Site icon Vistara News

Rahul Gandhi: ರಾಹುಲ್‌ ಗಾಂಧಿಗೆ ಮುಕ್ಕಾಲು ಗಂಟೆ ಕಸ್ಟಡಿ, ಜಾಮೀನು; ಯಾವುದೀ ಪ್ರಕರಣ?

Rahul Gandhi news

ಹೊಸದಿಲ್ಲಿ: ಮಾನನಷ್ಟ ಮೊಕದ್ದಮೆಯೊಂದಕ್ಕೆ (Defamation Case) ಸಂಬಂಧಿಸಿ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ (Rahul Gandhi) ಅವರಿಗೆ ಸುಲ್ತಾನ್‌ಪುರ ಜಿಲ್ಲಾ ಸಿವಿಲ್‌ ನ್ಯಾಯಾಲಯ ಮಂಗಳವಾರ ಜಾಮೀನು (Bail) ನೀಡಿದೆ. ಇದಕ್ಕೂ ಮುನ್ನ ನ್ಯಾಯಾಲಯ ರಾಹುಲ್‌ ಅವರನ್ನು 30-45 ನಿಮಿಷಗಳ ಕಾಲ ಕಸ್ಟಡಿಗೆ ತೆಗೆದುಕೊಂಡಿತು ಎಂದು ಅವರ ವಕೀಲರು ಹೇಳಿದರು.

ಗೃಹ ಸಚಿವ ಅಮಿತ್ ಶಾ (Amit Shah) ವಿರುದ್ಧ ನೀಡಿದ್ದ ಹೇಳಿಕೆಗಾಗಿ ಬಿಜೆಪಿ ನಾಯಕ ವಿಜಯ್ ಮಿಶ್ರಾ ಅವರು 2018ರಲ್ಲಿ ಸಲ್ಲಿಸಿದ್ದ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿ ಈ ಬೆಳವಣಿಗೆ ನಡೆದಿದೆ.

ಜಾಮೀನು ವಿಚಾರವಾಗಿ ಮಾತನಾಡಿದ ರಾಹುಲ್ ಪರ ವಕೀಲ ಸಂತೋಷ್ ಪಾಂಡೆ, “ರಾಹುಲ್ ಗಾಂಧಿ ಅವರು ಇಂದು ನ್ಯಾಯಾಲಯದಲ್ಲಿ ಶರಣಾಗಿದ್ದಾರೆ. ನ್ಯಾಯಾಲಯ ಅವರನ್ನು 30-45 ನಿಮಿಷಗಳ ಕಾಲ ಕಸ್ಟಡಿಗೆ ತೆಗೆದುಕೊಂಡಿತು. ನಂತರ ಅವರ ಜಾಮೀನು ಅರ್ಜಿಯನ್ನು ಸಲ್ಲಿಸಲಾಯಿತು. ಅದನ್ನು ನ್ಯಾಯಾಲಯ ಸ್ವೀಕರಿಸಿತು. ವಿಚಾರಣೆಯ ಮುಂದಿನ ದಿನಾಂಕವನ್ನು ಇನ್ನೂ ನೀಡಲಾಗಿಲ್ಲ. ರಾಹುಲ್‌ ಅವರು ನಿರಪರಾಧಿ ಮತ್ತು ಅವರು ಯಾವುದೇ ಮಾನಹಾನಿಕರ ಹೇಳಿಕೆ ನೀಡಿಲ್ಲ” ಎಂದು ಹೇಳಿದರು.

ರಾಹುಲ್ ಗಾಂಧಿ ವಿರುದ್ಧ ಸಾಕಷ್ಟು ಪುರಾವೆಗಳು ರುಜುವಾತಾದರೆ ಅವರಿಗೆ ಗರಿಷ್ಠ 2 ವರ್ಷಗಳ ಶಿಕ್ಷೆ ವಿಧಿಸಬಹುದು ಎಂದು ಪಾಂಡೆ ಹೇಳಿದ್ದಾರೆ. 2018ರ ಮೇ 8ರಂದು ಬೆಂಗಳೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಶಾ ವಿರುದ್ಧ ಆಕ್ಷೇಪಾರ್ಹ ಕಾಮೆಂಟ್‌ಗಳನ್ನು ಮಾಡಿದ ಆರೋಪದ ಮೇಲೆ ಬಿಜೆಪಿ ನಾಯಕ ವಿಜಯ್ ಮಿಶ್ರಾ ಅವರು ಪ್ರಕರಣ ದಾಖಲಿಸಿದ್ದಾರೆ.

ಆ ಸಂದರ್ಭದಲ್ಲಿ ರಾಹುಲ್ ಗಾಂಧಿ ಅವರು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದರು. “ಬಿಜೆಪಿ ಪ್ರಾಮಾಣಿಕ ಮತ್ತು ಶುದ್ಧ ರಾಜಕಾರಣದಲ್ಲಿ ನಂಬಿಕೆಯಿದೆ ಎಂದು ಹೇಳಿಕೊಂಡಿದೆ. ಆದರೆ ಪಕ್ಷದ ಅಧ್ಯಕ್ಷರು ಕೊಲೆ ಪ್ರಕರಣದಲ್ಲಿ ಆರೋಪಿ ಆಗಿದ್ದಾರೆ” ಎಂದು ಹೇಳಿದ್ದರು. ರಾಹುಲ್‌ ಗಾಂಧಿ ಈ ಹೇಳಿಕೆ ನೀಡಿದಾಗ ಅಮಿತ್ ಶಾ ಬಿಜೆಪಿ ಅಧ್ಯಕ್ಷರಾಗಿದ್ದರು.

ಈ ಬೆಳವಣಿಗೆಗೆ ಪ್ರತಿಕ್ರಿಯಿಸಿದ ಮಿಶ್ರಾ, “ಈ ಘಟನೆ ನಡೆದಾಗ ನಾನು ಬಿಜೆಪಿ ಉಪಾಧ್ಯಕ್ಷನಾಗಿದ್ದೆ. ಬೆಂಗಳೂರಿನಲ್ಲಿ ಅಮಿತ್ ಶಾ ಅವರನ್ನು ಕೊಲೆಗಾರ ಎಂದು ರಾಹುಲ್ ಗಾಂಧಿ ಆರೋಪಿಸಿದ್ದರು. ಈ ಆರೋಪಗಳನ್ನು ಕೇಳಿದಾಗ ನನಗೆ ತುಂಬಾ ನೋವಾಯಿತು. ಏಕೆಂದರೆ ನಾನು ಬಿಜೆಪಿ ಕಾರ್ಯಕರ್ತನಾಗಿದ್ದೆ. ನಾನು ನನ್ನ ವಕೀಲರ ಮೂಲಕ ಈ ಬಗ್ಗೆ ದೂರು ಸಲ್ಲಿಸಿದ್ದೇನೆ” ಎಂದರು.

ಇದನ್ನೂ ಓದಿ: Modi Caste: ಪ್ರಧಾನಿ ಮೋದಿ ಹಿಂದುಳಿದ ಜಾತಿಯಲ್ಲಿ ಹುಟ್ಟಿಲ್ಲ! ರಾಹುಲ್‌ ಗಾಂಧಿ ಹೊಸ ಸಂಶೋಧನೆ!

Exit mobile version