Salary Hike: ಸರ್ಕಾರಿ ನೌಕರರ ವೇತನ ಏರಿಕೆ ಸದ್ಯಕ್ಕಿಲ್ಲ: ನೌಕರರ ಸಂಬಳ ನುಂಗಿದ ʼಗ್ಯಾರಂಟಿʼ! - Vistara News

ಪ್ರಮುಖ ಸುದ್ದಿ

Salary Hike: ಸರ್ಕಾರಿ ನೌಕರರ ವೇತನ ಏರಿಕೆ ಸದ್ಯಕ್ಕಿಲ್ಲ: ನೌಕರರ ಸಂಬಳ ನುಂಗಿದ ʼಗ್ಯಾರಂಟಿʼ!

Salary Hike: ಸದ್ಯ ನೌಕರರ ವೇತನ ಪರಿಷ್ಕರಣೆ ಅಸಾಧ್ಯ ಎಂದು ಹಣಕಾಸು ಇಲಾಖೆಯ ಅಧಿಕಾರಿಗಳು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಹಾಗೂ ಸಚಿವ ಸಂಪುಟಕ್ಕೆ ಮನವರಿಕೆ ಮಾಡಿಕೊಟ್ಟಿದ್ದಾರೆ. 7ನೇ ವೇತನ ಆಯೋಗದ ಶಿಫಾರಸುಗಳನ್ನು ಜಾರಿ ಮಾಡದ ಸರ್ಕಾರದ ಧೋರಣೆ ಖಂಡಿಸಿ ರಾಜ್ಯ ಸರ್ಕಾರಿ ನೌಕರರು ಇದೇ ಜುಲೈ 29ರಿಂದ ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸಲು ನಿರ್ಧರಿಸಿದ್ದಾರೆ.

VISTARANEWS.COM


on

salary hike cm siddaramaiah
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ನಿನ್ನೆ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲೂ (Cabinet meeting) ಸರಕಾರಿ ನೌಕರರ (Govt Employees) ವೇತನ ಹೆಚ್ಚಳದ (Salary Hike) ಬಗ್ಗೆ ಯಾವುದೇ ತೀರ್ಮಾನ ತೆಗೆದುಕೊಂಡಿಲ್ಲ. ಈ ಸಲವಾದರೂ ಏರಿಕೆ ಆಗಬಹುದು ಎಂಬ ನಿರೀಕ್ಷೆಯಲ್ಲಿದ್ದವರಿಗೆ ಇದರಿಂದ ನಿರಾಸೆಯಾಗಿದೆ. ಗ್ಯಾರಂಟಿ ಯೋಜನೆಗಳಿಗೆ (guarantee Schemes) ಹೆಚ್ಚಿನ ಹಣ ಹರಿದುಹೋಗುತ್ತಿರುವುದರಿಂದ ಹಾಗೂ ವಿವಿಧ ಮೂಲಗಳಿಂದ ನಿರೀಕ್ಷಣ ಪ್ರಮಾಣದ ಹಣಕಾಸು (Finance) ಬರುತ್ತಿಲ್ಲವಾದ್ದರಿಂದ ಸದ್ಯ ನೌಕರರ ವೇತನ ಪರಿಷ್ಕರಣೆ ಅಸಾಧ್ಯ ಎಂದು ಹಣಕಾಸು ಇಲಾಖೆಯ ಅಧಿಕಾರಿಗಳು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಹಾಗೂ ಸಚಿವ ಸಂಪುಟಕ್ಕೆ ಮನವರಿಕೆ ಮಾಡಿಕೊಟ್ಟಿದ್ದಾರೆ.

ಜಿಎಸ್‌ಟಿ ಸೇರಿ, ವಿವಿಧ ಮೂಲಗಳಿಂದ ನಿರೀಕ್ಷಿತ ಪ್ರಮಾಣದಲ್ಲಿ ತೆರಿಗೆ ಸಂಗ್ರಹ ಆಗುತ್ತಿಲ್ಲ. ಗ್ಯಾರಂಟಿ ಯೋಜನೆಗಳಿಗೆ ಹೆಚ್ಚಿನ ಹಣ ಹರಿದುಹೋಗುತ್ತಿದೆ. ಹೀಗಾಗಿ ವೇತನ ಪರಿಷ್ಕರಣೆ ಸದ್ಯದ ಮಟ್ಟಿಗೆ ಸಾಧ್ಯವಾಗದು ಎಂದು ಅಧಿಕಾರಿಗಳು ಕಳೆದ ಗುರುವಾರ ನಡೆದ ಸಂಪುಟ ಸಭೆಯಲ್ಲಿ ಪಿಪಿಟಿ ಪ್ರಾತ್ಯಕ್ಷಿಕೆ ಮೂಲಕ ವಿವರಿಸಿದರು.

ವೇತನ ಪರಿಷ್ಕರಣೆ, ಹೊಸ ಪಿಂಚಣಿ ಯೋಜನೆಯಲ್ಲಿ ಇರುವವರನ್ನು ಹಳೇ ಪಿಂಚಣಿ ಯೋಜನೆಯ ವ್ಯಾಪ್ತಿಗೆ ತರಬೇಕು ಎನ್ನುವ ಬೇಡಿಕೆ ಸಹ ಈಡೇರಿಸಲು ಸಾಧ್ಯವಾಗದು. ಈ ಬೇಡಿಕೆ ಈಡೇರಿಸಿದರೆ ಪ್ರತಿ ತಿಂಗಳು ವಿವಿಧ ಬಾಬುಗಳಿಗೆ ಹಣವನ್ನು ಹೊಂದಿಸಲು ಕಷ್ಟ ಆಗಬಹುದು ಎಂದು ಅಧಿಕಾರಿಗಳ ತಂಡ ಸಂಪುಟ ಸದಸ್ಯರಿಗೆ ವಿವರಿಸಿದೆ.

ಹಣದ ಕೊರತೆ ಇದೆ ಎಂದ ಮಾತ್ರಕ್ಕೆ ವೇತನ ಪರಿಷ್ಕರಣೆ ಮಾಡದೇ ಇರಲು ಸಾಧ್ಯವಿಲ್ಲ. ತಕ್ಷಣಕ್ಕೆ ಆಗದೇ ಇದ್ದರೂ ಮುಂದೆ ಮಾಡಲೇಬೇಕಾಗುತ್ತದೆ ಎಂದು ಆರ್ಥಿಕ ಇಲಾಖೆ ಮುಖ್ಯಸ್ಥರು ತಿಳಿಸಿದ್ದಾರೆ. ಈ ಕುರಿತು ಮುಂದಿನ ದಿನಗಳಲ್ಲಿ ಸೂಕ್ತ ಕ್ರಮ ತೆಗೆದುಕೊಳ್ಳುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.

ಶೇ 27.50ರಷ್ಟು ಫಿಟ್‌ಮೆಂಟ್‌ಗೆ ಶಿಫಾರಸು: ರಾಜ್ಯ ಸರ್ಕಾರಿ ನೌಕರರ ವೇತನ ಪರಿಷ್ಕರಣೆಗಾಗಿ ರಚಿಸಲಾಗಿದ್ದ ನಿವೃತ್ತ ಮುಖ್ಯಕಾರ್ಯದರ್ಶಿ ಕೆ. ಸುಧಾಕರ್ ರಾವ್ ನೇತೃತ್ವದ ಆಯೋಗ 244 ಪುಟಗಳ ವರದಿಯನ್ನು ಮಾರ್ಚ್ 16ರಂದು ಮುಖ್ಯಮಂತ್ರಿಗೆ ಸಲ್ಲಿಸಿತ್ತು. ಏಳನೇ ವೇತನ ಆಯೋಗವು ಶೇ. 31ರಷ್ಟು ತುಟ್ಟಿಭತ್ಯೆಯನ್ನು ಮೂಲವೇತನದಲ್ಲಿ ವಿಲೀನಗೊಳಿಸುವ ಜತೆಗೆ, ಶೇ 27.50ರಷ್ಟು ಫಿಟ್‌ಮೆಂಟ್ ನೀಡುವಂತೆ ಶಿಫಾರಸು ಮಾಡಿತ್ತು. ಶಿಫಾರಸು ಮಾಡಿದ ದಿನದಿಂದಲೇ ಚುನಾವಣೆಯ ನೀತಿ ಸಂಹಿತೆ ಆರಂಭವಾದ ಕಾರಣ ಶಿಫಾರಸು ಜಾರಿ ಸಾಧ್ಯವಾಗಿರಲಿಲ್ಲ. ಈಗ ನೀತಿ ಸಂಹಿತೆ ಮುಗಿದು ತಿಂಗಳು ಕಳೆದರೂ ಕ್ರಮ ಕೈಗೊಂಡಿಲ್ಲ ಎನ್ನುವುದು ನೌಕರರ ಆರೋಪ.

