Board Exam: ಈ ವರ್ಷ 5, 8, 9ನೇ ತರಗತಿಗೆ ಪಬ್ಲಿಕ್‌ ಪರೀಕ್ಷೆ ಇಲ್ಲ: ಶಿಕ್ಷಣ ಇಲಾಖೆ - Vistara News

ಪ್ರಮುಖ ಸುದ್ದಿ

Board Exam: ಈ ವರ್ಷ 5, 8, 9ನೇ ತರಗತಿಗೆ ಪಬ್ಲಿಕ್‌ ಪರೀಕ್ಷೆ ಇಲ್ಲ: ಶಿಕ್ಷಣ ಇಲಾಖೆ

Board Exam: ಈ ತರಗತಿಗಳ ಬೋರ್ಡ್ ಪರೀಕ್ಷೆಯ ಪ್ರಕರಣ ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿ ಇರುವುದರಿಂದ 2024-25ನೇ ಸಾಲಿನಲ್ಲಿ ಈ ಹಿಂದೆ ಇದ್ದಂತೆ ಎಲ್ಲ ತರಗತಿಗಳಿಗೂ ಮೌಲ್ಯಾಂಕನ ಪದ್ಧತಿಯೇ ಮುಂದುವರಿಯಲಿದೆ ಎಂದು ಇಲಾಖೆ ಸೂಚಿಸಿದೆ.

VISTARANEWS.COM


on

board exam
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ರಾಜ್ಯ ಪಠ್ಯ ಕ್ರಮದ (State Syllabus) ಶಾಲೆಗಳ 5, 8 ಹಾಗೂ 9ನೇ ತರಗತಿ ಮಕ್ಕಳಿಗೆ ಈ ವರ್ಷ ಪಬ್ಲಿಕ್‌ ಪರೀಕ್ಷೆ (Public exam, board Exam) ನಡೆಸಲಾಗುವುದಿಲ್ಲ ಎಂದು ರಾಜ್ಯ ಶಿಕ್ಷಣ ಇಲಾಖೆ (Education Department) ತಿಳಿಸಿದೆ. ಈ ತರಗತಿಗಳ ಬೋರ್ಡ್ ಪರೀಕ್ಷೆಯ ಪ್ರಕರಣ ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿ ಇರುವುದರಿಂದ 2024-25ನೇ ಸಾಲಿನಲ್ಲಿ ಈ ಹಿಂದೆ ಇದ್ದಂತೆ ಎಲ್ಲ ತರಗತಿಗಳಿಗೂ ಮೌಲ್ಯಾಂಕನ ಪದ್ಧತಿಯೇ ಮುಂದುವರಿಯಲಿದೆ ಎಂದು ಇಲಾಖೆ ಸೂಚಿಸಿದೆ.

2024-25ನೇ ಶೈಕ್ಷಣಿಕ ಸಾಲಿನಲ್ಲಿ ಕರ್ನಾಟಕ ರಾಜ್ಯ ಪಠ್ಯ ಕ್ರಮದ 1ರಿಂದ 10ನೇ ತರಗತಿ ಶಾಲೆಗಳಿಗೆ 2024-25ನೇ ಸಾಲಿನ ಶೈಕ್ಷಣಿಕ ಚಟುವಟಿಕೆಗಳ ವಾರ್ಷಿಕ ಕ್ರಿಯಾಯೋಜನೆ ಹಾಗೂ ಶೈಕ್ಷಣಿಕ ಮಾರ್ಗದರ್ಶಿಯನ್ನು ಹೊರಡಿಸಲಾಗಿದೆ. ಇದನ್ನು ಆಧರಿಸಿ ಶಾಲೆಗಳಲ್ಲಿ ಪಠ್ಯ ವಸ್ತು ಬೋಧನೆ ಹಾಗೂ ಮೌಲ್ಯಾಂಕನ ಕುರಿತು ವಹಿಸಬೇಕಾದ ಕ್ರಮಗಳನ್ನು ಸೂಚಿಸಿ, ಅದರಂತೆ ಕ್ರಮವಹಿಸಲು ತಿಳಿಸಿದೆ.

ರಾಜ್ಯದ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳಲ್ಲಿ 1ರಿಂದ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ದಿನಾಂಕ: 29-05-2024ರಿಂದ ಶೈಕ್ಷಣಿಕ ವರ್ಷವು ಪ್ರಾರಂಭವಾಗಿದೆ. 2022-23ನೇ ʼಶೈಕ್ಷಣಿಕ ಸಾಲಿನಲ್ಲಿ ಕಲಿಕಾ ಚೇತರಿಕೆ’ ಉಪಕ್ರಮವನ್ನು ಮತ್ತು 2023-24ನೇ ಸಾಲಿನಲ್ಲಿ ʼಕಲಿಕಾ ಬಲವರ್ಧನೆ’ ಕಾರ್ಯಕ್ರಮದಡಿ ವಿದ್ಯಾರ್ಥಿಗಳ ಚಟುವಟಿಕೆ ಪುಸ್ತಕ ಹಾಗೂ ಶಿಕ್ಷಕರ ಚಟುವಟಿಕೆ ಕೋಶಗಳನ್ನು ಸಿದ್ಧಪಡಿಸಿ ಬೋಧನಾ ಕಲಿಕಾ ಪ್ರಕ್ರಿಯೆಯಲ್ಲಿ ಅಳವಡಿಸಿ ಕಲಿಕಾ ಅಂತರವನ್ನು ಬೆಸೆಯಲು ನಿರಂತರವಾಗಿ ಉಪಕ್ರಮಗಳನ್ನು ಅನುಷ್ಠಾನಿಸಲಾಗುತ್ತಿದೆ. ಇದಕ್ಕೆ ಪೂರಕವಾಗಿ ವಿದ್ಯಾರ್ಥಿಗಳನ್ನು ಮುಂದಿನ ತರಗತಿಗೆ ಸಜ್ಜುಗೊಳಿಸಲು ಶೈಕ್ಷಣಿಕ ವರ್ಷದ ಆರಂಭದಲ್ಲಿ ʼಸೇತುಬಂಧ’ ಕಾರ್ಯಕ್ರಮವನ್ನು ಜೂನ್ ತಿಂಗಳಿನಲ್ಲಿ ನಡೆಸುವುದು. 1ರಿಂದ 10ನೇ ತರಗತಿಗಳಿಗೆ ಸೇತುಬಂಧ ಸಾಹಿತ್ಯವನ್ನು ಸಿದ್ಧಪಡಿಸಿ DSERT website ನಲ್ಲಿ ಅಳವಡಿಸಲಾಗಿದೆ. ಕಾರ್ಯಕ್ರಮ ಅನುಷ್ಠಾನಿಸುವ ಕುರಿತು ಸೇತುಬಂಧ ಸುತ್ತೋಲೆಯ ಮೂಲಕ ಮಾರ್ಗದರ್ಶನ ನೀಡಲಾಗಿದೆ.

ಶಾಲಾ ಬ್ಯಾಗ್‌ ಹೊರೆ ತಗ್ಗಿಸುವ ನಿಟ್ಟಿನಲ್ಲಿ 2024-25ನೇ ಸಾಲಿನಲ್ಲಿ ಪಠ್ಯ ಪುಸ್ತಕಗಳನ್ನು ಭಾಗ-1 ಮತ್ತು ಭಾಗ-2ರಂತೆ ಪ್ರತ್ಯೇಕವಾಗಿ ಮುದ್ರಿಸಲಾಗಿದೆ. ಭಾಗ-1ರ ಪಠ್ಯ ಶೇ.50 ಹಾಗೂ ಭಾಗ-2ರ ಪಠ್ಯ ಶೇ.50 ಒಟ್ಟು ಸೇರಿ ಶೇ.100ರಷ್ಟು ಪಠ್ಯವನ್ನು ಮೌಲ್ಯಾಂಕನಕ್ಕೆ ಒಳಪಡಿಸುವ ವಿಧಾನವನ್ನು ನೀಡಲಾಗಿದ್ದು, ಅದರಂತೆ ಕ್ರಮವಹಿಸುವುದು.

