Physical Abuse : 16 ವರ್ಷದ ಬಾಲಕಿಯನ್ನು ಅತ್ಯಾಚಾರ ಮಾಡಿದ 69 ವರ್ಷದ ಮುದುಕ - Vistara News

ಪ್ರಮುಖ ಸುದ್ದಿ

Physical Abuse : 16 ವರ್ಷದ ಬಾಲಕಿಯನ್ನು ಅತ್ಯಾಚಾರ ಮಾಡಿದ 69 ವರ್ಷದ ಮುದುಕ

Physical Abuse :

VISTARANEWS.COM


on

Physical Abuse
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಇಂದೋರ್​: ಮಧ್ಯಪ್ರದೇಶದ ಶಹದೋಲ್ ಜಿಲ್ಲೆಯಲ್ಲಿ 69 ವರ್ಷದ ಮುದುಕನೊಬ್ಬ 16 ವರ್ಷದ ಬಾಲಕಿಯನ್ನು ಅತ್ಯಾಚಾರ ಮಾಡಿದ ಘಟನೆ ನಡೆದಿದೆ. ಬಾಲಕಿಯ ಪೋಷಕರು ನೀಡಿದ ದೂರಿನ ಪ್ರಕಾರ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಈ ಘಟನೆ ಆಗಸ್ಟ್ 14 ರಂದು ಬಿಯೋಹರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಮರುದಿನ ಪೊಲೀಸರಿಗೆ ದೂರು ನೀಡಲಾಗಿದೆ.

16 ವರ್ಷದ ಬಾಲಕಿ ಮನೆಯಲ್ಲಿ ಒಬ್ಬಳೇ ಇರುವುದನ್ನು ಕಂಡು ಆರೋಪಿ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಬಿಯೋಹರಿ ಪೊಲೀಸ್ ಠಾಣೆಯ ಉಸ್ತುವಾರಿ ಅರುಣ್ ಪಾಂಡೆ ತಿಳಿಸಿದ್ದಾರೆ. ಬಾಲಕಿ ಮತ್ತು ಆಕೆಯ ಕುಟುಂಬ ಸದಸ್ಯರು ಆಗಸ್ಟ್ 15 ರಂದು ಸ್ಥಳೀಯ ಪೊಲೀಸರನ್ನು ಸಂಪರ್ಕಿಸಿ ಈ ಬಗ್ಗೆ ದೂರು ದಾಖಲಿಸಿದ್ದಾರೆ.

ಆರೋಪಿಯನ್ನು ಆಗಸ್ಟ್ 16 ರಂದು ಬಂಧಿಸಲಾಗಿದೆ. ಭಾರತೀಯ ನ್ಯಾಯ ಸಂಹಿತಾ (ಬಿಎನ್ಎಸ್) ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯ ಸಂಬಂಧಿತ ನಿಬಂಧನೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. ಕೋಲ್ಕತಾ ಆಸ್ಪತ್ರೆಯಲ್ಲಿ ತರಬೇತಿ ವೈದ್ಯೆಯ ಭೀಕರ ಅತ್ಯಾಚಾರ-ಕೊಲೆಯ ಬಗ್ಗೆ ಹೆಚ್ಚುತ್ತಿರುವ ಆಕ್ರೋಶದ ಮಧ್ಯೆ ಈ ಬೆಳವಣಿಗೆ ನಡೆದಿದೆ.

Physical Abuse: ಮತ್ತೊಂದು ಪೈಶಾಚಿಕ ಕೃತ್ಯ; ಬಸ್‌ನಲ್ಲಿ ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರ

ಡೆಹ್ರಾಡೂನ್‌: ದೇಶದಲ್ಲಿ ಮಹಿಳೆಯರ ಸುರಕ್ಷತೆ ಬಗ್ಗೆ ಆತಂಕ ಎದುರಾಗಿದ್ದು, ಕೋಲ್ಕತ್ತಾದಲ್ಲಿ ಟ್ರೈನಿ ವೈದ್ಯೆಯ ಮೇಲಿನ ಅತ್ಯಾಚಾರ, ಕೊಲೆ ಪ್ರಕರಣದ ಬೆನ್ನಿಗೆ ಉತ್ತರಾಖಂಡದಲ್ಲಿ ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವ ಪ್ರಕರಣ ಬೆಳಕಿಗೆ ಬಂದಿದೆ (Physical Abuse). ಉತ್ತರ ಪ್ರದೇಶದ ಮೊರಾದಾಬಾದ್​ನಿಂದ ಡೆಹ್ರಾಡೂನ್​ಗೆ ಬಸ್‌ನಲ್ಲಿ ಹೊರಟಿದ್ದ ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲೆ ಐವರು ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ. ಈ ಘಟನೆ ಆಗಸ್ಟ್ 13ರಂದು ನಡೆದಿದೆ ಎನ್ನಲಾಗಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಸದ್ಯ ಬಾಲಕಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ಪಂಜಾಬ್‌ ಮೂಲದ ಬಾಲಕಿ ಡೆಹ್ರಾಡೂನ್‌ಗೆ ತೆರಳಲು ಆಗಸ್ಟ್‌ 12ರಂದು ಉತ್ತರಾಖಂಡದ ಅಂತಾರಾಜ್ಯ ಸರ್ಕಾರಿ ಬಸ್‌ ಏರಿದ್ದಳು. ಆಗಸ್ಟ್‌ 13ರ ಮುಂಜಾನೆ ನಿಲ್ಲಿಸಿದ್ದ ಬಸ್‌ನಲ್ಲಿ ಯಾರೂ ಇಲ್ಲದ ವೇಳೆ ಐವರು ಬಾಲಕಿ ಮೇಲೆ ಎರಗಿದ್ದಾರೆ ಎಂದು ಮೂಲಗಳು ತಿಳಿಸಿವೆ. ವೈದ್ಯಕೀಯ ವರದಿ ಇನ್ನಷ್ಟೇ ಕೈ ಸೇರಬೇಕಿದೆ.

ಅಧಿಕಾರಿಗಳು ಹೇಳಿದ್ದೇನು?

ಮಕ್ಕಳ ಕಲ್ಯಾಣ ಸಮಿತಿ (Child Welfare Committee-CWC)ಯ ಅಧಿಕಾರಿಗಳು ಘಟನೆ ಬಗ್ಗೆ ಮಾಹಿತಿ ನೀಡಿ, ಆಗಸ್ಟ್‌ 13ರ ಮುಂಜಾನೆ ಸುಮಾರು 2-2.30ರ ವೇಳೆಗೆ ಬಾಲಕಿ ಪತ್ತೆಯಾಗಿದ್ದಳು. ಈ ವೇಳೆ ಅವಳ ಮಾನಸಿಕವಾಗಿ ಬಹಳ ಕುಗ್ಗಿ ಹೋಗಿದ್ದಳು. ಆಕೆಯ ದೇಹದಲ್ಲಿ ಹೊರ ಭಾಗದಲ್ಲಿ ಯಾವುದೇ ಗಾಯ ಕಂಡು ಬಂದಿರಲಿಲ್ಲ. ಬಳಿಕ ಆಕೆಯನ್ನು ಮಕ್ಕಳ ಕಲ್ಯಾಣ ಕೇಂದ್ರಕ್ಕೆ ಕರೆದುಕೊಂಡು ಬಂದು ಆಸ್ಪತ್ರೆಗೆ ದಾಖಲಿಸಲಾಯಿತುʼʼ ಎಂದು ತಿಳಿಸಿದ್ದಾರೆ.

