ಕಾರವಾರ: ಮನೆಯಲ್ಲಿ ಕಾಲು ಜಾರಿ ಬಿದ್ದು ಪದ್ಮಶ್ರೀ ತುಳಸಿ ಗೌಡ ಅವರು ಅಸ್ವಸ್ಥರಾಗಿದ್ದು, ಅವರನ್ನು ಕಾರವಾರದ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಹೊನ್ನಳ್ಳಿ ಗ್ರಾಮದ ಮನೆಯಲ್ಲಿ ವೃಕ್ಷಮಾತೆ ತುಳಸಿಗೌಡ (Tulsi Gowda) ಅವರು ಜಾರಿ ಬಿದ್ದಿದ್ದರಿಂದ ಕಾಲಿಗೆ ಪೆಟ್ಟಾಗಿತ್ತು.
ಲಕ್ಷಾಂತರ ಮರಗಳನ್ನು ಬೆಳೆಸಿ ವೃಕ್ಷಮಾತೆ ಎನಿಸಿಕೊಂಡಿರುವ ತುಳಸಿ ಗೌಡ ಅವರಿಗೆ ಸದ್ಯ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಕಾಲು ಜಾರಿ ಬಿದ್ದ ಪರಿಣಾಮ ತುಳಸಜ್ಜಿ ಅಸ್ವಸ್ಥಗೊಂಡಿದ್ದಾರೆ.
ಇದನ್ನೂ ಓದಿ | Car Accident: ಆಕಸ್ಮಿಕವಾಗಿ ಕಾರು ಹರಿದು ಒಂದೂವರೆ ವರ್ಷದ ಮಗು ಸಾವು; ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಓಮ್ನಿಗೆ ಬ್ಯಾಲೆನೊ ಡಿಕ್ಕಿ, ಬಾಲಕಿ ಸಾವು, 7 ಮಂದಿಗೆ ಗಾಯ, ಸುಟ್ಟುಹೋದ ಓಮ್ನಿ
ಬೆಂಗಳೂರು: ಮಾದಾವರ ಟೋಲ್‌ಗೇಟ್ ಬಳಿ ಮಾರುತಿ ಒಮ್ನಿ (Maruti Omni) ವಾಹನಕ್ಕೆ ಬ್ಯಾಲೆನೋ ಕಾರು (Baleno) ಹಿಂದಿನಿಂದ ಬಂದು ಡಿಕ್ಕಿಯಾದ (Road Accident) ಪರಿಣಾಮ ಬಾಲಕಿಯೊಬ್ಬಳು (girl death) ಮೃತಪಟ್ಟಿದ್ದು, ಇನ್ನೂ ನಾಲ್ವರಿಗೆ ಗಂಭೀರ ಗಾಯಗಳಾಗಿವೆ.
ತುಮಕೂರು ರಸ್ತೆ ಹೈವೇಯಲ್ಲಿ 10 ಗಂಟೆ ರಾತ್ರಿಯಲ್ಲಿ ಘಟನೆ ನಡೆದಿದೆ. ಓಮ್ನಿಯಲ್ಲಿದ್ದವರು ಅಬ್ಬಿಗೆರೆ, ದಾಸಾನುಪುರದ ಸಂಬಂಧಿಕರ ಮನೆಯಿಂದ ಬರುತ್ತಿದ್ದಾಗ ದುರಂತ ಘಟಿಸಿದೆ. ಒಟ್ಟು ಎಂಟು ಜನ ಮಾರುತಿ ಓಮ್ನಿ ಕಾರಿನಲ್ಲಿ ಪ್ರಯಾಣ ಮಾಡುತ್ತಿದ್ದರು. ಬ್ಯಾಲೆನೋ ಕಾರಿನಲ್ಲಿ ಮೂವರು ಪ್ರಯಾಣಿಸುತ್ತಿದ್ದರು. ಬ್ಯಾಲೆನೋ ಕಾರು ಹಿಂದಿನಿಂದ ಬಂದು ಡಿಕ್ಕಿ ಹೊಡೆದ ರಭಸಕ್ಕೆ ಓಮ್ನಿ ಮೂರು ಪಲ್ಟಿಯಾಗಿದೆ. ಪಲ್ಟಿಯಾಗುತ್ತಿದ್ದಂತೆ ಓಮ್ನಿ ಕಾರಿಗೆ ಬೆಂಕಿ ಹೊತ್ತಿಕೊಂಡಿದೆ.
