Paris Olympics 2024: ಮತ್ತೊಂದು ಕಂಚಿನ ಪದಕದ ಸನಿಹ ಮನು ಭಾಕರ್, ನಾಳೆ ಇತಿಹಾಸ ಸೃಷ್ಟಿ? - Vistara News

ಪ್ರಮುಖ ಸುದ್ದಿ

Paris Olympics 2024: ಮತ್ತೊಂದು ಕಂಚಿನ ಪದಕದ ಸನಿಹ ಮನು ಭಾಕರ್, ನಾಳೆ ಇತಿಹಾಸ ಸೃಷ್ಟಿ?

Paris Olympics 2024: ಮನು ಭಾಕರ್‌ ಹಾಗೂ ಸರಬ್ಜೋತ್‌ ಸಿಂಗ್‌ ಅವರು 20 ಖಚಿತ ಶಾಟ್‌ಗಳ ಮೂಲಕ 580 ಪಾಯಿಂಟ್‌ಗಳನ್ನು ಗಳಿಸಿ 10 ಎಂ ಏರ್‌ ಪಿಸ್ತೂಲ್‌ ಮಿಕ್ಸ್ಡ್‌ ಟೀಮ್‌ ಇವೆಂಟ್‌ನ ಕಂಚಿನದ ಪದಕದ ಸುತ್ತಿಗೆ ಪ್ರವೇಶ ಪಡೆದಿದ್ದಾರೆ. ಮಂಗಳವಾರ ನಡೆಯುವ ಪಂದ್ಯದಲ್ಲಿ ಈ ಜೋಡಿ ಗೆಲುವು ಸಾಧಿಸಿದರೆ ಭಾರತಕ್ಕೆ ಕಂಚಿನ ಪದಕ ಸಿಗಲಿದೆ.

VISTARANEWS.COM


on

Paris Olympics 2024
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಪ್ಯಾರಿಸ್:‌ ಪ್ಯಾರಿಸ್ ಒಲಿಂಪಿಕ್ಸ್​ನಲ್ಲಿ ಭಾನುವಾರ ನಡೆದ ಮಹಿಳೆಯರ 10 ಮೀಟರ್ ಏರ್ ಪಿಸ್ತೂಲ್ ಸ್ಪರ್ಧೆಯ ಫೈನಲ್​ನಲ್ಲಿ 22 ವರ್ಷದ ಮನು ಭಾಕರ್ ಕಂಚಿನ ಪದಕ ಗೆಲ್ಲುವ ಮೂಲಕ ಇತಿಹಾಸ ಸೃಷ್ಟಿಸಿದ್ದಾರೆ. ಇದರ ಬೆನ್ನಲ್ಲೇ ಮನು ಭಾಕರ್‌ ಅವರು ಮತ್ತೊಂದು ಇತಿಹಾಸ ಸೃಷ್ಟಿಸುವ ಅವಕಾಶ ಪಡೆದಿದ್ದಾರೆ. ಹೌದು, 10 ಎಂ ಏರ್‌ ಪಿಸ್ತೂಲ್‌ ಮಿಕ್ಸ್ಡ್‌ ಟೀಮ್‌ ಇವೆಂಟ್‌ನಲ್ಲಿ ಭಾರತದ ಮನು ಭಾಕರ್‌ ಹಾಗೂ ಸರಬ್ಜೋತ್‌ ಸಿಂಗ್‌ ಅವರು ಕಂಚಿನ ಪದಕದ ಸುತ್ತಿಗೆ ತೆರಳಿದ್ದು, ಮತ್ತೊಂದು ಪದಕದ ನಿರೀಕ್ಷೆ ಹುಟ್ಟಿಸಿದ್ದಾರೆ.

ಮನು ಭಾಕರ್‌ ಹಾಗೂ ಸರಬ್ಜೋತ್‌ ಸಿಂಗ್‌ ಅವರು 20 ಖಚಿತ ಶಾಟ್‌ಗಳ ಮೂಲಕ 580 ಪಾಯಿಂಟ್‌ಗಳನ್ನು ಗಳಿಸಿ 10 ಎಂ ಏರ್‌ ಪಿಸ್ತೂಲ್‌ ಮಿಕ್ಸ್ಡ್‌ ಟೀಮ್‌ ಇವೆಂಟ್‌ನ ಕಂಚಿನದ ಪದಕದ ಸುತ್ತಿಗೆ ಪ್ರವೇಶ ಪಡೆದಿದ್ದಾರೆ. ಮಂಗಳವಾರ ಅವರು ಕೊರಿಯಾದ ಕ್ಸುಯೆ ಲಿ ಹಾಗೂ ವೋನ್ಹೋ ಲೀ ಅವರ ಜತೆ ಸೆಣಸಾಟ ನಡೆಸಿದ್ದು, ಈ ಪಂದ್ಯದಲ್ಲಿ ಗೆಲುವು ಸಾಧಿಸಿದರೆ ಮನು ಭಾಕರ್‌ ಹಾಗೂ ಸರಬ್ಜೋತ್‌ ಸಿಂಗ್‌ ಜೋಡಿಯು ಭಾರತಕ್ಕೆ ಮತ್ತೊಂದು ಪದಕ ತಂದು ಕೊಡಲಿದ್ದಾರೆ. ಹಾಗಾಗಿ, ಎಲ್ಲರ ಗಮನವೀಗ ಮಂಗಳವಾರದ ಪಂದ್ಯದ ಮೇಲಿದೆ.

ಒಲಿಂಪಿಕ್ಸ್‌ನಲ್ಲಿ ಇಂದು ಭಾರತೀಯರು

  • ಮಧ್ಯಾಹ್ನ 3.30: ಶೂಟಿಂಗ್‌- 10 ಎಂ ಏರ್‌ ರೈಫಲ್‌ ಮೆನ್ಸ್‌ ಫೈನಲ್-‌ ಅರ್ಜುನ್‌ ಬಬುತಾ
  • ಸಂಜೆ 4.15- ಹಾಕಿ- ಮೆನ್ಸ್‌ ಪೂಲ್‌ ಬಿ- ಇಂಡಿಯಾ vs ಅರ್ಜೆಂಟೀನಾ
  • 5.30- ಬ್ಯಾಡ್ಮಿಂಟನ್-‌ ಮೆನ್ಸ್‌ ಸಿಂಗಲ್ಸ್‌ ಗ್ರೂಪ್‌ ಸ್ಟೇಜ್-‌ ಲಕ್ಷ್ಯಾ ಸೇನ್‌ vs ಜೂಲಿಯನ್‌ ಕರಾಗಿ (ಜರ್ಮನಿ)
  • 6.31- ಅರ್ಚರಿ- ಮೆನ್ಸ್‌ ಟೀಮ್‌ ಕ್ವಾರ್ಟರ್‌ ಫೈನಲ್‌ (ಧೀರಜ್‌ ಬೊಮ್ಮದೇವರ/ಪ್ರವೀಣ್‌ ಜಾಧವ್/ತರುಣ್‌ದೀಪ್‌ ರಾಯ್)
  • 8.18- ಅರ್ಚರಿ- ಮೆನ್ಸ್‌ ಟೀಮ್‌ ಬ್ರಾಂಜ್‌ ಮೆಡಲ್‌ ಮ್ಯಾಚನ್‌ (ಧಿರಜ್‌ ಬೊಮ್ಮದೇವರ/ಪ್ರವೀಣ್ ಜಾಧವ್/ತರುಣ್‌ದೀಪ್‌ ರಾಯ್
  • 8.41- ಅರ್ಚರಿ೦ ಮೆನ್ಸ್‌ ಟೀಮ್‌ ಗೋಲ್ಡ್‌ ಮೆಡಲ್‌ ಮ್ಯಾಚ್‌ (ಧೀರಜ್‌ ಬೊಮ್ಮದೇವರ/ಪ್ರವೀಣ್‌ ಜಾಧವ್/ತರುಣ್‌ದೀಪ್‌ ರಾಯ್)‌
  • 11.30- ಟೇಬಲ್‌ ಟೆನಿಸ್-‌ ವುಮೆನ್ಸ್‌ ಸಿಂಗಲ್ಸ್‌ ರೌಂಡ್‌ ಆಫ್‌ 32- ಶ್ರೀಜಾ ಅಕುಲಾ vs ಜಿಯಾನ್‌ ಜೆಂಗ್‌ (ಸಿಂಗಾಪುರ)

