Pradeep Eshwar: ಸುಧಾಕರ್‌, ನಾವೆಲ್ಲ ಒಂದೇ; ನಮಗೋಸ್ಕರ ನೀವ್ಯಾಕೆ ಸುಮ್ನೆ ಹೊಡೆದಾಡ್ತೀರಾ ಎಂದ ಪ್ರದೀಪ್‌ ಈಶ್ವರ್! - Vistara News

ಪ್ರಮುಖ ಸುದ್ದಿ

Pradeep Eshwar: ಸುಧಾಕರ್‌, ನಾವೆಲ್ಲ ಒಂದೇ; ನಮಗೋಸ್ಕರ ನೀವ್ಯಾಕೆ ಸುಮ್ನೆ ಹೊಡೆದಾಡ್ತೀರಾ ಎಂದ ಪ್ರದೀಪ್‌ ಈಶ್ವರ್!

Pradeep Eshwar: ಚಿಕ್ಕಬಳ್ಳಾಪುರ ಕ್ಷೇತ್ರದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಸೋಲಿನ ಬಗ್ಗೆ ಶಾಸಕ ಪ್ರದೀಪ್‌ ಈಶ್ವರ್‌ ಪ್ರತಿಕ್ರಿಯಿಸಿದ್ದಾರೆ. ನಾವು ನಮ್ಮ ಹೆಂಡತಿ‌, ಮಕ್ಕಳ ಜೊತೆ ಆರಾಮಾಗಿರ್ತೀವಿ. ನೀವ್ಯಾಕೆ ನಮಗೋಸ್ಕರ ಹೊಡೆದಾಡ್ತೀರಾ? ಯಾಕೆ ಸುಮ್ಮನೆ ಬಟ್ಟೆ ಹರ್ಕೋತೀರಾ? ಎಂದು ಕಾರ್ಯಕರ್ತರಿಗೆ ಹೇಳಿದ್ದಾರೆ.

VISTARANEWS.COM


on

Pradeep Eshwar
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ಚಿಕ್ಕಬಳ್ಳಾಪುರ: ಲೋಕಸಭಾ ಚುನಾವಣೆ ಬಳಿಕ ಮತ್ತೆ ʼನಮಸ್ತೆ ಚಿಕ್ಕಬಳ್ಳಾಪುರʼ ಕಾರ್ಯಕ್ರಮದ ಮೂಲಕ ಮನೆಮನೆಗೆ ತೆರಳಿ ಜನರ ಅಹವಾಲು ಸ್ವೀಕರಿಸಲು ಶಾಸಕ ಪ್ರದೀಪ್‌ ಈಶ್ವರ್‌ ಮುಂದಾಗಿದ್ದಾರೆ. ಈ ವೇಳೆ ಕ್ಷೇತ್ರದ ನೂತನ ಸಂಸದ ಡಾ.ಕೆ.ಸುಧಾಕರ್‌ ಅವರಿಗೆ ಶುಭ ಹಾರೈಸಿರುವ ಅವರು, ಸುಧಾಕರ್ ದೆಹಲಿಯಲ್ಲಿ ಆರಾಮಾಗಿ ಇರ್ತಾರೆ. ನಾವು ನಮ್ಮ ಹೆಂಡತಿ‌, ಮಕ್ಕಳ ಜೊತೆ ಆರಾಮಾಗಿರ್ತೀವಿ, ನೀವ್ಯಾಕೆ ನಮಗೋಸ್ಕರ ಹೊಡೆದಾಡ್ತೀರಾ, ಯಾಕೆ ಸುಮ್ಮನೆ ಬಟ್ಟೆ ಹರ್ಕೋತೀರಾ ಎಂದು ಕಾರ್ಯಕರ್ತರಿಗೆ ಹೇಳಿದರು.

