Mysore Election Result 2024 : ಮೈಸೂರಿನ ಯುವರಾಜ ಯದುವೀರ ಒಡೆಯರ್​​ಗೆ ಗೆಲುವು - Vistara News

ಪ್ರಮುಖ ಸುದ್ದಿ

Mysore Election Result 2024 : ಮೈಸೂರಿನ ಯುವರಾಜ ಯದುವೀರ ಒಡೆಯರ್​​ಗೆ ಗೆಲುವು

Mysore Election Result 2024 : 2019ರ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿ ಪ್ರತಾಪ್ ಸಿಂಹ ಅವರು ಕಾಂಗ್ರೆಸ್​​ನ ಸಿ.ಎಚ್.ವಿಜಯಶಂಕರ್ ಅವರನ್ನು 1,38,647 ಮತಗಳ ಭಾರೀ ಅಂತರದಿಂದ ಸೋಲಿಸಿದ್ದರು. 2019ರ ಚುನಾವಣೆಯಲ್ಲಿ ಬಿಜೆಪಿ ಶೇ.52.27ರಷ್ಟು ಮತಗಳನ್ನು ಪಡೆದಿತ್ತು.

VISTARANEWS.COM


on

Mysore Election Result 2024
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಕರುನಾಡಿನ ಸಾಂಸ್ಕೃತಿಕ ತವರೂರಾಗಿರುವ ಮೈಸೂರು ಲೋಕಸಭಾ ಕ್ಷೇತ್ರ ಚುನಾವಣೆಯಲ್ಲಿ ಬಿಜೆಪಿಯ ಯದುವೀರ್​ ಒಡೆಯರ್ (Yaduveer Wadiyar)​ ಗೆಲುವು (7,59,503 ಮತಗಳು) ಸಾಧಿಸಿದ್ದಾರೆ (Mysore Election Result 2024). ಅವರು ತಮ್ಮ ಸಮೀಪದ ಪ್ರತಿಸ್ಪರ್ಧಿ ಕಾಂಗ್ರೆಸ್ ರಾಜ್ಯ ವಕ್ತಾರ ಲಕ್ಷ್ಮಣ್ (6,52,241 ಮತಗಳು) ವಿರುದ್ಧ 1,39, 282 ಮತಗಳ ಅಂತರದ ವಿಜಯ ಸಾಧಿಸಿದ್ದಾರೆ.

  • ಯದುವೀರ ಒಡೆಯರ್​ (ಬಿಜೆಪಿ)- 7,59,503 ಮತಗಳು
  • ಎಂ ಲಕ್ಷ್ಮಣ್​ (ಕಾಂಗ್ರೆಸ್​)- 6,52,241 ಮತಗಳು
  • ಅಂತರ- 1,39, 282

2019ರ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿ ಪ್ರತಾಪ್ ಸಿಂಹ ಅವರು ಕಾಂಗ್ರೆಸ್​​ನ ಸಿ.ಎಚ್.ವಿಜಯಶಂಕರ್ ಅವರನ್ನು 1,38,647 ಮತಗಳ ಭಾರೀ ಅಂತರದಿಂದ ಸೋಲಿಸಿದ್ದರು. 2019ರ ಚುನಾವಣೆಯಲ್ಲಿ ಬಿಜೆಪಿ ಶೇ.52.27ರಷ್ಟು ಮತಗಳನ್ನು ಪಡೆದಿತ್ತು.

ಇದನ್ನೂ ಓದಿ: Mandya Election Result 2024 : ಮಂಡ್ಯದಲ್ಲಿ ಕುಮಾರ ಸ್ವಾಮಿಗೆ ಭರ್ಜರಿ ಗೆಲುವು

2014ರ ಸಾರ್ವತ್ರಿಕ ಚುನಾವಣೆಯಲ್ಲಿ ಪ್ರತಾಪ್ ಸಿಂಹ ಅವರು ಕಾಂಗ್ರೆಸ್​ನ ಅಡಗೂರು ಎಚ್.ವಿಶ್ವನಾಥ್ ಅವರನ್ನು 31,608 ಮತಗಳ ಭಾರೀ ಅಂತರದಿಂದ ಸೋಲಿಸಿದ್ದರು. ಈ ಕ್ಷೇತ್ರದಲ್ಲಿ ಬಿಜೆಪಿ ಶೇ.43.46ರಷ್ಟು ಮತಗಳನ್ನು ಗಳಿಸಿದೆ

2009ರ ಸಾರ್ವತ್ರಿಕ ಚುನಾವಣೆಯಲ್ಲಿ ಅಡಗೂರು ಎಚ್.ವಿಶ್ವನಾಥ್ ಅವರು ಬಿಜೆಪಿಯ ಸಿ.ಎಚ್.ವಿಜಯಶಂಕರ್ ಅವರನ್ನು 7,691 ಮತಗಳ ಭಾರೀ ಅಂತರದಿಂದ ಸೋಲಿಸಿದ್ದರು. ಈ ಕ್ಷೇತ್ರದಲ್ಲಿ ಕಾಂಗ್ರೆಸ್ 36.42% ಮತಗಳನ್ನು ಪಡೆದಿತ್ತು.

ಕ್ಷೇತ್ರದ ವಿಶೇಷತೆಯೇನು?

ಕಾಂಗ್ರೆಸ್ ಪ್ರಾಬಲ್ಯದ ಮೈಸೂರು ಲೋಕ ಸಭಾ ಕ್ಷೇತ್ರವು (Mysore lok sabha Constituency) ಕಳೆದ ಚುನಾವಣೆಗಳಲ್ಲಿ ಸಂಪೂರ್ಣ ಬದಲಾವಣೆಗೆ ಸಾಕ್ಷಿಯಾಗಿದೆ. ಪ್ರತಾಪ್ ಸಿಂಹ (Pratap Simha) ಸತತ ಎರಡು ಬಾರಿ ಗೆದ್ದಿರುವ ಕ್ಷೇತ್ರದಲ್ಲಿ ಬಿಜೆಪಿ ತನ್ನ ಬಲವನ್ನು ಸಾಬೀತುಪಡಿಸಿದ್ದರು. ಅದಕ್ಕಿಂತ ಹಿಂದೆ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಸೇರಿದಂತೆ ಹಿಂದಿನ ಮೈಸೂರು ರಾಜಮನೆತನದ ಸದಸ್ಯರು ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿ ಗೆದ್ದಿದ್ದರು.

1977 ರಲ್ಲಿ ರಚನೆಯಾದ ಮೈಸೂರು ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪ್ರಭಾವ ಹೊಂದಿತ್ತು. ಎಚ್.ಡಿ. ತುಳಸೀದಾಸ್, ಎಂ. ರಾಜಶೇಖರಮೂರ್ತಿ ಮತ್ತು ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಅವರಂತಹ ಗಮನಾರ್ಹ ನಾಯಕರು ಇಲ್ಲಿ ಗೆದ್ದಿದ್ದರು. ಇತ್ತೀಚಿನ ಎರಡು ಚುನಾವಣೆಗಳಲ್ಲಿ ಬಿಜೆಪಿ ಪ್ರತಾಪ್ ಸಿಂಹ ಈ ಕ್ಷೇತ್ರದಲ್ಲಿ ಬಿಜೆಪಿ ಸ್ಥಾನ ಭದ್ರಪಡಿಸಿಕೊಂಡಿದ್ದರು. ಈ ಕ್ಷೇತ್ರವು ಮೈಸೂರು ಜಿಲ್ಲೆಯ ಭಾಗ ಮತ್ತು ಇಡೀ ಕೊಡಗು ಜಿಲ್ಲೆಯನ್ನು ಒಳಗೊಂಡಿದೆ. ಭಾರತದ ಚುನಾವಣಾ ಆಯೋಗದ ಪ್ರಕಾರ, 2019 ರಲ್ಲಿ ಒಟ್ಟು 18,96,333 ಮತದಾರರಿದ್ದರು.

