ಬೆಂಗಳೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ (Hassan MP Prajwal Revanna Case) ಅವರಿಂದ ಆಗಿದೆ ಎನ್ನಲಾದ ಲೈಂಗಿಕ ದೌರ್ಜನ್ಯ (Physical Abuse) ಪ್ರಕರಣದಲ್ಲಿ ಕೊನೆಗೂ ವಿಡಿಯೋದಲ್ಲಿ (obscene video) ಕೆಲವು ಮಹಿಳಾ ಸರ್ಕಾರಿ ಅಧಿಕಾರಿಗಳು ಮೌನ ಮುರಿದಿದ್ದು, ಎಸ್‌ಐಟಿಗೆ (SIT) ದೂರು ಕೊಡಲು ಮುಂದೆ ಬಂದಿದ್ದಾರೆ.
ಇಬ್ಬರು ಸರ್ಕಾರಿ ಇಲಾಖೆಗಳ ಮಹಿಳಾ ಅಧಿಕಾರಿಗಳಿಂದ ಎಸ್ಐಟಿ ಅಧಿಕಾರಿಗಳು ಹೇಳಿಕೆ ದಾಖಲಿಸಿಕೊಂಡಿದ್ದಾರೆ. “ಟ್ರಾನ್ಸ್‌ಫರ್ ಲೆಟರ್ ಕೊಡುವುದಾಗಿ ಕರೆಸಿಕೊಂಡು ಪ್ರಜ್ವಲ್ ಲೈಂಗಿಕ ದೌರ್ಜನ್ಯ ಎಸಗಿದ್ದರು. ಅದನ್ನು ವೀಡಿಯೊ ಮಾಡಿಟ್ಟುಕೊಂಡು ಪದೇ ಪದೆ ಕರೆಸಿ ಬಟ್ಟೆಬಿಚ್ಚುವಂತೆ ಒತ್ತಾಯ ಮಾಡಿದ್ದರು. ವೀಡಿಯೊ ಇಟ್ಟುಕೊಂಡು ವೀಡಿಯೊ ಕಾಲ್ ಮಾಡಿ ಬಟ್ಟೆ ಬಿಚ್ಚಿ ತೋರಿಸುವಂತೆ ಬೆದರಿಕೆ ಹಾಕುತ್ತಿದ್ದರು” ಎಂದು ಹೇಳಿಕೆ ನೀಡಿದ್ದಾರೆ.
ಇಬ್ಬರು ಸರ್ಕಾರಿ ಅಧಿಕಾರಿಗಳ ಹೇಳಿಕೆಯ ಮೇಲೆ ಪೊಲೀಸರು ಕಾನೂನು ತಜ್ಞರ ಮೊರೆ ಹೋಗಿದ್ದಾರೆ. ಸಂತ್ರಸ್ತ ಮಹಿಳೆಯರ ಹೇಳಿಕೆಯನ್ನು ಪ್ರತ್ಯೇಕ ಎಫ್ಐಆರ್‌ನಲ್ಲಿ ದಾಖಲಿಸಬೇಕೇ, ಅಥವಾ ಹಳೆಯ ಎಫ್ಐಆರ್‌ಗೆ ಸೇರಿಸಬೇಕೆ ಎಂದು ಕಾನೂನು ತಜ್ಞರ ಜೊತೆ ಚರ್ಚೆ ನಡೆಸಲಾಗುತ್ತಿದೆ.
ಮೊದಲಿಗೆ, ಈ ವಿಚಾರದಲ್ಲಿ ನಮ್ಮನ್ನ ಎಳೆಯಬೇಡಿ ಎಂದು ಮಹಿಳೆಯರು ಹೇಳಿದ್ದರು. ತಾವು ಮದುವೆಯಾಗಿ ಸಂಸಾರದೊಂದಿಗೆ ಇದ್ದು, ತಮ್ಮನ್ನು ಅನಗತ್ಯವಾಗಿ ಪ್ರಕರಣದಲ್ಲಿ ತನಿಖೆ, ವಿಚಾರಣೆಗಾಗಿ ಕರೆಯುವುದರಿಂದ ಕುಟುಂಬದ ಶಾಂತಿ, ಮನಶ್ಶಾಂತಿ ಕೆಡಲಿದೆ. ಸಾಮಾಜಿಕವಾಗಿಯೂ ಕೆಟ್ಟ ಪರಿಸ್ಥಿತಿ ಎದುರಿಸಲಿದ್ದೇವೆ ಎಂದು ಸಂತ್ರಸ್ತೆಯರು ಆತಂಕ ತೋಡಿಕೊಂಡಿದ್ದರು. ಕೆಲವರು ರಜೆ ಪಡೆದು ತನಿಖೆಯಿಂದ ದೂರ ಉಳಿದಿದ್ದರು.
