Pankaj Tripathi: ಭೀಕರ ಅಪಘಾತ; ನಟ ಪಂಕಜ್‌ ತ್ರಿಪಾಠಿ ಬಾವ ನಿಧನ, ಸಹೋದರಿ ಸ್ಥಿತಿ ಗಂಭೀರ - Vistara News

ಪ್ರಮುಖ ಸುದ್ದಿ

Pankaj Tripathi: ಭೀಕರ ಅಪಘಾತ; ನಟ ಪಂಕಜ್‌ ತ್ರಿಪಾಠಿ ಬಾವ ನಿಧನ, ಸಹೋದರಿ ಸ್ಥಿತಿ ಗಂಭೀರ

Pankaj Tripathi: ಬಾಲಿವುಡ್‌ ನಟ ಪಂಕಜ್‌ ತ್ರಿಪಾಠಿ ಅವರ ಸಹೋದರಿ ಸರಿತಾ ತಿವಾರಿ ಹಾಗೂ ಬಾವ ರಾಜೇಶ್‌ ತಿವಾರಿ ಅವರು ಕಾರಿನಲ್ಲಿ ತೆರಳುವಾಗ ಅಪಘಾತ ಸಂಭವಿಸಿದೆ. ದಂಪತಿಯು ಕಾರಿನಲ್ಲಿ ತೆರಳುವಾಗ ನಿಯಂತ್ರಣ ತಪ್ಪಿ ಕಾರು ಡಿವೈಡರ್‌ಗೆ ಡಿಕ್ಕಿಯಾಗಿದೆ. ರಾಜೇಶ್‌ ತಿವಾರಿ ಅವರು ಮೃತಪಟ್ಟಿದ್ದು, ಸರಿತಾ ಅವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.

VISTARANEWS.COM


on

Pankaj Tripathi
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ರಾಂಚಿ: ಬಾಲಿವುಡ್‌ ನಟ, ಮಿರ್ಜಾಪುರ ವೆಬ್‌ ಸಿರೀಸ್‌ ಖ್ಯಾತಿಯ ಪಂಕಜ್‌ ತ್ರಿಪಾಠಿ (Pankaj Tripathi) ಅವರ ಬಾವ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಜಾರ್ಖಂಡ್‌ನ ನಿರ್ಸಾದಲ್ಲಿರುವ ಜಿಟಿ ರಸ್ತೆಯಲ್ಲಿ ಶನಿವಾರ (ಏಪ್ರಿಲ್‌ 20) ಸಂಜೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಪಂಕಜ್‌ ತ್ರಿಪಾಠಿ ಬಾವ ರಾಜೇಶ್‌ ತಿವಾರಿ (Rajesh Tiwari) ಮೃತಪಟ್ಟಿದ್ದಾರೆ. ಇನ್ನು ನಟನ ಸಹೋದರಿ ಸರಿತಾ ತಿವಾರಿ (Sarita Tiwari) ಅವರು ಕೂಟ ಅಪಘಾತಕ್ಕೀಡಾಗಿದ್ದು, ಅವರ ಸ್ಥಿತಿಯೂ ಚಿಂತಾಜನಕವಾಗಿದೆ ಎಂದು ತಿಳಿದುಬಂದಿದೆ.

ರಾಜೇಶ್‌ ತಿವಾರಿ ಹಾಗೂ ಸರಿತಾ ತಿವಾರಿ ಅವರು ಕಾರಿನಲ್ಲಿ ಪಶ್ಚಿಮ ಬಂಗಾಳದಿಂದ ಬಿಹಾರದ ಗೋಪಾಲ್‌ಗಂಜ್‌ಗೆ ತೆರಳುತ್ತಿದ್ದರು. ಶನಿವಾರ ಸಂಜೆ 4.30ರ ಸುಮಾರಿಗೆ ದೆಹಲಿ-ಕೋಲ್ಕೊತಾ ರಾಷ್ಟ್ರೀಯ ಹೆದ್ದಾರಿ ಬಳಿ ಕಾರು ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿಯಾಗಿದೆ. ಕಾರು ವೇಗವಾಗಿ ಚಲಿಸುತ್ತಿದ್ದ ಕಾರಣ ಡಿಕ್ಕಿಯಾಗುತ್ತಲೇ ನಜ್ಜುಗುಜ್ಜಾಗಿದೆ. ಇದರಿಂದಾಗಿ ಇಬ್ಬರೂ ಗಂಭೀರವಾಗಿ ಗಾಯಗೊಂಡರು ಎಂದು ತಿಳಿದುಬಂದಿದೆ.

ಕೂಡಲೇ ಇಬ್ಬರನ್ನೂ ಧನಬಾದ್‌ನಲ್ಲಿರುವ ಆಸ್ಪತ್ರೆಗೆ ಸಾಗಿಸಲಾಯಿತು. ಶಾಹಿದ್‌ ನಿರ್ಮಲ್‌ ಮೆಹ್ತೋ ಮೆಡಿಕಲ್‌ ಕಾಲೇಜ್‌ ಹಾಸ್ಪಿಟಲ್‌ಗೆ ತಲುಪುತ್ತಲೇ ರಾಜೇಶ್‌ ತಿವಾರಿ ಅವರು ಮೃತಪಟ್ಟಿದ್ದಾರೆ ಎಂಬುದಾಗಿ ವೈದ್ಯರು ಘೋಷಿಸಿದರು. ಇದೇ ಆಸ್ಪತ್ರೆಯಲ್ಲಿ ಸರಿತಾ ತಿವಾರಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಸರಿತಾ ತಿವಾರಿ ಅವರ ಕಾಲಿಗೆ ಗಂಭೀರವಾಗಿ ಗಾಯಗಳಾಗಿವೆ ಎಂದು ಹೇಳಲಾಗುತ್ತಿದೆ.

ಕೆಲ ದಿನಗಳ ಹಿಂದಷ್ಟೇ ಮಂಗ್ಲಿ ಖ್ಯಾತಿಯ ಸತ್ಯವತಿ ರಾಥೋಡ್‌ ಅವರ ಕಾರು ಅಪಘಾತಕ್ಕೀಡಾಗಿತ್ತು. ಹೈದರಾಬಾದ್-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ತೊಂಡುಪಲ್ಲಿ ಸೇತುವೆ ಬಳಿ ಸಂಭವಿಸಿದ ಅಪಘಾತದಲ್ಲಿ ಗಾಯಕಿಯು ಗಾಯಗೊಂಡಿದ್ದರು.