ಉಲ್ಲೇಖಿತ ಸುತ್ತೋಲೆ ಹಾಗೂ 2024-25ನೇ ಸಾಲಿನ ಶೈಕ್ಷಣಿಕ ಮಾರ್ಗದರ್ಶಿಯನ್ನು ಆಧರಿಸಿ, ವಾರ್ಷಿಕ ಪಾಠ ಹಂಚಿಕೆ ಮಾಡಿಕೊಂಡು, ಕಲಿಕೆಯನ್ನು ಅನುಕೂಲಿಸುತ್ತಾ, ರೂಪಣಾತ್ಮಕ ಹಾಗೂ ಸಂಕಲನಾತ್ಮಕ ಮೌಲ್ಯಾಂಕನ ನಿರ್ವಹಿಸಲು ಅನುವಾಗುವಂತೆ ಮಾಹಿತಿಯನ್ನು ನೀಡಲಾಗಿರುತ್ತದೆ. ಅದರಂತೆ, ಶಾಲಾಹಂತದಲ್ಲಿ ನಿಗದಿತ ಕಾಲಾವಧಿಯೊಳಗೆ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಕ್ರಮವಹಿಸುವುದು.

ಇದನ್ನೂ ಓದಿ: Public Exam: 5, 8, 9ನೇ ತರಗತಿ ಪಬ್ಲಿಕ್‌ ಪರೀಕ್ಷೆ ಮೌಲ್ಯಮಾಪನದಲ್ಲಿ ಲೋಪ; ವಿವರ ಸಲ್ಲಿಕೆಗೆ ಸರ್ಕಾರ ಸೂಚನೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

KAS: ಕೆಎಎಸ್‌ ಅಭ್ಯರ್ಥಿಗಳಿಗೆ ಗುಡ್‌ ನ್ಯೂಸ್;‌ ನೇಮಕಾತಿಗೆ ಅರ್ಜಿ ಸಲ್ಲಿಸಲು ವಿಶೇಷ ಅವಕಾಶ, ಇಲ್ಲಿದೆ ಮಾಹಿತಿ

KAS: 2024ರ ಜೂನ್‌ 6ರಿಂದ ಜೂನ್‌ 21ರವರೆಗೆ 2017-18ನೇ ಸಾಲಿನಲ್ಲಿ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಮತ್ತೆ ಅರ್ಜಿ ಸಲ್ಲಿಸಲು ಕರ್ನಾಟಕ ಲೋಕಸೇವಾ ಆಯೋಗವು ಅವಕಾಶ ನೀಡಿದೆ. ಈ ಹುದ್ದೆಗಳ ಪೂರ್ವಭಾವಿ ಪರೀಕ್ಷೆಯನ್ನು ಆಗಸ್ಟ್‌ 28ರಂದು ನಡೆಸಲು ಕೂಡ ಕರ್ನಾಟಕ ಲೋಕಸೇವಾ ಆಯೋಗವು ತೀರ್ಮಾನಿಸಿದೆ.

VISTARANEWS.COM


on

KAS
Koo

ಬೆಂಗಳೂರು: 2017-18ನೇ ಸಾಲಿನಲ್ಲಿ ಗೆಜೆಟೆಡ್‌ ಪ್ರೊಬೇಷನರಿ ನೇಮಕಾತಿ ಪರೀಕ್ಷೆಗೆ (KAS) ಅರ್ಜಿ ಸಲ್ಲಿಸಿದ್ದ ಅಭ್ಯರ್ಥಿಗಳಿಗೆ ಕರ್ನಾಟಕ ಲೋಕಸೇವಾ ಆಯೋಗವು (Karnataka Public Service Commission) ಸಿಹಿ ಸುದ್ದಿ ನೀಡಿದೆ. ಹೌದು, 2017-18ರಲ್ಲಿ ಕೆಎಎಸ್‌ ನೇಮಕಾತಿಗೆ ಅರ್ಜಿ ಸಲ್ಲಿಸಿದವರಿಗೆ 2023-24ನೇ ಸಾಲಿನ ಗೆಜೆಟೆಡ್‌ ಪ್ರೊಬೇಷನರಿ ನೇಮಕಾತಿಗೆ ಅರ್ಜಿ ಸಲ್ಲಿಸಲು ವಿಶೇಷ ಅವಕಾಶ ಕಲ್ಪಿಸಲಾಗಿದ್ದು, ಇದರಿಂದ ಸಾವಿರಾರು ಅಭ್ಯರ್ಥಿಗಳು ಮತ್ತೆ ಅರ್ಜಿ ಸಲ್ಲಿಸಬಹುದಾಗಿದೆ.

2024ರ ಜೂನ್‌ 6ರಿಂದ ಜೂನ್‌ 21ರವರೆಗೆ 2017-18ನೇ ಸಾಲಿನಲ್ಲಿ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಮತ್ತೆ ಅರ್ಜಿ ಸಲ್ಲಿಸಲು ಕರ್ನಾಟಕ ಲೋಕಸೇವಾ ಆಯೋಗವು ಅವಕಾಶ ನೀಡಿದೆ. ಈ ಹುದ್ದೆಗಳ ಪೂರ್ವಭಾವಿ ಪರೀಕ್ಷೆಯನ್ನು ಆಗಸ್ಟ್‌ 28ರಂದು ನಡೆಸಲು ಕೂಡ ಕರ್ನಾಟಕ ಲೋಕಸೇವಾ ಆಯೋಗವು ತೀರ್ಮಾನಿಸಿದೆ. ಕೆಎಎಸ್‌ ಸೇರಿ ಇತರ ಗೆಜೆಟೆಡ್‌ ಪ್ರೊಬೇಷನರಿ 384 ಹುದ್ದೆಗಳ ನೇಮಕಾತಿಗೆ ಜುಲೈ 21ರಂದು ನಡೆಸಲಾಗುವುದು ಎಂದು ಈಗಾಗಲೇ ಕೆಪಿಎಸ್‌ಸಿ ತಿಳಿಸಿತ್ತು. ಅಭ್ಯರ್ಥಿಗಳ ಮನವಿ ಮೇರೆಗೆ ಪರೀಕ್ಷಾ ದಿನಾಂಕ ಮುಂದೂಡಲಾಗಿತ್ತು.

ಕೆಪಿಎಸ್‌ಸಿ ಅಧಿಸೂಚನೆ

2017-18ನೇ ಸಾಲಿನ ಗೆಜೆಟೆಡ್ ಪ್ರೊಬೇಷನರಿ (ಕೆಎಎಸ್‌) ನೇಮಕಾತಿ ಪರೀಕ್ಷೆಗೆ ಅರ್ಜಿ ಸಲ್ಲಿಸಿದ್ದ ಎಲ್ಲಾ ಅಭ್ಯರ್ಥಿಗಳು 26-02-2024 ರಂದು ಹೊರಡಿಸಿರುವ ಅಧಿಸೂಚನೆಯ ಹುದ್ದೆಗಳಿಗೆ / ಪರೀಕ್ಷೆಗಳಿಗೆ ಅರ್ಜಿ ಸಲ್ಲಿಸಲು ಕೆಪಿಎಸ್‌ಸಿ 15 ದಿನಗಳ ಕಾಲಾವಕಾಶ ನೀಡಬೇಕೆಂದು ಸರ್ಕಾರ ಸೂಚನೆ ನೀಡಿತ್ತು. ಅದರಂತೆ ಈಗ ಕೆಪಿಎಸ್‌ಸಿಯು ಅರ್ಜಿ ಸಲ್ಲಿಸಲು ಅವಕಾಶ ನೀಡುವ ಜತೆಗೆ ಪೂರ್ವಭಾವಿ ಪರೀಕ್ಷೆಯ ದಿನಾಂಕವನ್ನು ಘೋಷಿಸಿದೆ.