ಬಸ್‌ನ ಚಾಲಕ, ನಿರ್ವಾಹಕ ಸೇರಿ ಇದುವರೆಗೆ 6 ಮಂದಿಯನ್ನು ವಶಕ್ಕೆ ಪಡೆಯಲಾಗಿದ್ದು, ವಿಚಾರಣೆ ನಡೆಸಲಾಗುತ್ತಿದೆ. ಮೂಲಗಳ ಪ್ರಕಾರ ಪಂಜಾಬ್‌ನ ಈ ಬಾಲಕಿ ಅನಾಥೆಯಾಗಿದ್ದು, ತನ್ನ ಸಹೋದರಿ ಮತ್ತು ಭಾವನೊಂದಿಗೆ ವಾಸವಾಗಿದ್ದಳು. ಆಗಸ್ಟ್‌ 11ರಂದು ಅಕ್ಕ-ಭಾವ ಸೇರಿ ಆಕೆಯನ್ನು ಮನೆಯಿಂದ ಹೊರ ಹಾಕಿದ್ದರು. ಇದರಿಂದ ದಿಕ್ಕೇ ತೋಚದಂತಾದ ಆಕೆ ದಿಲ್ಲಿಗೆ ಬಂದು ಅಲ್ಲಿಂದ ಉತ್ತರಪ್ರದೇಶದ ಮೊರಾದಾಬಾದ್‌ಗೆ ಆಗಮಿಸಿದ್ದಳು. ಬಳಿಕ ಅಲ್ಲಿಂದ ಡೆಹ್ರಾಡೂನ್‌ ತಲುಪಿದ್ದಳು.

ಇದನ್ನೂ ಓದಿ: Heart Attack : ಬೈಕ್‌ನಲ್ಲಿ ತೆರಳುತ್ತಿದ್ದಾಗಲೇ ಬಡಿತ ನಿಲ್ಲಿಸಿದ ಹೃದಯ; ಯೋಧನ ಸಾವಿನ ಕೊನೆ ಕ್ಷಣ ಸೆರೆ

ಘಟನೆ ವಿವರ

ದಿಲ್ಲಿಯಿಂದ ಉತ್ತರ ಪ್ರದೇಶದ ಸಾರಿಗೆ ಬಸ್‌ ಮೂಲಕ ಮೊರಾದಾಬಾದ್‌ಗೆ ತಲುಪಿದ ಬಾಲಕಿ ಅಲ್ಲಿಂದ ಆಗಸ್ಟ್‌ 12ರಂದು ಅಂತಾರಾಜ್ಯ ಬಸ್‌ ಹತ್ತಿ ಡೆಹ್ರಾಡೂನ್‌ ತಲುಪಿದ್ದಳು. ಬಸ್‌ನಿಂದ ಎಲ್ಲರೂ ಇಳಿದು ಹೋದ ಬಳಿಕ ಆಕೆಯೊಬ್ಬಳೇ ಉಳಿದಿಕೊಂಡಿದ್ದಳು. ಆಕೆ ಒಬ್ಬಳೇ ಇರುವುದನ್ನು ಗಮನಿಸಿದ ಐವರು ಆಗಸ್ಟ್‌ 13ರಂದು ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ ಬಸ್‌ನಿಂದ ಹೊರಗೆ ಎಸೆದು ಪರಾರಿಯಾಗಿದ್ದರು ಎಂದು ವರದಿಯೊಂದು ತಿಳಿಸಿದೆ. ಸದ್ಯ ಪೊಲೀಸರು ದೂರು ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ದುಷ್ಕರ್ಮಿಗಳ ಪತ್ತೆಗೆ ಸಿಸಿಟಿವಿ ಕ್ಯಾಮೆರಾ ಪರಿಶೀಲಿಸುತ್ತಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಉದ್ಯೋಗ

RRB Recruitment 2024: ರೈಲ್ವೇ ಇಲಾಖೆಯಿಂದ 7,951 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ; ಹೀಗೆ ಅಪ್ಲೈ ಮಾಡಿ

RRB Recruitment 2024: ರೈಲ್ವೇ ರಿಕ್ರೂಟ್‌ಮೆಂಟ್‌ ಬೋರ್ಡ್‌ ಗುಡ್‌ನ್ಯೂಸ್‌ ನೀಡಿದೆ. ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿನಿಸಿದೆ. ಬರೋಬ್ಬರಿ 7,951 ಜೂನಿಯರ್‌ ಎಂಜಿನಿಯರ್‌, ಕೆಮಿಕಲ್‌ ಸೂಪರ್‌ವೈಸರ್‌ ಹುದ್ದೆಗಳು ಇದಾಗಿದ್ದು, ಪದವಿ, ಡಿಪ್ಲೋಮಾ ವಿದ್ಯಾರ್ಹತೆ ಹೊಂದಿದವರು ಅರ್ಜಿ ಸಲ್ಲಿಸಬಹುದು. ಆಸಕ್ತರು ಆನ್‌ಲೈನ್‌ ಮೂಲಕ ಜುಲೈ 30ರಿಂದ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನ ಆಗಸ್ಟ್‌ 29.

VISTARANEWS.COM


on

RRB Recruitment 2024
Koo

ಬೆಂಗಳೂರು: ಶಿಕ್ಷಣ ಮುಗಿಸಿ ಒಂದೊಳ್ಳೆ ಉದ್ಯೋಗಕ್ಕಾಗಿ ಹುಡುಕಾಟ ನಡೆಸುತ್ತಿರುವವರಿಗೆ ರೈಲ್ವೇ ರಿಕ್ರೂಟ್‌ಮೆಂಟ್‌ ಬೋರ್ಡ್‌ (Railway Recruitment Board) ಗುಡ್‌ನ್ಯೂಸ್‌ ನೀಡಿದೆ. ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿನಿಸಿದೆ (RRB Recruitment 2024). ಬರೋಬ್ಬರಿ 7,951 ಜೂನಿಯರ್‌ ಎಂಜಿನಿಯರ್‌, ಕೆಮಿಕಲ್‌ ಸೂಪರ್‌ವೈಸರ್‌ ಹುದ್ದೆಗಳು ಇದಾಗಿದ್ದು, ಪದವಿ, ಡಿಪ್ಲೋಮಾ ವಿದ್ಯಾರ್ಹತೆ ಹೊಂದಿದವರು ಅರ್ಜಿ ಸಲ್ಲಿಸಬಹುದು. ಆಸಕ್ತರು ಆನ್‌ಲೈನ್‌ ಮೂಲಕ ಜುಲೈ 30ರಿಂದ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನ ಆಗಸ್ಟ್‌ 29 (Job Alert).

ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ

ಕೆಮಿಲ್‌ ಮೇಲ್ವಿಚಾರಕ / ಸಂಶೋಧನೆ ಮತ್ತು ಮೆಟಲರ್ಜಿಕಲ್ ಮೇಲ್ವಿಚಾರಕ / ಸಂಶೋಧನೆ (Chemical Supervisor / Research and Metallurgical Supervisor / Research)- 17 ಹುದ್ದೆ, ವಿದ್ಯಾರ್ಹತೆ: ಕೆಮಿಕಲ್ ಟೆಕ್ನಾಲಜಿ, ಮೆಟಲರ್ಜಿ ಎಂಜಿನಿಯರಿಂಗ್‌ನಲ್ಲಿ ಪದವಿ.
ಕಿರಿಯ ಎಂಜಿನಿಯರ್, ಡಿಪೋ ಮೆಟೀರಿಯಲ್ ಸೂಪರಿಂಟೆಂಡೆಂಟ್ ಮತ್ತು ಕೆಮಿಕಲ್ ಹಾಗೂ ಮೆಟಲರ್ಜಿಕಲ್ ಅಸಿಸ್ಟೆಂಟ್ (Junior Engineer, Depot Material Superintendent and Chemical & Metallurgical Assistant)- 7,934 ಹುದ್ದೆ, ವಿದ್ಯಾರ್ಹತೆ: ಡಿಪ್ಲೊಮಾ ಇನ್ ಇಂಜಿನಿಯರಿಂಗ್, ಬಿ.ಎಸ್‌ಸಿ, ಪದವಿ.

ವಯೋಮಿತಿ

ಅಭ್ಯರ್ಥಿಗಳ ಕನಿಷ್ಠ ವಯಸ್ಸು 18 ವರ್ಷ ಮತ್ತು ಗರಿಷ್ಠ ವಯಸ್ಸು 36 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ, ಪಿಡಬ್ಲ್ಯುಬಿಡಿ (ಯುರ್‌ & ಇಡಬ್ಲ್ಯುಎಸ್‌) ಅಭ್ಯರ್ಥಿಗಳಿಗೆ 10 ವರ್ಷ, ಪಿಡಬ್ಲ್ಯುಬಿಡಿ (ಒಬಿಸಿ) ಅಭ್ಯರ್ಥಿಗಳಿಗೆ 13 ವರ್ಷ ಮತ್ತು ಪಿಡಬ್ಲ್ಯುಬಿಡಿ (ಎಸ್‌ಸಿ / ಎಸ್‌ಟಿ) ಅಭ್ಯರ್ಥಿಗಳಿಗೆ 15 ವರ್ಷಗಳ ರಿಯಾಯಿತಿ ಇದೆ.

ಅರ್ಜಿ ಶುಲ್ಕ

ಅರ್ಜಿ ಶುಲ್ಕವಾಗಿ ಎಸ್‌ಸಿ / ಎಸ್‌ಟಿ / ಮಾಜಿ ಯೋಧರು / ಮಹಿಳಾ ಅಭ್ಯರ್ಥಿಗಳು / ತೃತೀಯ ಲಿಂಗಿಗಳು / ಅಲ್ಪಸಂಖ್ಯಾತರು / ಇಬಿಸಿ ವಿಭಾಗದ ಅಭ್ಯರ್ಥಿಗಳು 250 ರೂ. ಮತ್ತು ಇತರ ವಿಭಾಗದ ಅಭ್ಯರ್ಥಿಗಳು 500 ರೂ. ಆನ್‌ಲೈನ್‌ ಮೂಲಕ ಪಾವತಿಸಬೇಕು.

ಆಯ್ಕೆ ವಿಧಾನ

ಕಂಪ್ಯೂಟರ್ ಆಧಾರಿತ ಪರೀಕ್ಷೆ, ದಾಖಲಾತಿ ಪರಿಶೀಲನೆ ಮತ್ತು ವೈದ್ಯಕೀಯ ಪರೀಕ್ಷೆಗಳ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಉದ್ಯೋಗದ ಸ್ಥಳ: ಭಾರತದಾದ್ಯಂತ.

RRB Recruitment 2024 ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಸುವ ವಿಧಾನ

  • ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ (https://www.rrbapply.gov.in/)
  • ಹೆಸರು ನೋಂದಾಯಿಸಿ ಲಾಗಿನ್‌ ಆಗಿ.
  • ಇಲ್ಲಿ ಕಂಡುಬರುವ ಅಪ್ಲಿಕೇಷನ್‌ ಫಾರಂ ಅನ್ನು ಎಚ್ಚರಿಕೆಯಿಂದ ಭರ್ತಿ ಮಾಡಿ.
  • ಅಗತ್ಯ ದಾಖಲೆಗಳನ್ನು ಅಪ್‌ಲೋಡ್‌ ಮಾಡಿ.
  • ಆನ್‌ಲೈನ್‌ ಮೂಲಕ ಅರ್ಜಿ ಶುಲ್ಕ ಪಾವತಿಸಿ.
  • ಭರ್ತಿ ಮಾಡಿದ ವಿವರಗಳನ್ನು ಮತ್ತೊಮ್ಮೆ ಪರಿಶೀಲಿಸಿ ಎಲ್ಲವೂ ಸರಿ ಇದ್ದರೆ Submit ಬಟನ್‌ ಕ್ಲಿಕ್‌ ಮಾಡಿ.
  • ಭವಿಷ್ಯದ ಅಗತ್ಯಗಳಿಗೆ ಅಪ್ಲಿಕೇಷನ್‌ ಫಾರಂನ ಪ್ರಿಂಟ್‌ಔಟ್‌ ತೆಗೆದಿಡಿ.

ಹೆಚ್ಚಿನ ವಿವರಗಳಿಗೆ ವೆಬ್‌ಸೈಟ್‌ ವಿಳಾಸ: indianrailways.gov.inಗೆ ಭೇಟಿ ನೀಡಿ ಅಥವಾ ಹೆಲ್ಪ್‌ಲೈನ್‌ ನಂಬರ್‌: Helpline No: 9592001188, 01725653333ಕ್ಕೆ ಕರೆ ಮಾಡಿ.

ಇದನ್ನೂ ಓದಿ: BMRCL Recruitment 2024: ನಮ್ಮ ಮೆಟ್ರೋದಲ್ಲಿದೆ ಉದ್ಯೋಗಾವಕಾಶ; ಅರ್ಹತೆ, ಅರ್ಜಿ ಸಲ್ಲಿಸುವ ವಿಧಾನ ಇಲ್ಲಿದೆ

Continue Reading

ಕ್ರೀಡೆ

Vinesh Phogat: ಸನ್ಮಾನ ಸಮಾರಂಭದಲ್ಲಿ ದಿಢೀರ್​ ಪ್ರಜ್ಞೆ ತಪ್ಪಿ ಬಿದ್ದ ವಿನೇಶ್​ ಪೋಗಟ್​

Vinesh Phogat: ತವರಿನಲ್ಲಿ ನಡೆದ ಅಭಿನಂದನಾ ಸಮಾರಂಭದಲ್ಲಿ ವಿನೇಶ್ ಫೋಗಟ್​​ ವೇದಿಕೆಯಲ್ಲೇ ಪ್ರಜ್ಞೆ ತಪ್ಪಿದ ಘಟನೆಯ ವಿಡಿಯೊ ಇದೀಗ ವೈರಲ್​ ಆಗಿದೆ.