29ರಿಂದ ಬೀದಿಗಿಳಿಯಲಿರುವ ಸರ್ಕಾರಿ ನೌಕರರು

7ನೇ ವೇತನ ಆಯೋಗದ ಶಿಫಾರಸುಗಳನ್ನು ಜಾರಿ ಮಾಡದ ಸರ್ಕಾರದ ಧೋರಣೆ ಖಂಡಿಸಿ ರಾಜ್ಯ ಸರ್ಕಾರಿ ನೌಕರರು ಇದೇ ಜುಲೈ 29ರಿಂದ ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸಲು ನಿರ್ಧರಿಸಿದ್ದಾರೆ. ಆಯೋಗ ವರದಿ ನೀಡಿ ನಾಲ್ಕು ತಿಂಗಳಾಗುತ್ತಾ ಬಂದರೂ ಆಯೋಗದ ಶಿಫಾರಸುಗಳ ಜಾರಿಗೆ ಸರ್ಕಾರ ಮೀನಮೇಷ ಎಣಿಸುತ್ತಾ ಬಂದಿದೆ. ರಾಜ್ಯದ ಎಲ್ಲ ಇಲಾಖೆಗಳ ನೌಕರರು ಹೋರಾಟ ಆರಂಭಿಸುವಂತೆ ಒತ್ತಡ ಹಾಕುತ್ತಿದ್ದಾರೆ. ಜುಲೈ 7ರಂದು ಚಿಕ್ಕಮಗಳೂರಿನಲ್ಲಿ ನಡೆಯುವ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯ ಕಾರ್ಯಕಾರಣಿಯಲ್ಲಿ ಈ ಕುರಿತು ಅಂತಿಮ ನಿರ್ಧಾರ ತೆಗೆದುಕೊಂಡು, ಮುಷ್ಕರದ ದಿನಾಂಕ ಘೋಷಣೆ ಮಾಡಲಾಗುತ್ತದೆ ಎಂದು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ ತಿಳಿಸಿದ್ದಾರೆ.

ವೇತನ ಆಯೋಗದ ಶಿಫಾರಸುಗಳ ಜಾರಿ ಜೊತೆಗೆ ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿದ್ದ ಭರವಸೆಯಂತೆ ಹೊಸ ಪಿಂಚಣಿ ಯೋಜನೆ ರದ್ದು ಮಾಡಬೇಕು. ಹಳೇ ಪಿಂಚಣಿ ಯೋಜನೆ
ಮರು ಜಾರಿಗೊಳಿಸಬೇಕು. ನೌಕರರಿಗೆ ನಗದುರಹಿತ ಚಿಕಿತ್ಸಾ ವ್ಯವಸ್ಥೆ ಕಲ್ಪಿಸಲು ಆರೋಗ್ಯ ಸಂಜೀವಿನಿ ಯೋಜನೆ ಜಾರಿಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆ ಇಟ್ಟುಕೊಂಡು ಮುಷ್ಕರ ಆರಂಭಿಸಲಾಗುತ್ತಿದೆ.

ಇದನ್ನೂ ಓದಿ: Govt Employees: ಸರ್ಕಾರಿ ನೌಕರರಿಗೆ ಅಲರ್ಟ್‌; ಬೆಳಗ್ಗೆ 9.15ಕ್ಕೆ ಆಫೀಸ್‌ ತಲುಪದಿದ್ರೆ ಅರ್ಧ ದಿನ ರಜೆ!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಭವಿಷ್ಯ

Dina Bhavishya : ಇತರರ ವಿರುದ್ಧ ದ್ವೇಷ ಕಾರುತ್ತಾ ಹೋದರೆ ಹೆಚ್ಚಾಗುತ್ತೆ ಈ ರಾಶಿಯವರ ಮಾನಸಿಕ ಒತ್ತಡ

Dina Bhavishya: ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಆಷಾಢ ಮಾಸ, ಶುಕ್ಲ ಪಕ್ಷದ ತದಿಗೆ ಅಹೋರಾತ್ರಿ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

By

dina Bhavishya
Koo

ಚಂದ್ರನು ಸೋಮವಾರವೂ ಸಿಂಹ ರಾಶಿಯಲ್ಲೇ ನೆಲಸಲಿದ್ದಾನೆ. ಇದರಿಂದಾಗಿ ವೃಷಭ, ಕಟಕ, ಕನ್ಯಾ, ತುಲಾ, ಮಕರ, ಕುಂಭ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಇಂದಿನ ದಿನ ಭವಿಷ್ಯವನ್ನು (Dina Bhavishya) ನೋಡುವುದಾದರೆ, ಮಿಥುನ ರಾಶಿಯವರು ಇತರರ ವಿರುದ್ಧ ದ್ವೇಷ ಕಾರುತ್ತಾ ನಿಮ್ಮ ಮಾನಸಿಕ ಒತ್ತಡವನ್ನು ಹೆಚ್ಚು ಮಾಡಿಕೊಳ್ಳುವುದು ಬೇಡ. ನಕರಾತ್ಮಕ ಆಲೋಚನೆಗಳು ನಿಮ್ಮನ್ನು ಘಾಸಿ ಮಾಡಬಹುದು. ಸಿಂಹ ರಾಶಿಯವರು ಸಕಾರಾತ್ಮಕ ಆಲೋಚನೆಗಳಿಂದ ಕೆಲಸ ಕಾರ್ಯಗಳಲ್ಲಿ ಯಶಸ್ಸು ಸಿಗಲಿದೆ. ಅನಿವಾರ್ಯ ಕಾರಣಗಳಿಂದ ಖರ್ಚು ಹೆಚ್ಚಾಗಲಿದೆ. ಮನೆಯ ಸದಸ್ಯರ ವರ್ತನೆ ನಿಮ್ಮನ್ನು ಮಾನಸಿಕವಾಗಿ ತೊಂದರೆಗಳಾಗುವಂತೆ ಮಾಡುವ ಸಾಧ್ಯತೆ ಇದೆ. ಇದೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (8-07-2024)

ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಆಷಾಢ ಮಾಸ, ಶುಕ್ಲ ಪಕ್ಷ.
ತಿಥಿ: ತದಿಗೆ ಅಹೋರಾತ್ರಿ ವಾರ: ಸೋಮವಾರ
ನಕ್ಷತ್ರ: ಪುಷ್ಯಾ 06:01 ಯೋಗ: ವಜ್ರ 26:04
ಕರಣ: ತೈತುಲ 17:28 ದಿನದ ವಿಶೇಷ: ಗೆಂಜಿಗಸೂರು ಶಂಕರ ಭಾರತಿಗಳ ಆರಾಧನೆ, ಮೊಹರಂ ಆರಂಭ

