Site icon Vistara News

Prajwal Revanna Case: ಪ್ರಜ್ವಲ್‌ ರೇವಣ್ಣಗೆ ಮತ್ತೆ 6 ದಿನ ಎಸ್‌ಐಟಿ ಕಸ್ಟಡಿ

Prajwal Revanna Case

ಬೆಂಗಳೂರು: ಆತ್ಯಾಚಾರ, ಲೈಂಗಿಕ ದೌರ್ಜನ್ಯದ ಪ್ರಕರಣದ ಆರೋಪಿ, ಮಾಜಿ ಸಂಸದ ಪ್ರಜ್ವಲ್‌ ರೇವಣ್ಣನನ್ನು ಮತ್ತೆ 6 ದಿನಗಳ ಕಾಲ ಎಸ್‌ಐಟಿ ಕಸ್ಟಡಿಗೆ ನೀಡಲಾಗಿದೆ. ಕಸ್ಟಡಿಗೆ ನೀಡುವಂತೆ 42ನೇ ಎಸಿಎಂಎಂ ಕೋರ್ಟ್‌ಗೆ ಎಸ್‌ಐಟಿ ಅರ್ಜಿ ಸಲ್ಲಿಸಿತ್ತು. ಮನವಿಯನ್ನು ಪುರಸ್ಕರಿಸಿರುವ ಕೋರ್ಟ್, ಪ್ರಜ್ವಲ್‌ ರೇವಣ್ಣನನ್ನು ಎಸ್‌ಐಟಿ ಕಸ್ಟಡಿಗೆ ನೀಡಲು ಸೂಚಿಸಿದೆ.

10 ದಿನ ಎಸ್‌ಐಟಿ ಕಸ್ಟಡಿಯಲ್ಲಿದ್ದ ಪ್ರಜ್ವಲ್‌ ರೇವಣ್ಣನನ್ನು ಜೂನ್‌ 10ರಂದು ನ್ಯಾಯಾಲಯಕ್ಕೆ ಹಾಜರುಪಡಿಸಿದಾಗ ಜೂನ್‌ 24ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಲು ಸೂಚಿಸಲಾಗಿತ್ತು. ಇನ್ನೂ ವಿಚಾರಣೆ ಬಾಕಿ ಇರುವುದರಿಂದ ಕಸ್ಟಡಿಗೆ ನೀಡುವಂತೆ ಎಸ್‌ಐಟಿ ಮನವಿ ಮಾಡಿದ್ದರಿಂದ, ಇದೀಗ ಮತ್ತೆ 6 ದಿನಗಳ ಕಾಲ ಪ್ರಜ್ವಲ್‌ ರೇವಣ್ಣನನ್ನು ಎಸ್‌ಐಟಿ ಕಸ್ಟಡಿಗೆ ನೀಡಲು ಕೋರ್ಟ್‌ ಸಮ್ಮತಿಸಿದೆ.

ನ್ಯಾಯಾಂಗ ಬಂಧನದಲ್ಲಿದ್ದ ಪ್ರಜ್ವಲ್‌ ರೇವಣ್ಣ ಪರಪ್ಪನ ಅಗ್ರಹಾರ ಜೈಲಿನಲ್ಲಿ ಜೈಲಿನಲ್ಲಿ ಎರಡು ದಿನ ಕಾಲ ಕಳೆದಿದ್ದರು. ಜೈಲಿನ ಕ್ವಾರಂಟೈನ್ ಬ್ಯಾರಕ್‌ನಲ್ಲಿ ಸಾಮಾನ್ಯ ಕೈದಿಯಂತೆ ಪ್ರಜ್ವಲ್ ಇದ್ದರು. ಮಂಗಳವಾರ ರಾತ್ರಿ ಜೈಲಿನಲ್ಲಿ ನೀಡಿದ್ದ ಮುದ್ದೆ, ಚಪಾತಿ, ಅನ್ನ, ಸಾಂಬರ್‌, ಊಟ ಮಾಡಿದ್ದ ಪ್ರಜ್ವಲ್, ಬೇಗನೇ ನಿದ್ರೆಗೆ ಜಾರಿದ್ದರು. ಇಂದು ಬೆಳಗ್ಗೆ 5 ಗಂಟೆಗೆ ನಿದ್ದೆಯಿಂದ ಎದ್ದು ವಾಕಿಂಗ್ ಮಾಡಿದ್ದರು.

ಕೆಲ ಹೊತ್ತು ವಾಕಿಂಗ್ ಮಾಡಿ ಜೈಲ್ ಸಿಬ್ಬಂದಿ ಕೊಟ್ಟ ಕಾಫಿ ಕುಡಿದ ಬಳಿಕ ದಿನ ಪತ್ರಿಕೆಗಳನ್ನು ಓದಿ ಹೊರಗಿನ ವಿದ್ಯಮಾನಗಳ ಕಡೆ ಕಣ್ಣಾಡಿಸಿದರು. ಮತ್ತೆ ಜೈಲಿನ ಮೆನುವಿನಂತೆ ಪ್ರಜ್ವಲ್‌ಗೆ ಅವಲಕ್ಕಿ ಉಪ್ಪಿಟ್ಟು ನೀಡಲಾಗಿದೆ. ಹೊರಗೆ ಬಿಂದಾಸ್ ಆಗಿ ಓಡಾಡಿಕೊಂಡಿದ್ದ ಮಾಜಿ ಸಂಸದನಿಗೆ ಜೈಲುವಾಸದಲ್ಲಿ ಚಡಪಡಿಸುತ್ತಿರರುವುದು ಕಂಡುಬಂದಿದೆ.

