Site icon Vistara News

HD Revanna Jailed: ಇಂದು ಏನಾಗುತ್ತೆ ಎಚ್‌ಡಿ ರೇವಣ್ಣ ಭವಿಷ್ಯ? ಜಾಮೀನು ಅರ್ಜಿ ಮತ್ತೆ ವಿಚಾರಣೆ

Prajwal Revanna Case HD Revanna jailed

ಬೆಂಗಳೂರು: ಕಿಡ್ನಾಪ್‌ ಪ್ರಕರಣದಲ್ಲಿ (Kidnap Case) ಪರಪ್ಪನ ಅಗ್ರಹಾರ ಜೈಲುಪಾಲಾಗಿರುವ ಮಾಜಿ ಸಚಿವ ಎಚ್‌.ಡಿ ರೇವಣ್ಣ (HD Revanna Jailed) ಅವರು ಇಂದು ಮತ್ತೆ ಜಾಮೀನು ಅರ್ಜಿ (Bail plea) ವಿಚಾರಣೆ ಎದುರಿಸಬೇಕಿದೆ. ಬೇಲ್ ಆಗುತ್ತಾ ಅಥವಾ ಮತ್ತೆ ಜೈಲಾ ಎಂಬ ಆತಂಕದಲ್ಲಿ ರೇವಣ್ಣ ಇದ್ದಾರೆ.

ಇಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಜಾಮೀನು ಅರ್ಜಿ ವಿಚಾರಣೆಗೆ ಬರಲಿದೆ. ಮೇ 09ರಂದು ವಾದ ಪ್ರತಿವಾದ ಆಲಿಸಿ ನ್ಯಾಯಾಲಯ ಇಂದಿಗೆ ವಿಚಾರಣೆ ಮುಂದೂಡಿತ್ತು. ವಕೀಲ ಸಿ.ವಿ.ನಾಗೇಶ್ ರೇವಣ್ಣ ಪರ ವಾದ ಮಂಡಿಸಿದ್ದರು. ರೇವಣ್ಣ ಅವರನ್ನು ಈಗಾಗಲೇ ಎಸ್.ಐ.ಟಿ ವಿಚಾರಣೆ ನಡೆಸಿದೆ. ಪ್ರಕರಣದಲ್ಲಿ ಮತ್ತೊಬ್ಬ ಆರೋಪಿಯ ಬಂಧನವಾಗಿದೆ. ಪ್ರಕರಣದಲ್ಲಿ ಎಲ್ಲೂ ನೇರವಾಗಿ ರೇವಣ್ಣರ ಪಾತ್ರವಿಲ್ಲ ಎಂದು ನಾಗೇಶ್‌ ವಾದ ಮಂಡಿಸಿದ್ದರು.

ಸಿ.ವಿ.ನಾಗೇಶ್, ನನ್ನ 56 ವರ್ಷಗಳ ವಕೀಲ ವೃತ್ತಿಯಲ್ಲಿ ತಪ್ಪು ಮಾಹಿತಿ ನೀಡಿಲ್ಲ. ಬೇಲ್ ಅರ್ಜಿ ಊರ್ಜಿತವಲ್ಲವೆಂದು ಎಸ್‌ಪಿಪಿ ವಾದ ಮಂಡಿಸಿದ್ದಾರೆ. ಇದು ಹೇಗೆ ಸಾಧ್ಯ? ಎಂದು ‘ಸುಪ್ರೀಂ’ ತೀರ್ಪುಗಳನ್ನು ಉಲ್ಲೇಖಿಸಿ ವಾದ ಮಂಡಿಸಿದರು. 2023ರ ತೀಸ್ತಾ ಸೆಟಲ್ ವಾಡ್‌ ಪ್ರಕರಣದ ಬಗ್ಗೆ ಪ್ರಸ್ತಾಪ ಮಾಡಿದ ನಾಗೇಶ್‌, ಸೆಟಲ್ ವಾಡ್ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ತೀರ್ಪು ಇದೆ. ನಿರಂಜನ್ ಸಿಂಗ್ ಕೇಸ್‌ನಲ್ಲಿಯೂ ಜಾಮೀನು ಉಲ್ಲೇಖವಿದೆ. 22 ತೀರ್ಪುಗಳಲ್ಲಿ ನಿರಂಜನ್ ಕೇಸ್‌ ಅನ್ನು ಅನುಸರಿಸಲಾಗಿದೆ. ಕಸ್ಟಡಿಯಲ್ಲಿದ್ದಾಗಲೂ ಜಾಮೀನು ನೀಡಿರುವ ಉಲ್ಲೇಖವಿದೆ. ಒಂದೊಂದು ದಿನ ಒಬ್ಬೊಬ್ಬರನ್ನು ಎಸ್‌ಪಿಪಿಯಾಗಿ ನೇಮಕ ಮಾಡಲಾಗುತ್ತಿದೆ. ಮೊದಲು ಜಗದೀಶ್ ಇದ್ದರು, ಈಗ ಜಯ್ನಾ ಕೊಠಾರಿ ಇದ್ದಾರೆ. ಎಸ್‌ಪಿಪಿ ನೇಮಕಕ್ಕೂ ಕಾನೂನಿನಲ್ಲಿ ಕೆಲ ಕ್ರಮಗಳಿವೆ ಎಂದು ವಾದಿಸಿದರು.