ಕ್ಷೇತ್ರದಲ್ಲಿ ಡಾ.ಕೆ. ಸುಧಾಕರ್‌ಗೆ ಒಂದು ವೋಟ್ ಲೀಡ್ ಬಂದರೂ ರಾಜೀನಾಮೆ ಕೊಡೋದಾಗಿ ಹೇಳಿದ್ದರಿಂದ ಪ್ರದೀಪ್ ಈಶ್ವರ್ ರಾಜೀನಾಮೆಗೆ ಒತ್ತಾಯಗಳು ಕೇಳಿಬಂದಿದ್ದವು. ಹೀಗಾಗಿ ಬಿಗಿ ಪೊಲೀಸ್ ಬಂದೋಬಸ್ತ್‌ನಲ್ಲಿ ಶುಕ್ರವಾರ ʼನಮಸ್ತೆ ಚಿಕ್ಕಬಳ್ಳಾಪುರʼ ಕಾರ್ಯಕ್ರಮ ನಡೆಸಲಾಯಿತು. ನಗರದ 17ನೇ ವಾರ್ಡ್‌ನಲ್ಲಿ ಮನೆಮನೆಗೆ ತೆರಳಿ ಶಾಸಕ ಪ್ರದೀಪ್‌ ಈಶ್ವರ್, ಜನರ ಅಹವಾಲು ಆಲಿಸಿದರು.

ಈ ವೇಳೆ ನೂತನ‌ ಸಂಸದ ಡಾ.ಕೆ.ಸುಧಾಕರ್‌ಗೆ ಶುಭ ಹಾರೈಸಿದ ಪ್ರದೀಪ್ ಈಶ್ವರ್, ಒಳ್ಳೆ ಕೆಲಸ ಮಾಡಿಕೊಂಡು ಹೋಗಲಿ. ಜನಾಭಿಪ್ರಾಯ ಸುಧಾಕರ್ ಪರವಾಗಿ ಬಂದಿದೆ. ಕಳೆದ ಒಂದು ವಾರದಿಂದ ಕ್ಷೇತ್ರದಲ್ಲಿ ಗಲಾಟೆಗಳಾಗುತ್ತಿವೆ. ನನ್ನ ಮನೆ ಮೇಲೆ ಕಲ್ಲು ತೂರಾಟ ಮಾಡಿದ್ದಾರೆ. ತಕ್ಷಣ ನಾನು ರಿಯಾಕ್ಟ್ ಮಾಡಿದ್ರೆ ನಮ್ಮ ಕಾರ್ಯಕರ್ತರು, ಅವರ ಕಾರ್ಯಕರ್ತರು ಹೊಡೆದಾಡಿಕೊಳುತ್ತಾರೆ. ನಾನು ಬೈಯ್ಯಬೇಕಾ, ನಾನೇ ಅಖಾಡಕ್ಕೆ ಇಳಿಯುತ್ತೇನೆ‌. ನನ್ನ ಕಾರ್ಯಕರ್ತರನ್ನು ಯಾವುದೇ ಕಾರಣಕ್ಕೂ ಬಲಿ ಕೊಡಲ್ಲ. ನನ್ಮ ಅಸ್ತಿತ್ವದ ಪ್ರಶ್ನೆ ನಾನೇ ಕಾಪಾಡಿಕೊಳ್ತೀನಿ ಎಂದರು.

ಇದನ್ನೂ ಓದಿ | DK Shivakumar: ಎತ್ತಿನಹೊಳೆ ಕಾಮಗಾರಿಗೆ 500 ಎಕರೆ ನೀಡಲು ಅರಣ್ಯ ಇಲಾಖೆ ಒಪ್ಪಿಗೆ

