ಬೆಂಗಳೂರು : ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರನ್ನು ಲೋಕಸಭೆಯಲ್ಲಿ ಪ್ರತಿ ಪಕ್ಷದ ನಾಯಕರನ್ನಾಗಿ ನೇಮಿಸಲಾಗಿದೆ ಎಂದು ಪಕ್ಷದ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಪ್ರತಿ ಪಕ್ಷಗಳ ನಾಯಕರ ಸಭೆಯ ನಂತರ ಪ್ರಕಟಿಸಿದ್ದಾರೆ ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷರು ಸ್ಪೀಕರ್ ಭರ್ತೃಹರಿ ಮಹತಾಬ್ ಅವರಿಗೆ ಅವರಿಗೆ ಪತ್ರ ಬರೆದು ರಾಹುಲ್ ಗಾಂಧಿ ಅವರನ್ನು ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವ ನಿರ್ಧಾರವನ್ನು ತಿಳಿಸಲಾಗಿದೆ. ಇತರ ಪದಾಧಿಕಾರಿಗಳನ್ನು ನಂತರ ನಿರ್ಧರಿಸಲಾಗುವುದು ಎಂದು ವೇಣುಗೋಪಾಲ್ ಹೇಳಿದ್ದಾರೆ.
Rahul Gandhi is the Leader Of Opposition
— Supriya Shrinate (@SupriyaShrinate) June 25, 2024
🇮🇳✊🏼🇮🇳 pic.twitter.com/JeZqFv3Q3q
ಜೂನ್ 9 ರಂದು ನಡೆದ ಕಾಂಗ್ರೆಸ್ ಕಾರ್ಯಕಾರಿ ಸಮಿತಿ (ಸಿಡಬ್ಲ್ಯೂಸಿ) ರಾಹುಲ್ ಗಾಂಧಿ ಅವರನ್ನು ಲೋಕಸಭೆಯಲ್ಲಿ ಪ್ರತಿ ಪಕ್ಷದ ನಾಯಕರನ್ನಾಗಿ ನೇಮಿಸುವ ನಿರ್ಣಯವನ್ನು ಅಂಗೀಕರಿಸಿತ್ತು. ಸಿಡಬ್ಲ್ಯುಸಿ ಸಭೆಯ ನಂತರ, ರಾಹುಲ್ ಗಾಂಧಿ ಅವರು ನಿರ್ಧಾರ ತೆಗೆದುಕೊಳ್ಳುವ ಮೊದಲು ಯೋಚಿಸಲು ಸ್ವಲ್ಪ ಸಮಯ ಬೇಕು ಎಂದು ಕೋರಿದ್ದರು.
18 ನೇ ಲೋಕಸಭೆಯ ಸ್ಪೀಕರ್ ಹುದ್ದೆಗಾಗಿ ಮತ ದಾನ ನಡೆಯುವ ಕೆಲವೇ ಗಂಟೆಗಳ ಮೊದಲು ಈ ನಿರ್ಧಾರವನ್ನು ಪ್ರಕಟಿಸಲಾಗಿದೆ. ಸಂಪ್ರದಾಯದಂತೆ ಪ್ರತಿ ಪಕ್ಷದ ಸದಸ್ಯರೊಬ್ಬರಿಗೆ ಉಪಸಭಾಪತಿ ಹುದ್ದೆ ನೀಡಲು ಬಿಜೆಪಿ ನಿರಾಕರಿಸಿದ ಬಳಿಕ ಕಾಂಗ್ರೆಸ್ ಮತ್ತು ಬಿಜೆಪಿ ಬಣದ ನಡುವೆ ಮತ ಸಮರ ಶುರುವಾಗಿದೆ. ಲೋಕಸಭೆಯಲ್ಲಿ ಸ್ಪೀಕರ್ ಆಗಿ ನೇಮಕ ಮಾಡಲು ಬಿಜೆಪಿ ಓಂ ಬಿರ್ಲಾ ಅವರನ್ನು ಆಯ್ಕೆ ಮಾಡಿದ ತಕ್ಷಣ ಕೆ.ಸುರೇಶ್ ಅವರನ್ನು ಇಂಡಿಯಾ ಬ್ಲಾಕ್ ಕಣಕ್ಕೆ ಇಳಿಸಿದೆ.
ಇದನ್ನೂ ಓದಿ:Ayodhya Ram Mandir : ರಾಮಮಂದಿರದ ಚಾವಣಿ ಸೋರುತ್ತಿಲ್ಲ; ನಿರ್ಮಾಣ ಸಮಿತಿ ಸ್ಪಷ್ಟನೆ
2024 ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 99 ಲೋಕಸಭಾ ಸ್ಥಾನಗಳನ್ನು ಗೆಲ್ಲುವ ಮೂಲಕ ಇಂಡಿಯಾ ಬಣದಲ್ಲಿ ಏಕೈಕ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿತು. ಪ್ರತಿಪಕ್ಷದ ಹುದ್ದೆಗೆ ಹಕ್ಕು ಸಾಧಿಸಲು ಪಕ್ಷವು 55 ಸದಸ್ಯರ ಗಡಿಯನ್ನು ದಾಟಬೇಕಾಗಿತ್ತು.
ರಾಹುಲ್ ಗಾಂಧಿ ಚುನಾವಣೆಯಲ್ಲಿ ಎರಡು ಕ್ಷೇತ್ರಗಳಿಂದ ಗೆದ್ದಿದ್ದಾರೆ. ಅವರು ಕೇರಳದ ವಯನಾಡ್ ಹಾಗೂ ಉತ್ತರ ಪ್ರದೇಶದ ರಾಯ್ ಬರೇರಿಯಲ್ಲಿ ಚುನಾವಣೆಗೆ ನಿಂತು ಬೃಹತ್ ಅಂತರದಿಂದ ಗೆಲುವು ಸಾಧಿಸಿದ್ದರು. ಇದೀಗ ಅವರು ಕೇರಳದ ವಯನಾಡ್ ತೊರೆಯಲು ನಿರ್ಧರಿಸಿದ್ದಾರೆ. ಕಳೆದ ಹತ್ತು ವರ್ಷಗಳಲ್ಲಿ ಹಲವಾರು ಹಿನ್ನಡೆಗಳನ್ನು ಅನುಭವಿಸಿದ್ದ ರಾಹುಲ್ ಮತ್ತೆ ಒಂದೊಂದಾಗಿ ನಾಯಕತ್ವವನ್ನು ಗಳಿಸಿಕೊಳ್ಳುತ್ತಿದ್ದಾರೆ.