ಸೂರ್ಯೋದಯ : 05:59   ಸೂರ್ಯಾಸ್ತ : 06:50

ರಾಹುಕಾಲ: ಬೆಳಗ್ಗೆ 7.30 ರಿಂದ 9.00
ಗುಳಿಕಕಾಲ: ಮಧ್ಯಾಹ್ನ 1.30 ರಿಂದ 3.00

ಯಮಗಂಡಕಾಲ: ಬೆಳಗ್ಗೆ 10.30 ರಿಂದ 12.00

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ಆರೋಗ್ಯ ಮಧ್ಯಮವಾಗಿರಲಿದೆ. ಹಣಕಾಸು ಬಾಕಿ ವ್ಯವಹಾರಗಳು ಪೂರ್ಣವಾಗುವುದು. ಸಂಗಾತಿಯ ಆರೋಗ್ಯದ ಕಡೆಗೆ ಗಮನ ಇರಲಿ. ಆಮಂತ್ರಣ ಸಿಗುವ ಸಾಧ್ಯತೆ ಇದೆ. ಕುಟುಂಬದಲ್ಲಿ ಕಲಹಗಳಿಗೆ ಅವಕಾಶ ನೀಡದಂತೆ ಎಚ್ಚರಿಕೆ ಇರಲಿ. ಉದ್ಯೋಗಿಗಳಿಗೆ ಶುಭ ಫಲ.ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 5

Horoscope Today

ವೃಷಭ: ಆರ್ಥಿಕವಾಗಿ ಬಳಲುವ ಸಾಧ್ಯತೆ ಇದೆ. ಬಿಡುವಿರದ ಕಾರ್ಯಕ್ರಮದ ಹೊರತಾಗಿಯೂ ಆರೋಗ್ಯ ಚೆನ್ನಾಗಿರುತ್ತದೆ. ವಾಹನ ಖರೀದಿ ವಿಚಾರವಾಗಿ ಯೋಚಿಸುವಿರಿ. ಈ ಹಿಂದೆ ನಡೆದ ಘಟನೆ ನೆನಪಿಸಿ ಕೊರಗುವುದು ಬೇಡ. ಸಹದ್ಯೋಗಿಗಳಿಂದ ಅಸಹಕಾರ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 4

Horoscope Today

ಮಿಥುನ: ಇತರರ ವಿರುದ್ಧ ದ್ವೇಷ ಕಾರುತ್ತಾ ನಿಮ್ಮ ಮಾನಸಿಕ ಒತ್ತಡವನ್ನು ಹೆಚ್ಚು ಮಾಡಿಕೊಳ್ಳುವುದು ಬೇಡ. ನಕರಾತ್ಮಕ ಆಲೋಚನೆಗಳು ನಿಮ್ಮನ್ನು ಘಾಸಿ ಮಾಡಬಹುದು. ಆರೋಗ್ಯದ ಕುರಿತು ಕಾಳಜಿ ಇರಲಿ. ಉದ್ಯೋಗಿಗಳಿಗೆ ಶುಭಫಲ. ಆರ್ಥಿಕ ಪ್ರಗತಿ ಸಾಧಾರಣವಾಗಿರಲಿದೆ. ಕೌಟುಂಬಿಕವಾಗಿ ಶುಭಫಲ. ಅದೃಷ್ಟ ಸಂಖ್ಯೆ: 2

Horoscope Today

ಕಟಕ: ಅತಿಯಾದ ಉತ್ಸಾಹದಲ್ಲಿ ಅತಿರೇಕದ ಮಾತುಗಳು ಬೇಡ, ಭಾವನೆಗಳನ್ನು ನಿಯಂತ್ರಿಸಿ. ಹಣಕಾಸು ಪ್ರಗತಿ ಸಾಧಾರಣವಾಗಿರಲಿದೆ. ಕುಟುಂಬದ ಸದಸ್ಯರ ಬೆಂಬಲ ಸಿಗಲಿದೆ. ಆರೋಗ್ಯದ ಕುರಿತು ಕಾಳಜಿ ಇರಲಿ. ಗೊತ್ತಿಲ್ಲದಂತೆ ಸಮಯ ವ್ಯರ್ಥವಾಗುವ ಸಾಧ್ಯತೆ ಇದೆ. ಉದ್ಯೋಗಿಗಳಿಗೆ ಶುಭಫಲ. ಕೌಟುಂಬಿಕವಾಗಿ ಮಿಶ್ರಫಲ. ಅದೃಷ್ಟ ಸಂಖ್ಯೆ: 6

Horoscope Today

ಸಿಂಹ: ಸಕಾರಾತ್ಮಕ ಆಲೋಚನೆಗಳಿಂದ ಕೆಲಸ ಕಾರ್ಯಗಳಲ್ಲಿ ಯಶಸ್ಸು ಸಿಗಲಿದೆ. ಅನಿವಾರ್ಯ ಕಾರಣಗಳಿಂದ ಖರ್ಚು ಹೆಚ್ಚಾಗಲಿದೆ. ಮನೆಯ ಸದಸ್ಯರ ವರ್ತನೆ ನಿಮ್ಮನ್ನು ಮಾನಸಿಕವಾಗಿ ತೊಂದರೆಗಳಾಗುವಂತೆ ಮಾಡುವ ಸಾಧ್ಯತೆ ಇದೆ. ಪ್ರಯಾಣ ಬೆಳೆಸುವ ಸಾಧ್ಯತೆ ಇದೆ. ಉದ್ಯೋಗಿಗಳಿಗೆ ಶುಭಫಲ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 3

Horoscope Today

ಕನ್ಯಾ: ಆರೋಗ್ಯದ ಕಡೆಗೆ ಗಮನ ಹರಿಸಬೇಕು. ಅತಿಥಿಗಳ ಆಗಮನ ಸಂತಸ ತರುವುದು. ವಿವಾಹ ಆಕಾಂಕ್ಷಿಗಳಿಗೆ ಶುಭ ಸುದ್ದಿ ಸಿಗಲಿದೆ. ಪಾಲುದಾರಿಕೆ ವ್ಯವಹಾರದಲ್ಲಿ ತೊಡಗುವುದು ಬೇಡ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 2

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ಆರ್ಥಿಕವಾಗಿ ಬಳಲುವ ಸಾಧ್ಯತೆ, ಕೆಲಸ ಕಾರ್ಯಗಳು ನಿಧಾನಗತಿ ಇರಲಿದೆ. ತಾಳ್ಮೆಯಿಂದ ವರ್ತಿಸಿ. ನೆರೆಹೊರೆಯವರೊಂದಿಗೆ ವಿನಾಕಾರಣ ಜಗಳ ಬೇಡ. ಉದ್ಯೋಗಿಗಳಿಗೆ ಶುಭಫಲ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 5

Horoscope Today

ವೃಶ್ಚಿಕ : ಪ್ರಯತ್ನದಲ್ಲಿ ನಂಬಿಕೆ ಇಟ್ಟು ಕಾರ್ಯದಲ್ಲಿ ಮುನ್ನುಗ್ಗಿ ಯಶಸ್ಸು ಸಿಗಲಿದೆ. ಆರ್ಥಿಕವಾಗಿ ಲಾಭ ಇರಲಿದೆ. ಸಮಾರಂಭಗಳಲ್ಲಿ ಭಾಗವಹಿಸುವ ನಿರೀಕ್ಷೆ ಇದೆ. ಜನಪ್ರಿಯತೆ ಹೆಚ್ಚಾಗಲಿದೆ. ಪ್ರವಾಸದ ಕುರಿತು ಚರ್ಚೆ ಮಾಡುವಿರಿ. ಕುಟುಂಬದವರ ಸಹಕಾರ ಸಿಗಲಿದೆ. ಕೊಂಚ ಆರೋಗ್ಯದ ಕಡೆಗೆ ಗಮನ ಇರಲಿ. ಉದ್ಯೋಗಿಗಳಿಗೆ ಹೊಸ ಭರವಸೆ ಮೂಡಲಿದೆ. ಕೌಟುಂಬಿಕವಾಗಿ ಶುಭಫಲ. ಅದೃಷ್ಟ ಸಂಖ್ಯೆ: 7

