Site icon Vistara News

Lok Sabha Election : ಬಿಹಾರದಲ್ಲಿ ಬಿಜೆಪಿ, ಜೆಡಿಯು ಸೀಟು ಹಂಚಿಕೆ ಅಂತಿಮ; ಯಾರಿಗೆ ಎಷ್ಟು ಸೀಟು?

Modi and NItish Kumar

ನವದೆಹಲಿ: ಬಿಹಾರದಲ್ಲಿ ಲೋಕ ಸಭಾ ಚುನಾವಣೆಗೆ (Lok Sabha Election) ಎನ್​ಡಿಎ ಬಣದ ಸೀಟು ಹಂಚಿಕೆ ಒಪ್ಪಂದ ಅಂತಿಮಗೊಂಡಿದೆ. ಬಿಜೆಪಿ 17 ಸ್ಥಾನಗಳಲ್ಲಿ ಸ್ಪರ್ಧಿಸಲಿದ್ದು, ಮಿತ್ರ ಪಕ್ಷ ಜೆಡಿಯು 16 ಸ್ಥಾನಗಳಲ್ಲಿ ಸ್ಪರ್ಧಿಸಲಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ವಿನೋದ್ ತಾವ್ಡೆ ಸೋಮವಾರ ಪ್ರಕಟಿಸಿದ್ದಾರೆ. ಚಿರಾಗ್ ಪಾಸ್ವಾನ್ ನೇತೃತ್ವದ ಲೋಕ ಜನಶಕ್ತಿ ಪಕ್ಷ (ರಾಮ್ ವಿಲಾಸ್) ಐದು ಸ್ಥಾನಗಳಲ್ಲಿ ಸ್ಪರ್ಧಿಸಲಿದೆ.

ಬಿಜೆಪಿ 17, ಜೆಡಿಯು 16, ಎಲ್​ಜೆಪಿ (ರಾಮ್ ವಿಲಾಸ್) 5, ಹಿಂದೂಸ್ತಾನಿ ಅವಾಮ್ ಮೋರ್ಚಾ ಮತ್ತು ರಾಷ್ಟ್ರೀಯ ಲೋಕ ಮೋರ್ಚಾ ತಲಾ 1 ಸ್ಥಾನಗಳಲ್ಲಿ ಸ್ಪರ್ಧಿಸಲಿವೆ ಎಂದು ತಾವ್ಡೆ ಎಎನ್ಐಗೆ ತಿಳಿಸಿದ್ದಾರೆ.

ಬಿಹಾರದ ಯಾವ ಲೋಕಸಭಾ ಕ್ಷೇತ್ರದಲ್ಲಿ ಯಾವ ಪಕ್ಷ ಸ್ಪರ್ಧಿಸಲಿದೆ

  1. ಲೋಕ ಜನಶಕ್ತಿ ಪಕ್ಷ (ರಾಮ್ ವಿಲಾಸ್): ವೈಶಾಲಿ, ಹಾಜಿಪುರ, ಸಮಸ್ತಿಪುರ, ಖಗರಿಯಾ ಮತ್ತು ಜಮುಯಿ ಕ್ಷೇತ್ರಗಳಲ್ಲಿ ಎಲ್ಜೆಪಿ (ರಾಮ್ ವಿಲಾಸ್) ಸ್ಪರ್ಧಿಸಲಿದೆ.
  2. ಹಿಂದೂಸ್ತಾನಿ ಅವಾಮ್ ಮೋರ್ಚಾ ಗಯಾ ಕ್ಷೇತ್ರದಲ್ಲಿ ಸ್ಪರ್ಧಿಸಲಿದೆ
  3. ಮತ್ತು ರಾಷ್ಟ್ರೀಯ ಲೋಕ ಮೋರ್ಚಾ ಕರಕಾಟ್ ಸ್ಥಾನಗಳಲ್ಲಿ ಸ್ಪರ್ಧಿಸಲಿದೆ

ಇದನ್ನು ಓದಿ : Citizenship Amendment Act : ​ 19ರಂದು ಸಿಎಎ ಜಾರಿ ವಿಚಾರ ಸುಪ್ರೀಂ ಕೋರ್ಟ್​​ನಲ್ಲಿ ವಿಚಾರಣೆ

ಈ ವರ್ಷದ ಆರಂಭದಲ್ಲಿ, ಜೆಡಿಯು. ಆರ್​ಜೆಡಿಯೊಂದಿಗೆ ಸಂಬಂಧವನ್ನು ಕಡಿದುಕೊಂಡು ಎನ್​ಡಿಎ ಒಕ್ಕೂಟ ಸೇರಿತ್ತು. ಈ ತಿಂಗಳ ಆರಂಭದಲ್ಲಿ ಔರಂಗಾಬಾದ್​ನಲ್ಲಿ ನಡೆದ ಎನ್​ಡಿಎ ರ್ಯಾಲಿಯಲ್ಲಿ, ನಿತೀಶ್ ಕುಮಾರ್ ಅವರು ಪ್ರಧಾನಿ ನರೇಂದ್ರ ಮೋದಿಯವರ ಜತೆ ‘ಎಂದೆಂದಿಗೂ ಇರುತ್ತೇನೆ’ ಎಂದು ಘೋಷಿಸಿದ್ದಾರೆ.