ಮಂಗ್ಲಿ ಮತ್ತು ಇತರ ಇಬ್ಬರು ಪ್ರಯಾಣಿಕರಾದ ಮೇಘರಾಜ್ ಮತ್ತು ಮನೋಹರ್ ಅವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದವು. ಅಪಘಾತದ ಸಮಯದಲ್ಲಿ ಸಣ್ಣ ಟ್ರಕ್ ಚಾಲಕ ಮದ್ಯದ ಅಮಲಿನಲ್ಲಿದ್ದ ಎನ್ನಲಾಗಿದೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಕಳುಹಿಸಲಾಗಿತ್ತು.

ಇದನ್ನೂ ಓದಿ: Emraan Hashmi: ಖ್ಯಾತ ನಟಿ ಜತೆ ಕೆಟ್ಟ ಚುಂಬನದ ಅನುಭವ ಎಂದಿದ್ದ ನಟ ಮತ್ತೆ ಆಕೆಯ ಜತೆಗೇ ಪೋಸ್‌!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

ಕಾಶ್ಮೀರ ಗಡಿಯಲ್ಲಿ ರಕ್ಷಣಾ ಬಲ ಹೆಚ್ಚಿಸಿಕೊಳ್ಳಲು ಕಂತ್ರಿ ಪಾಕಿಸ್ತಾನಕ್ಕೆ ಕುತಂತ್ರಿ ಚೀನಾ ನೆರವು; ಸ್ಫೋಟಕ ವರದಿ ಇಲ್ಲಿದೆ

ಜಮ್ಮು-ಕಾಶ್ಮೀರ ಗಡಿಯಲ್ಲಿ ಪಾಕಿಸ್ತಾನವು ಕಮ್ಯುನಿಕೇಷನ್‌ ಟವರ್‌ ನಿರ್ಮಾಣ, ಸುರಂಗಗಳಲ್ಲಿ ಕೇಬಲ್‌ಗಳ ಅಳವಡಿಕೆ ಸೇರಿ ಹಲವು ರೀತಿಯಲ್ಲಿ ರಕ್ಷಣಾ ಬಲ ಹೆಚ್ಚಿಸಿಕೊಳ್ಳುತ್ತಿದೆ. ಆರ್ಥಿಕವಾಗಿ ದಿವಾಳಿಯಾಗಿರುವ, ಆಂತರಿಕ ಗಲಭೆಗಳಿಗೆ ಕಾರಣವಾಗಿರುವ ಪರಿಸ್ಥಿತಿಯಲ್ಲೂ ಚೀನಾದ ನೆರವಿನಿಂದ ಪಾಕಿಸ್ತಾನವು ಗಡಿಯಲ್ಲಿ ರಕ್ಷಣಾ ಬಲ ಹೆಚ್ಚಿಸಿಕೊಂಡಿದೆ ಎಂದು ತಿಳಿದುಬಂದಿದೆ.

VISTARANEWS.COM


on

Border
Koo

ನವದೆಹಲಿ: ಲಡಾಕ್‌ ಗಡಿಯಲ್ಲಿ ಹೆಚ್ಚುವರಿ ಸೈನಿಕರನ್ನು ನಿಯೋಜಿಸಿ ಉಪಟಳ ಮಾಡುವ ಚೀನಾದ ಮತ್ತೊಂದು ನರಿ ಬುದ್ಧಿ ಬಯಲಾಗಿದೆ. ಜಮ್ಮು-ಕಾಶ್ಮೀರ (Jammu Kashmir) ಗಡಿಯಲ್ಲಿ ಪಾಕಿಸ್ತಾನವು ತನ್ನ ರಕ್ಷಣಾ ಬಲವನ್ನು ಹೆಚ್ಚಿಸಿಕೊಳ್ಳಲು ಚೀನಾ (China) ಹಣಕಾಸು ನೆರವು ನೀಡಿದೆ ಎಂಬ ಸ್ಫೋಟಕ ವರದಿ ಬಯಲಾಗಿದೆ. ಪಾಕಿಸ್ತಾನದಲ್ಲಿ (Pakistan) ಉಗ್ರವಾದದ ಪೋಷಣೆಗೆ ಕಮ್ಯುನಿಸ್ಟ್‌ ರಾಷ್ಟ್ರದ ನೆರವಿದೆ. ಭಾರತದ (India) ವಿರುದ್ಧ ಮಾಲ್ಡೀವ್ಸ್‌ ಅಧ್ಯಕ್ಷ ಮೊಹಮ್ಮದ್‌ ಮುಯಿಜು ಅವರನ್ನು ಎತ್ತಿಕಟ್ಟುತ್ತದೆ. ಇದರ ಬೆನ್ನಲ್ಲೇ, ಕಾಶ್ಮೀರ ಗಡಿಯಲ್ಲಿ ಚೀನಾದ ಮತ್ತೊಂದು ಉದ್ಧಟತನ ಬೆಳಕಿಗೆ ಬಂದಿದೆ.

ಹೌದು, ಜಮ್ಮು-ಕಾಶ್ಮೀರದ ಗಡಿ ನಿಯಂತ್ರಣ ರೇಖೆ (LoC) ಬಳಿ ಪಾಕಿಸ್ತಾನವು ಬಂಕರ್‌ಗಳು, ಮಾನವಸಹಿತ ಹಾಗೂ ಪ್ರತಿದಾಳಿ ಮಾಡುವ ಏರಿಯಲ್‌ ವೆಹಿಕಲ್‌ಗಳ (ಡ್ರೋನ್‌ಗಳು) ನಿಯೋಜನೆ, ಅತ್ಯಾಧುನಿಕ ಕಮ್ಯುನಿಕೇಷನ್‌ ಟವರ್‌ಗಳ ನಿರ್ಮಾಣ, ಸುರಂಗ ಮಾರ್ಗಗಳಲ್ಲಿ ಫೈಬರ್‌ ಕೇಬಲ್‌ಗಳ ಅಳವಡಿಕೆ ಸೇರಿ ಹಲವು ರೀತಿಯಲ್ಲಿ ಪಾಕಿಸ್ತಾನದ ರಕ್ಷಣಾ ಬಲ ಹೆಚ್ಚಾಗಲು ಚೀನಾ ಕಳೆದ ಮೂರು ವರ್ಷಗಳಿಂದ ನೆರವು ನೀಡುತ್ತಿದೆ ಎಂಬುದಾಗಿ ತಿಳಿದುಬಂದಿದೆ.