ಇದನ್ನೂ ಓದಿ: Manu Bhaker : ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ಐತಿಹಾಸಿಕ ಪದಕ ಗೆದ್ದ ಮನು ಭಾಕರ್ ಗೆ ಪ್ರಧಾನಿ ಮೋದಿ ಅಭಿನಂದನೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

KRS Dam: ಸಂಪ್ರದಾಯಕ್ಕೆ ಎಳ್ಳು ನೀರು; ಕಾವೇರಿಗೆ ಬಾಗಿನ ಕಾರ್ಯಕ್ರಮದಲ್ಲಿ ಬಾಡೂಟ!

KRS Dam: ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ಎಸ್‌ ಡ್ಯಾಂನಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಸೋಮವಾರ ಬೆಳಗ್ಗೆ ಬಾಗಿನ ಸಲ್ಲಿಸಿ, ಕಾವೇರಿ ಮಾತೆಗೆ ಪೂಜೆ ಸಲ್ಲಿಸಿದ್ದರು. ಇದಾದ ಬಳಿಕ ಅಧಿಕಾರಿಗಳು ಭರ್ಜರಿ ಬಾಡೂಟ ಆಯೋಜನೆ ಮಾಡಿರುವುದು ಕಂಡುಬಂದಿದೆ.

VISTARANEWS.COM


on

KRS Dam
Koo

ಮಂಡ್ಯ: ಸಿಎಂ, ಡಿಸಿಎಂ ಭಾಗವಹಿಸಿದ್ದ ಕೆಆರ್‌ಎಸ್‌ಗೆ (KRS Dam) ಬಾಗಿನ ಸಲ್ಲಿಸುವ ಕಾರ್ಯಕ್ರಮದಲ್ಲಿ ಅಧಿಕಾರಿಗಳು ಎಡವಟ್ಟು ಮಾಡಿಕೊಂಡಿದ್ದಾರೆ. ಕಾರ್ಯಕ್ರಮದ ಬಳಿಕ ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳು ಭರ್ಜರಿ ಬಾಡೂಟ ಆಯೋಜನೆ ಮಾಡಿದ್ದು, ಈ ಮೂಲಕ ಸಂಪ್ರದಾಯಕ್ಕೆ ಎಳ್ಳು ನೀರು ಬಿಟ್ಟಿದ್ದಾರೆ ಎಂಬ ಆರೋಪಗಳು ಕೇಳಿಬಂದಿವೆ.

ಸಂಪ್ರದಾಯ ಮುರಿದು ಬಾಗಿನ ದಿವಸ ಬಾಡೂಟ ಆಯೋಜನೆ ಮಾಡಲಾಗಿದೆ. ಸಿಎಂ, ಸಚಿವರು ಹೊರಟ ಬಳಿಕ ಇಲಾಖೆ ಅಧಿಕಾರಿಗಳು ಭರ್ಜರಿ ಬಾಡೂಟ ಸೇವಿಸಿದ್ದಾರೆ. ಕೆಆರ್‌ಎಸ್‌ನ ಖಾಸಗಿ ಹೋಟೆಲ್‌ನಲ್ಲಿ ಬಾಡೂಟ ಆಯೋಜನೆ ಮಾಡಲಾಗಿತ್ತು.

ಈ ಹಿಂದೆ ಎಂದೂ ಬಾಗಿನ ಸಲ್ಲಿಸಿದ ದಿವಸ ಬಾಡೂಟ ಆಯೋಜಿಸಿದ್ದ ಉದಾಹರಣೆ ಇಲ್ಲ. ಇದೇ ಮೊದಲ ಬಾರಿಗೆ ಬಾಗಿನ ಸಲ್ಲಿಸಿದ ದಿನ ಬಾಡೂಟ ಆಯೋಜನೆ ಮಾಡಲಾಗಿದೆ. ಈ ಮೂಲಕ ಮೂಲಕ ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳು ಸಂಪ್ರದಾಯ ಮುರಿದಿದ್ದಾರೆ ಎಂಬ ಆಕ್ರೋಶ ವ್ಯಕ್ತವಾಗಿದೆ.

ಕೆಆರ್‌ಎಸ್‌ಗೆ ಬಾಗಿನ ಅರ್ಪಿಸಿದ ಸಿಎಂ, ಡಿಸಿಎಂ

ಮಂಡ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೃಷ್ಣರಾಜಸಾಗರ ಜಲಾಶಯ (ಕೆಆರ್‌ಎಸ್‌) ಭರ್ತಿಯಾಗಿರುವ ಹಿನ್ನೆಲೆಯಲ್ಲಿ ಸೋಮವಾರ ಬಾಗಿನ ಅರ್ಪಿಸಿದರು. ಬೆಳಗ್ಗೆ 11 ಗಂಟೆಗೆ ಅಭಿಜಿನ್ ಮುಹೂರ್ತದಲ್ಲಿ ಜಲಾಶಯಕ್ಕೆ (KRS Dam) ಬಾಗಿನ ಅರ್ಪಿಸಿದ ಸಿಎಂ ಸಿದ್ದರಾಮಯ್ಯ ಅವರು, ನಂತರ ಕಾವೇರಿ ಮಾತೆ ಪ್ರತಿಮೆಗೆ ವಿಶೇಷ ಪೂಜೆ ಸಲ್ಲಿಸಿ ವೇದಿಕೆ ಕಾರ್ಯಕ್ರಮದಲ್ಲಿ ಭಾಗಿಯಾದರು.

ಬಾಗಿನ ಅರ್ಪಿಸುವ ವೇಳೆ ಸಚಿವರಾದ ಡಾ. ಎಚ್.ಸಿ. ಮಹದೇವಪ್ಪ, ಎನ್. ಚೆಲುವರಾಯಸ್ವಾಮಿ, ವೆಂಕಟೇಶ್, ಮೈಸೂರು ಹಾಗೂ ಮಂಡ್ಯ ಜಿಲ್ಲೆಯ ಶಾಸಕರು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

ಮೇಕೆದಾಟು ಯೋಜನೆ ಬಗ್ಗೆ ಚರ್ಚೆಗೆ ಸಿದ್ಧ: ಸಿದ್ದರಾಮಯ್ಯ

ಮೈಸೂರು: ಮೆಟ್ಟೂರು ಅಣೆಕಟ್ಟು ತುಂಬಿ ನೀರು ವ್ಯರ್ಥವಾಗುತ್ತಿದ್ದು, ಈ ಬಗ್ಗೆ ತಮಿಳುನಾಡು ಸರ್ಕಾರದೊಂದಿಗೆ ನಾವು ಮಾತನಾಡಲು ತಯಾರಿದ್ದೇವೆ. ಮೇಕೆದಾಟು ಯೋಜನೆಯಿಂದ ಅವರಿಗೆ ತೊಂದರೆಯಾಗದಿದ್ದರೂ ಮಾತನಾಡಲು ಅವರು ಸಿದ್ಧರಿಲ್ಲ. ಕೇಂದ್ರ ಸರ್ಕಾರ ಅನುಮೋದನೆ ಕೊಟ್ಟರೇ ನಾವು ನಿರ್ಮಾಣ ಮಾಡಲು ಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಾಂಗ್ಲಾದೇಶದಿಂದ 20 ಸಾವಿರ ಜನ ಬೆಂಗಳೂರಿಗೆ ವಲಸೆ ಬಂದಿರುವ ಬಗ್ಗೆ ಮಾತನಾಡಿ, ಈ ಬಗ್ಗೆ ತಿಳಿದಿಲ್ಲ. ವಿಚಾರ ಮಾಡಿ ಕ್ರಮ ಕೈಗೊಳ್ಳಲಾಗುವುದು ಎಂದರು.

