Site icon Vistara News

Prajwal Revanna Case: ಪ್ರಜ್ವಲ್‌ ಪ್ರತ್ಯಕ್ಷವಾದ ಬೆನ್ನಲ್ಲೇ ನಿರೀಕ್ಷಣಾ ಜಾಮೀನಿಗೆ ಭವಾನಿ ರೇವಣ್ಣ ಅರ್ಜಿ

Prajwal Revanna Case

ಬೆಂಗಳೂರು: ವಿದೇಶದಲ್ಲಿ ತಲೆಮರೆಸಿಕೊಂಡಿರುವ ಪ್ರಜ್ವಲ್‌ ರೇವಣ್ಣ, ವಿಚಾರಣೆಗೆ ಹಾಜರಾಗುವೆ ಎಂದು ವಿಡಿಯೊ ಮಾಡಿ ಹರಿಬಿಟ್ಟ ಬೆನ್ನಲ್ಲೇ ಅವರ ತಾಯಿ ಭವಾನಿ ರೇವಣ್ಣ ಅವರು ನಿರೀಕ್ಷಣಾ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದಾರೆ. ಲೈಂಗಿಕ ದೌರ್ಜನ್ಯ ಸಂತ್ರಸ್ತೆ ಕಿಡ್ನ್ಯಾಪ್‌ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಬೆಂಗಳೂರಿನ ಸೆಷನ್ಸ್‌ ಕೋರ್ಟ್‌ಗೆ ಅವರು ಅರ್ಜಿ ಸಲ್ಲಿಸಿದ್ದಾರೆ.

ಕೆ.ಆರ್‌.ನಗರದ ಸಂತ್ರಸ್ತೆ ಕಿಡ್ನ್ಯಾಪ್‌ ಕೇಸ್‌ನಲ್ಲಿ ಮಾಜಿ ಸಚಿವ ಎಚ್‌.ಡಿ. ರೇವಣ್ಣ ಹಾಗೂ ಭವಾನಿ ರೇವಣ್ಣ ವಿರುದ್ಧ ಪ್ರಕರಣ ದಾಖಲಾಗಿತ್ತು. ಲೈಂಗಿಕ ದೌರ್ಜನ್ಯ ಮತ್ತು ಕಿಡ್ನ್ಯಾಪ್‌ ಕೇಸ್‌ನಲ್ಲಿ ಈಗಾಗಲೇ ಮಾಜಿ ಸಚಿವ ರೇವಣ್ಣ ಅವರಿಗೆ ಬೇಲ್‌ ಸಿಕ್ಕಿದೆ. ಈ ನಡುವೆ ಹಾಸನ ಪೆನ್‌ಡ್ರೈವ್‌ ಪ್ರಕರಣದಲ್ಲಿ ಪ್ರಮುಖ ಆರೋಪಿಯಾದ ಪ್ರಜ್ವಲ್‌ ರೇವಣ್ಣ ಅವರು ವಿದೇಶದಿಂದ ಮೇ 31ರಂದು ಬೆಂಗಳೂರಿಗೆ ಆಗಮಿಸುವುದಾಗಿ ವಿಡಿಯೊ ಹೇಳಿಕೆ ಬಿಡುಗಡೆ ಮಾಡಿದ ಬೆನ್ನಲ್ಲೇ ತಾಯಿ ಭವಾನಿ ರೇವಣ್ಣ ಅವರು ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾರೆ.

ಇತ್ತೀಚೆಗೆ ಚಾಮರಾಜನಗರದ ಸಂತ್ರಸ್ತೆಯ ಕಿಡ್ನ್ಯಾಪ್‌ ಪ್ರಕರಣಕ್ಕೆ ಸಂಬಂಧಿಸಿ ರೇವಣ್ಣ ಅವರನ್ನು ಬಂಧಿಸಿ ಪರಪ್ಪನ ಅಗ್ರಹಾರ ಜೈಲಿಗೆ ಕಳಿಸಲಾಗಿತ್ತು. ಆರು ದಿನಗಳ ನಿರಂತರ ಕಾನೂನು ಸಮರದ ಬಳಿಕ ಅವರಿಗೆ ಮೇ 13ರಂದು ಜಾಮೀನು ದೊರೆತಿತ್ತು. ನಂತರ ಹೊಳೆನರಸೀಪುರ ಠಾಣೆಯಲ್ಲಿ ದಾಖಲಾಗಿದ್ದ ಲೈಂಗಿಕ ದೌರ್ಜನ್ಯ (physical abuse) ಪ್ರಕರಣದಲ್ಲೂ ಮಾಜಿ ಸಚಿವ ಎಚ್‌ಡಿ ರೇವಣ್ಣ (HD Revanna case) ಅವರಿಗೆ ಮೇ 20ರಂದು ಜಾಮೀನು (Bail) ಮಂಜೂರಾಗಿತ್ತು. ಈ ನಡುವೆ ವಿಚಾರಣೆಗೆ ಹಾಜರಾಗುವಂತೆ ಭವಾನಿ ರೇವಣ್ಣ ಅವರಿಗೂ ನೋಟಿಸ್‌ ನೀಡಲಾಗಿತ್ತು.