VISTARANEWS.COM


on

Vinesh Phogat
Koo

ನವದೆಹಲಿ: ಪ್ಯಾರಿಸ್​ ಒಲಿಂಪಿಕ್ಸ್​ನಲ್ಲಿ ಅನರ್ಹಗೊಂಡು ಪದಕ ವಂಚಿತರಾಗಿದ್ದ ವಿನೇಶ್​ ಫೋಗಟ್(Vinesh Phogat)​ ಶನಿವಾರ ಭಾರತಕ್ಕೆ ಆಗಮಿಸಿದ್ದರು. ನವದೆಹಲಿಗೆ ಬಂದಿಳಿದಿದ್ದ ವಿನೇಶ್​ಗೆ ಭರ್ಜರಿ ಸ್ವಾಗತ ಕೋರಲಾಗಿತ್ತು. ಕಾಂಗ್ರೆಸ್​ ನಾಯಕ ದೀಪೇಂದರ್​ ಹೂಡಾ, ರೈತನಾಯಕರು, ಬಜರಂಗ್​ ಪೂನಿಯ, ಸಾಕ್ಷಿ ಮಲಿಕ್​ ಸೇರಿ ಸೇರಿ ನೂರಾರು ಮಂದಿ ನೆರೆದಿದ್ದರು. ವಿಮಾನ ನಿಲ್ದಾಣದಿಂದ ವಿನೇಶ್​ ತವರಾದ ಹರ್ಯಾಣದ ಬಲಾಲಿಗೆ ಕಾರ್​ನಲ್ಲಿ ಮೆರವಣಿ ಮಾಡುವ ಮೂಲಕ ಕರೆದೊಯ್ಯಲಾಗಿತ್ತು. ಇದೀಗ ತವರಿನಲ್ಲಿ ನಡೆದ ಅಭಿನಂದನಾ ಸಮಾರಂಭದಲ್ಲಿ ವಿನೇಶ್​ ವೇದಿಕೆಯಲ್ಲೇ ಪ್ರಜ್ಞೆ ತಪ್ಪಿದ ಘಟನೆ ನಡೆದಿದೆ. ಈ ವಿಡಿಯೊ ಇದೀಗ ವೈರಲ್​ ಆಗಿದೆ.

ವೈರಲ್​​ ಆಗಿರುವ ವಿಡಿಯೊದಲ್ಲಿ ವೇದಿಕೆಯಲ್ಲಿ ಆಸೀನರಾಗಿದ್ದ ವಿನೇಶ್​ ಏಕಾಏಕಿ ಮೂರ್ಛೆ ಹೋಗಿ ತಾವು ಕುಳಿತಿದ್ದ ಕುರ್ಚಿಗೆ ಒರಗಿಕೊಂಡು ಮಲಗಿರುವುದನ್ನು ಕಾಣಬಹುದಾಗಿದೆ. ಪಕ್ಕದಲ್ಲೇ ಇದ್ದ ಭಜರಂಗ್​ ಪೂನಿಯಾ ವಿನೇಶ್​ಗೆ ನೀರು ಕೊಟ್ಟು ಉಪಚರಿಸಿದ್ದಾರೆ. ಅವರು ಶೀಘ್ರದಲಲ್ಲೇ ಚೇತರಿಕೆ ಕಾಣಲಿ ಎಂದು ಜನರು ಆಶಿಸಿದ್ದಾರೆ.

ಫೈನಲ್​ ಪಂದ್ಯಕ್ಕೂ ಮುನ್ನ ಹೆಚ್ಚಳವಾಗಿದ್ದ 2.8 ಕೆಜಿಯನ್ನು ಕಡಿಮೆ ಮಾಡಲು ವಿನೇಶ್‌ ರಾತ್ರಿಯಿಡೀ ಯಾವುದೇ ಆಹಾರ ಸೇವಿಸದೇ, ಸೈಕ್ಲಿಂಗ್‌ ನಡೆಸಿ, ಸ್ಕಿಪ್ಪಿಂಗ್‌ ಮಾಡಿದ್ದರು. ತೂಕ ಇಳಿಸಲು ಬೇಕಾಗುವ ಎಲ್ಲ ಕಸರತ್ತುಗಳನ್ನು ಕೈಗೊಂಡಿದ್ದರು. ಈ ಮೂಲಕ ಅವರು ಸಾಕಷ್ಟು ತೂಕ ಇಳಿಸಿದ್ದರು. ಕೊನೆ ಕ್ಷಣದಲ್ಲಿ ಅವರ ಕೂದಲು ಕತ್ತರಿಸಿ, ಬಟ್ಟೆಗಳ ಗಾತ್ರವನ್ನು ಕುಗ್ಗಿಸಿ, ದೇಹದಿಂದ ರಕ್ತವನ್ನು ಕೂಡ ತೆಗಿದಿದ್ದರು. ರಕ್ತ ತೆಗೆದ ಪರಿಣಾಮ ಅಸ್ವಸ್ಥರಾಗಿ ಆಸ್ಪತ್ರೆ ಕೂಡ ಸೇರಿದ್ದರು. ಈ ಅಸ್ವಸ್ಥದಿಂದ ಅವರು ಇನ್ನೂ ಸರಿಯಾಗಿ ಚೇತರಿಕೊಂಡಂತೆ ಕಾಣುತ್ತಿಲ್ಲ. ಭಾರತಕ್ಕೆ ಬಂದ ವೇಳೆ ಅವರು ಬಿಡುವಿಲ್ಲದೆ ಸರಿ ಸುಮಾರು 20 ಗಂಟೆ ಪ್ರಯಾಣಿಸಿದ್ದಾರೆ ಎನ್ನಲಾಗಿದೆ. ಇದೇ ಕಾರಣಕ್ಕೆ ಅವರು ಮೂರ್ಛೆ ಹೋದಂತೆ ಕಾಣುತ್ತಿದೆ. ಕೆಲ ದಿನಗಳು ವಿಶ್ರಾಂತಿ ಪಡೆದು ಆ ಬಳಿಕ ಸನ್ಮಾನ ಸಮಾರಂಭಕ್ಕೆ ಹೋದರೆ ಉತ್ತಮ ಎಂದು ಕೆಲ ನೆಟ್ಟಿಗರು ಸಲಹೆ ನೀಡಿದ್ದಾರೆ.

ಇದನ್ನೂ ಓದಿ Vinesh Phogat: ತವರಿಗೆ ಮರಳಿದ ವಿನೇಶ್​​​ ಫೋಗಟ್​ಗೆ ಭರ್ಜರಿ ಸ್ವಾಗತ; ಅಭಿಮಾನಿಗಳನ್ನು ಕಂಡು ಕಣ್ಣೀರು

ಗುರುವಾರ 78ನೇ ಸ್ವಾತಂತ್ರ್ಯ ದಿನಾಚರಣೆಯಂದು ಪ್ಯಾರಿಸ್ ಒಲಿಂಪಿಕ್ ಕೂಟದಲ್ಲಿ ಸ್ಪರ್ಧಿಸಿ ತವರಿಗೆ ಮರಳಿರುವ ಭಾರತದ ಕ್ರೀಡಾಪಟುಗಳೊಂದಿಗೆ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ನಿವಾಸದಲ್ಲಿ ಸಂವಾದ ನಡೆಸಿದ್ದರು. ಈ ವೇಳೆ ವಿನೇಶ್ ಫೋಗಟ್ ಸಾಧನೆ ಕುರಿತು ಪ್ರಧಾನಿ ಮೋದಿ ಮೆಚ್ಚುಗೆಯ ಮಾತುಗಳನ್ನಾಡಿದ್ದರು. “ವಿನೇಶ್​ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಫೈನಲ್‌ ಪ್ರವೇಶಿಸಿದ ಭಾರತದ ಮೊದಲ ಕುಸ್ತಿಪಟು ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದರು. ಇದು ನಮ್ಮ ಪಾಲಿಗೆ ಹೆಮ್ಮೆಯ ಕ್ಷಣವಾಗಿದೆ” ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದರು.