ಎಂಟು ಜನರಲ್ಲಿ 14 ವರ್ಷದ ಬಾಲಕಿ ದಿವ್ಯ ಸ್ಥಳದಲ್ಲೇ ಸಾವಿಗೀಡಾಗಿದ್ದಾಳೆ. ನಾಲ್ಕು ಜನರ ಸ್ಥಿತಿ ಗಂಭೀರವಾಗಿದ್ದು, ಸದ್ಯ ಆಸ್ಪತ್ರೆಗೆ ರವಾನಿಸಲಾಗಿದೆ. ಇನ್ನುಳಿದವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬ್ಯಾಲೆನೋ ಕಾರಿನಲ್ಲಿದ್ದ ಮೂರು ಜನರಲ್ಲಿ ಒಬ್ಬರಿಗೆ ಗಂಭೀರ ಗಾಯವಾಗಿದೆ ಎಂದು ಶಂಕಿಸಲಾಗಿದ್ದು, ಮೂವರೂ ಸ್ಥಳದಿಂದ ನಾಪತ್ತೆಯಾಗಿದ್ದಾರೆ. ಸ್ಥಳದಲ್ಲಿ ಕ್ರೇನ್ ಮೂಲಕ ಸುಟ್ಟ ಕಾರನ್ನು ತೆರವು ಮಾಡಲಾಯಿತು.
ಓಮ್ನಿ ಕಾರಿನಲ್ಲಿ ಪ್ರಯಾಣ ಮಾಡುತ್ತಿದ್ದ ಎಂಟು ಜನರಲ್ಲಿ ಮಾಯಾಂಕ್, ಮಂಜುಳ, ಸುನಿತಾ, ತರುಣ್, ಮಹೇಶ್, ನಮನ್, ಶಾಂತಿಲಾಲ್ ಗಾಯಾಳುಗಳು. ದಿವ್ಯಾ (14) ಮೃತ ಬಾಲಕಿ. ಎಲ್ಲರೂ ದಾಸನಪುರ ನಿವಾಸಿಗಳು. ನಮನ್, ಸುನಿತಾ, ಮಾಯಾಂಕ್ ಸ್ಥಿತಿ ಗಂಭೀರವಾಗಿದೆ. ಓಮ್ನಿಯ ಪೆಟ್ರೋಲ್ ಟ್ಯಾಂಕ್‌ನಿಂದ ಪೆಟ್ರೋಲ್ ಲೀಕ್ ಆಗಿ ಬೆಂಕಿ ಹೊತ್ತಿಕೊಂಡಿದೆ. ಗಾಯಾಳುಗಳಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.
ಇದನ್ನೂ ಓದಿ | Rain News: ಪ್ರತ್ಯೇಕ ಮಳೆ ಅವಘಡ; ಬೀದರ್‌ನಲ್ಲಿ ಸಿಡಿಲು ಬಡಿದು ಇಬ್ಬರು ಯುವಕರ ದುರ್ಮರಣ
ಬ್ಯಾಲೆನೋ ಕಾರಿನಲ್ಲಿದ್ದ ಮೂರು ಜನರಿಗಾಗಿ ಪೊಲೀಸರಿಂದ ತೀವ್ರ ಹುಡುಕಾಟ ನಡೆದಿದೆ. ಮೂವರಲ್ಲಿ ಒಬ್ಬ ವ್ಯಕ್ತಿಗೆ ಗಂಭೀರ ಗಾಯವಾಗಿರುವ ಶಂಕೆ ಇದೆ. ಘಟನೆ ನಡೆಯುತ್ತಿದ್ದಂತೆ ಇವರು ಸ್ಥಳದಿಂದ ನಾಪತ್ತೆಯಾಗಿದ್ದಾರೆ. ಇವರನ್ನು ಪರಿಶೀಲನೆ ನಡೆಸಬೇಕಿದೆ ಎಂದು ಬೆಂಗಳೂರು ಗ್ರಾಮಾಂತರ ಎಸ್ ಪಿ ಮಲ್ಲಿಕಾರ್ಜುನ ಬಾಲಾದಂಡಿ ಹೇಳಿಕೆ ನೀಡಿದ್ದಾರೆ.