PM Narendra Modi: 2000 ರೈಲ್ವೆ ಪ್ರಾಜೆಕ್ಟ್‌ಗಳಿಗೆ ಪಿಎಂ ಚಾಲನೆ; ಜೂನ್‌ನಿಂದ 3ನೇ ಅವಧಿಗೆ ಸರ್ಕಾರ ಎಂದ ಮೋದಿ - Vistara News

ಪ್ರಮುಖ ಸುದ್ದಿ

PM Narendra Modi: 2000 ರೈಲ್ವೆ ಪ್ರಾಜೆಕ್ಟ್‌ಗಳಿಗೆ ಪಿಎಂ ಚಾಲನೆ; ಜೂನ್‌ನಿಂದ 3ನೇ ಅವಧಿಗೆ ಸರ್ಕಾರ ಎಂದ ಮೋದಿ

PM Narendra Modi: ಈ ಹಿಂದೆ ರೈಲ್ವೆ ಇಲಾಖೆ ಎಂದರೆ ನಷ್ಟದ ಬಾಬತ್ತು ಎಂದು ಹೇಳಲಾಗುತ್ತಿತ್ತು. ಈಗ ಅದೇ ರೈಲ್ವೆ ಪರಿವರ್ತನೆಯ ಬಹುದೊಡ್ಡ ಶಕ್ತಿಯಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

VISTARANEWS.COM


on

PM Narendra Modi inaugurates 2000 railway projects worth RS 41,000 crore
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ನವದೆಹಲಿ: 41 ಸಾವಿರ ಕೋಟಿ ರೂ. ವೆಚ್ಚದ 2000 ರೈಲ್ವೆ ಪ್ರಾಜೆಕ್ಟ್‌ಗಳನ್ನು (2000 Railway Projects) ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಸೋಮವಾರ ಲೋಕಾರ್ಪಣೆ ಮಾಡಿದರು. ಈ ವೇಳೆ ಮಾತನಾಡಿದ ಮೋದಿ ಅವರು, ಈ ಮೊದಲು ರೈಲ್ವೆ ಇಲಾಖೆ (Railway Department) ಎಂದರೆ ನಷ್ಟ ಎಂದು ಹೇಳಲಾಗುತ್ತಿತ್ತು. ಆದರೆ, ಈಗ ಅದೇ ರೈಲ್ವೆ ಪರಿವರ್ತನೆಯ ಬಹುದೊಡ್ಡ ಶಕ್ತಿಯಾಗಿ ಬದಲಾಗಿದೆ ಎಂದು ಹೇಳಿದರು.

ವರ್ಚುಯಲ್ ಆಗಿ ಯೋಜನೆಗಳಿಗೆ ಚಾಲನೆ ನೀಡಿದ ಪ್ರಧಾನಿ ನರೇಂದ್ರ ಮೋದಿ ಅವರು, ಇಂದು 27 ರಾಜ್ಯಗಳಲ್ಲಿ 300 ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ 554 ರೈಲು ನಿಲ್ದಾಣಗಳ ಮರು ಅಭಿವೃದ್ಧಿಗೆ ಅಡಿಪಾಯ ಹಾಕಲಾಗಿದೆ. ಉತ್ತರ ಪ್ರದೇಶದ ಗೋಮತಿ ನಗರ ರೈಲು ನಿಲ್ದಾಣವನ್ನೂ ಉದ್ಘಾಟಿಸಿದ್ದೇನೆ. ಇಂದು, ಭಾರತೀಯ ರೈಲ್ವೆಯ ಮೇಲೆ 1500 ರೋಡ್ ಓವರ್ ಬ್ರಿಡ್ಜ್‌ಗಳು/ರೋಡ್ ಅಂಡರ್ ಬ್ರಿಡ್ಜ್‌ಗಳನ್ನು ನಿರ್ಮಿಸಲು ಅಡಿಪಾಯ ಹಾಕಲಾಗಿದೆ ಎಂದು ಹೇಳಿದರು.