Horoscope Today

ಧನಸ್ಸು: ಅತಿಯಾದ ಚಿಂತೆ, ಒತ್ತಡ ನಿಮ್ಮ ಆರೋಗ್ಯದ ಮೇಲೆ ದೈಹಿಕವಾಗಿ ಹಾಗೂ ಮಾನಸಿಕವಾಗಿ ಪರಿಣಾಮವನ್ನು ಬೀರಬಹುದು. ಆದಷ್ಟು ವಿಶ್ರಾಂತಿ ಪಡೆಯಿರಿ, ತಾಳ್ಮೆ ಇರಲಿ. ಆರ್ಥಿಕ ಪ್ರಗತಿ ಸಾಧಾರಣವಾಗಿರಲಿದೆ. ಉದ್ಯೋಗಿಗಳಿಗೆ ಶುಭಫಲ.ಕುಟುಂಬದ ಆಪ್ತರಿಂದ ಸಮಾಧಾನದ ಮಾತುಗಳು.ಕೌಟುಂಬಿಕವಾಗಿ ಶುಭಫಲ. ಅದೃಷ್ಟ ಸಂಖ್ಯೆ: 4

Horoscope Today

ಮಕರ: ಅನಿವಾರ್ಯ ಪ್ರಸಂಗಗಳು ನಿಮ್ಮನ್ನು ಒತ್ತಡಕ್ಕೆ ಒಳಗಾಗುವಂತೆ ಮಾಡಬಹುದು. ಸಭೆ ಸಮಾರಂಭಗಳಲ್ಲಿ ಭಾಗವಹಿಸುವ ಸಾಧ್ಯತೆ ಇದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಆರ್ಥಿಕವಾಗಿ ಪ್ರಗತಿ ಇರಲಿದೆ, ಹೂಡಿಕೆಯ ಕುರಿತು ಆಲೋಚನೆ ಮಾಡುವಿರಿ. ಹೊಸ ಸ್ನೇಹಿತರ ಪರಿಚಯವಾಗಲಿದೆ. ಉದ್ಯೋಗದ ಕುರಿತು ಆಲೋಚನೆ ಮಾಡುವಿರಿ. ಕೌಟುಂಬಿಕವಾಗಿ ಶುಭಫಲ. ಅದೃಷ್ಟ ಸಂಖ್ಯೆ: 4

Horoscope Today

ಕುಂಭ: ವಾಹನ ಚಾಲನೆ ಮಾಡುವಾಗ ಜಾಗರೂಕತೆಯಿಂದ ಚಾಲನೆ ಮಾಡಿ, ಅಪಘಾತ ಸಂಭವವಿದೆ. ಅವಸರದಲ್ಲಿ ಕೆಲಸ ಮಾಡುವುದು ಬೇಡ. ಹೂಡಿಕೆ, ವ್ಯಾಪಾರ ವ್ಯವಹಾರಗಳಲ್ಲಿ ಪ್ರಗತಿ ಇರಲಿದೆ. ದಿಢೀರ್ ಪ್ರಯಾಣ ಬೆಳೆಸುವ ಸಾಧ್ಯತೆ ಇದೆ. ಆರೋಗ್ಯದ ಕುರಿತು ಕಾಳಜಿ ಇರಲಿ. ಉದ್ಯೋಗಿಗಳಿಗೆ ಸಾಧಾರಣ ಫಲ. ಕೌಟುಂಬಿಕವಾಗಿ ಕನಿಷ್ಠ ಫಲ. ಅದೃಷ್ಟ ಸಂಖ್ಯೆ: 2

Horoscope Today

ಮೀನ: ದಿನದ ಮಟ್ಟಿಗೆ ಅನಿವಾರ್ಯ ಕಾರಣಗಳಿಂದ ಖರ್ಚು ಇರಲಿದೆ. ಆರೋಗ್ಯ ಮಧ್ಯಮವಾಗಿರಲಿದೆ. ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗಿಯಾಗುವ ಸಾಧ್ಯತೆ ಇದೆ. ಮಾತಿನ ಭರದಲ್ಲಿ ಅತಿರೇಕದ ಮಾತುಗಳು ಬೇಡ, ತಾಳ್ಮೆಯಿಂದ ವರ್ತಿಸಿ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 8

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

Continue Reading

ದೇಶ

School Principal: ಶಾಲೆಯಲ್ಲೇ ಮಹಿಳಾ ಟೀಚರ್‌ ಜತೆ ಪ್ರಿನ್ಸಿಪಾಲ್‌ ರೊಮ್ಯಾನ್ಸ್;‌ ವೈರಲ್‌ ಫೋಟೊ ಇಲ್ಲಿದೆ

School Principal: ಜೌನ್‌ಪುರದಲ್ಲಿರುವ ಶಾಲೆಯೊಂದರಲ್ಲಿ ಪ್ರಾಂಶುಪಾಲ ಹಾಗೂ ಮಹಿಳಾ ಟೀಚರ್‌ ತಬ್ಬಿಕೊಂಡು, ಮುದ್ದಾಡಿರುವ ಫೋಟೊ ವೈರಲ್‌ ಆಗಿದೆ. ಶಾಲೆಯ ಗೋಡೆಯ ಮೇಲೆ ಭಗತ್‌ ಸಿಂಗ್‌, ಅಟಲ್‌ ಬಿಹಾರಿ ವಾಜಪೇಯಿ ಹಾಗೂ ಅಭಿನಂದನ್‌ ವರ್ಧಮಾನ್‌ ಅವರ ಫೋಟೊಗಳನ್ನು ನೇತುಹಾಕಲಾಗಿದೆ. ಆ ಗೋಡೆಯ ಕೆಳಗೆ ಇವರಿಬ್ಬರೂ ರೊಮ್ಯಾನ್ಸ್‌ ಮಾಡಿದ್ದಾರೆ.

VISTARANEWS.COM


on

School Principal
Koo

ಲಖನೌ: “ಜ್ಞಾನ ದೇಗುಲವಿದು ಕೈಮುಗಿದು ಒಳಗೆ ಬಾ” ಎಂದು ಶಾಲೆಯ ಗೋಡೆ ಮೇಲೆ ಬರೆದಿರಲಾಗುತ್ತದೆ. ಜ್ಞಾನದೇಗುಲದಲ್ಲಿ ವಿದ್ಯಾರ್ಥಿಗಳ ಭವಿಷ್ಯ ರೂಪುಗೊಳ್ಳುವ ಜತೆಗೆ ಶಿಕ್ಷಕರ ಜೀವನವೂ ಸುಂದರವಾಗುತ್ತದೆ. ಇಂತಹ ಜ್ಞಾನ ದೇಗುಲದಲ್ಲಿ ಶಿಕ್ಷಕರಾದವರು (Teachers) ಮಕ್ಕಳಿಗೆ ಬೋಧನೆ ಮಾಡುವ ಜತೆಗೆ ಮೌಲ್ಯಗಳನ್ನು ತುಂಬಬೇಕು. ಆದರೆ, ಇತ್ತೀಚೆಗೆ ಜ್ಞಾನ ದೇಗುಲಗಳಲ್ಲಿಯೇ ಶಿಕ್ಷಕರು ಅಪದ್ಧ ಕೃತ್ಯಗಳಲ್ಲಿ ತೊಡಗಿಸಿಕೊಳ್ಳುತ್ತಿದ್ದಾರೆ. ಇದಕ್ಕೆ ನಿದರ್ಶನ ಎಂಬಂತೆ, ಉತ್ತರ ಪ್ರದೇಶದ ಶಾಲೆಯೊಂದರಲ್ಲಿ ಪ್ರಾಂಶುಪಾಲ (School Principal) ಹಾಗೂ ಮಹಿಳಾ ಟೀಚರ್‌ ರೊಮ್ಯಾನ್ಸ್‌ ಮಾಡಿದ ಫೋಟೊ ಈಗ ವೈರಲ್‌ ಆಗಿದೆ.