Terrorists Killed

ರೇಡಾರ್‌ಗಳ ನೆರವು

ಮಧ್ಯಮ ಹಾಗೂ ಕಡಿಮೆ ಎತ್ತರದಲ್ಲಿ ಒದಗಿರುವ ಅಪಾಯವನ್ನು ನಿಗ್ರಹಿಸಲು ಚೀನಾ ತಾರಿಸಿದ ಜೆವೈ ಹಾಗೂ ಎಚ್‌ಜಿಆರ್‌ ಸರಣಿಯ ರೇಡಾರ್‌ಗಳನ್ನು ಕೂಡ ಚೀನಾ ನೀಡಿದೆ. ಇದರಿಂದ ಭಾರತೀಯ ಸೇನೆಯ ಚಟುವಟಿಕೆ, ಕಾರ್ಯಾಚರಣೆಗಳ ಮೇಲೆ ನಿಗಾ ಇಡಲು ಪಾಕಿಸ್ತಾನಕ್ಕೆ ನೆರವಾಗಿದೆ. ಇವುಗಳ ಜತೆಗೆ 155 ಎಂಎಂ ಹೌವಿಟ್ಜರ್‌ ಗನ್‌ಗಳನ್ನೂ ಚೀನಾ ನೀಡಿದೆ. ಜಮ್ಮು-ಕಾಶ್ಮೀರ ಗಡಿಯಲ್ಲಿ ಹಲವು ಕಡೆ ಇವುಗಳನ್ನು ನಿಯೋಜಿಸಲಾಗಿದೆ ಎಂದು ವರದಿಯೊಂದು ತಿಳಿಸಿದೆ.

2016ರಲ್ಲಿ ಉರಿ ದಾಳಿಗೆ ಭಾರತೀಯ ಸೇನೆಯು ಸರ್ಜಿಕಲ್‌ ಸ್ಟ್ರೈಕ್‌ ಮೂಲಕ ತಿರುಗೇಟು ನೀಡಿದೆ. 2019ರಲ್ಲಿ ಪುಲ್ವಾಮ ದಾಳಿಗೆ ಬಾಲಾಕೋಟ್‌ ವಾಯುದಾಳಿ ಮೂಲಕ ಎದುರೇಟು ಕೊಟ್ಟಿದೆ. ಜಮ್ಮು-ಕಾಶ್ಮೀರದಲ್ಲಿ ಸೇನೆಗೆ ಹೆಚ್ಚಿನ ಅಧಿಕಾರ ನೀಡುವ, 370ನೇ ವಿಧಿ ರದ್ದುಗೊಳಿಸುವ ಮೂಲಕ ಉಗ್ರರು, ಕಲ್ಲುತೂರಾಟಗಾರರನ್ನು ನಿಗ್ರಹಿಸಲಾಗಿದೆ. ಇದರ ಪರಿಣಾಮವಾಗಿ, ಗಡಿಯ ಹೊರತಾಗಿ ಭಾರತದಲ್ಲಿ ಯಾವುದೇ ಉಪಟಳ ಮಾಡಲು ಪಾಕಿಸ್ತಾನಕ್ಕೆ ಸಾಧ್ಯವಾಗುತ್ತಿಲ್ಲ. ಮತ್ತೊಂದೆಡೆ ಪಾಕಿಸ್ತಾನವು ಹಣಕಾಸು ವಿಚಾರದಲ್ಲಿ ದಿವಾಳಿಯಾಗಿದೆ. ಇದೇ ಕಾರಣಕ್ಕೆ ಮತ್ತೆ ಚೀನಾದ ಹಣದಿಂದ ಗಡಿಯಲ್ಲಿ ರಕ್ಷಣಾ ಬಲ ಹೆಚ್ಚಿಸಿಕೊಳ್ಳುತ್ತಿದೆ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: RBI Balance Sheet: ಪಾಕಿಸ್ತಾನದ ಜಿಡಿಪಿಗಿಂತ ಆರ್‌ಬಿಐ ಬ್ಯಾಲೆನ್ಸ್‌ ಶೀಟ್‌ ಎರಡೂವರೆ ಪಟ್ಟು ಹೆಚ್ಚು; ಹೀಗಿದೆ ವರದಿ

Continue Reading

ಕರ್ನಾಟಕ

DK Shivakumar: ಸಿಎಂ, ನನ್ನ ಮೇಲೆ ಶತ್ರು ಭೈರವಿ ಯಾಗ ನಡೆಯುತ್ತಿದೆ; ಡಿಕೆಶಿ ಹೊಸ ಬಾಂಬ್

DK Shivakumar: ಕೇರಳದಲ್ಲಿ ನನ್ನ ಮೇಲೆ, ಸಿದ್ದರಾಮಯ್ಯ ಅವರ ಮೇಲೆ ಹಾಗೂ ನಮ್ಮ ಸರ್ಕಾರದ ಮೇಲೆ ಕೇರಳದಲ್ಲಿ ದೊಡ್ಡ ಪ್ರಯೋಗ ನಡೆಯುತ್ತಿದೆ. ಕೇರಳದ ರಾಜರಾಜೇಶ್ವರಿ ದೇವಸ್ಥಾನದ ಸುತ್ತಮುತ್ತ ಯಾಗ ನಡೆಯುತ್ತಿದೆ. ನನ್ನ ಹಾಗೂ ಸಿಎಂ ಮೇಲೆ ಯಾವ ಪೂಜೆ ನಡೆಯುತ್ತಿದೆ ಎಂಬುದು ಕೂಡ ಗೊತ್ತಿದೆ ಎಂಬುದಾಗಿ ಡಿ.ಕೆ. ಶಿವಕುಮಾರ್‌ ಸ್ಫೋಟಕ ಹೇಳಿಕೆ ನೀಡಿದ್ದಾರೆ.

VISTARANEWS.COM


on

DK Shivakumar
Koo

ಬೆಂಗಳೂರು: ಲೋಕಸಭೆ ಚುನಾವಣೆ (Lok Sabha Election) ಫಲಿತಾಂಶಕ್ಕೆ ಕೆಲವೇ ದಿನಗಳು ಬಾಕಿ ಇದ್ದು, ಕರ್ನಾಟಕ ಸೇರಿ ದೇಶಾದ್ಯಂತ ಸೋಲು-ಗೆಲುವಿನ ಲೆಕ್ಕಾಚಾರ ನಡೆಯುತ್ತಿದೆ. ಇದರ ಬೆನ್ನಲ್ಲೇ, ಕರ್ನಾಟಕ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ (DK Shivakumar) ಅವರು ಹೊಸ ಬಾಂಬ್‌ ಸಿಡಿಸಿದ್ದಾರೆ. “ನನ್ನ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಕೇರಳದಲ್ಲಿ ಶತ್ರು ಭೈರವಿ ಯಾಗ ನಡೆಯುತ್ತಿದೆ” ಎಂಬುದಾಗಿ ಹೇಳಿರುವುದು ಈಗ ಸಂಚಲನ ಮೂಡಿಸಿದೆ.

