ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramiah) ಅವರು ಮಂಡಿಸಿರುವ ರಾಜ್ಯ ಬಜೆಟ್ (Karnataka Budget 2024) ಪುಸ್ತಕದ ಮುಖಪುಟದಲ್ಲಿ ಈ ಬಾರಿ ಸಂವಿಧಾನ ಪೀಠಿಕೆಯನ್ನು ಮುದ್ರಿಸಲಾಗಿದೆ. ಪ್ರತಿ ಬಾರಿ ಬಜೆಟ್ ಪ್ರತಿಯಲ್ಲಿ ಕರ್ನಾಟಕ ರಾಜ್ಯದ ಭೂಪಟ ಹಾಗೂ ವಿವಿಧ ಕ್ಷೇತ್ರಗಳಿಗೆ ಸಂಬಂಧಿಸಿದ ಚಿತ್ರವನ್ನು ಹಾಕಲಾಗುತ್ತಿತ್ತು. ಆದರೆ, ಈ ಬಾರಿ ಸಂವಿಧಾನದ ಪೀಠಿಕೆಯನ್ನೇ ಹಾಕಲಾಗಿದೆ.
ಬಜೆಟ್ ಭಾಷಣ ಆರಂಭದಲ್ಲಿಯೂ ಸಿಎಂ ಸಿದ್ದರಾಮಯ್ಯ ಅವರು ಸಂವಿಧಾನದ ಉಲ್ಲೇಖವನ್ನು ಮಾಡಿದ್ದಾರೆ. ಭಾರತದ 75ನೇ ವರ್ಷದ ಗಣರಾಜ್ಯೋತ್ಸವ ಆಚರಿಸುತ್ತಿರುವ ಬಗ್ಗೆ ಸಂಭ್ರಮ ವ್ಯಕ್ತಪಡಿಸಿದ್ದಾರೆ. ನಾನು 2024-25ನೇ ಸಾಲಿನ ಆಯವ್ಯಯವನ್ನು ಸದನದ ಮುಂದೆ ಮಂಡಿಸುತ್ತಿದ್ದೇನೆ. ಭಾರತ ದೇಶ ಗಣರಾಜ್ಯವಾಗಿ 75ನೇ ವರ್ಷಕ್ಕೆ ಕಾಲಿಟ್ಟಿದೆ. ಈ ಸುಸಂದರ್ಭದಲ್ಲಿ ನನ್ನ 15ನೇ ಆಯವ್ಯಯವನ್ನು ಮಂಡಿಸಲು ಹರ್ಷಿಸುತ್ತೇನೆ ಎಂದು ಸಿದ್ದರಾಮಯ್ಯ ಅವರು ಹೇಳಿದ್ದಾರೆ.
ಕರ್ನಾಟಕ ಬಜೆಟ್ ಲೈವ್ ಇಲ್ಲಿ ವೀಕ್ಷಿಸಿ
ಬಾಬಾ ಸಾಹೇಬ್ ಅಂಬೇಡ್ಕರ್ ಅವರು ರೂಪಿಸಿದ ಸಂವಿಧಾನದ ಆಶಯದಂತೆ ನ್ಯಾಯ, ಸಮಾನತೆ ಹಾಗೂ ಭ್ರಾತೃತ್ವದ ತಳಹದಿಯ ಮೇಲೆ ಕರ್ನಾಟಕ ಮಾದರಿ ಅಭಿವೃದ್ಧಿಯ ಹೊಸ ದೃಷ್ಟಾಂತವನ್ನು ರೂಪಿಸಲು ನಾವು ಹೆಜ್ಜೆಯಿಟ್ಟಿದ್ದೇವೆ ಎಂದು ಸಿದ್ದರಾಮಯ್ಯ ಬಜೆಟ್ನ ಆರಂಭದಲ್ಲಿ ಹೇಳಿದ್ದಾರೆ.