ಇದನ್ನೂ ಓದಿ | Prajwal Revanna Case: ವಿಚಾರಣೆಗೆ ಬರುವ ಪ್ರಜ್ವಲ್‌ ನಿರ್ಧಾರ ಸ್ವಾಗತಿಸುವೆ ಎಂದ ಸಚಿವ ಪರಮೇಶ್ವರ್‌

ಪ್ರಜ್ವಲ್‌ ರೇವಣ್ಣ (Prajwal Revanna Case) ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕೆ.ಆರ್.‌ ನಗರದ ಸಂತ್ರಸ್ತೆಯನ್ನು ಅಪಹರಣ ಮಾಡಿದ ಪ್ರಕರಣದಲ್ಲಿ ಕುಮ್ಮಕ್ಕು ಕೊಟ್ಟ ಆರೋಪವನ್ನು ಭವಾನಿ ರೇವಣ್ಣ ಹೊತ್ತಿದ್ದಾರೆ. ಮೊದಲ ನೋಟಿಸ್‌ಗೆ ಉತ್ತರಿಸದ ಹಿನ್ನೆಲೆಯಲ್ಲಿ ಇತ್ತೀಚೆಗೆ ಎರಡನೇ ನೋಟಿಸ್ ಜಾರಿ ಮಾಡಲಾಗಿತ್ತು. ಆದರೆ, ಭವಾನಿ ಅವರು ವಿಚಾರಣೆಗೆ ಹಾಜರಾಗದೆ ತಪ್ಪಿಸಿಕೊಳ್ಳುತ್ತಿದ್ದರು. ಇದೀಗ ಮಗ ಪ್ರಜ್ವಲ್‌ ಪ್ರಜ್ವಲ್‌ ಪ್ರತ್ಯಕ್ಷವಾದ ಹಿನ್ನೆಲೆಯಲ್ಲಿ ನಿರೀಕ್ಷಣಾ ಜಾಮೀನು ಕೋರಿ ಭವಾನಿ ರೇವಣ್ಣ ಅರ್ಜಿ ಸಲ್ಲಿಸಿದ್ದಾರೆ.

ಯಾವ ನಿಯಮದಡಿ ನೋಟಿಸ್ ನೀಡಿದ್ದಾರೆಂದು ಎಸ್ಐಟಿ ತಿಳಿಸಿಲ್ಲ. ಹೀಗಾಗಿ ಭವಾನಿ ರೇವಣ್ಣಗೂ ಬಂಧನದ ಭೀತಿ ಇದೆ. ಹೀಗಾಗಿ ನಿರೀಕ್ಷಣಾ ಜಾಮೀನು ನೀಡಲು ವಕೀಲರು ಮನವಿ ಮಾಡಿದ್ದಾರೆ. ಆಕ್ಷೇಪಣೆ ಸಲ್ಲಿಸುವಂತೆ ಎಸ್ಐಟಿ ಪೊಲೀಸರಿಗೆ ಕೋರ್ಟ್‌ನಿಂದ ನೋಟಿಸ್ ನೀಡಲಾಗಿದೆ. ನಾಳೆಗೆ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆಯಾಗಿದೆ ಎಂದು ತಿಳಿದುಬಂದಿದೆ.

ಮೇ 31ಕ್ಕೆ ಪ್ರಜ್ವಲ್‌ ರೇವಣ್ಣ ಎಸ್‌ಐಟಿ ವಿಚಾರಣೆ ಆಗಮನ

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ವಿದೇಶಕ್ಕೆ ಪರಾರಿಯಾಗಿರುವ ಪ್ರಜ್ವಲ್‌ ರೇವಣ್ಣ (Prajwal Revanna Video) ಭಾರತಕ್ಕೆ ಬರುವುದಾಗಿ ಘೋಷಣೆ ಮಾಡಿದ್ದಾರೆ. ಈ ಕುರಿತು ಪ್ರಜ್ವಲ್‌ ರೇವಣ್ಣ ಅವರು ಹೊಸ ವಿಡಿಯೊ ಬಿಡುಗಡೆ ಮಾಡಿದ್ದು, “ಮೇ 31ರಂದು ಭಾರತಕ್ಕೆ ಬಂದು ವಿಚಾರಣೆಗೆ ಹಾಜರಾಗುವುದಾಗಿ ತಿಳಿಸಿದ್ದಾರೆ.