“ಕೇರಳದಲ್ಲಿ ನನ್ನ ಮೇಲೆ, ಸಿದ್ದರಾಮಯ್ಯ ಅವರ ಮೇಲೆ ಹಾಗೂ ನಮ್ಮ ಸರ್ಕಾರದ ಮೇಲೆ ಕೇರಳದಲ್ಲಿ ದೊಡ್ಡ ಪ್ರಯೋಗ ನಡೆಯುತ್ತಿದೆ. ಕೇರಳದ ರಾಜರಾಜೇಶ್ವರಿ ದೇವಸ್ಥಾನದ ಸುತ್ತಮುತ್ತ ಯಾಗ ನಡೆಯುತ್ತಿದೆ. ನನ್ನ ಹಾಗೂ ಸಿಎಂ ಮೇಲೆ ಯಾವ ಪೂಜೆ ನಡೆಯುತ್ತಿದೆ ಎಂಬುದು ಕೂಡ ಗೊತ್ತಿದೆ” ಎಂದು ಹೇಳಿದ ಅವರು ಯಾರೋ ಬರೆದು ಕೊಟ್ಟಿದ್ದಾರೆ ಎಂಬುದಾಗಿ ಜೇಬಿನಲ್ಲಿರುವ ಚೀಟಿಯನ್ನು ತೆಗೆದು ನೋಡಿದ್ದಾರೆ.

ಪಂಚಬಲಿ ಕೊಡುತ್ತಿದ್ದಾರೆ ಎಂದ ಡಿಸಿಎಂ

ಅಘೋರಿಗಳ ಮೂಲಕ ಶತ್ರು ಭೈರವಿ ಯಾಗ ನಡೆಸಲಾಗುತ್ತಿದೆ. ಇದಕ್ಕಾಗಿ ಪಂಚ ಬಲಿ ಕೊಡುತ್ತಿದ್ದಾರೆ. 21 ಕಪ್ಪು ಮೇಕೆ, 3 ಎಮ್ಮೆ, 21 ಕುರಿ, 5 ಹಂದಿ ಹಾಗೂ ಕೋಣವನ್ನು ಬಲಿ ಕೊಡುತಿದ್ದಾರೆ. ಈಗ ಯಾಗ ನಡೆಯುತ್ತಿದ್ದು, ಅವರ ಪ್ರಯತ್ನವನ್ನು ಅವರು ಮಾಡುತ್ತಿದ್ದಾರೆ. ಆದರೆ, ನಾವು ನಂಬಿದ ದೇವರು ನಮ್ಮನ್ನು ಕಾಪಾಡುತ್ತಾನೆ. ಎಲ್ಲ ಡೀಟೇಲ್ಸ್‌ ಅನ್ನು ಚೀಟಿ ಬರೆದುಕೊಟ್ಟಿದ್ದಾರೆ. ಯಾರು ಭಾಗಿಯಾಗಿದ್ದರೋ ಅವರೇ ನನಗೆ ಮಾಹಿತಿ ಕೊಟ್ಟಿದ್ದಾರೆ. ಇದೆಲ್ಲವನ್ನು ರಾಜಕೀಯದವರಲ್ಲದೆ ಬೇರೆ ಯಾರು ಮಾಡಲು ಸಾಧ್ಯ. ಆದರೆ, ಇದೆಲ್ಲವನ್ನು ನಾವು ನಂಬುವುದಿಲ್ಲ” ಎಂಬುದಾಗಿ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.

ಮೂಲಗಳ ಪ್ರಕಾರ, ರಾಜ್ಯ ಸರ್ಕಾರದ ವಿರುದ್ಧ ಕೇರಳದಲ್ಲಿ ರಾಜಕಂಟಕ ಯಾಗ ನಡೆಯುತ್ತಿದೆ ಎಂಬ ಮಾತುಗಳು ಕೇಳಿಬಂದಿವೆ. ಸಿಎಂ, ಡಿಸಿಎಂ ಮಾರಣ ಮೋಹನ ಸ್ತಂಭನ ಪ್ರಯೋಗ ಯಾಗ ನಡೆಯುತ್ತಿದೆ. ಕೇರಳದ ನಿರ್ಜನ ಪ್ರದೇಶದಲ್ಲಿ ನಡೆದಿದೆ ಎಂಬ ಮಾಹಿತಿ ಇದೆ. ಇದೇ ಮಾಹಿತಿ ಆಧರಿಸಿ ಡಿ.ಕೆ. ಶಿವಕುಮಾರ್ ಹೇಳಿಕೆ ನೀಡಿದ್ದಾರೆ ಎನ್ನಲಾಗುತ್ತಿದೆ. ರಾಜ”ಸ್ಥಾನ”ದಲ್ಲಿ ಕೂತವರ ವಿರುದ್ಧ ಪ್ರಯೋಗ ನಡೆದಿದೆ ಎಂದು ಪರೋಕ್ಷವಾಗಿ ಡಿಕೆಶಿ ಹೇಳಿದ್ದಾರೆ.

ಇದನ್ನೂ ಓದಿ: DK Shivakumar: ಕುತೂಹಲ ಕೆರಳಿಸಿದ ಡಿಕೆಶಿ- ಉಪರಾಷ್ಟ್ರಪತಿ ಭೇಟಿ; ʼಬಿಜೆಪಿಗೆ ಸೇರ್ತೀರಾʼ ಎಂದ ನೆಟ್ಟಿಗರು!

Continue Reading

ಕ್ರೀಡೆ

IPL 2024 : ಜಿಯೋಸಿನಿಮಾದಲ್ಲಿ ದಾಖಲೆಯ 62 ಕೋಟಿಗೂ ಅಧಿಕ ವೀಕ್ಷಣೆ ಕಂಡ ಐಪಿಎಲ್​

IPL 2024: ಭಾರತದಲ್ಲಿ ಕ್ರೀಡಾಕೂಟಗಳನ್ನು ನೋಡುವ ವಿಧಾನವನ್ನು ಮರು ವ್ಯಾಖ್ಯಾನಿಸುವುದನ್ನು ಮುಂದುವರಿಸುವ ಭರವಸೆಯೊಂದಿಗೆ ನಾವು ಐಪಿಎಲ್-2024 ಆವೃತ್ತಿಯನ್ನು ಮುಕ್ತಾಯಗೊಳಿಸುತ್ತೇವೆ. ನಾವು ವರ್ಷದಿಂದ ವರ್ಷಕ್ಕೆ ಕಾಣುತ್ತಿರುವ ಬೆಳವಣಿಗೆಯು ನಮ್ಮ ವೀಕ್ಷಕ ಕೇಂದ್ರಿತ ಪ್ರಸಾರದ ಮೂಲಕ ಮೆಚ್ಚುಗೆ ಪಡೆದುಕೊಂಡಿದೆ ಎಂಬ ಭರವಸೆ ನಮಗೆ ನೀಡುತ್ತಿದೆ.