ಕ್ಷೇತ್ರದ ವ್ಯಾಪ್ತಿಯೇನು?

ಮೈಸೂರು ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಮಡಿಕೇರಿ, ವಿರಾಜಪೇಟೆ, ಪಿರಿಯಾಪಟ್ಟಣ, ಹುಣಸೂರು, ಚಾಮುಂಡೇಶ್ವರಿ, ಕೃಷ್ಣರಾಜ, ಚಾಮರಾಜ ಮತ್ತು ನರಸಿಂಹರಾಜ ವಿಧಾನಸಭಾ ಕ್ಷೇತ್ರಗಳಿವೆ. ಕಾಂಗ್ರೆಸ್ 5, ಜೆಡಿಎಸ್ 2, ಬಿಜೆಪಿ 1 ಸ್ಥಾನ ಹೊಂದಿವೆ. ಸರಾಸರಿ ಸಾಕ್ಷರತಾ ಪ್ರಮಾಣವು ಸುಮಾರು 67,65% ರಷ್ಟಿದೆ. ಸುಮಾರು 977500 ನಗರ ಮತದಾರರು 51.6% ರಷ್ಟಿದ್ದಾರೆ. ಎಸ್ಸಿ ಮತ್ತು ಎಸ್ಟಿ ಮತದಾರರು ಸುಮಾರು 13.9% ರಷ್ಟಿದ್ದಾರೆ.

ಬೌಗೋಳಿಕ ಗಡಿಗಳು

ಮೈಸೂರು ಲೋಕಸಭೆ ಕ್ಷೇತ್ರ ಭಾರತದ ದಕ್ಷಿಣ ಪ್ರದೇಶ ಮತ್ತು ಕರ್ನಾಟಕದ ದಕ್ಷಿಣ ಕರ್ನಾಟಕ ಪ್ರದೇಶದಲ್ಲಿದೆ. ಈ ಸ್ಥಾನವು ಕರ್ನಾಟಕದ ಕೊಡಗು, ಮೈಸೂರು ಜಿಲ್ಲೆಗಳನ್ನು ಒಳಗೊಂಡಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

LK Advani: ಮಾಜಿ ಉಪ ಪ್ರಧಾನಿ ಎಲ್‌ ಕೆ ಆಡ್ವಾಣಿ ಅಸ್ವಸ್ಥ, ಏಮ್ಸ್‌ಗೆ ದಾಖಲು

LK Advani: ಆಡ್ವಾಣಿ ಅವರಿಗೆ ಈಗ 96 ವರ್ಷ. ಬುಧವಾರ ತಡರಾತ್ರಿ ಆಸ್ಪತ್ರೆಗೆ ದಾಖಲಿಸುವಾಗ ಅವರು ಪ್ರಜ್ಞಾವಸ್ಥೆಯಲ್ಲಿದ್ದರು ಹಾಗೂ ಮಾತನಾಡುತ್ತಿದ್ದರು. ಆಸ್ಪತ್ರೆಯಲ್ಲಿ ಹಿರಿಯ ನಾಗರಿಕರ ವಿಭಾಗದ ತಜ್ಞರಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ವಯಸ್ಸಿಗೆ ಸಂಬಂಧಿಸಿದ ಆರೋಗ್ಯ ಸಮಸ್ಯೆಗಳಿಂದ ಅವರು ಬಳಲುತ್ತಿದ್ದಾರೆ.

VISTARANEWS.COM


on

lk advani
Koo

ಹೊಸದಿಲ್ಲಿ: ಮಾಜಿ ಉಪ ಪ್ರಧಾನಿ (Ex Deputy Prime Minister), ಬಿಜೆಪಿಯ (BJP) ಹಿರಿಯ ನಾಯಕ ಎಲ್‌.ಕೆ ಆಡ್ವಾಣಿ (LK Advani) ಅವರು ಅಸ್ವಸ್ಥಗೊಂಡಿದ್ದು, ಅವರನ್ನು ನವದೆಹಲಿಯ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ (ಎಐಐಎಂಎಸ್- AIIMS) ಗೆ ದಾಖಲಿಸಲಾಗಿದೆ.

ಇದನ್ನು ಆಸ್ಪತ್ರೆಯ ಹೇಳಿಕೆ ದೃಢಪಡಿಸಿದೆ. “ಎಲ್‌.ಕೆ ಅಡ್ವಾಣಿ ಅವರು ನವದೆಹಲಿಯ ಏಮ್ಸ್‌ಗೆ ದಾಖಲಾಗಿದ್ದಾರೆ. ಅವರು ಸ್ಥಿರವಾಗಿದ್ದಾರೆ ಮತ್ತು ವೀಕ್ಷಣೆಯಲ್ಲಿದ್ದಾರೆ” ಎಂದು ಏಮ್ಸ್ ಹೇಳಿಕೆ ನೀಡಿದೆ. ಹಿರಿಯ ನಾಯಕನ ದೈಹಿಕ ಸ್ಥಿತಿಗತಿಯ ಬಗ್ಗೆ ಆಸ್ಪತ್ರೆಯು ಹೆಚ್ಚಿನ ವಿವರಗಳನ್ನು ನೀಡಿಲ್ಲ.

ಆಡ್ವಾಣಿ ಅವರಿಗೆ ಈಗ 96 ವರ್ಷ. ಬುಧವಾರ ತಡರಾತ್ರಿ ಆಸ್ಪತ್ರೆಗೆ ದಾಖಲಿಸುವಾಗ ಅವರು ಪ್ರಜ್ಞಾವಸ್ಥೆಯಲ್ಲಿದ್ದರು ಹಾಗೂ ಮಾತನಾಡುತ್ತಿದ್ದರು. ಆಸ್ಪತ್ರೆಯಲ್ಲಿ ಹಿರಿಯ ನಾಗರಿಕರ ವಿಭಾಗದ ತಜ್ಞರಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ವಯಸ್ಸಿಗೆ ಸಂಬಂಧಿಸಿದ ಆರೋಗ್ಯ ಸಮಸ್ಯೆಗಳಿಂದ ಅವರು ಬಳಲುತ್ತಿದ್ದಾರೆ.

