Site icon Vistara News

Hanuman Flag : ಪ್ರಾಣ ಬಿಟ್ಟೆವು, ಹನುಮಧ್ವಜ ಬಿಡೆವು; ಗ್ರಾಮಸ್ಥರ ಪ್ರತಿಭಟನೆ

Hanuman flag

ಮಂಡ್ಯ,: ಹನುಮಧ್ವಜ ಹಾರಾಟಕ್ಕೆ ವಿಚಾರಕ್ಕೆ ಸಂಬಂಧಿಸಿದಂತೆ ಇಲ್ಲಿನ ಕೆರಗೋಡು ಗ್ರಾಮದಲ್ಲಿ ಹಿಂದೂಪರ ಸಂಘಟನೆಗಳ ಪ್ರತಿಭಟನೆ ಮುಂದುವರಿದಿದೆ. ತಾಲೂಕು ಪಂಚಾಯತ್​ ವಿರೋಧ ವ್ಯಕ್ತಪಡಿಸುತ್ತಿದೆ ಎಂದು ಆರೋಪಿಸಿ ಪ್ರತಿಭಟನೆ ನಡೆಸಲಾಗುತ್ತಿದೆ. ಪ್ರಾಣ ಬೇಕಾದರೂ ಬಿಡುವೆವು, ಧ್ವಜ ಇಳಿಸಲ್ಲ ಎಂದು ಪ್ರತಿಭಟನಾಕಾರರು ಪಟ್ಟು ಹಿಡಿದು ಕುಳಿತಿದ್ದಾರೆ. ತಾಲೂಕು ಪಂಚಾಯತ್​ ಅಧಿಕಾರಿಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ. ಸ್ಥಳದಲ್ಲಿ ಪೊಲೀಸರು ಭದ್ರತೆ ಹೆಚ್ಚಿಸಿದ್ದಾರೆ.

ಮಂಡ್ಯ ತಾಲೂಕಿನ ಕೆರಗೋಡು ಗ್ರಾಮದಲ್ಲಿ ನಡೆಯುತ್ತಿರುವ ಪ್ರತಿಭಟನೆ ಸ್ಥಳದಲ್ಲಿ ಹೆಚ್ಚು ಜನ ಜಮಾವಣೆಗೊಳ್ಳುತ್ತಿದ್ದಾರೆ. ಅಯೋಧ್ಯೆಯಲ್ಲಿ ಬಾಲಕರಾಮನ ಪ್ರಾಣ ಪ್ರತಿಷ್ಠಾಪನೆ ಸ್ಮರಣಾರ್ಥವಾಗಿ ಈ ಧ್ವಜಸ್ತಂಭವನ್ನು ಗ್ರಾಮಸ್ಥರು ನಿರ್ಮಿಸಿದ್ದರು. 108 ಅಡಿ ಸ್ತಂಭದಲ್ಲಿ ಕೇಸರಿ ಬಣ್ಣದ ಹನುಮ ಧ್ವಜವನ್ನು ಹಿಂದೂಪರ ಸಂಘಟನೆ ಕಾರ್ಯಕರ್ತರು ಹಾರಿಸಿದ್ದರು.

ಧ್ವಜ ಹಾರಿಸಲು ಕೆಲವು ಷರತ್ತುಗಳನ್ನು ಗ್ರಾಮ ಪಂಚಾಯತ್ ವಿಧಿಸಿತ್ತು. ಅದರ ಪ್ರಕಾರ ಕಾರ್ಯಕ್ರಮ ಮುಗಿದ ಮೇಲೆ ಅದನ್ನು ಇಳಿಸಬೇಕಾಗಿತ್ತು. ಆದರೆ, ಗ್ರಾಮಸ್ಥರು ಷರತ್ತಿನಂತೆ ಧ್ವಜ ಇಳಿಸಿರಲಿಲ್ಲ. ಬಳಿಕ ಕೆಲವರು ಧ್ವಜ ಇಳಿಸುವಂತೆ ದೂರು ನೀಡಿದ್ದರು. ತಾಲೂಕು ಆಡಳಿತದ ಸೂಚನೆಯಂತೆ ಧ್ವಜ ಇಳಿಸಲು ಮುಂದಾಗಿತ್ತು. ತಾಲೂಕು ಪಂಚಾಯತ್​ ಕಾರ್ಯನಿರ್ವಹಣಾಧಿಕಾರಿ ವೀಣಾ ನೇತೃತ್ವದಲ್ಲಿ ಧ್ವಜ ಇಳಿಸಲು ಮುಂದಾಗಲಾಗಿತ್ತು. ಈ ವೇಳೆ ಕೆರಳಿದ ಹಿಂದೂಪರ ಸಂಘಟನೆ ಕಾರ್ಯಕರ್ತರು ಪ್ರತಿಭಟನೆ ಆರಂಭಿಸಿದ್ದಾರೆ.

