Site icon Vistara News

ಅಧಿಕಾರಕ್ಕೆ ಬಂದ್ರೆ ನಿಮ್ಮ ಖಾತೆಗೆ ಟಕಾಟಕ್ 1 ಲಕ್ಷ ಎಂದಿದ್ದ ರಾಹುಲ್ ಗಾಂಧಿ! ಪೋಸ್ಟ್ ಆಫೀಸ್ ಮುಂದೆ ಮುಸ್ಲಿಂ ಮಹಿಳೆಯರ ನೂಕುನುಗ್ಗಲು!!

ರಾಹುಲ್‌ ಗಾಂಧಿ rahul gandhi ippb account 2

ವಿಶೇಷ ವರದಿ: ಅಭಿಷೇಕ್ ಬಿ.ವಿ, ವಿಸ್ತಾರ ನ್ಯೂಸ್

ಬೆಂಗಳೂರು: ಇಂಡಿಯಾ ಮೈತ್ರಿಕೂಟ (INDIA bloc) ಅಧಿಕಾರಕ್ಕೆ ಬಂದ ನಂತರದ ದಿನವೇ ಮಹಿಳೆಯರ (women) ಖಾತೆಗೆ ʼಟಕಾ ಟಕ್ ಹಣʼ ಜಮಾವಣೆ ಮಾಡಲಾಗುವುದು ಎಂಬ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ (Rahul Gandhi) ಘೋಷಣೆ ಪರಿಣಾಮ, ಪೋಸ್ಟ್‌ ಆಫೀಸ್‌ಗಳಲ್ಲಿ (Post Office) ಖಾತೆ ತೆರೆಯಲು ಮಹಿಳೆಯರು ಮುಗಿಬಿದ್ದಿದ್ದಾರೆ. ಇವರಲ್ಲಿ ಹೆಚ್ಚಾಗಿ ಮುಸ್ಲಿಂ ಮಹಿಳೆಯರೇ ಕಂಡು ಬರುತ್ತಿದ್ದಾರೆ.

ಲೋಕಸಭೆ ಚುನಾವಣೆ (Lok Sabha Election 2024) ಪ್ರಚಾರದಲ್ಲಿ ಇಂಡಿಯಾ ಒಕ್ಕೂಟ, ಅಧಿಕಾರ ಬಂದ ಕೂಡಲೇ ಸರ್ಕಾರ ನಿಮ್ಮ ಖಾತೆಗೆ ಹಣ ಜಮಾವಣೆ ಮಾಡುವುದಾಗಿ ಘೋಷಣೆ ಮಾಡಿತ್ತು. ಈ ಘೋಷಣೆಯ ಬೆನ್ನಲ್ಲೇ ಇಂಡಿಯನ್ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ ಡಿಜಿಟಲ್ ಖಾತೆ (post payments Bank digital account) ತೆರೆಯಲು ಮಹಿಳೆಯರು ಮುಗಿಬಿದ್ದಿದ್ದಾರೆ. ಪ್ರತಿ ತಿಂಗಳು 8500 ರೂ. ಹಣ ಬರಲಿದೆ ಎಂಬ ನಿರೀಕ್ಷೆಯಲ್ಲಿ ಪೋಸ್ಟ್ ಆಫೀಸ್ ಮುಂದೆ ಕ್ಯೂ ನಿಲ್ಲುತ್ತಿದ್ದಾರೆ.

ಕಳೆದ 15 ದಿನದಿಂದ ನಿತ್ಯ ಸಾವಿರಾರು ಸಂಖ್ಯೆಯಲ್ಲಿ ಖಾತೆ ತೆರೆಯಲು ಮಹಿಳೆಯರು ಮುಗಿಬೀಳುತ್ತಿರುವುದು ಕಂಡುಬಂದಿದೆ. ಮಹಿಳೆಯರ ನಿಯಂತ್ರಣ ಮಾಡಲಾರದೆ ಬೆಂಗಳೂರಿನ ಅಂಚೆ ಕೇಂದ್ರ ಕಚೇರಿಯ ಸಿಬ್ಬಂದಿ ಹೈರಾಣಾಗುತ್ತಿದ್ದಾರೆ. ನಿತ್ಯ ಬೆಳಗ್ಗೆ 4 ಗಂಟೆಯಿಂದಲೇ ಕಚೇರಿ ಮುಂದೆ ಮುಗಿಬೀಳುತ್ತಿರುವ ಸುತ್ತಮುತ್ತಲಿನ ಶಿವಾಜಿನಗರ, ವಸಂತನಗರ ಮುಂತಾದೆಡೆಗಳ ಮಹಿಳೆಯರು, ಅವರ ಜೊತೆಗೆ ಬರುತ್ತಿರುವ ಪುರುಷರು ಅಂಚೆ ಕಚೇರಿ ಆವರಣವನ್ನು ಅಕ್ಷರಶಃ ಸಂತೆಯಾಗಿಸಿದ್ದಾರೆ.

ಮಹಿಳೆಯರ ನಿಯಂತ್ರಣ ಸಾಧ್ಯವಾಗದೆ ಅಂಚೆ ಸಿಬ್ಬಂದಿ ಟೋಕ‌ನ್ ವಿತರಿಸಲು ಆರಂಭಿಸಿದ್ದಾರೆ. ಬೆಳಗ್ಗೆ 4 ಗಂಟೆಗೆ ಟೋಕನ್ ವಿತರಣೆ ಆರಂಭವಾಗುತ್ತಿದೆ. ಸಾವಿರಾರು ಸಂಖ್ಯೆಯಲ್ಲಿ ಕ್ಯೂ ನಿಂತು ಮಹಿಳೆಯರು ಟೋಕನ್ ಪಡೆಯುತ್ತಿದ್ದಾರೆ.