ನಮ್ಮ ಸರ್ಕಾರದ ಮೂರನೇ ಅವಧಿಯು ಜೂನ್‌ ತಿಂಗಳಿನಿಂದ ಆರಂಭವಾಗಲಿದೆ. ನಾವು ತೋರುತ್ತಿರುವ ವೇಗವು ಜನರನ್ನು ಆಶ್ಚರ್ಯಚಕಿತರನ್ನಾಗಿಸಿದೆ. ಭಾರತವು ಈಗ ಅಭಿವೃದ್ಧಿಯತ್ತ ದಾಪುಗಾಲು ಹಾಗುತ್ತಿದೆ. ಭಾರತದ ಈ ಓಟವನ್ನು ಯಾರೂ ತಡೆಯಲು ಸಾಧ್ಯವಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದರು.

ಕಳೆದ 10 ವರ್ಷಗಳಲ್ಲಿ ನವ ಭಾರತ ನಿರ್ಮಾಣವಾಗುತ್ತಿರುವುದನ್ನು ನಾವು ನೋಡಿದ್ದೇವೆ. ನಾನು ಯುವಕರಿಗೆ ಹೇಳಲು ಬಯಸುತ್ತೇನೆ, ಅವರ ಕನಸುಗಳು ನನ್ನ ಸಂಕಲ್ಪ. ನಿಮ್ಮ ಕನಸುಗಳು, ಕಠಿಣ ಪರಿಶ್ರಮ ಮತ್ತು ನನ್ನ ಸಂಕಲ್ಪ ಮತ್ತು ‘ವಿಕ್ಷಿತ್ ಭಾರತ್’ ನಾನು ನೀಡುವ ಭರವಸೆಯಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದರು.

ಪ್ರಯಾಣದ ಅನುಭವವನ್ನು ಹೆಚ್ಚಿಸಲು, ಅಮೃತ್ ಭಾರತ್ ಸ್ಟೇಷನ್ ಯೋಜನೆಯಡಿಯಲ್ಲಿ 553 ನಿಲ್ದಾಣಗಳನ್ನು ಮರುಅಭಿವೃದ್ಧಿಗೊಳಿಸಲಾಗುವುದು. ಈ ನಿಲ್ದಾಣಗಳಿಗೆ ಶಂಕುಸ್ಥಾಪನೆಯನ್ನೂ ಮಾಡಲಾಯಿತು. ಭಾರತದಾದ್ಯಂತ ಮೇಲ್ಸೇತುವೆಗಳು ಮತ್ತು ಕೆಳಸೇತುವೆಗಳನ್ನು ಸಹ ಉದ್ಘಾಟಿಸಲಾಯಿತು.

ಈ ಸುದ್ದಿಯನ್ನೂ ಓದಿ: Sudarshan Setu: ಕೃಷ್ಣ ನಗರಿಯಲ್ಲಿ ಪ್ರಧಾನಿ ಮೋದಿ; ದೇಶದ ಅತಿ ಉದ್ದದ ಕೇಬಲ್ ಸೇತುವೆ ಉದ್ಘಾಟನೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ

ಪ್ರಮುಖ ಸುದ್ದಿ

ವಿಜಯ್‌ ಸಿಎಂ ಆಗಿದ್ದಕ್ಕೆ ನನಗೆ ಅಸೂಯೆ ಇಲ್ಲ – ರಜನೀಕಾಂತ್‌

VISTARANEWS.COM


on

ಚೆನ್ನೈ: ತಮಿಳು ನಟ ವಿಜಯ್‌ ಮುಖ್ಯಮಂತ್ರಿ ಆಗಿರುವುದಕ್ಕೆ ನನಗೆ ಯಾವುದೇ ಅಸೂಯೆ ಇಲ್ಲ ಎಂದು ತಮಿಳು ನಟ, ಸೂಪರ್‌ ಸ್ಟಾರ್‌ ರಜನೀಕಾಂತ್‌ ಸ್ಪಷ್ಟಪಡಿಸಿದ್ದಾರೆ.