ಈ ತಿಂಗಳ ಆರಂಭದಲ್ಲಿ, ಸರ್ಕಾರ ರಚನೆಗೆ ಹಕ್ಕು ಸಾಧಿಸಿದ ನಂತರ, ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಆಡ್ವಾಣಿಯವರನ್ನು ಭೇಟಿ ಮಾಡಿದ್ದರು. ಗಾಂಧಿನಗರದ ಮಾಜಿ ಸಂಸದನಾದ ಆಡ್ವಾಣಿ, ಮೋದಿಯವರ ರಾಜಕೀಯ ಮಾರ್ಗದರ್ಶಕರಾಗಿದ್ದಾರೆ. ಆಡ್ವಾಣಿ ಅವರಿಗೆ ಈ ವರ್ಷದ ಮಾರ್ಚ್‌ನಲ್ಲಿ ಭಾರತ ರತ್ನ ಪ್ರಶಸ್ತಿಯನ್ನು ನೀಡಲಾಗಿತ್ತು. ಅವರ ನಿವಾಸದಲ್ಲಿಯೇ ಈ ಅತ್ಯುನ್ನತ ನಾಗರಿಕ ಗೌರವವನ್ನು ಸಲ್ಲಿಸಲಾಗಿತ್ತು. ರಾಷ್ಟ್ರಪತಿ ದ್ರೌಪದಿ ಮುರ್ಮು ಇದನ್ನು ಕೊಡಮಾಡಿದ್ದರು. ಔಪಚಾರಿಕ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ಉಪರಾಷ್ಟ್ರಪತಿ ಜಗದೀಪ್ ಧಂಖರ್, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಗೃಹ ಸಚಿವ ಅಮಿತ್ ಶಾ ಮತ್ತು ಎಲ್ ಕೆ ಅಡ್ವಾಣಿ ಅವರ ಕುಟುಂಬ ಸದಸ್ಯರು ಉಪಸ್ಥಿತರಿದ್ದರು.

ಎಲ್‌ಕೆ ಆಡ್ವಾಣಿ ಅವರು ಜೂನ್ 2002ರಿಂದ ಮೇ 2004 ರವರೆಗೆ ಭಾರತದ ಉಪ ಪ್ರಧಾನ ಮಂತ್ರಿಯಾಗಿ, ಅಕ್ಟೋಬರ್ 1999 ರಿಂದ ಮೇ 2004 ರವರೆಗೆ ಕೇಂದ್ರ ಗೃಹ ಸಚಿವರಾಗಿ ಸೇವೆ ಸಲ್ಲಿಸಿದರು. ಅವರು 1986 ರಿಂದ 1990, 1993 ರಿಂದ 1998 ಮತ್ತು 2004 ರಿಂದ 2005 ರವರೆಗೆ ಬಿಜೆಪಿ ಅಧ್ಯಕ್ಷರಾಗಿದ್ದರು.

ರಾಮಮಂದಿರ ನಿರ್ಮಾಣದ ಕುರಿತು

ಅಯೋಧ್ಯೆಯಲ್ಲಿ ಭಗವಾನ್ ರಾಮನ ಭವ್ಯ ಮಂದಿರದ (Ayodhya Ram Mandir) ನಿರ್ಮಾಣವನ್ನು ವಿಧಿಯೇ(Fate) ನಿರ್ಧರಿಸಿತ್ತು ಮತ್ತು ಇದಕ್ಕಾಗಿ ಅದು ಪ್ರಧಾನಿ ನರೇಂದ್ರ ಮೋದಿಯವರನ್ನು (PM Narendra Modi) ಆಯ್ಕೆ ಮಾಡಿದೆ ಎಂದು ಆಡ್ವಾಣಿ (LK Advani) ಅವರು ರಾಮ ಮಂದಿರ ನಿರ್ಮಾಣದ ಸಂದರ್ಭದಲ್ಲಿ ಹೇಳಿದ್ದರು. ರಾಷ್ಟ್ರಧರ್ಮ ಪತ್ರಿಕೆಯೊಂದಿಗೆ ಮಾತನಾಡಿ, ಅವರು ತಮ್ಮ ರಥಯಾತ್ರೆ (Rath Yatra) ಹಾಗೂ ರಾಮ ಮಂದಿರ ನಿರ್ಮಾಣ ಕುರಿತು ಅನೇಕ ಸಂಗತಿಗಳನ್ನು ಹಂಚಿಕೊಂಡಿದ್ದರು. ತನ್ನ ಮಂದಿರ ನಿರ್ಮಾಣಕ್ಕಾಗಿ ರಾಮನೇ ಭಕ್ತ(ಮೋದಿ)ನನ್ನು ಆಯ್ಕೆ ಮಾಡಿಕೊಂಡಿದ್ದಾನೆ ಎಂದು ಆಡ್ವಾಣಿ ಅಭಿಪ್ರಾಯಪಟ್ಟಿದ್ದರು.

‘ರಾಮ ಮಂದಿರ ನಿರ್ಮಾಣ್, ಏಕ ದಿವ್ಯ ಸ್ವಪ್ನ ಕಿ ಪೂರ್ತಿ’ ಶಿರೋನಾಮೆಯ ಲೇಖನದಲ್ಲಿ ಆಡ್ವಾಣಿ ಅವರು ರಾಮಮಂದಿರ ನಿರ್ಮಾಣಕ್ಕಾಗಿ 33 ವರ್ಷಗಳ ಹಿಂದೆ ನಡೆಸಿದ ‘ರಥಯಾತ್ರೆ’ಯನ್ನು ಸ್ಮರಿಸಿಕೊಂಡಿದ್ದರು. ಅಯೋಧ್ಯೆ ಚಳವಳಿಯು “ಅತ್ಯಂತ ನಿರ್ಣಾಯಕ ಮತ್ತು ಪರಿವರ್ತನೆಯ ಘಟನೆ”. ತಮ್ಮ ರಾಜಕೀಯ ಪ್ರಯಾಣವು ಭಾರತವನ್ನು ಮರು ಶೋಧಿಸಲು ಮತ್ತು ಈ ಪ್ರಕ್ರಿಯೆಯಲ್ಲಿ ತಮ್ಮನ್ನು ತಾವು ಪುನಃ ಅರ್ಥಮಾಡಿಕೊಳ್ಳಲು ಅವಕಾಶ ಮಾಡಿಕೊಟ್ಟಿತು ಎಂದು ಅಭಿಪ್ರಾಯಪಟ್ಟಿದ್ದರು.

ಇದನ್ನೂ ಓದಿ: Narendra Modi: ಸಂಸತ್ತಿನಲ್ಲಿ ಇಬ್ಬರು ‘ಪುಟಾಣಿ’ ಅತಿಥಿಗಳನ್ನು ಸ್ವಾಗತಿಸಿದ ಮೋದಿ; ಯಾರವರು? Video ನೋಡಿ

Continue Reading

ಕರ್ನಾಟಕ

Karnataka Weather: ಇಂದು ಕೊಡಗು, ಹಾಸನ, ಕರಾವಳಿ ಜಿಲ್ಲೆಗಳಲ್ಲಿ ಅಬ್ಬರಿಸಲಿದ್ದಾನೆ ವರುಣ; ಹಲವೆಡೆ ಶಾಲೆಗಳಿಗೆ ರಜೆ!

Karnataka Weather: ಭಾರಿ ಮಳೆ ಹಿನ್ನೆಲೆಯಲ್ಲಿ ಇಂದು (ಜೂನ್‌ 26) ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಹಾಗೂ ಕೊಡಗಿನ ವಿರಾಜಪೇಟೆ ತಾಲೂಕು, ಪೊನ್ನಂಪೇಟೆ ತಾಲೂಕಿನ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.

VISTARANEWS.COM


on

Karnataka Weather
ಬುಧವಾರ ಸುರಿದ ಮಳೆಗೆ ಮಂಗಳೂರಿನ ಪಡೀಲು ರೈಲ್ವೆ ಅಂಡರ್‌ ಪಾಸ್ ಜಲಾವೃತವಾಗಿರುವುದು.
Koo

ಬೆಂಗಳೂರು: ರಾಜ್ಯದಲ್ಲಿ ಇಂದು (ಜೂನ್‌ 27) ಕರಾವಳಿ ಜಿಲ್ಲೆಗಳು, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಧಾರವಾಡ, ಹಾವೇರಿ, ಬೆಳಗಾವಿ ಮತ್ತು ಹಾಸನ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರಿ ಮಳೆ (Rain News) ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (Karnataka Weather) ಮುನ್ಸೂಚನೆ ನೀಡಿದೆ. ಭಾರಿ ಮಳೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಹಾಗೂ ಕೊಡಗು ಜಿಲ್ಲೆಯ ಎರಡು ತಾಲೂಕುಗಳಲ್ಲಿ ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ ಘೋಷಿಸಲಾಗಿದೆ.

