ಬೆಂಗಳೂರು : ಪೆನ್ಡ್ರೈವ್ ಅಶ್ಲೀಲ ವಿಡಿಯೊ ಪ್ರಕರಣದಲ್ಲಿ ಎಸ್ಐಟಿ ವಶದಲ್ಲಿರುವ ಪ್ರಜ್ವಲ್ ರೇವಣ್ಣ (Prajwal Revanna) ಜರ್ಮನಿಯಿಂದ ಬರುವಾಗ ಹಾಕಿಕೊಂಡು ಬಂದಿರುವ ಬಟ್ಟೆಯ ಬಗ್ಗೆ ಜೋರು ಚರ್ಚೆ ನಡೆಯುತ್ತಿದೆ. ಜರ್ಮನಿಯಿ ಮ್ಯೂನಿಕ್ನಿಂದ ವಿಮಾನ ಏರುವಾಗ ಹಾಕಿದ್ದ ಬಟ್ಟೆಯಲ್ಲಿಯೇ ಅವರು ಪೊಲೀಸರ ವಶಕ್ಕೆ ಸಿಕ್ಕಿದ್ದಾರೆ. ಈ ವೇಳೆ ಅವರ ಬೂದು ಬಣ್ಣದ ಬಟ್ಟೆಯಲ್ಲಿ ಕಾಣಿಸಿಕೊಂಡಿದ್ದರು. ಶುಕ್ರವಾರ ಅವರನ್ನು ಎಸ್ಐಟಿ ಅಧಿಕಾರಿಗಳು ಮೆಡಿಕಲ್ ಟೆಸ್ಟ್ ಹಾಗೂ ನ್ಯಾಯಾಲಯಕ್ಕೆ ಕರೆದುಕೊಂಡು ಹೋಗುವ ವೇಳೆಯೂ ಅದೇ ಬಟ್ಟೆಯನ್ನು ಧರಿಸಿದ್ದರು. ಹೀಗಾಗಿ ಆ ಬಟ್ಟೆಯ ಬಗ್ಗೆ ಚರ್ಚೆ ನಡೆದಿದೆ.
ಪ್ರಜ್ವಲ್ ರೇವಣ್ಣ ಅವರು ಜರ್ಮನಿಯಿಂದ ಬೆಂಗಳೂರಿಗೆ ಬರುವಾಗ ಬೂದು ಬಣ್ಣದ ಹೂಡಿ ಬಟ್ಟೆಯನ್ನು ಧರಿಸಿದ್ದರು. ಅದು ಅಂಡರ್ ಆರ್ಮರ್ ಬ್ರಾಂಡ್ನ ಕರಿ ಬಿಗ್ ಸ್ಲ್ಪಾಷ್ ಹೂಡಿ ಟಿಶರ್ಟ್. ಅಂಡರ್ ಆರ್ಮರ್ ಅಮೆರಿಕ ಮೂಲದ ಸ್ಪೋರ್ಟ್ಸ್ ಬ್ರಾಂಡ್ ಆಗಿದೆ. ಇದು ನಾನಾ ರೀತಿಯ ಸ್ಪೋರ್ಟ್ಸ್ ಮೆಟೀರಿಯಲ್ ಅನ್ನು ಉತ್ಪಾದನೆ ಮಾಡುತ್ತದೆ. ಭಾರತದಲ್ಲೂ ಈ ಬ್ರಾಂಡ್ ಸಿಕ್ಕಾಪಟ್ಟೆ ಫೇಮಸ್. ಆದರೆ, ಇದರ ಬೆಲೆ ಕನಿಷ್ಠ 6 ಸಾವಿರ ರೂಪಾಯಿಂದ ಆರಂಭಗೊಳ್ಳುತ್ತದೆ. ಅಂತೆಯೇ ಪ್ರಜ್ವಲ್ ರೇವಣ್ಣ ಬಂಧನದ ವೇಳೆ ಹಾಕಿಕೊಂಡಿದ್ದ ಬಟ್ಟೆಗೆ ಆನ್ಲೈನ್ನಲ್ಲಿ 7 ಸಾವಿರ ರೂಪಾಯಿ ತೋರಿಸುತ್ತಿದೆ. ಅದು ಡಿಸ್ಕೌಂಟ್ ಬೆಲೆಯಲ್ಲಿ. ಅಲ್ಲದೆ , ಪ್ರಜ್ವಲ್ ಹಾಕಿದ ಬಟ್ಟೆಯ ಬಗ್ಗೆಯೇ ಹುಡುಕಿಕೊಂಡು ಹೋದರೆ ಬೆಲೆಗಳನ್ನು ಡಾಲರ್ ಲೆಕ್ಕದಲ್ಲಿ ತೋರಿಸುತ್ತಿದೆ.
