Site icon Vistara News

Narendra Modi : ಅಂಬೇಡ್ಕರ್ ಮತ್ತೆ ಬಂದರೂ ಸಂವಿಧಾನ ಬದಲಾವಣೆ ಅಸಾಧ್ಯ; ಮೋದಿ ಹೀಗೆ ಹೇಳಲು ಕಾರಣವೇನು?

Narendra Modi

ಮುಂಬಯಿ: ಕೇಂದ್ರದಲ್ಲಿ ಬಿಜೆಪಿ ಮೂರನೇ ಅವಧಿಗೆ ಅಧಿಕಾರಕ್ಕೆ ಬಂದರೆ ಸಂವಿಧಾನ ಮತ್ತು ಪ್ರಜಾಪ್ರಭುತ್ವಕ್ಕೆ ಅಪಾಯವಿದೆ ಎಂದು ಹೇಳುತ್ತಿರುವ ಪ್ರತಿಪಕ್ಷಗಳ ವಿರುದ್ಧ ಪ್ರಧಾನಿ ನರೇಂದ್ರ ಮೋದಿ (Narendra Modi) ಶುಕ್ರವಾರ ವಾಗ್ದಾಳಿ ನಡೆಸಿದ್ದಾರೆ. ಮಹಾರಾಷ್ಟ್ರದ (Maharashtra) ನಾಗ್ಪುರ ಜಿಲ್ಲೆಯಲ್ಲಿ ನಡೆದ ರ್ಯಾಲಿಯಲ್ಲಿ ಮಾತನಾಡಿದ ಅವರು ಅಂಬೇಡ್ಕರ್ ಅವರೇ ಮತ್ತೆ ಬಂದರೂ ಸಂವಿಧಾನ ಬದಲಾವಣೆ ಮಾಡುವುದಿಲ್ಲ ಎಂದು ಹೇಳಿದರು. ಇದೇ ವೇಳೆ ಅವರು ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು (370ನೇ ವಿಧಿ) ರದ್ದುಗೊಳಿಸಿದ್ದಕ್ಕಾಗಿ ಬಿ.ಆರ್.ಅಂಬೇಡ್ಕರ್ ಅವರ ಆತ್ಮವು ನನ್ನನ್ನು ಆಶೀರ್ವದಿಸುತ್ತಿದೆ ಎಂದು ಹೇಳಿದರು.

“ಸಂವಿಧಾನವು ತುಂಬಾ ಮುಖ್ಯವೇ ಆಗಿದ್ದರೆ 370 ನೇ ವಿಧಿಯನ್ನು ರದ್ದುಗೊಳಿಸುವವರೆಗೆ (2019 ರಲ್ಲಿ) ಇಡೀ ದೇಶದಲ್ಲಿ ಅದು ಏಕೆ ಜಾರಿಯಲ್ಲಿರಲಿಲ್ಲ? ಪ್ರತ್ಯೇಕತಾವಾದಿಗಳ ಬಗ್ಗೆ ಮೃದು ಧೋರಣೆ ತಳೆದಿದ್ದರಿಂದ ಪ್ರತಿಪಕ್ಷಗಳು ಜಮ್ಮು ಮತ್ತು ಕಾಶ್ಮೀರದಲ್ಲಿ ಜಾರಿ ಮಾಡಲು ಮುಂದಾಗಲಿಲ್ಲ ಎಂದು ಪ್ರಧಾನಿ ಮೋದಿ ದೂರಿದರು. 370 ನೇ ವಿಧಿಯನ್ನು ರದ್ದುಪಡಿಸಿದ ನಂತರ ಅಂಬೇಡ್ಕರ್ ಅವರ ಆತ್ಮವು ನನ್ನನ್ನು ಆಶೀರ್ವದಿಸುತ್ತಿದೆ ಎಂಬುದಾಗಿ ಅವರು ಹೇಳಿಕೊಂಡರು.

ದೇಶದ ಸಂವಿಧಾನ ಬದಲಾವಣೆ ಯಾರಿಂದಲೂ ಸಾಧ್ಯವಿಲ್ಲ. ಬಾಬಾ ಸಾಹೇಬ್ ಅಂಬೇಡ್ಕರ್ ಅವರೇ ಬಂದರೂ ಅವರು ಸಂವಿಧಾನವನ್ನು ರದ್ದುಗೊಳಿಸಲು ಸಾಧ್ಯವಿಲ್ಲ ಎಂದು ಪ್ರಧಾನಿ ಮೋದಿ ದೇಶದ ಜನರಿಗೆ ಭರವಸೆ ನೀಡಿದರು. ದೇಶದಲ್ಲಿ ತುರ್ತು ಪರಿಸ್ಥಿತಿಯನ್ನು ಹೇರುವ ಮೂಲಕ ಕಾಂಗ್ರೆಸ್ ಸಂವಿಧಾನವನ್ನು ನಾಶಪಡಿಸಲು ಪ್ರಯತ್ನಿಸಿತ್ತು ಎಂಬುದನ್ನು ಅವರು ಸ್ಮರಿಸಿಕೊಂಡರು.

