ಪುಣೆ : ಮದ್ಯದ ಅಮಲಿನಲ್ಲಿ ಅಪ್ಪನ ಐಷಾರಾಮಿ ಪೋರ್ಶೆ ಕಾರನ್ನು ಚಲಾಯಿಸಿಕೊಂಡು ಹೋಗಿ ಬೈಕ್ನಲ್ಲಿ ಸಾಗುತ್ತಿದ್ದ ಇಬ್ಬರಿಗೆ ಗುದ್ದಿಸಿ ಅವರ ಸಾವಿಗೆ ಕಾರಣನಾದ ಬಾಲಕನನ್ನು ರಿಮಾಂಡ್ನಿಂದ ಬಿಡುಗಡೆ ಮಾಡುವಂತೆ ಬಾಂಬೆ ಹೈಕೋರ್ಟ್ ಮಂಗಳವಾರ ಆದೇಶ ನೀಡಿದೆ. ಅಪ್ರಾಪ್ತ ವಯಸ್ಸಿನ ಆರೋಪಿಯನ್ನು ಬಂಧಿಸಿದ್ದು ತಪ್ಪು ಎಂಬುದಾಗಿ ಕೋರ್ಟ್ ಇದೇ ವೇಳೆ ಅಭಿಪ್ರಾಯಪಟ್ಟಿದೆ. ರಿಮಾಂಡ್ ಆದೇಶವನ್ನು ಕಾನೂನುಬಾಹಿರವೆಂದು ಘೋಷಿಸಿದೆ.
ಮೇ ತಿಂಗಳಲ್ಲಿ 17 ವರ್ಷದ ಬಾಲಕ ಚಲಾಯಿಸುತ್ತಿದ್ದ ಪೋರ್ಷೆ ಕಾರು ಬೈಕ್ಗೆ ಡಿಕ್ಕಿ ಹೊಡೆದಿತ್ತು. ಈ ಪ್ರಕರಣದಲ್ಲಿ ಬಾಲಕನಿಗೆ 14 ಗಂಟೆಯ ಒಳಗೆ ಜಾಮೀನು ನೀಡಿರುವುದಕ್ಕೆ ಆಕ್ರೋಶ ವ್ಯಕ್ತವಾಗಿತ್ತು. ಬಳಿಕ ಕಾರು ಚಲಾಯಿಸಿದ್ದ ಬಾಲಕ ಸೇರಿ ಹದಿಹರೆಯದವನನ್ನು ಬಾಲಾಪರಾಧಿ ನ್ಯಾಯ ಮಂಡಳಿ (ಜೆಜೆಬಿ) ರಿಮಾಂಡ್ ಗೆ ನೀಡಿತ್ತು.
ಇದನ್ನೂ ಓದಿ: Viral Video: ಚಿಕನ್ ಲೆಗ್ ಪೀಸ್‌ಗಾಗಿ ಮದುವೆ ಮನೆ ಪೀಸ್..ಪೀಸ್..! ವಿಡಿಯೋ ನೋಡಿದ್ರೆ ಶಾಕ್ ಆಗೋದು ಗ್ಯಾರಂಟಿ
ಅಪಘಾತದ ಒಂದು ತಿಂಗಳ ನಂತರ, ನ್ಯಾಯಮೂರ್ತಿಗಳಾದ ಭಾರತಿ ಡಾಂಗ್ರೆ ಮತ್ತು ಮಂಜುಷಾ ದೇಶಪಾಂಡೆ ಅವರ ನ್ಯಾಯಪೀಠವು ಬಾಲಾಪರಾಧಿ ನ್ಯಾಯ ಮಂಡಳಿಯ ನಿರ್ಧಾರ ಸರಿಯಲ್ಲ ಎಂದಿದೆ. ಅಪಘಾತವು ದುರದೃಷ್ಟಕರವಾಗಿದ್ದರೂ, ಅಪ್ರಾಪ್ತ ವಯಸ್ಸಿನ ಬಾಲಕನನ್ನು ವೀಕ್ಷಣಾ ಗೃಹದಲ್ಲಿ ಇರಿಸಲು ಸಾಧ್ಯವಿಲ್ಲ ಎಂದು ಹೇಳಿದೆ. ಹದಿಹರೆಯದವನನ್ನು ಬಿಡುಗಡೆ ಮಾಡುವಂತೆ ನ್ಯಾಯಾಲಯವು ಬಾಲಾಪರಾಧಿ ನ್ಯಾಯ ಮಂಡಳಿಗೆ ಆದೇಶಿಸಿದೆ.