ಎಸ್‌ಐಟಿ ಇವರ ಮನವೊಲಿಸಲು ಪ್ರಯತ್ನಿಸಿತ್ತು. ಇದೀಗ ಒತ್ತಡಕ್ಕೆ ಮಣಿದು ಎಸ್ಐಟಿ ಮುಂದೆ ಹೇಳಿಕೆ ಕೊಟ್ಟರೇ ಎಂಬ ಅನುಮಾನವೂ ಮೂಡಿದೆ.
ಪ್ರಜ್ವಲ್ ರೇವಣ್ಣ ಮೇಲೆ ಸುಳ್ಳು ಆರೋಪ ನೀಡಲು ಒತ್ತಡ: ಮಹಿಳೆ ದೂರು
ಈಗಾಗಲೇ ಲೈಂಗಿಕ ದೌರ್ಜನ್ಯ (Physical abuse) ಆರೋಪ ಎದುರಿಸುತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ (Hassan MP Prajwal Revanna case) ವಿರುದ್ಧ ಸುಳ್ಳು ಕೇಸ್ (Fake case) ಹಾಕಲು ತನಗೆ ಒತ್ತಾಯಿಸಲಾಗುತ್ತಿದೆ ಎಂದು ರಾಷ್ಟ್ರೀಯ ಮಹಿಳಾ ಆಯೋಗಕ್ಕೆ (National Commission for Women) ಮಹಿಳೆಯೊಬ್ಬರು ದೂರು ನೀಡಿದ್ದಾರೆ.
ಪ್ರಜ್ವಲ್ ರೇವಣ್ಣ ಹಾಗೂ ಎಚ್.ಡಿ ರೇವಣ್ಣ (HD revanna jailed) ಅವರ ವಿರುದ್ಧ ರಾಜಕೀಯ ಪ್ರೇರಿತ ಸುಳ್ಳು ದೂರುಗಳನ್ನು ದಾಖಲಿಸಲಾಗುತ್ತಿದೆ ಎಂದು ಜೆಡಿಎಸ್ (JDS) ಪ್ರತಿಭಟನೆ ನಡೆಸುತ್ತಿರುವುದರ ಹಿನ್ನೆಲೆಯಲ್ಲಿ ಈ ದೂರು ಮಹತ್ವ ಪಡೆದುಕೊಂಡಿದೆ. ಸೂಕ್ತ ಭದ್ರತೆಗೆ ಕೋರಿ ರಾಷ್ಟ್ರೀಯ ಮಹಿಳಾ ಆಯೋಗಕ್ಕೆ ಮಹಿಳೆ ಪತ್ರ ಬರೆದಿದ್ದಾರೆ.
ಪ್ರಜ್ವಲ್ ರೇವಣ್ಣ ವಿರುದ್ಧ ದೂರು ನೀಡುವಂತೆ ನನಗೆ ಒತ್ತಡ ಹಾಕಲಾಗುತ್ತಿದೆ. ಮೂವರು ಸಿವಿಲ್ ಡ್ರೆಸ್‌ನಲ್ಲಿ ಬಂದವರು ಒತ್ತಡ ಹಾಕಿದ್ದು, ಇಲ್ಲದಿದ್ದರೆ ಗಂಭೀರ ಪರಿಣಾಮ ಎದುರಿಸಬೇಕಾದೀತು ಎಂದು ಬೆದರಿಕೆ ಹಾಕಿದ್ದಾರೆ. ನನ್ನ ಕುಟುಂಬಕ್ಕೆ ಸೂಕ್ತ ಭದ್ರತೆ ನೀಡಿ ಎಂದು ರಾಷ್ಟ್ರೀಯ ಮಹಿಳಾ ಆಯೋಗಕ್ಕೆ ಮಹಿಳೆ ಪತ್ರ ಬರೆದಿದ್ದಾರೆ.
ಮಹಿಳೆ ಪತ್ರ ಬರೆದಿರುವ ಬಗ್ಗೆ ವಿಸ್ತಾರ ನ್ಯೂಸ್‌ಗೆ ರಾಷ್ಟ್ರೀಯ ಮಹಿಳಾ ಆಯೋಗ ಮಾಹಿತಿ ನೀಡಿದೆ. ಹಾಸನ ಮೂಲದ ಮಹಿಳೆ ಪತ್ರ ಬರೆದಿದ್ದು, ಪತ್ರಕ್ಕೆ ಸಂಬಂಧಿಸಿದಂತೆ ಕರ್ನಾಟಕ ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಮಾಹಿತಿ ನೀಡಲಾಗಿದೆ. ದೂರಿನ ಪ್ರತಿ ಹಾಗೂ ಸೂಕ್ತ ಭದ್ರತೆಗೆ ಮನವಿ ಮಾಡಲಾಗಿದೆ.