ಇದನ್ನೂ ಓದಿ : Iran- Israel war : ಇಸ್ರೆಲ್​, ಇರಾನ್​ಗೆ ಹೋಗದಂತೆ ವಿಶೇಷ ಸೂಚನೆ ನೀಡಿದ ಭಾರತ ಸರ್ಕಾರ; ಯಾಕೆ ಗೊತ್ತೇ?

ಬಿಜೆಪಿಯ ಸ್ಟಾರ್ ಪ್ರಚಾರಕರಾಗಿರುವ ಪ್ರಧಾನಿ ಈ ರ್ಯಾಲಿ ಮಾತನಾಡುತ್ತಾ, ಬಿಜೆಪಿ ಮತ್ತೆ ಲೋಕಸಭಾ ಚುನಾವಣೆಯಲ್ಲಿ ಗೆದ್ದರೆ ಸಂವಿಧಾನವನ್ನು ಬದಲಾಯಿಸುತ್ತದೆ ಎಂದು ಪ್ರತಿಪಕ್ಷಗಳು ಹೇಳುವ ಮೂಲಕ ಜನರನ್ನು ಮೂರ್ಖರನ್ನಾಗಿಸುತ್ತಿವೆ ಎಂದು ಆರೋಪಿಸಿದರು. “ತುರ್ತು ಪರಿಸ್ಥಿತಿಯ ಸಮಯದಲ್ಲಿ ಪ್ರಜಾಪ್ರಭುತ್ವವು ಅಪಾಯಕ್ಕೆ ಸಿಲುಕಲಿಲ್ಲವೇ?” ಎಂದು ಅವರು ಇದೇ ವೇಳೆ ಪ್ರಶ್ನಿಸಿದರು.

ಏಪ್ರಿಲ್ 19 ರಂದು ಮೊದಲ ಹಂತದ ಮತದಾನ ನಡೆಯಲಿರುವ ವಿದರ್ಭಕ್ಕೆ ಪ್ರಧಾನಿ ಮೋದಿಯವರ ಎರಡನೇ ಭೇಟಿ ಇದಾಗಿದೆ. ಸೋಮವಾರ ಅವರು ಚಂದ್ರಾಪುರ ಮತ್ತು ಗಡ್ಚಿರೋಲಿ-ಚಿಮೂರ್ ನ ಬಿಜೆಪಿ ಅಭ್ಯರ್ಥಿಗಳ ಪರವಾಗಿ ಪ್ರಚಾರ ನಡೆಸಿದರು.

ಕೇಂದ್ರಾಡಳಿತ ಪ್ರದೇಶವಾದ ಜಮ್ಮು ಮತ್ತು ಕಾಶ್ಮೀರದಲ್ಲಿ ದಲಿತರು ಮತ್ತು ಬುಡಕಟ್ಟು ಜನರು ಈಗ ಸಾಂವಿಧಾನಿಕ ಹಕ್ಕುಗಳನ್ನು ಪಡೆದುಕೊಂಡಿದ್ದಾರೆ. ಆದರೆ ಕಾಂಗ್ರೆಸ್ ಆಡಳಿತದಲ್ಲಿ ಅವರನ್ನು ವೋಟ್ ಬ್ಯಾಂಕ್ ರಾಜಕೀಯಕ್ಕಾಗಿ ಮೀಸಲಿಡಲಾಗಿತ್ತು ಎಂದು ಪ್ರಧಾನಿ ಮೋದಿ ಆರೋಪಿಸಿದರು.

ಕಳೆದ 10 ವರ್ಷಗಳಲ್ಲಿ ನಾನು ಮಾಡಿದ ಕೆಲಸವು ಕೇವಲ ಆರಂಭಲ. ಮುಂದಿನ ಐದು ವರ್ಷ ಜನರ ಕಲ್ಯಾಣಕ್ಕಾಗಿ ಮತ್ತು ದೇಶದ ಪ್ರಗತಿಗಾಗಿ ಸಮರ್ಪಿತವಾಗಿದೆ ಎಂದು ಮೋದಿ ಹೇಳಿದರು.

Exit mobile version