Site icon Vistara News

Prajwal Revanna Case: ಪ್ರಜ್ವಲ್ ರೇವಣ್ಣಗೆ ಸಂಕಷ್ಟ; ಅರೆಸ್ಟ್ ವಾರಂಟ್ ನೀಡಿದ ಕೋರ್ಟ್‌

Prajwal Revanna Case

Why Has Prajwal Revanna Returned India On May 31

ಬೆಂಗಳೂರು: ಪ್ರಜ್ವಲ್ ರೇವಣ್ಣಗೆ ಅಸಲಿ ಸಂಕಷ್ಟ ಶುರುವಾಗಿದೆ. ವಿದೇಶದಲ್ಲಿರುವ ಪ್ರಜ್ವಲ್‌ ಸೆರೆಗೆ ಎಸ್‌ಐಟಿ ಸರ್ಜಿಕಲ್ ಸ್ಟ್ರೈಕ್‌ ಆರಂಭಿಸಿದ್ದು, ಇದೀಗ ಹೊಳೆನರಸೀಪುರ ಕೇಸ್‌ನಲ್ಲಿ (Prajwal Revanna Case) ಪ್ರಜ್ವಲ್‌ ಬಂಧನಕ್ಕೆ ಅರೆಸ್ಟ್ ವಾರಂಟ್ ಪಡೆದಿದೆ. ಜತೆಗೆ ಪಾಸ್‌ಪೋರ್ಟ್ ಕ್ಯಾನ್ಸಲ್ ಮಾಡಲು ಕೂಡ ಕೋರ್ಟ್ ಅನುಮತಿ ನೀಡಿದೆ.

ನಗರದ 42ನೇ ಎಸಿಎಂಎಂ ಕೋರ್ಟ್‌, ಪ್ರಜ್ವಲ್ ರೇವಣ್ಣ ವಿರುದ್ಧ ಅರೆಸ್ಟ್‌ ವಾರಂಟ್‌ ಜಾರಿ ಮಾಡಿದೆ. ಪ್ರಜ್ವಲ್ ರೇವಣ್ಣ ವಿರುದ್ಧ ಹೊರಡಿಸಿದ್ದ ನೋಟಿಸ್‌ಗಳ ಬಗ್ಗೆ ಕೋರ್ಟ್‌ ಮಾಹಿತಿ ಕೇಳಿತ್ತು. ಈ ವೇಳೆ ಲುಕ್‌ ಔಟ್ ನೋಟಿಸ್, ಬ್ಲೂ ಕಾರ್ನರ್ ನೋಟಿಸ್ ನೀಡಿರುವ ಬಗ್ಗೆ ಮಾಹಿತಿ ನೀಡಿದ್ದ ಎಸ್‌ಐಟಿ, ಬಂಧನಕ್ಕೆ ಚಾರ್ಜ್ ಶೀಟ್ ಅವಶ್ಯಕತೆ ಇಲ್ಲ ಎಂದು ಕೋರ್ಟ್‌ಗೆ ಮನವರಿಕೆ ಮಾಡಿತ್ತು. ಹೀಗಾಗಿ ಕೋರ್ಟ್‌ ಅರೆಸ್ಟ್‌ ವಾರಂಟ್‌ ಜಾರಿ ಮಾಡಿದೆ.

