Site icon Vistara News

Prajwal Revanna Case: 4 ತಿಂಗಳಿಗೊಮ್ಮೆ ಎಚ್‌ಐವಿ ಟೆಸ್ಟ್ ಮಾಡಿಸಿಕೊಳ್ತಿದ್ದ ಪ್ರಜ್ವಲ್ ರೇವಣ್ಣ!

prajwal revanna case test

ಬೆಂಗಳೂರು: ಲೈಂಗಿಕ ದೌರ್ಜನ್ಯ (Physical Abuse) ಪ್ರಕರಣದಲ್ಲಿ ಇದೀಗ ಜೈಲಿನಲ್ಲಿರುವ ಹಾಸನ (Hassan news) ಮಾಜಿ ಸಂಸದ ಪ್ರಜ್ವಲ್ ರೇವಣ್ಣ , (Prajwal Revanna case) ನಾಲ್ಕು ತಿಂಗಳಿಗೊಮ್ಮೆ ಎಚ್‌ಐವಿ ಟೆಸ್ಟ್ (HIV Test) ಮಾಡಿಸಿಕೊಳ್ಳುತ್ತಿದ್ದರು ಎಂಬ ಸಂಗತಿ ಇದೀಗ ಬಯಲಾಗಿದೆ.

ಪ್ರಜ್ವಲ್ ರೇವಣ್ಣ ಪ್ರಕರಣದ ತನಿಖೆಯನ್ನು ಎಸ್ಐಟಿ ನಡೆಸುತ್ತಿದೆ. ಸದ್ಯಕ್ಕೆ ಪ್ರಜ್ವಲ್ ಮೇಲೆ ನಾಲ್ಕು ಪ್ರಕರಣಗಳು ದಾಖಲಾಗಿವೆ. ಈ ಪ್ರಕರಣಗಳ ವಿಚಾರಣೆ ವೇಳೆ ಹಲವು ಸ್ಫೋಟಕ ಮಾಹಿತಿಗಳು ಬಯಲಾಗಿವೆ. ಅದರಲ್ಲಿ ಈ ಎಚ್‌ಐವಿ ಟೆಸ್ಟ್ ವಿಚಾರವೂ ಒಂದು. ಸಾಕಷ್ಟು ಮಹಿಳೆಯರಿಗೆ ಬೆದರಿಕೆ ಹಾಕಿ ಬಲವಂತವಾಗಿ ಅಸುರಕ್ಷಿತ ಲೈಂಗಿಕ ಸಂಪರ್ಕ ನಡೆಸುತ್ತಿದ್ದ ದೂರು ಪ್ರಜ್ವಲ್ ಮೇಲಿದೆ. ಇದರಿಂದ ಎಚ್‌ಐವಿ ಬರಬಹುದು ಎಂಬ ಆತಂಕದಿಂದಲೇ ಪ್ರತೀ ನಾಲ್ಕು ತಿಂಗಳಿಗೊಮ್ಮೆ ಎಚ್‌ಐವಿ ಟೆಸ್ಟ್ ಮಾಡಿಸಿಕೊಳ್ಳುತ್ತಿದ್ದಿರಬಹುದು ಎಂದು ಶಂಕಿಸಲಾಗಿದೆ.

ಹಲವು ಮಹಿಳೆಯರ ಜೊತೆ ಪ್ರಜ್ವಲ್ ಲೈಂಗಿಕ ಸಂಪರ್ಕ ನಡೆಸುತ್ತಿದ್ದ ಎಂಬ ಆರೋಪಕ್ಕೆ ಈ ಸಂಗತಿ ಪುಷ್ಟಿ ನೀಡಿದ್ದು, ಇದನ್ನು ಪ್ರಜ್ವಲ್‌ಗೆ ವಿರೋಧ ಸಾಕ್ಷ್ಯವಾಗಿ ಬಳಸಿಕೊಳ್ಳಲು ಎಸ್‌ಐಟಿ ಮುಂದಾಗಿದೆ. ಇದು ಪ್ರಜ್ವಲ್ ಮಹಿಳೆಯರ ಮೇಲೆ ಬಲಾತ್ಕಾರ ನಡೆಸಿದ್ದಕ್ಕೆ ದಾಖಲೆಗಳಲ್ಲಿ ಒಂದಾಗಲಿದೆ.

ಪ್ರತಿದಿನ ಫೋನ್‌ ಮಾಡಿ ಬೆತ್ತಲಾಗಲು ಹೇಳ್ತಿದ್ದ: ಪ್ರಜ್ವಲ್‌ ವಿರುದ್ಧ ನಾಲ್ಕನೇ ದೂರು

ಪ್ರಜ್ವಲ್ ರೇವಣ್ಣ (Prajwal Revanna Case) ವಿರುದ್ಧ ನಾಲ್ಕನೇ ಪ್ರಕರಣ ದಾಖಲಾಗಿದ್ದು, ಆರೋಪಿಯ ಕುರಿತು ಇನ್ನಷ್ಟು ವಿಕೃತಿಯ ದೂರುಗಳು ದಾಖಲಾಗಿವೆ. ಈ ಪ್ರಕರಣದಲ್ಲಿ ಮಾಜಿ ಶಾಸಕ ಪ್ರೀತಂ ಗೌಡ (Preetham Gowda) ಹೆಸರು ಕೂಡ ತಳುಕು ಹಾಕಿಕೊಂಡಿದೆ.