ಚೆನ್ನೈನಲ್ಲಿ ಮಾತನಾಡಿದ ಅವರು, ಪ್ರಬಲ ಮೈತ್ರಿಕೂಟಗಳನ್ನು ಸೋಲಿಸಿ ವಿಜಯ್‌ ಸಿಎಂ ಆಗಿದ್ದಾರೆ. ಇದರಿಂದ ನನಗೆ ಯಾವುದೇ ಅಸೂಯೆ ಇಲ್ಲ. ನನಗೆ ತುಂಬಾ ಸಂತೋಷವಾಗಿದೆ ಎಂದಿದ್ದಾರೆ.

ನಾನು ರಾಜಕೀಯ ಪ್ರವೇಶಿಸಿದ್ದರೆ ಶೇ.100 ರಷ್ಟು ಯಶಸ್ಸು ಸಾಧಿಸುತ್ತಿದ್ದೆ. ಆದರೆ ನಾನು ರಾಜಕೀಯದಿಂದ ದೂರ ಸರಿದು ಬಹಳ ದಿನಗಳಾಗಿವೆ ಎಂದು ಹೇಳಿದ್ದಾರೆ.

ವಿಜಯ್‌ ಮತ್ತು ನನ್ನ ನಡುವೆ ಒಂದು ಜನರೇಶನ್‌ ಗ್ಯಾಪ್‌ ಇದೆ. ನಮ್ಮಿಬ್ಬರ ನಡುವೆ ಸುಮಾರು 25 ವರ್ಷದ ಅಂತರವಿದೆ. ಅವರ ಬಗ್ಗೆಯಾಗಲಿ, ಅವರ ಸಿಎಂ ಆಗಿರುವುದಕ್ಕಾಗಲಿ ನನಗೆ ಯಾವುದೇ ಅಸೂಯೆ ಇಲ್ಲ ಎಂದು ಸ್ಪಷ್ಟಪಡಿಸಿದರು. ವಿಜಯ್‌ ಸಿಎಂ ಆದ ತಕ್ಷಣವೇ ನಾನು ಅವರಿಗೆ ಅಭಿನಂದನೆ ಸಲ್ಲಿಸಿದ್ದೇನೆ ಎಂದು ರಜನೀಕಾಂತ್‌ ತಿಳಿಸಿದರು.

ಚುನಾವಣೆ ಬಳಿಕ ತಮ್ಮ ವಿರುದ್ಧ ಕೇಳಿಬರುತ್ತಿರುವ ಟೀಕೆಗಳ ಕುರಿತೂ ರಜನೀಕಾಂತ್‌ ಪ್ರತಿಕ್ರಿಯೆ ನೀಡಿದರು. ಚುನಾವಣೆ ನಂತರ ನನ್ನ ವಿರುದ್ಧ ಅನೇಕ ಟೀಕೆಗಳು ಬರುತ್ತಿವೆ. ನಾನು ಅವಕ್ಕೆ ಪ್ರತಿಕ್ರಿಯಿಸದಿದ್ದರೆ ಅವು ಸತ್ಯ ಎಂದು ಭಾವಿಸುವ ಸಾಧ್ಯತೆ ಇದೆ ಎಂದರು.

ಇದೇ ವೇಳೆ ಮಾಜಿ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್‌ ಅವರನ್ನು ಭೇಟಿ ಮಾಡಿದ ವಿಚಾರಕ್ಕೂ ಸ್ಪಷ್ಟನೆ ನೀಡಿದ ರಜನೀಕಾಂತ್‌, ಸ್ಟಾಲಿನ್‌ ಮತ್ತು ನನ್ನ ಸ್ನೇಹ ರಾಜಕೀಯವನ್ನೂ ಮೀರಿದ್ದು, ನಮ್ಮ ಸ್ನೇಹಕ್ಕೆ ಸುಮಾರು 35 ವರ್ಷಗಳ ಇತಿಹಾಸ ಇದೆ ಎಂದು ಹೇಳಿದರು.