“… ನೀವು (ಪಿಎಂ ಮೋದಿ) ಈ ಹಿಂದೆಯೂ ಬಂದಿದ್ದೀರಿ. ನಾನು ಸ್ವಲ್ಪ ಸಮಯದವರೆಗೆ ಕಣ್ಮರೆಯಾಗಿದ್ದೆ ಆದರೆ ಈಗ ನಾನು ನಿಮ್ಮೊಂದಿಗೆ ಇದ್ದೇನೆ. ನಾನು ಇಲ್ಲಿ ಮತ್ತು ಅಲ್ಲಿಗೆ ಹೋಗುವುದಿಲ್ಲ ಎಂದು ನಾನು ನಿಮಗೆ ಭರವಸೆ ನೀಡುತ್ತೇನೆ. ‘ಹಮ್ ರಹೇಂಗೆ ಆಪ್ ಹಿ ಕೆ ಸಾಥ್’ ಎಂದು ಕುಮಾರ್ ಹೇಳಿದ್ದರು.

ಬಂಗಾಳ ಡಿಜಿಪಿ, 6 ರಾಜ್ಯಗಳ ಗೃಹ ಕಾರ್ಯದರ್ಶಿಗಳನ್ನು ವಜಾಗೊಳಿಸಿದ ಚುನಾವಣಾ ಆಯೋಗ

ದಕ್ಷ, ನ್ಯಾಯಸಮ್ಮತ ಹಾಗೂ ಪಾರದರ್ಶಕತೆಯಿಂದ ಲೋಕಸಭೆ ಚುನಾವಣೆ (Lok Sabha Election 2024) ನಡೆಸಲಾಗುವುದು ಎಂದು ಚುನಾವಣೆ ಆಯೋಗ (Election Commission) ಘೋಷಿಸಿದ ಬೆನ್ನಲ್ಲೇ ಅಧಿಕಾರಿಗಳ ವಿಷಯದಲ್ಲಿ ಮಹತ್ವದ ತೀರ್ಮಾನ ತೆಗೆದುಕೊಂಡಿದೆ. ಪಶ್ಚಿಮ ಬಂಗಾಳದ ಪೊಲೀಸ್‌ ಮಹಾ ನಿರ್ದೇಶಕ (DGP) ಹಾಗೂ ಆರು ರಾಜ್ಯಗಳ ಗೃಹ ಕಾರ್ಯದರ್ಶಿಗಳನ್ನು (Home Secretaries) ಚುನಾವಣಾ ಆಯೋಗವು ಅಧಿಕಾರದಿಂದ ಕೆಳಗಿಳಿಸಿದೆ.

ಪಶ್ಚಿಮ ಬಂಗಾಳ ಡಿಜಿಪಿ ರಾಜೀವ್ ಕುಮಾರ್‌, ಗುಜರಾತ್‌, ಉತ್ತರ ಪ್ರದೇಶ, ಜಾರ್ಖಂಡ್‌, ಹಿಮಾಚಲ ಪ್ರದೇಶ, ಬಿಹಾರ ಹಾಗೂ ಉತ್ತರಾಖಂಡ ರಾಜ್ಯಗಳ ಗೃಹ ಕಾರ್ಯದರ್ಶಿಗಳನ್ನು ಚುನಾವಣಾ ಆಯೋಗವು ವಜಾಗೊಳಿಸಿದೆ. ಅಷ್ಟೇ ಅಲ್ಲ, ಹಿಮಾಚಲ ಪ್ರದೇಶ ಹಾಗೂ ಮಿಜೋರಾಂನ ಸಾಮಾನ್ಯ ಆಡಳಿತ ಇಲಾಖೆಯ ಕಾರ್ಯದರ್ಶಿಗಳನ್ನು ಕೂಡ ಪದಚ್ಯುತಗೊಳಿಸಿದೆ. ಪಶ್ಚಿಮ ಬಂಗಾಳ ಡಿಜಿಪಿ ರಾಜೀವ್‌ ಕುಮಾರ್‌ ಅವರು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರಿಗೆ ಆಪ್ತರಾಗಿದ್ದರು ಎಂದು ಕೂಡ ತಿಳಿದುಬಂದಿದೆ.

ಬೃಹನ್‌ಮುಂಬೈ ನಗರ ಪಾಲಿಕೆಯ ಆಯುಕ್ತ ಇಕ್ಬಾಲ್‌ ಸಿಂಗ್‌ ಚಾಹಲ್‌, ಹೆಚ್ಚುವರಿ ಆಯುಕ್ತರು, ಉಪ ಆಯುಕ್ತರನ್ನು ಕೂಡ ತೆಗೆದುಹಾಕಿದೆ. ಅಧಿಕಾರಿಗಳು ತಮ್ಮ ಜಿಲ್ಲೆಗಳಲ್ಲಿ ಮೂರು ವರ್ಷ ಅಧಿಕಾರ ಸಲ್ಲಿಸಿದ್ದರೆ, ಅವರನ್ನು ಚುನಾವಣೆ ಕಾರ್ಯಕ್ಕೆ ನಿಯೋಜಿಸಬೇಕು. ಅವರನ್ನು ನಿಯಮಿತವಾಗಿ ವರ್ಗಾವಣೆ ಮಾಡಬೇಕು ಎಂದು ಇದಕ್ಕೂ ಮೊದಲು ಚುನಾವಣೆ ಆಯೋಗವು ಆಯಾ ರಾಜ್ಯ ಸರ್ಕಾರಗಳಿಗೆ ಸೂಚಿಸಿತ್ತು. ಈ ಆದೇಶಗಳನ್ನು ಪಾಲಿಸದ ಹಿನ್ನೆಲೆಯಲ್ಲಿ ಅಧಿಕಾರಿಗಳನ್ನು ಪದಚ್ಯುತಿಗೊಳಿಸಲಾಗಿದೆ ಎಂದು ತಿಳಿದುಬಂದಿದೆ.

Exit mobile version