ಇದನ್ನೂ ಓದಿ :Karnataka Budget Session 2024: ಏನಿಲ್ಲ.. ಏನಿಲ್ಲ.. ಈ ಬಜೆಟ್‌ನಲ್ಲಿ ಏನಿಲ್ಲ! ಸಿದ್ದರಾಮಯ್ಯ ಬಜೆಟ್‌ಗೆ ಬಿಜೆಪಿ ಸಾಂಗ್
ಸಾಮಾಜಿಕ ನ್ಯಾಯ ಎನ್ನುವುದು ನಮ್ಮ ನಂಬಿಕೆ ಮಾತ್ರವಲ್ಲ; ಅದು ಉದಾತ್ತ ಜೀವನ ದೃಷ್ಟಿಕೋನ. ಸಮ ಸಮಾಜ ನಿರ್ಮಾಣದಲ್ಲಿ ಬಸವಾದಿ ಶರಣರ ಕಾಯಕ ಮತ್ತು ದಾಸೋಹ ತತ್ವಗಳು ನಮಗೆ ಪ್ರೇರಣೆಯಾಗಿದೆ. ದುಡಿಮೆಯ ಒಂದು ಭಾಗವನ್ನು ದಾಸೋಹಕ್ಕೆ ಬಳಸಬೇಕೆಂಬ ಶರಣರ ಚಿಂತನೆ, ಸಮಾಜದಲ್ಲಿ ಸಂಪತ್ತಿನ ನ್ಯಾಯಯುತ ಹಂಚಿಕೆ ಮಾಡುವ ನಮ್ಮ ಆಶಯಕ್ಕೆ ಆಧಾರವಾಗಿದೆ ಎಂದು ಅವರು ಬಜೆಟ್ ವೇಳೆ ಮಾತನಾಡಿದ್ದಾರೆ.
ಭಾರತದ ಸಂವಿಧಾನದ ಪೀಠಿಕೆಯು ಈ ಕೆಳಗಿನಂತಿದೆ:
“
ಭಾರತದ ನಾಗರಿಕರಾದ ನಾವು, ಭಾರತವನ್ನು ಒಂದು ಸಾರ್ವಭೌಮ ಸಮಾಜವಾದಿ ಜಾತ್ಯಾತೀತ (೧೯೭೬ರಲ್ಲಿ ಇಂದಿರಾಗಾಂಧಿಯವರಿಂದ ಸೇರಿಸಲ್ಪಟ್ಟದ್ದು) ಪ್ರಜಾಸತ್ತಾತ್ಮಕ ಗಣರಾಜ್ಯವೆಂದು ಘೋಷಿಸುತ್ತಾ ದೃಢಮನಸ್ಸಿನಿಂದ ವಿಧಿಯುಕ್ತವಾಗಿ ಸ್ಥಾಪಿಸಿ, ಅದರ ಎಲ್ಲಾ ನಾಗರಿಕರಿಗೆ ಈ ಕೆಳಗಿನ ಹಕ್ಕುಗಳನ್ನು ಖಾತರಿಪಡಿಸಲಾಗುತ್ತದೆ:
ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ನ್ಯಾಯ;
ವಿಚಾರ, ಅಭಿವ್ಯಕ್ತಿ, ನಂಬಿಕೆ, ಭಕ್ತಿ ಮತ್ತು ಆರಾಧನೆಗಳಲ್ಲಿ ಸ್ವಾತಂತ್ರ್ಯ;
ಸ್ಥಾನಮಾನ ಮತ್ತು ಅವಕಾಶಗಳ ಸಮಾನತೆ, ಮತ್ತು ಅದನ್ನು ಎಲ್ಲರಿಗೂ ಹಂಚುವುದು;
ಗಳನ್ನು ದೊರಕಿಸಿ,
ವೈಯುಕ್ತಿಕ ಘನತೆ ಮತ್ತು ದೇಶದ ಸಮಗ್ರತೆ ಮತ್ತು ಐಕ್ಯತೆಗೆ ಎಲ್ಲರಲ್ಲೂ ಸಹೋದರತ್ವ ಯನ್ನು ಪ್ರೋತ್ನಾಹಿಸಲು ನಿರ್ಧರಿಸಿ;
ನಮ್ಮ ಸಂವಿಧಾನ ರಚನಾಸಭೆಯಲ್ಲಿ ಈ ೧೯೪೯ರ ನವೆಂಬರ್ ಮಾಹೆಯ ೨೬ನೇ ದಿನದಂದು, ನಾವಾಗಿ ನಾವೇ ಈ ಸಂವಿಧಾನವನ್ನು ಅಳವಡಿಸಿಕೊಂಡು, ಜಾರಿಗೊಳಿಸಿ, ನಾವಾಗಿಯೇ ವಿಧಿಸಿಕೊಳ್ಳುತ್ತೇವೆ.