Site icon Vistara News

Mysore Election Result 2024 : ಮೈಸೂರಿನ ಯುವರಾಜ ಯದುವೀರ ಒಡೆಯರ್​​ಗೆ ಗೆಲುವು

Mysore Election Result 2024

ಬೆಂಗಳೂರು: ಕರುನಾಡಿನ ಸಾಂಸ್ಕೃತಿಕ ತವರೂರಾಗಿರುವ ಮೈಸೂರು ಲೋಕಸಭಾ ಕ್ಷೇತ್ರ ಚುನಾವಣೆಯಲ್ಲಿ ಬಿಜೆಪಿಯ ಯದುವೀರ್​ ಒಡೆಯರ್ (Yaduveer Wadiyar)​ ಗೆಲುವು (7,59,503 ಮತಗಳು) ಸಾಧಿಸಿದ್ದಾರೆ (Mysore Election Result 2024). ಅವರು ತಮ್ಮ ಸಮೀಪದ ಪ್ರತಿಸ್ಪರ್ಧಿ ಕಾಂಗ್ರೆಸ್ ರಾಜ್ಯ ವಕ್ತಾರ ಲಕ್ಷ್ಮಣ್ (6,52,241 ಮತಗಳು) ವಿರುದ್ಧ 1,39, 282 ಮತಗಳ ಅಂತರದ ವಿಜಯ ಸಾಧಿಸಿದ್ದಾರೆ.

2019ರ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿ ಪ್ರತಾಪ್ ಸಿಂಹ ಅವರು ಕಾಂಗ್ರೆಸ್​​ನ ಸಿ.ಎಚ್.ವಿಜಯಶಂಕರ್ ಅವರನ್ನು 1,38,647 ಮತಗಳ ಭಾರೀ ಅಂತರದಿಂದ ಸೋಲಿಸಿದ್ದರು. 2019ರ ಚುನಾವಣೆಯಲ್ಲಿ ಬಿಜೆಪಿ ಶೇ.52.27ರಷ್ಟು ಮತಗಳನ್ನು ಪಡೆದಿತ್ತು.

ಇದನ್ನೂ ಓದಿ: Mandya Election Result 2024 : ಮಂಡ್ಯದಲ್ಲಿ ಕುಮಾರ ಸ್ವಾಮಿಗೆ ಭರ್ಜರಿ ಗೆಲುವು

2014ರ ಸಾರ್ವತ್ರಿಕ ಚುನಾವಣೆಯಲ್ಲಿ ಪ್ರತಾಪ್ ಸಿಂಹ ಅವರು ಕಾಂಗ್ರೆಸ್​ನ ಅಡಗೂರು ಎಚ್.ವಿಶ್ವನಾಥ್ ಅವರನ್ನು 31,608 ಮತಗಳ ಭಾರೀ ಅಂತರದಿಂದ ಸೋಲಿಸಿದ್ದರು. ಈ ಕ್ಷೇತ್ರದಲ್ಲಿ ಬಿಜೆಪಿ ಶೇ.43.46ರಷ್ಟು ಮತಗಳನ್ನು ಗಳಿಸಿದೆ

2009ರ ಸಾರ್ವತ್ರಿಕ ಚುನಾವಣೆಯಲ್ಲಿ ಅಡಗೂರು ಎಚ್.ವಿಶ್ವನಾಥ್ ಅವರು ಬಿಜೆಪಿಯ ಸಿ.ಎಚ್.ವಿಜಯಶಂಕರ್ ಅವರನ್ನು 7,691 ಮತಗಳ ಭಾರೀ ಅಂತರದಿಂದ ಸೋಲಿಸಿದ್ದರು. ಈ ಕ್ಷೇತ್ರದಲ್ಲಿ ಕಾಂಗ್ರೆಸ್ 36.42% ಮತಗಳನ್ನು ಪಡೆದಿತ್ತು.

ಕ್ಷೇತ್ರದ ವಿಶೇಷತೆಯೇನು?