ಗುರುವಾರ ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರ ಜಿಲ್ಲೆಗಳ ಹಲವು ಸ್ಥಳಗಳಲ್ಲಿ ಮತ್ತು ಉತ್ತರ ಒಳನಾಡಿನ ಬಾಗಲಕೋಟೆ, ಬೀದರ್, ಗದಗ, ಕಲಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳ ಮೇಲೆ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆ ಮತ್ತು ನಿರಂತರ ಗಾಳಿಯ ವೇಗ (45-55 kmph) ಸಂಭವಿಸುವ ಸಾಧ್ಯತೆಯಿದೆ ಎಂದು ಮಾಹಿತಿ ನೀಡಿದೆ.

ದ.ಕನ್ನಡ ಜಿಲ್ಲೆಯ ಎಲ್ಲಾ ಶಾಲೆಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆಯಲ್ಲಿ ಇಂದು(ಜೂ.27) ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಪ್ರಾಥಮಿಕ-ಪ್ರೌಢಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಈ ಬಗ್ಗೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದು, ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ ನೀಡಲಾಗಿದೆ.

ಇನ್ನು ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ. ನದಿ ಮತ್ತು ಸಮುದ್ರ ತೀರದ ಜನರಿಗೆ ಎಚ್ಚರ ವಹಿಸಲು ಮಾಹಿತಿ ನೀಡಲಾಗಿದೆ. ದ.ಕ‌ ಜಿಲ್ಲೆಗೆ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ.

ಕೊಡಗಿನ 2 ತಾಲೂಕುಗಳಲ್ಲಿ ರಜೆ

ಕೊಡಗು: ಜಿಲ್ಲೆಯಲ್ಲಿ ಹಲವೆಡೆ ವರುಣಾರ್ಭಟ ಮುಂದುವರಿದ ಹಿನ್ನೆಲೆಯಲ್ಲಿ ವಿರಾಜಪೇಟೆ ತಾಲೂಕು ಮತ್ತು ಪೊನ್ನಂಪೇಟೆ ತಾಲೂಕಿನ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ಇಂದು (ಗುರುವಾರ) ರಜೆ ಘೋಷಿಸಲಾಗಿದೆ.

ಇನ್ನು ಜೂನ್ 28ರಂದು ಕೂಡ ಕರಾವಳಿ ಜಿಲ್ಲೆಗಳ ಪ್ರತ್ಯೇಕ ಕಡೆ, ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಲ್ಲಿ ಪ್ರತ್ಯೇಕ ಕಡೆ ಭಾರಿ ಮಳೆ ಸಾಧ್ಯತೆಯಿದೆ. ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರ ಜಿಲ್ಲೆಗಳು. ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆ ಮತ್ತು ನಿರಂತರ ಗಾಳಿಯ ವೇಗ (45-55 kmph) ಆಗುವ ಸಾಧ್ಯತೆಯಿದೆ. ಜೂನ್‌ 30ರವರೆಗೆ ಇದೇ ರೀತಿಯ ಸ್ಥಿತಿ ಕರಾವಳಿ ಜಿಲ್ಲೆಗಳಲ್ಲಿ ಇರಲಿದೆ.

ಮೀನುಗಾರರಿಗೆ ಎಚ್ಚರಿಕೆ

ಕರ್ನಾಟಕ ಕರಾವಳಿಯಲ್ಲಿ ಗುರುವಾರ ತೀವ್ರ ಬಿರುಗಾಳಿ (ಗಂಟೆಗೆ 35ರಿಂದ 55 ಮಿ.ಮೀ ವೇಗ) ಬೀಸುವ ಸಾಧ್ಯತೆ ಇದ್ದು, ದಕ್ಷಿಣ ಕನ್ನಡದ ಮುಲ್ಕಿಯಿಂದ ಮಂಗಳೂರಿನವರೆಗೆ ಬೆಳಗ್ಗೆ 8:30ರಿಂದ ರಾತ್ರಿ 11.30ರವರೆಗೆ 3.4 ರಿಂದ 3.5 ಮೀಟರ್ ವ್ಯಾಪ್ತಿಯಲ್ಲಿ ಎತ್ತರದ ಅಲೆಗಳು ಉಂಟಾಗುವ ಸಾಧ್ಯತೆ ಇದೆ.

ಉಡುಪಿ ಹೈ ವೇವ್ ಎಚ್ಚರಿಕೆ: ಬೈಂದೂರಿನಿಂದ ಕಾಪುವರೆಗಿನ ಕರಾವಳಿಯಲ್ಲಿ ಸಂಜೆ 5.30ರಿಂದ ರಾತ್ರಿ 11:30 ಗಂಟೆಗಳವರೆಗೆ 3.5 ರಿಂದ 3.7 ಮೀಟರ್ ವ್ಯಾಪ್ತಿಯಲ್ಲಿ ಎತ್ತರದ ಅಲೆಗಳು ಉಂಟಾಗಲಿವೆ.

ಉತ್ತರ ಕನ್ನಡದ ಮಾಜಾಳಿಯಿಂದ ಭಟ್ಕಳದವರೆಗೆ ಸಂಜೆ 5.30ರಿಂದ ರಾತ್ರಿ 11.30ರವರೆಗೆ 3.7ರಿಂದ 3.9 ಮೀಟರ್ ವ್ಯಾಪ್ತಿಯಲ್ಲಿ ಎತ್ತರದ ಅಲೆಗಳನ್ನು ಮುನ್ಸೂಚಿಸಲಾಗಿದೆ. ಹೀಗಾಗಿ ಸಣ್ಣ ಹಡಗುಗಳು ಸಂಚರಿಸದಂತೆ ಹಾಗೂ ಮನರಂಜನಾ ಚಟುವಟಿಕೆಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.

ಇದನ್ನೂ ಓದಿ | Rain News: ಕೊಡಗು, ಚಿಕ್ಕಮಗಳೂರು, ಕಾರವಾರದಲ್ಲಿ ವರುಣಾರ್ಭಟ; ಐದು ಜಿಲ್ಲೆಗಳಲ್ಲಿ ಮುಂದಿನ 3 ಗಂಟೆ ಭಾರಿ ಮಳೆ!

ಬೆಂಗಳೂರು ಮತ್ತು ಸುತಮುತಲಿನ ಪ್ರದೇಶಗಳ ಮುನ್ಸೂಚನೆ

ಮುಂದಿನ 48 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ಅಕಾಶವಿರಲಿದ್ದು, ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ನಿರಂತರ ಗಾಳಿಯ ವೇಗ (30-40 kmph) ತುಂಬಾ ಸಾಧ್ಯತೆ, ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 28 C ಮತ್ತು 21C ಇರಲಿದೆ.

Continue Reading

ಪ್ರಮುಖ ಸುದ್ದಿ

Dina Bhavishya: ಈ ರಾಶಿಯವರು ತಮಗೆ ಸಂಬಂಧಪಡದ ವಿಷಯದಲ್ಲಿ ಮೂಗು ತೂರಿಸುವುದು ಬೇಡ!

