Site icon Vistara News

Prajwal Revanna Case: ಇಂದು ರಹಸ್ಯವಾಗಿ ಪುರುಷತ್ವ ಪರೀಕ್ಷೆ, ನಾಳೆ ಎಲೆಕ್ಷನ್‌ ರಿಸಲ್ಟ್:‌ ಪ್ರಜ್ವಲ್‌ಗೆ ಡಬಲ್ ಟೆ‌ನ್ಷನ್!‌

Prajwal revanna case

ಬೆಂಗಳೂರು: ನಾಳೆ ಪ್ರಕಟವಾಗಲಿರುವ ಸಂಸದ ಸ್ಥಾನದ ಮತ ಎಣಿಕೆ (vote count) ಹಾಗೂ ಫಲಿತಾಂಶದ (Lok Sabha Election result) ಟೆನ್ಷನ್‌ ಒಂದು ಕಡೆ. ಅದರ ನಡುವೆಯೇ ಇಂದು ಹಾಸನ ಸಂಸದ ಪ್ರಜ್ವಲ್ ರೇವಣ್ಣ (Hassan MP Prajwal Revanna Case) ತಮ್ಮ ವಿರುದ್ಧದ ಲೈಂಗಿಕ ದೌರ್ಜನ್ಯ (Physical Abuse) ಪ್ರಕರಣದ ತನಿಖೆಯ ಅಂಗವಾಗಿ ಪುರುಷತ್ವ ಪರೀಕ್ಷೆ ಎದುರಿಸಿದರು. ಇದು ರಹಸ್ಯವಾಗಿ ನಡೆದಿದೆ.

ಪ್ರಕರಣದ ತನಿಖೆ ನಡೆಸುತ್ತಿರುವ ಎಸ್‌ಐಟಿ, ಆಂಬ್ಯುಲೆನ್ಸ್‌ನಲ್ಲಿ ಪ್ರಜ್ವಲ್ ರೇವಣ್ಣ ಅವರನ್ನು ಬೌರಿಂಗ್ ಆಸ್ಪತ್ರೆಗೆ ಕರೆದೊಯ್ದಿತು. ಹೆಚ್ಚಿನ ಪೊಲೀಸ್‌ ರಕ್ಷಣೆ ಇಲ್ಲದೆ, ಮೀಡಿಯಾದವರ ಗಮನ ಸೆಳೆಯದಂತೆ ಆಂಬ್ಯುಲೆನ್ಸ್‌ನಲ್ಲಿ ರಹಸ್ಯವಾಗಿ ಆಸ್ಪತ್ರೆಗೆ ಕರೆದುಕೊಂಡು ಬರಲಾಗಿದೆ. ಅಟಲ್ ಬಿಹಾರಿ ವಾಜಪೇಯಿ ಆಸ್ಪತ್ರೆಯಲ್ಲಿ ಪ್ರಜ್ವಲ್‌ ಅವರ ವೈದ್ಯಕೀಯ ಪರೀಕ್ಷೆ ನಡೆಯುತ್ತಿದೆ. ಇದಾದ ಬಳಿಕ ಸ್ಥಳ ಮಹಜರು ಪ್ರಕ್ರಿಯೆಗೆ ಎಸ್ಐಟಿ ಟೀಂ ಪ್ರಜ್ವಲ್‌ ಅವರನ್ನು ಕರೆದೊಯ್ದಿತು.

ಇಂದು ಪುರುಷತ್ವಕ್ಕೆ ಸಂಬಂಧಿಸಿದ ಮೆಡಿಕಲ್‌ ಟೆಸ್ಟ್‌ಗಳನ್ನು ಪ್ರಜ್ವಲ್‌ ಮೇಲೆ ನಡೆಸಲಾಗುತ್ತಿದೆ. ನಾಳೆ ಚುನಾವಣೆ ಫಲಿತಾಂಶವೂ ಇದೆ. ಪ್ರಜ್ವಲ್‌ಗೆ ಎರಡೂ ಮಹತ್ವದ್ದಾಗಿದ್ದು, ಆತಂಕ ತಂದಿಟ್ಟಿವೆ.

