ನವದೆಹಲಿ: 69ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರಕಟವಾಗಿದ್ದು(National Film Awards 2023), ಅತ್ಯುತ್ತಮ ನಟಿ ಪ್ರಶಸ್ತಿಗೆ ಆಲಿಯಾ ಭಟ್ (Best Actress Alia Bhatt) ಹಾಗೂ ಕೃತಿ ಸನೂನ್ (Best Actress Kriti Sanon) ಭಾಜನರಾಗಿದ್ದಾರೆ. ಅದೇ ರೀತಿ, ಅತ್ಯುತ್ತಮ ನಟ ಪ್ರಶಸ್ತಿಯನ್ನು ಅಲ್ಲು ಅರ್ಜುನ್(Best Actor Allu Arjun) ಪಡೆದುಕೊಂಡಿದ್ದಾರೆ. ಪ್ಯಾನ್ ಇಂಡಿಯಾ ಸಿನಿಮಾ ಪುಷ್ಪ (Pushpa Moive) ಚಿತ್ರದ ಅಭಿನಯಕ್ಕಾಗಿ ಈ ಪ್ರಶಸ್ತಿ ದೊರೆತಿದೆ. ಸಂಜಯ್ ಲೀಲಾ ಬನ್ಸಾಲಿ ನಿರ್ದೇಶನದ ಗಂಗೂಬಾಯಿ ಕಾಥಿಯಾವಾಡಿ (gangubai kathiawadi) ಚಿತ್ರದ ಅಭಿನಯಕ್ಕಾಗಿ ಆಲಿಯಾ ಭಟ್ ಹಾಗೂ ಮಿಮಿ (Mimi Movie) ಚಿತ್ರದ ಅಭಿನಯಕ್ಕಾಗಿ ಕೃತಿ ಸನೂನ್ ಅವರು ಅತ್ಯುತ್ತಮ ನಟಿ ಪ್ರಶಸ್ತಿಯನ್ನು ಹಂಚಿಕೊಂಡಿದ್ದಾರೆ.
69ನೇ ರಾಷ್ಟ್ರೀಯ ಚಲನ ಚಿತ್ರ ಪ್ರಶಸ್ತಿ ಘೋಷಣೆ
#Rocketry : The Nambi Effect wins Best Feature Film at the #69thNationalFilmAwards
— PIB India (@PIB_India) August 24, 2023
#NationalFilmAwards2023 pic.twitter.com/yXBoa9Bier
ಇನ್ನುಳಿದಂತೆ ದಿ ಕಾಶ್ಮೀರ್ ಫೈಲ್ಸ್ ಚಿತ್ರದ ಅಭಿನಯಕ್ಕಾಗಿ ಪಲ್ಲವಿ ಜೋಶಿ ಅತ್ಯುತ್ತಮ ಪೋಷಕ ನಟಿ ಹಾಗೂ ಮಿಮಿ ಚಿತ್ರದ ಅಭಿನಯಕ್ಕಾಗಿ ಪಂಕಜ್ ತ್ರಿಪಾಠಿ ಅವರಿಗೆ ಅತ್ಯುತ್ತಮ ಪೋಷಕ ನಟ ಪ್ರಶಸ್ತಿ ಸಂದಿದೆ. ಆರ್ ಮಾಧವನ್ ಅಭಿನಯ ಹಾಗೂ ನಿರ್ದೇಶನದ ರಾಕೆಟ್ರಿ ಚಿತ್ರವು ಅತ್ಯುತ್ತಮ ಚಿತ್ರ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದೆ.
ಗಂಗೂಬಾಯಿ ಕಾಥಿಯಾವಾಡಿ ಚಿತ್ರದ ಎಡಿಟಿಂಗ್‌ಗಾಗಿ ಸಂಜಯ್ ಲೀಲಾ ಬನ್ಸಾಲಿ ಅವರು ಬೆಸ್ಟ್ ಎಡಿಟರ್ ಪ್ರಶಸ್ತಿಗೆ ಪಾತ್ರವಾಗಿದ್ದಾರೆ. ಅವರು ಈ ಚಿತ್ರದ ನಿರ್ದೇಶಕರೂ ಹೌದು. ಪುಷ್ಪ ಚಿತ್ರದ ಸಂಗೀತ ನಿರ್ದೇಶನಕ್ಕಾಗಿ ದೇವಿಶ್ರೀ ಪ್ರಸಾದ್ ಅವರಿಗೆ ಅತ್ಯುತ್ತಮ ಸಂಗೀತ ನಿರ್ದೇಶಕ ಪ್ರಶಸ್ತಿ ಲಭಿಸಿದೆ.