ವಿಶೇಷ ಸೂಚನೆ

2017-18ನೇ ಸಾಲಿನ ಗೆಜೆಟೆಡ್ ಪ್ರೊಬೇಷನರಿ ನೇಮಕಾತಿಗೆ ಅರ್ಜಿ ಸಲ್ಲಿಸಿದವರಿಗೆ ಕೆಪಿಎಸ್‌ಸಿಯು ವಿಶೇಷ ಸೂಚನೆ ನೀಡಿದೆ. ಅಭ್ಯರ್ಥಿಗಳು ಈಗಾಗಲೇ ಕೆಪಿಎಸ್‌ಸಿ ಉದ್ಯೋಗ ಸಾಫ್ಟ್‌ವೇರ್‌ನಲ್ಲಿ ಒಟಿಆರ್‌ ಅನ್ನು ರಚಿಸಿದ್ದರೆ ಅವರು ನೇರವಾಗಿ ವೆಬ್‌ಸೈಟ್‌ಗೆ (https://kpsconline.karnataka.gov.in) ಭೇಟಿ ನೀಡಿ, ಲಾಗ್‌ಇನ್‌ ಆಗುವ ಮೂಲಕ ಅರ್ಜಿ ಸಲ್ಲಿಸಬಹುದು. ಒಟಿಆರ್‌ ರಚಿಸದವರು ವೆಬ್‌ಸೈಟ್‌ಗೆ ಭೇಟಿ ನೀಡಿ, ಮೊದಲು ಒಟಿಆರ್‌ ರಚಿಸಿ, ನಂತರ ಅರ್ಜಿ ಸಲ್ಲಿಸಬೇಕು ಎಂದು ಸೂಚಿಸಿದೆ.

ಇದನ್ನೂ ಓದಿ: Bengaluru News : ಕೆಎಎಸ್‌ ಅಧಿಕಾರಿ ಪತ್ನಿ ಅನುಮಾನಾಸ್ಪದ‌ ಸಾವು; ಹೈಕೋರ್ಟ್‌ ವಕೀಲೆಗೆ ಕಾಡಿದ್ದೇನು?

Continue Reading

ದೇಶ

Mid Day Meal: ಮಕ್ಕಳ ಬಿಸಿಯೂಟದಲ್ಲೂ ಕಳ್ಳಾಟ, ವಿದ್ಯಾರ್ಥಿಗಳಿಗೆ ಸಿಗೋದು ಬರೀ ಅನ್ನ-ಅರಿಶಿಣ; Video ಇದೆ

Mid Day Meal: ಛತ್ತೀಸ್‌ಗಢದಲ್ಲಿ ಅಪೌಷ್ಟಿಕತೆ ಪ್ರಮಾಣ ಶೇ.17.76ರಷ್ಟಿದೆ. ಇದರಿಂದಾಗಿ ಬಿಸಿಯೂಟ ಯೋಜನೆಗೆ ರಾಜ್ಯ ಸರ್ಕಾರವು ಹೆಚ್ಚಿನ ಆದ್ಯತೆ ನೀಡುತ್ತದೆ. ಬಿಸಿಯೂಟದಲ್ಲಿ ಮಕ್ಕಳಿಗೆ ಚಪಾತಿ, ಅನ್ನ, ಸಾಂಬಾರ್‌, ಬೇಳೆ-ಕಾಳಿನಿಂದ ಮಾಡಿದ ಪಲ್ಯ ಸೇರಿ ಹಲವು ರೀತಿಯ ತಿನಿಸುಗಳು ಇರಬೇಕು ಎಂಬ ನಿಯಮ ರೂಪಿಸಿದೆ. ಆದರೆ, ಮಕ್ಕಳಿಗೆ ಸಿಗುತ್ತಿರುವುದು ಮಾತ್ರ ಅರಿಶಿಣ ಮಿಶ್ರಿತ ಅನ್ನ. ಸಾಮಾಜಿಕ ಜಾಲತಾಣದಲ್ಲಿ ಮಕ್ಕಳ ದುಸ್ಥಿತಿಯ ವಿಡಿಯೊ ವೈರಲ್‌ ಆಗಿದೆ.

VISTARANEWS.COM


on

Mid Day Meal
Koo

ರಾಯ್‌ಪುರ: ಬಡವರ ಮಕ್ಕಳಿಗೆ ಪೌಷ್ಟಿಕಾಂಶಯುಕ್ತ ಆಹಾರ ಸಿಗಲಿ, ಊಟದ ಆಸೆಗಾಗಿಯಾದರೂ ಬಡವರ ಮಕ್ಕಳು ಶಾಲೆಗೆ ಬಂದು, ವಿದ್ಯಾವಂತರಾಗಲಿ ಎಂದು ಕರ್ನಾಟಕ ಸೇರಿ ದೇಶದ ಹಲವು ರಾಜ್ಯಗಳ ಶಾಲೆಗಳಲ್ಲಿ ಮಧ್ಯಾಹ್ನ ಬಿಸಿಯೂಟದ (Mid Day Meal) ಯೋಜನೆಗಳನ್ನು ಜಾರಿಗೆ ತರಲಾಗಿದೆ. ಆದರೆ, ಸರ್ಕಾರಗಳು ಜಾರಿಗೆ ತಂದಿರುವ ಇಂತಹ ಉತ್ತಮ ಯೋಜನೆಗಳಲ್ಲೂ, ಮಕ್ಕಳ ಊಟದಲ್ಲೂ ಅಧಿಕಾರಿಗಳು ಕಳ್ಳಾಟ ಆಡುತ್ತಿದ್ದಾರೆ. ಮಕ್ಕಳಿಗೆ ಪೌಷ್ಟಿಕಾಂಶಯುಕ್ತ ಬಿಸಿಯೂಟ ನೀಡುವುದಿಲ್ಲ ಎಂಬ ಆರೋಪಗಳು ಕೇಳಿಬರುತ್ತಲೇ ಇರುತ್ತವೆ. ಇದಕ್ಕೆ ನಿದರ್ಶನ ಎಂಬಂತೆ, ಛತ್ತೀಸ್‌ಗಢದ (Chhattisgarh) ಶಾಲೆಯೊಂದರಲ್ಲಿ ಮಕ್ಕಳಿಗೆ ಬಿಸಿಯೂಟ ಯೋಜನೆ ಅನ್ವಯ ಬರೀ ಅನ್ನ ಹಾಗೂ ಅರಿಶಿಣ ಮಿಶ್ರಣ ಮಾಡಿ, ಅದನ್ನೇ ನೀಡಲಾಗಿದೆ. ಈ ವಿಡಿಯೊ ಈಗ ಭಾರಿ ವೈರಲ್‌ ಆಗಿದೆ.