VISTARANEWS.COM


on

IPL 2024
Koo

ಮುಂಬೈ: ಟಾಟಾ ಐಪಿಎಲ್‌ನ ಅಧಿಕೃತ ಸ್ಟ್ರೀಮಿಂಗ್ ಆಗಿದ್ದ ಜಿಯೋಸಿನಿಮಾ, ಟಾಟಾ ಐಪಿಎಲ್‌-2024ರ (IPL 2024) ಋತುವಿನಲ್ಲಿ 2,600 ಕೋಟಿ ವೀಕ್ಷಣೆ ದಾಖಲೆ ಸೃಷ್ಟಿಸಿದೆ. ಇದು ಟಾಟಾ ಐಪಿಎಲ್‌-2023ಕ್ಕೆ ಹೋಲಿಸಿದರೆ ಶೇ. 53ರಷ್ಟು ಹೆಚ್ಚಳವಾಗಿದೆ. ಜಿಯೋಸಿನಿಮಾ ಐಪಿಎಲ್​​ನಲ್ಲಿ ತನ್ನ ಎರಡನೇ ಋತುವನ್ನು ಮುಕ್ತಾಯಗೊಳಿಸುತ್ತಿದ್ದಂತೆ, ಈ ಪ್ಲಾಟ್ಫಾರ್ಮ್ 35,000 ಕೋಟಿಗೂ ಅಧಿಕ ನಿಮಿಷಗಳ ವೀಕ್ಷಣೆ ಸಮಯವನ್ನು ದಾಖಲಿಸಿದೆ.

ಮೊದಲ ದಿನದ ಅದ್ಭುತ ಆರಂಭದ ನಂತರ ತನ್ನ ವೀಕ್ಷಣೆಯ ಪ್ರಮಾಣವನ್ನು ಹೆಚ್ಚಿಸಿದ ಜಿಯೋಸಿನಿಮಾ, ತನ್ನ ವ್ಯಾಪ್ತಿಯನ್ನು ಶೇ. 38ಕ್ಕಿಂತ ಅಧಿಕವಾಗಿ ಬೆಳೆಸಿದ್ದು, 62 ಕೋಟಿಗೂ ಅಧಿಕ ವಿಕ್ಷಣೆಯೊಂದಿಗೆ ಮುಕ್ತಾಯಗೊಳಿಸಿದೆ. 12 ಭಾಷೆಯ ಫೀಡ್‌ಗಳು, 4ಕೆ ವೀಕ್ಷಣೆ, ಮಲ್ಟಿ-ಕ್ಯಾಮ್ ದೃಶ್ಯಗಳು ಮತ್ತು ಎಆರ್/ವಿಆರ್ ಮೂಲಕ ವರ್ಚುಯಲ್​ ಅನುಭವ ಮತ್ತು 360-ಡಿಗ್ರಿ ವೀಕ್ಷಣೆಯ ಅವಕಾಶ ನೀಡಿದ್ದರಿಂದ ಟಿವಿ ವೀಕ್ಷಕರು ಗಣನೀಯವಾಗಿ ವಿಸ್ತರಿಸಿದರು. ಕಳೆದ ಆವೃತ್ತಿಯಲ್ಲಿ ವೀಕ್ಷಣೆಯ ಸರಾಸರಿಯು 60 ನಿಮಿಷಗಳಾಗಿತ್ತು.

ಜಿಯೋಸಿನಿಮಾ 2024ರ ಆವೃತ್ತಿಯನ್ನು 11.3 ಕೋಟಿ ವೀಕ್ಷಕರು ಮೊದಲ ದಿನದಂದೇ ಲಾಗ್ಇನ್ ಆಗುವುದರೊಂದಿಗೆ ಶುಭಾರಂಭ ಮಾಡಿತ್ತು. ಐಪಿಎಲ್-2023ರ ಮೊದಲ ದಿನಕ್ಕೆ ಹೋಲಿಸಿದರೆ ಇದು ಶೇ.51ರಷ್ಟು ಹೆಚ್ಚಳ. ಜಿಯೋಸಿನಿಮಾ ತನ್ನ ಎರಡನೇ ಆವೃತ್ತಿಯನ್ನು ಡಿಜಿಟಲ್‌ನಲ್ಲಿ ಪ್ರಾರಂಭಿಸುತ್ತಿದ್ದಂತೆ ಟಾಟಾ ಐಪಿಎಲ್-2024ರ ಆರಂಭಿಕ ದಿನವು 59 ಕೋಟಿಗೂ ಹೆಚ್ಚು ವೀಡಿಯೊ ವೀಕ್ಷಣೆಗಳನ್ನು ಪ್ಲಾಟ್​ಫಾರ್ಮ್​​ನಲ್ಲಿ ದಾಖಲಿಸಿಕೊಂಡಿತು. ಅಂತಿಮವಾಗಿ ಇದು 660 ಕೋಟಿ ನಿಮಿಷಗಳ ವೀಕ್ಷಣೆ ಸಮಯ ದಾಖಲಿಸಿತು.

ಭಾರತದಲ್ಲಿ ಕ್ರೀಡಾಕೂಟಗಳನ್ನು ನೋಡುವ ವಿಧಾನವನ್ನು ಮರು ವ್ಯಾಖ್ಯಾನಿಸುವುದನ್ನು ಮುಂದುವರಿಸುವ ಭರವಸೆಯೊಂದಿಗೆ ನಾವು ಐಪಿಎಲ್-2024 ಆವೃತ್ತಿಯನ್ನು ಮುಕ್ತಾಯಗೊಳಿಸುತ್ತೇವೆ. ನಾವು ವರ್ಷದಿಂದ ವರ್ಷಕ್ಕೆ ಕಾಣುತ್ತಿರುವ ಬೆಳವಣಿಗೆಯು ನಮ್ಮ ವೀಕ್ಷಕ ಕೇಂದ್ರಿತ ಪ್ರಸಾರದ ಮೂಲಕ ಮೆಚ್ಚುಗೆ ಪಡೆದುಕೊಂಡಿದೆ ಎಂಬ ಭರವಸೆ ನಮಗೆ ನೀಡುತ್ತಿದೆ. ನಮ್ಮ ಪಾಲುದಾರರು, ಪ್ರಾಯೋಜಕರಿಗೆ ನಾವು ಧನ್ಯವಾದ ಹೇಳಲು ಬಯಸುತ್ತೇವೆ” ಎಂದು ವಯಾಕಾಮ್18ರ ವಕ್ತಾರರು ಹೇಳಿದ್ದಾರೆ.