777 ಚಾರ್ಲಿ ಕನ್ನಡದ ಬೆಸ್ಟ್ ಸಿನಿಮಾ
69ನೇ ರಾಷ್ಟ್ರೀಯ ಚಲನಚಿತ್ರ (National Film Awards 2023) ಪ್ರಶಸ್ತಿ ಪ್ರಾದೇಶಿಕ ಸಿನಿಮಾ ವಿಭಾಗದಲ್ಲಿ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಅಭಿನಯದ 777 ಚಾರ್ಲಿ ಕನ್ನಡದ ಅತ್ಯುತ್ತಮ ಸಿನಿಮಾ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದೆ. ಚಿತ್ರ ಮಂದಿರಗಳಲ್ಲಿ ರಾರಾಜಿಸಿದ 777 ಚಾರ್ಲಿ ಸಿನಿಮಾ 150 ಕೋಟಿ ರೂ.ಗೂ ಅಧಿಕ ಕಲೆಕ್ಷನ್ ಮಾಡಿತ್ತು. ಕಿರಣ್ ರಾಜ್ ನಿರ್ದೇಶನದ ಈ ಸಿನಿಮಾವನ್ನು ಪಂಚ ಭಾಷೆಗಳಲ್ಲಿ ಜನರು ನೋಡಿ ಹಾಡಿ ಹೊಗಳಿದ್ದರು.
777 ಚಾರ್ಲಿ ಸಿನಿಮಾ ಥಿಯೇಟರ್‌ಗಳಲ್ಲಿ ಬಿಡುಗಡೆಯಾಗುವುದಕ್ಕೂ ಮೊದಲೇ ಚಿತ್ರತಂಡ ಹಲವು ಕಡೆಗಳಲ್ಲಿ ಪ್ರೀಮಿಯರ್ ಶೋ ಏರ್ಪಡಿಸಿತ್ತು. ಇಲ್ಲಿಯೂ ಸಹ ಜನರಿಂದ ಒಳ್ಳೆಯ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಚಿತ್ರದ ಪ್ರಸಾರದ ಹಕ್ಕು ಕೂಡ ಒಳ್ಳೆಯ ಮೊತ್ತಕ್ಕೆ ಮಾರಾಟವಾಗಿತ್ತು.
ಈ ಸುದ್ದಿಯನ್ನೂ ಓದಿ: National Film Awards 2023: 777 ಚಾರ್ಲಿ ಕನ್ನಡದ ಅತ್ಯುತ್ತಮ ಸಿನಿಮಾ
ರಾಜ್ ಬಿ ಶೆಟ್ಟಿ, ದಾನಿಶ್ ಸೇಠ್, ಸಂಗೀತಾ ಶೃಂಗೇರಿ, ತಮಿಳಿನ ಬಾಬಿ ಸಿಂಹ ನಟಿಸಿದ್ದಾರೆ. ಕಿರಣ್ ರಾಜ್ ಈ ಚಿತ್ರದ ನಿರ್ದೇಶಕರಾಗಿದ್ದು, ರಕ್ಷಿತ್ ಶೆಟ್ಟಿ ತಮ್ಮ ಹೋಮ್ ಬ್ಯಾನರ್ ಪರಂವಃ ಸ್ಟುಡಿಯೋಸ್ ಅಡಿಯಲ್ಲಿ ಚಿತ್ರ ನಿರ್ದೇಶಿಸಿದ್ದಾರೆ. ನೋಬಿನ್ ಪೌಲ್ ಸಂಗೀತ ಮತ್ತು ಹಿನ್ನೆಲೆ ಸಂಗೀತ ನೀಡಿದ್ದು, ಅರವಿಂದ್ ಕಶ್ಯಪ್ ಛಾಯಾಗ್ರಹಣ ಮಾಡಿದ್ದಾರೆ. ಪ್ರತೀಕ್ ಶೆಟ್ಟಿ ಸಂಕಲನ, ಪ್ರಗತಿ ರಿಷಬ್ ಶೆಟ್ಟಿ ಅವರ ವಸ್ತ್ರ ವಿನ್ಯಾಸ ಈ ಚಿತ್ರಕ್ಕಿದೆ. ಚಿತ್ರದ ಹಿಂದಿ ಅವತರಣಿಕೆಗೆ ಸಂಜಯ್ ಉಪಾಧ್ಯ ಸಂಭಾಷಣೆ ನೀಡಿದ್ದು, ಹಾಡುಗಳಿಗೆ ಹಿಂದಿಯಲ್ಲಿ ಶೈನಿ ದಾಸ್, ಕಾರ್ತಿಕಾ ನೈನನ್ ದುಬೆ, ಮಾನ್ಸಾ ಪಾಂಡೆ, ಅಲೆಕ್ಸ್ ಡಿಸೋಜಾ, ಸಾಯೇಶ್ ಪೈ ಪನಂಡಿಕರ್ ಸಾಹಿತ್ಯ ನೀಡಿದ್ದಾರೆ.