Site icon Vistara News

NEET UG ROW : ಎನ್​ಟಿಎ ಕಾರ್ಯನಿರ್ವಹಣೆ ಪರಿಶೀಲನೆಗೆ ಉನ್ನತ ಮಟ್ಟದ ಸಮಿತಿ ರಚಿಸಿದ ಕೇಂದ್ರ ಸರ್ಕಾರ

NEET UG ROW

ನವದೆಹಲಿ: ವೈದ್ಯಕೀಯ ಪ್ರವೇಶ ಪರೀಕ್ಷೆ ನೀಟ್ ನಲ್ಲಿ (NEET UG ROW) ಅಕ್ರಮಗಳು ನಡೆದಿವೆ ಎಂಬ ಆರೋಪದ ಮಧ್ಯೆ ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯ (NTA) ಕಾರ್ಯನಿರ್ವಹಣೆಯನ್ನು ಪರಿಶೀಲಿಸಲು ಕೇಂದ್ರ ಸರ್ಕಾರ ಗುರುವಾರ ಉನ್ನತ ಮಟ್ಟದ ಸಮಿತಿಯೊದನ್ನು ರಚಿಸಿದೆ. “ಯಾವುದೇ ದೋಷಗಳು ಇಲ್ಲದೆ ಪರೀಕ್ಷೆಗಳನ್ನು ನಡೆಸಲು ನಾವು ಬದ್ಧರಾಗಿದ್ದೇವೆ. ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯ ಕಾರ್ಯಚಟುವಟಿಕೆಯನ್ನು ಸುಧಾರಿಸಲು ಉನ್ನತ ಮಟ್ಟದ ಸಮಿತಿ ರಚಿಸಲಾಗುತ್ತಿದೆ” ಎಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ (Dharmendra Pradhan) ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ.

ಎನ್​ಟಿಎ ಅದರ ರಚನೆ, ಕಾರ್ಯನಿರ್ವಹಣೆ, ಪರೀಕ್ಷಾ ಪ್ರಕ್ರಿಯೆ, ಪಾರದರ್ಶಕತೆ ಮತ್ತು ಡೇಟಾ ಭದ್ರತಾ ಪ್ರೋಟೋಕಾಲ್ ಅನ್ನು ಮತ್ತಷ್ಟು ಸುಧಾರಿಸಲು ಉನ್ನತ ಮಟ್ಟದ ಸಮಿತಿಯಿಂದ ಶಿಫಾರಸುಗಳನ್ನು ನಿರೀಕ್ಷಿಸಲಾಗುವುದು. ತಪ್ಪಿತಸ್ಥರೆಂದು ಕಂಡುಬಂದ ಎನ್​ಟಿಎಯ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು” ಎಂದು ಅವರು ಹೇಳಿದರು.

ವಿದ್ಯಾರ್ಥಿಗಳ ಹಕ್ಕುಗಳನ್ನು ರಕ್ಷಿಸಲು ಸರ್ಕಾರ ಬದ್ಧವಾಗಿದೆ ಎಂದು ನಾನು ಎಲ್ಲರಿಗೂ ಭರವಸೆ ನೀಡಲು ಬಯಸುತ್ತೇನೆ. ನಾವು ಪಾರದರ್ಶಕತೆಯೊಂದಿಗೆ ರಾಜಿ ಮಾಡಿಕೊಳ್ಳುವುದಿಲ್ಲ ಎಂದು ಸಚಿವರ ಭರವಸೆ ನೀಡಿದರು.

“ನೀಟ್ ಪರೀಕ್ಷೆಯ ಬಗ್ಗೆ ನಾವು ಬಿಹಾರ ಸರ್ಕಾರದಿಂದ ಮಾಹಿತಿ ಪಡೆದಿದ್ದೇವೆ. ಪಾಟ್ನಾ ಪೊಲೀಸರು ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ ಮತ್ತು ಅವರು ಶೀಘ್ರದಲ್ಲೇ ಭಾರತ ಸರ್ಕಾರಕ್ಕೆ ವಿವರ ವರದಿಯನ್ನು ಕಳುಹಿಸಲಿದ್ದಾರೆ. ಪ್ರಾಥಮಿಕ ಮಾಹಿತಿಯು ಸಮಸ್ಯೆ ನಿರ್ದಿಷ್ಟ ಪ್ರದೇಶಕ್ಕೆ ಸೀಮಿತವಾಗಿವೆ ಎಂದು ಸೂಚಿಸುತ್ತದೆ ಎಂದು ಪ್ರಧಾನ್ ಹೇಳಿದರು.

