ಬೆಂಗಳೂರು: ಸಿಂಗಾಪುರದಲ್ಲಿ (Singapore) ಹೊಸ ಕೋವಿಡ್- 19 (Covid 19 wave) ಅಲೆ ಪತ್ತೆಯಾಗಿದೆ. ಒಂದೇ ವಾರದಲ್ಲಿ ಕೊರೊನಾ ವೈರಸ್ (Corona Virus) ಕೇಸುಗಳ ಸಂಖ್ಯೆ ದ್ವಿಗುಣಗೊಂಡಿದ್ದು, ಮತ್ತೆ ಮಾಸ್ಕ್ (Mask) ಧರಿಸಲು ಸಲಹೆ ನೀಡಲಾಗಿದೆ. ರಾಜ್ಯದಲ್ಲೂ ಆರೋಗ್ಯ ಇಲಾಖೆ (Health department) ಅಲರ್ಟ್ ಆಗಿದ್ದು, ಪರಿಸ್ಥಿತಿಯನ್ನು ಗಮನಿಸುತ್ತಿದೆ.
ಸಿಂಗಾಪುರದಲ್ಲಿ ಒಂದೇ ವಾರದಲ್ಲಿ 25 ಸಾವಿರ ಕೋವಿಡ್ ಕೇಸ್ ಖಚಿತವಾಗಿದ್ದು, ಇದರಿಂದ ಸಿಲಿಕಾನ್ ಸಿಟಿ ಬೆಂಗಳೂರು ಅಲರ್ಟ್ ಆಗಿದೆ. ಇದರ ಜೊತೆಗೆ ಮಹಾರಾಷ್ಟ್ರದಲ್ಲಿಯೂ ಕೋವಿಡ್ ಒಮಿಕ್ರಾನ್ ರೂಪಾಂತರಿ ವೈರಸ್‌ನ 91 ಕೇಸ್ ಪತ್ತೆಯಾಗಿವೆ. ಹೀಗಾಗಿ, ಮುನ್ನೆಚ್ಚರಿಕೆ ವಹಿಸಲು ಇಂದು ಕೇಂದ್ರ ಆರೋಗ್ಯ ಇಲಾಖೆಯ ಜೊತೆಗೆ ರಾಜ್ಯ ಆರೋಗ್ಯ ಇಲಾಖೆ ಸಭೆ ನಡೆಯುತ್ತಿದೆ.
ಸಿಂಗಾಪುರದಿಂದ ಬೆಂಗಳೂರು ಹಾಗೂ ಮುಂಬಯಿಗೆ ಆಗಮಿಸುವ ವಿಮಾನಯಾನಿಗಳ ಸಂಖ್ಯೆ ಹೆಚ್ಚು ಇದ್ದು, ಈ ಹಿನ್ನೆಲೆಯಲ್ಲಿ ಮುಂದಿನ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಚರ್ಚೆ ನಡೆಯಲಿದೆ. ಆಯ್ದ ಯಾನಿಗಳ ಆರೋಗ್ಯ ತಪಾಸಣೆ, ಮಾಸ್ಕ್ ಧಾರಣೆ ಸೇರಿದಂತೆ ಹಲವು ಕ್ರಮಗಳ ಬಗೆಗೆ ಚರ್ಚಿಸಲಾಗುತ್ತಿದೆ.
ಸಿಂಗಾಪುರದಲ್ಲಿ ಏನಾಗಿದೆ?
ಸಿಂಗಾಪುರದ ಆರೋಗ್ಯ ಸಚಿವ ಓಂಗ್ ಯೆ ಕುಂಗ್, ಸಾರ್ವಜನಿಕ ತಾಣಗಳಲ್ಲಿ ಮುಖವಾಡಗಳನ್ನು ಧರಿಸುವಂತೆ ಸಲಹೆ ನೀಡಿದ್ದಾರೆ. ಸಾಮಾಜಿಕ ನಿರ್ಬಂಧಗಳ ಕುರಿತು ಮಾತನಾಡಿದ ಸಚಿವ ಓಂಗ್, ಸದ್ಯಕ್ಕೆ ಯಾವುದೇ ರೀತಿಯ ಸಾಮಾಜಿಕ ನಿರ್ಬಂಧಗಳ ಯೋಚನೆಯಿಲ್ಲ ಎಂದಿದ್ದಾರೆ. ಏಕೆಂದರೆ ಸಿಂಗಾಪುರದಲ್ಲಿ ಕೋವಿಡ್ -19 ಅನ್ನು ಸ್ಥಳೀಯ ಕಾಯಿಲೆ ಎಂದು ಪರಿಗಣಿಸಲಾಗುತ್ತದೆ.
ಕೋವಿಡ್‌ನ ಹೊಸ ಅಲೆಯ ಪಥವನ್ನು ಸರ್ಕಾರವು ನಿಕಟವಾಗಿ ಗಮನಿಸುತ್ತಿದೆ ಎಂದು ಸಿಂಗಾಪುರದ ಆರೋಗ್ಯ ಸಚಿವಾಲಯ ಹೇಳಿದೆ. ಸಚಿವಾಲಯದ ಪ್ರಕಾರ, ಕೋವಿಡ್ -19 ಪ್ರಕರಣಗಳ ಅಂದಾಜು ಸಂಖ್ಯೆಯು ಹಿಂದಿನ ವಾರದಲ್ಲಿದ್ದ 13,700ರಿಂದ 25,900ಕ್ಕೆ ದ್ವಿಗುಣಗೊಂಡಿದೆ. ಅದೇ ಅವಧಿಯಲ್ಲಿ ಸರಾಸರಿ ದೈನಂದಿನ ಕೋವಿಡ್ -19 ಆಸ್ಪತ್ರೆಗೆ ದಾಖಲು ಕೇಸ್‌ಗಳು 181ರಿಂದ ಸರಿಸುಮಾರು 250ಕ್ಕೆ ಏರಿದೆ ಎಂದು ಸಚಿವಾಲಯ ವರದಿ ಮಾಡಿದೆ.
ಆಸ್ಪತ್ರೆಯ ಹಾಸಿಗೆ ಸಾಮರ್ಥ್ಯವನ್ನು ಸಂರಕ್ಷಿಸಲು, ಸಾರ್ವಜನಿಕ ಆಸ್ಪತ್ರೆಗಳಿಗೆ ತುರ್ತು-ಅಲ್ಲದ ಶಸ್ತ್ರಚಿಕಿತ್ಸೆಗಳನ್ನು ಕಡಿಮೆ ಮಾಡಲು ಮತ್ತು ಸೂಕ್ತವಾದ ರೋಗಿಗಳನ್ನು ಆರೈಕೆ ಸೌಲಭ್ಯಗಳಿಗೆ ವರ್ಗಾಯಿಸಲು ಸೂಚನೆ ನೀಡಲಾಗಿದೆ. “ನಾವು ಅಲೆಯ ಆರಂಭಿಕ ಭಾಗದಲ್ಲಿದ್ದೇವೆ. ಪ್ರಮಾಣ ಸ್ಥಿರವಾಗಿ ಏರುತ್ತಿದೆ” ಎಂದು ಆರೋಗ್ಯ ಸಚಿವ ಓಂಗ್ ಯೆ ಕುಂಗ್ ಹೇಳಿದ್ದಾರೆ.
ಕೋವಾಕ್ಸಿನ್ ಲಸಿಕೆ ಪಡೆದವರಿಗೂ ಬಿಗ್ ಶಾಕ್! ಆಘಾತಕಾರಿ ವರದಿ ಔಟ್
ನವದೆಹಲಿ: ಕೊರೋನಾ ವೈರಸ್(Corona Virus) ಎದುರಿಸಲು ತೆಗೆದುಕೊಂಡಿರುವ ಕೋವಿಶೀಲ್ಡ್(Covishield Vaccine) ಲಸಿಕೆ ಅಡ್ಡಪರಿಣಾಮ(Side Effects) ಹೊಂದಿದೆ ಎಂಬುದು ಬಯಲಾದ ಬೆನ್ನಲ್ಲಿ ಕೋವಾಕ್ಸಿನ್ (Covaxin) ತೆಗೆದುಕೊಂಡಿರುವ ಜನ ತಮಗೇನು ಅಪಾಯವಿಲ್ಲ ಎಂದು ನಿರಾಳವಾಗಿದ್ದರು. ಆದರೆ ಇದೀಗ ವರದಿಯೊಂದು ಹೊರಬಿದ್ದಿದ್ದು, ಕೋವಾಕ್ಸಿನ್ ಪಡೆದಿರುವ ಜನರಿಗೆ ಬಿಗ್ ಶಾಕ್ ಕೊಟ್ಟಿದೆ. ಕೋವಾಕ್ಸಿನ್ ಲಸಿಕೆಯೂ ಅಡ್ಡಪರಿಣಾಮ ಹೊಂದಿದೆ ಎಂಬುದು ಅಧ್ಯಯನದಲ್ಲಿ ಬಯಲಾಗಿದೆ.
