ಪ್ಯಾರಿಸ್: ಫ್ರಾನ್ಸ್ (France Visit) ಪ್ರವಾಸದಲ್ಲಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Congress Leader Rahul Gandhi) ಅವರು ಭಾರತೀಯ ಜನತಾ ಪಾರ್ಟಿ(BJP), ರಾಷ್ಟ್ರೀಯ ಸ್ವಯಂ ಸೇವಕ ಸಂಘ(RSS) ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಬಿಜೆಪಿಗೂ ಹಿಂದೂ ಧರ್ಮಕ್ಕೂ ಯಾವುದೇ ಸಂಬಂಧವಿಲ್ಲ. ಹಾಗಾಗಿ ಅವರು(ಬಿಜೆಪಿ ಮತ್ತು ಆರೆಸ್ಸೆಸ್) ಹಿಂದೂ ರಾಷ್ಟ್ರೀಯವಾದಿಗಳಲ್ಲ ಎಂದು ಹೇಳಿದ್ದಾರೆ.
ನಾನು ಭಗವದ್ಗೀತೆ, ಉಪನಿಷತ್ತುಗಳು ಮತ್ತು ಇತರ ಹಿಂದೂ ಧರ್ಮಗ್ರಂಥಗಳನ್ನು ಓದಿದ್ದೇನೆ. ಬಿಜೆಪಿ ಹೇಳುವ ಹಿಂದೂ ಅದಲ್ಲ. ನಿಮಗಿಂತ ದುರ್ಬಲರನ್ನು ಭಯಪಡಿಸಬೇಕು, ಹಾನಿ ಮಾಡಬೇಕು ಎಂದು ನಾನು ಎಲ್ಲಿಯೂ ಓದಿಲ್ಲ, ಯಾವುದೇ ಹಿಂದೂ ಪುಸ್ತಕದಲ್ಲಿ ಓದಿಲ್ಲ ಅಥವಾ ಯಾವುದೇ ಕಲಿತ ಹಿಂದೂ ವ್ಯಕ್ತಿಯಿಂದ ಕೇಳಿಲ್ಲ ಎಂದು ರಾಹುಲ್ ಗಾಂಧಿ ಅವರು ಹೇಳಿದ್ದಾರೆ.
ಹಿಂದೂ ರಾಷ್ಟ್ರೀಯವಾದಿಗಳ ಪದವೇ ತಪ್ಪು. ಅವರು ಹಿಂದೂ ರಾಷ್ಟ್ರೀಯವಾದಿಗಳಲ್ಲ. ಅವರಿಗೂ ಹಿಂದೂ ಧರ್ಮಕ್ಕೂ ಯಾವುದೇ ಸಂಬಂಧವಿಲ್ಲ. ಅವರು ಯಾವುದೇ ರೀತಿಯಲ್ಲಾದರೂ ಅಧಿಕಾರ ಪಡೆಯಲು, ಏನು ಬೇಕಾದರೂ ಮಾಡುತ್ತಾರೆ. ಕೆಲವೇ ಕೆಲವು ಜನರು ಪ್ರಾಬಲ್ಯವಾಗಿರಬೇಕು ಎಂದು ಬಯಸುತ್ತಾರೆ. ಅವರಿಗೂ ಹಿಂದೂ ಧರ್ಮಕ್ಕೆ ಸಂಬಂಧವೇ ಇಲ್ಲ ಎಂದು ರಾಹುಲ್ ಗಾಂಧಿ ಅವರು ಹೇಳಿದ್ದಾರೆ.
ಈ ಸುದ್ದಿಯನ್ನೂ ಓದಿ: Rahul Gandhi: ರಾಹುಲ್ ಗಾಂಧಿಗೆ ಮತ್ತೆ ಸಂಕಷ್ಟ! ಸಂಸತ್ ಸದಸ್ಯತ್ವ ಮರುಸ್ಥಾಪನೆ ಪ್ರಶ್ನಿಸಿ ಸುಪ್ರೀಂಗೆ ಅರ್ಜಿ
ಒಂದು ವಾರ ಕಾಲ ಯುರೋಪ್ ಪ್ರವಾಸದಲ್ಲಿರುವ ರಾಹಲ್ ಗಾಂಧಿ ವಿವಿಧ ಸ್ತರದ ಜನರೊಂದಿಗೆ ಸಂವಾದ ನಡೆಸುತ್ತಿದ್ದಾರೆ. ಅದೇ ರೀತಿ ಅವರು, ಫ್ರಾನ್ಸ್‌ನ ಪ್ಯಾರಿಸ್‌ನಲ್ಲಿರುವ ಸೈನ್ಸ್ ಪೊ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳೊಂದಿಗೆ ಸಂವಾದದಲ್ಲಿ ಈ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.