ಬಿಜೆಪಿ ಪಾದಯಾತ್ರೆ: ರಾಜಕೀಯವಾಗಿ ವಿರೋಧಿಸುತ್ತೇವೆ

ವಾಲ್ಮೀಕಿ ಮತ್ತು ಮುಡಾ ಹಗರಣ ವಿರೋಧಿಸಿ ಬೆಂಗಳೂರಿನಿಂದ ಮೈಸೂರಿಗೆ ಬಿಜೆಪಿ ಪಾದಯಾತ್ರೆ ಹಮ್ಮಿಕೊಂಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಅವರು ಮಾಡಲಿ, ನಾವೂ ಕೂಡ ರಾಜಕೀಯವಾಗಿ ವಿರೋಧಿಸುತ್ತೇವೆ. ವಾಲ್ಮೀಕಿ ಹಗರಣದಲ್ಲಿ ನಾವು 84.63 ಕೋಟಿ ಹಗರಣವಾಗಿದೆ ಎನ್ನುವುದು ನಿಜ. ಎಸ್.ಐ.ಟಿ ರಚನೆಯಾಗಿದ್ದು ತನಿಖೆಯಾಗುತ್ತಿದೆ. ಅವರೂ ಕೂಡ ಸಿಬಿಐ, ಇಡಿಯವರೂ ತನಿಖೆ ಮಾಡುತ್ತಿದ್ದಾರೆ ಎಂದರು.

ಬಿಜೆಪಿ ಕಾಲದಲ್ಲಿ ಭ್ರಷ್ಟಾಚಾರ ನಡೆದಿಲ್ಲವೇ?

ಉಪಮುಖ್ಯಮಂತ್ರಿಗಳು ಅಯೋಗ್ಯ ಅಧಿಕಾರಿಗಳು ಹೀಗೆ ಮಾಡಿದ್ದಾರೆ ಎಂದು ಹೇಳಿರುವ ಬಗ್ಗೆ ಪ್ರತಿಕ್ರಿಯಿಸಿ, ಅವರ ಕಾಲದಲ್ಲಿ ಭ್ರಷ್ಟಾಚಾರ ನಡೆದಿಲ್ಲವೇ? ಅದಕ್ಕಾಗಿಯೇ 21 ಹಗರಣಗಳನ್ನು ಪಟ್ಟಿ ಮಾಡಿ ಹೇಳಿದ್ದೇನೆ ಎಂದರು. ಕೆಲವು ತನಿಖೆಗಳು ನಡೆಯುತ್ತಿವೆ. ರಾಘವೇಂದ್ರ ಸಹಕಾರಿ ಬ್ಯಾಂಕ್ ಪ್ರಕರಣವನ್ನು ಸಿಬಿಐಗೆ ವಹಿಸಲಾಗಿದೆ. ಇಂದಿನವರೆಗೂ ಸಿಬಿಐ ತನಿಖೆ ಪೂರ್ಣಗೊಳಿಸಿಲ್ಲ. ಅವರ ಅವಧಿಯಲ್ಲಿ ಒಂದೇ ಒಂದು ಪ್ರಕರಣವನ್ನು ಸಿಬಿಐಗೆ ಕೊಟ್ಟಿಲ್ಲ. 7-8 ಹಗರಣಗಳನ್ನು ಸಿಬಿಐಗೆ ವಹಿಸಲಾಗಿದೆ. ಇದೆ ಬಿಜೆಪಿ ನಾವು ಅಧಿಕಾರದಲ್ಲಿದ್ದಾಗ ಸಿಬಿಐ ಅನ್ನು ಚೋರ್ ಬಚಾವ್ ಸಂಸ್ಥೆ ಎನ್ನುತ್ತಿದ್ದರು. ಈಗ ಸಿಬಿಐ ಗೆ ಮೇಲೆ ಇವರಿಗೇನು ಪ್ರೀತಿ ಎಂದರು. ಈ ಕುರಿತ ದಾಖಲೆಗಳನ್ನು ನಾನು ಕೊಡುತ್ತೇನೆ ಎಂದರು.

ಇದನ್ನೂ ಓದಿ | CM Siddaramaiah: ನಾಳೆ ದಿಲ್ಲಿಗೆ ಸಿಎಂ- ಡಿಸಿಎಂ ದೌಡು; ಸಚಿವ ಸಂಪುಟದಲ್ಲಿ ಬದಲಾವಣೆ ಫಿಕ್ಸ್?

ನನ್ನ ಮೇಲೆ ಯಾವ ಕಪ್ಪು ಮಸಿಯೂ ಇಲ್ಲ

ಮುಡಾ ಪ್ರಕರಣದಲ್ಲಿ ನಿವೇಶನಗಳನ್ನು ಸಿಎಂ ಹಿಂದಿರುಗಿಸಿ ತನಿಖೆಗೆ ಅವಕಾಶ ಕೊಡಬೇಕೆಂದು ಬಿಜೆಪಿ ಹೇಳಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಮೂಡಾ ಪ್ರಕರಣದಲ್ಲಿ ನನ್ನ ಮೇಲೆ ಯಾವ ಕಪ್ಪು ಮಸಿಯೂ ಇಲ್ಲ. ಈ ಬಗ್ಗೆ ನ್ಯಾಯಾಂಗ ಆಯೋಗ ರಚನೆಯಾಗಿದೆ. ಬಿಜೆಪಿ ಯಾವುದೇ ನ್ಯಾಯಾಂಗ ತನಿಖೆ ರಚಿಸಿತ್ತೆ ಎಂದು ಪ್ರಶ್ನಿಸಿದರು. ಕೋವಿಡ್ 19 ಸಂದರ್ಭದಲ್ಲಿ 3 ರಿಂದ 4 ಸಾವಿರ ಕೋಟಿ ರೂಪಾಯಿ ನುಂಗಿ ಹಾಕಿದ್ದಾರೆ. ನ್ಯಾಯಾಂಗ ತನಿಖೆ ಅಥವಾ ಸಿಬಿಐಗೆ ವಹಿಸಲು ಕೊಡಿ ಎಂಡು ಒತ್ತಾಯಿಸಿದೆ. ಆದರೆ ಅವರು ಕೊಡಲಿಲ್ಲ ಎಂದರು. ಯಾವುದೇ ತಪ್ಪಿಲ್ಲದಿದ್ದರೂ ಕೂಡ ಜನರ ಮನಸ್ಸಿನಲ್ಲಿ ಅನುಮಾನವಿರಬಾರದು ಎಂಬ ಕಾರಣಕ್ಕೆ ನ್ಯಾಯಾಂಗ ಆಯೋಗ ರಚಿಸಲಾಗಿದೆ ಎಂದರು. ಒಬ್ಬ ಸಚಿವರು, ಮುಖ್ಯಮಂತ್ರಿಯಾಗಿದ್ದವರು ಹೇಗೆ ಮಾತನಾಡಿದರೆ ಹೇಗೆ? ನಮಗೆ ನಮ್ಮ ಪೊಲೀಸರ ಮೇಲೆ ನಂಬಿಕೆ ಇದೆ ಎಂದರು.