ನಾಲ್ಕೈದು ಕಡೆ ದಾಳಿಯಾದರೂ ನಾನು ತಾಳ್ಮೆಯಿಂದ ಇದ್ದೇನೆ. ಕೆ.ಸುಧಾಕರ್ ದೆಹಲಿಯಲ್ಲಿ ಆರಾಮಾಗಿ ಇರುತ್ತಾರೆ. ನಾನು ಬೆಂಗಳೂರಿನಲ್ಲಿ ಆರಾಮಾಗಿ ಇರುತ್ತೇನೆ. ನಾವು ನಮ್ಮ ಹೆಂಡತಿ‌, ಮಕ್ಕಳ ಜೊತೆ ಆರಾಮಾಗಿರ್ತೀವಿ. ನೀವ್ಯಾಕೆ ನಮಗೋಸ್ಕರ ಹೊಡೆದಾಡ್ತೀರಾ? ಯಾಕೆ ಸುಮ್ಮನೆ ಬಟ್ಟೆ ಹರ್ಕೋತೀರಾ? ನಮಗೆಲ್ಲಾ ನಮ್ಮ ಹೆಂಡತಿ ಮಕ್ಕಳೇ ಮುಖ್ಯ ಎಂದು ಹೇಳುವ ಮೂಲಕ ನಾವೆಲ್ಲಾ ಒಂದೇ ಎನ್ನುವ ಅರ್ಥದಲ್ಲಿ ಕಾರ್ಯಕರ್ತರಿಗೆ ಸಂದೇಶ ನೀಡಿದ್ದಾರೆ.

ಮನೆಗೆ ಕಲ್ಲು ಹೊಡೆದ ನಾಲ್ಕು ಜನರನ್ನು ಠಾಣೆಗೆ ಕರೆಸಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಫೇಕ್ ರಾಜೀನಾಮೆ ಪತ್ರ ಹರಿಬಿಟ್ಟಿದ್ದಾರೆ. ಮೈಸೂರಿನ ಅವಿನಾಶ್ ಜೊತೆ ಇನ್ನಿಬ್ಬರು ಹುಡುಗರು ಈ ರೀತಿ ಮಾಡಿದ್ದಾರೆ. ಫೇಕ್ ರಾಜೀನಾಮೆ ಲೆಟರ್ ಹರಿಬಿಟ್ಟಿರುವ ಬಗ್ಗೆ ಪೊಲೀಸರು ತನಿಖೆ ಮಾಡುತ್ತಿದ್ದಾರೆ ಎಂದು ತಿಳಿಸಿದರು.

ಅಖಾಡದಲ್ಲಿ ನಾನು ಇದ್ದಿದ್ರೆ ಅದರ ಕಥೆ ಬೇರೆ ಆಗ್ತಿತ್ತು

ಕ್ಷೇತ್ರದಲ್ಲಿ ಪಕ್ಷದ ಸೋಲಿಗೆ ಪರೋಕ್ಷವಾಗಿ ರಕ್ಷಾರಾಮಯ್ಯಗೆ ವಿರುದ್ಧ ಅಸಮಾಧಾನ ಹೊರಹಾಕಿದ ಶಾಸಕ ಪ್ರದೀಪ್ ಈಶ್ವರ್, ಸುಧಾಕರ್ ವಿರುದ್ಧ ಅಖಾಡದಲ್ಲಿ ನಾನು ಇದ್ದಿದ್ದರೆ ಅದರ ಕಥೆ ಬೇರೆ ಆಗ್ತಿತ್ತು. ಎಲ್ಲರೂ ಪ್ರದೀಪ್ ಈಶ್ವರ್ ಆಗಕ್ಕೆ ಸಾಧ್ಯವಿಲ್ಲ. ಇನ್ನು ಮುಂದೆ ನಾನೆ ಮನೆಮನೆಗೆ ಸುತ್ತುತ್ತೇನೆ. ಕಾರ್ಯಕರ್ತರನ್ನು ಬಲಪಡಿಸುತ್ತೇನೆ. ಕಾಂಗ್ರೆಸ್ ಪಕ್ಷ ದೊಡ್ಡದು, ಪ್ರದೀಪ್ ಈಶ್ವರ್ ಅಲ್ಲ. ನನ್ನಂಥಹ ಅಹಿಂದ ಹುಡುಗರ ರಕ್ಷಣೆ ಸಿಗಬೇಕಾದರೆ ಕಾಂಗ್ರೆಸ್ ಉಳಿಯಬೇಕು. ಚಿಕ್ಕಬಳ್ಳಾಪುರಲ್ಲಿ ಈ ಸೋಲು ಸೋಲಲ್ಲ, ಗೆಲುವು ಇನ್ನು ಐದು ವರ್ಷ ಮುಂದಕ್ಕೆ ಹೋಗಿದೆ ಅಷ್ಟೇ ಎಂದು ಹೇಳಿದರು.