ಕಾಂಗ್ರೆಸ್ ಪ್ರಾಬಲ್ಯದ ಮೈಸೂರು ಲೋಕ ಸಭಾ ಕ್ಷೇತ್ರವು (Mysore lok sabha Constituency) ಕಳೆದ ಚುನಾವಣೆಗಳಲ್ಲಿ ಸಂಪೂರ್ಣ ಬದಲಾವಣೆಗೆ ಸಾಕ್ಷಿಯಾಗಿದೆ. ಪ್ರತಾಪ್ ಸಿಂಹ (Pratap Simha) ಸತತ ಎರಡು ಬಾರಿ ಗೆದ್ದಿರುವ ಕ್ಷೇತ್ರದಲ್ಲಿ ಬಿಜೆಪಿ ತನ್ನ ಬಲವನ್ನು ಸಾಬೀತುಪಡಿಸಿದ್ದರು. ಅದಕ್ಕಿಂತ ಹಿಂದೆ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಸೇರಿದಂತೆ ಹಿಂದಿನ ಮೈಸೂರು ರಾಜಮನೆತನದ ಸದಸ್ಯರು ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿ ಗೆದ್ದಿದ್ದರು.

1977 ರಲ್ಲಿ ರಚನೆಯಾದ ಮೈಸೂರು ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪ್ರಭಾವ ಹೊಂದಿತ್ತು. ಎಚ್.ಡಿ. ತುಳಸೀದಾಸ್, ಎಂ. ರಾಜಶೇಖರಮೂರ್ತಿ ಮತ್ತು ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಅವರಂತಹ ಗಮನಾರ್ಹ ನಾಯಕರು ಇಲ್ಲಿ ಗೆದ್ದಿದ್ದರು. ಇತ್ತೀಚಿನ ಎರಡು ಚುನಾವಣೆಗಳಲ್ಲಿ ಬಿಜೆಪಿ ಪ್ರತಾಪ್ ಸಿಂಹ ಈ ಕ್ಷೇತ್ರದಲ್ಲಿ ಬಿಜೆಪಿ ಸ್ಥಾನ ಭದ್ರಪಡಿಸಿಕೊಂಡಿದ್ದರು. ಈ ಕ್ಷೇತ್ರವು ಮೈಸೂರು ಜಿಲ್ಲೆಯ ಭಾಗ ಮತ್ತು ಇಡೀ ಕೊಡಗು ಜಿಲ್ಲೆಯನ್ನು ಒಳಗೊಂಡಿದೆ. ಭಾರತದ ಚುನಾವಣಾ ಆಯೋಗದ ಪ್ರಕಾರ, 2019 ರಲ್ಲಿ ಒಟ್ಟು 18,96,333 ಮತದಾರರಿದ್ದರು.

ಕ್ಷೇತ್ರದ ವ್ಯಾಪ್ತಿಯೇನು?

ಮೈಸೂರು ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಮಡಿಕೇರಿ, ವಿರಾಜಪೇಟೆ, ಪಿರಿಯಾಪಟ್ಟಣ, ಹುಣಸೂರು, ಚಾಮುಂಡೇಶ್ವರಿ, ಕೃಷ್ಣರಾಜ, ಚಾಮರಾಜ ಮತ್ತು ನರಸಿಂಹರಾಜ ವಿಧಾನಸಭಾ ಕ್ಷೇತ್ರಗಳಿವೆ. ಕಾಂಗ್ರೆಸ್ 5, ಜೆಡಿಎಸ್ 2, ಬಿಜೆಪಿ 1 ಸ್ಥಾನ ಹೊಂದಿವೆ. ಸರಾಸರಿ ಸಾಕ್ಷರತಾ ಪ್ರಮಾಣವು ಸುಮಾರು 67,65% ರಷ್ಟಿದೆ. ಸುಮಾರು 977500 ನಗರ ಮತದಾರರು 51.6% ರಷ್ಟಿದ್ದಾರೆ. ಎಸ್ಸಿ ಮತ್ತು ಎಸ್ಟಿ ಮತದಾರರು ಸುಮಾರು 13.9% ರಷ್ಟಿದ್ದಾರೆ.

ಬೌಗೋಳಿಕ ಗಡಿಗಳು

ಮೈಸೂರು ಲೋಕಸಭೆ ಕ್ಷೇತ್ರ ಭಾರತದ ದಕ್ಷಿಣ ಪ್ರದೇಶ ಮತ್ತು ಕರ್ನಾಟಕದ ದಕ್ಷಿಣ ಕರ್ನಾಟಕ ಪ್ರದೇಶದಲ್ಲಿದೆ. ಈ ಸ್ಥಾನವು ಕರ್ನಾಟಕದ ಕೊಡಗು, ಮೈಸೂರು ಜಿಲ್ಲೆಗಳನ್ನು ಒಳಗೊಂಡಿದೆ.

Exit mobile version