ಸಿಐಡಿ ಸೈಬರ್ ಕ್ರೈಂ (CID Cyber Crime) ಠಾಣೆಯಲ್ಲಿ ಸಂತ್ರಸ್ತೆ ನೀಡಿದ ದೂರಿನನ್ವಯ ಎಫ್ಐಆರ್ (FIR) ದಾಖಲಾಗಿದೆ. ಎಫ್ಐಆರ್‌ನಲ್ಲಿ ಸಂತ್ರಸ್ತೆಯಿಂದ ಉಲ್ಲೇಖವಾಗಿರುವ ಅಂಶಗಳು ಹೀಗಿವೆ: ಮಗನ ಶಾಲೆ‌ ವಿಚಾರಕ್ಕೆ ಪ್ರಜ್ವಲ್‌ನನ್ನು ಸಂತ್ರಸ್ತ ಮಹಿಳೆ ಭೇಟಿಯಾಗಿದ್ದರು. ಭೇಟಿ ವೇಳೆ ಸಂತ್ರಸ್ತೆಯಿಂದ ಪ್ರಜ್ವಲ್‌ ಫೋನ್‌ ನಂಬರ್ ಪಡೆದಿದ್ದ. ನಂಬರ್‌ ಪಡೆದು ವಿಡಿಯೊ ಕಾಲ್ ಮಾಡಿ ದಿನ ನಿತ್ಯ ಮಾತಾಡುತ್ತಿದ್ದ.

ನಂತರ ಮಹಿಳೆಗೆ ವಿಡಿಯೊ ಕಾಲ್ ಮಾಡಿ ವಿವಸ್ತ್ರವಾಗುವಂತೆ ಒತ್ತಾಯಿಸುತ್ತಿದ್ದ. ವಿವಸ್ತ್ರಗೊಂಡ ಮಹಿಳೆಯನ್ನು ನೋಡುತ್ತ ಹಸ್ತಮೈಥುನ ಮಾಡಿಕೊಳ್ಳುತ್ತಿದ್ದ. ವಿವಸ್ತ್ರವಾಗಲು ಒಪ್ಪದಿದ್ದಾಗ ವಿಡಿಯೊ ಸೇವ್ ಮಾಡಿಕೊಂಡಿರುವುದಾಗಿಯೂ, ವೈರಲ್ ಮಾಡುವುದಾಗಿಯೂ ಬೆದರಿಕೆ ಹಾಕಿದ್ದ ಎಂದು ಆರೋಪಿಸಲಾಗಿದೆ.

ನಂತರ ಏಕಾಏಕಿ ಸಾಮಾಜಿಕ ಜಾಲತಾಣದಲ್ಲಿ ಈ ಫೋಟೊ ವೈರಲ್ ಆಗಿರುವ ವಿಚಾರ ಸಂತ್ರಸ್ತೆ ಗಮನಕ್ಕೆ ಬಂದಿದೆ. ಈ ಕುರಿತು ಪ್ರಜ್ವಲ್‌ನನ್ನು ಸಂತ್ರಸ್ತ ಮಹಿಳೆ ಸಂಪರ್ಕ ಮಾಡಿದ್ದಾರೆ. ಆಗ ʼಸ್ಟೇ ತಂದಿದ್ದೇನೆ, ಏನೂ ಆಗಲ್ಲʼ ಎಂದಿದ್ದರಂತೆ. ಎರಡನೇ ಬಾರಿ ಫೋಟೊ ವೈರಲ್ ಆದಾಗ ಸಂತ್ರಸ್ತೆ ದೂರು ನೀಡಲು ಮುಂದಾಗಿದ್ದರು.

ವೈರಲ್ ಆದ ಕೆಲವು ಫೋಟೊಗಳನ್ನು ಕಿರಣ್, ಶರತ್ ಹಾಗೂ ಪ್ರೀತಂ ಗೌಡ ವೈರಲ್‌ ಮಾಡಿಸಿರುವ ಆರೋಪ ಇದೆ. ಈ ಹಿನ್ನೆಲೆಯಲ್ಲಿ ಒಟ್ಟು ನಾಲ್ಕು ಜನರ ಮೇಲೆ ದೂರು ನೀಡಲು ಮಹಿಳೆ ಮುಂದಾಗಿದ್ದಾರೆ. ಸದ್ಯ ಪ್ರಕರಣ ದಾಖಲಿಸಿಕೊಂಡಿರುವ ಎಸ್ಐಟಿ ಅಧಿಕಾರಿಗಳಿಂದ ತನಿಖೆ‌ ಚುರುಕುಗತಿ ಪಡೆದುಕೊಂಡಿದೆ.

ಇದನ್ನೂ ಓದಿ: Suraj Revanna Case: ಸೂರಜ್‌ ರೇವಣ್ಣಗೇ ʼಹಿಂದಿನಿಂದ ಇರಿದವರುʼ ಯಾರು?

Exit mobile version