ಹೌದು, ಜೌನ್‌ಪುರದಲ್ಲಿರುವ ಶಾಲೆಯೊಂದರಲ್ಲಿ ಪ್ರಾಂಶುಪಾಲ ಹಾಗೂ ಮಹಿಳಾ ಟೀಚರ್‌ ತಬ್ಬಿಕೊಂಡು, ಮುದ್ದಾಡಿರುವ ಫೋಟೊ ವೈರಲ್‌ ಆಗಿದೆ. ಶಾಲೆಯ ಗೋಡೆಯ ಮೇಲೆ ಭಗತ್‌ ಸಿಂಗ್‌, ಮಹಾರಾಣಾ ಪ್ರತಾಪ್‌, ಅಟಲ್‌ ಬಿಹಾರಿ ವಾಜಪೇಯಿ ಹಾಗೂ ಅಭಿನಂದನ್‌ ವರ್ಧಮಾನ್‌ ಅವರ ಫೋಟೊಗಳನ್ನು ನೇತುಹಾಕಲಾಗಿದೆ. ಆ ಗೋಡೆಯ ಕೆಳಗೆ ಇವರಿಬ್ಬರೂ ರೊಮ್ಯಾನ್ಸ್‌ ಮಾಡಿದ್ದಾರೆ. ಖಾಸಗಿ ಶಾಲೆಯಲ್ಲಿ ಇಂತಹದ್ದೊಂದು ಅನಾಚಾರದ ಕೃತ್ಯ ನಡೆದಿದೆ. ಫೋಟೊಗಳನ್ನು ನೋಡಿದ ಜನ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಭಾನುವಾರ (ಜುಲೈ 7) ವಿಡಿಯೊ ವೈರಲ್‌ ಆಗಿದೆ. ಶಿಕ್ಷಕರ ಕುಲಕ್ಕೆ ಇವರು ಅವಮಾನ ಇದ್ದಹಾಗೆ. ಇಂತಹ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು. ಇವರನ್ನು ಅಮಾನತುಗೊಳಿಸಬೇಕು ಎಂದು ಸಾಮಾಜಿಕ ಜಾಲತಾಣಗಳಲ್ಲಿ ಜನ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶಾಲೆಯ ಪ್ರಾಂಶುಪಾಲ ಹಾಗೂ ಮಹಿಳಾ ಟೀಚರ್‌ ತುಂಬ ದಿನಗಳಿಂದ ಸಂಬಂಧ ಹೊಂದಿದ್ದಾರೆ. ಆದರೆ, ಇವರು ಶಾಲೆಯಲ್ಲಿಯೇ ರೊಮ್ಯಾನ್ಸ್‌ ಮಾಡಿರುವುದು ಭಾರಿ ಆಕ್ರೋಶಕ್ಕೆ ಗುರಿಯಾಗಿದೆ. ಇದು ಕಾನ್ವೆಂಟ್‌ ಶಾಲೆ ಎಂದು ತಿಳಿದುಬಂದಿದೆ.

ಕೋಲಾರ ಜಿಲ್ಲೆಯ ಕೆಜಿಎಫ್‌ನ ರಾಮಸಾಗರ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ಮಹಿಳಾ ಸಿಬ್ಬಂದಿಯೊಬ್ಬರ ಜತೆ ಖಾಸಗಿ ಕ್ಷಣಗಳನ್ನು ಚಿತ್ರೀಕರಿಸಿಕೊಂಡು, ಅದನ್ನು ಹಂಚಿ ಬ್ಲ್ಯಾಕ್‌ಮೇಲ್‌ ಎಸಗಿದ ಆರೋಪ ಎದುರಿಸುತ್ತಿರುವ ಬಿಲ್‌ ಕಲೆಕ್ಟರ್‌ ಅರ್ಜುನ್‌ ಹರಿಕೃಷ್ಣ ಎಂಬಾತನನ್ನು ಕೆಲ ದಿನಗಳ ಹಿಂದೆ ಬೇತಮಂಗಲ ಪೊಲೀಸರು ಬಂಧಿಸಿದ್ದರು.

ಬಿಲ್ ಕಲೆಕ್ಟರ್ ಅರ್ಜುನ್ ಹರಿಕೃಷ್ಣ ವಿರುದ್ಧ ಲೈಂಗಿಕ ಕಿರುಕುಳ (Physical Abuse), ಕೆಲಸ ಮಾಡುವ ಸ್ಥಳದಲ್ಲಿ ಮಹಿಳೆಗೆ ಮುಜುಗರ, ಖಾಸಗಿ ಕ್ಷಣಗಳ ಫೋಟೋ ಹಂಚಿಕೆ ಹಾಗೂ ಬೆದರಿಕೆ (threat) ಒಡ್ಡಿದ ಕುರಿತು ಕೋಲಾರ ಜಿಲ್ಲೆ ಬೇತಮಂಗಲ ಪೊಲೀಸ್ ಠಾಣೆಗೆ ಸಂತ್ರಸ್ತ ಮಹಿಳೆ ದೂರು ದಾಖಲಿಸಿದ್ದಾರೆ. ಗ್ರಾಮ ಪಂಚಾಯಿತಿಯ ಕಚೇರಿಯ ಮೊದಲ ಮಹಡಿಯ ಕೊಠಡಿಯಲ್ಲಿ ಸಿಸಿಟಿವಿ ಸಂಪರ್ಕ ಕಡಿತಗೊಳಿಸಿದ ಆರೋಪಿಯು ತಮ್ಮ ಖಾಸಗಿ ಕ್ಷಣಗಳನ್ನು ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದ. ಸಂತ್ರಸ್ತೆ ನೀಡಿದ ದೂರಿನ ಮೇಲೆ ಅರ್ಜುನ್ ವಿಚಾರಣೆ ನಡೆಸಿದ ಬೇತಮಂಗಲ ಪೊಲೀಸರು ನಂತರ ಆತನನ್ನು ಬಂಧಿದ್ದರು.

ಇದನ್ನೂ ಓದಿ: ಪಿಎಂ ಆವಾಸ್‌ ಯೋಜನೆಯ 40 ಸಾವಿರ ರೂ. ಪಡೆದು 11 ಸ್ತ್ರೀಯರು ಗೆಳೆಯರೊಂದಿಗೆ ಪರಾರಿ; ಕಂಗಾಲಾದ ಪತಿಯರು!

Continue Reading

ಪ್ರಮುಖ ಸುದ್ದಿ

WCPL 2024 : ಸಿಪಿಎಲ್​​ನ ಟ್ರಿನ್​ಬ್ಯಾಗೊ ರೈಡರ್ಸ್​ ತಂಡಕ್ಕೆ ಜೆಮಿಮಾ, ಶಿಖಾ ಸೇರ್ಪಡೆ

VISTARANEWS.COM


on

WCPL 2024
Koo

ಬೆಂಗಳೂರು: 2024ರ ಮಹಿಳಾ ಕೆರಿಬಿಯನ್ ಪ್ರೀಮಿಯರ್ ಲೀಗ್​​ನಲ್ಲಿ (WCPL 2024) ಟ್ರಿನ್​ಬ್ಯಾಗೊ ನೈಟ್ ರೈಡರ್ಸ್ ತಂಡವನ್ನು ಜೆಮಿಮಾ ರೊಡ್ರಿಗಸ್ ಹಾಗೂ ಶಿಖಾ ಪಾಂಡೆ ಸೇರಿಕೊಂಡಿದ್ದಾರೆ. ಈ ಋತುವಿನಲ್ಲಿ ನೈಟ್ ರೈಡರ್ಸ್ ಪರ ವಿದೇಶಿ ಆಟಗಾರರಾಗಿ ಆಸ್ಟ್ರೇಲಿಯಾದ ಮೆಗ್ ಲ್ಯಾನಿಂಗ್ ಮತ್ತು ಜೆಸ್ ಜೊನಾಸೆನ್ ಸೇರಲಿದ್ದಾರೆ. 2024ರ ಸಿಪಿಎಲ್ ಆಗಸ್ಟ್ 21ರಿಂದ 29ರವರೆಗೆ ಟ್ರಿನಿಡಾಡ್​ನಲ್ಲಿ ನಡೆಯಲಿದ್ದು, ಎಲ್ಲಾ ಏಳು ಪಂದ್ಯಗಳು ಟ್ರಿನಿಡಾಡ್​​ನ ತರೂಬಾದ ಬ್ರಿಯಾನ್ ಲಾರಾ ಕ್ರಿಕೆಟ್ ಅಕಾಡೆಮಿಯಲ್ಲಿ ನಡೆಯಲಿವೆ.