28 ಪ್ರಾಯೋಜಕರು

ಜಿಯೊ ಸಿನಿಮಾಗೆ ಆರಂಭಲ್ಲಿ ಬ್ರಾಂಡ್‌ಗಳಾದ ಡ್ರೀಮ್11, ಥಮ್ಸ್ ಅಪ್, ಪಾರ್ಲೆ ಪ್ರಾಡಕ್ಟ್ಸ್, ಬ್ರಿಟಾನಿಯಾ, ದಾಲ್ಮಿಯಾ ಸಿಮೆಂಟ್ಸ್ ಮತ್ತು ಎಚ್ಡಿಎಫ್​ಸಿ ಬ್ಯಾಂಕ್‌ನ ಪ್ರಾಯೋಜಕತ್ವ ಇತ್ತು. ಋತುವಿನ ಅಂತ್ಯದ ವೇಳೆಗೆ ಜಿಯೋಸಿನಿಮಾ ದಾಖಲೆಯ 28 ಪ್ರಾಯೋಜಕರು ಮತ್ತು 1400ಕ್ಕೂ ಹೆಚ್ಚು ಜಾಹೀರಾತುದಾರರನ್ನು ಹೊಂದಿತ್ತು.

ಇದನ್ನೂ ಓದಿ: Singapore Open: ದ್ವಿತೀಯ ಸುತ್ತಿಗೆ ಆಟ ಮುಗಿಸಿದ ಭಾರತದ ಪಿ.ವಿ.ಸಿಂಧು

ಅತ್ಯುತ್ತಮ ದರ್ಜೆಯ ಕ್ರೀಡಾ ವಿಷಯವನ್ನು ನೀಡುವ ಜಿಯೋಸಿನಿಮಾದ ಬದ್ಧತೆಯು ಪ್ಯಾರಿಸ್ ಒಲಿಂಪಿಕ್ ಗೇಮ್ಸ್-2024ರೊಂದಿಗೆ ಮುಂದುವರಿಯುತ್ತದೆ. ವೀಕ್ಷಕರು ಸಾವಿರಾರು ಗಂಟೆಗಳ ಲೈವ್ ಮತ್ತು ಬೇಡಿಕೆಯ ಕ್ರೀಡೆಯೊಂದಿಗೆ ಒಲಿಂಪಿಕ್ಸ್‌ನ ವರ್ಧಿತ ವೀಕ್ಷಣೆಯ ಅನುಭವವನ್ನು ಹಿಂದೆಂದಿಗಿಂತಲೂ ಹೆಚ್ಚಾಗಿ ನಿರೀಕ್ಷಿಸಬಹುದು. ವಯಾಕಾಮ್18ರ ಪ್ಯಾರಿಸ್​ ಒಲಿಂಪಿಕ್ಸ್-2024ರ ಸಮಗ್ರ ಕವರೇಜ್, ಭಾರತದ ಅಭಿಮಾನಿಗಳು, ಒಲಿಂಪಿಕ್ಸ್‌ನಲ್ಲಿ ಭಾರತೀಯರು ನೋಡಲೇಬೇಕಾದ ಸ್ಪರ್ಧೆಗಳನ್ನು ವಿಕ್ಷಿಸಬಹುದು.

ವೀಕ್ಷಕರು ಜಿಯೋಸಿನಿಮಾ ಆ್ಯಪ್ (ಐಒಎಸ್ ಮತ್ತು ಆಂಡ್ರಾಯ್ಡ್) ಡೌನ್ಲೋಡ್ ಮಾಡಿಕೊಳ್ಳುವ ಮೂಲಕ ತಮ್ಮ ಆಯ್ಕೆಯ ಕ್ರೀಡೆಗಳನ್ನು ವೀಕ್ಷಿಸಬಹುದಾಗಿದೆ. ತಾಜಾ ಸುದ್ದಿಗಳು, ಸ್ಕೋರ್, ವಿಡಿಯೋಗಳಿಗಾಗಿ ಅಭಿಮಾನಿಗಳು ಫೇಸ್ಬುಕ್, ಇನ್ಸ್ಟಾಗ್ರಾಂ, ಟ್ವಿಟರ್, ಯುಟ್ಯೂಬ್ ಮತ್ತು ವ್ಯಾಟ್ಸ್ಆ್ಯಪ್ನಲ್ಲಿ ಜಿಯೋಸಿನಿಮಾ ಹಾಗೂ ಫೇಸ್ಬುಕ್, ಇನ್ಸ್ಟಾಗ್ರಾಂ, ಟ್ವಿಟರ್ ಮತ್ತು ಯುಟ್ಯೂಬ್ನಲ್ಲಿ ಸ್ಪೋರ್ಟ್ಸ್18 ಅನ್ನು ಫಾಲೋ ಮಾಡಬಹುದು.

Continue Reading

ದೇಶ

RBI Balance Sheet: ಪಾಕಿಸ್ತಾನದ ಜಿಡಿಪಿಗಿಂತ ಆರ್‌ಬಿಐ ಬ್ಯಾಲೆನ್ಸ್‌ ಶೀಟ್‌ ಎರಡೂವರೆ ಪಟ್ಟು ಹೆಚ್ಚು; ಹೀಗಿದೆ ವರದಿ

RBI Balance Sheet: ಪಾಕಿಸ್ತಾನದ ಒಟ್ಟು ಜಿಡಿಪಿ ಮೌಲ್ಯವು 338 ಬಿಲಿಯನ್‌ ಡಾಲರ್‌ (ಸುಮಾರು 28 ಲಕ್ಷ ಕೋಟಿ ರೂ.) ಇದೆ. ಆದರೆ, ಭಾರತದ ಕೇಂದ್ರೀಯ ಬ್ಯಾಂಕ್‌ನ ಬ್ಯಾಲೆನ್ಸ್‌ ಶೀಟೇ ಪಾಕಿಸ್ತಾನದ ಜಿಡಿಪಿಗಿಂತ ಎರಡೂವರೆ ಪಟ್ಟು ಜಾಸ್ತಿ ಇದೆ. 2023ರ ಹಣಕಾಸು ವರ್ಷದಲ್ಲಿ ಆರ್‌ಬಿಐ ಬ್ಯಾಲೆನ್ಸ್‌ ಶೀಟ್‌ ಮೌಲ್ಯವು 63.44 ಲಕ್ಷ ಕೋಟಿ ರೂ. ಆಗಿತ್ತು.