ಇದನ್ನೂ ಓದಿ | Rahul Gandhi: ನನ್ನ ಮೇಲೆ ಮೋದಿಗಿರುವಷ್ಟು ದೇವರ ಕೃಪೆ ಇಲ್ಲ ಎಂದ ರಾಹುಲ್‌ ಗಾಂಧಿ; ಏಕಿಂಥ ಮಾತು?

ಯಾರೇ ಆಗಿದ್ರೂ ಶಿಕ್ಷೆ ಆಗಲೇ ಆಗುತ್ತೆ

ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿ, ಕೇಸ್‌ನಲ್ಲಿ ಯಾವುದೇ ರಾಜಕೀಯ ಹಸ್ತಕ್ಷೇಪ ಇಲ್ಲ. ರೇಣುಕಾಸ್ವಾಮಿ ಹತ್ಯೆಯನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ. ತಪ್ಪಿತಸ್ತರು ಯಾರೆ ಇದ್ದರೂ ಕಾನೂನು ಕ್ರಮ ಜರುಗಿಸಬೇಕು. ಬೆಂಗಳೂರಿನ ಪೊಲೀಸರು ಬಲಿಷ್ಠವಾಗಿದ್ದಾರೆ. ಕಾನೂನಿಗಿಂತ ದೊಡ್ಡವರು ಈ ಭೂಮಿ ಮೇಲೆ ಯಾರೂ ಇಲ್ಲ. ಯಾರೇ ಆಗಿದ್ರೂ ತಪ್ಪಿಗೆ ಶಿಕ್ಷೆ ಆಗಲೇ ಆಗುತ್ತೆ ಎಂದು ಪ್ರದೀಪ್‌ ಈಶ್ವರ್‌ ಅಭಿಪ್ರಾಯಪಟ್ಟರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ

Latest

ಕೇರಳಂ ನೂತನ ಮುಖ್ಯಮಂತ್ರಿಯಾಗಿ ವಿ.ಡಿ.ಸತೀಶನ್‌ ಪ್ರದಗ್ರಹಣ

VISTARANEWS.COM


on

ಕೇರಳಂ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್‌ ಇಂದು ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಪಾಲ ರಾಜೇಂದ್ರ ವಿಶ್ವನಾಥ್‌ ಅರ್ಲೇಕರ್‌ ಅವರು ಪ್ರಮಾಣ ವಚನ ಬೋಧಿಸಿದರು. ತಿರುವನಂತಪುರದ ಸೆಂಟ್ರಲ್‌ ಸ್ಟೇಡಿಯಂನಲ್ಲಿ ನಡೆದ ಸಮಾರಂಭದಲ್ಲಿ ವಿ.ಡಿ. ಸತೀಶನ್‌ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.

ಕಾರ್ಯಕ್ರಮದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್‌, ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

10 ವರ್ಷಗಳ ನಂತರ ಯುಡಿಎಫ್‌ ಸರ್ಕಾರ ಅಧಿಕಾರ ಸ್ವೀಕಾರದೊಂದಿಗೆ ಕೇರಳ ರಾಜಕೀಯದಲ್ಲಿ ಹೊಸ ಅಧ್ಯಾಯ ಆರಂಭವಾಗಿದೆ.