ಇದೇ ಮೊದಲ ಬಾರಿಗೆ ನಾನು ಡಬ್ಲ್ಯುಸಿಪಿಎಲ್​​ಗೆ ಬರುತ್ತಿದ್ದೇನೆ. ನಾನು ಕೆರಿಬಿಯನ್​​ನಲ್ಲಿ ಭಾರತಕ್ಕಾಗಿ ಸಾಕಷ್ಟು ಆಡಿದ್ದೇನೆ, ಆದರೆ ನಾನು ಡಬ್ಲ್ಯುಸಿಪಿಎಲ್​​ನ ನೈಟ್ ರೈಡರ್ಸ್ ಅನ್ನು ಪ್ರತಿನಿಧಿಸಲಿದ್ದೇನೆ ಎಂದು ತಿಳಿದು ಉತ್ಸುಕನಾಗಿದ್ದೇನೆ,” ಎಂದು ರೋಡ್ರಿಗಸ್ ಹೇಳಿದ್ದಾರೆ.

ಪ್ರಪಂಚದಾದ್ಯಂತ ಅವರು ಹೊಂದಿರುವ ಪರಂಪರೆ ನಮಗೆಲ್ಲರಿಗೂ ತಿಳಿದಿದೆ. 2022ರ ಚಾಂಪಿಯನ್ ಟಿಕೆಆರ್ ಮಹಿಳಾ ತಂಡ ಕೂಡ ಹೆಮ್ಮೆಯ ತಂಡವಾಗಿದೆ. ಅಕ್ಟೋಬರ್​ನಲ್ಲಿ ನಡೆಯಲಿರುವ ಮಹಿಳಾ ವಿಶ್ವ ಟಿ20ಗೆ ಮುಂಚಿತವಾಗಿ ಈ ಪಂದ್ಯಾವಳಿಯು ನಮಗೆ ಉತ್ತಮ ಸಿದ್ಧತೆಯಾಗಿ ಕಾರ್ಯನಿರ್ವಹಿಸಲಿದೆ ಎಂದು ನಾನು ನಂಬುತ್ತೇನೆ. ವಿಶ್ವದ ಕೆಲವು ಅತ್ಯುತ್ತಮ ಆಟಗಾರರು ಸ್ಪರ್ಧೆಯಲ್ಲಿ ಭಾಗವಹಿಸುತ್ತಾರೆ, “ಎಂದು ಅವರು ಹೇಳಿದರು.

ನೈಟ್ ರೈಡರ್ಸ್ 2023 ರ ಋತುವಿನಲ್ಲಿ ತಮ್ಮನ್ನು ಪ್ರತಿನಿಧಿಸಿದ ಐದು ಆಟಗಾರರನ್ನು ಉಳಿಸಿಕೊಂಡಿದೆ, ಡಿಯಾಂಡ್ರಾ ಡಾಟಿನ್, ಶಮಿಲಾ ಕಾನ್ನೆಲ್, ಕೈಸಿಯಾ ನೈಟ್, ಜೈದಾ ಜೇಮ್ಸ್ ಮತ್ತು ಸಮರಾ ರಾಮ್​​ನಾಥ್ ಮರಳಿದ್ದಾರೆ. ತಂಡದಲ್ಲಿ ಇನ್ನೂ ಆರು ಸ್ಥಾನಗಳು ಉಳಿದಿದ್ದು, ಜುಲೈನಲ್ಲಿ ನಡೆಯಲಿರುವ ಡಬ್ಲ್ಯುಸಿಪಿಎಲ್ ಡ್ರಾಫ್ಟ್​​ನಲ್ಲಿ ಈ ಆಟಗಾರರನ್ನು ಆಯ್ಕೆ ಮಾಡಲಾಗುತ್ತದೆ.

ಇದನ್ನೂ ಓದಿ: Abhishek Sharma : 47 ಎಸೆತಕ್ಕೆ ಶತಕ ಬಾರಿಸಿ ಹಲವಾರು ದಾಖಲೆ ಮುರಿದಿ ಅಭಿಷೇಕ್​ ಶರ್ಮಾ

ನಮ್ಮ ಸ್ಥಳೀಯ ಕೆರಿಬಿಯನ್ ಆಟಗಾರರನ್ನು ಉಳಿಸಿಕೊಳ್ಳಲು ಮತ್ತು ಈ ವರ್ಷದ ಮಹಿಳಾ ಸಿಪಿಎಲ್​​ಗೆ ನಾಲ್ಕು ವಿಶ್ವಪ್ರಸಿದ್ಧ ವಿದೇಶಿ ಆಟಗಾರರೊಂದಿಗೆ ಸಹಿ ಮಾಡಲು ನಾವು ತುಂಬಾ ಉತ್ಸುಕರಾಗಿದ್ದೇವೆ” ಎಂದು ನೈಟ್ ರೈಡರ್ಸ್ ಗ್ರೂಪ್​​​ನ ಸಿಇಒ ವೆಂಕಿ ಮೈಸೂರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಡಿಯಾಂಡ್ರಾ ಡಾಟಿನ್ ಮತ್ತೊಮ್ಮೆ ತಂಡವನ್ನು ಮುನ್ನಡೆಸುತ್ತಿರುವುದು ಸಂತಸ ತಂದಿದೆ. ಉದ್ಘಾಟನಾ ವರ್ಷದಿಂದ ಅವರು ತಂಡದ ಅದ್ಭುತ ನಾಯಕಿಯಾಗಿದ್ದಾರೆ, 2022 ರಲ್ಲಿ ನಮ್ಮ ಪ್ರಶಸ್ತಿ ಗೆದ್ದಾಗಿನಿಂದ ನಾಯಕ ಮತ್ತು ಆಟಗಾರ್ತಿಯಾಗಿ ನಿರ್ಣಾಯಕ ಪಾತ್ರ ವಹಿಸಿದ್ದಾರೆ “ಎಂದು ಅವರು ಹೇಳಿದರು.

ಜೆಮಿಮಾ ರೊಡ್ರಿಗಸ್ ಮತ್ತು ಶಿಖಾ ಪಾಂಡೆ ಪಂದ್ಯಾವಳಿಯ ಗುಣಮಟ್ಟ ಹೆಚ್ಚಿಸಲಿದ್ದಾರೆ. ಡಬ್ಲ್ಯುಸಿಪಿಎಲ್​​ನಲ್ಲಿ ಮೊದಲ ಬಾರಿಗೆ ಕಾಣಿಸಿಕೊಳ್ಳಲು ಅನುಕೂಲ ಮಾಡಿಕೊಟ್ಟಿದ್ದಕ್ಕಾಗಿ ನಾವು ಬಿಸಿಸಿಐಗೆ ತುಂಬಾ ಕೃತಜ್ಞರಾಗಿದ್ದೇವೆ. ಸೂಪರ್ ಸ್ಟಾರ್​ಗಳಾದ ಮೆಗ್ ಲ್ಯಾನಿಂಗ್ ಮತ್ತು ಜೆಸ್ ಜೊನಾಸೆನ್ ಅವರೊಂದಿಗೆ ಈ ಎರಡು ದೊಡ್ಡ ಭಾರತೀಯ ಹೆಸರುಗಳ ಸೇರ್ಪಡೆಯು ಕ್ರಿಕೆಟ್ ಗೆ ಕಳೆ ಹೆಚ್ಚಿಸಲಿದೆ, “ಎಂದು ಅವರು ಹೇಳಿದರು.