ಇದನ್ನೂ ಓದಿ: NEET UG : ಫಿಸಿಕ್ಸ್​ನಲ್ಲಿ 85, ಕೆಮೆಸ್ಟ್ರಿಯಲ್ಲಿ 5! ನೀಟ್ ಆಕಾಂಕ್ಷಿಯ ಸ್ಕೋರ್ ಕಾರ್ಡ್ ಸೋರಿಕೆ, ಆರೋಪಿ ಸೆರೆ

ನಮ್ಮ ವ್ಯವಸ್ಥೆಗಳಲ್ಲಿ ನಮಗೆ ನಂಬಿಕೆ ಇರಲಿ. ಯಾವುದೇ ಅಕ್ರಮಗಳು ಅಥವಾ ದುಷ್ಕೃತ್ಯಗಳನ್ನು ಸರ್ಕಾರ ಸಹಿಸುವುದಿಲ್ಲ. ನಾವು ಜವಾಬ್ದಾರಿ ತೆಗೆದುಕೊಳ್ಳುತ್ತೇವೆ, ವ್ಯವಸ್ಥೆ ಸರಿಪಡಿಸಬೇಕಾಗಿದೆ” ಎಂದು ಸಚಿವರು ಹೇಳಿದರು.

ಭಾರತದ ಸರ್ಕಾರಿ ಮತ್ತು ಖಾಸಗಿ ಸಂಸ್ಥೆಗಳಲ್ಲಿ ಎಂಬಿಬಿಎಸ್, ಬಿಡಿಎಸ್, ಆಯುಷ್ ಮತ್ತು ಇತರ ಸಂಬಂಧಿತ ಕೋರ್ಸ್​ಗಳ ಪ್ರವೇಶಕ್ಕಾಗಿ ಎನ್​ಟಿಎ ನಡೆಸಿದ ನೀಟ್ ಪರೀಕ್ಷೆ ವಿವಾದದಲ್ಲಿ ಸಿಲುಕಿದೆ. ಮೇ 5 ರಂದು 4,750 ಕೇಂದ್ರಗಳಲ್ಲಿ ಪರೀಕ್ಷೆ ನಡೆದಿದ್ದು, ಸುಮಾರು 24 ಲಕ್ಷ ಅಭ್ಯರ್ಥಿಗಳು ಹಾಜರಾಗಿದ್ದರು. ಜೂನ್ 14 ರಂದು ಫಲಿತಾಂಶಗಳನ್ನು ಘೋಷಿಸುವ ನಿರೀಕ್ಷೆಯಿತ್ತು. ಆದರೆ ಜೂನ್ 4 ರಂದು ಘೋಷಿಸಲಾಯಿತು. ಉತ್ತರ ಪತ್ರಿಕೆಗಳ ಮೌಲ್ಯಮಾಪನವು ಮೊದಲೇ ಪೂರ್ಣಗೊಂಡಿದೆ ಎಂದು ಹೇಳಿದರು.

ಕನಿಷ್ಠ 67 ವಿದ್ಯಾರ್ಥಿಗಳು ಪರಿಪೂರ್ಣ 720 ಅಂಕಗಳನ್ನು ಗಳಿಸಿದ್ದರು ಇದು ಎನ್​ಟಿಎ ಇತಿಹಾಸದಲ್ಲಿ ಅಭೂತಪೂರ್ವ. ವಹರಿಯಾಣದ ಫರಿದಾಬಾದ್​ನ ಕೇಂದ್ರದ ಆರು ವಿದ್ಯಾರ್ಥಿಗಳು ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ. ಇದು ಅಕ್ರಮಗಳ ಬಗ್ಗೆ ಅನುಮಾನಗಳನ್ನು ಹುಟ್ಟುಹಾಕಿದೆ. ಗ್ರೇಸ್ ಅಂಕಗಳು 67 ವಿದ್ಯಾರ್ಥಿಗಳು ಉನ್ನತ ರ್ಯಾಂಕ್​ ಹಂಚಿಕೊಂಡಿದ್ದರು.

ನೀಟ್-ಯುಜಿ 2024 ರಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಯ ತನಿಖೆಯ ಭಾಗವಾಗಿ ಬಿಹಾರ ಪೊಲೀಸರ ಆರ್ಥಿಕ ಅಪರಾಧಗಳ ವಿಭಾಗ (ಇಒಡಬ್ಲ್ಯೂ) ಕಳೆದ ತಿಂಗಳು 13 ಜನರನ್ನು ಬಂಧಿಸಿತ್ತು. ಬಂಧಿತ ಆರೋಪಿಗಳಲ್ಲಿ ಪರೀಕ್ಷಾರ್ಥಿಗಳು, ಅವರ ಪೋಷಕರು ಮತ್ತು ಮಾಸ್ಟರ್ ಮೈಂಡ್ ಸಿಕಂದರ್ ಪ್ರಸಾದ್ ಯಡ್ವೇಂದು ಸೇರಿದ್ದಾರೆ.

Exit mobile version