ಹಾಗಿದ್ರೆ ಹೇಗೆ ನಡೆಯುತ್ತೆ ಪುರುಷತ್ವ ಪರೀಕ್ಷೆ?

ಇದು ಲೈಂಗಿಕ ಸಾಮರ್ಥ್ಯ ಸಾಬೀತು ಪಡಿಸುವ ಪರೀಕ್ಷೆ. ಲೈಂಗಿಕ ಕಿರುಕುಳ, ಅತ್ಯಾಚಾರ ಮುಂತಾದ ದೂರುಗಳು ಕೇಳಿ ಬಂದಾಗ ಆರೋಪಿ ಪುರುಷತ್ವ ಪರೀಕ್ಷೆ ನಡೆಸಲಾಗುತ್ತೆ. ಪ್ರಾಥಮಿಕ ಹಂತದಲ್ಲಿ ಮೂರು ರೀತಿ ಪರೀಕ್ಷೆ ನಡೆಸಲಾಗುತ್ತದೆ.

1) ಪುರುಷರ ಜನನಾಂಗ ನಿಮಿರುವಿಕೆ, ವೀರ್ಯ ವಿಶ್ಲೇಷಣೆ, ಶಿಶ್ನಕ್ಕೆ ಪೂರೈಕೆಯಾಗುವ ರಕ್ತನಾಳಗಳ ಪರೀಕ್ಷೆಯನ್ನು ಮುಖ್ಯವಾಗಿ ನಡೆಸಲಾಗುತ್ತದೆ. ಆಂಡ್ರೋಲಜಿಸ್ಟ್ ಸೇರಿದಂತೆ ನಾಲ್ವರು ತಜ್ಞ ವೈದ್ಯರ ತಂಡ ಈ ಪರೀಕ್ಷೆ ನಡೆಸುತ್ತಾರೆ.

2) ನಂತರ ವೀರ್ಯ ವಿಶ್ಲೇಷಣೆ (A Semen Analysis) ನಡೆಯುತ್ತದೆ. ಪುರುಷನ ವೀರ್ಯ ಮತ್ತು ವೀರ್ಯಾಣುಗಳ ಗುಣಲಕ್ಷಣಗಳ ಮೌಲ್ಯಮಾಪನ ನಡೆಸುವ ಪರೀಕ್ಷೆ ಇದು.

3) ಡಾಪ್ಲರ್ ಅಲ್ಟ್ರಾಸೌಂಡ್ ಪರೀಕ್ಷೆ (Penile Doppler Ultrasound) ನಡೆಯಲಿದೆ. ಆರೋಪಿಯ ಖಾಸಗಿ ಅಂಗಕ್ಕೆ ಸರಿಯಾಗಿ ರಕ್ತ ಪೂರೈಕೆಯಾಗುತ್ತಿದೆಯೆ? ಕ್ತದ ಪ್ರಮಾಣ ಎಷ್ಟಿದೆ? ಎಂಬುದು ತಿಳಿಯುವ ಟೆಸ್ಟ್. ವಯಾಗ್ರಾದಂಥ ಮೆಡಿಸಿನ್ ಸೇವಿಸಿದರೂ ಕೂಡ ಈ ಪರೀಕ್ಷೆಯಲ್ಲಿ ಗೊತ್ತಾಗುತ್ತೆ.