Continue Reading

ಪ್ರಮುಖ ಸುದ್ದಿ

Paris Olympics 2024 : ಕ್ರಿಕೆಟ್ ಕೆಲಸದಿಂದ ನಿರಾಳ; ಒಲಿಂಪಿಕ್ಸ್​​ವೀಕ್ಷಿಸಲು ತೆರಳಿದ ರಾಹುಲ್ ದ್ರಾವಿಡ್​

Paris Olympics 2024 : 2024ರ ಟಿ20 ವಿಶ್ವಕಪ್ ಗೆಲುವಿನ ಬಳಿಕ ದ್ರಾವಿಡ್ ತಮ್ಮ ಹುದ್ದೆಯಿಂದ ಕೆಳಗಿಳಿದಿದ್ದರು. ಬಾರ್ಬಡೋಸ್​​ನಲ್ಲಿ ನಡೆದ ಐಸಿಸಿ ಟ್ರೋಫಿ ಫೈನಲ್ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಏಳು ರನ್​ಗಳ ರೋಚಕ ಗೆಲುವು ಸಾಧಿಸುವ ಮೂಲಕ ಮೆನ್ ಇನ್ ಬ್ಲೂ 11 ವರ್ಷಗಳ ಐಸಿಸಿ ಟ್ರೋಫಿ ಬರವನ್ನು ಕೊನೆಗೊಳಿಸಿತು. 17 ವರ್ಷಗಳ ನಂತರ ಎರಡನೇ ಟಿ 20 ವಿಶ್ವಕಪ್ ಪ್ರಶಸ್ತಿ ಗೆದ್ದುಕೊಂಡಿತು.

VISTARANEWS.COM


on

Paris Olympics 2024
Koo

ಪ್ಯಾರಿಸ್ : ಭಾರತದ ಮಾಜಿ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಕ್ರಿಕೆಟ್​​ ಕೆಲಸದಿಂದ ವಿಮುಖರಾಗಿದ್ದು. ಅವರು ಪ್ಯಾರಿಸ್ ಒಲಿಂಪಿಕ್ಸ್ 2024ರ (Paris Olympics 2024) ವೀಕ್ಷಣೆಗೆ ಪ್ಯಾರಿಸ್​​ಗೆ ತೆರಳಿದ್ದಾರೆ. ಅಲ್ಲಿ ಅವರು ಭಾರತದ ಪುರುಷರ ಡಬಲ್ಸ್ ಜೋಡಿ ರೋಹನ್ ಬೋಪಣ್ಣ ಮತ್ತು ಎನ್ ಶ್ರೀರಾಮ್ ಬಾಲಾಜಿ ಅವರ ಪಂದ್ಯವನ್ನು ವೀಕ್ಷಿಸಿದ್ದಾರೆ. ವಿಶೇಷವೆಂದರೆ ಬಾಲಾಜಿ ಮತ್ತು ಬೋಪಣ್ಣ ಅವರು ರೋಲ್ಯಾಂಡ್-ಗ್ಯಾರೋಸ್ – ಕೋರ್ಟ್ 14 ರಲ್ಲಿ ಫ್ರೆಂಚ್ ಜೋಡಿ ಗೇಲ್ ಮೊನ್ಫಿಲ್ಸ್ ಮತ್ತು ಎಡ್ವರ್ಡ್ ರೋಜರ್ ವಾಸೆಲಿನ್ ವಿರುದ್ಧ ಸೆಣಸಿದ್ದಾರೆ. ಈ ಪಂದ್ಯವನ್ನು ಅವರು ವೀಕ್ಷಿಸಿದ್ದಾರೆ.

ದ್ರಾವಿಡ್ ಪ್ಯಾರಿಸ್​​ನಲ್ಲಿರುವ ಇಂಡಿಯಾ ಹೌಸ್​ಗೆ ಭೇಟಿ ನೀಡಿದ್ದಾರೆ. ಇದು ಭಾರತೀಯ ಅಭಿಮಾನಿಗಳು ಮತ್ತು ಕ್ರೀಡಾಪಟುಗಳಿಗೆ ಫ್ರೆಂಚ್ ರಾಜಧಾನಿಯಲ್ಲಿ ತವರು ದೇಶದ ಅನುಭವ ಪಡೆಯಲು ಒಂದು ತಾಣವಾಗಿದೆ. ತಮ್ಮ ಭೇಟಿಯ ಸಮಯದಲ್ಲಿ, ಮಾಜಿ ಕ್ರಿಕೆಟಿಗ ಕೇಂದ್ರದ ವೈಭವಕ್ಕೆ ಸಾಕ್ಷಿಯಾದರು. ವಿದೇಶಿಯರಿಗೆ ರಾಷ್ಟ್ರದ ವೈವಿಧ್ಯಮಯ ಸಂಸ್ಕೃತಿಯ ಒಂದು ನೋಟವನ್ನು ಇಲ್ಲಿ ನೀಡಲಾಗುತ್ತಿದೆ.

2024ರ ಟಿ20 ವಿಶ್ವಕಪ್ ಗೆಲುವಿನ ಬಳಿಕ ದ್ರಾವಿಡ್ ತಮ್ಮ ಹುದ್ದೆಯಿಂದ ಕೆಳಗಿಳಿದಿದ್ದರು. ಬಾರ್ಬಡೋಸ್​​ನಲ್ಲಿ ನಡೆದ ಐಸಿಸಿ ಟ್ರೋಫಿ ಫೈನಲ್ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಏಳು ರನ್​ಗಳ ರೋಚಕ ಗೆಲುವು ಸಾಧಿಸುವ ಮೂಲಕ ಮೆನ್ ಇನ್ ಬ್ಲೂ 11 ವರ್ಷಗಳ ಐಸಿಸಿ ಟ್ರೋಫಿ ಬರವನ್ನು ಕೊನೆಗೊಳಿಸಿತು. 17 ವರ್ಷಗಳ ನಂತರ ಎರಡನೇ ಟಿ 20 ವಿಶ್ವಕಪ್ ಪ್ರಶಸ್ತಿ ಗೆದ್ದುಕೊಂಡಿತು.

ಇದನ್ನೂ ಓದಿ: IND vs SL T20 : ಲಂಕಾ ವಿರುದ್ಧದ ಎರಡನೇ ಟಿ20 ಪಂದ್ಯದಲ್ಲಿ ಭಾರತಕ್ಕೆ 7 ವಿಕೆಟ್ ಜಯ, ಸರಣಿ ಕೈವಶ

ದ್ರಾವಿಡ್ ಅವರ ನಾಯಕತ್ವದಲ್ಲಿ 2007 ರ ಏಕದಿನ ವಿಶ್ವಕಪ್​​ನ ಮೊದಲ ಹಂತದಲ್ಲಿಯೇ ಭಾರತವು ಟೂರ್ನಿಯಿಂದ ಹೊರಕ್ಕೆ ಹೋಗಿತ್ತು. ಆ ಬೇಸರವನ್ನು 51 ವರ್ಷದ ಧೋನಿ ಅಂತಿಮವಾಗಿ ಐಸಿಸಿ ಟ್ರೋಫಿಯನ್ನು ಗೆಲ್ಲುವ ಮೂಲಕ ಕಳೆದುಕೊಂಡಿದ್ದರು.

ಪ್ಯಾರಿಸ್ ನಲ್ಲಿ ಖಾತೆ ತೆರೆದ ಮನು ಭಾಕರ್

ಮಹಿಳೆಯರ 10 ಮೀಟರ್ ಏರ್ ಪಿಸ್ತೂಲ್​​ನಲ್ಲಿ ಮನು ಭಾಕರ್ ಕಂಚಿನ ಪದಕ ಗೆಲ್ಲುವ ಮೂಲಕ ಪ್ಯಾರಿಸ್ ಒಲಿಂಪಿಕ್ಸ್​ನಲ್ಲಿ ಭಾರತ ತನ್ನ ಖಾತೆಯನ್ನು ತೆರೆದಿದೆ. ಶೂಟಿಂಗ್ ಪದಕಕ್ಕಾಗಿ 12 ವರ್ಷಗಳ ಸುದೀರ್ಘ ಕಾಯುವಿಕೆಯನ್ನು ಕೊನೆಗೊಳಿಸಿದ 22 ವರ್ಷದ ಮನು , ಕ್ರೀಡೆಯಲ್ಲಿ ಒಲಿಂಪಿಕ್ ಪದಕ ಗೆದ್ದ ಮೊದಲ ಭಾರತೀಯ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾದರು.

