Site icon Vistara News

Prajwal Revanna Case : ಬಿಜೆಪಿ ಮುಖಂಡ ದೇವರಾಜೇಗೌಡ ವಿರುದ್ಧ ಲೈಂಗಿಕ ಕಿರುಕುಳ ಕೇಸ್​ ದಾಖಲು

Prajwal Revanna Case

ಬೆಂಗಳೂರು: ದೇಶಾದ್ಯಂತ ಸಂಚಲನ ಮೂಡಿಸಿದ್ದ ಪ್ರಜ್ವಲ್​ ರೇವಣ ಪೆನ್ ಡ್ರೈವ್ ಪ್ರಕರಣದಲ್ಲಿ (Prajwal Revanna Case) ಹೋರಾಟ ನಡೆಸುತ್ತಿದ್ದ ವಕೀಲ ದೇವರಾಜೇಗೌಡ (Devaraje Gowda) ವಿರುದ್ದ ಎಫ್ಐಆರ್ ದಾಖಲಾಗಿದೆ. ಮಹಿಳೆಯೊಬ್ಬಳಿಗೆ ಲೈಂಗಿಕ ದೌರ್ಜನ್ಯ ನೀಡಿದ ಆರೋಪದಡಿ ಎಫ್ಐಆರ್ ದಾಖಲಾಗಿದೆ. ಹತ್ತು ತಿಂಗಳ ಹಿಂದೆ ಪರಿಚಯವಾಗಿದ್ದ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ಪತಿಯು ಮಾಲೀಕತ್ವದ ಸೈಟ್ ವಿಚಾರವಾಗಿ ದೇವರಾಜೇಗೌಡ ಅವರನ್ನು ಸಂತ್ರಸ್ತ ಮಹಿಳೆ ಭೇಟಿಯಾಗಿದ್ದರು. ಆ ಪರಿಚಯವನ್ನು ದುರ್ಬಳಕೆ ಮಾಡಿಕೊಂಡು ವಾಟ್ಸ್​ಆ್ಯಪ್​ ಕರೆ ಮಾಡಿ ಕಿರುಕುಳ ನೀಡುತ್ತಿದ್ದ ಆರೋಪ ದೇವರಾಜ್ ವಿರುದ್ಧ ಕೇಳಿ ಬಂದಿದೆ. ಅದೇ ರೀತಿ ಬಳಿಕ ಲೈಂಗಿಕವಾಗಿ ಬಳಸಿಕೊಂಡಿರುವ ಆರೋಪವೂ ಕೇಳಿ ಬಂದಿದೆ.

ಮಹಿಳೆಗೆ ಫೋನ್ ಮಾಡಿ ತಾವು ಜೊತೆಯಲ್ಲಿರುವ ವಿಡಿಯೊವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡೋದಾಗಿ ಬೆದರಿಕೆ ಹಾಕಿದ ಆರೋಪವೂ ದಾಖಲಾಗಿದೆ. ಅದೇ ರೀತಿ ಮಹಿಳೆಗೆ ವಿಡಿಯೋ ಕಾಲ್‌ ಮಾಡಿ‌ ಖಾಸಗಿ ಅಂಗಗಳನ್ನು ಪ್ರದರ್ಶನದ ಮಾಡಿರುವ ಆರೋಪವೂ ದಾಖಲಾಗಿದೆ.

ಇದನ್ನೂ ಓದಿ: Prajwal Revanna Case: ಈ ಸರ್ಕಾರವನ್ನು ಹಾಸನಾಂಬೆ ಧ್ವಂಸ ಮಾಡಲಿದ್ದಾಳೆ: ಎಚ್‌ಡಿಕೆ ಶಾಪ

ತಾನು ಹೇಳಿದ ಹಾಗೆ ಕೇಳಬೇಕು.ಇಲ್ಲದೇ ಹೋದರೆ ಪತಿಯ ಜೀವಕ್ಕೆ ಪಾಯ ತಂದೊಡ್ಡುವುದಾಗಿ ದೇವರಾಜೇಗೌಡ ಬೆದರಿಕೆ ಹಾಕಿದ್ದ ಎನ್ನಲಾಗಿದೆ. ತನ್ನ ಬೆಂಬಲಿಗರನ್ನು ಕಳುಹಿಸಿ ಜೀವ ಬೆದರಿಕೆ ಹಾಕಿದ ಅರೋಪವೂ ಕೇಳಿ ಬಂದಿದೆ. ಹಲವಾರು ಆರೋಪಗಳ ಮೇಲೆ ದೂರು ದಾಖಲಾಗಿದೆ. ಹೊಳೆನರಸೀಪುರ ಟೌನ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

ರೇವಣ್ಣ ಜಾಮೀನು ಅರ್ಜಿ ಸೋಮವಾರಕ್ಕೆ

ಬೆಂಗಳೂರು: ಪ್ರಜ್ವಲ್‌ ರೇವಣ್ಣ (Prajwal Revanna Case) ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮೈಸೂರಿನ ಕೆ.ಆರ್.‌ ನಗರದ ಸಂತ್ರಸ್ತ ಮಹಿಳೆಯನ್ನು ಕಿಡ್ನ್ಯಾಪ್‌ ಮಾಡಿದ ಆರೋಪದ ಮೇಲೆ ಬಂಧಿತರಾಗಿರುವ ಮಾಜಿ ಸಚಿವ ಎಚ್‌.ಡಿ. ರೇವಣ್ಣ (HD Revanna) ಅವರಿಗೂ ಇಂದೂ ಸಹ ಜಾಮೀನು ಸಿಕ್ಕಿಲ್ಲ. ಸಾಕಷ್ಟು ವಾದ – ಪ್ರತಿವಾದದ ಬಳಿಕ ಜನಪ್ರತಿನಿಧಿಗಳ ಕೋರ್ಟ್, ಜಾಮೀನು ಅರ್ಜಿ ವಿಚಾರಣೆ ಸೋಮವಾರಕ್ಕೆ ಮುಂದೂಡಿದಿದೆ.

ಎಚ್.ಡಿ. ರೇವಣ್ಣ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ಕೋರ್ಟ್, ಸೋಮವಾರ ಬೆಳಗ್ಗೆ 11.30ಕ್ಕೆ ರೇವಣ್ಣ ಜಾಮೀನು ಅರ್ಜಿ ವಿಚಾರಣೆ ನಡೆಸುವುದಾಗಿ ಮುಂದೂಡಿದೆ. ಕೋರ್ಟ್‌ಗೆ ಮಹತ್ವದ ಮಾಹಿತಿಯನ್ನು ನೀಡಬೇಕಾಗಿದೆ. ಸೋಮವಾರ ಸಮಯ ವ್ಯರ್ಥ ಮಾಡದೆ ಮಾಹಿತಿ ನೀಡುತ್ತೇವೆ. ಸೋಮವಾರದವರೆಗೆ ವಿಚಾರಣೆ ಮುಂದೂಡಬೇಕೆಂದು ವಿಶೇಷ ಸಾರ್ವಜನಿಕ ಅಭಿಯೋಜಕರು (ಎಸ್‌ಪಿಪಿ) ನ್ಯಾಯಾಧೀಶರಿಗೆ ಮನವಿ ಮಾಡಿದ ಹಿನ್ನೆಲೆಯಲ್ಲಿ ಸೋಮವಾರಕ್ಕೆ ಮುಂದೂಡಿಕೆ ಮಾಡಿ ನ್ಯಾಯಾಧೀಶರಾದ ಸಂತೋಷ್ ಗಜಾನನ ಭಟ್ ಆದೇಶವನ್ನು ನೀಡಿದ್ದಾರೆ.

ಎಸ್ಐಟಿ ಪರ ಎಸ್‌ಪಿಪಿ ಜಯ್ನಾ ಕೊಠಾರಿ ವಾದ ಮಂಡನೆ ಮಾಡಿದ್ದು, ನಾವು ಆಕ್ಷೇಪಣೆ ಸಲ್ಲಿಸಿದ್ದೇವೆ, ವಿಳಂಬದ ಉದ್ದೇಶವಿಲ್ಲ. ನಾವು ವಾದ ಮಂಡಿಸಲು ಸ್ವಲ್ಪ ಸಮಯಾವಕಾಶ ಬೇಕಾಗಿದೆ ಎಂದು ಕೋರ್ಟ್‌ ಮುಂದೆ ಕೋರಿದರು. ಇದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ನ್ಯಾಯಾಧೀಶರು, ನೀವು ಹಿರಿಯ ವಕೀಲರು ಇದ್ದೀರಿ, ವಿಳಂಬ ಮಾಡಬೇಡಿ
ಎಸ್‌ಐಟಿ ಪರ ವಕೀಲರಿಗೆ ಸೂಚಿಸಿದರು. ಅದಕ್ಕೆ ಒಪ್ಪಿದ ಜಯ್ನಾ ಕೊಠಾರಿ, ಕೋರ್ಟ್‌ಗೆ ಮತ್ತಷ್ಟು ಮಹತ್ವದ ಮಾಹಿತಿಯನ್ನು ನೀಡಬೇಕಾಗಿದೆ. ಯಾವುದೇ ಕಾರಣಕ್ಕೂ ಸೋಮವಾರ ‌ಸಮಯ ವ್ಯರ್ಥ ಮಾಡಲ್ಲ ಎಂದು ಮನವಿ ಮಾಡಿದರು.

ಇದಕ್ಕೂ ಮೊದಲು ವಾದ ಮಂಡಿಸಿದ ರೇವಣ್ಣ ಪರ ಹಿರಿಯ ವಕೀಲ ಸಿ.ವಿ.ನಾಗೇಶ್, ನನ್ನ 56 ವರ್ಷಗಳ ವಕೀಲ ವೃತ್ತಿಯಲ್ಲಿ ತಪ್ಪು ಮಾಹಿತಿ ನೀಡಿಲ್ಲ. ಬೇಲ್ ಅರ್ಜಿ ಊರ್ಜಿತವಲ್ಲವೆಂದು ಎಸ್‌ಪಿಪಿ ವಾದ ಮಂಡಿಸಿದ್ದಾರೆ. ಇದು ಹೇಗೆ ಸಾಧ್ಯ? ಎಂದು ‘ಸುಪ್ರೀಂ’ ತೀರ್ಪುಗಳನ್ನು ಉಲ್ಲೇಖಿಸಿ ವಾದ ಮಂಡಿಸಿದರು. 2023ರ ತೀಸ್ತಾ ಸೆಟಲ್ ವಾಡ್‌ ಪ್ರಕರಣದ ಬಗ್ಗೆ ಪ್ರಸ್ತಾಪ ಮಾಡಿದ ನಾಗೇಶ್‌, ಸೆಟಲ್ ವಾಡ್ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ತೀರ್ಪು ಇದೆ. ನಿರಂಜನ್ ಸಿಂಗ್ ಕೇಸ್‌ನಲ್ಲಿಯೂ ಜಾಮೀನು ಉಲ್ಲೇಖವಿದೆ. 22 ತೀರ್ಪುಗಳಲ್ಲಿ ನಿರಂಜನ್ ಕೇಸ್‌ ಅನ್ನು ಅನುಸರಿಸಲಾಗಿದೆ. ಕಸ್ಟಡಿಯಲ್ಲಿದ್ದಾಗಲೂ ಜಾಮೀನು ನೀಡಿರುವ ಉಲ್ಲೇಖವಿದೆ. ಒಂದೊಂದು ದಿನ ಒಬ್ಬೊಬ್ಬರನ್ನು ಎಸ್‌ಪಿಪಿಯಾಗಿ ನೇಮಕ ಮಾಡಲಾಗುತ್ತಿದೆ. ಮೊದಲು ಜಗದೀಶ್ ಇದ್ದರು, ಈಗ ಜಯ್ನಾ ಕೊಠಾರಿ ಇದ್ದಾರೆ. ಎಸ್‌ಪಿಪಿ ನೇಮಕಕ್ಕೂ ಕಾನೂನಿನಲ್ಲಿ ಕೆಲ ಕ್ರಮಗಳಿವೆ ಎಂದು ವಾದಿಸಿದರು.

ಈ ವೇಳೆ ವಾದ ಮಂಡನೆಗೆ ಜಯ್ನಾ ಕೊಠಾರಿ ಕಾಲಾವಕಾಶ ಕೋರಿದರು. ಅದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಜಡ್ಜ್‌, ಈಗಾಗಲೇ ಆಕ್ಷೇಪಣೆಗೆ 3 ಬಾರಿ ಸಮಯ ನೀಡಲಾಗಿದೆ. ಇನ್ನೂ ಹೆಚ್ಚು ಸಮಯ ನೀಡಲು ಸಾಧ್ಯವಿಲ್ಲ ಎಂದು ಹೇಳಿದರು.

Exit mobile version