Dina Bhavishya: ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಜೇಷ್ಠ ಮಾಸ, ಕೃಷ್ಣ ಪಕ್ಷದ ಷಷ್ಠಿ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

Dina Bhavishya
Koo

ಚಂದ್ರನು ಕುಂಭ ರಾಶಿಯಿಂದ ಮೀನ ರಾಶಿಯನ್ನು ಬುಧವಾರ ಮುಂಜಾನೆ 2:07ಕ್ಕೆ ಪ್ರವೇಶಿಸಿದ್ದಾನೆ. ಇದರಿಂದಾಗಿ ಮೇಷ, ವೃಷಭ, ಸಿಂಹ, ಕನ್ಯಾ, ಧನಸ್ಸು, ಕುಂಭ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಇಂದಿನ ದಿನ ಭವಿಷ್ಯವನ್ನು (Dina Bhavishya) ನೋಡುವುದಾದರೆ, ಮಕರ ರಾಶಿಯವರು ತಮಗೆ ಸಂಬಂಧಪಡದೆ ಇರುವ ವಿಷಯದ ಕುರಿತು ಮೂಗು ತೂರಿಸಬಾರದು, ಇಲ್ಲದಿದ್ದರೆ ಟೀಕೆಗಳನ್ನು ಎದುರಿಸಬೇಕಾಬಹುದು. ಇನ್ನು ಮೀನ ರಾಶಿಯ ಉದ್ಯೋಗಿಗಳಿಗೆ ಅಭದ್ರತೆಯ ಭಾವನೆ ಕಾಡಲಿದ್ದು, ಸಹನೆಯನ್ನು ಪರೀಕ್ಷಿಸುವ ಸಾಧ್ಯತೆ ಇದೆ. ಇದೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (27-06-2024)

ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಜ್ಯೇಷ್ಠ ಮಾಸ, ಕೃಷ್ಣ ಪಕ್ಷ.
ತಿಥಿ: ಷಷ್ಠಿ 18:38 ವಾರ: ಗುರುವಾರ
ನಕ್ಷತ್ರ: ಶತಭಿಷಾ 11:35 ಯೋಗ: ಆಯುಷ್ಮಾನ್ 24:26
ಕರಣ: ಗರಜ 07:46 ಅಮೃತಕಾಲ: ಬೆಳಗ್ಗೆ 02:39 ರಿಂದ 04:09 ರವರೆಗೆ
ದಿನದ ವಿಶೇಷ: ಕೆಂಪೇಗೌಡ ಜಯಂತಿ, ಉಟ್ಲು ಉತ್ಸವ

ಸೂರ್ಯೋದಯ : 05:44   ಸೂರ್ಯಾಸ್ತ : 07:15

ರಾಹುಕಾಲ: ಮಧ್ಯಾಹ್ನ 1:30 ರಿಂದ 03:00
ಗುಳಿಕಕಾಲ: ಬೆಳಗ್ಗೆ 9:00 ರಿಂದ 10:30
ಯಮಗಂಡಕಾಲ: ಬೆಳಗ್ಗೆ 06:00 ರಿಂದ 07:30

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ನಿಮ್ಮ ಆಪ್ತರು ಸಮಸ್ಯೆಯನ್ನು ಉಂಟು ಮಾಡುವ ಸಾಧ್ಯತೆ ಇದೆ. ಆರೋಗ್ಯದಲ್ಲಿ ವ್ಯತ್ಯಾಸ, ಅಗತ್ಯ ವಸ್ತುಗಳ ಖರೀದಿ ಯಿಂದ ಖರ್ಚು. ಅನಗತ್ಯ ಒತ್ತಡ ನಿಮ್ಮ ಮನಸ್ಸಿಗೆ ಘಾಸಿ ಮಾಡುವ ಸಾಧ್ಯತೆ. ಸಂಗಾತಿಯ ಮಧುರ ಮಾತುಗಳು ಹಿತವೆನಿಸುಬಹುದು. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 7

Horoscope Today

ವೃಷಭ: ದೀರ್ಘಕಾಲದ ಪ್ರಯತ್ನ ನಿಮಗೆ ಯಶಸ್ಸು ತಂದು ಕೊಡಲಿದೆ. ಈ ಹಿಂದೆ ನೀವು ಮಾಡಿದ ಸಹಾಯ ಇಂದು ಫಲ ನೀಡಲಿದೆ. ಹಿರಿಯರಿಂದ ಪ್ರಶಂಸೆ ವ್ಯಕ್ತವಾಗಲಿದೆ. ಉದ್ಯೋಗದಲ್ಲಿ ಯಶಸ್ಸು. ವ್ಯಾಪಾರ ಅಭಿವೃದ್ಧಿ ಕಾಣಲಿದೆ. ಆರೋಗ್ಯ ಉತ್ತಮ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 6

Horoscope Today

ಮಿಥುನ: ಹತಾಶೆಯ ಭಾವನೆಯಿಂದ ಮನಸ್ಸಿನ ನೆಮ್ಮದಿಯನ್ನು ಹಾಳು ಮಾಡಿಕೊಳ್ಳುವುದು ಬೇಡ. ಅನಿರೀಕ್ಷಿತ ಲಾಭ ಸಿಗುವ ಸಾಧ್ಯತೆ. ಪ್ರೀತಿ ಪಾತ್ರರ ಜೊತೆ ವಾದಗಳಿಗೆ ಕಾರಣವಾಗಬಹುದಾದ ವಿವಾದಾತ್ಮಕ ವಿಷಯಗಳನ್ನು ತಪ್ಪಿಸಿ, ಎಚ್ಚರಿಕೆಯಿಂದ ಮಾತನಾಡಿ. ಆರೋಗ್ಯದ ಕುರಿತು ಕಾಳಜಿ ಇರಲಿ. ಆರ್ಥಿಕವಾಗಿ ಸದೃಢ. ಉದ್ಯೋಗಿಗಳಿಗೆ ಶುಭ ಫಲ.ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 4

Horoscope Today

ಕಟಕ: ಮಾನಸಿಕವಾಗಿ ದೈಹಿಕವಾಗಿ ಆರೋಗ್ಯ ಪರಿಪೂರ್ಣ. ಹರ್ಷ ತುಂಬಿದ ಮನಸ್ಸು ನಿಮ್ಮ
ಆತ್ಮವಿಶ್ವಾಸವನ್ನು ಹೆಚ್ಚಿಸಲಿದೆ. ಹಳೆಯ ಬಾಕಿ ಮರುಪಾವತಿ ಮಾಡುವ ಸಾಧ್ಯತೆ. ಆರ್ಥಿಕ ಪ್ರಗತಿ ಸಾಧಾರಣ. ಉದ್ಯಮಿಗಳಿಗೆ ಒಳ್ಳೆಯ ದಿನ. ವ್ಯಾಪಾರದ ಉದ್ದೇಶಕ್ಕಾಗಿ ಕೈಗೊಂಡ ಪ್ರವಾಸ ಸಕಾರಾತ್ಮಕ ಫಲಿತಾಂಶವನ್ನು ನೀಡುತ್ತದೆ. ಉದ್ಯೋಗಿಗಳಿಗೆ ಯಶಸ್ಸು ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 7