ಮಹಿಳಾ ತಂಡದ ಆಟಗಾರರು ಇವರು

ಡಿಯಾಂಡ್ರಾ ಡಾಟಿನ್, ಮೆಗ್ ಲ್ಯಾನಿಂಗ್, ಜೆಸ್ ಜೊನಾಸೆನ್, ಜೆಮಿಮಾ ರೊಡ್ರಿಗಸ್, ಶಿಖಾ ಪಾಂಡೆ, ಕೈಸಿಯಾ ನೈಟ್, ಶಮಿಲಾ ಕಾನ್ನೆಲ್, ಜೈದಾ ಜೇಮ್ಸ್, ಸಮರಾ ರಾಮನಾಥ್.

Continue Reading

ದೇಶ

KRS Inflow: ಕೆಆರ್‌ಎಸ್‌ಗೆ ದಾಖಲೆಯ 11 ಸಾವಿರ ಕ್ಯುಸೆಕ್‌ ನೀರು ಒಳಹರಿವು; ಸೋಮವಾರದಿಂದ ನಾಲೆಗಳಿಗೆ ನೀರು

KRS Inflow: ಕರ್ನಾಟಕದ ಹಲವು ಅಣೆಕಟ್ಟೆಗಳಲ್ಲಿಯೂ ಉತ್ತಮ ಒಳಹರಿವು ಇದೆ. ಬಾಗಲಕೋಟೆ ಜಿಲ್ಲೆಯ ಆಲಮಟ್ಟಿ ಡ್ಯಾಮ್‌ಗೆ 59,306 ಕ್ಯುಸೆಕ್‌, ವಿಜಯನಗರ ಜಿಲ್ಲೆಯ ತುಂಗಭದ್ರಾ ಅಣೆಕಟ್ಟೆಗೆ 50,715 ಕ್ಯುಸೆಕ್‌ ನೀರು ಒಳಹರಿವು ಇದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಗರಿಷ್ಠ ಪ್ರಮಾಣದ ನೀರು ಹರಿದುಬರುತ್ತಿದೆ. ಕಬಿನಿ, ಹಾರಂಗಿ ಹಾಗೂ ಹೇಮಾವತಿ ಅಣೆಕಟ್ಟೆಗಳಲ್ಲಿ ಕೂಡ ಉತ್ತಮವಾಗಿ ನೀರು ಸಂಗ್ರಹವಾಗಿದೆ.

VISTARANEWS.COM


on

KRS Inflow
Koo

ಬೆಂಗಳೂರು: ಮಂಡ್ಯ ಜಿಲ್ಲೆಯ ರೈತರ ಜೀವನಾಡಿಯಾದ, ಬೆಂಗಳೂರಿಗೂ ಕುಡಿಯುವ ನೀರು ಪೂರೈಸುವ, ತಮಿಳುನಾಡಿನ ರೈತರಿಗೂ ಆಶ್ರಯದಾತವಾಗಿರುವ ಕೃಷ್ಣರಾಜಸಾಗರ ಅಣೆಕಟ್ಟೆಗೆ (KRS Dam) ದಾಖಲೆ ಪ್ರಮಾಣದಲ್ಲಿ ನೀರು ಹರಿದುಬರುತ್ತಿದ್ದು (KRS Inflow), ರಾಜ್ಯದಲ್ಲಿ ಹಳದಿ ಅಲರ್ಟ್‌ ಘೋಷಣೆ ಮಾಡಲಾಗಿದೆ. ಉತ್ತರ ಕನ್ನಡ, ಉಡುಪಿ ಸೇರಿ ರಾಜ್ಯದ ಹಲವೆಡೆ ಭಾರಿ ಮಳೆಯಾಗುತ್ತಿದೆ. ಕಾವೇರಿ ಉಕ್ಕಿ ಹರಿಯುತ್ತಿದ್ದಾಳೆ. ಇದರಿಂದಾಗಿ ಕೆಆರ್‌ಎಸ್‌ಗೆ ಭಾನುವಾರ (ಜುಲೈ 7) ದಾಖಲೆಯ 11,027 ಕ್ಯುಸೆಕ್‌ ನೀರು ಹರಿದುಬರುತ್ತಿದೆ.

ಮಳೆಯ ಹಿನ್ನೆಲೆಯಲ್ಲಿ ಕೆಆರ್‌ಎಸ್‌ ಡ್ಯಾಮ್‌ನಲ್ಲಿ ಕಳೆದ ವರ್ಷಕ್ಕೆ ಹೋಲಿಸಿದರೆ ಭಾರಿ ಪ್ರಮಾಣದಲ್ಲಿ ನೀರು ಸಂಗ್ರಹವಾಗಿದೆ. ಜುಲೈ 7ರ ಬೆಳಗ್ಗೆಯ ವರದಿ ಪ್ರಕಾರ 31.09 ಟಿಎಂಸಿ ನೀರು ಸಂಗ್ರಹವಾಗಿತ್ತು. 2023ರ ಜುಲೈ 7ರಂದು 24.23 ಟಿಎಂಸಿ ನೀರು ಸಂಗ್ರಹವಾಗಿತ್ತು. ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಇನ್ನಷ್ಟು ಮಳೆಯಾಗುವ ಸಾಧ್ಯತೆ ಇರುವುದರಿಂದ ಕೆಆರ್‌ಎಸ್‌ಗೆ ಇನ್ನಷ್ಟು ನೀರು ಹರಿದುಬರಲಿದೆ ಎಂದು ಹೇಳಲಾಗುತ್ತಿದೆ.

Cauvery Dispute

ಕರ್ನಾಟಕದ ಹಲವು ಅಣೆಕಟ್ಟೆಗಳಲ್ಲಿಯೂ ಉತ್ತಮ ಒಳಹರಿವು ಇದೆ. ಬಾಗಲಕೋಟೆ ಜಿಲ್ಲೆಯ ಆಲಮಟ್ಟಿ ಡ್ಯಾಮ್‌ಗೆ 59,306 ಕ್ಯುಸೆಕ್‌, ವಿಜಯನಗರ ಜಿಲ್ಲೆಯ ತುಂಗಭದ್ರಾ ಅಣೆಕಟ್ಟೆಗೆ 50,715 ಕ್ಯುಸೆಕ್‌ ನೀರು ಒಳಹರಿವು ಇದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಗರಿಷ್ಠ ಪ್ರಮಾಣದ ನೀರು ಹರಿದುಬರುತ್ತಿದೆ. ಕಬಿನಿ, ಹಾರಂಗಿ ಹಾಗೂ ಹೇಮಾವತಿ ಅಣೆಕಟ್ಟೆಗಳಲ್ಲಿ ಕೂಡ ಉತ್ತಮವಾಗಿ ನೀರು ಸಂಗ್ರಹವಾಗಿದೆ. ಕೃಷಿ ಸಚಿವರೂ ಆಗಿರುವ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಅವರು ಬೆಂಗಳೂರಿನಲ್ಲಿ ಕಾವೇರಿ ನೀರಾವರಿ ಸಲಹಾ ಸಮಿತಿ ಸಭೆ ನಡೆಸಿದ್ದು, ಜುಲೈ 8ರಿಂದ ನಾಲೆಗಳಿಗೆ ನೀರು ಬಿಡಲು ತೀರ್ಮಾನಿಸಿದ್ದಾರೆ.

ಉತ್ತರ ಕನ್ನಡದಲ್ಲಿ ಭಾರಿ ಮಳೆಯಾಗುತ್ತಿರುವ ಕಾರಣ ಶಾಲೆ-ಕಾಲೇಜುಗಳಿಗೆ ಸೋಮವಾರ (ಜುಲೈ 8) ರಜೆ ಘೋಷಿಸಲಾಗಿದೆ. ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ ತಾಲೂಕಿನ ಶಾಲಾ- ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ಕೆ. ಅವರು ರಜೆ ಆದೇಶ ಹೊರಡಿಸಿದ್ದಾರೆ. ಮಕ್ಕಳ ಹಿತದೃಷ್ಟಿಯಿಂದ ಮುನ್ನೆಚ್ಚರಿಕಾ ಕ್ರಮವಾಗಿ ರಜೆ ಘೋಷಣೆ ಮಾಡಲಾಗಿದೆ. ಇನ್ನೂ ಘಟ್ಟದ ಮೇಲಿನ ತಾಲೂಕುಗಳ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ ಇಲ್ಲ.