“ಕೊಳತ್ತೂರಿನಲ್ಲಿ ಸ್ಟಾಲಿನ್‌ ಸೋತಿದ್ದಕ್ಕೆ ನನಗೆ ಬೇಸರವಾಯಿತು. ಸ್ನೇಹಿತನಾಗಿ ಅವರನ್ನು ಭೇಟಿಯಾಗಿ ಸಮಾಧಾನ ಮಾಡಿದ್ದೇನೆ. ಆದರೆ ಆ ವಿಚಾರದಲ್ಲೂ ಕೆಲವರು ನನ್ನನ್ನು ಟೀಕಿಸುತ್ತಿದ್ದಾರೆ, ಅದಕ್ಕೆ ಈ ಸ್ಪಷ್ಟನೆ ನೀಡುತ್ತಿದ್ದೇನೆ ಎಂದು ರಜನೀಕಾಂತ್‌ ಹೇಳಿದ್ದಾರೆ.

Continue Reading

Latest

ಅಬುಧಾಬಿಯಲ್ಲಿ ಮೋದಿ: ಯುಎಇ ಜೊತೆ ಮಹತ್ವದ ಒಪ್ಪಂದಕ್ಕೆ ಸಹಿ

VISTARANEWS.COM


on

ಅಬುಧಾಬಿ: ಆರು ದಿನಗಳ ವಿದೇಶ ಪ್ರವಾಸದಲ್ಲಿ ಪ್ರಧಾನಿ ಮೊದಲು ಯುಎಇಗೆ ಭೇಟಿ ನೀಡಿದ್ದಾರೆ. ಯುರೋಪ್ ಭೇಟಿಗೂ ಮುನ್ನ ಅಬುಧಾಬಿಗೆ ಭೇಟಿ ನೀಡಿದ್ದು, ಭಾರತ-ಯುಎಇ ನಡುವಿನ ನಿಕಟ ಸಂಬಂಧಕ್ಕೆ ಸಾಕ್ಷಿ ಎನ್ನಲಾಗುತ್ತಿದೆ.
ಅಬುಧಾಬಿಯಲ್ಲಿ ಪ್ರಧಾನಿ ಮೋದಿ ಮತ್ತು ಯುಎಇ ಅಧ್ಯಕ್ಷ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಅವರು ರಕ್ಷಣೆ, ವ್ಯಾಪಾರ, ಹೂಡಿಕೆ, ಇಂಧನ ಭದ್ರತೆ ಕುರಿತು ಒಪ್ಪಂದಗಳಿಗೆ ಸಹಿ ಹಾಕಿದ್ದಾರೆ.
ಈ ಸಂದರ್ಭದಲ್ಲಿ ಮಾತನಾಡಿದ ಮೋದಿ ಪಶ್ಚಿಮ ಏಷ್ಯಾದಲ್ಲಿ ಶಾಂತಿ ಸ್ಥಾಪಿಸಲು ಎಲ್ಲಾ ಅಗತ್ಯ ನೆರವು ನೀಡುವ ಭರವಸೆ ನೀಡಿದರು. ಇದೇ ವೇಳೆ ಅವರು, ಯುಎಇ ಮೇಲಿನ ಇರಾನ್ ದಾಳಿಯನ್ನು ಖಂಡಿಸಿದರು.
ಪ್ರಧಾನಿ ಮೋದಿಯವರ ಭೇಟಿಯನ್ನು ಯುಎಇ ಮುಕ್ತಕಂಠದಿಂದ ಹೊಗಳಿದೆ. ‘ಭಾರತದ ಪ್ರಧಾನಿ ನಮ್ಮ ನಿಜವಾದ ಆಸ್ತಿ’ ಎಂದು ಯುಎಇ ಅಂತಾರಾಷ್ಟ್ರೀಯ ಸಹಕಾರ ಸಚಿವೆ ರೀಮ್ ಅಲ್ ಹಶಿಮಿ ಬಣ್ಣಿಸಿದ್ದಾರೆ.
ಪ್ರಧಾನಿ ಮೋದಿ ಯುಎಇಗೆ ಆಗಮಿಸುತ್ತಿದ್ದಂತೆಯೇ ಭವ್ಯ ಸ್ವಾಗತ ನೀಡಲಾಯಿತು. ಮೋದಿ ಅವರಿದ್ದ ವಿಶೇಷ ವಿಮಾನಕ್ಕೆ ಗಗನಮಾರ್ಗದಲ್ಲೇ ಯುಎಇಯ ಎಫ್‌-16 ಯುದ್ಧ ವಿಮಾನಗಳು ಗೌರವ ರಕ್ಷೆ ನೀಡಿದ್ದವು.
ಯುಎಇ ಬಳಿಕ ಮೋದಿ ನೆದರ್‌ಲ್ಯಾಂಡ್‌, ಸ್ವೀಡನ್, ನಾರ್ವೆ ಮತ್ತು ಇಟಲಿ ದೇಶಗಳಿಗೆ ತೆರಳಲಿದ್ದಾರೆ.