Horoscope Today

ಸಿಂಹ: ಬಹಳ ದಿನಗಳಿಂದ ಕಾಡುತ್ತಿರುವ ಸಮಸ್ಯೆಗೆ ಪರಿಹಾರ ಸಿಗಲಿದೆ. ಭವಿಷ್ಯದ ಹೂಡಿಕೆ ವ್ಯವಹಾರದ ಕುರಿತಾಗಿ ಆಲೋಚನೆ. ನಿಮ್ಮ ಹಿಂದೆ ನಿಮಗೆ ಆಗದವರು ಪಿತೂರಿ ನಡೆಸುವ ಸಾಧ್ಯತೆ ಅಂತವರಿಂದ ಎಚ್ಚರಿಕೆ ಇರಲಿ. ದಿಢೀರ್ ಪ್ರಯಾಣ ಬೆಳೆಸುವ ಸಾಧ್ಯತೆ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 6

Horoscope Today

ಕನ್ಯಾ: ಸೃಜನಾತ್ಮಕ ಕ್ಷೇತ್ರಗಳಲ್ಲಿರುವವರು ಬಹಳ ದಿನಗಳಿಂದ ಕಾಯುತ್ತಿದ್ದ ಪ್ರಸಿದ್ಧಿ ಮತ್ತು ಗುರುತಿಸುವಿಕೆಯನ್ನು ಪಡೆಯುವ ಯಶಸ್ವಿ ದಿನ. ಭೂಮಿ ಸಂಬಂಧಿ ವ್ಯಾಪಾರ ವ್ಯವಹಾರಗಳಲ್ಲಿ ಯಶಸ್ಸು. ಆರೋಗ್ಯ ಪರಿಪೂರ್ಣ. ಉದ್ಯೋಗಿಗಳಿಗೆ ದಿನಕ್ಕಿಂತ ಹೆಚ್ಚಿನ ಸಂತೋಷ. ಆರ್ಥಿಕ ಚಟುವಟಿಕೆಗೆ ಗರಿಗೆದರಲಿದೆ. ದಿನದ ಕೊನೆಯಲ್ಲಿ ಕೌಟುಂಬಿಕ ಕಲಹಗಳು ನಡೆಯುವ ಸಾಧ್ಯತೆ, ಮಾತಿನಲ್ಲಿ ಹಿಡಿತವಿರಲಿ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 4

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ಒತ್ತಡ ತುಂಬಿದ ವಾತಾವರಣ. ಸ್ನೇಹಿತರೊಂದಿಗೆ ಕಾಲ ಕಳೆಯುವ ಸಾಧ್ಯತೆ. ವ್ಯಾಪಾರ ವ್ಯವಹಾರದಲ್ಲಿ ತೊಡಗಿರುವವರಿಗೆ ದಿನದ ಮಟ್ಟಿಗೆ ಹೆಚ್ಚಿನ ಲಾಭ ಸಿಗಲಿದೆ. ಕುಟುಂಬ ಸಹಿತರಾಗಿ ಪ್ರಯಾಣ ಬೆಳೆಸುವ ಸಾಧ್ಯತೆ. ಆರೋಗ್ಯದ ಕುರಿತು ಕಾಳಜಿ ಇರಲಿ. ಉದ್ಯೋಗಿಗಳಿಗೆ ಶುಭ ಫಲ. ಆರ್ಥಿಕವಾಗಿ ಪ್ರಗತಿ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 7

Horoscope Today

ವೃಶ್ಚಿಕ : ವ್ಯಾಪಾರಿಗಳಿಗೆ ಹೆಚ್ಚಿನ ಲಾಭವಾಗಲಿದೆ. ನಿಮ್ಮ ಸಂತೋಷದ ಸಂಗತಿಗಳನ್ನು ಇತರರೊಂದಿಗೆ ಹಂಚಿಕೊಳ್ಳುವ ಸಾಧ್ಯತೆ. ಆರೋಗ್ಯ ಪರಿಪೂರ್ಣ. ಅಗತ್ಯ ವಸ್ತುಗಳ ಖರೀದಿಯಿಂದ ಆರ್ಥಿಕವಾಗಿ ಸಾಧಾರಣ. ಅಮೂಲ್ಯ ವಸ್ತುಗಳ ಬಗೆಗೆ ಜಾಗೃತಿ ಇರಲಿ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 8

Horoscope Today

ಧನಸ್ಸು: ಕೆಲವು ಪ್ರಮುಖ ನಿರ್ಧಾರಗಳು ನಿಮ್ಮ ಮೇಲೆ ಪರಿಣಾಮ ಬೀರಬಹುದು. ಅದರ ಹೊರತಾಗಿ ಇಂದು ಮಾಡಿದ ಹೂಡಿಕೆ ನಿಮ್ಮ ಅಭ್ಯುದಯ ಮತ್ತು ಆರ್ಥಿಕ ಭದ್ರತೆಯನ್ನು ಹೆಚ್ಚಿಸುತ್ತದೆ. ಕುಟುಂಬ ಸದಸ್ಯರ ಮಾತುಗಳು ನಿಮ್ಮನ್ನು ಘಾಸಿಗೊಳಿಸಬಹುದು.
ಆರೋಗ್ಯದ ಕುರಿತು ಕಾಳಜಿ ಇರಲಿ. ಉದ್ಯೋಗಿಗಳಿಗೆ ಮಿಶ್ರ ಫಲ. ಆರ್ಥಿಕ ಪ್ರಗತಿ ಸಾಧಾರಣ.
ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 5

Horoscope Today

ಮಕರ: ಆರೋಗ್ಯದ ಕುರಿತು ವಿಶೇಷ ಕಾಳಜಿ ವಹಿಸಿ. ಅದರಲ್ಲಿಯೂ
ಗರ್ಭಿಣಿಯರು ಹೆಚ್ಚಿನ ಮುತುವರ್ಜಿ ವಹಿಸಬೇಕು. ಅನಾವಶ್ಯಕ ಖರ್ಚುಗಳಿಂದ ಆರ್ಥಿಕವಾಗಿ ಬಳಲುವ ಸಾಧ್ಯತೆ. ಸಂಬಂಧ ಪಡದೆ ಇರುವ ವಿಷಯದ ಕುರಿತು ಮೂಗು ತೂರಿಸುವುದು ಬೇಡ. ಟೀಕೆಗಳನ್ನು ಎದುರಿಸಬೇಕಾದೀತು, ಎಚ್ಚರಿಕೆ ಇರಲಿ. ಉದ್ಯೋಗಿಗಳಿಗೆ ಒತ್ತಡ.ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 5

Horoscope Today

ಕುಂಭ: ವಿವಾದಾತ್ಮಕ ವಿಷಯಗಳಿಂದ ದೂರ ಇರಿ. ಮಾತಿನಲ್ಲಿ ಹಿಡಿತವಿರಲಿ. ತಮ್ಮ ಬಳಿ ಯಾರಾದರೂ ಹಣದ ಸಹಾಯ ಬೇಡುವ ಸಾಧ್ಯತೆ, ಆಲೋಚಿಸಿ ಹೆಜ್ಜೆ ಇಡಿ. ಆರೋಗ್ಯ ಪರಿಪೂರ್ಣ. ಉದ್ಯೋಗಿಗಳಿಗೆ ಮಧ್ಯಮ ಫಲ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 3