ಸಿಬಿಐ ಮೂಲಕ ರೆಡ್ ಕಾರ್ನರ್ ನೋಟಿಸ್

ವಿದೇಶದಲ್ಲಿರುವ ಪ್ರಜ್ವಲ್‌ ರೇವಣ್ಣಗೆ ವಿಚಾರಣೆಗೆ ಹಾಜರಾಗಲು ಈಗಾಗಲೇ ಎಸ್‌ಐಟಿ ಲುಕ್‌ ಔಟ್‌ ನೋಟಿಸ್‌ ಹಾಗೂ ಬ್ಲೂ ಕಾರ್ನರ್‌ ನೋಟಿಸ್‌ ನೀಡಿತ್ತು. ಇದೀಗ ಅರೆಸ್ಟ್‌ ವಾರಂಟ್‌ ಲಭಿಸಿರುವುದರಿಂದ ಸಿಬಿಐ ಮೂಲಕ ರೆಡ್ ಕಾರ್ನರ್ ನೋಟಿಸ್ ಹೊರಡಿಸಲು ಎಸ್‌ಐಟಿ ಸಿದ್ಧತೆ ನಡೆಸುತ್ತಿದೆ. ರೆಡ್‌ ಕಾರ್ನರ್‌ ನೋಟಿಸ್‌ ಬಳಿಕ ಪ್ರಜ್ವಲ್‌ ಪಾಸ್‌ಪೋರ್ಟ್‌ ರದ್ದು ಆಗಲಿದ್ದು, ಇದರಿಂದ ಬಂಧನಕ್ಕೆ ಸಹಕಾರಿಯಾಗಲಿದೆ.

ರೆಡ್ ಕಾರ್ನರ್ ನೋಟಿಸ್ ಎನ್ನುವುದು ಹಸ್ತಾಂತರ, ಶರಣಾಗತಿ ಅಥವಾ ಅಂತಹುದ್ದೇ ಕಾನೂನು ಕ್ರಮಕ್ಕೆ ಬಾಕಿ ಇರುವ ವ್ಯಕ್ತಿಯನ್ನು ಪತ್ತೆಹಚ್ಚಲು ಮತ್ತು ತಾತ್ಕಾಲಿಕವಾಗಿ ಬಂಧಿಸುವುದಕ್ಕೆ ವಿಶ್ವಾದ್ಯಂತ ಕಾನೂನು ಜಾರಿಗೊಳಿಸಲು ಮಾಡುವ ವಿನಂತಿಯಾಗಿದೆ.

ಅಶ್ಲೀಲ ವಿಡಿಯೊ ವೈರಲ್ ಕೇಸ್‌; ವಕೀಲ ದೇವರಾಜೇಗೌಡ ಎಸ್‌ಐಟಿ ಕಸ್ಟಡಿ ಅವಧಿ 2 ವಿಸ್ತರಣೆ

Prajwal Revanna Case obscene video goes viral Advocate Devarajegowda SIT custody extended by 2 days

ಹಾಸನ: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೊ ವೈರಲ್ ಪ್ರಕರಣದಲ್ಲಿ (Prajwal Revanna Case) ಎಂಟನೇ ಆರೋಪಿಯಾಗಿರುವ ವಕೀಲ ದೇವರಾಜೇಗೌಡ (Devarajegowda) ಅವರನ್ನೂ ಮತ್ತೂ ಎರಡು ದಿನ ಪೊಲೀಸ್‌ ಕಸ್ಟಡಿಗೆ ನೀಡಿ 5ನೇ ಅಧಿಕ ಸಿವಿಲ್ ನ್ಯಾಯಾಲಯ ಮತ್ತು ಜೆಎಂಎಫ್‌ಸಿ ನ್ಯಾಯಾಲಯವು ಆದೇಶಿಸಿದೆ.

ಏಪ್ರಿಲ್ 23 ರಂದು ಹಾಸನ ನಗರದ ಸೈಬರ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಎಫ್‌ಐಆರ್‌ನಲ್ಲಿ 8ನೇ ಆರೋಪಿಯಾಗಿ ದೇವರಾಜೇಗೌಡ ಅವರ ಹೆಸರು ಸೇರ್ಪಡೆ ಮಾಡಲಾಗಿದೆ. ಹೀಗಾಗಿ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ದೇವರಾಜೇಗೌಡ ಅವರನ್ನು ವಿಚಾರಣೆಗಾಗಿ ಶುಕ್ರವಾರ ಒಂದು ದಿನದ ಮಟ್ಟಿಗೆ ಎಸ್‌ಐಟಿ ವಶಕ್ಕೆ ಪಡೆಯಲಾಗಿತ್ತು.