Continue Reading

Latest

ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಷೇಧ ಕಾನೂನು ಜಾರಿ; ನಿಯಮ ಉಲ್ಲಂಘಿಸಿದ್ರೆ ಜೈಲು ಶಿಕ್ಷೆ, ದಂಡ

VISTARANEWS.COM


on

ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ದೀದಿ ಭದ್ರಕೋಟೆಯನ್ನು ಧೂಳೀಪಟಗೈದು ಅಧಿಕಾರಕ್ಕೇರಿದ ಸುವೇಂದು ಅಧಿಕಾರಿ ಮುಖ್ಯಮಂತ್ರಿ ಪಟ್ಟಕ್ಕೇರುತ್ತಿದ್ದಂತೆ ಮಹತ್ವದ ಆದೇಶ ಹೊರಡಿಸಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ಆರೋಗ್ಯವಂತ ಜಾನುವಾರುಗಳ ಹತ್ಯೆ ಮಾಡಿದರೆ ಶಿಕ್ಷೆ ನೀಡಲಾಗುವುದು ಎಂದು ಆದೇಶ ಹೊರಡಿಸಿದ್ದಾರೆ.
ಸರ್ಕಾರಿ ಪಶುವೈದ್ಯರು ನೀಡುವ ಫಿಟ್‌ನೆಸ್‌‍ ಪ್ರಮಾಣಪತ್ರವಿಲ್ಲದೆ ಹಸು, ಹೋರಿ, ಎಮ್ಮೆ ಮತ್ತು ಕರು ಸೇರಿ ಯಾವುದೇ ಪ್ರಾಣಿಯನ್ನು ಹತ್ಯೆ ಮಾಡುವಂತಿಲ್ಲ ಎಂದು ಪಶ್ಚಿಮ ಬಂಗಾಳದ ಬಿಜೆಪಿ ಸರ್ಕಾರವು ಅಧಿಸೂಚನೆ ಹೊರಡಿಸಿದೆ.
ಹಸು 14 ವರ್ಷ ಮೇಲ್ಪಟ್ಟಿದ್ದು, ಕೆಲಸ ಮಾಡಲು ಅಥವಾ ಸಂತಾನೋತ್ಪತ್ತಿ ಮಾಡಲು ಯೋಗ್ಯವಿಲ್ಲದಿದ್ದರೆ ಅಥವಾ ಮಾರಣಾಂತಿಕ ಕಾಯಿಲೆಗಳಿಂದ ಬಳಲುತ್ತಿದ್ದು, ಶಾಶ್ವತವಾಗಿ ಗುಣಪಡಿಸಲು ಸಾಧ್ಯವಾಗದಿದ್ದರೆ ಮಾತ್ರ ಸ್ಥಳೀಯ ನಾಗರಿಕ ಅಧಿಕಾರಿಗಳು ಅಥವಾ ಪಶುವೈದ್ಯರು ಜಂಟಿಯಾಗಿ ಪ್ರಮಾಣ ಪತ್ರವನ್ನು ನೀಡಬಹುದಾಗಿದೆ.
ನಿಯಮಗಳನ್ನು ಜಾರಿಗೊಳಿಸಲು ಅಧಿಕಾರಿಗಳು ನಡೆಸುವ ಯಾವುದೇ ಪರಿಶೀಲನೆಯನ್ನು ವ್ಯಕ್ತಿಗಳು ತಡೆಯುವಂತಿಲ್ಲ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ. ಯಾವುದೇ ರೀತಿಯ ಕಾನೂನು ಉಲ್ಲಂಘನೆಗಳಿಗೆ ಆರು ತಿಂಗಳವರೆಗೆ ಜೈಲು ಶಿಕ್ಷೆ ಅಥವಾ 1 ಸಾವಿರ ರೂಪಾಯಿವರೆಗೆ ದಂಡ ವಿಧಿಸಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.