Continue Reading

ಪ್ರಮುಖ ಸುದ್ದಿ

ವಿಜಯ್‌ ಸಿಎಂ ಆಗಿದ್ದಕ್ಕೆ ನನಗೆ ಅಸೂಯೆ ಇಲ್ಲ – ರಜನೀಕಾಂತ್‌

VISTARANEWS.COM


on

ಚೆನ್ನೈ: ತಮಿಳು ನಟ ವಿಜಯ್‌ ಮುಖ್ಯಮಂತ್ರಿ ಆಗಿರುವುದಕ್ಕೆ ನನಗೆ ಯಾವುದೇ ಅಸೂಯೆ ಇಲ್ಲ ಎಂದು ತಮಿಳು ನಟ, ಸೂಪರ್‌ ಸ್ಟಾರ್‌ ರಜನೀಕಾಂತ್‌ ಸ್ಪಷ್ಟಪಡಿಸಿದ್ದಾರೆ.

ಚೆನ್ನೈನಲ್ಲಿ ಮಾತನಾಡಿದ ಅವರು, ಪ್ರಬಲ ಮೈತ್ರಿಕೂಟಗಳನ್ನು ಸೋಲಿಸಿ ವಿಜಯ್‌ ಸಿಎಂ ಆಗಿದ್ದಾರೆ. ಇದರಿಂದ ನನಗೆ ಯಾವುದೇ ಅಸೂಯೆ ಇಲ್ಲ. ನನಗೆ ತುಂಬಾ ಸಂತೋಷವಾಗಿದೆ ಎಂದಿದ್ದಾರೆ.

ನಾನು ರಾಜಕೀಯ ಪ್ರವೇಶಿಸಿದ್ದರೆ ಶೇ.100 ರಷ್ಟು ಯಶಸ್ಸು ಸಾಧಿಸುತ್ತಿದ್ದೆ. ಆದರೆ ನಾನು ರಾಜಕೀಯದಿಂದ ದೂರ ಸರಿದು ಬಹಳ ದಿನಗಳಾಗಿವೆ ಎಂದು ಹೇಳಿದ್ದಾರೆ.

ವಿಜಯ್‌ ಮತ್ತು ನನ್ನ ನಡುವೆ ಒಂದು ಜನರೇಶನ್‌ ಗ್ಯಾಪ್‌ ಇದೆ. ನಮ್ಮಿಬ್ಬರ ನಡುವೆ ಸುಮಾರು 25 ವರ್ಷದ ಅಂತರವಿದೆ. ಅವರ ಬಗ್ಗೆಯಾಗಲಿ, ಅವರ ಸಿಎಂ ಆಗಿರುವುದಕ್ಕಾಗಲಿ ನನಗೆ ಯಾವುದೇ ಅಸೂಯೆ ಇಲ್ಲ ಎಂದು ಸ್ಪಷ್ಟಪಡಿಸಿದರು. ವಿಜಯ್‌ ಸಿಎಂ ಆದ ತಕ್ಷಣವೇ ನಾನು ಅವರಿಗೆ ಅಭಿನಂದನೆ ಸಲ್ಲಿಸಿದ್ದೇನೆ ಎಂದು ರಜನೀಕಾಂತ್‌ ತಿಳಿಸಿದರು.

ಚುನಾವಣೆ ಬಳಿಕ ತಮ್ಮ ವಿರುದ್ಧ ಕೇಳಿಬರುತ್ತಿರುವ ಟೀಕೆಗಳ ಕುರಿತೂ ರಜನೀಕಾಂತ್‌ ಪ್ರತಿಕ್ರಿಯೆ ನೀಡಿದರು. ಚುನಾವಣೆ ನಂತರ ನನ್ನ ವಿರುದ್ಧ ಅನೇಕ ಟೀಕೆಗಳು ಬರುತ್ತಿವೆ. ನಾನು ಅವಕ್ಕೆ ಪ್ರತಿಕ್ರಿಯಿಸದಿದ್ದರೆ ಅವು ಸತ್ಯ ಎಂದು ಭಾವಿಸುವ ಸಾಧ್ಯತೆ ಇದೆ ಎಂದರು.