ಇದನ್ನೂ ಓದಿ : Ram Mandir: ರಾಮಲಲ್ಲಾ ಮೂರ್ತಿ ಕೆತ್ತನೆಗೆ ನನಗೆ ಆಹ್ವಾನವೇ ಇರಲಿಲ್ಲ! ಶಿಲ್ಪಿ ಅರುಣ್‌ ಯೋಗಿರಾಜ್‌ ಮನದಾಳದ ಮಾತು

ಸರ್ಕಾರಿ ಜಾಗದಲ್ಲಿ ಧ್ವಜಸ್ತಂಭ ನಿರ್ಮಾಣ ಮಾಡಲಾಗುತ್ತಿರುವ ಕಾರಣ ತೆರವು ಮಾಡಬೇಕು ಎಂದು ತಾಪಂ ಅಧಿಕಾರಿ ವೀಣಾ ಅವರು ಹಿಂದೂಪರ ಸಂಘಟನೆ ಕಾರ್ಯಕರ್ತರ ಮನವೊಲಿಸಲು ಮುಂದಾಗಿದ್ದರು. ವೀಣಾ ಅವರ ಮಾತಿಗೆ ಸಿಟ್ಟಿಗೆದ್ದ ಗ್ರಾಮಸ್ಥರಿಂದ ಪ್ರತಿಭಟನೆ ಹೆಚ್ಚಿಸಿದ್ದಾರೆ. ಜೈ ಶ್ರೀರಾಮ್, ಜೈ ಹನುಮಾನ್ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರಾಣ ಬೇಕಾದರೂ ಬಿಡುವೆವು. ಧ್ವಜ ಇಳಿಸಲ್ಲ ಎಂದು ಪಟ್ಟು ಹಿಡಿದಿದ್ದಾರೆ. ಧ್ವಜ ಸ್ತಂಭದ ಬಳಿ ಹೆಚ್ಚಿನ ಪೊಲೀಸರ ನಿಯೋಜನೆ ಮಾಡಲಾಗಿದೆ.

ಗಂಗಾ ನದಿಯಲ್ಲಿ ಮಹಿಳೆಯರ ಸ್ನಾನದ ವಿಡಿಯೊ ಚಿತ್ರೀಕರಣ ನಿಷೇಧಿಸಿ; ಹಿಂದು ಜನಜಾಗೃತಿ ಸಮಿತಿ ಒತ್ತಾಯ

ನವ ದೆಹಲಿ: ಪವಿತ್ರ ಗಂಗಾ ನದಿಯ ಸ್ನಾನಘಟ್ಟಗಳಲ್ಲಿ (River Ganga) ಮಹಿಳೆಯರ ಸ್ನಾನದ ವಿಡಿಯೊ ಚಿತ್ರೀಕರಣ ನಿಷೇಧಿಸಲು ರಾಷ್ಟ್ರೀಯ ಮಹಿಳಾ ಆಯೋಗ ಮತ್ತು ಉತ್ತರಾಖಂಡ ರಾಜ್ಯ ಮಹಿಳಾ ಆಯೋಗಕ್ಕೆ ಹಿಂದು ಜನಜಾಗೃತಿ ಸಮಿತಿ ಮನವಿ ಮಾಡಿದೆ.