ವಿಡಿಯೊದಲ್ಲಿ ಏನಿದೆ?

“ನಾನು ಎಲ್ಲಿದ್ದೇನೆ ಎಂಬ ಮಾಹಿತಿ ನೀಡಲು ಬಂದಿದ್ದೇನೆ. ನಾನು ಎಲ್ಲಿಯೂ ಓಡಿ ಹೋಗಿಲ್ಲ. ನನ್ನ ರಾಜಕೀಯ ಬೆಳವಣಿಗೆ ಸಹಿಸಲಾಗದೆ ಷಡ್ಯಂತ್ರ ರೂಪಿಸಲಾಗಿದೆ. ನನ್ನ ವಿರುದ್ಧ ಪಿತೂರಿ ಮಾಡಲಾಗಿದೆ. ಕೆಲವು ಶಕ್ತಿಗಳು ಒಟ್ಟಾಗಿ ನನ್ನ ವಿರುದ್ಧ ಪಿತೂರಿ ನಡೆಸಿವೆ. ಇಷ್ಟಾದರೂ ನಾನು ನನ್ನ ತಾತ, ಜೆಡಿಎಸ್‌ ಕಾರ್ಯಕರ್ತರಿಗೆ ಕ್ಷಮೆಯಾಚಿಸುತ್ತೇನೆ. ನಾನು ಮೇ 31ರಂದು ಬೆಳಗ್ಗೆ 10 ಗಂಟೆಗೆ ಭಾರತಕ್ಕೆ ಬಂದು ಎಸ್‌ಐಟಿ ಎದುರು ವಿಚಾರಣೆಗೆ ಹಾಜರಾಗುತ್ತೇನೆ. ವಿದೇಶ ಪ್ರವಾಸವು ಮೊದಲೇ ನಿಗದಿಯಾಗಿತ್ತು. ಆದರೂ, ನಾನು ಭಾರತಕ್ಕೆ ಬಂದು ವಿಚಾರಣೆ ಎದುರಿಸುತ್ತೇನೆ” ಎಂಬುದಾಗಿ ಪ್ರಜ್ವಲ್‌ ರೇವಣ್ಣ ವಿಡಿಯೊದಲ್ಲಿ ತಿಳಿಸಿದ್ದಾರೆ.

“ನಾನು ಇದೇ ಶುಕ್ರವಾರ ಕರ್ನಾಟಕಕ್ಕೆ ಆಗಮಿಸಿ, ಎಸ್‌ಐಟಿ ತನಿಖೆಗೆ ಸಹಕಾರ ನೀಡುತ್ತೇನೆ. ನನಗೆ ಕಾನೂನಿನ ಮೇಲೆ ಅಪಾರ ಗೌರವವಿದೆ. ನನ್ನ ವಿರುದ್ಧ ಮಾಡಿದ ಆರೋಪಗಳನ್ನು ಕೇಳಿ ನನಗೆ ಶಾಕ್‌ ಆಯಿತು. ಇದೇ ಕಾರಣಕ್ಕಾಗಿ ನಾನು ಕೆಲ ದಿನಗಳಿಂದ ಐಸೋಲೇಷನ್‌ನಲ್ಲಿ ಇದ್ದೆ. ವಿದೇಶ ಪ್ರವಾಸವು ಮೊದಲೇ ನಿಗದಿಯಾಗಿತ್ತು. ನಾನು ವಿದೇಶಕ್ಕೆ ಬಂದ ಬಳಿಕ ಪ್ರಕರಣ ತಿಳಿಯಿತು. ನನ್ನ ವಿರುದ್ಧ ರಾಹುಲ್‌ ಗಾಂಧಿ ಸೇರಿ ಎಲ್ಲರೂ ವೇದಿಕೆ ಮೇಲೆಯೇ ಹೇಳಿಕೆಗಳನ್ನು ಕೊಟ್ಟರು. ಆ ಮೂಲಕ ರಾಜಕೀಯ ಪಿತೂರಿ ನಡೆಸಿದರು. ಆದರೂ, ನಾನು ರಾಜ್ಯಕ್ಕೆ ಆಗಮಿಸಿ ತನಿಖೆಗೆ ಸಹಕಾರ ನೀಡುತ್ತೇನೆ. ನಾನು ಈ ಪ್ರಕರಣದಿಂದ ಆರೋಪಮುಕ್ತನಾಗಿ ಹೊರಬರುತ್ತೇನೆ ಎಂಬ ವಿಶ್ವಾಸವಿದೆ” ಎಂಬುದಾಗಿ ಹೇಳಿದ್ದಾರೆ.