ರಮಿತಾ ಜಿಂದಾಲ್ ಮತ್ತು ಅರ್ಜುನ್ ಬಬುಟಾ ಕ್ರಮವಾಗಿ ಮಹಿಳಾ ಮತ್ತು ಪುರುಷರ 10 ಮೀಟರ್ ಏರ್ ರೈಫಲ್ ಫೈನಲ್​ನಲ್ಲಿ ಕಾಣಿಸಿಕೊಂಡರೂ ಕ್ರಮವಾಗಿ 7 ಮತ್ತು ನಾಲ್ಕನೇ ಸ್ಥಾನಕ್ಕೆ ತೃಪ್ತಿಪಟ್ಟರು.

Continue Reading

ಕರ್ನಾಟಕ

‌Actor Darshan: ನಟ ದರ್ಶನ್‌ಗೆ ಸದ್ಯಕ್ಕಿಲ್ಲ ಮನೆಯೂಟದ ಭಾಗ್ಯ; ಹೈಕೋರ್ಟ್‌ಗೆ ಸಲ್ಲಿಸಿದ್ದ ಅರ್ಜಿ ವಾಪಸ್!

‌Actor Darshan: ಅರ್ಜಿ ವಾಪಸ್ ಪಡೆಯಲು ದರ್ಶನ್ ಪರ ವಕೀಲರಿಂದ ಹೈಕೋರ್ಟ್‌ಗೆ ಮೆಮೋ ಸಲ್ಲಿಕೆ ಮಾಡಲಾಗಿದೆ. ಇದರಿಂದ ಸದ್ಯಕ್ಕೆ ನಟ ದರ್ಶನ್‌ಗೆ ಮನೆಯೂಟ ತಿನ್ನುವ ಭಾಗ್ಯ ಸಿಗುವಂತಿಲ್ಲ.

VISTARANEWS.COM


on

‌Actor Darshan
Koo

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನವಾಗಿರುವ ನಟ ದರ್ಶನ್‌ಗೆ ಸದ್ಯಕ್ಕೆ ಮನೆಯೂಟ ತಿನ್ನುವ ಭಾಗ್ಯ ಸಿಗುವಂತಿಲ್ಲ. ಯಾಕೆಂದರೆ, ಮನೆಯೂಟ ನೀಡುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಮ್ಯಾಜಿಸ್ಟ್ರೇಟ್ ಕೋರ್ಟ್‌ ವಜಾಗೊಳಿಸಿದ ಬೆನ್ನಲ್ಲೇ ಇದೀಗ ಹೈಕೋರ್ಟ್‌ಗೆ ಸಲ್ಲಿಸಿದ್ದ ಅರ್ಜಿಯನ್ನು ದರ್ಶನ್‌ (‌Actor Darshan) ಪರ ವಕೀಲರು ವಾಪಸ್‌ ಪಡೆದಿದ್ದಾರೆ.

ಅರ್ಜಿ ವಾಪಸ್ ಪಡೆಯಲು ದರ್ಶನ್ ಪರ ವಕೀಲರಿಂದ ಹೈಕೋರ್ಟ್‌ಗೆ ಮೆಮೋ ಸಲ್ಲಿಕೆ ಮಾಡಲಾಗಿದೆ. ಈ ಹಿಂದೆ ಮನೆಯೂಟ ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿತ್ತು. ಆದರೆ, ಮ್ಯಾಜಿಸ್ಟ್ರೇಟ್ ಕೋರ್ಟ್‌ನಿಂದ ಅನುಮತಿ ಪಡೆಯಲು ಹೈಕೋರ್ಟ್‌ ಸೂಚಿಸಿತ್ತು. ಹೀಗಾಗಿ ಜುಲೈ 25ರಂದು ವಿಚಾರಣೆ ನಡೆಸಿದ್ದ ಆರ್ಥಿಕ ಅಪರಾಧಗಳ ವಿಶೇಷ ಕೋರ್ಟ್ ಅರ್ಜಿಯನ್ನು ವಜಾಗೊಳಿಸಿತ್ತು. ಆದರೆ, ಇದೀಗ ತಾಂತ್ರಿಕ ಕಾರಣದಿಂದ ನಟ ದರ್ಶನ್‌ ಪರ ವಕೀಲರು ಅರ್ಜಿಯನ್ನು ವಾಪಸ್‌ ಪಡೆದಿದ್ದಾರೆ ಎಂದು ತಿಳಿದುಬಂದಿದೆ.

ಕರ್ನಾಟಕ ಪ್ರಿಸನ್ಸ್ ಕರೆಕ್ಷನ್ ಮ್ಯಾನ್ಯುಲ್ 2021ರ ಸೆಕ್ಷನ್ 728ರ ಪ್ರಕಾರ ಕೊಲೆ ಆರೋಪಿಗೆ ಮನೆ ಊಟಕ್ಕೆ ಅವಕಾಶ ಇಲ್ಲ. ಅಲ್ಲದೆ ಜೈಲು ಅಧಿಕಾರಿಗಳು ನೀಡಿರುವ ವರದಿಯಲ್ಲಿ ಮನೆಯೂಟದ ಅವಶ್ಯಕತೆ ಕಾಣಿಸುತ್ತಿಲ್ಲ. ಜತೆಗೆ ಮನೆ ಊಟದ ಅವಶ್ಯಕತೆ ಸಂಬಂಧ ಪೂರಕವಾದ ವೈದ್ಯಕೀಯ ಪ್ರಮಾಣಪತ್ರಗಳು ಇಲ್ಲ-ಈ ಮೂರು ಅಂಶಗಳ ಆಧಾರದ ಮೇಲೆ ಇತ್ತೀಚೆಗೆ ಆರ್ಥಿಕ ಅಪರಾಧಗಳ ವಿಶೇಷ ಕೋರ್ಟ್ ಅರ್ಜಿ ವಜಾಮಾಡಿತ್ತು.

BJP Padayatra: ಮುಡಾ ಹಗರಣ ಖಂಡಿಸಿ ಬೆಂಗಳೂರಿನಿಂದ ಮೈಸೂರಿಗೆ ಪಾದಯಾತ್ರೆ ನಡೆಸಲು ಬಿಜೆಪಿ ನಿರ್ಧಾರ