ಇದನ್ನೂ ಓದಿ: Bhavani Reavanna : ಭವಾನಿ ರೇವಣ್ಣಗೆ ಬಂಧನ ಭೀತಿ; ಜಾಮೀನು ಅರ್ಜಿ ತೀರ್ಪು ಮುಂದಕ್ಕೆ
ಪ್ರಜ್ವಲ್ ರೇವಣ್ಣ ಈ ಬಟ್ಟೆಯನ್ನು ಜರ್ಮನಿಯಿಂದಲೇ ಖರೀದಿ ಮಾಡಿರಬಹುದು ಎಂದು ಅಂದಾಜಿಸಲಾಗಿದೆ. ಅಂತಾರಾಷ್ಟ್ರೀಯ ಬ್ರಾಂಡ್ ಆಗಿರುವ ಕಾರಣ ಅವರು ಅಲ್ಲಿಯೇ ಖರೀದಿ ಮಾಡಿ ಬಂದಿರಬಹುದು. ಹೀಗಾಗಿ ಅವರು ಡಾಲರ್ ಲೆಕ್ಕದಲ್ಲಿಯೇ ದುಡ್ಡು ಪಾವತಿ ಮಾಡಿರಬಹುದು. ಹೀಗಾಗಿ ಅವರು ಕನಿಷ್ಠ 10 ಸಾವಿರ ರೂಪಾಯಿ ಕೊಟ್ಟಿರಬಹುದು ಎಂದು ಅಂದಾಜಿಸಲಾಗಿದೆ.
ನಾನವನಲ್ಲ, ನಾನವನಲ್ಲ; ಪೊಲೀಸರ ಪ್ರಶ್ನೆಗೆ ಈ ಒಂದೇ ಉತ್ತರ ನೀಡುತ್ತಿರುವ ಪ್ರಜ್ವಲ್ ರೇವಣ್ಣ!
ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣದ ಪೆನ್ಡ್ರೈವ್ ಹಗರಣದ ಪ್ರಮುಖ ಆರೋಪಿಯಾಗಿರುವ ಪ್ರಜ್ವಲ್ ರೇವಣ್ಣನನ್ನು (Prajwal Revanna) ಎಸ್ಐಟಿ ತನಿಖಾಧಿಕಾರಿಗಳು ಪ್ರಾಥಮಿಕ ತನಿಖೆ ನಡೆಸಿದ್ದಾರೆ. ಆದರೆ, ಪೊಲೀಸರು ಕೇಳುವ ಎಲ್ಲ ಪ್ರಶ್ನೆಗಳಿಗೆ ಪ್ರಜ್ವಲ್ ರೇವಣ್ಣ ‘ನಾನವನಲ್ಲ, ನನಗೆ ಗೊತ್ತಿಲ್ಲ’ ಎಂಬ ಉತ್ತರವನ್ನೇ ನೀಡುತ್ತಿದ್ದಾರೆ. ಈ ಮೂಲಕ ಆರಂಭಿಕ ಹಂತದಲ್ಲಿ ಯಾವುದೇ ಮಾಹಿತಿಯನ್ನು ಪೊಲೀಸರಿಗೆ ನೀಡಲು ಸಿದ್ದತೆ ನಡೆಸಿಕೊಂಡು ಬಂದಿದ್ದಾನೆ ಪ್ರಜ್ವಲ್ ರೇವಣ್ಣ
ಎಸ್ಐಟಿ ಅಧಿಕಾರಿಗಳು ನ್ಯಾಯಾಲಯಕ್ಕೆ ಹಾಜರುಪಡಿಸುವ ಮೂದಲು 24 ಗಂಟೆಗಳ ಅವಧಿಯನ್ನು ಹೊಂದಿದ್ದಾರೆ. ಹೀಗಾಗಿ ಪೊಲೀಸರು ಪ್ರಾಥಮಿಕ ಹಂತದ ಮಾಹಿತಿಯನ್ನು ಪಡೆದುಕೊಳ್ಳುತ್ತಿದ್ದಾರೆ. ಆದರೆ, ಪ್ರಜ್ವಲ್ ರೇವಣ್ಣ ಮಾತ್ರ ಯಾವುದೆಕ್ಕೂ ಸಮರ್ಥ ಉತ್ತರ ನೀಡುತ್ತಿಲ್ಲ ಎಂದು ಹೇಳಲಾಗಿದೆ.
ಎಸ್ಐಟಿ ಪೊಲೀಸರು ಪ್ರಜ್ವಲ್ ರೇವಣ್ಣ ಅವರ ವಿರುದ್ಧ ದಾಖಲಾಗಿರುವ ಮೂರು ಎಫ್ಐಆರ್ ಕುರಿತಾಗಿ ಪ್ರಶ್ನೆಗಳನ್ನು ಕೇಳುತತಿದ್ದಾರೆ. ಅವರ ಹೇಳಿಕೆಗಳ ಕುರಿತು ವಿಡಿಯೊ ದಾಖಲೆಯನ್ನು ಸೃಷ್ಟಿಸಲು ಪೊಲೀಸರು ಮುಂದಾಗಿದ್ದಾರೆ. ಅದೇ ರೀತಿ ಪ್ರಜ್ವಲ್ ರೇವಣ್ಣ ಅವರಿಗೆ ಸಂಬಂಧಿಸಿದ್ದು ಎಂದು ಹೇಳಲಾದ ವಿಡಿಯೊಗಳಲ್ಲಿರುವ ಕೆಲವು ದೃಶ್ಯಗಳ ಕುರಿತೂ ಅವರಿಗೆ ಪ್ರಶ್ನೆಗಳನ್ನು ಕೇಳಲಾಗುತ್ತಿದೆ.