ಖಾತೆ ತೆರೆಯುತ್ತಿರುವ ಮಹಿಳೆಯರಿಗೂ ಹಣ ಬರುವ ಬಗ್ಗೆ ಖಚಿತ ಮಾಹಿತಿ ಇಲ್ಲ! “ಅಕೌಂಟ್‌ಗೆ ಹಣ ಬರುತ್ತೆ ಅಂತ ಅಕ್ಕಪಕ್ಕದವರು ಹೇಳಿದರು. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಒಂದು ಲಕ್ಷ ಹಣ ನೀಡುತ್ತಾರಂತೆ. ಮೋದಿ ಬಂದ್ರೆ 2 ಸಾವಿರ ನೀಡುತ್ತಾರಂತೆ. ಯಾರು ಬಂದ್ರೇನು ನಮಗೆ ಹಣ ಬರುತ್ತೆ ಅಂತ ಹೇಳಿದ್ರು. ಅದಕ್ಕೆ ಬಂದಿದ್ದೇವೆ. ಬೆಳಗ್ಗೆ 5 ಗಂಟೆಗೆ ಬಂದಿದ್ದೇವೆ. ಯಾವ ಅಧಿಕಾರಿಗಳೂ ಹೇಳಿಲ್ಲ, ನೆರೆಮನೆಯವರು, ಸ್ಥಳೀಯರು ಹೇಳಿದರು” ಎಂಬುದು ಖಾತೆಗಾಗಿ ಕ್ಯೂ ನಿಂತ ಮಹಿಳೆಯರ ಹೇಳಿಕೆ.

ಹೆಡ್‌ ಪೋಸ್ಟ್‌ ಮಾಸ್ಟರ್‌ ಹೇಳೋದೇನು?

“ನಮ್ಮಲ್ಲಿ ಮೊದಲಿನಿಂದಲೂ IPPB ಖಾತೆ ಮಾಡುತ್ತಿದ್ದೇವೆ. ಆದರೆ ಕೆಲ ದಿನಗಳಿಂದ ಜನರ ಸಂಖ್ಯೆ ಸಿಕ್ಕಾಪಟ್ಟೆ ಹೆಚ್ಚಾಗಿದೆ. ಅಕೌಂಟ್‌ಗೆ ಹಣ ಹಾಕ್ತಾರೆ ಅಂತ ಜನ ಬರುತ್ತಿದ್ದಾರೆ. ಹಣ ಬರುವ ಬಗ್ಗೆ ನಮಗೆ ಯಾವುದೇ ಸೂಚನೆ ಇಲ್ಲ. ಆದರೆ ವದಂತಿ ಹರಡಿ ಜನರು ಜಾಸ್ತಿ ಜಾಸ್ತಿ ಬರ್ತಿದ್ದಾರೆ” ಎಂದು ಹೆಡ್ ಪೋಸ್ಟ್ ಮಾಸ್ಟರ್ ಮಂಜೇಶ್ ಹೇಳಿದ್ದಾರೆ.

“ಈ ಖಾತೆಯಿಂದ ಬೇರೆ ಬೇರೆ ಪ್ರಾಧಿಕಾರಗಳಿಗೆ ಹಣ ಕಟ್ಟಬಹುದು. 200 ರೂ. ಮಾತ್ರ ಜಮಾ ಮಾಡಿಸಿ ಖಾತೆ ತೆರೆಯುತ್ತಿದ್ದೇವೆ. ಜನರು ಹೆಚ್ಚಾಗಿದ್ದರಿಂದ ಈಗ ಹೆಚ್ಚಿನ ಸಿಬ್ಬಂದಿ ನೇಮಿಸಿದ್ದೇವೆ. ನಿತ್ಯ 1 ಸಾವಿರ ಅಕೌಂಟ್ ಮಾಡಿ ಕೊಡ್ತಿದ್ದೇವೆ. ಜನರಿಗೆ ಮಾಹಿತಿ ಕೊರತೆ ಇರೋದರಿಂದ ಮುಗಿಬೀಳ್ತಿದ್ದಾರೆ. ಇದಕ್ಕೆ ಯಾವುದೇ ಕೊನೆ ದಿನಾಂಕ ಇಲ್ಲ. ಯಾವ ಅಂಚೆ ಕಚೇರಿಯಲ್ಲಾದರೂ ಅಕೌಂಟ್ ಮಾಡಿಸಬಹುದು” ಎಂದು ಹೆಡ್ ಪೋಸ್ಟ್ ಮಾಸ್ಟರ್ ಮಂಜೇಶ್ ಸ್ಪಷ್ಟನೆ ನೀಡಿದ್ದಾರೆ.

ಇದನ್ನೂ ಓದಿ: Rahul Gandhi: ನೋಡ ನೋಡ್ತಿದ್ದಂತೆ ತಲೆ ಮೇಲೆ ನೀರು ಸುರಿದುಕೊಂಡ ರಾಹುಲ್‌ ಗಾಂಧಿ! ವಿಡಿಯೋ ಇದೆ

Exit mobile version