4) Nocturnal Penile Tumescence (NPT) Test. ಆಸ್ಪತ್ರೆಯ ನಿದ್ರಾ ಪ್ರಯೋಗಶಾಲೆಯಲ್ಲಿ ನಡೆಯುವ ಪರೀಕ್ಷೆ ಇದು. ಆರೋಪಿಯ ಖಾಸಗಿ ಅಂಗ ರಾತ್ರಿ ನಿದ್ರೆಯಲ್ಲಿ ಯಾವ ರೀತಿ ಪ್ರತಿಕ್ರಿಯಿಸುತ್ತೆ ಎಂದು ಎನ್‌ಪಿಟಿ ಪರೀಕ್ಷೆಯಲ್ಲಿ ಪರಿಶೀಲನೆ ನಡೆಸಲಾಗುತ್ತದೆ. ಈ ಪರೀಕ್ಷೆ ಸಾಮಾನ್ಯವಾಗಿ ಆಸ್ಪತ್ರೆಯ ನಿದ್ರಾ ಪ್ರಯೋಗಶಾಲೆಯಲ್ಲಿ ನಡೆಯುತ್ತದೆ. ಆರೋಪಿಯ ಅರಿವಿಗೆ ಬಾರದಂತೆ ನಡೆಯುವ ಪರೀಕ್ಷೆ ಇದು. ಈ ಮೂರು ಟೆಸ್ಟ್ ಮೂಲಕ ಆರೋಪಿಯ ಪುರುಷತ್ವ ಪರೀಕ್ಷೆ ನಡೆಯುತ್ತವೆ. ಈ ಟೆಸ್ಟ್‌ನ ರಿಪೋರ್ಟ್‌ಗಳು ಅತ್ಯಾಚಾರ ಪ್ರಕರಣದಲ್ಲಿ ಬಹಳ ಮುಖ್ಯವಾಗುತ್ತವೆ.

ಧ್ವನಿ ಹೋಲಿಕೆಗೆ ಮುಂದಾದ ಎಸ್‌ಐಟಿ

ಸೆರೆಸಿಕ್ಕ ನಂತರದ ಕ್ಷಣದಿಂದಲೇ ಎಸ್‌ಐಟಿ ಪ್ರಶ್ನೆಗಳಿಗೆ ಮುಖಾಮುಖಿಯಾಗಿರುವ ಪ್ರಜ್ವಲ್‌, 4ನೇ ದಿನವೂ ವಿಚಾರಣೆ ಎದುರಿಸಿದರು. ವಿಡಿಯೋಗಳ ಬಗ್ಗೆ ಪ್ರಜ್ವಲ್ ರೇವಣ್ಣ‌ ಹಾರಿಕೆ ಉತ್ತರ ನೀಡುತ್ತಿದ್ದಾರೆ ಎಂದು ಗೊತ್ತಾಗಿದೆ. ವಿಡಿಯೋ ರೆಕಾರ್ಡ್ ಮಾಡಿದ ಮೊಬೈಲ್ ಬಗ್ಗೆ ಪ್ರಜ್ವಲ್ ಯಾವುದೇ ಸುಳಿವು ನೀಡಿಲ್ಲ. “ಮೊಬೈಲ್ ನನ್ನ ಬಳಿ ಇಲ್ಲ. ಒಂದು ವರ್ಷದ ಹಿಂದೆಯೇ ಕಳೆದುಹೋಗಿದೆ. ಹೊಳೆನರಸೀಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ” ಎಂದು ಹೇಳುತ್ತಿದ್ದಾರೆ.

ಇದೇ ವೇಳೆ ಪ್ರಜ್ವಲ್ ರೇವಣ್ಣ‌ ಅವರ ಧ್ವನಿ ಸ್ಯಾಂಪಲ್ ಪಡೆದು ಎಫ್ಎಸ್ಎಲ್‌ಗೆ ರವಾನಿಸಲು ಎಸ್‌ಐಟಿ ಮುಂದಾಗಿದೆ. ವಿಡಿಯೋದಲ್ಲಿರುವ ಧ್ವನಿ ಹಾಗೂ ಪ್ರಜ್ವಲ್ ರೇವಣ್ಣ‌ ಧ್ವನಿ ಮ್ಯಾಚ್ ಆಗುತ್ತದಾ ಎಂದು ಪರೀಕ್ಷೆ ನಡೆಯಲಿದೆ. ಧ್ವನಿ ಹೋಲಿಕೆ ಕಂಡುಬಂದರೆ ಪ್ರಜ್ವಲ್‌ಗೆ ಕಷ್ಟ ಎದುರಾಗಲಿದೆ.

ಇದನ್ನೂ ಓದಿ: Hassan MP Prajwal Revanna case: ಮೊಂಡಾಟ ಬಿಡದ ಪ್ರಜ್ವಲ್‌; ಇಂದೇ ಸ್ಥಳ ಮಹಜರಿಗೆ SIT ಪ್ಲ್ಯಾನ್‌

Exit mobile version