ಜುಲೈ 22ರಂದು ದರ್ಶನ್ ಪರ ವಕೀಲ ವಕೀಲ ರಾಘವೇಂದ್ರ ವಾದ ಮಂಡಿಸಿ, ದರ್ಶನ್‌ಗೆ ಜೈಲು ಊಟ ಜೀರ್ಣವಾಗುತ್ತಿಲ್ಲ, ಅತಿಸಾರವಾಗುತ್ತಿದೆ. ಹೀಗಾಗಿ ಖಾಸಗಿ ಊಟ, ಹಾಸಿಗೆ ಕೆಳಲಾಗುತ್ತಿದೆ. ವಿಚಾರಣಾಧೀನ ಕೈದಿಗೆ ಮನೆಯೂಟ ಪಡೆಯಲು ಅವಕಾಶವಿದೆ. ತನಿಖೆ ಪೂರ್ಣವಾಗದ ಸಂದರ್ಭದಲ್ಲಿ ಮನೆ ಊಟ ನೀಡಲು ಅವಕಾಶವಿದೆ. ಕರ್ನಾಟಕ ಕಾರಾಗೃಹ ಕಾಯ್ದೆ ಪ್ರಕಾರ ಸಿವಿಲ್ ಕೈದಿ ಹಾಗೂ ವಿಚಾರಣಾಧೀನ ಕೈದಿಗೆ ಸ್ವಂತ ಹಣದಲ್ಲಿ ಅಗತ್ಯ ವಸ್ತುಗಳ ಖರೀದಿಗೆ ಅವಕಾಶವಿದೆ. ಅಧಿಕಾರಿಗಳೇ ರೇಷನ್ ನೀಡಬೇಕು. ಸೆಂಟ್ರಲ್ ಕಿಚನ್‌ನಲ್ಲಿ ಅಡುಗೆ ಮಾಡಿಕೊಳ್ಳಲು ಅವಕಾಶವಿದೆ ಎಂದು ಮನವಿ ಸಲ್ಲಿಸಿದ್ದರು. ಆದರೆ, ಮನೆಯೂಟಕ್ಕೆ ಕೋರ್ಟ್‌ ನಿರಾಕರಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲು ದರ್ಶನ್‌ ಪರ ವಕೀಲರು ಮುಂದಾಗಿದ್ದಾರೆ.

ದರ್ಶನ್‌ಗಾಗಿ ದೇವರ ಪ್ರಸಾದ ತಂದ ವಿಜಯಲಕ್ಷ್ಮಿ

Actor Darshan Jail And Gave vijayalakshmi Prasada To Husband
Actor Darshan Jail And Gave vijayalakshmi Prasada To Husband

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್‌ಗೆ (Actor Darshan) ಮನೆ ಊಟ ಕೋರಿ ದರ್ಶನ್ ಸಲ್ಲಿಸಿರುವ ಅರ್ಜಿಯನ್ನು ಆರ್ಥಿಕ ಅಪರಾಧಗಳ ವಿಶೇಷ ಕೋರ್ಟ್ ವಜಾ ಮಾಡಿ ಎಂಬ ಆದೇಶ ಈಗಾಗಲೇ ಬಂದಿದೆ. ಹೀಗಾಗಿ ದರ್ಶನ್‌ಗೆ ಸಂಕಷ್ಟಗಳು ಮಾತ್ರ ನಿವಾರಣೆ ಆಗುತ್ತಿಲ್ಲ. ದರ್ಶನ್ ಬೇಗ ಬಿಡುಗಡೆ ಆಗಲಿ ಎಂದು ವಿಜಯಲಕ್ಷ್ಮೀ ಅವರು ದೇವರ ಮೋರೆ ಹೋಗಿದ್ದು ಗೊತ್ತೇ ಇದೆ. ವಿಜಯಲಕ್ಷ್ಮೀ ಅವರು ಇತ್ತೀಚೆಗೆ ಕೊಲ್ಲೂರಿಗೆ ತೆರಳಿದ್ದರು. ಮೂಕಾಂಬಿಕಾ ದೇವಿಯ ಎದುರು ವಿಶೇಷ ಪೂಜೆಯನ್ನು ಅವರು ಮಾಡಿಸಿದ್ದರು. ಪೂಜೆಯ ಸಂದರ್ಭದಲ್ಲಿ ತೆಗೆದುಕೊಂಡು ಬಂದ ಪ್ರಸಾದವನ್ನು ಜೈಲಿಗೆ ತಂದಿದ್ದಾರೆ ವಿಜಯಲಕ್ಷ್ಮಿ.

ದರ್ಶನ್ ಅವರು ಹೊರಗೆ ಬರಲು ಸಾಕಷ್ಟು ಪ್ರಯತ್ನ ಮಾಡುತ್ತಿದ್ದಾರೆ. ಆದರೆ, ಕೇಸ್ ತುಂಬಾನೇ ಗಂಭೀರ ಆಗಿದೆ. ಎಲ್ಲರ ಕಣ್ಣು ಈ ಕೇಸ್​ಮೇಲೆ ಇದೆ. ಅಲ್ಲದೆ, ಇನ್ನು ಈ ಕೇಸ್​ನಲ್ಲಿ ಚಾರ್ಜ್​ಶೀಟ್ ಸಲ್ಲಿಕೆ ಆಗಿಲ್ಲ. ಈ ಎಲ್ಲಾ ಕಾರಣದಿಂದ ಅವರಿಗೆ ಜಾಮೀನಿಗೆ ಅರ್ಜಿ ಸಲ್ಲಿಸಲು ಸಾಧ್ಯವಾಗುತ್ತಿಲ್ಲ. ಶೀಘ್ರವೇ ಪೊಲೀಸರು ಕೋರ್ಟ್​ ಎದುರು ಚಾರ್ಜ್​ಶೀಟ್ ಸಲ್ಲಿಕೆ ಮಾಡಲಿದ್ದಾರೆ.

Continue Reading

ದೇಶ

Rahul Gandhi: ಮೋದಿ ಸೇರಿ 6 ಜನರಿಂದ ಭಾರತೀಯರಿಗೆ ಚಕ್ರವ್ಯೂಹ ರಚನೆ ಎಂದ ರಾಹುಲ್‌ ಗಾಂಧಿ; 6 ಜನ ಯಾರ‍್ಯಾರು?

Rahul Gandhi: ಸಂಸತ್‌ನಲ್ಲಿ ರಾಹುಲ್‌ ಗಾಂಧಿ ಅವರು ಮಹಾಭಾರತದ ಚಕ್ರವ್ಯೂಹವನ್ನು ಉದಾಹರಿಸಿ ಬಿಜೆಪಿಗೆ ಕುಟುಕಿದ್ದಾರೆ. ಮಹಾಭಾರತದ ಚಕ್ರವ್ಯೂಹದಂತೆ ಈಗಲೂ ಒಂದು ಚಕ್ರವ್ಯೂಹ ರಚಿಸಲಾಗಿದೆ. ದೇಶದ ಜನರು ಆ ಚಕ್ರವ್ಯೂಹಕ್ಕೆ ಸಿಲುಕಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಸೇರಿ 6 ಮಂದಿಯು ಈ ಚಕ್ರವ್ಯೂಹವನ್ನು ನಿಯಂತ್ರಿಸುತ್ತಿದ್ದಾರೆ

VISTARANEWS.COM


on

Rahul Gandhi
Koo

ನವದೆಹಲಿ: ಕಾಂಗ್ರೆಸ್‌ ನಾಯಕ, ಪ್ರತಿಪಕ್ಷ ನಾಯಕ ರಾಹುಲ್‌ ಗಾಂಧಿ (Rahul Gandhi) ಅವರು ಲೋಕಸಭೆಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಅದರಲ್ಲೂ, ಮಹಾಭಾರತದ ಚಕ್ರವ್ಯೂಹವನ್ನು ಉಲ್ಲೇಖಿಸಿದ ರಾಹುಲ್‌ ಗಾಂಧಿ ಅವರು ನರೇಂದ್ರ ಮೋದಿ (Narendra Modi) ಹಾಗೂ ಬಿಜೆಪಿ ವಿರುದ್ಧ ವಾಗ್ಬಾಣ ಪ್ರಯೋಗಿಸಿದ್ದಾರೆ. “ಮಹಾಭಾರತದ ಚಕ್ರವ್ಯೂಹದಂತೆ (Chakravyuh) ಈಗಲೂ ಒಂದು ಚಕ್ರವ್ಯೂಹ ರಚಿಸಲಾಗಿದೆ. ದೇಶದ ಜನರು ಆ ಚಕ್ರವ್ಯೂಹಕ್ಕೆ ಸಿಲುಕಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಸೇರಿ 6 ಮಂದಿಯು ಈ ಚಕ್ರವ್ಯೂಹವನ್ನು ನಿಯಂತ್ರಿಸುತ್ತಿದ್ದಾರೆ” ಎಂದು ಹೇಳಿದ್ದಾರೆ.