ಅನರ್ಹಗೊಂಡ ಬೇಸರದಲ್ಲೇ ವಿನೇಶ್​ ಕುಸ್ತಿ ವೃತ್ತಿ ಜೀವನಕ್ಕೆ ವಿದಾಯ ಹೇಳಿದ್ದಾರೆ. ವಿನೇಶ್ ಜಂಟಿ ಬೆಳ್ಳಿ ಪದಕ ನೀಡಬೇಕು ಎಂದು ಸಲ್ಲಿಸಿದ್ದ ಮೇಲ್ಮನವಿಯನ್ನು ಕ್ರೀಡಾ ಮಧ್ಯಸ್ಥಿಕೆ ನ್ಯಾಯಮಂಡಳಿ (ಸಿಎಎಸ್) ತಿರಸ್ಕರಿಸಿತ್ತು. ಹೋಗಾಗಿ ಕೊನೆಯ ಆಸೆ ಕೂಡ ಕಮರಿಹೋಗಿದೆ. ಕಳೆದ ವರ್ಷ ಭಾರತ ಕುಸ್ತಿ ಫೆಡರೇಷನ್ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಅವರು ಮಹಿಳಾ ಕುಸ್ತಿಪಟುಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆಂದು ಆರೋಪಿಸಿ ಕುಸ್ತಿಪಟುಗಳು ನಡೆಸಿದ್ದ ಮುಷ್ಕರದಲ್ಲಿ ವಿನೇಶ್ ಮುಂಚೂಣಿಯಲ್ಲಿ ಕಾಣಿಸಿಕೊಂಡಿದ್ದರು.

Continue Reading

ಪ್ರಮುಖ ಸುದ್ದಿ

Doctor Assaulted : ಸುರಕ್ಷತೆಗಾಗಿ ವೈದ್ಯರ ಪ್ರತಿಭಟನೆ ನಡೆಯುತ್ತಿರುವ ನಡುವೆಯೇ ವೈದ್ಯೆಯ ಮೇಲೆ ಹಲ್ಲೆ!

Doctor Assaulted :

VISTARANEWS.COM


on

Koo

ಮುಂಬೈ: ಕೋಲ್ಕೊತಾದ ಘಟನೆ ನಡೆದ ಬಳಿಕ ದೇಶವ್ಯಾಪಿ ಪ್ರತಿಭಟನೆಗಳು ನಡೆಯುತ್ತಿವೆ. ವೈದ್ಯ ವೃತ್ತಿಯಲ್ಲಿರುವವರು ತಮಗೆ ಸುರಕ್ಷತೆಯ ಭರವಸೆ ಕೊಡಬೇಕು ಎಂದು ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಇವೆಲ್ಲದರ ನಡುವೆ ಮುಂಬೈಯಲ್ಲಿ ಮಹಿಳಾ ವೈದ್ಯರೊಬ್ಬರ ಮೇಲೆ ಕುಡಿದ ಮತ್ತಿನಲ್ಲಿದ್ದ ರೋಗಿ ಮತ್ತು ಅವರ ಸಂಬಂಧಿಕರು ಹಲ್ಲೆ ನಡೆಸಿದ (Doctor Assaulted) ಘಟನೆ ಮುಂಬೈನ ಸಿಯಾನ್ ಆಸ್ಪತ್ರೆಯಲ್ಲಿ ಭಾನುವಾರ ಬೆಳಿಗ್ಗೆ ನಡೆದಿದೆ. ಮುಂಜಾನೆ 3.30ರ ಸುಮಾರಿಗೆ ಆಸ್ಪತ್ರೆಯಲ್ಲಿ ವೈದ್ಯರು ವಾರ್ಡ್ ನಲ್ಲಿ ಕರ್ತವ್ಯದಲ್ಲಿದ್ದಾಗ ಈ ದಾಳಿ ನಡೆದಿದೆ ಎಂದು ನಿವಾಸಿ ವೈದ್ಯರು ತಿಳಿಸಿದ್ದಾರೆ.

ಆರೋಪಿ ರೋಗಿಯು ಮುಖದ ಮೇಲೆ ಗಾಯಗಳೊಂದಿಗೆ ಆಸ್ಪತ್ರೆಗೆ ಬಂದಿದ್ದ. ಅವನು ಚಿಕಿತ್ಸೆ ಪಡೆಯುತ್ತಿದ್ದಾಗ, ಅವನು ಮತ್ತು ಅವನ ಸಂಬಂಧಿಕರು ವೈದ್ಯೆಯನ್ನು ನಿಂದಿಸಿದ್ದರು ಹಾಗೂ ಬೆದರಿಕೆ ಹಾಕಿದ್ದರು. ಕುಡಿದ ಮತ್ತಿನಲ್ಲಿದ್ದ 5-6 ಜನರ ಗುಂಪು ತಮ್ಮ ಮೇಳೆ ದೈಹಿಕವಾಗಿ ಹಲ್ಲೆ ನಡೆಸಿದೆ, ರಕ್ಷಿಸಿಕೊಳ್ಳಲು ಪ್ರಯತ್ನಿಸುವಾಗ ತಮಗೆ ಗಾಯಗಳಾಗಿವೆ ಎಂದು ವೈದ್ಯೆ ದೂರಿನಲ್ಲಿ ಹೇಳಿದ್ದಾರೆ.

ಇದನ್ನೂ ಓದಿ: Physical Abuse : 16 ವರ್ಷದ ಬಾಲಕಿಯನ್ನು ಅತ್ಯಾಚಾರ ಮಾಡಿದ 69 ವರ್ಷದ ಮುದುಕ

ಇದು ಇಂದು ಮುಂಜಾನೆ 3.30ಕ್ಕೆ ಘಟನೆ ನಡೆದಿದೆ. ರೋಗಿ ಮತ್ತು ಅವರ ಕೆಲವು ಸಂಬಂಧಿಕರು ಕುಡಿದ ಸ್ಥಿತಿಯಲ್ಲಿ ಆಸ್ಪತ್ರೆಗೆ ತಲುಪಿ ಮಹಿಳಾ ರೆಸಿಡೆನ್ಸ್​​ ವೈದ್ಯರೊಂದಿಗೆ ಜಗಳವಾಡಿದ್ದಾರೆ. ಇದು ಬಹಳ ಕಳವಳಕಾರಿ ವಿಷಯವಾಗಿದೆ” ಎಂದು ಬಿಎಂಸಿ ಎಂಎಆರ್​ಡಿ ಮುಖ್ಯಸ್ಥ ಡಾ.ಅಕ್ಷಯ್ ಮೋರೆ ತಿಳಿಸಿದ್ದಾರೆ. ಘಟನೆ ಬಳಿಕ ನಂತರ, ರೋಗಿ ಮತ್ತು ಅವರ ಕುಟುಂಬವು ಸ್ಥಳದಿಂದ ಪರಾರಿಯಾಗಿದೆ ಎಂದು ಅವರು ಹೇಳಿದ್ದಾರೆ.