ಹೌದು, ಛತ್ತೀಸ್‌ಗಢದ ಬಲರಾಮ್‌ಪುರ ಜಿಲ್ಲೆಯ ಬಿಜಾಕುರ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳಿಗೆ ಇಷ್ಟೊಂದು ಕಳಪೆ ಆಹಾರವನ್ನು ನೀಡಲಾಗುತ್ತಿದೆ. ಮಕ್ಕಳು ಅರಿಶಿಣ ಮಿಕ್ಸ್‌ ಆಗಿರುವ ಅನ್ನವನ್ನು ಸೇವಿಸುತ್ತಿರುವ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ 43 ವಿದ್ಯಾರ್ಥಿಗಳು ಓದುತ್ತಿದ್ದು, ಬಹುತೇಕರು ಬಡವರ ಮಕ್ಕಳಾಗಿದ್ದಾರೆ. ಆದರೆ, ಇವರಿಗೆ ಕಳೆದ ಒಂದು ವಾರದಿಂದ ಬಿಸಿಯೂಟದಲ್ಲಿ ತರಕಾರಿ ನೀಡದೆ, ಬರೀ ಅರಿಶಿಣ ಮಿಶ್ರಣ ಆಗಿರುವ ಅನ್ನ ನೀಡಲಾಗುತ್ತಿದೆ. ಇದನ್ನು ಶಾಲೆಯ ಅಧಿಕಾರಿಗಳೇ ದೃಢಪಡಿಸಿದ್ದಾರೆ.

“ಕಳೆದ ಒಂದು ವಾರದಿಂದ ತರಕಾರಿ ಪೂರೈಸುವವರು ಶಾಲೆಗೆ ತರಕಾರಿ ಪೂರೈಸುತ್ತಿಲ್ಲ. ಎಷ್ಟೇ ಪ್ರಯತ್ನ ಪಟ್ಟರೂ ತರಕಾರಿ ವ್ಯವಸ್ಥೆ ಆಗಿಲ್ಲ. ಹಾಗಾಗಿ, ಮಕ್ಕಳಿಗೆ ಅನ್ನ-ಸಾರು ಇಲ್ಲವೇ ಅರಿಶಿಣ ಮಿಶ್ರಿತ ಅನ್ನ ನೀಡುತ್ತಿದ್ದೇವೆ” ಎಂದು ಶಾಲೆಯ ಮುಖ್ಯೋಪಾಧ್ಯಾಯ ತಿಳಿಸಿದ್ದಾರೆ. ಇವರ ಆರೋಪಗಳಿಗೆ ತರಕಾರಿ ಪೂರೈಸುವವರು ಪ್ರತಿಕ್ರಿಯಿಸಿದ್ದು, “ಶಾಲೆಗೆ ತರಕಾರಿ ಪೂರೈಸಿದ್ದಕ್ಕೆ ಹಲವು ತಿಂಗಳಿಂದ ಹಣ ನೀಡಿಲ್ಲ. ಇದರಿಂದಾಗಿ ನಾವು ತರಕಾರಿ ಪೂರೈಸುತ್ತಿಲ್ಲ” ಎಂದು ಹೇಳಿದ್ದಾರೆ. ಹೀಗೆ ಆರೋಪ-ಪ್ರತ್ಯಾರೋಪದ ಮಧ್ಯೆ ಮಕ್ಕಳು ಪೌಷ್ಟಿಕಾಂಶಯುಕ್ತ ಊಟದಿಂದ ವಿಮುಖರಾಗುತ್ತಿದ್ದಾರೆ. ಇದಕ್ಕೆ ಗ್ರಾಮಸ್ಥರು ಕೂಡ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಛತ್ತೀಸ್‌ಗಢದಲ್ಲಿ ಅಪೌಷ್ಟಿಕತೆ ಪ್ರಮಾಣ ಶೇ.17.76ರಷ್ಟಿದೆ. ಇದರಿಂದಾಗಿ ಬಿಸಿಯೂಟ ಯೋಜನೆಗೆ ರಾಜ್ಯ ಸರ್ಕಾರವು ಹೆಚ್ಚಿನ ಆದ್ಯತೆ ನೀಡುತ್ತದೆ. ಬಿಸಿಯೂಟದಲ್ಲಿ ಮಕ್ಕಳಿಗೆ ಚಪಾತಿ, ಅನ್ನ, ಸಾಂಬಾರ್‌, ಬೇಳೆ-ಕಾಳಿನಿಂದ ಮಾಡಿದ ಪಲ್ಯ ಸೇರಿ ಹಲವು ರೀತಿಯ ತಿನಿಸುಗಳು ಇರಬೇಕು ಎಂಬ ನಿಯಮ ರೂಪಿಸಿದೆ. ಇದಕ್ಕಾಗಿ ವಾರ್ಷಿಕ ಕೋಟ್ಯಂತರ ರೂ. ಖರ್ಚು ಮಾಡುತ್ತಿದೆ. ಇಷ್ಟಾದರೂ ಶಾಲೆಯ ಶಿಕ್ಷಕರು ಹಾಗೂ ಸಿಬ್ಬಂದಿಯ ನಿರ್ಲಕ್ಷ್ಯದಿಂದ ಮಕ್ಕಳು ಅಪೌಷ್ಟಿಕಾಂಶಯುಕ್ತ ಆಹಾರ ಸೇವಿಸುವಂತಾಗಿದೆ. ಮಕ್ಕಳು ಬರೀ ಅನ್ನ ತಿನ್ನುತ್ತಿರುವ ವಿಡಿಯೊ ವೈರಲ್‌ ಆಗುತ್ತಲೇ ಜಿಲ್ಲಾ ಶಿಕ್ಷಣ ಅಧಿಕಾರಿ ದೇವೇಂದ್ರ ನಾಥ್‌ ಮಿಶ್ರಾ ಪ್ರತಿಕ್ರಿಯಿಸಿದ್ದು, “ಪ್ರಕರಣ ಈಗ ಗಮನಕ್ಕೆ ಬಂದಿದೆ. ಕೂಡಲೇ ಕ್ರಮ ತೆಗೆದುಕೊಳ್ಳಲಾಗುವುದು” ಎಂದಿದ್ದಾರೆ.

ಇದನ್ನೂ ಓದಿ: Students Fall Sick: ಬಿಸಿಯೂಟ ಸೇವಿಸಿ ಸರ್ಕಾರಿ ಶಾಲೆಯ 70ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ; ಆರೋಗ್ಯ ವಿಚಾರಿಸಿದ ಶಾಸಕ

Continue Reading

ಪ್ರಮುಖ ಸುದ್ದಿ

Dr HS Shetty : ದಾನಗಳಿಗಾಗಿಯೇ ವರ್ಷದಲ್ಲಿ 7 ಕೋಟಿ ರೂ. ವಿನಿಯೋಗ

Dr HS Shetty : ದುಡಿಮೆಯ ಒಂದು ಭಾಗವನ್ನು ಸಮಾಜಕ್ಕೆ ನೀಡಬೇಕು ಎನ್ನುವ ಉದ್ದೇಶವನ್ನು ಇಟ್ಟುಕೊಂಡು ಇಂತಹ ಕಾರ್ಯಕ್ರಮವನ್ನು ರೂಪಿಸಿದ್ದೇವೆ. ನಾವು ಇದುವರೆಗೆ ಯಾರಿಂದಲೂ ಒಂದು ರೂಪಾಯಿ ಚಂದಾ ಸ್ವೀಕರಿಸಿಲ್ಲ. ಶಾಲಾ ಕಟ್ಟಡ ನಿರ್ಮಾಣ, ವಿದ್ಯಾರ್ಥಿಗಳಿಗೆ ಅಗತ್ಯ ಪರಿಕರಗಳ ವಿತರಣೆ, ಶಿಕ್ಷಕರ ನೇಮಕ ಸೇರಿದಂತೆ ಶೈಕ್ಷಣಿಕ ವಲಯದ ಅಗತ್ಯಗಳನ್ನು ಪೂರೈಸುವ ಕೆಲಸ ಮಾಡುತಿದ್ದೇವೆ ಎಂದು ನುಡಿದರು.