ಇದನ್ನೂ ಓದಿ | Actor Darshan Arrested: ರೇಣುಕಾಸ್ವಾಮಿಗೆ ದರ್ಶನ್‌ ಗ್ಯಾಂಗ್‌ನಿಂದ ಕ್ರೂರ ಹಿಂಸೆ; ಪೋಸ್ಟ್‌ಮಾರ್ಟಂ ವರದಿಯಲ್ಲಿದೆ ಭಯಾನಕ ಡಿಟೇಲ್ಸ್‌

ರೇವ್ ಪಾರ್ಟಿ ಪ್ರಕರಣದಲ್ಲಿ ತೆಲುಗು ನಟಿ ಹೇಮಾಗೆ ಜಾಮೀನು

ಬೆಂಗಳೂರು: ಎಲೆಕ್ಟ್ರಾನಿಕ್ ಸಿಟಿ ಬಳಿ ನಡೆದ ರೇವ್ ಪಾರ್ಟಿ ಪ್ರಕರಣದಲ್ಲಿ (Rave Party) ತೆಲುಗು ನಟಿ ಹೇಮಾಗೆ (Telugu actress Hema) ಜಾಮೀನು ಮಂಜೂರಾಗಿದೆ. ಬೆಂಗಳೂರು ಗ್ರಾಮಾಂತರ ಎನ್‌ಡಿಪಿಎಸ್ ವಿಶೇಷ ಕೋರ್ಟ್‌, ನಟಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

ನಟಿ ಹೇಮಾಳಿಂದ ಯಾವುದೇ ಮಾದಕ ವಸ್ತು ವಶಕ್ಕೆ ಪಡೆಯಲಾಗಿಲ್ಲ. ಹಲವು ದಿನಗಳ ನಂತರ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ ಎಂದು ಹೇಮಾ ಅಲಿಯಾಸ್ ಕೊಲ್ಲ ಹೇಮಾ ಪರ ವಕೀಲ ಮಹೇಶ್ ಕಿರಣ್ ಶೆಟ್ಟಿ ವಾದ ಮಂಡಿಸಿದ್ದಾರೆ. ಹೀಗಾಗಿ ನಟಿ ಷರತ್ತುಬದ್ಧ ಜಾಮೀನು ನೀಡಲಾಗಿದೆ.

ತೆಲುಗು ನಟಿ ಹೇಮಾಗೆ ಬೇಲ್ ಸಿಕ್ಕಿದೂ ಇಂದು ಬಿಡುಗಡೆ ಭಾಗ್ಯವಿಲ್ಲ ಎನ್ನಲಾಗಿದೆ. ಜಾಮೀನು ಪ್ರಕ್ರಿಯೆ ಪೂರ್ಣಗೊಳ್ಳದ ಹಿನ್ನೆಲೆಯಲ್ಲಿ ನಾಳೆ ಅವರು ಜೈಲಿನಿಂದ ಬಿಡುಗಡೆಯಾಗಲಿದ್ದಾರೆ.

ರೇವ್‌ ಪಾರ್ಟಿ ಪ್ರಕರಣದಲ್ಲಿ (Rave Party) ವಿಚಾರಣೆಗೆ ಆಗಮಿಸಿದ್ದ ತೆಲುಗು ನಟಿ ಹೇಮಾ ಅವರನ್ನು ಜೂನ್‌ 3ರಂದು ಬಂಧಿಸಲಾಗಿತ್ತು. ಬಳಿಕ ಪ್ರಕರಣದ ವಿಚಾರಣೆ ನಡೆಸಿದ ಆನೇಕಲ್‌ನ 4ನೇ ಹೆಚ್ಚುವರಿ ಸಿವಿಲ್ ಮತ್ತು ಜೆ.ಎಮ್.ಎಫ್.ಸಿ ನ್ಯಾಯಾಧೀಶೆ ಸಲ್ಮಾ .ಎ.ಎಸ್ ಅವರು, ನಟಿ ಹೇಮಾ ಅವರನ್ನು ಜೂನ್‌ 14ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲು ಆದೇಶಿಸಿದ್ದರು.

ಇದನ್ನೂ ಓದಿ | Murder Case: 300 ಕೋಟಿಯ ಆಸ್ತಿಗಾಗಿ ಮಾವನ ಕೊಲೆಗೆ ಸುಪಾರಿ ಕೊಟ್ಟ ಸೊಸೆ!

ಮೇ 19ರಂದು ಎಲೆಕ್ಟ್ರಾನಿಕ್‌ ಸಿಟಿಯ (Electronic city) ಫಾರ್ಮ್‌ ಹೌಸ್‌ನಲ್ಲಿ ನಡೆದ ರೇವ್‌ ಪಾರ್ಟಿಯಲ್ಲಿ ಭಾಗಿಯಾಗಿದ್ದ 103 ಮಂದಿ ವಿರುದ್ಧ ಹೆಬ್ಬಗೋಡಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿತ್ತು. ವೈದ್ಯಕೀಯ ತಪಾಸಣೆಯಲ್ಲಿ ನಟಿ ಹೇಮಾ ಸೇರಿ 86 ಮಂದಿ ಮಾದಕ ವಸ್ತು ಸೇವನೆ ಮಾಡಿರುವುದು ದೃಢಪಟ್ಟಿತ್ತು. ಹೀಗಾಗಿ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದ ಹಿನ್ನೆಲೆಯಲ್ಲಿ ಸಿಸಿಬಿ ಕಚೇರಿಗೆ ನಟಿ ಹೇಮಾ ಹಾಜರಾಗಿದ್ದಾಗ ಅವರನ್ನು ಅಧಿಕಾರಿಗಳು ಬಂಧಿಸಿದ್ದರು.

Exit mobile version