ಇದನ್ನೂ ಓದಿ: Student Death : ಕೇರಳದಿಂದ ಪ್ರವಾಸ ಬಂದಿದ್ದ ವಿದ್ಯಾರ್ಥಿನಿ ಕೆಆರ್‌ಎಸ್‌ನಲ್ಲಿ ಮೃತ್ಯು

Continue Reading
Advertisement
karnataka weather Forecast
ಮಳೆ27 mins ago

Karnataka Weather : ಬೆಂಗಳೂರಲ್ಲಿ ಗುಡುಗು ಸಹಿತ ಮಳೆ; ಕರಾವಳಿ, ಮಲೆನಾಡಿನಲ್ಲಿ ವರುಣಾರ್ಭಟ ಮುಂದುವರಿಕೆ

Vastu Tips
ಧಾರ್ಮಿಕ57 mins ago

Vastu Tips: ಮನೆಯಲ್ಲಿ ನೆಮ್ಮದಿ ನೆಲೆಸಬೇಕೆ? ಹಾಗಿದ್ದರೆ ಅಡುಗೆ ಒಲೆಯ ದಿಕ್ಕು ಸರಿಯಾಗಿರಲಿ!

dina Bhavishya
ಭವಿಷ್ಯ2 hours ago

Dina Bhavishya : ಇತರರ ವಿರುದ್ಧ ದ್ವೇಷ ಕಾರುತ್ತಾ ಹೋದರೆ ಹೆಚ್ಚಾಗುತ್ತೆ ಈ ರಾಶಿಯವರ ಮಾನಸಿಕ ಒತ್ತಡ

School Principal
ದೇಶ7 hours ago

School Principal: ಶಾಲೆಯಲ್ಲೇ ಮಹಿಳಾ ಟೀಚರ್‌ ಜತೆ ಪ್ರಿನ್ಸಿಪಾಲ್‌ ರೊಮ್ಯಾನ್ಸ್;‌ ವೈರಲ್‌ ಫೋಟೊ ಇಲ್ಲಿದೆ

WCPL 2024
ಪ್ರಮುಖ ಸುದ್ದಿ7 hours ago

WCPL 2024 : ಸಿಪಿಎಲ್​​ನ ಟ್ರಿನ್​ಬ್ಯಾಗೊ ರೈಡರ್ಸ್​ ತಂಡಕ್ಕೆ ಜೆಮಿಮಾ, ಶಿಖಾ ಸೇರ್ಪಡೆ

KRS Inflow
ದೇಶ7 hours ago

KRS Inflow: ಕೆಆರ್‌ಎಸ್‌ಗೆ ದಾಖಲೆಯ 11 ಸಾವಿರ ಕ್ಯುಸೆಕ್‌ ನೀರು ಒಳಹರಿವು; ಸೋಮವಾರದಿಂದ ನಾಲೆಗಳಿಗೆ ನೀರು

Abhishek Sharma
ಕ್ರೀಡೆ7 hours ago

Abhishek Sharma : 47 ಎಸೆತಕ್ಕೆ ಶತಕ ಬಾರಿಸಿ ಹಲವಾರು ದಾಖಲೆ ಮುರಿದಿ ಅಭಿಷೇಕ್​ ಶರ್ಮಾ

Dengue Scare
ಕರ್ನಾಟಕ8 hours ago

Dengue Scare: ಸರ್ಕಾರದಿಂದಲೇ ಉಚಿತವಾಗಿ ಡೆಂಗ್ಯೂ ಪರೀಕ್ಷೆ ಮಾಡಿಸಲಿ; ಆರ್.‌ ಅಶೋಕ್‌ ಆಗ್ರಹ

World Biryani Day:
ಪ್ರಮುಖ ಸುದ್ದಿ9 hours ago

World Biryani Day : ಕೋಲ್ಕತಾ, ಹೈದರಾಬಾದ್ ಬಿರಿಯಾನಿ ತಿಂದಿರಬಹುದು; ಇವುಗಳ ಹಿನ್ನೆಲೆ ಗೊತ್ತಾ?

Accident
Latest9 hours ago

Accident: ಟೆರೇಸ್ ಮೇಲೆ ನಿಂತು ಜಗಳ ನೋಡುತ್ತಿದ್ದ ಮಹಿಳೆಗೇ ಬಿತ್ತು ಗುಂಡೇಟು!

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ11 hours ago

Karnataka weather : ನಾಳೆ ಭಾರಿ ಮಳೆ ಎಚ್ಚರಿಕೆ; ಕರಾವಳಿಯ ಈ ಶಾಲಾ-ಕಾಲೇಜುಗಳಿಗೆ ರಜೆ

Davanagere news
ಮಳೆ14 hours ago

Davanagere News : ಆ ಗ್ರಾಮಕ್ಕೆ ಕಾಲಿಡದ ವರುಣ! ಮಳೆಗಾಗಿ ಗ್ರಾಮಸ್ಥರಿಂದ ಕಂತೆ ಭಿಕ್ಷೆ

Karnataka Rain
ಮಳೆ14 hours ago

Karnataka Rain : ವೀಕೆಂಡ್‌ನಲ್ಲಿ ಸಿಲಿಕಾನ್‌ ಸಿಟಿಯಲ್ಲಿ ಮಳೆ ಮೋಡಿ; ಮತ್ತೆ ಗುಡ್ಡ ಕುಸಿತ ಶುರು

karnataka weather Forecast
ಮಳೆ1 day ago

Karnataka Weather : ವೇಗವಾಗಿ ಬೀಸುವ ಗಾಳಿ ಜತೆಗೆ ಅಬ್ಬರಿಸಲಿದೆ ಮಳೆ; ಈ ಜಿಲ್ಲೆಗಳಿಗೆ ಎಚ್ಚರಿಕೆ

karnataka weather Forecast
ಮಳೆ2 days ago

Karnataka Weather : ಚಾರಣಪ್ರಿಯರಿಗೆ ಶಾಕ್‌; ಭಾರಿ ಮಳೆಯಿಂದಾಗಿ ಈ ಜಾಗಗಳಿಗೆ ಟ್ರೆಕ್ಕಿಂಗ್‌ ನಿಷೇಧ

Murder case
ಯಾದಗಿರಿ2 days ago

Murder case : ಯಾದಗಿರಿಯಲ್ಲಿ ಹಸುಗೂಸನ್ನು ಬಾವಿಗೆ ಎಸೆದು ಕೊಂದರು ಹಂತಕರು

karnataka Rain
ಮಳೆ2 days ago

Karnataka Rain : ಭಾರಿ ಗಾಳಿ- ಮಳೆಗೆ ಹಾರಿದ ಅಂಗಡಿಯ ತಗಡು; ಮಾಗುಂಡಿ-ಬಾಳೆಹೊನ್ನೂರು ಮಾರ್ಗ ಬಂದ್

Food Poisoning
ರಾಯಚೂರು2 days ago

Food Poisoning : ಮೊರಾರ್ಜಿ ವಸತಿ ಶಾಲೆ ಅವ್ಯವಸ್ಥೆ; ಊಟ ಸೇವಿಸಿದ 25ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

Wild Animal Attack Elephant attack
ರಾಮನಗರ2 days ago

Wild Animal Attack : ತೋಟದಲ್ಲಿ ನೀರು ಹಾಯಿಸುತ್ತಿದ್ದವನ ತುಳಿದು ಸಾಯಿಸಿದ ಆನೆ

karnataka Weather Forecast
ಮಳೆ2 days ago

Karnataka Weather : ಕರಾವಳಿ, ಮಲೆನಾಡಿನಲ್ಲಿ ಇಂದು ನಾನ್‌ ಸ್ಟಾಪ್‌ ಮಳೆ; ಬೆಂಗಳೂರಲ್ಲಿ ಹೇಗೆ?

ಟ್ರೆಂಡಿಂಗ್‌