ಮಹಿಳೆಯರು ಮತ್ತು ಅಪ್ರಾಪ್ತ ವಯಸ್ಸಿನ ಹುಡುಗಿಯರ ಅಶ್ಲೀಲ ವಿಡಿಯೊ, ಛಾಯಾಚಿತ್ರಗಳನ್ನು ತೆಗೆದು ಸಾಮಾಜಿಕ ಜಾಲತಾಣಗಳಲ್ಲಿ ಹಾಕುವ ಹೀರೋ ಸಿಟಿ ಬ್ಲಾಗ್, ಹರಿದ್ವಾರ್ ಬ್ಲಾಗ್, ಗೋವಿಂದ ಯುಕೆ ಬ್ಲಾಗ್, ಅದ್ಭುತ ಬ್ಲಾಗ್, ಶಾಂತಿ ಕೂಂಜ ಹರಿದ್ವಾರ ಬ್ಲಾಗ್ ಮತ್ತು ಇತರ ಸಾಮಾಜಿಕ ಜಾಲತಾಣಗಳನ್ನು ನಿರ್ವಹಣೆ ಮಾಡುವವರ ವಿರುದ್ಧ ಐಪಿಸಿ ಕಲಂ 354c /509, ಮಾಹಿತಿ ತಂತ್ರಜ್ಞಾನ ಕಾನೂನಿನ ಕಲಂ 66E /67/67A ಮತ್ತು ಪೋಕ್ಸೊ ಕಾನೂನಿನ ಅಂತರ್ಗತ ಕಲಂ 14 ಪ್ರಕಾರ ಕಠಿಣ ಕ್ರಮ ಕೈಗೊಳ್ಳಬೇಕೆಂದು ಪಂಜಾಬ್‌ನ ಮೊಗಾದ ವಕೀಲರಾದ ಅಜಯ್ ಗುಲಾಟಿ ಮತ್ತು ಹಿಂದು ಜನಜಾಗೃತಿ ಸಮಿತಿಯ ದೆಹಲಿಯ ನ್ಯಾಯವಾದಿ ಅಮಿತಾ ಸಚ್ದೇವ ಅವರು ಒತ್ತಾಯಿಸಿದ್ದಾರೆ.

ಡಿಜಿಟಲ್ ಮಾಧ್ಯಮ ಹಾಗೂ ಸಾಮಾಜಿಕ ಜಾಲತಾಣದಲ್ಲಿ ಸದ್ಯ ದೊಡ್ಡ ಪ್ರಮಾಣದಲ್ಲಿ ಆಘಾತಕಾರಿ ಮತ್ತು ಆಕ್ಷೇಪಾರ್ಹ ವಿಷಯಗಳನ್ನು ಪ್ರಸಾರ ಮಾಡಲಾಗುತ್ತಿದೆ. ಇದರಲ್ಲಿ ಈಗ ಪ್ರಮುಖವಾಗಿ ಬೇರೆ ಬೇರೆ ಬ್ಲಾಗರ್ಸ್ ಗಳಿಂದ ಹಣದ ಆಸೆಗಾಗಿ ಪವಿತ್ರ ಗಂಗಾ ನದಿಯಲ್ಲಿ ಸ್ನಾನ ಮಾಡುವ ಮಹಿಳೆಯರ ವಿಡಿಯೊ, ರೀಲ್ಸ್‌, ಶಾರ್ಟ್ಸ್ ತಯಾರಿಸುವುದು, ಛಾಯಾಚಿತ್ರಗಳನ್ನು ತೆಗೆಯುವುದು ಮತ್ತು ಅವರ ಅನುಮತಿ ಇಲ್ಲದೆ ವಿವಿಧ ಇಂಟರ್ನೆಟ್‌, ಮಾಧ್ಯಮಗಳಲ್ಲಿ ಪ್ರಸಾರ ಮಾಡುವುದು ನಡೆಯುತ್ತಿದೆ.

Exit mobile version