ಬೆಂಗಳೂರು: ಸರ್ಕಾರಿ ಎಂಜಿನಿಯರಿಂಗ್ ಹಾಗೂ ಪಾಲಿಟೆಕ್ನಿಕ್ ಅರೆಕಾಲಿಕ ಉಪನ್ಯಾಸಕರಿಗೆ (Part Time Lecturers) ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದೆ. ವೇತನ ಪರಿಷ್ಕರಣೆ ಸಮಿತಿ ವರದಿ ಆಧರಿಸಿ ಉನ್ನತ ಶಿಕ್ಷಣ ಇಲಾಖೆ ಮಹತ್ವದ ಆದೇಶ ಹೊರಡಿಸಿದ್ದು, ಅರೆಕಾಲಿಕ ಉಪನ್ಯಾಸಕರಿಗೆ 5 ರಿಂದ 8 ಸಾವಿರ ರೂಪಾಯಿವರೆಗೆ ಗೌರವಧನ ಹೆಚ್ಚಿಸಲಾಗಿದೆ.
ಎಐಸಿಟಿಯು ಮಾನದಂಡ ಇರುವವರಿಗೆ ಸರ್ಕಾರಿ ಕಾಲೇಜುಗಳಲ್ಲಿ 5 ವರ್ಷ ಮೇಲ್ಪಟ್ಟವರಿಗೆ 32 ಸಾವಿರ, ಪಾಲಿಟೆಕ್ನಿಕ್‌ಗಳಲ್ಲಿ 28 ಸಾವಿರ ರೂ. ಗೌರವಧನ ಹಾಗೂ 5 ವರ್ಷ ಒಳಗಿನವರಿಗೆ ಕ್ರಮವಾಗಿ 30 ಸಾವಿರ ರೂ. ಹಾಗೂ 26 ಸಾವಿರ ಸಾವಿರ ರೂ. ನೀಡಲಾಗುತ್ತದೆ. ಇನ್ನು ಎಐಸಿಟಿಯು ಮಾನದಂಡಕ್ಕಿಂತ ಕಡಿಮೆ ಹಾಗೂ 5 ವರ್ಷ ಪೂರೈಸಿದವರಿಗೆ 28 ಸಾವಿರ ರೂ. ಹಾಗೂ 24 ಸಾವಿರ ರೂ. ನಿಗದಿ ಮಾಡಲಾಗಿದೆ.
ಸರ್ಕಾರಿ ಎಂಜಿನಿಯರಿಂಗ್ ಹಾಗೂ ಪಾಲಿಟೆಕ್ನಿಕ್ ಅರೆಕಾಲಿಕ ಉಪನ್ಯಾಸಕರ ಗೌರವಧನ ಹೆಚ್ಚಿಸಿ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.#vistaranews #PartTimeLecturers #Bangalore pic.twitter.com/06sMVloviM
— Vistara News (@VistaraNews) August 12, 2024
ಇದನ್ನೂ ಓದಿ | Teachers Recruitment: ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್; ಶೀಘ್ರವೇ 12 ಸಾವಿರ ಶಿಕ್ಷಕರ ನೇಮಕಾತಿ
ಉನ್ನತ ಶಿಕ್ಷಣ ಇಲಾಖೆಯ ತಾಂತ್ರಿಕ ಶಿಕ್ಷಣ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ಸರ್ಕಾರಿ ಎಂಜಿನಿಯರಿಂಗ್ ಕಾಲೇಜುಗಳು, ಸರ್ಕಾರಿ ಪಾಲಿಟೆಕ್ನಿಕ್‌ಗಳು ಮತ್ತು ಸರ್ಕಾರಿ ಕಿರಿಯ ತಾಂತ್ರಿಕ ಶಾಲೆಗಳಲ್ಲಿ ಕರ್ತವ್ಯ ನಿರ್ವಹಿಸುವ ಅರೆಕಾಲಿಕ ಉಪನ್ಯಾಸಕರುಗಳಿಗೆ ಕ್ರಮವಾಗಿ ಹಾಲಿ ವಾರಕ್ಕೆ ಗರಿಷ್ಠ 8/9/9 ಗಂಟೆಗಳ ಕಾರ್ಯಭಾರಕ್ಕೆ ಬದಲಾಗಿ, ವಾರಕ್ಕೆ ಗರಿಷ್ಠ 15/17/14 ಗಂಟೆಗಳ ಕಾರ್ಯಭಾರವನ್ನು ನಿಗದಿಪಡಿಸಿದ್ದು, ಅವರ ಮಾಸಿಕ ಗೌರವಧನವನ್ನು ಭವಿಷ್ಯವರ್ತಿಯಾಗಿ ಅಂದರೆ ಈ ಆದೇಶ ಹೊರಡಿಸಿದ ದಿನಾಂಕದಿಂದ ಜಾರಿಗೆ ಬರುವಂತೆ ಷರತ್ತುಗಳಿಗೊಳಪಟ್ಟು ನಿಗದಿಪಡಿಸಿ ಉನ್ನತ ಶಿಕ್ಷಣ ಇಲಾಖೆ (ತಾಂತ್ರಿಕ) ಸರ್ಕಾರದ ಅಧೀನ ಕಾರ್ಯದರ್ಶಿ ಮಹಾಂತಪ್ಪ ಎಸ್. ತುರಕನೂರ ಆದೇಶ ಹೊರಡಿಸಿದ್ದಾರೆ.
ಶೀಘ್ರವೇ 12 ಸಾವಿರ ಶಿಕ್ಷಕರ ನೇಮಕಾತಿ: ಮಧು ಬಂಗಾರಪ್ಪ
ಬೆಂಗಳೂರು: ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಸರ್ಕಾರಿ ಇಲಾಖೆಗಳಲ್ಲಿರುವ ಖಾಲಿ ಹುದ್ದೆಗಳ ಭರ್ತಿಗೆ ತೀವ್ರ ಒತ್ತಾಯಗಳು ಕೇಳಿಬರುತ್ತಿರುವ ಹಿನ್ನೆಲೆಯಲ್ಲಿ ಮತ್ತೆ 12 ಸಾವಿರ ಶಿಕ್ಷಕರ ನೇಮಕಾತಿಗೆ ರಾಜ್ಯ ಸರ್ಕಾರ ಮುಂದಾಗಿದೆ. ಈ ಬಗ್ಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಾಹಿತಿ ನೀಡಿದ್ದು, ಮುಂದಿನ ದಿನಗಳಲ್ಲಿ 10ರಿಂದ 12 ಸಾವಿರ ಶಿಕ್ಷಕರನ್ನು ನೇಮಕ (Teachers Recruitment) ಮಾಡಿಕೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ.
ತುಮಕೂರಿನಲ್ಲಿ ನಡೆದ ಕೆಡಿಪಿ ಸಭೆಯಲ್ಲಿ ಮಾತನಾಡಿರುವ ಸಚಿವರು, ಶಾಲೆಗಳಲ್ಲಿ ಶಿಕ್ಷಕರ ಕೊರತೆ ನೀಗಿಸಲು ಈಗಾಗಲೇ 12 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ನಡೆದಿದ್ದು, ಮುಂದಿನ ದಿನಗಳಲ್ಲಿ 10ರಿಂದ 12 ಸಾವಿರ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗುತ್ತದೆ. ಇದಕ್ಕೆ ಸಂಬಂಧಿಸಿದ ಪ್ರಸ್ತಾವನೆ ಆರ್ಥಿಕ ಇಲಾಖೆ ಮುಂದಿದ್ದು, ಅನುಮತಿ ಸಿಕ್ಕ ನಂತರ ನೇಮಕಾತಿ ಪ್ರಕ್ರಿಯೆ ಆರಂಭವಾಗಲಿದೆ ಎಂದು ಹೇಳಿದ್ದಾರೆ.