ಇತ್ತೀಚೆಗೆ ಕೋವಿಶೀಲ್ಡ್ ಅನ್ನು ಅಭಿವೃದ್ಧಿಪಡಿಸಿದ ಬ್ರಿಟಿಷ್ ಕಂಪನಿಯಾದ ಅಸ್ಟ್ರಾಜೆನೆಕಾ ಇತ್ತೀಚೆಗೆ ಅಲ್ಲಿನ ನ್ಯಾಯಾಲಯದಲ್ಲಿ ಅದರ ಲಸಿಕೆ ಕೆಲವು ಜನರಲ್ಲಿ ಗಂಭೀರ ಕಾಯಿಲೆಗೆ ಕಾರಣವಾಗಬಹುದು ಎಂದು ಒಪ್ಪಿಕೊಂಡಿತ್ತು. ಇದೀಗ ಅದೇ ರೀತಿ ನಮ್ಮ ದೇಶದಲ್ಲಿ ಭಾರತ್ ಬಯೋಟೆಕ್ ಕಂಪನಿ ಅಭಿವೃದ್ಧಿಪಡಿಸಿರುವ ‘ಕೋವಾಕ್ಸಿನ್’ ಲಸಿಕೆಯ ಅಡ್ಡ ಪರಿಣಾಮಗಳ ಬಗ್ಗೆ ವರದಿ ಬಂದಿದೆ. ಈ ಲಸಿಕೆಯನ್ನು ಪಡೆದ ಸುಮಾರು ಒಂದು ವರ್ಷದ ನಂತರ, ಅದರ ಅಡ್ಡಪರಿಣಾಮಗಳು ಸಾಕಷ್ಟು ಜನರಲ್ಲಿ ಕಂಡುಬಂದಿದೆ ಎಂದು ಹೇಳಲಾಗಿದೆ.
BHU ಅಧ್ಯಯನ ವರದಿಯಲ್ಲಿ ಬಹಿರಂಗ
ಬನಾರಸ್ ಹಿಂದೂ ವಿಶ್ವವಿದ್ಯಾಲಯ ನಡೆಸಿದ ಅಧ್ಯಯನದಲ್ಲಿ ಈ ಅಂಶ ಬೆಳಕಿಗೆ ಬಂದಿದ್ದು, ಈ ವರದಿಯ ಪ್ರಕಾರ, ಕೊವಾಕ್ಸಿನ್ ತೆಗೆದುಕೊಂಡಿರುವ ಹದಿ ಹರೆಯದವರು ಮತು ಯುವಕರಲ್ಲಿ ಈ ಅಡ್ಡ ಪರಿಣಾಮ ಹೆಚ್ಚಾಗಿ ಕಂಡು ಬಂದಿದೆ. ಈ ಸಂಶೋಧನೆಗಾಗಿ ಒಟ್ಟು 1024 ಜನರನ್ನು ಅಧ್ಯಯನಕ್ಕೆ ಒಳಪಡಿಸಲಾಗಿತ್ತು. ಅವರಲ್ಲಿ 635 ಹದಿಹರೆಯದವರು ಮತ್ತು 391 ಯುವಕರು ಇದ್ದರು. 304 ಹದಿಹರೆಯದವರು ಅಥವಾ ಸುಮಾರು 48 ಪ್ರತಿಶತದಷ್ಟು ಜನರು ಶ್ವಾಸನಾಳದ ಸೋಂಕುಗೆ ತುತ್ತಾಗಿರುವುದು ಅಧ್ಯಯನದಲ್ಲಿ ಬಯಲಾಗಿದೆ.
ಇದನ್ನೂ ಓದಿ: CoWIN Certificates: ಕೋವಿಡ್ ಲಸಿಕೆ ಪ್ರಮಾಣಪತ್ರದಲ್ಲಿ ಮೋದಿ ಫೋಟೋ ಔಟ್; ಕೇಂದ್ರ ಹೇಳೋದೇನು?