VISTARANEWS.COM


on

Dr HS Shetty: Rs 7 crore spent on charity; Businessman Dr. HS Shetty
Koo

ಕುಂದಾಪುರ: ಕಳೆದ ಒಂದು ವರ್ಷದಲ್ಲಿ ದಾನ, ಧರ್ಮಗಳಿಗಾಗಿ 7 ಕೋಟಿ ರೂಪಾಯಿ ವಿನಿಯೋಗ ಮಾಡಲಾಗಿದ್ದು, ನಾವು ಬೆಳೆದು ಬಂದ ಸಮಾಜಕ್ಕೆ ನೆರವಾಗುವುದು ನಮ್ಮ ಉದ್ದೇಶ ಎಂದು ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೇಬಲ್ ಟ್ರಸ್ಟ್​​ನ ಅಧ್ಯಕ್ಷರಾದ ಡಾ. ಹೆಚ್.ಎಸ್.ಶೆಟ್ಟಿ (Dr HS Shetty) ಹೇಳಿದ್ದಾರೆ. ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ (ನೋಂದಾಯಿತ) ಬೆಂಗಳೂರು ವತಿಯಿಂದ ಉಡುಪಿ ಜಿಲ್ಲೆಯ 350 ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರಿಗೆ ಉಚಿತ 41,000 ಜೊತೆ ಶಾಲಾ ಸಮವಸ್ತ್ರಗಳ ವಿತರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಬೈಂದೂರಿನ ಸಮೃದ್ಧ ಜನಸೇವಾ ಚಾರಿಟೆಬಲ್ ಟ್ರಸ್ಟ್‌ ಮತ್ತು ಜಿಲ್ಲಾ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸಹಕಾರದೊಂದಿಗೆ ನಡೆದ ಕಾರ್ಯಕ್ರಮದಲ್ಲಿ ಸಮವಸ್ತ್ರಗಳ ವಿತರಣೆ ಹಾಗೂ ಹೆಗ್ಗುಂಜೆ ರಾಜೀವ್ ಶೆಟ್ಟಿ ವಿದ್ಯಾ ಪೋಷಕ್ ಪ್ರಶಸ್ತಿಯನ್ನು ಹಿರಿಯ ಶಿಕ್ಷಕರು ಹಾಗೂ ಯಕ್ಷಗಾನ ಪ್ರಸಂಗಕರ್ತರಾದ ಕಂದಾವರ ರಘುರಾಮ್ ಶೆಟ್ಟಿ ಅವರಿಗೆ ಪ್ರದಾನ ಮಾಡಿದ ಬಳಿಕ ಅವರು ಮಾತನಾಡಿ, ನಮ್ಮ ದುಡಿಮೆಯಲ್ಲಿ ನಮಗೆ ಬೇಕಾದಷ್ಟು ಬಳಸಿಕೊಂಡು ಉಳಿದದನ್ನು ಸಮಾಜಕ್ಕೆ ವಿನಿಯೋಗ ಮಾಡುವುದೇ ಜೀವನ. ನಾನು ನನ್ನ ಜೀವನದಲ್ಲಿ ದುಡಿದ ಹಣದಲ್ಲಿಯೇ ಸಮಾಜ ಮುಖಿ ಕಾರ್ಯ ಮಾಡುತ್ತಿದ್ದೇನೆ ಎಂದು ಹೇಳಿದರು.

ದುಡಿಮೆಯ ಒಂದು ಭಾಗವನ್ನು ಸಮಾಜಕ್ಕೆ ನೀಡಬೇಕು ಎನ್ನುವ ಉದ್ದೇಶವನ್ನು ಇಟ್ಟುಕೊಂಡು ಇಂತಹ ಕಾರ್ಯಕ್ರಮವನ್ನು ರೂಪಿಸಿದ್ದೇವೆ. ನಾವು ಇದುವರೆಗೆ ಯಾರಿಂದಲೂ ಒಂದು ರೂಪಾಯಿ ಚಂದಾ ಸ್ವೀಕರಿಸಿಲ್ಲ. ಶಾಲಾ ಕಟ್ಟಡ ನಿರ್ಮಾಣ, ವಿದ್ಯಾರ್ಥಿಗಳಿಗೆ ಅಗತ್ಯ ಪರಿಕರಗಳ ವಿತರಣೆ, ಶಿಕ್ಷಕರ ನೇಮಕ ಸೇರಿದಂತೆ ಶೈಕ್ಷಣಿಕ ವಲಯದ ಅಗತ್ಯಗಳನ್ನು ಪೂರೈಸುವ ಕೆಲಸ ಮಾಡುತಿದ್ದೇವೆ ಎಂದು ನುಡಿದರು.

ಇದನ್ನೂ ಓದಿ: Tumkur News: ರೈತರು ಮೊಬೈಲ್ ಆ್ಯಪ್ ಮೂಲಕ ಬೆಳೆ ವಿವರ ದಾಖಲಿಸಬೇಕು

ವಿಧಾನಸಭೆ ಸಭಾಧ್ಯಕ್ಷ ಯು.ಟಿ.ಖಾದರ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಬೈಂದೂರು ನನಗೆ ಈ ಹಿಂದುನಿಂದಲೂ ಚಿರಪರಿಚಿತ ಸ್ಥಳ. ನಾನು ವಿದ್ಯಾರ್ಥಿ ನಾಯಕನಾಗಿದ್ದ ದೆಸೆಯಿಂದಲೇ ಬೈಂದೂರಿನೊಂದಿಗೆ ನಿಕಟ ಸಂಪರ್ಕ ಇರಿಸಿಕೊಂಡಿದ್ದೆ.. ಇಂದು ಬೈಂದೂರಿನಲ್ಲಿ ಡಾಕ್ಟರ್ ಎಚ್ಎಸ್ ಶೆಟ್ಟಿ ಅವರ ಸಮಾಜಮುಖಿ ಕಾರ್ಯಕ್ರಮದಲ್ಲಿ ಭಾಗಿಯಾಗುತ್ತಿರುವುದು ನನಗೆ ಸಂತಸ ತಂದಿದೆ. ನಿಜವಾದ ದೇಶಪ್ರೇಮಿ ಯಾರು ಎಂದರೆ ಶೈಕ್ಷಣಿಕವಾಗಿ ಸಹಾಯ ನೀಡುತ್ತಿರುವ ಡಾಕ್ಟರ್ ಎಚ್ಎಸ್ ಶೆಟ್ಟಿ ಅವರು ಎಂದು ಕೊಂಡಾಡಿದರು.

ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಸಂಸದ ಕೋಟ ಶ್ರೀನಿವಾಸ ಪೂಜಾರಿ, ಶಾಸಕ ಯಶ್‌ಪಾಲ್ ಸುವರ್ಣ, ಸಮೃದ್ಧ ಜನಸೇವಾ ಚಾರಿಟೆಬಲ್ ಟ್ರಸ್ಟ್‌ ಅಧ್ಯಕ್ಷ ಬಿ.ಎಸ್.ಸುರೇಶ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

ಪ್ರಶಸ್ತಿ ಪ್ರಧಾನ

ಕಾರ್ಯಕ್ರಮದಲ್ಲಿ ‘ಹೆಗ್ಗು೦ಜೆ ರಾಜೀವ ಶೆಟ್ಟಿ ವಿದ್ಯಾ ಪೋಷಕ್‌ ಪ್ರಶಸ್ತಿ’ ಪ್ರಧಾನ ಸಮಾರಂಭ ನಡೆಯಿತು. ಹಿರಿಯ ಶಿಕ್ಷಕರು ಹಾಗೂ ಯಕ್ಷಗಾನ ಪ್ರಸಂಗಕರ್ತರಾದ ಕಂದಾವರ ರಘುರಾಮ ಶೆಟ್ಟಿ ಅವರಿಗೆ ಈ ಬಾರಿ ಪ್ರಶಸ್ತಿ ಪ್ರದಾನವಾಯಿತು.

ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೇಬಲ್ ಟ್ರಸ್ಟ್​​​ನ ಅಧ್ಯಕ್ಷರಾದ ಎಚ್​. ಎಸ್. ಶೆಟ್ಟಿ ,ಉಪಾಧ್ಯಕ್ಷರಾದ ಹಾಲಾಡಿ ನಾಗರಾಜ ಶೆಟ್ಟಿ, ಕಾರ್ಯದರ್ಶಿ ಡಾ. ಸುಮನಾ ಶೆಟ್ಟಿ ಈ ಸಮಾಜಸೇವೆಯ ಬೆನ್ನೆಲುಬಾಗಿ ನಿಂತಿದ್ದಾರೆ. ಮೈಸೂರು ಮರ್ಕಂಟೈಲ್ ಕಂಪನಿ ಲಿಮಿಟೆಡ್ ಬೆಂಗಳೂರು, ಮೈಸೂರು ಗ್ರೀನ್ ಕಂಪನಿ ಪ್ರೈವೇಟ್ ಲಿಮಿಟೆಡ್ ಬೆಂಗಳೂರು ಮೈಸೂರು ಸೈನ್ಸ್ & ಟಿಕ್ನಾಲಜಿ ಸರ್ವೀಸಸ್ ಪ್ರೈವೇಟ್ ಲಿಮಿಟೆಡ್ ಕಾರ್ಯಕ್ರಮದ ಪೋಷಕ ಸಂಸ್ಥೆಗಳಾಗಿವೆ.

ಸಮಾಜ ಸೇವೆಯ ರೂವಾರಿ ಡಾ.ಎಚ್​​ ಎಸ್​ ಶೆಟ್ಟಿ

ಉಡುಪಿ ಜಿಲ್ಲೆ ಕುಂದಾಪುರ ತಾಲೂಕಿನ ಹಾಲಾಡಿಯಲ್ಲಿ ಜನಿಸಿದ ಡಾ.ಎಚ್‌.ಎಸ್‌.ಶೆಟ್ಟಿ ಅವರು ಹೋಟೆಲ್‌ ಉದ್ಯಮಿಯಾಗಿ ಹೆಸರು ಮಾಡಿದ್ದಾರೆ. ಜತೆಗೆ ಬಟ್ಟೆ ಮತ್ತು ಖಾದ್ಯ ತೈಲ ವಹಿವಾಟು, ಕೃಷಿ ಸಂಬಂಧಿ ಉತ್ಪನ್ನಗಳ ಮಾರಾಟ, ವಿದ್ಯುತ್‌ ಉತ್ಪಾದನೆ ಹೀಗೆ ಹಲವು ಕ್ಷೇತ್ರಗಳಲ್ಲಿ ಯಶಸ್ವೀ ಉದ್ಯಮಿ ಎನಿಸಿಕೊಂಡಿದ್ದಾರೆ.
ಮೈಸೂರು ಮರ್ಕೆಂಟೈಲ್‌ ಕಂಪನಿ ಲಿಮಿಟೆಡ್‌ ಸ್ಥಾಪಿಸಿ, ಕೃಷಿ ಉತ್ಪನ್ನಗಳನ್ನು ರಫ್ತು ಮಾಡುತ್ತ ರೈತರಿಗೆ ನೆರವಾಗುತ್ತಿರುವ ಇವರಿಗೆ ಆರು ಬಾರಿ ಬೆಸ್ಟ್‌ ಎಕ್ಸ್‌ಪೋರ್ಟ್‌ ಅವಾರ್ಡ್‌ ಲಭಿಸಿದೆ. ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೇಬಲ್‌ ಟ್ರಸ್ಟ್‌ ಸ್ಥಾಪಿಸಿ, ಸರ್ಕಾರಿ ಶಾಲೆ ಮತ್ತು ಆಸ್ಪತ್ರೆಗಳ ಅಭಿವೃದ್ಧಿಗೆ ಅಪಾರ ಕೊಡುಗೆ ನೀಡುತ್ತಿದ್ದಾರೆ. ಡಾ. ಎಚ್‌.ಎಸ್‌. ಶೆಟ್ಟಿ (Dr HS Shetty) ಅವರಿಗೆ ಇತ್ತೀಚೆಗೆ ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ 23ನೇ ಘಟಿಕೋತ್ಸವದಲ್ಲಿ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಗಿತ್ತು.

Continue Reading

ಪ್ರಮುಖ ಸುದ್ದಿ

Asia Cup 2024 : ಮಹಿಳಾ ಏಷ್ಯಾಕಪ್ ಟೂರ್ನಿಗೆ ಭಾರತ ತಂಡ ಪ್ರಕಟ

Asia Cup 2024: ಆತಿಥೇಯ ಶ್ರೀಲಂಕಾ, ಬಾಂಗ್ಲಾದೇಶ, ಪಾಕಿಸ್ತಾನ, ಮಲೇಷ್ಯಾ, ಥೈಲ್ಯಾಂಡ್, ನೇಪಾಳ ಮತ್ತು ಯುನೈಟೆಡ್ ಅರಬ್ ಎಮಿರೇಟ್ಸ್ ತಂಡಗಳು ಟೂರ್ನಿಯಲ್ಲಿ ಭಾಗವಹಿಸಲಿವೆ. ಹರ್ಮನ್ ಪ್ರೀತ್ ಕೌರ್ ನೇತೃತ್ವದ ಭಾರತ ತಂಡ ‘ಎ’ ಗುಂಪಿನಲ್ಲಿ ಪಾಕಿಸ್ತಾನ, ನೇಪಾಳ ಮತ್ತು ಯುಎಇ ತಂಡಗಳೊಂದಿಗೆ ಸ್ಥಾನ ಪಡೆದಿದೆ.

VISTARANEWS.COM


on

Asia Cup 2024
Koo

ನವದೆಹಲಿ: 2024ರ ಆವೃತ್ತಿಯ ಮಹಿಳೆಯರ ಏಷ್ಯಾ ಕಪ್ ಟಿ20 ಕ್ರಿಕೆಟ್​ ಟೂರ್ನಿಗೆ (Asia Cup 2024) ಭಾರತ ತಂಡವನ್ನು ಶನಿವಾರ (ಜುಲೈ 6) ಪ್ರಕಟಿಸಿದೆ. ಪಂದ್ಯಾವಳಿ ಜುಲೈ 19 ರಿಂದ 28 ರವರೆಗೆ ಶ್ರೀಲಂಕಾದಲ್ಲಿ ನಡೆಯಲಿದೆ. ಮಹಿಳಾ ಏಷ್ಯಾಕಪ್​​ನ ಒಂಬತ್ತನೇ ಆವೃತ್ತಿಯಲ್ಲಿ ಒಟ್ಟು 8 ತಂಡಗಳು ಭಾಗವಹಿಸಲಿವೆ. ಭಾರತ ಹಾಲಿ ಚಾಂಪಿಯನ್ ಆಗಿದ್ದು ಪ್ರಶಸ್ತಿಯನ್ನು ಉಳಿಸಿಕೊಳ್ಳಲು ಎದುರು ನೋಡುತ್ತಿದೆ. ಕಳೆದ ಆವೃತ್ತಿಯ ಫೈನಲ್​​ನಲ್ಲಿ ಭಾರತ ಬಾಂಗ್ಲಾದೇಶವನ್ನು 8 ವಿಕೆಟ್​ಗಳಿಂದ ಸೋಲಿಸಿ ಪ್ರಶಸ್ತಿ ಗೆದ್ದಿತ್ತು. ಭಾರತ ತಂಡ ಮುಂಬರುವ ಆವೃತ್ತಿಯಲ್ಲೂ ಗೆಲುವಿನ ನೆಚ್ಚಿನ ತಂಡವಾಗಿದೆ.