ಪ್ರಜ್ವಲ್ ಕೇಸ್‌ನಲ್ಲಿ ಮಹಿಳೆಗೆ ದೂರು ನೀಡುವಂತೆ ಒತ್ತಡ ಹಾಕಲಾಗ್ತಿದೆ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ. ಆಯೋಗದಿಂದ ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಗೆ ಇಂದು ಮತ್ತೆ ಪತ್ರ ಬರೆಯುತ್ತೇವೆ. ಆಯೋಗದ ಅಧಿಕಾರಿಗಳು ಪತ್ರ ಬರೆದ ಮಹಿಳೆಯನ್ನು ಭೇಟಿ ಮಾಡುತ್ತೇವೆ ಎಂದು ರಾಷ್ಟ್ರೀಯ ಮಹಿಳಾ ಆಯೋಗ ತಿಳಿಸಿದೆ.
ವಕೀಲ ದೇವರಾಜೇಗೌಡ ಮೇಲೂ ಲೈಂಗಿಕ ದೌರ್ಜನ್ಯ ದೂರು
ಪೆನ್ ಡ್ರೈವ್ ಪ್ರಕರಣದಲ್ಲಿ (Prajwal Revanna Case) ಹೋರಾಟ ನಡೆಸುತ್ತಿದ್ದ ವಕೀಲ ದೇವರಾಜೇಗೌಡ (Devaraje Gowda) ವಿರುದ್ದ ಎಫ್ಐಆರ್ ದಾಖಲಾಗಿದೆ. ಮಹಿಳೆಯೊಬ್ಬಳಿಗೆ ಲೈಂಗಿಕ ದೌರ್ಜನ್ಯ ನೀಡಿದ ಆರೋಪದಡಿ ಎಫ್ಐಆರ್ ದಾಖಲಾಗಿದೆ. ಹತ್ತು ತಿಂಗಳ ಹಿಂದೆ ಪರಿಚಯವಾಗಿದ್ದ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.
ಪತಿಯು ಮಾಲೀಕತ್ವದ ಸೈಟ್ ವಿಚಾರವಾಗಿ ದೇವರಾಜೇಗೌಡ ಅವರನ್ನು ಸಂತ್ರಸ್ತ ಮಹಿಳೆ ಭೇಟಿಯಾಗಿದ್ದರು. ಆ ಪರಿಚಯವನ್ನು ದುರ್ಬಳಕೆ ಮಾಡಿಕೊಂಡು ವಾಟ್ಸ್ಆ್ಯಪ್ ಕರೆ ಮಾಡಿ ಕಿರುಕುಳ ನೀಡುತ್ತಿದ್ದ ಆರೋಪ ದೇವರಾಜ್ ವಿರುದ್ಧ ಕೇಳಿ ಬಂದಿದೆ. ಅದೇ ರೀತಿ ಬಳಿಕ ಲೈಂಗಿಕವಾಗಿ ಬಳಸಿಕೊಂಡಿರುವ ಆರೋಪವೂ ಕೇಳಿ ಬಂದಿದೆ.
ಮಹಿಳೆಗೆ ಫೋನ್ ಮಾಡಿ ತಾವು ಜೊತೆಯಲ್ಲಿರುವ ವಿಡಿಯೊವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡೋದಾಗಿ ಬೆದರಿಕೆ ಹಾಕಿದ ಆರೋಪವೂ ದಾಖಲಾಗಿದೆ. ಅದೇ ರೀತಿ ಮಹಿಳೆಗೆ ವಿಡಿಯೋ ಕಾಲ್ ಮಾಡಿ ಖಾಸಗಿ ಅಂಗಗಳನ್ನು ಪ್ರದರ್ಶನದ ಮಾಡಿರುವ ಆರೋಪವೂ ದಾಖಲಾಗಿದೆ.
ತಾನು ಹೇಳಿದ ಹಾಗೆ ಕೇಳಬೇಕು.ಇಲ್ಲದೇ ಹೋದರೆ ಪತಿಯ ಜೀವಕ್ಕೆ ಪಾಯ ತಂದೊಡ್ಡುವುದಾಗಿ ದೇವರಾಜೇಗೌಡ ಬೆದರಿಕೆ ಹಾಕಿದ್ದ ಎನ್ನಲಾಗಿದೆ. ತನ್ನ ಬೆಂಬಲಿಗರನ್ನು ಕಳುಹಿಸಿ ಜೀವ ಬೆದರಿಕೆ ಹಾಕಿದ ಅರೋಪವೂ ಕೇಳಿ ಬಂದಿದೆ. ಹಲವಾರು ಆರೋಪಗಳ ಮೇಲೆ ದೂರು ದಾಖಲಾಗಿದೆ. ಹೊಳೆನರಸೀಪುರ ಟೌನ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಇದನ್ನೂ ಓದಿ: Prajwal Revanna Case: ಈ ಸರ್ಕಾರವನ್ನು ಹಾಸನಾಂಬೆ ಧ್ವಂಸ ಮಾಡಲಿದ್ದಾಳೆ: ಎಚ್‌ಡಿಕೆ ಶಾಪ