ಎಸ್.ಐ.ಟಿ ಪರ ವಾದ ಮಂಡಿಸಿದ್ದ ಎಸ್.ಪಿ.ಪಿ ಜಯ್ನಾ ಕೊಠಾರಿ, ಈ ವೇಳೆ ವಾದ ಮಂಡನೆಗೆ ಕಾಲಾವಕಾಶ ಕೋರಿದರು. ಅದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಜಡ್ಜ್‌, ಈಗಾಗಲೇ ಆಕ್ಷೇಪಣೆಗೆ 3 ಬಾರಿ ಸಮಯ ನೀಡಲಾಗಿದೆ. ಇನ್ನೂ ಹೆಚ್ಚು ಸಮಯ ನೀಡಲು ಸಾಧ್ಯವಿಲ್ಲ ಎಂದು ಹೇಳಿದರು. ನಾವು ಆಕ್ಷೇಪಣೆ ಸಲ್ಲಿಸಿದ್ದೇವೆ, ವಿಳಂಬದ ಉದ್ದೇಶವಿಲ್ಲ. ನಾವು ವಾದ ಮಂಡಿಸಲು ಸ್ವಲ್ಪ ಸಮಯಾವಕಾಶ ಬೇಕಾಗಿದೆ ಎಂದು ಕೋರ್ಟ್‌ ಮುಂದೆ ಕೋರಿದರು. ಇದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ನ್ಯಾಯಾಧೀಶರು, ನೀವು ಹಿರಿಯ ವಕೀಲರು ಇದ್ದೀರಿ, ವಿಳಂಬ ಮಾಡಬೇಡಿ ಎಂದು ಎಸ್‌ಐಟಿ ಪರ ವಕೀಲರಿಗೆ ಸೂಚಿಸಿದರು. ಅದಕ್ಕೆ ಒಪ್ಪಿದ ಜಯ್ನಾ ಕೊಠಾರಿ, ಕೋರ್ಟ್‌ಗೆ ಮತ್ತಷ್ಟು ಮಹತ್ವದ ಮಾಹಿತಿಯನ್ನು ನೀಡಬೇಕಾಗಿದೆ. ಯಾವುದೇ ಕಾರಣಕ್ಕೂ ಸೋಮವಾರ ‌ಸಮಯ ವ್ಯರ್ಥ ಮಾಡಲ್ಲ ಎಂದು ಮನವಿ ಮಾಡಿದರು.

ಕಿಡ್ನಾಪ್ ಪ್ರಕರಣ ಮಾತ್ರವಲ್ಲ ಪ್ರಜ್ವಲ್ ವಿರುದ್ಧದ ಲೈಂಗಿಕ ಕಿರುಕುಳ ಪ್ರಕರಣಕ್ಕೂ ಇದಕ್ಕೂ ಸಂಬಂಧವಿದೆ ಎಂದು ಕೊಠಾರಿ ವಾದಿಸಿದ್ದರು. ಪ್ರಜ್ವಲ್ ವಿರುದ್ಧದ ಲೈಂಗಿಕ ಪ್ರಕರಣ ಸಂಬಂಧ ಸಂತ್ರಸ್ತೆಯ ಅಪಹರಣವಾಗಿದೆ. ಆರೋಪಿ ಪ್ರಭಾವಿ ಆಗಿದ್ದು, ಜಾಮೀನು ನೀಡಿದರೆ ಸಾಕ್ಷಿ ನಾಶ ಮಾಡುವ ಸಂಭವವಿದೆ ಎಂದು ವಾದಿಸಿ, ಮತ್ತೆ ವಾದ ಮಾಡಲು ಇಂದಿಗೆ ಕಾಲಾವಕಾಶ ಕೇಳಿದ್ದರು.

ಎಸ್.ಐ.ಟಿ ಪರವಾಗಿ ಎಸ್.ಪಿ.ಪಿ ಅಶೋಕ್‌ ನಾಯ್ಕ್ ವಾದ ಮಂಡನೆಗೆ ಅವಕಾಶ ಕೇಳಿದ್ದರು. ಇಂದು ಎಸ್.ಐ.ಟಿ ಪರ ವಕೀಲ ಅಶೋಕ್ ನಾಯ್ಕ್‌ರ ವಾದ ಮಂಡನೆಗೆ ಅವಕಾಶ ನೀಡಿ ಕೋರ್ಟ್‌ ವಿಚಾರಣೆ ಮುಂದೂಡಿತ್ತು. ಇಂದು ಎಸ್.ಪಿ.ಪಿ ಅಶೋಕ್ ನಾಯ್ಕ್ ಅವರ ಎಸ್.ಐ.ಟಿ ಪರ ವಾದದ ಬಳಿಕ ರೇವಣ್ಣ ಪರ ವಾದ ಮಂಡಿಸಲಿದ್ದಾರೆ ಸಿ.ವಿ.ನಾಗೇಶ್. ವಾದ ಪ್ರತಿವಾದ ಆಲಿಸಿ ನ್ಯಾಯಾಲಯ ಮಧ್ಯಾಹ್ನ ಅಥವಾ ನಾಳೆಗೆ ಜಾಮೀನು ಅರ್ಜಿಯ ತೀರ್ಪು ಕಾಯ್ದಿರಿಸುವ ಸಾಧ್ಯತೆ ಇದೆ.

ಇದನ್ನೂ ಓದಿ: Prajwal Revanna Case: ದಿಕ್ಕು ತಪ್ಪಿದೆ ಪ್ರಜ್ವಲ್ ರೇವಣ್ಣ ಕೇಸ್‌; ಡಿಕೆಶಿ ವಿಚಾರಣೆಯೂ ಆಗಲಿ ಎಂದ ಬಸವರಾಜ ಬೊಮ್ಮಾಯಿ

Exit mobile version