ವೈದ್ಯರು ಪ್ರಸ್ತುತ ಸಿಯಾನ್ ಪೊಲೀಸ್ ಠಾಣೆಯಲ್ಲಿ ತನ್ನ ಹೇಳಿಕೆ ನೀಡಿದ್ದಾರೆ. ಪ್ರಥಮ ಮಾಹಿತಿ ವರದಿ (ಎಫ್ಐಆರ್) ದಾಖಲಿಸಲಾಗಿದೆ. ಪೊಲೀಸ್ ಠಾಣೆಗೆ ತಲುಪಿದ ಸಿಯಾನ್ ಆಸ್ಪತ್ರೆಯ ವೈದ್ಯರನ್ನು ಪ್ರತಿನಿಧಿಸುವ ಸಂಘವಾದ ಬಿಎಂಸಿ ಎಂಎಆರ್​ಡಿಯ ವೈದ್ಯರು, “ಆತಂಕಕಾರಿ ಘಟನೆಯು ಗಮನಾರ್ಹ ಭದ್ರತಾ ವೈಫಲ್ಯವನ್ನು ಎತ್ತಿ ತೋರಿಸುತ್ತದೆ” ಎಂದು ಹೇಳಿದ್ದಾರೆ. “ನಮ್ಮ ವೈದ್ಯರ ಸುರಕ್ಷತೆಯಲ್ಲಿ ಯಾವುದೇ ರಾಜಿ ಇಲ್ಲ. ಈ ಪರಿಸ್ಥಿತಿಗೆ ತಕ್ಷಣದ ಗಮನ ಮತ್ತು ಎಲ್ಲಾ ಆಸ್ಪತ್ರೆಗಳಲ್ಲಿ ಕಟ್ಟುನಿಟ್ಟಾದ ಭದ್ರತಾ ಕ್ರಮಗಳನ್ನು ಜಾರಿಗೆ ತರುವ ಅಗತ್ಯವಿದೆ” ಎಂದು ಅವರು ಹೇಳಿದ್ದಾರೆ.

Continue Reading

ಕರ್ನಾಟಕ

Physical Abuse: ಯುವತಿ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ; ಎಚ್ಎಸ್ಆರ್ ಲೇಔಟ್‌ ಠಾಣೆಯಲ್ಲಿ ಎಫ್ಐಆರ್ ದಾಖಲು

Physical Abuse: ಎಚ್ಎಸ್ಆರ್ ಲೇಔಟ್‌ನಲ್ಲಿ ಯುವತಿ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ಸಂಬಂಧಿಸಿ ಯುವತಿಯ ಸ್ನೇಹಿತ ನೀಡಿದ ದೂರಿನ ಮೇರೆಗೆ ಎಚ್ಎಸ್ಆರ್ ಲೇಔಟ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ.

VISTARANEWS.COM


on

Physical Abuse
Koo

ಬೆಂಗಳೂರು: ಎಚ್ಎಸ್ಆರ್ ಲೇಔಟ್‌ನಲ್ಲಿ ಯುವತಿ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ (Physical Abuse) ಸಂಬಂಧ ಯುವತಿ ಸ್ನೇಹಿತ ನೀಡಿದ ದೂರಿನ ಮೇಲೆ ಎಫ್ಐಆರ್ ದಾಖಲಾಗಿದೆ. ಶನಿವಾರ ತಡರಾತ್ರಿ 1 ಗಂಟೆಗೆ ಅತ್ಯಾಚಾರ ಯತ್ನ ನಡೆದ ಬಳಿಕ ಸಂತ್ರಸ್ತೆ ಯುವತಿಯ ಸ್ನೇಹಿತೆ ದೂರುದಾರನಿಗೆ ಕರೆ ಮಾಡಿದ್ದಳು. ಸ್ಥಳಕ್ಕೆ ಹೋಗಿ ನೋಡಿದಾಗ ಯುವತಿ ಮೇಲೆ ಲೈಂಗಿಕ ದೌರ್ಜನ್ಯ ನಡೆದಿರುವುದು ಬೆಳಕಿಗೆ ಬಂದಿತ್ತು. ಹೀಗಾಗಿ ಆಕೆಯ ಸ್ನೇಹಿತ ನೀಡಿದ ದೂರಿನ ಮೇರೆಗೆ ಎಚ್ಎಸ್ಆರ್ ಲೇಔಟ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ.

ಸಂತ್ರಸ್ತೆ ಯುವತಿಯಿಂದ ಎಮರ್ಜೆನ್ಸಿ ಕರೆ ಮತ್ತು ಲೊಕೇಶನ್ ಬಂದಿದೆ. ಆದರೆ ಫೋನ್ ಕರೆ ಸ್ವೀಕರಿಸುತ್ತಿಲ್ಲ ಎಂದು ಸ್ನೇಹಿತೆ ದೂರುದಾರನಿಗೆ ಹೇಳಿದ್ದ. ಲೊಕೇಶನ್ ಆಧರಿಸಿ ಹೊಸೂರು ಸರ್ವಿಸ್ ರಸ್ತೆ ಬಳಿ ಸ್ನೇಹಿತ ಹೋಗಿದ್ದ. ಗಿರಿಯಾಸ್ ಶೋರೂಮ್ ಹಿಂಭಾಗದ ಲಾರಿ ನಿಲ್ಲಿಸುವ ಜಾಗಕ್ಕೆ ಬಂದು ನೋಡಿದ್ದ. ಯುವತಿ ಬೆತ್ತಲೆಯಾಗಿ ಲಾರಿಯ ಹಿಂಭಾಗದಲ್ಲಿ ಬಿದ್ದಿದ್ದಳು. ಆಕೆಯ ಮೇಲೆ ಒಂದು ರೆಡ್ ಜಾಕೆಟ್ ಮಾತ್ರ ಇತ್ತು. ಈ ವೇಳೆ ದೂರುದಾರ ಸ್ನೇಹಿತ ತನ್ನ ಬಟ್ಟೆಯಿಂದ ಆಕೆಯ ದೇಹ ಮುಚ್ಚಲು ಯತ್ನಿಸಿದ್ದಾನೆ. ಅಷ್ಟರಲ್ಲಿ ಮತ್ತೊಬ್ಬ ಸ್ನೇಹಿತ ಕೂಡ ಮೊಬೈಲ್‌ನಿಂದ ಹೋಗಿದ್ದ ಮೆಸೇಜ್ ಆಧಾರದ ಮೇಲೆ ಸ್ಥಳಕ್ಕೆ ಬಂದಿದ್ದ. ಇಬ್ಬರು ಸೇರಿಕೊಂಡು ಕಾರ್‌ನ ಶೀಟ್ ಕವರ್‌ನಿಂದ ಆಕೆಯ ದೇಹವನ್ನು ಮುಚ್ಚಿಕೊಂಡು ಕಾರಿನಲ್ಲಿ ಮಲಗಿಸಿದ್ದಾರೆ. ಅಷ್ಟರಲ್ಲಿ, ಸ್ಥಳದಲ್ಲಿ ಒಬ್ಬ ಅಪರಿಚಿತ ವ್ಯಕ್ತಿ ಕೇವಲ ಪ್ಯಾಂಟ್‌ನಲ್ಲಿ ನಿಂತಿದ್ದ. ಗಾಬರಿಯಲಿದ್ದ ಆತನ ಮುಖಕ್ಕೆ ಪರಚಿರುವಂತಹ ಗಾಯಗಳಾಗಿತ್ತು ಎಂದು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ.

