ಬೆಂಗಳೂರು: ನಮ್ಮ ಮೆಟ್ರೋದಲ್ಲಿ (Namma Metro) ಪದೇಪದೆ ಅವಘಡಗಳು ಸಂಭವಿಸುತ್ತಿದ್ದರೂ ಅಧಿಕಾರಿಗಳು, ಸಿಬ್ಬಂದಿ ಎಚ್ಚರಗೊಂಡಂತೆ ಕಾಣುತ್ತಿಲ್ಲ. ಮೊನ್ನೆ ಮೆಟ್ರೋ ಟ್ರ್ಯಾಕ್‌ಗೆ 4 ವರ್ಷದ ಮಗು ಬಿದ್ದ ಬೆನ್ನಲ್ಲೇ ಇದೀಗ ವ್ಯಕ್ತಿಯೊಬ್ಬ ಮೆಟ್ರೋ ಹಳಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ದೊಡ್ಡಕಲ್ಲಸಂದ್ರ ಬಳಿ ಶನಿವಾರ ಸಂಜೆ ನಡೆದಿದೆ.
ಸಂಜೆ 5:45 ಸುಮಾರಿಗೆ ದೊಡ್ಡಕಲ್ಲಸಂದ್ರ ಬಳಿ ಘಟನೆ ನಡೆದಿದೆ. ಇದರಿಂದ ಯಲಚೇನಹಳ್ಳಿ- ಸಿಲ್ಕ್ ಇನ್‌ಸ್ಟಿಟ್ಯೂಟ್ ನಡುವೆ ರೈಲು ಸಂಚಾರ ಸ್ಥಗಿತಗೊಂಡಿದೆ. ಸ್ಥಳಕ್ಕೆ ಕೊಣನಕುಂಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಮೃತಪಟ್ಟ ವ್ಯಕ್ತಿ ಯಾರು?, ಯಾವ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂಬ ಮಾಹಿತಿ ಕಲೆ ಹಾಕುತ್ತಿದ್ದಾರೆ.
ಆ. 1ರಂದು ರಾತ್ರಿ ಬೈಯಪ್ಪನಹಳ್ಳಿ ಮೆಟ್ರೋ ನಿಲ್ದಾಣದಲ್ಲಿ ಪ್ಲಾಟ್‌ಫಾರ್ಮ್ 2ರಲ್ಲಿ ಆಟವಾಡುತ್ತಿದ್ದ 4 ವರ್ಷದ ಬಾಲಕ, ಆಕಸ್ಮಿಕವಾಗಿ ಹಳಿ ಮೇಲೆ ಬಿದ್ದಿದ್ದ ಘಟನೆ ನಡೆದಿತ್ತು. ತಕ್ಷಣ ಭದ್ರತಾ ಸಿಬ್ಬಂದಿ ತುರ್ತು ರೈಲು ನಿಲುಗಡೆ ವ್ಯವಸ್ಥೆಯನ್ನು ಬಳಸುವ ಮೂಲಕ ರೈಲು ಸಂಚಾರವನ್ನು ನಿಲ್ಲಿಸಿದ್ದರು. ಬಳಿಕ ಬಾಲಕನನ್ನು ರಕ್ಷಣೆ ಮಾಡಲಾಗಿತ್ತು.
ಉಕ್ಕಿ ಹರಿಯುವ ಕೃಷ್ಣಾ ನದಿಗೆ ಹಾರಿ ವ್ಯಕ್ತಿ ಆತ್ಮಹತ್ಯೆಗೆ ಶರಣು
ಚಿಕ್ಕೋಡಿ: ಉಕ್ಕಿ ಹರಿಯುತ್ತಿರುವ ಕೃಷ್ಣಾ ನದಿಗೆ ಹಾರಿ ವ್ಯಕ್ತಿಯೊಬ್ಬರು ಆತ್ಮಹತ್ಯೆಗೆ (Self Harming) ಶರಣಾಗಿದ್ದಾರೆ. ಅಂಕಲಿ – ನಸಲಾಪೂರ ಗ್ರಾಮದ ಮಧ್ಯದ ಸೇತುವೆ ಬಳಿ ಆತ್ಮಹತ್ಯೆ (Krishna River) ಮಾಡಿಕೊಂಡಿದ್ದಾರೆ. ರಾಯಬಾಗ ತಾಲೂಕಿನ ಬಾವನಸೌಂದತ್ತಿ ಗ್ರಾಮದ ಬಾಬುರಾವ ಸಂಭಾಜಿ ಭಾಸ್ಕರ (40) ಆತ್ಮಹತ್ಯೆಗೆ ಶರಣಾದವರು.
ಇದನ್ನೂ ಓದಿ: Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್ ಬಂದ್ ಮಾಡಿದ ಪೊಲೀಸರು
ಅಂಕಲಿ ಹಾಗೂ ನಸಲಾಪೂರ ಗ್ರಾಮಗಳ ಮಧ್ಯೆ ನಿರ್ಮಿಸಲಾಗಿರುವಂತಹ ಸೇತುವೆ ಮೇಲೆ ನಿಂತು ನದಿಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಈಗಾಗಲೇ ಅಂಕಲಿ ಪೋಲಿಸರು ಮೃತ ದೇಹವನ್ನು ಹೊರ ತೆಗೆದಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಅಂಕಲಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.