Continue Reading

ಪ್ರಮುಖ ಸುದ್ದಿ

ಕರ್ನಾಟಕ ಸೇರಿ 16 ರಾಜ್ಯ, 3 ಕೇಂದ್ರಾಡಳಿತ ಪ್ರದೇಶಗಳಲ್ಲಿ ಎಸ್‌ಐಆರ್‌

VISTARANEWS.COM


on


ಕೇಂದ್ರ ಚುನಾವಣಾ ಆಯೋಗ 3 ನೇ ಹಂತದ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ( ಎಸ್‌ಐಆರ್‌) ಘೋಷಣೆ ಮಾಡಿದೆ. ಇದರಲ್ಲಿ ಕರ್ನಾಟಕ ಸೇರಿದಂತೆ 16 ರಾಜ್ಯಗಳು ಮತ್ತು 3 ಕೇಂದ್ರಾಡಳಿತ ಪ್ರದೇಶಗಳು ಸೇರಿದ್ದು, ಮೇ 30ರಿಂದ ಎಸ್‌ಐಆರ್‌ ನಡೆಯಲಿದೆ.
ಕರ್ನಾಟಕ, ಮಹಾರಾಷ್ಟ್ರ, ಆಂಧ್ರಪ್ರದೇಶ, ತೆಲಂಗಾಣ, ದೆಹಲಿ, ಹರಿಯಾಣ, ಪಂಜಾಬ್‌, ಚಂಡೀಗಢ, ಒಡಿಶಾ, ಮಿಜೋರಾಂ, ಸಿಕ್ಕಿಂ, ಮಣಿಪುರ, ಉತ್ತರಾಖಂಡ, ಅರುಣಾಚಲ ಪ್ರದೇಶ, ಮೇಘಾಲಯ, ಜಾರ್ಜಂಡ್‌, ನಾಗಾಲ್ಯಾಂಡ್‌, ತ್ರಿಪುರ, ದಾದರ್‌ ಮತ್ತು ನಗರ ಹವೇಲಿ, ದಮನ್‌ ಮತ್ತು ದಿಯುಗಳಲ್ಲಿ 3 ನೇ ಹಂತದಲ್ಲಿ ಎಸ್‌ಐಆರ್‌ ನಡೆಯಲಿದೆ.
3ನೇ ಹಂತದ ಎಸ್‌ಐಆರ್‌ನಲ್ಲಿ 3.94 ಲಕ್ಷಕ್ಕೂ ಅಧಿಕ ಬೂತ್‌ ಮಟ್ಟದ ಅಧಿಕಾರಿಗಳು 36.73ಕೋಟಿ ಮತದಾರರ ಮನೆಗಳಿಗೆ ತೆರಳಿ ಪರಿಶೀಲನೆ ನಡೆಸಲಿದ್ದಾರೆ.
ಈಗಾಗಲೇ ದೇಶದ 10 ರಾಜ್ಯಗಳು ಮತ್ತು ಮೂರು ಕೇಂದ್ರಾಡಳಿತ ಪ್ರದೇಶಗಳಲ್ಲಿ ಎಸ್‌ಐಆರ್‌ ನಡೆಸಲಾಗಿದೆ. ಉತ್ತರ ಪ್ರದೇಶ, ಪಶ್ಚಿಮ ಬಂಗಾಳ, ತಮಿಳುನಾಡು, ರಾಜಸ್ಥಾನ, ಛತ್ತೀಸಗಢ, ಕೇರಳಂ, ಪುದುಚೇರಿ, ಅಂಡಮಾನ್‌ ಮತ್ತು ನಿಕೋಬಾರ್‌, ಲಕ್ಷದ್ವೀಪ, ಗುಜರಾತ್‌, ಮಧ್ಯಪ್ರದೇಶ, ಗೋವಾ ಮತ್ತು ಬಿಹಾರದಲ್ಲಿ ಈಗಾಗಲೇ ಎಸ್‌ಐಆರ್‌ ಕಾರ್ಯ ಮುಗಿದಿದೆ.
ಹಿಮಾಚಲ ಪ್ರದೇಶ, ಜಮ್ಮು ಕಾಶ್ಮೀರ ಹಾಗೂ ಲಡಾಖ್‌ನಲ್ಲಿ ಎಸ್‌ಐಆರ್‌ ಬಾಕಿ ಇದ್ದು, ಸ್ಥಳೀಯ ಹವಾಮಾನ ಪರಿಸ್ಥಿತಿ ಗಮನದಲ್ಲಿಟ್ಟುಕೊಂಡು ವೇಳಾಪಟ್ಟಿ ಘೋಷಿಸುವುದಾಗಿ ಚುನಾವಣಾ ಆಯೋಗ ತಿಳಿಸಿದೆ.