ದೂರುದಾರ ಆರೋಪಿಯನ್ನು ಹಿಡಿದುಕೊಳ್ಳಲು ಹೋದಾಗ ಆತ ಸ್ಥಳದಿಂದ ಓಡಿ ಹೋಗಿದ್ದಾನೆ. ನಂತರ ಆಸ್ವಸ್ಥಗೊಂಡಿದ್ದ ಯುವತಿಯನ್ನು ಸ್ನೇಹಿತನ ಕಾರಿನಲ್ಲಿ ಬೊಮ್ಮಸಂದ್ರ ಖಾಸಗಿ ಆಸ್ಪತ್ರೆಗೆ ದಾಖಲು ದೂರುದಾರ ಮಾಡಿದ್ದ. ಕಾರಿನಲ್ಲಿ ಯುವತಿ ಬಳಿ ಘಟನೆ ಬಗ್ಗೆ ಸ್ನೇಹಿತರು ಕೇಳಿದ್ದರು. ಆಗ ಅಪರಿಚಿತ ವ್ಯಕ್ತಿ, ಅತ್ಯಾಚಾರ ಮಾಡಲು ಯತ್ನಿಸಿರೋದಾಗಿ‌ ಯುವತಿ ಹೇಳಿಕೆ ನೀಡಿದ್ದಾಳೆ. ಘಟನೆ ಬಗ್ಗೆ ದೂರುದಾರ ಆಕೆಯ ತಂದೆ-ತಾಯಿಗೆ ವಿಷಯ ತಿಳಿಸಿದ್ದಾರೆ.

ಯುವತಿ ಪ್ರಾಣ ಉಳಿಸಿದ SOS ಬಟನ್

ಎಚ್ಎಸ್‌ಆರ್ ಲೇಔಟ್ ಯುವತಿ ಅತ್ಯಾಚಾರ ಪ್ರಕರಣದಲ್ಲಿ SOS ಬಟನ್ ಯುವತಿ ಪ್ರಾಣ ಉಳಿಸಿದೆ ಎಂಬ ವಿಷಯ ತಿಳಿದುಬಂದಿದೆ. ಮೊಬೈಲ್‌ನಲ್ಲಿ ಸ್ವಿಚ್ ಆಫ್ ಬಟನ್ ಪ್ರೆಸ್ ಮಾಡಿದಾಗ SOS ಆಪ್ಷನ್ ಕಾಣಲಿದೆ. ಅದಕ್ಕೆ ಎಮೆರ್ಜೆನ್ಸಿ ನಂಬರ್ ಆ್ಯಡ್ ಮಾಡಬಹುದು. ಅದನ್ನು ಪ್ರೆಸ್ ಮಾಡಿದಾಗ ಆ್ಯಡ್ ಮಾಡಿದ ನಂಬರ್‌ಗೆ ನಿರಂತರ ಕರೆ ಹಾಗೂ ಲೊಕೆಶನ್ ಶೇರ್ ಆಗುತ್ತೆ.

ಹೀಗಾಗಿ SOS ನಲ್ಲಿ ತಂದೆ ಹಾಗೂ ಸ್ನೇಹಿತೆ ನಂಬರ್ ಅನ್ನು ಆ್ಯಡ್ ಸಂತ್ರಸ್ತ ಯುವತಿ ಮಾಡಿದ್ದಳು. ಹೀಗಾಗಿ ತಕ್ಷಣ ಸ್ನೇಹಿತರಿಗೆ ಕರೆ ಹೋಗಿದೆ. ಲೊಕೇಶನ್ ಆಧರಿಸಿ ಬಂದು ಸ್ನೇಹಿತರು ಯುವತಿಯ ರಕ್ಷಣೆ ಮಾಡಿದ್ದಾರೆ. ಅರೆನಗ್ನ ಸ್ಥಿತಿಯಲ್ಲೇ ಯುವತಿಯನ್ನು ಆರೋಪಿ ಬಿಟ್ಟು ತೆರಳಿದ್ದ. ದೌರ್ಜನ್ಯ ಎಸಗಿದಾಗ ಯುವತಿ ಕೂಡ ಪ್ರತಿರೋಧ ಒಡ್ಡಿದ್ದಳು. ಇದರಿಂದ‌ ಆರೋಪಿ ಹೆದರಿ ಯುವತಿಯನ್ನು ಬಿಟ್ಟು ಪರಾರಿಯಾಗಿದ್ದ. ಸದ್ಯ ಹೆಬ್ಬಗೋಡಿ ಖಾಸಗಿ ಆಸ್ಪತ್ರೆಯಲ್ಲಿ ಯುವತಿ ಚಿಕಿತ್ಸೆ ಪಡೆಯುತ್ತಿದ್ದಾಳೆ.

ಏನಿದು ಪ್ರಕರಣ?

ಬೆಂಗಳೂರಿನ ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಆ.17ರ ರಾತ್ರಿ ಯುವತಿ ಮೇಲೆ ಅತ್ಯಾಚಾರ ನಡೆದಿತ್ತು. ನಾಗಾಲ್ಯಾಂಡ್‌ ಮೂಲದ ಯುವತಿಯ ಸ್ಥಿತಿ ತೀರ ಗಂಭೀರವಾಗಿದ್ದು, ಖಾಸಗಿ ಆಸ್ಪತ್ರೆಯಲ್ಲಿ ದಾಖಲು ಮಾಡಲಾಗಿದೆ. ಎಚ್ಎಸ್ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆಯನ್ನು ಕೈಗೊಂಡಿದ್ದಾರೆ.

ಶನಿವಾರ ಮಧ್ಯರಾತ್ರಿ ಘಟನೆ ನಡೆದಿತ್ತು. ಆಟೋದಲ್ಲೇ ಯುವತಿ ಮೇಲೆ ಅತ್ಯಾಚಾರ ನಡೆದಿತ್ತು ಎನ್ನಲಾಗಿದೆ. ಖಾಸಗಿ ಕಾಲೇಜಿನಲ್ಲಿ ಪದವಿ ಓದುತ್ತಿದ್ದ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ನಡೆದಿದೆ. ಕೋರಮಂಗಲದ ಪಬ್‌ಗೆ ಹೋಗಿ ವಾಪಸ್‌ ಮನೆಗೆ ಆಟೋದಲ್ಲಿ ಬರುವಾಗ ಅತ್ಯಾಚಾರ ನಡೆದಿದೆ ಎನ್ನಲಾಗಿದೆ.

ಭಾನುವಾರ ಘಟನೆ ಸಂಬಂಧ ದೂರು ದಾಖಲಾಗಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಸಂತ್ರಸ್ತೆಗೆ ಮೆಡಿಕಲ್ ಟೆಸ್ಟ್ ಮಾಡಿಸಿ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಎಚ್‌ಎಸ್‌ಆರ್‌ ಲೇಔಟ್ ಠಾಣೆ ಪೊಲೀಸರಿಂದ ತನಿಖೆ ಮುಂದುವರಿದಿದ್ದು, ಸಿಸಿಕ್ಯಾಮೆರಾಗಳನ್ನು ಪರಿಶೀಲನೆ ನಡೆಸಲಾಗುತ್ತಿದೆ.