ಇದೇ ವೇಳೆ ಮಾಜಿ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್‌ ಅವರನ್ನು ಭೇಟಿ ಮಾಡಿದ ವಿಚಾರಕ್ಕೂ ಸ್ಪಷ್ಟನೆ ನೀಡಿದ ರಜನೀಕಾಂತ್‌, ಸ್ಟಾಲಿನ್‌ ಮತ್ತು ನನ್ನ ಸ್ನೇಹ ರಾಜಕೀಯವನ್ನೂ ಮೀರಿದ್ದು, ನಮ್ಮ ಸ್ನೇಹಕ್ಕೆ ಸುಮಾರು 35 ವರ್ಷಗಳ ಇತಿಹಾಸ ಇದೆ ಎಂದು ಹೇಳಿದರು.

“ಕೊಳತ್ತೂರಿನಲ್ಲಿ ಸ್ಟಾಲಿನ್‌ ಸೋತಿದ್ದಕ್ಕೆ ನನಗೆ ಬೇಸರವಾಯಿತು. ಸ್ನೇಹಿತನಾಗಿ ಅವರನ್ನು ಭೇಟಿಯಾಗಿ ಸಮಾಧಾನ ಮಾಡಿದ್ದೇನೆ. ಆದರೆ ಆ ವಿಚಾರದಲ್ಲೂ ಕೆಲವರು ನನ್ನನ್ನು ಟೀಕಿಸುತ್ತಿದ್ದಾರೆ, ಅದಕ್ಕೆ ಈ ಸ್ಪಷ್ಟನೆ ನೀಡುತ್ತಿದ್ದೇನೆ ಎಂದು ರಜನೀಕಾಂತ್‌ ಹೇಳಿದ್ದಾರೆ.

Continue Reading

Latest

ಅಬುಧಾಬಿಯಲ್ಲಿ ಮೋದಿ: ಯುಎಇ ಜೊತೆ ಮಹತ್ವದ ಒಪ್ಪಂದಕ್ಕೆ ಸಹಿ

VISTARANEWS.COM


on

ಅಬುಧಾಬಿ: ಆರು ದಿನಗಳ ವಿದೇಶ ಪ್ರವಾಸದಲ್ಲಿ ಪ್ರಧಾನಿ ಮೊದಲು ಯುಎಇಗೆ ಭೇಟಿ ನೀಡಿದ್ದಾರೆ. ಯುರೋಪ್ ಭೇಟಿಗೂ ಮುನ್ನ ಅಬುಧಾಬಿಗೆ ಭೇಟಿ ನೀಡಿದ್ದು, ಭಾರತ-ಯುಎಇ ನಡುವಿನ ನಿಕಟ ಸಂಬಂಧಕ್ಕೆ ಸಾಕ್ಷಿ ಎನ್ನಲಾಗುತ್ತಿದೆ.
ಅಬುಧಾಬಿಯಲ್ಲಿ ಪ್ರಧಾನಿ ಮೋದಿ ಮತ್ತು ಯುಎಇ ಅಧ್ಯಕ್ಷ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಅವರು ರಕ್ಷಣೆ, ವ್ಯಾಪಾರ, ಹೂಡಿಕೆ, ಇಂಧನ ಭದ್ರತೆ ಕುರಿತು ಒಪ್ಪಂದಗಳಿಗೆ ಸಹಿ ಹಾಕಿದ್ದಾರೆ.
ಈ ಸಂದರ್ಭದಲ್ಲಿ ಮಾತನಾಡಿದ ಮೋದಿ ಪಶ್ಚಿಮ ಏಷ್ಯಾದಲ್ಲಿ ಶಾಂತಿ ಸ್ಥಾಪಿಸಲು ಎಲ್ಲಾ ಅಗತ್ಯ ನೆರವು ನೀಡುವ ಭರವಸೆ ನೀಡಿದರು. ಇದೇ ವೇಳೆ ಅವರು, ಯುಎಇ ಮೇಲಿನ ಇರಾನ್ ದಾಳಿಯನ್ನು ಖಂಡಿಸಿದರು.
ಪ್ರಧಾನಿ ಮೋದಿಯವರ ಭೇಟಿಯನ್ನು ಯುಎಇ ಮುಕ್ತಕಂಠದಿಂದ ಹೊಗಳಿದೆ. ‘ಭಾರತದ ಪ್ರಧಾನಿ ನಮ್ಮ ನಿಜವಾದ ಆಸ್ತಿ’ ಎಂದು ಯುಎಇ ಅಂತಾರಾಷ್ಟ್ರೀಯ ಸಹಕಾರ ಸಚಿವೆ ರೀಮ್ ಅಲ್ ಹಶಿಮಿ ಬಣ್ಣಿಸಿದ್ದಾರೆ.
ಪ್ರಧಾನಿ ಮೋದಿ ಯುಎಇಗೆ ಆಗಮಿಸುತ್ತಿದ್ದಂತೆಯೇ ಭವ್ಯ ಸ್ವಾಗತ ನೀಡಲಾಯಿತು. ಮೋದಿ ಅವರಿದ್ದ ವಿಶೇಷ ವಿಮಾನಕ್ಕೆ ಗಗನಮಾರ್ಗದಲ್ಲೇ ಯುಎಇಯ ಎಫ್‌-16 ಯುದ್ಧ ವಿಮಾನಗಳು ಗೌರವ ರಕ್ಷೆ ನೀಡಿದ್ದವು.
ಯುಎಇ ಬಳಿಕ ಮೋದಿ ನೆದರ್‌ಲ್ಯಾಂಡ್‌, ಸ್ವೀಡನ್, ನಾರ್ವೆ ಮತ್ತು ಇಟಲಿ ದೇಶಗಳಿಗೆ ತೆರಳಲಿದ್ದಾರೆ.