Continue Reading
Advertisement
ಪ್ರಮುಖ ಸುದ್ದಿ15 hours ago

ವಿಜಯ್‌ ಸಿಎಂ ಆಗಿದ್ದಕ್ಕೆ ನನಗೆ ಅಸೂಯೆ ಇಲ್ಲ – ರಜನೀಕಾಂತ್‌

Latest15 hours ago

ಕೇರಳಂ ಮುಖ್ಯಮಂತ್ರಿಯಾಗಿ ನಾಳೆ ವಿ.ಡಿ. ಸತೀಶನ್ ಪ್ರಮಾಣವಚನ

Latest2 days ago

ಅಬುಧಾಬಿಯಲ್ಲಿ ಮೋದಿ: ಯುಎಇ ಜೊತೆ ಮಹತ್ವದ ಒಪ್ಪಂದಕ್ಕೆ ಸಹಿ

Latest3 days ago

ವಾಹನ ಸವಾರರಿಗೆ ಶಾಕ್! ಪೆಟ್ರೋಲ್, ಡೀಸೆಲ್ ತಲಾ ₹3 ಏರಿಕೆ.

Latest3 days ago

ನಟ ದರ್ಶನ್‌ಗೆ ಸುಪ್ರೀಂ ಕೋರ್ಟ್ ಶಾಕ್‌, ಜಾಮೀನು ಅರ್ಜಿ ವಜಾ

Latest3 days ago

ಚೀನಾದಲ್ಲಿ ಟ್ರಂಪ್‌, ಶಿ ಜಿನ್‌‌ಪಿಂಗ್‌ ಹೈವೋಲ್ಟೇಜ್‌ ಮೀಟಿಂಗ್‌‌

Latest3 days ago

ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಷೇಧ ಕಾನೂನು ಜಾರಿ; ನಿಯಮ ಉಲ್ಲಂಘಿಸಿದ್ರೆ ಜೈಲು ಶಿಕ್ಷೆ, ದಂಡ

ಪ್ರಮುಖ ಸುದ್ದಿ3 days ago

ಕರ್ನಾಟಕ ಸೇರಿ 16 ರಾಜ್ಯ, 3 ಕೇಂದ್ರಾಡಳಿತ ಪ್ರದೇಶಗಳಲ್ಲಿ ಎಸ್‌ಐಆರ್‌

Latest3 days ago

ಹಿಜಾಬ್‌ ಓಕೆ, ಕೇಸರಿ ಶಾಲುಗೆ ನೋ: ಪರ- ವಿರೋಧ ಚರ್ಚೆ ಶುರು

Latest4 days ago

ವಿ.ಡಿ. ಸತೀಶನ್‌ ಸಿಎಂ ಆಗಿ ಆಯ್ಕೆ ಹಿಂದಿನ ರಿಯಲ್ ಸ್ಟೋರಿ

galipata neetu
ಕಿರುತೆರೆ2 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