ಅಪ್ರಾಪ್ತ ಬಾಲಕಿಯ ಪೋಷಕರು ಮತ್ತು ಅಜ್ಜ ಪ್ರಸ್ತುತ ಜೈಲಿನಲ್ಲಿರುವುದರಿಂದ, ಹದಿಹರೆಯದವನ ಕಸ್ಟಡಿಯನ್ನು ಅವನ ತಂದೆಯ ಚಿಕ್ಕಮ್ಮನಿಗೆ ನೀಡಲಾಗಿದೆ.
ಇಬ್ಬರ ಸಾವಿಗೆ ಕಾರಣವಾದ 17 ವರ್ಷದ ಬಾಲಕನಿಗೆ ಪೋರ್ಶೆ ಕಾರು ಸಿಕ್ಕಿದ್ದು ʼಬರ್ತ್‌ಡೇ ಗಿಫ್ಟ್ʼ!
ಮುಂಬೈ: ಮಹಾರಾಷ್ಟ್ರದ ಪುಣೆಯಲ್ಲಿ 17 ವರ್ಷದ ಬಾಲಕನು ಮದ್ಯಪಾನ ಮಾಡಿ ಪೋರ್ಶೆ ಕಾರು ಚಲಾಯಿಸಿ, ಅಪಘಾತದಲ್ಲಿ (Porsche Crash) ಇಬ್ಬರ ಸಾವಿಗೆ ಕಾರಣವಾದ ಪ್ರಕರಣವು (Pune Car Accident) ದೇಶಾದ್ಯಂತ ಸುದ್ದಿಯಾಗಿದೆ. ಅಪ್ರಾಪ್ತನ ಕೈಗೆ ಕಾರು ಕೊಟ್ಟ ಹಿನ್ನೆಲೆಯಲ್ಲಿ 17 ವರ್ಷದ ಬಾಲಕನ ತಂದೆ ವಿಶಾಲ್ ಅಗರ್ವಾಲ್ ಹಾಗೂ ಅವರ ತಾತ ಸುರೇಂದ್ರ ಅಗರ್ವಾಲ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಇದರ ಬೆನ್ನಲ್ಲೇ, ಬಾಲಕನು ಚಲಾಯಿಸಿದ ಪೋರ್ಶೆ ಕಾರನ್ನು (Porsche) ಆತನ ತಾತನು ಬರ್ತ್‌ಡೇ ಗಿಫ್ಟ್ ಆಗಿ ಕೊಟ್ಟಿದ್ದರು ಎಂದು ತಿಳಿದುಬಂದಿದೆ.
ಇದನ್ನೂ ಓದಿ: Actor Darshan: ಪ್ರಥಮ್, ಉಮಾಪತಿಗೆ ಬೆದರಿಕೆ ಹಾಕಿದ ಡಿ ಬಾಸ್ ಫ್ಯಾನ್ ಬಂಧನ
ಮೇ 19ರಂದು ಪುಣೆಯಲ್ಲಿ ಅಪಘಾತ ಸಂಭವಿಸಿದೆ. ಕಲ್ಯಾಣಿ ನಗರದಲ್ಲಿ ಕುಡಿದು ವೇಗವಾಗಿ ಕಾರು ಚಲಾಯಿಸಿದ ಕಾರಣ ಮಧ್ಯಪ್ರದೇಶದ ಅಶ್ವಿನಿ ಕೋಷ್ಟ ಹಾಗೂ ಅನೀಶ್ ಅವಾಧಿಯಾ ಎಂಬ ಇಬ್ಬರು ಟೆಕ್ಕಿಗಳು ಮೃತಪಟ್ಟಿದ್ದಾರೆ. ವಿಶಾಲ್ ಅಗರ್ವಾಲ್ ರಿಯಲ್ ಎಸ್ಟೇಟ್ ಉದ್ಯಮಿಯಾಗಿದ್ದು, ಅವರು ಪ್ರಭಾವ ಬೀರಲು ಯತ್ನಿಸಿದ್ದರು. ಅಪಘಾತಕ್ಕೆ ಕಾರಣವಾದ 17 ವರ್ಷದ ಬಾಲಕನಿಗೆ ಪೊಲೀಸ್ ಠಾಣೆಯಲ್ಲಿ ಪಿಜ್ಜಾ ಕೂಡ ಪೂರೈಸಲಾಗಿತ್ತು ಎಂದು ವರದಿಗಳು ತಿಳಿಸಿವೆ. ಶ್ರೀಮಂತ ಕುಟುಂಬದ 17 ವರ್ಷದ ಬಾಲಕನಿಗೆ ಆತನ ತಾತನು ಹುಟ್ಟುಹಬ್ಬದ ಉಡುಗೊರೆಯಾಗಿ ಪೋರ್ಶೆ ಟೇಕ್ಯಾನ್ (ಸುಮಾರು 2 ಕೋಟಿ ರೂ.) ಕಾರು ಉಡುಗೊರೆಯಾಗಿ ನೀಡಿದ್ದರು ಎನ್ನಲಾಗಿದೆ.