Continue Reading

Latest

ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಷೇಧ ಕಾನೂನು ಜಾರಿ; ನಿಯಮ ಉಲ್ಲಂಘಿಸಿದ್ರೆ ಜೈಲು ಶಿಕ್ಷೆ, ದಂಡ

VISTARANEWS.COM


on

ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ದೀದಿ ಭದ್ರಕೋಟೆಯನ್ನು ಧೂಳೀಪಟಗೈದು ಅಧಿಕಾರಕ್ಕೇರಿದ ಸುವೇಂದು ಅಧಿಕಾರಿ ಮುಖ್ಯಮಂತ್ರಿ ಪಟ್ಟಕ್ಕೇರುತ್ತಿದ್ದಂತೆ ಮಹತ್ವದ ಆದೇಶ ಹೊರಡಿಸಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ಆರೋಗ್ಯವಂತ ಜಾನುವಾರುಗಳ ಹತ್ಯೆ ಮಾಡಿದರೆ ಶಿಕ್ಷೆ ನೀಡಲಾಗುವುದು ಎಂದು ಆದೇಶ ಹೊರಡಿಸಿದ್ದಾರೆ.
ಸರ್ಕಾರಿ ಪಶುವೈದ್ಯರು ನೀಡುವ ಫಿಟ್‌ನೆಸ್‌‍ ಪ್ರಮಾಣಪತ್ರವಿಲ್ಲದೆ ಹಸು, ಹೋರಿ, ಎಮ್ಮೆ ಮತ್ತು ಕರು ಸೇರಿ ಯಾವುದೇ ಪ್ರಾಣಿಯನ್ನು ಹತ್ಯೆ ಮಾಡುವಂತಿಲ್ಲ ಎಂದು ಪಶ್ಚಿಮ ಬಂಗಾಳದ ಬಿಜೆಪಿ ಸರ್ಕಾರವು ಅಧಿಸೂಚನೆ ಹೊರಡಿಸಿದೆ.
ಹಸು 14 ವರ್ಷ ಮೇಲ್ಪಟ್ಟಿದ್ದು, ಕೆಲಸ ಮಾಡಲು ಅಥವಾ ಸಂತಾನೋತ್ಪತ್ತಿ ಮಾಡಲು ಯೋಗ್ಯವಿಲ್ಲದಿದ್ದರೆ ಅಥವಾ ಮಾರಣಾಂತಿಕ ಕಾಯಿಲೆಗಳಿಂದ ಬಳಲುತ್ತಿದ್ದು, ಶಾಶ್ವತವಾಗಿ ಗುಣಪಡಿಸಲು ಸಾಧ್ಯವಾಗದಿದ್ದರೆ ಮಾತ್ರ ಸ್ಥಳೀಯ ನಾಗರಿಕ ಅಧಿಕಾರಿಗಳು ಅಥವಾ ಪಶುವೈದ್ಯರು ಜಂಟಿಯಾಗಿ ಪ್ರಮಾಣ ಪತ್ರವನ್ನು ನೀಡಬಹುದಾಗಿದೆ.
ನಿಯಮಗಳನ್ನು ಜಾರಿಗೊಳಿಸಲು ಅಧಿಕಾರಿಗಳು ನಡೆಸುವ ಯಾವುದೇ ಪರಿಶೀಲನೆಯನ್ನು ವ್ಯಕ್ತಿಗಳು ತಡೆಯುವಂತಿಲ್ಲ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ. ಯಾವುದೇ ರೀತಿಯ ಕಾನೂನು ಉಲ್ಲಂಘನೆಗಳಿಗೆ ಆರು ತಿಂಗಳವರೆಗೆ ಜೈಲು ಶಿಕ್ಷೆ ಅಥವಾ 1 ಸಾವಿರ ರೂಪಾಯಿವರೆಗೆ ದಂಡ ವಿಧಿಸಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.