“ಸಾವಿರಾರು ವರ್ಷಗಳ ಹಿಂದೆ, ಹರಿಯಾಣದಲ್ಲಿ ಕುರುಕ್ಷೇತ್ರ ನಡೆಯುವಾಗ 6 ಜನ ಸೇರಿ ಚಕ್ರವ್ಯೂಹವನ್ನು ರಚಿಸಿದ್ದರು. ಆರು ಜನ ಸೇರಿ ಆ ಚಕ್ರವ್ಯೂಹದಲ್ಲಿ ಅಭಿಮನ್ಯುವಿನನ್ನು ಸಿಲುಕಿಸಿ ಕೊಲೆ ಮಾಡಿದರು. ನಾನು ಚಕ್ರವ್ಯೂಹದ ಕುರಿತು ಸಣ್ಣದೊಂದು ಸಂಶೋಧನೆ ಮಾಡಿದ್ದೇನೆ. ಚಕ್ರವ್ಯೂಹವನ್ನು ಪದ್ಮವ್ಯೂಹ ಎಂದೂ ಕರೆಯಲಾಗುತ್ತದೆ. ಪದ್ಮವ್ಯೂಹ ಎಂದರೆ ಕಮಲದ ರಚನೆಯಾಗಿದೆ. ಚಕ್ರವ್ಯೂಹ ಕೂಡ ಕಮಲದ ಆಕಾರದಲ್ಲಿದೆ” ಎಂಬುದಾಗಿ ಬಿಜೆಪಿಯನ್ನು ಕುಟುಕಿದರು.

“21ನೇ ಶತಮಾನದಲ್ಲೂ ಚಕ್ರವ್ಯೂಹವನ್ನು ರಚಿಸಲಾಗಿದೆ ಹಾಗೂ ಅದು ಕಮಲದ ಆಕಾರದಲ್ಲಿದೆ. ಆ ಚಕ್ರವ್ಯೂಹದ ಚಿಹ್ನೆಯನ್ನು ನರೇಂದ್ರ ಮೋದಿ ಅವರು ಎದೆಯ ಮೇಲೆ ಧರಿಸಿಕೊಂಡು ತಿರುಗಾಡುತ್ತಿದ್ದಾರೆ. ಅಭಿಮನ್ಯುವಿಗೆ ಏನಾಯಿತೋ, ಅದರಂತೆ ಭಾರತದ ಜನರನ್ನು ಆ ಚಕ್ರವ್ಯೂಹದಲ್ಲಿ ಸಿಲುಕಿಸಲಾಗಿದೆ. ಯುವಕರು, ರೈತರು, ಮಹಿಳೆಯರು, ಸಣ್ಣ ಹಾಗೂ ಮಧ್ಯಮ ಶ್ರೇಣಿ ಉದ್ಯಮಿಗಳು ಈಗ ಆ ಚಕ್ರವ್ಯೂಹದಲ್ಲಿ ಸಿಲುಕಿದ್ದಾರೆ” ಎಂದು ರಾಹುಲ್‌ ಗಾಂಧಿ ಕುಹಕವಾಡಿದರು.

ಚಕ್ರವ್ಯೂಹದಲ್ಲಿರುವ 6 ಜನ ಯಾರು?

“ಚಕ್ರವ್ಯೂಹದಲ್ಲಿ ತುಂಬ ಜನ ಇರುತ್ತಾರೆ. ಆದರೆ, ಚಕ್ರವ್ಯೂಹದ ಮಧ್ಯದಲ್ಲಿ 6 ಜನ ಇರುತ್ತಾರೆ ಹಾಗೂ ಅವರು ಇಡೀ ಚಕ್ರವ್ಯೂಹವನ್ನು ನಿಯಂತ್ರಿಸುತ್ತಾರೆ. ಆಧುನಿಕ ಕಾಲದ ಚಕ್ರವ್ಯೂಹವನ್ನು ಕೂಡ ಆರು ಜನ ನಿಯಂತ್ರಿಸುತ್ತಿದ್ದಾರೆ. ನರೇಂದ್ರ ಮೋದಿ, ಅಮಿತ್‌ ಶಾ, ಮೋಹನ್‌ ಭಾಗವತ್‌, ಅಜಿತ್‌ ದೋವಲ್‌, ಮುಕೇಶ್‌ ಅಂಬಾನಿ ಹಾಗೂ ಗೌತಮ್‌ ಅದಾನಿಯೇ ಈಗ ಕಮಲದ ಆಕಾರದ ಚಕ್ರವ್ಯೂಹವನ್ನು ನಿಯಂತ್ರಿಸುತ್ತಿದ್ದಾರೆ” ಎಂದು ರಾಹುಲ್‌ ಗಾಂಧಿ ಆರೋಪಿಸಿದರು.

ಚಕ್ರವ್ಯೂಹ ಭೇದಿಸುತ್ತೇವೆ ಎಂದ ರಾಹುಲ್‌ ಗಾಂಧಿ

ದೇಶದ ಜನರ ಸುತ್ತ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಹೆಣೆದ ಚಕ್ರವ್ಯೂಹವನ್ನು ನಾವು ಭೇದಿಸುತ್ತೇವೆ. ಚಕ್ರವ್ಯೂಹವನ್ನು ನಮಗೆ ಭೇದಿಸುವುದು ಗೊತ್ತಿದೆ. ಯಾವ ಜಾತಿಗಣತಿ ಎಂದರೆ ನೀವು (ಬಿಜೆಪಿ) ಹೆದರುತ್ತೀರೋ, ಅದೇ ಜಾತಿಗಣತಿಯನ್ನು ಇದೇ ಸದನದಲ್ಲಿ ನಾವು ಮಂಡಿಸುತ್ತೇವೆ. ನಿಮಗೆ ಇಷ್ಟ ಇದೆಯೋ ಇಲ್ಲವೋ, ನಾವು ಇದೇ ಸದನದಲ್ಲಿ ಜಾತಿಗಣತಿಯನ್ನು ಮಂಡಿಸುತ್ತೇವೆ. ದೇಶದ ಜನ ಅರ್ಜುನನ ರೀತಿ ಚಕ್ರವ್ಯೂಹವನ್ನು ಭೇದಿಸಲಿದ್ದಾರೆ ಎಂದು ರಾಹುಲ್‌ ಗಾಂಧಿ ಹೇಳಿದರು.

ಇದನ್ನೂ ಓದಿ: Rahul Gandhi: ನೀಟ್‌ನಲ್ಲಿ ‘ಎಷ್ಟು ವೋಟ್‌’ ಪಡೆದಿರಿ ಎಂದು ವಿದ್ಯಾರ್ಥಿಗಳಿಗೆ ಕೇಳಿದ ರಾಹುಲ್‌ ಗಾಂಧಿ; Video ವೈರಲ್

Continue Reading
Advertisement
Viral News
ದೇಶ5 mins ago

Viral News: ಕಾಲಿಗೆ ಕಬ್ಬಿಣದ ಸರಪಳಿ.. ಕೈಯಲ್ಲಿ ಅಮೆರಿಕ ಪಾಸ್‌ಪೋರ್ಟ್‌..ದಟ್ಟ ಕಾಡಿನಲ್ಲಿ ಮಹಿಳೆ ಪತ್ತೆ-ವಿಡಿಯೋ ವೈರಲ್‌

Kannada New Movie Audio rights of Niveditha Shivarajkumar produced movie sold for huge amount
ಸ್ಯಾಂಡಲ್ ವುಡ್8 mins ago

Kannada New Movie: ಭಾರಿ ಮೊತ್ತಕ್ಕೆ ಮಾರಾಟವಾಯ್ತು ನಿವೇದಿತಾ ಶಿವರಾಜ್ ಕುಮಾರ್ ನಿರ್ಮಾಣದ ಸಿನಿಮಾ ಆಡಿಯೊ ಹಕ್ಕು

Elephant combing Makna elephant captured near Bannerghatta
ಬೆಂಗಳೂರು ಗ್ರಾಮಾಂತರ9 mins ago

Elephant combing: ಭೀಮ, ಮಹೇಂದ್ರರ ಮುಂದೆ ಮಂಡಿಯೂರಿದ ಮಕ್ನಾ ಆನೆ; ಹೇಗಿತ್ತು ಗೊತ್ತಾ ಕಾರ್ಯಾಚರಣೆ

KRS Dam
ಪ್ರಮುಖ ಸುದ್ದಿ10 mins ago

KRS Dam: ಸಂಪ್ರದಾಯಕ್ಕೆ ಎಳ್ಳು ನೀರು; ಕಾವೇರಿಗೆ ಬಾಗಿನ ಕಾರ್ಯಕ್ರಮದಲ್ಲಿ ಬಾಡೂಟ!

