Site icon Vistara News

Narendra Modi: ವಯನಾಡಿನಲ್ಲಿ ಭೂಕುಸಿತದ ಸಂತ್ರಸ್ತರಿಗೆ ಸಾಂತ್ವನ ಹೇಳಿದ ಮೋದಿ; ದುರಂತದ ಭೀಕರತೆ ಕೇಳಿ ಭಾವುಕ

Narendra Modi

ತಿರುವನಂತಪುರಂ: ಕೇರಳದ ವಯನಾಡು ಭೂಕುಸಿತವು (Wayand Landslide) ದೇಶಾದ್ಯಂತ ಬೆಚ್ಚಿಬೀಳಿಸಿದೆ. ಹಾಗಾಗಿ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ವಯನಾಡಿನಲ್ಲಿ ಭೂಕುಸಿತದ ತೀವ್ರತೆ ಕುರಿತು ವೈಮಾನಿಕ ಸಮೀಕ್ಷೆ ನಡೆಸಿದರು. ಅಷ್ಟೇ ಅಲ್ಲ, ನಿರಾಶ್ರಿತರ ಕೇಂದ್ರಗಳಿಗೆ ಭೇಟಿ ನೀಡಿದ ಅವರು ಸಂತ್ರಸ್ತರಿಗೆ ಸಾಂತ್ವನ ಹೇಳಿದರು. ನಿರಾಶ್ರಿತರ ಕೇಂದ್ರದಲ್ಲಿರುವ ಮಹಿಳೆಯರು, ಮಕ್ಕಳು ಸೇರಿ ಎಲ್ಲರೊಂದಿಗೂ ಮಾತನಾಡಿದ ಅವರು ಸಾಂತ್ವನ ಹೇಳಿದರು.

ಇದಕ್ಕೂ ಮೊದಲು ತಿರುವನಂತಪುರಂ ವಿಮಾನ ನಿಲ್ದಾಣಕ್ಕೆ ಆಗಮಿಸಿದ ನರೇಂದ್ರ ಮೋದಿ ಅವರನ್ನು ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಮತ್ತು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದರು. ಬಳಿಕ ಮೋದಿ ಹೆಲಿಕಾಪ್ಟರ್ ಮೂಲಕ ವಯನಾಡಿಗೆ ಪ್ರಯಾಣ ಬೆಳೆಸಿದರು.‌ ಮೋದಿ ಅವರೊಂದಿಗೆ ಆರಿಫ್ ಮೊಹಮ್ಮದ್ ಖಾನ್, ಪಿಣರಾಯಿ ವಿಜಯನ್ ಮತು ಕೇಂದ್ರ ಸಚಿವ ಸುರೇಶ್‌ ಗೋಪಿ ಕೂಡ ತೆರಳಿದರು. ಭೂಕುಸಿತದಿಂದ ನೂರಾರು ಜನರು ಸಾವನ್ನಪ್ಪಿದ ವಯನಾಡಿನಲ್ಲಿ ವೈಮಾನಿಕ ಸಮೀಕ್ಷೆಯನ್ನು ನಡೆಸಿದ ಪ್ರಧಾನಿ ನರೇಂದ್ರ ಮೋದಿ ದುರಂತದ ಬಗ್ಗೆ ಮಾಹಿತಿ ಪಡೆದುಕೊಂಡರು.

ಭಾರತೀಯ ವಾಯುಪಡೆಯ ಹೆಲಿಕಾಪ್ಟರ್‌ನಲ್ಲಿ ಭೂಕುಸಿತದಿಂದ ಹಾನಿಗೊಳಗಾದ ಚುರಲ್‌ಮಲ, ಮುಂಡಕೈ ಮತ್ತು ಪುಂಚಿರಿಮಟ್ಟಂ ಗ್ರಾಮಗಳ ವೈಮಾನಿಕ ಸಮೀಕ್ಷೆ ನಡೆಸಿದ ಪ್ರಧಾನಿ ಮೋದಿ ಅವರಿಗೆ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ದುರಂತದ ತೀವ್ರತೆ ಬಗ್ಗೆ ಮನವರಿಕೆ ಮಾಡಿದರು. ದುರಂತ ಪೀಡಿತ ಸ್ಥಳದಲ್ಲಿ ಬೀಡು ಬಿಟ್ಟಿರುವ ರಕ್ಷಣಾ ತಂಡಗಳಿಂದ ಮಾಹಿತಿ ಪಡೆದ ಮೋದಿ ನಿರಾಶ್ರಿತರ ಶಿಬಿರ, ಗಾಯಗೊಂಡರವರು ಚಿಕಿತ್ಸೆ ಪಡೆಯುತ್ತಿರುವ ಆಸ್ಪತ್ರೆಗೂ ಭೇಟಿ ನೀಡಿದರು. ಈ ಪ್ರದೇಶದಲ್ಲಿನ ಪುನರ್ವಸತಿ ಪ್ರಯತ್ನಗಳ ಮೇಲ್ವಿಚಾರಣೆ ನಡೆಸುವ ನಿರೀಕ್ಷೆಯಿದೆ.

ಜುಲೈ 30ರಂದು ವಯನಾಡಿನ ಮೆಪ್ಪಾಡಿ ಪ್ರದೇಶದ ಮುಂಡಕೈಯಲ್ಲಿ ಭೂಕುಸಿತ ಸಂಭವಿಸಿ ಅಪಾರ ಜೀವ ಹಾನಿ ಮತ್ತು ವ್ಯಾಪಕ ನಾಶನಷ್ಟಕ್ಕೆ ಉಂಟಾಗಿದೆ. ದುರಂತದಲ್ಲಿ ಮೃತರ ಸಂಖ್ಯೆ 400 ದಾಟಿದೆ. ಕೇರಳದಲ್ಲಿ ನಡೆದ ಅತೀ ಭೀಕರ ದುರಂತಗಳಲ್ಲಿ ಇದೂ ಒಂದು ಎನಿಸಿಕೊಂಡಿದೆ. ಸತತ 10 ದಿನಗಳವರೆಗೆ ನಡೆದ ರಕ್ಷಣಾ ಕಾರ್ಯಾಚರಣೆಯು ಅಂತ್ಯವಾಗಿದೆ.

ಇದನ್ನೂ ಓದಿ: Narendra Modi: ಮೋದಿ ಪ್ರೊಫೈಲ್‌ ಫೋಟೊ ಈಗ ತಿರಂಗಾ; ಹರ್‌ ಘರ್‌ ತಿರಂಗಾ ಅಭಿಯಾನಕ್ಕೆ ಜನರಿಗೆ ಕರೆ

Exit mobile version