VISTARANEWS.COM


on

RBI Balance Sheet
Koo

ಮುಂಬೈ: ಭಾರತೀಯ ರಿಸರ್ವ್‌ ಬ್ಯಾಂಕ್‌ (RBI) ತನ್ನ ವಾರ್ಷಿಕ ಹಣಕಾಸು ವರದಿ ಬಿಡುಗಡೆ ಮಾಡಿದೆ. 2024ರ ಮಾರ್ಚ್‌ 31ಕ್ಕೆ ಅಂತ್ಯವಾದ ಹಣಕಾಸು ವರ್ಷಕ್ಕೆ ಅನ್ವಯವಾಗುವಂತೆ ಆರ್‌ಬಿಐ ಬ್ಯಾಲೆನ್ಸ್‌ ಶೀಟ್‌ (ಹಣಕಾಸು ವರದಿ) ಕಳೆದ ಹಣಕಾಸು ವರ್ಷಕ್ಕಿಂತ ಶೇ.11ರಷ್ಟು ಏರಿಕೆಯಾಗಿದೆ. ಆರ್‌ಬಿಐ ಬ್ಯಾಲೆನ್ಸ್‌ ಶೀಟ್‌ (RBI Balance Sheet) ಈಗ 70.48 ಲಕ್ಷ ಕೋಟಿ ರೂ. ಮೌಲ್ಯಕ್ಕೆ ಏರಿಕೆಯಾಗಿದೆ. ಅಷ್ಟೇ ಅಲ್ಲ, ಆರ್‌ಬಿಐ ಬ್ಯಾಲೆನ್ಸ್‌ ಶೀಟ್‌ ಮೌಲ್ಯವು ಪಾಕಿಸ್ತಾನದ ಒಟ್ಟು ಜಿಡಿಪಿಯ (Pakistan GDP) ಎರಡೂವರೆ ಪಟ್ಟು ಜಾಸ್ತಿ ಇದೆ ಎಂದು ತಿಳಿದುಬಂದಿದೆ. ಇದು ಭಾರತದ ಕೇಂದ್ರೀಯ ಬ್ಯಾಂಕ್‌ನ ಆರ್ಥಿಕ ಸುಸ್ಥಿತಿಗೆ ಹಿಡಿದ ಕನ್ನಡಿಯಾಗಿದೆ ಎಂದು ಹೇಳಲಾಗುತ್ತಿದೆ.

ಅಂತಾರಾಷ್ಟ್ರೀಯ ಹಣಕಾಸು ಸಂಸ್ಥೆ (IMF) ವರದಿ ಪ್ರಕಾರ, ಪಾಕಿಸ್ತಾನದ ಒಟ್ಟು ಜಿಡಿಪಿ ಮೌಲ್ಯವು 338 ಬಿಲಿಯನ್‌ ಡಾಲರ್‌ (ಸುಮಾರು 28 ಲಕ್ಷ ಕೋಟಿ ರೂ.) ಇದೆ. ಆದರೆ, ಭಾರತದ ಕೇಂದ್ರೀಯ ಬ್ಯಾಂಕ್‌ನ ಬ್ಯಾಲೆನ್ಸ್‌ ಶೀಟೇ ಪಾಕಿಸ್ತಾನದ ಜಿಡಿಪಿಗಿಂತ ಎರಡೂವರೆ ಪಟ್ಟು ಜಾಸ್ತಿ ಇದೆ. 2023ರ ಹಣಕಾಸು ವರ್ಷದಲ್ಲಿ ಆರ್‌ಬಿಐ ಬ್ಯಾಲೆನ್ಸ್‌ ಶೀಟ್‌ ಮೌಲ್ಯವು 63.44 ಲಕ್ಷ ಕೋಟಿ ರೂ. ಆಗಿತ್ತು. ಅಷ್ಟೇ ಅಲ್ಲ, ಬಾಂಗ್ಲಾದೇಶದ ಒಟ್ಟು ಜಿಡಿಪಿ ಮೌಲ್ಯಕ್ಕಿಂತಲೂ ಆರ್‌ಬಿಐ ಬ್ಯಾಲೆನ್ಸ್‌ ಶೀಟ್‌ ಮೌಲ್ಯ ಜಾಸ್ತಿ ಇದೆ ಎಂದು ತಿಳಿದುಬಂದಿದೆ.

ಟಿಸಿಎಸ್‌ ಮಹತ್ವದ ಮೈಲುಗಲ್ಲು

ಟಾಟಾ ಕನ್ಸಲ್ಟನ್ಸಿ ಸರ್ವಿಸಸ್‌ (TCS) ಮಹತ್ವದ ಮೈಲುಗಲ್ಲು ಸಾಧಿಸಿದೆ. ಟಿಸಿಎಸ್‌ನ ಬ್ಯಾಲೆನ್ಸ್‌ ಶೀಟ್‌ 15 ಲಕ್ಷ ಕೋಟಿ ರೂ. ಆಗಿದೆ. ಇದು ದೇಶದಲ್ಲೇ ಆರ್‌ಬಿಐ ನಂತರ ಬೃಹತ್‌ ಮೊತ್ತದ ಬ್ಯಾಲೆನ್ಸ್‌ ಶೀಟ್‌ ಹೊಂದಿರುವ ಕಂಪನಿ ಎನಿಸಿದೆ. ಪಾಕಿಸ್ತಾನದ ಒಟ್ಟು ಜಿಡಿಪಿಯ ಅರ್ಧದಷ್ಟು ಮೌಲ್ಯವನ್ನು ಟಿಸಿಎಸ್‌ ಬ್ಯಾಲೆನ್ಸ್‌ ಶೀಟ್‌ ಹೊಂದಿದೆ ಎಂಬುದು ಗಮನಾರ್ಹವಾಗಿದೆ. ಉಗ್ರವಾದದ ಪೋಷಣೆ, ಚೀನಾ ಯೋಜನೆಗಳಿಗೆ ಹಣ ವಿನಿಯೋಗ, ಅಸಮರ್ಥ ನಾಯಕತ್ವ, ವಿತ್ತೀಯ ಸುಧಾರಣೆಗಳ ಕೊರತೆಯಿಂದಾಗಿ ಪಾಕಿಸ್ತಾನವು ದಿವಾಳಿಯಾಗಿದೆ.