Rajya Sabha
ರಾಜಕೀಯ29 mins ago

Rajya Sabha: ಸತ್ನಾಮ್‌ ಸಿಂಗ್‌ ಸಂಧು ಬಿಜೆಪಿ ಸೇರ್ಪಡೆ; ರಾಜ್ಯಸಭೆಯಲ್ಲಿ ಕೇಸರಿ ಪಕ್ಷದ ಬಲ 87ಕ್ಕೆ ಏರಿಕೆ

Paris Olympics 2024
ಪ್ರಮುಖ ಸುದ್ದಿ32 mins ago

Paris Olympics 2024 : ಕ್ರಿಕೆಟ್ ಕೆಲಸದಿಂದ ನಿರಾಳ; ಒಲಿಂಪಿಕ್ಸ್​​ವೀಕ್ಷಿಸಲು ತೆರಳಿದ ರಾಹುಲ್ ದ್ರಾವಿಡ್​

‌Actor Darshan
ಕರ್ನಾಟಕ39 mins ago

‌Actor Darshan: ನಟ ದರ್ಶನ್‌ಗೆ ಸದ್ಯಕ್ಕಿಲ್ಲ ಮನೆಯೂಟದ ಭಾಗ್ಯ; ಹೈಕೋರ್ಟ್‌ಗೆ ಸಲ್ಲಿಸಿದ್ದ ಅರ್ಜಿ ವಾಪಸ್!

Arjun Sarja Vidaamuyarchi Heats Up Character Poster
ಕಾಲಿವುಡ್49 mins ago

Arjun Sarja: ಸ್ಟೈಲಿಶ್ ಅವತಾರದಲ್ಲಿ ಅರ್ಜುನ್ ಸರ್ಜಾ: ‘ವಿಡಮುಯಾರ್ಚಿ’ಲುಕ್‌ ಔಟ್‌!

Rahul Gandhi
ದೇಶ51 mins ago

Rahul Gandhi: ಮೋದಿ ಸೇರಿ 6 ಜನರಿಂದ ಭಾರತೀಯರಿಗೆ ಚಕ್ರವ್ಯೂಹ ರಚನೆ ಎಂದ ರಾಹುಲ್‌ ಗಾಂಧಿ; 6 ಜನ ಯಾರ‍್ಯಾರು?

Areca Nut Illegal Import
ಕೃಷಿ55 mins ago

Areca Nut Illegal Import: ಭಾರತದೊಳಗೆ 3 ತಿಂಗಳಲ್ಲಿ 3009 ಟನ್‌ ವಿದೇಶಿ ಅಡಿಕೆ ಅಕ್ರಮ ಆಮದು; ಬೆಳೆಗಾರರಿಗೆ ಕಾದಿದೆ ಆಪತ್ತು!

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Elephant combing Makna elephant captured near Bannerghatta
ಬೆಂಗಳೂರು ಗ್ರಾಮಾಂತರ9 mins ago

Elephant combing: ಭೀಮ, ಮಹೇಂದ್ರರ ಮುಂದೆ ಮಂಡಿಯೂರಿದ ಮಕ್ನಾ ಆನೆ; ಹೇಗಿತ್ತು ಗೊತ್ತಾ ಕಾರ್ಯಾಚರಣೆ

karnataka rain
ಮಳೆ3 hours ago

Karnataka rain: ಪ್ರವಾಹದ ಭೀಕರತೆ; ಹಳ್ಳದಲ್ಲಿ ತೇಲಿಬಂದ ಎಮ್ಮೆಗಳ ಕಳೇಬರ

Tungabhadra Dam
ಕೊಪ್ಪಳ23 hours ago

Tungabhadra Dam: ಕಾಲುವೆಯಲ್ಲಿ ಬಾಲಕರ ಈಜಾಟ; ಅಧಿಕಾರಿಗಳಿಗೆ ಪೀಕಲಾಟ!

Elephant attack
ಮಳೆ1 day ago

Elephant attack : ಮಳೆ ಮಧ್ಯೆ ಮಲೆನಾಡಿನಲ್ಲಿ ಕಾಡಾನೆಗಳ ಕಾಟ; ಪ್ರವಾಹಕ್ಕೆ ಸಿಲುಕಿದ ಪಟಗುಂದಿ ಗ್ರಾಮ

karnataka Rain
ಮಳೆ1 day ago

Karnataka Rain : ಮಳೆ ನಿಂತರೂ ಕಡಿಮೆಯಾಗದ ಅನಾಹುತ; ಮಾದಪುರ ಟೌನ್ ಸಮೀಪ ಗುಡ್ಡ ಕುಸಿತ

karnataka Rain
ಮಳೆ1 day ago

Karnataka Rain : ರಭಸವಾಗಿ ಬೀಸಿದ ಗಾಳಿಗೆ ಮನೆ ಮೇಲೆ ಬಿದ್ದ ತೆಂಗಿನ ಮರ; ನದಿ ನೀರು ಸೇವಿಸದಂತೆ ಸೂಚನೆ

Karnataka weather Forecast
ಮಳೆ2 days ago

Karnataka Weather : ವೀಕೆಂಡ್‌ ಮೋಜಿಗೆ ಮಳೆರಾಯ ಅಡ್ಡಿ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

ramanagara news
ರಾಮನಗರ2 days ago

Ramanagar News : ರಾಮನಗರದಲ್ಲಿ ಎರಡು ಜಡೆ ಹಾಕಿಲ್ಲವೆಂದು ವಿದ್ಯಾರ್ಥಿನಿಯರ ಕೂದಲು ಕತ್ತರಿಸಿದ ಶಿಕ್ಷಕರು ಅಮಾನತು

karnataka rain
ಮಳೆ2 days ago

Karnataka Rain : ಕಾವೇರಿ ನದಿ ತೀರದಲ್ಲಿ ಪ್ರವಾಹ ಭೀತಿ; ಮುತ್ತತ್ತಿಗೆ ಪ್ರವಾಸಿಗರ ನಿಷೇಧ, ಶ್ರೀರಂಗಪಟ್ಟಣದಲ್ಲಿ ಪಿಂಡ ಪ್ರದಾನಕ್ಕೆ ಬ್ರೇಕ್

Ankola landslide
ಉತ್ತರ ಕನ್ನಡ3 days ago

Ankola landslide: ಅಂಕೋಲಾ-ಶಿರೂರು ಗುಡ್ಡ ಕುಸಿತ; ನಾಳೆಯಿಂದ ಪ್ಲೋಟಿಂಗ್ ಪ್ಲಾಟ್‌ಫಾರಂ ಕಾರ್ಯಾಚರಣೆ

ಟ್ರೆಂಡಿಂಗ್‌