ಆತಿಥೇಯ ಶ್ರೀಲಂಕಾ, ಬಾಂಗ್ಲಾದೇಶ, ಪಾಕಿಸ್ತಾನ, ಮಲೇಷ್ಯಾ, ಥೈಲ್ಯಾಂಡ್, ನೇಪಾಳ ಮತ್ತು ಯುನೈಟೆಡ್ ಅರಬ್ ಎಮಿರೇಟ್ಸ್ ತಂಡಗಳು ಟೂರ್ನಿಯಲ್ಲಿ ಭಾಗವಹಿಸಲಿವೆ. ಹರ್ಮನ್ ಪ್ರೀತ್ ಕೌರ್ ನೇತೃತ್ವದ ಭಾರತ ತಂಡ ‘ಎ’ ಗುಂಪಿನಲ್ಲಿ ಪಾಕಿಸ್ತಾನ, ನೇಪಾಳ ಮತ್ತು ಯುಎಇ ತಂಡಗಳೊಂದಿಗೆ ಸ್ಥಾನ ಪಡೆದಿದೆ.

2024ರ ಮಹಿಳಾ ಏಷ್ಯಾಕಪ್ ಟಿ20 ಟೂರ್ನಿಯಲ್ಲಿ ಭಾರತ ತಂಡವನ್ನು ಹರ್ಮನ್​ಪ್ರೀತ್​ ಕೌರ್ ಮುನ್ನಡೆಸಲಿದ್ದಾರೆ. ಈ ವಾರದ ಆರಂಭದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಟಿ 20 ಪಂದ್ಯದ ಸಮಯದಲ್ಲಿ ಗಾಯಗೊಂಡ ರಿಚಾ ಘೋಷ್ ಕೂಡ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಪ್ರಸ್ತುತ ದಕ್ಷಿಣ ಆಫ್ರಿಕಾ ವಿರುದ್ಧ ಮೂರು ಪಂದ್ಯಗಳ ಸರಣಿಯನ್ನು ಆಡುತ್ತಿರುವ ತಂಡದಿಂದ ಇಬ್ಬರು ಆಟಗಾರ್ತಿಯರನ್ನು ಕೈಬಿಡಲಾಗಿದೆ. ಅಮನ್ಜೋತ್ ಕೌರ್ ಮತ್ತು ಶಬ್ನಮ್​ ಮೊಹಮ್ಮದ್ ಶಕೀಲ್ ಅವಕಾಶ ಪಡೆದಿದ್ದಾರೆ. ಹರ್ಮನ್ ಪ್ರೀತ್ ಸಿಂಗ್ ತಂಡವನ್ನು ಮುನ್ನಡೆಸಲಿದ್ದು, ಆರಂಭಿಕ ಬ್ಯಾಟರ್​ ಸ್ಮೃತಿ ಮಂದಾನ ಉಪನಾಯಕಿಯಾಗಿದ್ದಾರೆ.

ಇದನ್ನೂ ಓದಿ: ZIM vs IND : ಜಿಂಬಾಬ್ವೆ ವಿರುದ್ಧ 13 ರನ್​ಗಳಿಂದ ಸೋತ ವಿಶ್ವ ವಿಜೇತ ಭಾರತ ತಂಡ

ಶ್ವೇತಾ ಸೆಹ್ರಾವತ್, ಸೈಕಾ ಇಶಾಕ್, ತನುಜಾ ಕನ್ವರ್ ಮತ್ತು ಮೇಘನಾ ಸಿಂಗ್ ಎಂಬ ನಾಲ್ವರು ಮೀಸಲು ಆಟಗಾರರನ್ನು ಆಯ್ಕೆದಾರರು ಹೆಸರಿಸಿದ್ದಾರೆ. ಭಾರತ ತಂಡ ಜುಲೈ 19ರಂದು ಪಾಕಿಸ್ತಾನ ವಿರುದ್ಧ ತನ್ನ ಅಭಿಯಾನ ಆರಂಭಿಸಲಿದ್ದು, ಜುಲೈ 21 ಮತ್ತು 23ರಂದು ಕ್ರಮವಾಗಿ ಯುಎಇ ಮತ್ತು ನೇಪಾಳ ವಿರುದ್ಧ ಸೆಣಸಲಿದೆ.

ಭಾರತ ತಂಡ:

ಹರ್ಮನ್​​ಪ್ರೀತ್​ ಕೌರ್ (ನಾಯಕಿ), ಸ್ಮೃತಿ ಮಂದಾನ (ಉಪನಾಯಕಿ), ಶಫಾಲಿ ವರ್ಮಾ, ದೀಪ್ತಿ ಶರ್ಮಾ, ಜೆಮಿಮಾ ರೋಡ್ರಿಗಸ್, ರಿಚಾ ಘೋಷ್ (ವಿಕೆಟ್ ಕೀಪರ್), ಉಮಾ ಚೆಟ್ರಿ (ವಿಕೆಟ್ ಕೀಪರ್), ಪೂಜಾ ವಸ್ತ್ರಾಕರ್, ಅರುಂಧತಿ ರೆಡ್ಡಿ, ರೇಣುಕಾ ಸಿಂಗ್ ಠಾಕೂರ್, ದಯಾಳನ್ ಹೇಮಲತಾ, ಆಶಾ ಶೋಭನಾ, ರಾಧಾ ಯಾದವ್, ಶ್ರೇಯಂಕಾ ಪಾಟೀಲ್, ಸಜನಾ ಸಜೀವನ್.

ಮೀಸಲು ಆಟಗಾರರು: ಶ್ವೇತಾ ಸೆಹ್ರಾವತ್, ಸೈಕಾ ಇಶಾಕ್, ತನುಜಾ ಕನ್ವರ್, ಮೇಘನಾ ಸಿಂಗ್

ಮಹಿಳಾ ಏಷ್ಯಾಕಪ್ ಟಿ20 ವಿಶ್ವಕಪ್ 2024ರ ವೇಳಾಪಟ್ಟಿ

ಜುಲೈ19ರಂದು , ಭಾರತ-ಪಾಕಿಸ್ತಾನ, ರಣಗಿರಿ ಡಂಬುಲ್ಲಾ ಅಂತಾರಾಷ್ಟ್ರೀಯ ಕ್ರೀಡಾಂಗಣ, ಡಂಬುಲ್ಲಾ
ಜುಲೈ 21ರಂದು, ಭಾರತ-ಯುಎಇ, ರಣಗಿರಿ ಡಂಬುಲ್ಲಾ ಅಂತಾರಾಷ್ಟ್ರೀಯ ಕ್ರೀಡಾಂಗಣ, ಡಂಬುಲ್ಲಾ
ಜುಲೈ 23 ರಂದು , ಭಾರತ-ನೇಪಾಳ, ರಣಗಿರಿ ಡಂಬುಲ್ಲಾ ಅಂತಾರಾಷ್ಟ್ರೀಯ ಕ್ರೀಡಾಂಗಣ, ಡಂಬುಲ್ಲಾ