Horoscope Today

ಮೀನ: ಮಾನಸಿಕ ಒತ್ತಡದಿಂದ ಹೊರಬರಲು ಆಧ್ಯಾತ್ಮಿಕ ಸಾಧನೆ ಮಾರ್ಗಸೂಚಿಯಾಗುವುದು. ಆರೋಗ್ಯ ಪರಿಪೂರ್ಣ. ಕೆಲಸ ಕಾರ್ಯಕಾರ್ಯಗಳಲ್ಲಿ ಯಶಸ್ಸು ಸಿಗಲಿದೆ. ಆರ್ಥಿಕವಾಗಿ ಸದೃಢ. ಉದ್ಯೋಗಿಗಳಿಗೆ ಅಭದ್ರತೆಯ ಭಾವನೆ ಕಾಡಲಿದೆ. ನಿಮ್ಮ ಸಹನೆಯನ್ನು ಪರೀಕ್ಷಿಸುವ ಸಾಧ್ಯತೆ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 1

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

Continue Reading

ಪ್ರಮುಖ ಸುದ್ದಿ

Ollie Robinson: 6, 6nb, 4, 6, 4, 6nb, 4, 6nb, 1; ಒಂದೇ ಓವರ್‌ನಲ್ಲಿ 43 ರನ್‌ ಕೊಟ್ಟ ಇಂಗ್ಲೆಂಡ್‌ ಬೌಲರ್; Video ಇದೆ

Ollie Robinson: ಇಂಗ್ಲೆಂಡ್‌ನ ಕೌಂಟಿ ಚಾಂಪಿಯನ್‌ಶಿಪ್‌ ಪಂದ್ಯದಲ್ಲಿ ಒಲೀ ರಾಬಿನ್‌ಸನ್‌ ಅವರು ಒಂದೇ ಓವರ್‌ಗೆ 43 ರನ್‌ ಕೊಟ್ಟಿದ್ದಾರೆ. ಸಸೆಕ್ಸ್‌ ಪರವಾಗಿ ಬೌಲಿಂಗ್‌ ಮಾಡುತ್ತಿರುವಾಗ ಒಂದೇ ಓವರ್‌ನಲ್ಲಿ ಐದು ಸಿಕ್ಸರ್‌ಗಳು (3 ನೋಬಾಲ್‌ಗಳಿಗೆ ಸಿಕ್ಸರ್)‌, ಮೂರು ಬೌಂಡರಿ ಹಾಗೂ ಒಂದು ಸಿಂಗಲ್‌ ರನ್‌ ಬಿಟ್ಟುಕೊಂಡಿದ್ದಾರೆ. ಇದು ಪ್ರಥಮ ದರ್ಜೆ ಕ್ರಿಕೆಟ್‌ ಪಂದ್ಯಗಳಲ್ಲಿಯೇ ಜಗತ್ತಿನಲ್ಲಿ ಎರಡನೇ ದುಬಾರಿ ಓವರ್‌ ಎನಿಸಿದೆ.

VISTARANEWS.COM


on

ollie robinson
Koo

ಲಂಡನ್‌: ಎಂತಹದ್ದೇ ಕೆಟ್ಟ ಬೌಲರ್‌ ಆದರೂ, ಎಂತಹ ಕೆಟ್ಟ ಎಸೆತಗಳನ್ನೇ ಎಸೆದರೂ, ಒಬ್ಬ ಬೌಲರ್‌ ಒಂದು ಓವರ್‌ನಲ್ಲಿ ಎಷ್ಟು ರನ್‌ ಬಿಟ್ಟುಕೊಡಲು ಸಾಧ್ಯ? ಆರಕ್ಕೆ ಆರು ಎಸೆತಗಳಿಗೆ ಸಿಕ್ಸರ್‌ ಬಾರಿಸಿದರೂ ಗರಿಷ್ಠ 36 ರನ್‌ ಬಿಟ್ಟುಕೊಡಬಹುದು. ಭಾರತದ ಯುವರಾಜ್‌ ಸಿಂಗ್‌ (Yuvraj Singh) ಸೇರಿ ಜಗತ್ತಿನಲ್ಲಿ ಕೆಲವೇ ಕೆಲವು ಬ್ಯಾಟ್ಸ್‌ಮನ್‌ಗಳು ಮಾತ್ರ ಒಂದೇ ಓವರ್‌ನ ಆರಕ್ಕೆ ಆರೂ ಎಸೆತಗಳನ್ನು ಸಿಕ್ಸರ್‌ಗೆ ಅಟ್ಟಿದ್ದಾರೆ. ಆದರೆ, ಇಂಗ್ಲೆಂಡ್‌ನ ವೇಗದ ಬೌಲರ್‌ ಒಲೀ ರಾಬಿನ್‌ಸನ್‌ (Ollie Robinson) ಅವರು ಒಂದೇ ಓವರ್‌ನಲ್ಲಿ 43 ರನ್‌ಗಳನ್ನು ಬಿಟ್ಟುಕೊಡುವ ಮೂಲಕ ಅನಗತ್ಯ ದಾಖಲೆ ಬರೆದಿದ್ದಾರೆ.

ಹೌದು, ಇಂಗ್ಲೆಂಡ್‌ನ ಕೌಂಟಿ ಚಾಂಪಿಯನ್‌ಶಿಪ್‌ ಪಂದ್ಯದಲ್ಲಿ ಒಲೀ ರಾಬಿನ್‌ಸನ್‌ ಅವರು ಒಂದೇ ಓವರ್‌ಗೆ 43 ರನ್‌ ಕೊಟ್ಟಿದ್ದಾರೆ. ಸಸೆಕ್ಸ್‌ ಪರವಾಗಿ ಬೌಲಿಂಗ್‌ ಮಾಡುತ್ತಿರುವಾಗ ಒಂದೇ ಓವರ್‌ನಲ್ಲಿ ಐದು ಸಿಕ್ಸರ್‌ಗಳು (3 ನೋಬಾಲ್‌ಗಳಿಗೆ ಸಿಕ್ಸರ್)‌, ಮೂರು ಬೌಂಡರಿ ಹಾಗೂ ಒಂದು ಸಿಂಗಲ್‌ ರನ್‌ ಬಿಟ್ಟುಕೊಂಡಿದ್ದಾರೆ. ಲೀಸೆಸ್ಟರ್‌ಶೈರ್‌ ತಂಡದ ಲೂಯಿಸ್‌ ಕಿಂಬರ್‌ ಅವರು ಐದು ಸಿಕ್ಸರ್‌ ಹಾಗೂ ಮೂರು ಬೌಂಡರಿ ಬಾರಿಸುವ ಮೂಲಕ ವಿಶಿಷ್ಟ ದಾಖಲೆ ಬರೆದಿದ್ದಾರೆ.

ಒಲೀ ರಾಬಿನ್‌ಸನ್‌ ಎಸೆದ ಮೊದಲ ಎಸೆತವನ್ನು ಲೂಯಿಸ್‌ ಕಿಂಬರ್‌ ಸಿಕ್ಸರ್‌ಗೆ ಅಟ್ಟಿದರು. ಎರಡನೇ ಎಸೆತವು ನೋ ಬಾಲ್‌ ಆದರೆ, ಅದಕ್ಕೂ ಸಿಕ್ಸರ್‌ ಬಾರಿಸಿದರು. ನಂತರ ಬೌಂಡರಿ, ಸಿಕ್ಸರ್‌, ಬೌಂಡರಿ, ಸಿಕ್ಸರ್‌ (ನೋ ಬಾಲ್)‌, ಬೌಂಡರಿ, ಸಿಕ್ಸರ್‌ (ನೋ ಬಾಲ್)‌ ಹಾಗೂ ಕೊನೆಯ ಎಸೆತದಲ್ಲಿ ಒಂದು ರನ್‌ ಬಾರಿಸಿದರು. 30 ವರ್ಷದ ರಾಬಿನ್‌ಸನ್‌ ಅವರು ಇಂಗ್ಲೆಂಡ್‌ ಪರವಾಗಿ 20 ಟೆಸ್ಟ್‌ ಪಂದ್ಯಗಳನ್ನು ಆಡಿದ್ದು, ಸಾಕಷ್ಟು ಅನುಭವ ಇದ್ದರೂ ಒಂದೇ ಒಂದು ಡಾಟ್‌ ಬಾಲ್‌ ಎಸೆಯಲು ಆಗಲಿಲ್ಲ.

