Site icon Vistara News

Narendra Modi 3.0 : ಅಧಿಕಾರ ಸ್ವೀಕರಿಸಿದ ಮರುದಿನವೇ ಮೊದಲ ಫೈಲ್​ಗೆ ಸಹಿ ಹಾಕಿದ ಪ್ರಧಾನಿ ಮೋದಿ; ಯಾವ ಕಡತ ಅದು?

Narendra Modi 3.0

ಬೆಂಗಳೂರು: ಭಾನುವಾರ ಸಂಜೆ ಮೂರನೇ ಬಾರಿಗೆ ಅಧಿಕಾರ ವಹಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ (Narendra Modi 3.0) ಅವರು ಸೋಮವಾರ ‘ಪಿಎಂ ಕಿಸಾನ್ ನಿಧಿ’ ಬಿಡುಗಡೆಯ ಕಡತಕ್ಕೆ ಸಹಿ ಹಾಕಿದರು. ಇದು ಅವರು ಮೂರನೇ ಅವಧಿಯಲ್ಲಿ ಸಹಿ ಹಾಕಿದ ಮೊದಲ ಫೈಲ್​. ಪಿಎಂ ಕಿಸಾನ್ ನಿಧಿಯ 17 ನೇ ಕಂತಿನ ಬಿಡುಗಡೆಗೆ ಅಧಿಕಾರ ನೀಡುವ ಕಡತಕ್ಕೆ ಅವರು ಸಹಿ ಹಾಕಿದರು. ಇದು 9.3 ಕೋಟಿ ರೈತರಿಗೆ ಪ್ರಯೋಜನ ನೀಡುವ ಸುಮಾರು 20,000 ಕೋಟಿ ರೂ. ಬಿಡುಗಡೆಯಾಗಲಿದೆ.

ನಮ್ಮದು ರೈತರ ಕಲ್ಯಾಣಕ್ಕೆ ಬದ್ಧವಾಗಿರುವ ಸರ್ಕಾರ. ಆದ್ದರಿಂದ, ಅಧಿಕಾರ ವಹಿಸಿಕೊಂಡ ನಂತರ ಸಹಿ ಮಾಡಿದ ಮೊದಲ ಕಡತವು ರೈತರ ಕಲ್ಯಾಣಕ್ಕೆ ಸಂಬಂಧಿಸಿದ್ದು ಮುಂಬರುವ ದಿನಗಳಲ್ಲಿ ರೈತರು ಮತ್ತು ಕೃಷಿ ವಲಯಕ್ಕಾಗಿ ನಾವು ಇನ್ನೂ ಹೆಚ್ಚು ಕೆಲಸ ಮಾಡಲು ಬಯಸುತ್ತೇವೆ ” ಎಂದು ಕಡತಕ್ಕೆ ಸಹಿ ಹಾಕಿದ ನಂತರ ಪಿಎಂ ಮೋದಿ ಹೇಳಿದ್ದಾರೆ.

ಈ ನಿರ್ಧಾರವು ಆಡಳಿತಾರೂಢ ಎನ್​ಡಿಎ ಚುನಾವಣಾ ಗೆಲುವಿನ ನಂತರ ರೈತರ ಕಲ್ಯಾಣಕ್ಕೆ ಸರ್ಕಾರದ ಬದ್ಧತೆಯನ್ನು ಸಾರಿದೆ. ವಿಶೇಷವಾಗಿ ಗ್ರಾಮೀಣ ಭಾರತದಲ್ಲಿ ಕೆಲವು ಹಿನ್ನಡೆಗಳನ್ನು ಎದುರಿಸಿದ್ದ ಕಾರಣ ಈ ಕ್ರಮ ನಿರೀಕ್ಷಿತವಾಗಿದೆ.

3ನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣ ವಚನ

72 ಸದಸ್ಯರ ಕೇಂದ್ರ ಸಚಿವ ಸಂಪುಟದ ಮುಖ್ಯಸ್ಥರಾಗಿ ಮೋದಿ ಭಾನುವಾರ ದಾಖಲೆಯ ಮೂರನೇ ಅವಧಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಭಾನುವಾರ, ನಡೆದ ಕಾರ್ಯಕ್ರಮದಲ್ಲಿ ಸಚಿವ ಸಂಪುಟದಲ್ಲಿ ಉನ್ನತ ಸಹೋದ್ಯೋಗಿಗಳಾದ ಅಮಿತ್ ಶಾ, ನಿರ್ಮಲಾ ಸೀತಾರಾಮನ್, ರಾಜನಾಥ್ ಸಿಂಗ್, ನಿತಿನ್ ಗಡ್ಕರಿ, ಎಸ್ ಜೈಶಂಕರ್ ಮತ್ತು ಪಿಯೂಷ್ ಗೋಯಲ್ ಕೂಡ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ಇದನ್ನೂ ಓದಿ:8th Pay Commission: ಭಾರಿ ವೇತನ ಹೆಚ್ಚಳ ನಿರೀಕ್ಷೆಯಲ್ಲಿ ಕೇಂದ್ರ ಸರ್ಕಾರಿ ನೌಕರರು

ಪ್ರಮುಖ ಮಿತ್ರ ಪಕ್ಷಗಳಾದ ತೆಲುಗು ದೇಶಂ ಪಕ್ಷ (ಟಿಡಿಪಿ) ಮತ್ತು ಜನತಾದಳ (ಯುನೈಟೆಡ್) ತಲಾ ಒಂದು ಕ್ಯಾಬಿನೆಟ್ ಸ್ಥಾನ ಪಡೆದುಕೊಂಡಿವೆ.

ಟಿಡಿಪಿ ಮತ್ತು ಜೆಡಿಯು ಹೊರತುಪಡಿಸಿ, ಟಿಡಿಪಿ, , ಜೆಡಿಎಸ್​, ಹಿಂದೂಸ್ತಾನಿ ಅವಾಮ್ ಮೋರ್ಚಾ (ಜಾತ್ಯತೀತ) ಮತ್ತು ಲೋಕ ಜನಶಕ್ತಿ ಪಕ್ಷ ಕ್ಯಾಬಿನೆಟ್ ಸ್ಥಾನಗಳನ್ನು ಪಡೆದ ಇತರ ಮಿತ್ರಪಕ್ಷಗಳಾಗಿವೆ.

ಲೋಕ ಜನಶಕ್ತಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಚಿರಾಗ್ ಪಾಸ್ವಾನ್ ಅವರು ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ ಎಲ್ಲಾ ಐದು ಸ್ಥಾನಗಳನ್ನು ಗೆಲ್ಲುವ ಮೂಲಕ ಉತ್ತಮ ಪ್ರದರ್ಶನ ನೀಡಿದರು. ಚಿರಾಗ್ ಪಾಸ್ವಾನ್ ಮಾಜಿ ಕ್ಯಾಬಿನೆಟ್ ಸಚಿವ ರಾಮ್ ವಿಲಾಸ್ ಪಾಸ್ವಾನ್ ಅವರ ಪುತ್ರ ಮತ್ತು ಎಲ್ಜೆಪಿ ಸಂಸ್ಥಾಪಕ.

Exit mobile version