಕ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ (Assault Case) ಬಿಜೆಪಿ ಕಾರ್ಯಕರ್ತ ಮತ್ತು ಬಿಜೆಪಿ ಮುಖಂಡನ ಮೇಲೆ ಕಾಂಗ್ರೆಸ್ ಕಾರ್ಯಕರ್ತರು ದಾಳಿ ನಡೆಸಿರುವುದು ಮಂಗಳವಾರ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕಳೆಂಜ ಗ್ರಾಮದ ಕಾರ್ಯತಡ್ಕದ ಪೇಟೆಯಲ್ಲಿ ಬಿಜೆಪಿ ಕಾರ್ಯಕರ್ತನ ಮೇಲೆ ತಲ್ವಾರ್‌ನಿಂದ ಹಲ್ಲೆ ಮಾಡಲಾಗಿದ್ದು, ಸುರಪುರದಲ್ಲಿ ಉಪಚುನಾವಣೆಯ ಬಿಜೆಪಿ ಪರಾಜಿತ ಅಭ್ಯರ್ಥಿ ರಾಜುಗೌಡ ಅಳಿಯನ ಕಾರಿನ ಮೇಲೆ ಕೈ ಕಾರ್ಯಕರ್ತರಿಂದ ಕಲ್ಲು ತೂರಾಟ ಆರೋಪ ಕೇಳಿಬಂದಿದೆ.
ಇದನ್ನೂ ಓದಿ: R Ashok: ಸೋಲಿನ ಹೊಣೆ ಹೊತ್ತು ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಲಿ: ಆರ್. ಅಶೋಕ್ ಆಗ್ರಹ
ಪಟಾಕಿ ಸಿಡಿಸಿದ್ದಕ್ಕೆ ಬಿಜೆಪಿ ಕಾರ್ಯಕರ್ತನ ಮೇಲೆ ಹಲ್ಲೆ
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕಳೆಂಜ ಗ್ರಾಮದ ಕಾರ್ಯತಡ್ಕದ ಪೇಟೆಯಲ್ಲಿ ಪಟಾಕಿ ಸಿಡಿಸಿದ್ದಕ್ಕೆ ಬಿಜೆಪಿ ಮುಖಂಡನ ಮೇಲೆ ಕಾಂಗ್ರೆಸ್ ಕಾರ್ಯಕರ್ತ ತಲ್ವಾರ್‌ನಿಂದ ದಾಳಿ ನಡೆಸಿದ್ದಾನೆ. ಇದರಿಂದ ಗಂಭೀರವಾಗಿ ಗಾಯಗೊಂಡ ಬಿಜೆಪಿ ಕಾರ್ಯಕರ್ತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಬೆಳ್ತಂಗಡಿ ತಾಲೂಕಿನ ಬಿಜೆಪಿ ಮಂಡಳದ ಎಸ್ಟಿ ಮೊರ್ಚಾದ ಅಧ್ಯಕ್ಷ ರಾಜೇಶ್ ಎಮ್.ಕೆ(33) ಹಲ್ಲೆಗೊಳಾಗಾದವರು. ಕಳೆಂಜದ ಕುಶಲಪ್ಪ ಗೌಡ ಕಜೆ ಹಲ್ಲೆ ಆರೋಪಿ. ರಾಜೇಶ್‌ಗೆ ಉಜಿರೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಧರ್ಮಸ್ಥಳ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.
ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ಗೆಲುವು ಸಾಧಿಸಿದ್ದಕ್ಕೆ ಕಾರ್ಯಕರ್ತ ರಾಜೇಶ್ ಪಟಾಕಿ ಸಿಡಿಸಿದ್ದರು. ಆರೋಪಿ ಕುಶಲಪ್ಪ ಮನೆ ಮುಂದೆ ರಾಜೇಶ್ ಮತ್ತು ತಂಡ ಪಟಾಕಿ ಸಿಡಿಸಿದ ಹಿನ್ನೆಲೆಯಲ್ಲಿ ಹಲ್ಲೆ ನಡೆಸಲಾಗಿದೆ.