Continue Reading
Advertisement
Latest17 hours ago

ಪತ್ನಿ, ಮಗನ ಪ್ರತ್ಯೇಕ ಭೇಟಿಗೆ ಅವಕಾಶ ಕೋರಿದ ದರ್ಶನ್‌

Latest19 hours ago

ದುಬಾರೆಯಲ್ಲಿ ಆನೆಗಳ ಕಾದಾಟದ ವೇಳೆ ಮಹಿಳೆ ಸಾವು

Latest22 hours ago

ದರ್ಶನ್‌ ಪತ್ನಿ ವಿಜಯಲಕ್ಷ್ಮಿ ಭಾವುಕ ಪೋಸ್ಟ್‌

Latest23 hours ago

ಕೇರಳಂ ನೂತನ ಮುಖ್ಯಮಂತ್ರಿಯಾಗಿ ವಿ.ಡಿ.ಸತೀಶನ್‌ ಪ್ರದಗ್ರಹಣ

ಪ್ರಮುಖ ಸುದ್ದಿ2 days ago

ವಿಜಯ್‌ ಸಿಎಂ ಆಗಿದ್ದಕ್ಕೆ ನನಗೆ ಅಸೂಯೆ ಇಲ್ಲ – ರಜನೀಕಾಂತ್‌

Latest2 days ago

ಕೇರಳಂ ಮುಖ್ಯಮಂತ್ರಿಯಾಗಿ ನಾಳೆ ವಿ.ಡಿ. ಸತೀಶನ್ ಪ್ರಮಾಣವಚನ

Latest4 days ago

ಅಬುಧಾಬಿಯಲ್ಲಿ ಮೋದಿ: ಯುಎಇ ಜೊತೆ ಮಹತ್ವದ ಒಪ್ಪಂದಕ್ಕೆ ಸಹಿ

Latest4 days ago

ವಾಹನ ಸವಾರರಿಗೆ ಶಾಕ್! ಪೆಟ್ರೋಲ್, ಡೀಸೆಲ್ ತಲಾ ₹3 ಏರಿಕೆ.

Latest4 days ago

ನಟ ದರ್ಶನ್‌ಗೆ ಸುಪ್ರೀಂ ಕೋರ್ಟ್ ಶಾಕ್‌, ಜಾಮೀನು ಅರ್ಜಿ ವಜಾ

Latest5 days ago

ಚೀನಾದಲ್ಲಿ ಟ್ರಂಪ್‌, ಶಿ ಜಿನ್‌‌ಪಿಂಗ್‌ ಹೈವೋಲ್ಟೇಜ್‌ ಮೀಟಿಂಗ್‌‌

galipata neetu
ಕಿರುತೆರೆ2 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