ದೇವರಾಜೇಗೌಡ ಅವರ ಕಸ್ಟಡಿ ಅವಧಿ ಮುಕ್ತಾಯವಾಗಿದ್ದರಿಂದ ಪುನಃ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದ ಎಸ್‌ಐಟಿ ಅಧಿಕಾರಿಗಳು ಮತ್ತೆ ಎರಡು ದಿನ ಕಸ್ಟಡಿಗೆ ಕೇಳಿದ್ದರು. ಹೀಗಾಗಿ ಮೇ 20ರ ಸಂಜೆ ಐದು ಗಂಟೆಗೆ ಕೋರ್ಟ್ ಮುಂದೆ ಹಾಜರು ಪಡಿಸುವಂತೆ ನ್ಯಾಯಾಲಯ ಸೂಚಿಸಿ, ಎರಡು ದಿನ ಕಸ್ಟಡಿಯನ್ನು ಮುಂದುವರಿಸಿ ಆದೇಶಿಸಿದೆ.
ಎರಡೆರಡು ಕೇಸ್‌

ಅತ್ಯಾಚಾರ ಹಾಗೂ ಲೈಂಗಿಕ ದೌರ್ಜನ್ಯ (physical Abuse) ಕೇಸ್‌ ಆರೋಪಿ ವಕೀಲ ದೇವರಾಜೇಗೌಡ (Devarajegowda) ಅವರ ಪೊಲೀಸ್ ಕಸ್ಟಡಿ ಅಂತ್ಯವಾಗಿದ್ದರಿಂದ ಅವರನ್ನು ಶುಕ್ರವಾರ ನ್ಯಾಯಾಂಗ ಬಂಧನಕ್ಕೆ ನೀಡಲಾಗಿತ್ತು. ಮೇ 14 ರಂದು ಪೊಲೀಸ್ ಕಸ್ಟಡಿಗೆ ಪಡೆದುಕೊಂಡಿದ್ದ ಹೊಳೆನರಸೀಪುರ ನಗರ ಪೊಲೀಸರು, ಗುರುವಾರವೂ ಒಂದು ದಿನ ಕಸ್ಟಡಿಗೆ ಪಡೆದುಕೊಂಡಿದ್ದರು. ಶುಕ್ರವಾರ ಕೋರ್ಟ್‌ ಮುಂದೆ ಹಾಜರುಪಡಿಸಿದ ಹಿನ್ನೆಲೆಯಲ್ಲಿ ಅವರಿಗೆ ನ್ಯಾಯಾಂಗ ಬಂಧನವಿರಿಸಿ ಆದೇಶಿಸಲಾಗಿತ್ತು. ಸದ್ಯ ನ್ಯಾಯಾಂಗ ಬಂಧನದಲ್ಲಿದ್ದ ವಕೀಲರನ್ನು ಪೆನ್‌ಡ್ರೈವ್‌ ಪ್ರಕರಣದಲ್ಲಿ ಶುಕ್ರವಾರ ಎಸ್‌ಐಟಿ ಕಸ್ಟಡಿಗೆ ಪಡೆದುಕೊಂಡಿತ್ತು. ಈಗ ಮತ್ತೆ ಎರಡು ದಿನ ಕಸ್ಟಡಿ ಅವಧಿಯನ್ನು ವಿಸ್ತರಣೆ ಮಾಡಲಾಗಿದೆ.

ಪ್ರಜ್ವಲ್‌ ರೇವಣ್ಣ ಪ್ರಕರಣದಲ್ಲಿ ಸಾಕ್ಷ್ಯ ಬಿಡುಗಡೆಗೆ ಮುಂದಾಗಿದ್ದ ದೇವರಾಜೇಗೌಡ ಅವರು ಬೇರೆ ಕೇಸ್‌ನಲ್ಲಿ ಬಂಧನವಾಗಿದ್ದಾರೆ. ಒಟ್ಟು ನಾಲ್ಕು ದಿನ ಪೊಲೀಸ್ ಕಸ್ಟಡಿಯಲ್ಲಿದ್ದ ದೇವರಾಜೇಗೌಡ ಅವರನ್ನು ಮತ್ತೆ ನ್ಯಾಯಾಂಗ ಬಂಧನಕ್ಕೆ ನೀಡಲಾಗಿತ್ತು.