ಡ್ರಾಪ್‌ ಕೊಡುವ ನೆಪದಲ್ಲಿ ಅತ್ಯಾಚಾರ

ಘಟನೆ ಕುರಿತು ಹೆಚ್ಚುವರಿ ಪೊಲೀಸ್ ಆಯುಕ್ತ ರಮನ್ ಗುಪ್ತಾ ಮಾಹಿತಿ ನೀಡಿದ್ದಾರೆ. ಶನಿವಾರ ಮಧ್ಯರಾತ್ರಿ 1:30ರ ಸಂಧರ್ಭದಲ್ಲಿ ಈ ಘಟನೆ ನಡೆದಿದೆ. ಅಪರಿಚಿತನ ಜತೆಗೆ ಯುವತಿ ಡ್ರಾಪ್ ತೆಗೆದುಕೊಂಡಿದ್ದಾಳೆ. ಇದೇ ಅವಕಾಶವನ್ನು ಬಳಸಿಕೊಂಡ ಆರೋಪಿ ಅತ್ಯಾಚಾರವೆಸಗಿದ್ದಾನೆ. ಇದು ಗೆಟ್ ಟು ಗೆದರ್‌ ಪಾರ್ಟಿ ಮುಗಿಸಿ ಅಲ್ಲಿಂದ ವಾಪಾಸ್ ಬರುವಾಗ ಘಟನೆ ನಡೆದಿದೆ. ಇದು ಗ್ಯಾಂಗ್ ರೇಪ್ ಅಲ್ಲ, ಡ್ರಾಪ್‌ ತೆಗೆದುಕೊಂಡವನಿಂದ ಈ ಕೃತ್ಯ ನಡೆದಿದೆ. ನಾವು ಕೂಡ ಘಟನಾ ಸ್ಥಳಕ್ಕೆ ಹೋಗಿದ್ದೇವೆ, ಈಗಾಗಲೆ ಐದು ಜನರ ತಂಡವನ್ನು ರಚನೆ ಮಾಡಲಾಗಿದೆ.

ಇದನ್ನೂ ಓದಿ: Accident News : ನರಗುಂದಲ್ಲಿ ಭೀಕರ ಅಫಘಾತ; ಸಾರಿಗೆ ಬಸ್​ ಗುದ್ದಿ ಕಾರಿನಲ್ಲಿದ್ದ ಒಂದೇ ಕುಟುಂಬದ ನಾಲ್ವರ ದುರ್ಮರಣ

ಯುವತಿ ರ‍್ಯಾಪಿಡೋ ಅಥವಾ ರ‍್ಯಾಂಡಮ್ ಬೈಕ್‌ನಲ್ಲಿ ಡ್ರಾಪ್‌ ಪಡೆದಿದ್ದಳಾ ಎಂಬುದರ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ಸದ್ಯಕ್ಕೆ ಹೆಚ್ಚಿನ ತನಿಖೆ ನಡೆಯುತ್ತಿದೆ, ಸಂತ್ರಸ್ತೆ ಹೊರ ರಾಜ್ಯದವಳಾಗಿದ್ದು, ಆಕೆಯ ಮೊಬೈಲ್ ಮಿಸ್ ಆಗಿದೆ. ಆಸ್ಪತ್ರೆಯಲ್ಲಿರುವ ಆಕೆ ಚೇತರಿಸಿಕೊಂಡಿದ್ದಾಳೆ. ಬಿಎನ್ ಎಸ್ ಸೆಕ್ಷನ್ 64 ಅಡಿ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ನಡೆಸಲಾಗುತ್ತಿದೆ ಎಂದಿದ್ದಾರೆ.

Continue Reading
Advertisement
RRB Recruitment 2024
ಉದ್ಯೋಗ2 mins ago

RRB Recruitment 2024: ರೈಲ್ವೇ ಇಲಾಖೆಯಿಂದ 7,951 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ; ಹೀಗೆ ಅಪ್ಲೈ ಮಾಡಿ

Kangana Ranaut Says She REJECTED Films with Ranbir Kapoor
ಬಾಲಿವುಡ್18 mins ago

Kangana Ranaut: ಖಾನ್‌ಗಳ ಸಿನಿಮಾ ಆಫರ್‌ ಎಂದಿಗೂ ಒಪ್ಪಲ್ಲ ಎಂದ ಕಂಗನಾ

Actor Mohanlal hospitalised due to breathing issues
ಮಾಲಿವುಡ್28 mins ago

Actor Mohanlal: ಮಲಯಾಳಂ ನಟ ಮೋಹನ್‌ಲಾಲ್ ಆಸ್ಪತ್ರೆಗೆ ದಾಖಲು 

Lightning Strike
ದೇಶ33 mins ago

Lightning Strike: ಮಿಂಚು ಹೊಡೆದು 9 ಸಾವು; 12 ಮಂದಿಗೆ ಗಾಯ

ಕರ್ನಾಟಕ36 mins ago

Namma Metro: ನಾಗಸಂದ್ರ-ಮಾದಾವರ ಮಾರ್ಗದಲ್ಲಿ ಮೆಟ್ರೋ ರೈಲು ಪರೀಕ್ಷಾರ್ಥ ಸಂಚಾರ; ಶೀಘ್ರದಲ್ಲೇ ವಾಣಿಜ್ಯ ಸೇವೆ

Vinesh Phogat
ಕ್ರೀಡೆ44 mins ago

Vinesh Phogat: ಸನ್ಮಾನ ಸಮಾರಂಭದಲ್ಲಿ ದಿಢೀರ್​ ಪ್ರಜ್ಞೆ ತಪ್ಪಿ ಬಿದ್ದ ವಿನೇಶ್​ ಪೋಗಟ್​

ಪ್ರಮುಖ ಸುದ್ದಿ2 hours ago

Doctor Assaulted : ಸುರಕ್ಷತೆಗಾಗಿ ವೈದ್ಯರ ಪ್ರತಿಭಟನೆ ನಡೆಯುತ್ತಿರುವ ನಡುವೆಯೇ ವೈದ್ಯೆಯ ಮೇಲೆ ಹಲ್ಲೆ!

Physical Abuse
ಕರ್ನಾಟಕ2 hours ago

Physical Abuse: ಯುವತಿ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ; ಎಚ್ಎಸ್ಆರ್ ಲೇಔಟ್‌ ಠಾಣೆಯಲ್ಲಿ ಎಫ್ಐಆರ್ ದಾಖಲು

Road Accident
ದೇಶ2 hours ago

Road Accident: ಭೀಕರ ರಸ್ತೆ ಅಪಘಾತ; ಖಾಸಗಿ ಬಸ್‌-ಟೆಂಪೊ ಡಿಕ್ಕಿಯಾಗಿ 10 ಮಂದಿ ಸಾವು

Sanju Samson
ಕ್ರೀಡೆ2 hours ago

Sanju Samson: ಬಾಸ್ಕೆಟ್‌ ಬಾಲ್‌ ಕೋರ್ಟ್​ನಲ್ಲಿ ಫುಟ್ಬಾಲ್​ ಆಡಿದ ಸಂಜು ಸ್ಯಾಮ್ಸನ್​; ವಿಡಿಯೊ ವೈರಲ್​

Sharmitha Gowda in bikini
ಕಿರುತೆರೆ11 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ1 week ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ1 week ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ1 week ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 weeks ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 weeks ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 weeks ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ2 weeks ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ2 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ2 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ2 weeks ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