ಲೈಂಗಿಕ ದೌರ್ಜನ್ಯ ಕೇಸ್‌ನಲ್ಲಿ ಪ್ರಮುಖ ಆರೋಪಿಯಾಗಿರುವ ಪ್ರಜ್ವಲ್‌ ರೇವಣ್ಣ ಅವರ ಡಿಪ್ಲೊಮ್ಯಾಟಿಕ್ ಪಾಸ್‌ಪೋರ್ಟ್‌ಅನ್ನು ರದ್ದುಗೊಳಿಸಬೇಕು ಎಂದು ಸಿದ್ದರಾಮಯ್ಯ ಅವರು ಎರಡು ಬಾರಿ ಪತ್ರ ಬರೆದಿದ್ದಾರೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರವು ಡಿಪ್ಲೊಮ್ಯಾಟಿಕ್ ಪಾಸ್‌ಪೋರ್ಟ್‌ ರದ್ದುಗೊಳಿಸುವ ಪ್ರಕ್ರಿಯೆ ಆರಂಭಿಸಿದೆ. ಇನ್ನು, ಇದರ ಭಾಗವಾಗಿಯೇ ಕೇಂದ್ರ ಸರ್ಕಾರವು ಪ್ರತಿಕ್ರಿಯೆ ಕೋರಿ ಪ್ರಜ್ವಲ್‌ ರೇವಣ್ಣಗೆ ಶೋಕಾಸ್‌ ನೋಟಿಸ್‌ ಜಾರಿಗೊಳಿಸಿದೆ. ಶೋಕಾಸ್‌ ನೋಟಿಸ್‌ಗೂ ಉತ್ತರ ನೀಡದಿದ್ದರೆ, ಕೇಂದ್ರ ಸರ್ಕಾರವು ಪಾಸ್‌ಪೋರ್ಟ್‌ ರದ್ದುಗೊಳಿಸಲಿದೆ ಎಂದು ಹೇಳಲಾಗುತ್ತಿತ್ತು. ಇದರ ಬೆನ್ನಲ್ಲೇ ಪ್ರಜ್ವಲ್‌ ರೇವಣ್ಣ ಅವರು ವಿಡಿಯೊ ಮೂಲಕ ಸ್ಪಷ್ಟನೆ ನೀಡಿದ್ದಾರೆ.

ಇದನ್ನೂ ಓದಿ: Prajwal Revanna Case: ಪ್ರಜ್ವಲ್‌ ರೇವಣ್ಣ ಅಜ್ಞಾತವಾಸಕ್ಕೆ ಒಂದು ತಿಂಗಳು, ಎಲ್ಲಿದ್ದೀಯಪ್ಪಾ ಪ್ರಜ್ವಲ್?

ಹಲವು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ, ಲೈಂಗಿಕ ದೌರ್ಜನ್ಯ ಸಂತ್ರಸ್ತೆಯ ಅಪಹರಣ ಸೇರಿ ಹಲವು ಪ್ರಕರಣಗಳಲ್ಲಿ ಪ್ರಜ್ವಲ್‌ ರೇವಣ್ಣ ಪ್ರಮುಖ ಆರೋಪಿಯಾಗಿದ್ದಾರೆ. ಸಂತ್ರಸ್ತೆಯ ಅಪಹರಣ ಪ್ರಕರಣದಲ್ಲಿ ಪ್ರಜ್ವಲ್‌ ರೇವಣ್ಣ ಅವರ ತಂದೆ ಎಚ್‌.ಡಿ.ರೇವಣ್ಣ ಅವರು ಕೂಡ ಜೈಲುವಾಸ ಅನುಭವಿಸಿ, ಜಾಮೀನಿನ ಮೇಲೆ ಹೊರಬಂದಿದ್ದಾರೆ. ಇಷ್ಟಾದರೂ, ಪ್ರಜ್ವಲ್‌ ರೇವಣ್ಣ ಭಾರತಕ್ಕೆ ಬರದ ಕಾರಣ ಅವರ ತಾತ ಎಚ್‌.ಡಿ.ದೇವೇಗೌಡ ಅವರು ಬಹಿರಂಗ ಪತ್ರ ಬರೆದಿದ್ದರು. ನನ್ನ ಮೇಲೆ ಗೌರವ ಇದ್ದರೆ ವಾಪಸ್‌ ಬಾ ಎಂದಿದ್ದರು.

Exit mobile version