Site icon Vistara News

Rahul Gandhi: ಚುನಾವಣಾ ಜವಾಬ್ದಾರಿ ನಿರ್ವಹಿಸುವಲ್ಲಿ ವಿಫಲ; 18 ಸಚಿವರ ವಿರುದ್ಧ ರಾಹುಲ್ ಗಾಂಧಿ ಅಸಮಾಧಾನ

Election results 2024

ಬೆಂಗಳೂರು: ರಾಜ್ಯದ ಲೋಕಸಭೆ ಚುನಾವಣೆಯಲ್ಲಿ (Karnataka election results 2024) ಗೆದ್ದ ಕಾಂಗ್ರೆಸ್‌ನ 9 ನೂತನ ಸಂಸದರಿಗೆ ಅಭಿನಂದನೆ ಹಾಗೂ ಸೋತ 19 ಅಭ್ಯರ್ಥಿಗಳಿಗೆ ಸನ್ಮಾನ ಕಾರ್ಯಕ್ರಮ ಶುಕ್ರವಾರ ನಗರದ ಕೆಪಿಸಿಸಿ ಕಚೇರಿಯ ಭಾರತ್ ಜೋಡೋ ಭವನದಲ್ಲಿ ನೆರವೇರಿತು. ಬಿಜೆಪಿಯ ಮಾನನಷ್ಟ ಪ್ರಕರಣದ ವಿಚಾರಣೆಗಾಗಿ ನಗರಕ್ಕೆ ಆಗಮಿಸಿದ್ದ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ (Rahul Gandhi) ಅವರು, ಗೆದ್ದ ಅಭ್ಯರ್ಥಿಗಳಿಗೆ ಅಭಿನಂದನೆ ಸಲ್ಲಿಸಿ, ಸೋತವರಿಗೆ ಧೈರ್ಯ ಹೇಳಿದ್ದಾರೆ. ಇದೇ ವೇಳೆ ಚುನಾವಣಾ ಜವಾಬ್ದಾರಿ ನಿರ್ವಹಿಸುವಲ್ಲಿ ವಿಫಲರಾದ ಸಚಿವರ ಬಗ್ಗೆ ರಾಹುಲ್ ಗಾಂಧಿ ಅಸಮಾಧಾನ ಹೊರಹಾಕಿದ್ದಾರೆ.

ಎಲ್ಲಾ 28 ಕಾಂಗ್ರೆಸ್‌ ಅಭ್ಯರ್ಥಿಗಳ ಜತೆ ರಾಹುಲ್ ಗಾಂಧಿ ಸಭೆ ನಡೆಸಿದರು. ಈ ವೇಳೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್‌ ಸುರ್ಜೇವಾಲಾ ಉಪಸ್ಥಿತರಿದ್ದರು. ಈ ವೇಳೆ ಗೆದ್ದವರಿಗೆ ಅಭಿನಂದನೆ, ಸೋತವರಿಗೆ ಧೈರ್ಯ ಹೇಳಿದ ರಾಹುಲ್ ಗಾಂಧಿ ಅವರು, ಕ್ಷೇತ್ರದಲ್ಲಿ ಹೆಚ್ಚು ಸಮಯ ಕಳೆಯಿರಿ. ಬೆಂಗಳೂರು, ದೆಹಲಿಯಲ್ಲೇ ಇರಬೇಡಿ. ಕ್ಷೇತ್ರದ ಜನರ ಜೊತೆಗೆ ನಿರಂತರ ಸಂಪರ್ಕ ಇಟ್ಟುಕೊಳ್ಳಿ. ನಾವು ನಿಮ್ಮ ಜತೆಗೆ ಇದ್ದೇವೆ. ನಿಮ್ಮ ನಿಮ್ಮ ಕ್ಷೇತ್ರಗಳಲ್ಲಿ ಪಕ್ಷ ಸಂಘಟನೆಯಲ್ಲಿ ತೊಡಗಿಕೊಳ್ಳಿ. ಕಾರ್ಯಕರ್ತರ ವಿಶ್ವಾಸಗಳಿಸಿ, ಅದರಿಂದ ಮುಂದೆ ನಿಮಗೂ, ಪಕ್ಷಕ್ಕೂ ಅನುಕೂಲವಾಗಲಿದೆ ಎಂದು ತಿಳಿಸಿದ್ದಾರೆ.

ಸಚಿವರ ಬಗ್ಗೆ ರಾಹುಲ್ ಗಾಂಧಿ ಅಸಮಾಧಾನ

ಚುನಾವಣಾ ಜವಾಬ್ದಾರಿ ನಿರ್ವಹಿಸುವಲ್ಲಿ ವಿಫಲರಾದ ಸಚಿವರ ಬಗ್ಗೆ ಸಭೆಯಲ್ಲಿ ರಾಹುಲ್ ಗಾಂಧಿ ಅಸಮಾಧಾನ ಹೊರಹಾಕಿದ್ದಾರೆ ಎನ್ನಲಾಗಿದೆ. ಲೀಡ್ ಕಡಿಮೆ ಕೊಟ್ಟ ಸಚಿವರ ಬಗ್ಗೆ ರಣದೀಪ್‌ ಸುರ್ಜೇವಾಲಾ ಮಾಹಿತಿ ನೀಡಿದ್ದಾರೆ. ಈ ವೇಳೆ 18 ಸಚಿವರು ಲೀಡ್ ಕೊಡಿಸುವಲ್ಲಿ ವಿಫಲ‌ ಎಂದು ವರದಿಯಲ್ಲಿ ತಿಳಿಸಲಾಗಿದೆ. ತಮ್ಮ ಜಿಲ್ಲೆಯಲ್ಲಿ ಅಭ್ಯರ್ಥಿ ಗೆಲ್ಲಿಸುವುದರಲ್ಲೂ ವಿಫಲರಾಗಿದ್ದಕ್ಕೆ ಸಚಿವರ ವಿರುದ್ಧ ರಾಹುಲ್‌ ಗಾಂಧಿ ಅಸಮಾಧಾನ ಹೊರಹಾಕಿದ್ದಾರೆ.

ಇದನ್ನೂ ಓದಿ | Lok Sabha Election 2024: ನೂತನ ಸಂಸದರಲ್ಲಿ ಶೇ. 93ರಷ್ಟು ಮಂದಿ ಕೋಟ್ಯಧೀಶರು, ಶೇ.46ರಷ್ಟು ಮಂದಿ ವಿರುದ್ಧ ಕ್ರಿಮಿನಲ್ ಕೇಸ್!

ಸ್ವ ಕ್ಷೇತ್ರದಲ್ಲೂ ಲೀಡ್ ಕೊಡಿಸುವಲ್ಲಿ ವಿಫಲವಾದ 18 ಸಚಿವರ ಬಗ್ಗೆ ರಾಹುಲ್ ಅಸಮಾಧಾನ ಹೊರಹಾಕಿದ್ದಾರೆ ಎನ್ನಲಾಗಿದ್ದು, ಲೀಡ್ ಕೊಡಿಸುವಲ್ಲಿ ವಿಫಲವಾದ ಸಚಿವರ ಸ್ಥಾನಮಾನಕ್ಕೆ ಮುಂದೆ ಸಂಕಷ್ಟ ಸಾಧ್ಯತೆ ಇದೆ ಎಂದು ಕೆಪಿಸಿಸಿ ಮೂಲಗಳು ತಿಳಿಸಿವೆ.

Exit mobile version