Continue Reading
Advertisement
KAS
ಕರ್ನಾಟಕ4 mins ago

KAS: ಕೆಎಎಸ್‌ ಅಭ್ಯರ್ಥಿಗಳಿಗೆ ಗುಡ್‌ ನ್ಯೂಸ್;‌ ನೇಮಕಾತಿಗೆ ಅರ್ಜಿ ಸಲ್ಲಿಸಲು ವಿಶೇಷ ಅವಕಾಶ, ಇಲ್ಲಿದೆ ಮಾಹಿತಿ

Mid Day Meal
ದೇಶ54 mins ago

Mid Day Meal: ಮಕ್ಕಳ ಬಿಸಿಯೂಟದಲ್ಲೂ ಕಳ್ಳಾಟ, ವಿದ್ಯಾರ್ಥಿಗಳಿಗೆ ಸಿಗೋದು ಬರೀ ಅನ್ನ-ಅರಿಶಿಣ; Video ಇದೆ

Dr HS Shetty: Rs 7 crore spent on charity; Businessman Dr. HS Shetty
ಪ್ರಮುಖ ಸುದ್ದಿ1 hour ago

Dr HS Shetty : ದಾನಗಳಿಗಾಗಿಯೇ ವರ್ಷದಲ್ಲಿ 7 ಕೋಟಿ ರೂ. ವಿನಿಯೋಗ

Vasishtha Simha starrer VIP Kannada movie
ಕರ್ನಾಟಕ1 hour ago

Kannada New Movie: ಖ್ಯಾತ ಗಾಯಕಿ ಕೆ.ಎಸ್.ಚಿತ್ರಾ ಕಂಠಸಿರಿಯಲ್ಲಿ ವಸಿಷ್ಠ ಸಿಂಹ ಅಭಿನಯದ ‘ವಿಐಪಿ’ ಚಿತ್ರದ ಹಾಡು

Asia Cup 2024
ಪ್ರಮುಖ ಸುದ್ದಿ2 hours ago

Asia Cup 2024 : ಮಹಿಳಾ ಏಷ್ಯಾಕಪ್ ಟೂರ್ನಿಗೆ ಭಾರತ ತಂಡ ಪ್ರಕಟ

Viral Video
Latest2 hours ago

Viral Video: ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪ; ಪ್ರಾಂಶುಪಾಲರನ್ನು ಕುರ್ಚಿ ಸಹಿತ ಹೊರಗೆಳೆದ ಸಿಬ್ಬಂದಿ

Kashmir Encounter
ದೇಶ2 hours ago

Kashmir Encounter: ಕಾಶ್ಮೀರದಲ್ಲಿ ಸೇನೆ ಭರ್ಜರಿ ಬೇಟೆ; ನಾಲ್ವರು ಉಗ್ರರ ಹತ್ಯೆ, ಇಬ್ಬರು ಯೋಧರು ಹುತಾತ್ಮ

Viral Video
Latest2 hours ago

Viral Video : ಹೀಗೆಲ್ಲಾ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸುತ್ತಾರಾ…? ವಿಡಿಯೊ ನೋಡಿ

Viral News
Latest2 hours ago

Viral News: ಆಸ್ಪತ್ರೆಯಲ್ಲಿ ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆ ವೇಳೆ ಅಚಾತುರ್ಯ; ದೃಷ್ಟಿ ಕಳೆದುಕೊಂಡ 16 ರೋಗಿಗಳು

Dengue cases in Karnataka
ಪ್ರಮುಖ ಸುದ್ದಿ2 hours ago

Dengue cases in Karnataka: ರಾಜ್ಯದಲ್ಲಿಂದು 175 ಡೆಂಗ್ಯೂ ಕೇಸ್‌ಗಳು ಪತ್ತೆ; ಸಕ್ರಿಯ ಪ್ರಕರಣಗಳ ಸಂಖ್ಯೆ 352ಕ್ಕೆ ಏರಿಕೆ!

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ5 hours ago

Karnataka Weather : ಚಾರಣಪ್ರಿಯರಿಗೆ ಶಾಕ್‌; ಭಾರಿ ಮಳೆಯಿಂದಾಗಿ ಈ ಜಾಗಗಳಿಗೆ ಟ್ರೆಕ್ಕಿಂಗ್‌ ನಿಷೇಧ

Murder case
ಯಾದಗಿರಿ7 hours ago

Murder case : ಯಾದಗಿರಿಯಲ್ಲಿ ಹಸುಗೂಸನ್ನು ಬಾವಿಗೆ ಎಸೆದು ಕೊಂದರು ಹಂತಕರು

karnataka Rain
ಮಳೆ8 hours ago

Karnataka Rain : ಭಾರಿ ಗಾಳಿ- ಮಳೆಗೆ ಹಾರಿದ ಅಂಗಡಿಯ ತಗಡು; ಮಾಗುಂಡಿ-ಬಾಳೆಹೊನ್ನೂರು ಮಾರ್ಗ ಬಂದ್

Food Poisoning
ರಾಯಚೂರು11 hours ago

Food Poisoning : ಮೊರಾರ್ಜಿ ವಸತಿ ಶಾಲೆ ಅವ್ಯವಸ್ಥೆ; ಊಟ ಸೇವಿಸಿದ 25ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

Wild Animal Attack Elephant attack
ರಾಮನಗರ12 hours ago

Wild Animal Attack : ತೋಟದಲ್ಲಿ ನೀರು ಹಾಯಿಸುತ್ತಿದ್ದವನ ತುಳಿದು ಸಾಯಿಸಿದ ಆನೆ

karnataka Weather Forecast
ಮಳೆ17 hours ago

Karnataka Weather : ಕರಾವಳಿ, ಮಲೆನಾಡಿನಲ್ಲಿ ಇಂದು ನಾನ್‌ ಸ್ಟಾಪ್‌ ಮಳೆ; ಬೆಂಗಳೂರಲ್ಲಿ ಹೇಗೆ?

karnataka Weather Forecast
ಮಳೆ1 day ago

Karnataka Weather: ಧಾರಾಕಾರ ಮಳೆಗೆ ಜನರ ಒದ್ದಾಟ- ಸೇತುವೆಗಳು ಮುಳುಗಿ ಪರದಾಟ; ಶಾಲಾ-ಕಾಲೇಜುಗಳಿಗೆ ರಜೆ

Lovers Fighting
ಚಿಕ್ಕಬಳ್ಳಾಪುರ1 day ago

Lovers Fighting: ಪ್ರೀತಿಸಿ ಕೈಕೊಟ್ಟವನಿಗೆ ನಡುರಸ್ತೆಯಲ್ಲೇ ಚಳಿ ಬಿಡಿಸಿದ ಗರ್ಭಿಣಿ

Medical negligence
ದಾವಣಗೆರೆ1 day ago

Medical negligence: ಸಿಸೇರಿಯನ್ ಮಾಡುವಾಗ ಶಿಶುವಿನ ಮರ್ಮಾಂಗವನ್ನೇ ಕತ್ತರಿಸಿ ಸಾಯಿಸಿದ ವೈದ್ಯ!

karnataka rain
ಮಳೆ1 day ago

Karnataka Rain: ಮಳೆಗೆ ಮನೆಗಳಿಗೆ ನುಗ್ಗುತ್ತಿವೆ ಹಾವುಗಳು! ಕುಸಿದು ಬಿತ್ತು ಮನೆಗಳು

ಟ್ರೆಂಡಿಂಗ್‌