ತಕ್ಷಣಕ್ಕೆ ಸಮಸ್ಯೆ ಪರಿಹರಿಸಲು ಈ ಶೈಕ್ಷಣಿಕ ವರ್ಷಾರಂಭದಲ್ಲೇ 50 ಸಾವಿರ ಅತಿಥಿ ಶಿಕ್ಷಕರನ್ನು ನೇಮಿಸಿಕೊಳ್ಳಲಾಗಿದೆ. ಅನುದಾನಿತ ಶಾಲೆಗಳಲ್ಲಿ 2016ರಿಂದ 2020ರ ವರೆಗೆ ಖಾಲಿ ಇರುವ ಶಿಕ್ಷಕರ ಭರ್ತಿಗೆ ಆದೇಶ ನೀಡಲಾಗಿದ್ದು, ಮುಂದಿನ ದಿನಗಳಲ್ಲಿ ಇನ್ನುಳಿದ ಹುದ್ದೆಗಳ ಭರ್ತಿಗೆ ಅವಕಾಶ ಮಾಡಿಕೊಡಲಾಗುವುದು ಎಂದು ತಿಳಿಸಿದ್ದಾರೆ.
ಪ್ರಸಕ್ತ ಸಾಲಿನಲ್ಲಿ 2 ಸಾವಿರ ಇಂಗ್ಲಿಷ್ ಮಾಧ್ಯಮ ಶಾಲೆಗಳನ್ನು ತೆರೆಯಲಾಗಿದ್ದು, 1,008 ಅಂಗನವಾಡಿಗಳಲ್ಲಿ ಎಲ್‌ಕೆಜಿ, ಯುಕೆಜಿ ಆರಂಭಿಸಲಾಗಿದೆ. ಕೇವಲ 28 ದಿನಗಳಲ್ಲಿ 32 ಸಾವಿರ ಮಕ್ಕಳು ದಾಖಲಾಗುವ ಮೂಲಕ ಉತ್ತಮ ಸ್ಪಂದನೆ ವ್ಯಕ್ತವಾಗಿದೆ. ಮುಂದಿನ ವರ್ಷದ ವೇಳೆಗೆ ಇನ್ನೂ 500 ಕೆಪಿಎಸ್ ಶಾಲೆಗಳನ್ನು ತೆರೆಯಲಾಗುವುದು. ನಾಲ್ಕು ವರ್ಷಗಳಲ್ಲಿ ಹಂತಹಂತವಾಗಿ ಇಂತಹ 3 ಸಾವಿರ ಶಾಲೆ ತೆರೆಯಲು ಉದ್ದೇಶಿಸಲಾಗಿದೆ. ಇದರಿಂದ 45 ಲಕ್ಷ ಮಕ್ಕಳಿಗೆ ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ನೀಡಲು ಸಾಧ್ಯವಾಗಲಿದೆ ಎಂದಿದ್ದಾರೆ.
ಇದನ್ನೂ ಓದಿ | KPSC Exam: ಆ.25ರಂದು 384 ಗೆಜೆಟೆಡ್ ಹುದ್ದೆಗಳ ನೇಮಕಾತಿಗಾಗಿ ನಡೆಯಬೇಕಿದ್ದ ಪರೀಕ್ಷೆ ಮುಂದೂಡಿಕೆ
ಇದಕ್ಕೂ ಮುನ್ನ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಸಚಿವರು, ‘ಮುಂದಿನ ವರ್ಷದಿಂದ 50 ಸಾವಿರ ಮಕ್ಕಳಿಗೆ ಸಿಇಟಿ, ನೀಟ್, ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ನೀಡಲಾಗುವುದು. ಈ ವರ್ಷ 25 ಸಾವಿರ ಮಕ್ಕಳು ತರಬೇತಿಗೆ ಆಯ್ಕೆಯಾಗಿದ್ದಾರೆ’ ಎಂದು ತಿಳಿಸಿದ್ದಾರೆ.