2ನೇ ಅತಿ ದುಬಾರಿ ಓವರ್‌‌

ಒಲೀ ರಾಬಿನ್‌ಸನ್‌ ಅವರು ಒಂದೇ ಓವರ್‌ನಲ್ಲಿ 43 ರನ್‌ಗಳನ್ನು ಬಿಟ್ಟುಕೊಡುವ ಮೂಲಕ ಪ್ರಥಮ ದರ್ಜೆ ಇತಿಹಾಸದಲ್ಲಿಯೇ ಎರಡನೇ ಅತಿ ದುಬಾರಿ ಓವರ್‌ ಎಸೆದ ಬೌಲರ್‌ ಎನಿಸಿದರು. 1990ರಲ್ಲಿ ನ್ಯೂಜಿಲ್ಯಾಂಡ್‌ನ ಬರ್ಟ್‌ ವ್ಯಾನ್ಸ್‌ ಅವರು ಶೆಲ್‌ ಟ್ರೋಫಿ ಪಂದ್ಯದಲ್ಲಿ 77 ರನ್‌ಗಳನ್ನು ಬಿಟ್ಟುಕೊಟ್ಟಿದ್ದು ಇತಿಹಾಸವಾಗಿದೆ. 1998ರಲ್ಲಿ ಇಂಗ್ಲೆಂಡ್‌ನ ಅಲೆಕ್ಸ್‌ ಟುಡೋರ್‌ ಅವರು ಪ್ರಥಮ ದರ್ಜೆ ಕ್ರಿಕೆಟ್ ಪಂದ್ಯದಲ್ಲಿ ‌38 ರನ್‌ ಬಿಟ್ಟುಕೊಟ್ಟಿದ್ದು ಇದುವರೆಗಿನ ಎರಡನೇ ದಾಖಲೆ ಆಗಿತ್ತು. ಈಗ ಆ ಅನಗತ್ಯ ದಾಖಲೆಯು ಒಲೀ ರಾಬಿನ್‌ಸನ್‌ ಅವರದ್ದಾಗಿದೆ.

ಇದನ್ನೂ ಓದಿ: WI vs AFG: ಒಂದೇ ಓವರ್​ನಲ್ಲಿ 36 ರನ್​ ಗಳಿಸಿ ಯುವರಾಜ್​ ಸಿಂಗ್​ ದಾಖಲೆ ಸರಿಗಟ್ಟಿದ ನಿಕೋಲಸ್​ ಪೂರನ್​

Continue Reading
Advertisement
murder case anekal
ಕ್ರೈಂ11 mins ago

Murder Case: ಬಾರ್‌ನಲ್ಲಿ ಗುರಾಯಿಸಿದ್ದಕ್ಕೆ ವ್ಯಕ್ತಿಯ ಬರ್ಬರ ಹತ್ಯೆ

lk advani
ಪ್ರಮುಖ ಸುದ್ದಿ33 mins ago

LK Advani: ಮಾಜಿ ಉಪ ಪ್ರಧಾನಿ ಎಲ್‌ ಕೆ ಆಡ್ವಾಣಿ ಅಸ್ವಸ್ಥ, ಏಮ್ಸ್‌ಗೆ ದಾಖಲು

Smoking Effects
ಆರೋಗ್ಯ43 mins ago

Smoking Effects: ಮಹಿಳೆಯರೇ, ಧೂಮಪಾನದಿಂದ ನಿಮ್ಮ ಆರೋಗ್ಯದ ಮೇಲಾಗುವ ಪರಿಣಾಮದ ಅರಿವಿದೆಯೇ?

Vastu Tips
ಧಾರ್ಮಿಕ1 hour ago

Vastu Tips: ಬಾತ್ ರೂಮ್‌ನಲ್ಲಿ ಈ ವಸ್ತುಗಳಿದ್ದರೆ ಕುಟುಂಬಕ್ಕೆ ಭಾರಿ ಸಂಕಷ್ಟ!

Karnataka Weather
ಕರ್ನಾಟಕ1 hour ago

Karnataka Weather: ಇಂದು ಕೊಡಗು, ಹಾಸನ, ಕರಾವಳಿ ಜಿಲ್ಲೆಗಳಲ್ಲಿ ಅಬ್ಬರಿಸಲಿದ್ದಾನೆ ವರುಣ; ಹಲವೆಡೆ ಶಾಲೆಗಳಿಗೆ ರಜೆ!

Dina Bhavishya
ಪ್ರಮುಖ ಸುದ್ದಿ3 hours ago

Dina Bhavishya: ಈ ರಾಶಿಯವರು ತಮಗೆ ಸಂಬಂಧಪಡದ ವಿಷಯದಲ್ಲಿ ಮೂಗು ತೂರಿಸುವುದು ಬೇಡ!

ollie robinson
ಪ್ರಮುಖ ಸುದ್ದಿ8 hours ago

Ollie Robinson: 6, 6nb, 4, 6, 4, 6nb, 4, 6nb, 1; ಒಂದೇ ಓವರ್‌ನಲ್ಲಿ 43 ರನ್‌ ಕೊಟ್ಟ ಇಂಗ್ಲೆಂಡ್‌ ಬೌಲರ್; Video ಇದೆ

Serial Bride
ದೇಶ8 hours ago

Serial Bride: ಹಲವು ಜನರನ್ನು ಮದುವೆಯಾಗಿ ವಂಚಿಸಿದ್ದ ಮಹಿಳೆಗೆ ಎಚ್‌ಐವಿ; ಮಾಜಿ ವರಗಳಿಗಾಗಿ ಶೋಧ!

Demand to provide job reservation for Kannadigas; Massive Dharani sathyagraha on July 1 from Karave
ಕರ್ನಾಟಕ9 hours ago

Bengaluru News: ಕರ್ನಾಟಕದ ನೆಲದಲ್ಲಿ ಕನ್ನಡಿಗರಿಗೇ ಉದ್ಯೋಗ; ಕರವೇಯಿಂದ ಜು.1ರಂದು ಬೃಹತ್ ಧರಣಿ ಸತ್ಯಾಗ್ರಹ

Attica Babu
ಕರ್ನಾಟಕ10 hours ago

Attica Babu: ಕದ್ದ ಚಿನ್ನ ಖರೀದಿ; ಅಟ್ಟಿಕಾ ಗೋಲ್ಡ್‌ ಕಂಪನಿ ಮಾಲೀಕ ಅಟ್ಟಿಕಾ ಬಾಬು ಬಂಧನ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ3 days ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

karnataka weather Forecast
ಮಳೆ6 days ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ6 days ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

Karnataka Weather Forecast
ಮಳೆ7 days ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

Actor Darshan
ಮೈಸೂರು1 week ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು1 week ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ2 weeks ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ2 weeks ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ2 weeks ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ2 weeks ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

ಟ್ರೆಂಡಿಂಗ್‌