ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಎ1 ಪವಿತ್ರಾಗೌಡ ಅಸ್ವಸ್ಥಗೊಂಡಿದ್ದು, ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅನ್ನಪೂರ್ಣೇಶ್ವರಿ ನಗರ ಠಾಣೆ ಕಸ್ಟಡಿಯಲ್ಲಿದ್ದ ಪವಿತ್ರಾ ಗೌಡ (Pavithra Gowda), ಅಸ್ವಸ್ಥಗೊಂಡಿದ್ದರಿಂದ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.
ಕೆಲವೇ ಕ್ಷಣಗಳ ಹಿಂದೆ ಅನ್ನಪೂರ್ಣೇಶ್ವರಿ ನಗರ ಠಾಣೆಗೆ ವೈದ್ಯರು ಬಂದಿದ್ದರು. ಆದರೆ, ಹೆಚ್ಚಿನ ಚಿಕಿತ್ಸೆ ಅಗತ್ಯವಿರುವ ಹಿನ್ನೆಲೆಯಲ್ಲಿ ಪವಿತ್ರಾಗೌಡಳನ್ನು ಮಲ್ಲತ್ತಹಳ್ಳಿಯ ಸರ್ಕಾರಿ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ ಎಂದು ತಿಳಿದುಬಂದಿದೆ.
ಇದನ್ನೂ ಓದಿ | Bhavani Revanna: ಭವಾನಿ ರೇವಣ್ಣ ನಿರಾಳ, ನಿರೀಕ್ಷಣಾ ಜಾಮೀನು ನೀಡಿದ ಹೈಕೋರ್ಟ್
ದರ್ಶನ್ ಮನೆ ಒತ್ತುವರಿ ತೆರವಿಗೆ ಸರ್ಕಾರ ಗ್ರೀನ್ ಸಿಗ್ನಲ್; ಬುಲ್ಡೋಜರ್ ರೆಡಿ ಮಾಡುತ್ತಿದೆ ಬಿಬಿಎಂಪಿ
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನವಾಗಿರುವ ನಟ ದರ್ಶನ್‌ಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಅಕ್ರಮವಾಗಿ ರಾಜಕಾಲುವೆ ಮೇಲೆ ನಿರ್ಮಿಸಿದ ಹಿನ್ನೆಲೆಯಲ್ಲಿ ಮನೆ ಒತ್ತುವರಿ ತೆರವು ಮಾಡಲು ರಾಜ್ಯ ಸರ್ಕಾರ ಸೂಚಿಸಿದೆ. ನಟ ದರ್ಶನ್ (Actor Darshan) ಮನೆ ತೆರವಿಗೆ ಪಾಲಿಕೆ ಅಧಿಕಾರಿಗಳಿಗೆ ರಾಜ್ಯ ಸರ್ಕಾರದಿಂದ ಮೌಕಿಕ ಸೂಚನೆ ಸಿಕ್ಕಿದೆ ಎನ್ನಲಾಗಿದ್ದು, ಯಾರೇ ಒತ್ತುವರಿ ಮಾಡಿ ಸ್ಟೇ ತಂದಿದ್ದರೂ ಕಾನೂನಿನ ಪ್ರಕಾರ ತೆರವು ಮಾಡಲು ಸೂಚನೆ ನೀಡಲಾಗಿದೆ ಎಂದು ತಿಳಿದುಬಂದಿದೆ.
ನಟ ದರ್ಶನ್ ಮನೆ ರಾಜಕಾಲುವೆ ಮೇಲೆ ಇದ್ದರೂ ತೆರವುಗೊಳಿಸಲು ಬಿಬಿಎಂಪಿ ಅಧಿಕಾರಿಗಳು ಹಿಂದೇಟು ಹಾಕಿದ್ದರು. ಇದೀಗ ಒತ್ತುವರಿಗೆ ತೆರವಿಗೆ ಸೂಚನೆ ಹಿನ್ನೆಲೆಯಲ್ಲಿ ಕ್ರಮಕ ಕೈಗೊಳ್ಳಲು ಬಿಬಿಎಂಪಿ ಮುಂದಾಗಿದೆ. ಬಿಬಿಎಂಪಿ ಮಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಕೂಡ ಒತ್ತುವರಿ ವಿಚಾರದಲ್ಲಿ ಕ್ರಮ ಕೈಗೊಳ್ಳುವುದಾಗಿ ಹೇಳಿಕೆ ನೀಡಿದ್ದಾರೆ.
ರಾಜಧಾನಿಯಲ್ಲಿ 2016ರಲ್ಲಿ ಪ್ರವಾಹ ಸ್ಥಿತಿ ನಿರ್ಮಾಣವಾದಾಗ ರಾಜ ಕಾಲುವೆಗಳ ಮೇಲೆ ನಿರ್ಮಾಣವಾಗಿರುವ ಕಟ್ಟಡಗಳನ್ನು ತೆರವುಗೊಳಿಸಲು ಅಂದಿನ ಸಿದ್ದರಾಮಯ್ಯ ಸರ್ಕಾರ ಬಿಬಿಎಂಪಿಗೆ ಸೂಚನೆ ನೀಡಿತ್ತು. ಆಗ ಆರ್.ಆರ್. ನಗರದ ದರ್ಶನ್ ಅವರ ನಿವಾಸ ಕೂಡ ರಾಜ ಕಾಲುವೆಯ ಬಫರ್ ಜೋನ್ ಮೇಲೆ ನಿರ್ಮಿಸಿರುವುದು ತಿಳಿದುಬಂದಿತ್ತು.
ಇದನ್ನೂ ಓದಿ | Self Harming: ತಿಂಗಳ ಹಿಂದಷ್ಟೇ ಮದುವೆ ಆಗಿದ್ದ ಇನ್ಫೋಸಿಸ್ ಉದ್ಯೋಗಿ ಆತ್ಮಹತ್ಯೆ; ರೈಲಿಗೆ ತಲೆಕೊಟ್ಟ ಫ್ಲಿಪ್‌ಕಾರ್ಟ್ ಉದ್ಯೋಗಿ
ಐಡಿಯಲ್ ಹೋಮ್ಸ್, ದರ್ಶನ್, ಶಾಮನೂರು ಅವರ ಆಸ್ಪತ್ರೆ ಸೇರಿ ಹಲವು ಕಟ್ಟಡಗಳನ್ನು ತೆರವುಗೊಳಿಸುವಂತೆ ನೋಟಿಸ್ ನೀಡಲಾಗಿತ್ತು. ನೋಟಿಸ್ ನೀಡಿದ್ದರಿಂದ ದರ್ಶನ್ ಮತ್ತಿತರರು ಸಿವಿಲ್ ನ್ಯಾಯಾಲಯದಿಂದ ತಡೆಯಾಜ್ಞೆ ತಂದು, ಬಳಿಕ 2016 ಅಕ್ಟೋಬರ್‌ನಲ್ಲಿ ತೆರವು ಮಾಡದಂತೆ ಹೈಕೋರ್ಟ್‌ನಿಂದ ತಡೆಯಾಜ್ಞೆ ತಂದಿದ್ದರು. ಹೀಗಾಗಿ ಅಂದು ಒತ್ತುವರಿ ಕಾರ್ಯಾಚರಣೆ ಸ್ಥಗಿತಗೊಂಡಿತ್ತು. ದರ್ಶನ್ ಇದೀಗ ಬಂಧನವಾಗಿರುವ ಹಿನ್ನೆಲೆಯಲ್ಲಿ ಮನೆ ಒತ್ತುವರಿ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ.