Site icon Vistara News

Prajwal Revanna Case: ಪ್ರಜ್ವಲ್ ಗಂಡಾಂತರ; ಜ್ಯೋತಿಷಿ ಮೊರೆ ಹೋದ ದೇವೇಗೌಡ, ರೇವಣ್ಣ!

Prajwal Revanna Case

ಬೆಂಗಳೂರು: ಲೈಂಗಿಕ ದೌರ್ಜನ್ಯ ಆರೋಪ ಕೇಳಿಬಂದಿರುವುದರಿಂದ ಸಂಸದ ಪ್ರಜ್ವಲ್‌ ರೇವಣ್ಣ ಹಾಗೂ ಮಾಜಿ ಸಚಿವ ಎಚ್‌.ಡಿ.ರೇವಣ್ಣ (Prajwal Revanna Case) ಸಂಕಷ್ಟದಲ್ಲಿ ಸಿಲುಕಿದ್ದಾರೆ. ಈಗಾಗಲೇ ವಿಚಾರಣೆಗೆ ಹಾಜರಾಗಲು ಎಸ್‌ಐಟಿಯಿಂದ ನೋಟಿಸ್‌ ಕೂಡ ನೀಡಲಾಗಿದೆ. ಹೀಗಾಗಿ ಕುಟುಂಬದಲ್ಲಿನ ಸಮಸ್ಯೆ ಪರಿಹಾರಕ್ಕಾಗಿ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರು ಇದೀಗ ಜ್ಯೋತಿಷ್ಯದ ಮೊರೆ ಹೋಗಿದ್ದು, ಇದಕ್ಕಾಗಿ ಜ್ಯೋತಿಷಿ ಜತೆ ಚರ್ಚೆ ನಡೆಸಿದ್ದಾರೆ.

ಪದ್ಮನಾಭನಗರದ ನಿವಾಸಕ್ಕೆ ಬುಧವಾರ ಜ್ಯೋತಿಷಿಯನ್ನು ಕರೆಸಿಕೊಂಡಿರುವ ದೇವೇಗೌಡರು ಹಾಗೂ ರೇವಣ್ಣ ಅವರು, ಸುಮಾರು ಅರ್ಧ ಗಂಟೆ ಕಾಲ ಚರ್ಚೆ ನಡೆಸಿದ್ದಾರೆ. ಕುಟುಂಬದಲ್ಲಿ ಏನಾದರೂ ಸಮಸ್ಯೆಗಳು ಬಂದಾಗ ದೇವೇಗೌಡರ ಕುಟುಂಬಸ್ಥರು ವಿವಿಧ ಧಾರ್ಮಿಕ ಕ್ಷೇತ್ರಗಳಿಗೆ ತೆರಳಿ ಹೋಮ-ಹವನ, ವಿಶೇಷ ಪೂಜೆ ಮಾಡುತ್ತಾರೆ. ಹೀಗಾಗಿ ಸದ್ಯ ಜ್ಯೋತಿಷಿಗಳ ಮೊರೆ ಹೋಗಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ | Hassan Pen Drive Case: ಪ್ರಜ್ವಲ್‌ ರೇವಣ್ಣರ ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್‌ ರದ್ದು ಕೋರಿ ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಪತ್ರ!

ವಿಚಾರಣೆಗೆ ಹಾಜರಾಗಲು 7 ದಿನ ಸಮಯ ಕೇಳಿದ ಪ್ರಜ್ವಲ್‌; ಶೀಘ್ರ ಸತ್ಯ ಹೊರಬರಲಿದೆ ಎಂದು ಟ್ವೀಟ್‌!

Hassan Pen Drive Case Prajwal seeks 7 days time to appear for questioning

ಬೆಂಗಳೂರು: ಹಾಸನ ಸಂಸದ (Hassan MP), ಜೆಡಿಎಸ್‌ ಮುಖಂಡ (JDS Leader), ಮಾಜಿ ಸಚಿವ ಎಚ್.ಡಿ. ರೇವಣ್ಣ ಪುತ್ರ ಪ್ರಜ್ವಲ್ ರೇವಣ್ಣ (Prajwal Revanna) ಅವರು ತಮ್ಮ ಅಶ್ಲೀಲ ವಿಡಿಯೊ ಎನ್ನಲಾದ ಪೆನ್‌ಡ್ರೈವ್‌ ಪ್ರಕರಣಕ್ಕೆ (Hassan Pen Drive Case) ಸಂಬಂಧಪಟ್ಟಂತೆ ಇದೇ ಮೊದಲ ಬಾರಿಗೆ ಮಾಹಿತಿಯೊಂದನ್ನು ಹಂಚಿಕೊಂಡಿದ್ದಾರೆ. ತಾವು ಬೆಂಗಳೂರಿನಲ್ಲಿ ಇಲ್ಲದ ಕಾರಣ ವಿಚಾರಣೆಗೆ ಹಾಜರಾಗಲು 7 ದಿನಗಳ ಕಾಲಾವಕಾಶ ನೀಡಬೇಕು ಎಂದು ಸಿಐಡಿಗೆ ಮನವಿ ಮಾಡಿದ್ದಾರೆ.

ಈ ಬಗ್ಗೆ ಸೋಷಿಯಲ್‌ ಮೀಡಿಯಾ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಸಂಸದ ಪ್ರಜ್ವಲ್‌ ರೇವಣ್ಣ, “ವಿಚಾರಣೆಗೆ ಹಾಜರಾಗಲು ನಾನು ಬೆಂಗಳೂರಿನಲ್ಲಿ ಇಲ್ಲದ ಕಾರಣ, ನಾನು ನನ್ನ ವಕೀಲರ ಮೂಲಕ C.I.D ಬೆಂಗಳೂರಿಗೆ ಮನವಿ ಮಾಡಿದ್ದೇನೆ. ಸತ್ಯ ಆದಷ್ಟು ಬೇಗ ಹೊರಬರಲಿದೆ” (As I am not in Bangalore to attend the enquiry, I have communicated to C.I.D Bangalore through my Advocate. Truth will prevail soon) ಎಂದು ಬರೆದುಕೊಂಡಿದ್ದಾರೆ.

ಪ್ರಜ್ವಲ್‌ ಪರವಾಗಿ ವಕೀಲರಿಂದ ಪತ್ರ

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ವಿಚಾರವಾಗಿ ವಿಚಾರಣೆಗೆ ಹಾಜರಾಗಲು ಗಡುವು ವಿಸ್ತರಣೆ ಮಾಡುವಂತೆ ಪ್ರಜ್ವಲ್‌ ಪರ ವಕೀಲರಾದ ಅರುಣ್‌ ಜಿ. ಅವರು ಸಿಐಡಿಗೆ ಪತ್ರ ಬರೆದು ಕೋರಿದ್ದಾರೆ.

ಇದನ್ನೂ ಓದಿ | Hassan Pen Drive Case: ಎಸ್‌ಐಟಿ ಎದುರು 24 ಗಂಟೆಯೊಳಗೆ ಹಾಜರಾಗದೇ ಇದ್ದರೆ ಪ್ರಜ್ವಲ್‌, ರೇವಣ್ಣ ಅರೆಸ್ಟ್?

ಪತ್ರದಲ್ಲೇನಿದೆ?

ಪ್ರಜ್ವಲ್‌ ರೇವಣ್ಣ ಅವರು ಖುದ್ದಾಗಿ ಎಸ್‌ಐಟಿ ಮುಂದೆ ಹಾಜರಾಗಲು ನೀಡಿರುವ ನೋಟಿಸ್‌ಗೆ ಸಂಬಂಧಿಸಿದಂತೆ, ನನ್ನ ಕಕ್ಷಿದಾರರಾದ ಪ್ರಜ್ವಲ್ ಅವರ ಮನೆಯ ಮೇಲೆ ತಮ್ಮ ಕಚೇರಿಯಿಂದ ಕಳುಹಿಸಿರುವ ನೋಟಿಸ್‌ ಅಂಟಿಸಲಾಗಿದೆ. ಇದರ ಬಗ್ಗೆ ನನಗೆ ನನ್ನ ಕಕ್ಷಿದಾರರಾದ ಪ್ರಜ್ವಲ್ ಅವರ ಕುಟುಂಬದವರಿಂದ ಬಂದ ಮಾಹಿತಿ ಪ್ರಕಾರ ಕಲಂ 41 (ಎ) ಸಿ.ಆ‌ರ್.ಪಿ.ಸಿ. ದಿನಾಂಕ:30-04-2024ರ ತಮ್ಮ ನೋಟಿಸ್‌ನಲ್ಲಿ ತಾವು ದಿನಾಂಕ: 01-05-2024ರಂದು ತಮ್ಮ ಮುಂದೆ ಹಾಜರಾಗಲು ತಿಳಿಸಿರುತ್ತೀರಿ. ಆದರೆ, ನನ್ನ ಕಕ್ಷಿದಾರರಾದ ಪ್ರಜ್ವಲ್ ರೇವಣ್ಣ ಅವರು ಬೆಂಗಳೂರಿನಿಂದ ಹೊರಗಡೆ ಪ್ರವಾಸದಲ್ಲಿದ್ದು, ಅವರಿಗೆ ನೋಟಿಸ್‌ನ ಬಗ್ಗೆ ವಿಷಯ ತಿಳಿಸಲಾಗಿದೆ. ನನ್ನ ಕಕ್ಷಿದಾರರು ಬೆಂಗಳೂರಿಗೆ ಬಂದು ತಮ್ಮ ಮುಂದೆ ನೋಟಿಸ್‌ನ ಸೂಚನೆಯಂತೆ ಹಾಜರಾಗಲು 7 ದಿನಗಳ ಕಾಲಾವಕಾಶ ಅಗತ್ಯವಿರುವುದಾಗಿ ತಿಳಿಸಿದ್ದಾರೆ. ಹೀಗಾಗಿ ನನ್ನ ಕಕ್ಷಿದಾರರಿಗೆ ಸುಮಾರು 7 ದಿನಗಳ ಕಾಲಾವಕಾಶ ಕೊಟ್ಟು ಮತ್ತೊಂದು ದಿನಾಂಕದಂದು ತಮ್ಮ ಮುಂದೆ ವಿಚಾರಣೆಗಾಗಿ ಹಾಜರಾಗಲು ಅವಕಾಶ ನೀಡಬೇಕೆಂದು ಈ ಮೂಲಕ ತಮ್ಮಲ್ಲಿ ನನ್ನ ಕಕ್ಷಿದಾರರ ಪರವಾಗಿ ಕೋರುತ್ತೇನೆ ಎಂದು ವಕೀಲ ಅರುಣ್‌ ಅವರು ಮನವಿ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

Exit mobile version