ದೇವರಾಜೇಗೌಡ ಮೇ 11ರಂದು ಬಂಧನಕ್ಕೆ ಒಳಗಾಗಿದ್ದರು. ಇವರ ಮೇಲೆ ಲೈಂಗಿಕ ದೌರ್ಜನ್ಯ, ಕಿರುಕುಳ ಆರೋಪಗಳನ್ನು ಹೊರಿಸಲಾಗಿದೆ. ಹೀಗಾಗಿ ಹೆಚ್ಚಿನ ವಿಚಾರಣೆಗಾಗಿ ಹೊಳೆನರಸೀಪುರ ನಗರ ಠಾಣೆ ಪೊಲೀಸರು ಅವರನ್ನು ಕಸ್ಟಡಿಗೆ ಪಡೆದುಕೊಂಡಿದ್ದರು. ಹೊಳೆನರಸೀಪುರ, ಹಾಸನ ಸೇರಿ ಇತರ ಅಗತ್ಯ ಸ್ಥಳಗಳಿಗೆ ಕರೆದೊಯ್ದು ವಿಚಾರಣೆಯನ್ನು ಕೈಗೊಂಡಿದ್ದರು.
ಸರ್ಕಾರದ ವಿರುದ್ಧ ತೊಡೆ ತಟ್ಟಿದ್ದ ದೇವರಾಜೇಗೌಡ

ವಕೀಲ ದೇವರಾಜೇಗೌಡ ಬಂಧನವಾಗಿರುವುದು ಲೈಂಗಿಕ ದೌರ್ಜನ್ಯ ಕೇಸ್‌ನಲ್ಲಾದರೂ ಹಾಸನ ಪೆನ್ ಡ್ರೈವ್ ಪ್ರಕರಣಕ್ಕೇ ತಳುಕು ಹಾಕಿಕೊಂಡಿದೆ. ಈಗಾಗಲೇ ಮಾಜಿ ಸಂಸದ ಶಿವರಾಮೇಗೌಡ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್‌ ವಿರುದ್ಧ ಗಂಭೀರ ಆರೋಪ ಮಾಡಿದ್ದಲ್ಲದೆ, ಅವರ ಜತೆಗಿನ ಮಾತುಕತೆ ಎನ್ನಲಾದ ಆಡಿಯೊವನ್ನು ಬಿಡುಗಡೆ ಮಾಡಿದ್ದರು. ಇದಲ್ಲದೆ, ಸಾಕಷ್ಟು ವಿಡಿಯೊಗಳು, ಸಾಕ್ಷಿಗಳು ಸಹ ತಮ್ಮ ಬಳಿ ಇದೆ ಎಂದು ಹೇಳಿಕೊಂಡಿದ್ದರು. ಸಾಕ್ಷ್ಯಗಳನ್ನು ಮುಂದಿನ ದಿನಗಳಲ್ಲಿ ಸಿಬಿಐ ಮುಂದೆ ಇಡುತ್ತೇನೆ ಎಂದು ಸಹ ಸುದ್ದಿಗೋಷ್ಠಿ ನಡೆಸಿ ನೇರವಾಗಿ ರಾಜ್ಯ ಸರ್ಕಾರದ ವಿರುದ್ಧ ಸವಾಲು ಹಾಕಿದ್ದರು. ಆದರೆ, ಹೊಳೆನರಸೀಪುರ ಠಾಣೆಯಲ್ಲಿ ದಾಖಲಾಗಿದ್ದ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌ನಲ್ಲಿ ಅವರನ್ನು ಬಂಧಿಸಲಾಗಿದೆ.

Exit mobile version