ಬ್ಯಾಲೆನ್ಸ್‌ ಶೀಟ್‌ ಎಂದರೇನು?

ನಿರ್ದಿಷ್ಟ ಸಮಯದಲ್ಲಿ ಯಾವುದೇ ಕಂಪನಿಯು ತನ್ನ ಸ್ವತ್ತುಗಳು, ಷೇರುದಾರರ ಈಕ್ವಿಟಿಯ ಒಂದು ವರದಿ ಅಥವಾ ಸ್ಟೇಟ್‌ಮೆಂಟ್‌ ಆಗಿದೆ. ಹೂಡಿಕೆದಾರರಿಗೆ ಸಿಗುತ್ತಿರುವ ಲಾಭ (Returns) ಹಾಗೂ ಕಂಪನಿಯ ಬಂಡವಾಳದ ಸ್ಥಿತಿಗತಿಯನ್ನು ಬ್ಯಾಲೆನ್ಸ್‌ ಶೀಟ್‌ ವಿವರಿಸುತ್ತದೆ. ಇನ್ನೂ ಸರಳವಾಗಿ ಹೇಳಬೇಕೆಂದರೆ, ಯಾವುದೇ ಸಂಸ್ಥೆ ಅಥವಾ ಕಂಪನಿಯ ಹಣಕಾಸು ವಹಿವಾಟು, ಆಸ್ತಿಯ ಮೌಲ್ಯ, ಷೇರುಗಳ ಏರಿಳಿತದ ಲೆಕ್ಕಾಚಾರವಾಗಿದೆ. ಇದು ಆ ಕಂಪನಿಯ ಸುಸ್ಥಿತಿ ಅಥವಾ ದುಸ್ಥಿತಿಯನ್ನು ತಿಳಿಸುತ್ತದೆ.

ಇದನ್ನೂ ಓದಿ: RBI Dividend: ಆರ್‌ಬಿಐನಿಂದ ಕೇಂದ್ರಕ್ಕೆ 2.11 ಲಕ್ಷ ಕೋಟಿ ರೂ.‌ ಡಿವಿಡೆಂಡ್! ಮುಂದಿನ ಸರ್ಕಾರಕ್ಕೆ ವರ!

Continue Reading
Advertisement
Border
ಪ್ರಮುಖ ಸುದ್ದಿ15 mins ago

ಕಾಶ್ಮೀರ ಗಡಿಯಲ್ಲಿ ರಕ್ಷಣಾ ಬಲ ಹೆಚ್ಚಿಸಿಕೊಳ್ಳಲು ಕಂತ್ರಿ ಪಾಕಿಸ್ತಾನಕ್ಕೆ ಕುತಂತ್ರಿ ಚೀನಾ ನೆರವು; ಸ್ಫೋಟಕ ವರದಿ ಇಲ್ಲಿದೆ

Fruit and Veggie Smoothie
ಆರೋಗ್ಯ24 mins ago

Fruit and Veggie Smoothies: ಹಣ್ಣು, ತರಕಾರಿಗಳ ಆರೋಗ್ಯಕರ ಸ್ಮೂದಿ ಎಂಬ ಟ್ರೆಂಡ್‌! ಒಳ್ಳೆಯದೇ, ಕೆಟ್ಟದ್ದೇ?

Rishabh Pant
ಕ್ರೀಡೆ40 mins ago

Rishabh Pant: ದೇವರ ಕೃಪೆಯಿಂದ ಮತ್ತೆ ಟೀಮ್​ ಇಂಡಿಯಾ ಜೆರ್ಸಿ ಧರಿಸುವಂತಾಯಿತು ಎಂದು ಭಾವುಕರಾದ ರಿಷಭ್​ ಪಂತ್

IAS Exam
ಕರ್ನಾಟಕ45 mins ago

IAS Exam : ಯುಪಿಎಸ್ ಸಿ ಪರೀಕ್ಷಾ ಅಭ್ಯರ್ಥಿಗಳಿಗೆ ಉಚಿತ ತರಬೇತಿ

Kamal Haasan indian 2 second song out
ಕಾಲಿವುಡ್48 mins ago

Kamal Haasan: ‘ಇಂಡಿಯನ್-2’ ಸಿನಿಮಾದ ಎರಡನೇ ಹಾಡು ರಿಲೀಸ್!

Bus accident
ದೇಶ1 hour ago

Bus Accident: ಕಂದಕಕ್ಕೆ ಉರುಳಿದ ಬಸ್‌; 9 ಜನ ಬಲಿ; 40 ಜನರಿಗೆ ಗಂಭೀರ ಗಾಯ

Money Guide
ಮನಿ-ಗೈಡ್1 hour ago

Money Guide: ಹಣ ಪಾವತಿ ಅಂಗಳಕ್ಕೆ ಕಾಲಿಡಲು ಅದಾನಿ ಗ್ರೂಪ್‌ ಸಜ್ಜು; ಗೂಗಲ್‌ ಪೇ, ಫೋನ್‌ ಪೇಗೆ ಪ್ರಬಲ ಪೈಪೋಟಿ?

DK Shivakumar
ಕರ್ನಾಟಕ1 hour ago

DK Shivakumar: ಸಿಎಂ, ನನ್ನ ಮೇಲೆ ಶತ್ರು ಭೈರವಿ ಯಾಗ ನಡೆಯುತ್ತಿದೆ; ಡಿಕೆಶಿ ಹೊಸ ಬಾಂಬ್

Food Poisoning
ಬೆಳಗಾವಿ1 hour ago

Food Poisoning : ಜಾತ್ರೆಲಿ ಪ್ರಸಾದ ಸೇವಿಸಿದ 50ಕ್ಕೂ ಹೆಚ್ಚು ಮಂದಿ ಅಸ್ವಸ್ಥ

IPL 2024
ಕ್ರೀಡೆ1 hour ago

IPL 2024 : ಜಿಯೋಸಿನಿಮಾದಲ್ಲಿ ದಾಖಲೆಯ 62 ಕೋಟಿಗೂ ಅಧಿಕ ವೀಕ್ಷಣೆ ಕಂಡ ಐಪಿಎಲ್​

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Assault Case in Shivamogga
ಕ್ರೈಂ4 hours ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ2 days ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು2 days ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ3 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ4 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು4 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ5 days ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ1 week ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ1 week ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

ಟ್ರೆಂಡಿಂಗ್‌