Rain News: ರಾಜ್ಯದ ವಿವಿಧೆಡೆ ಮಳೆ ಆರ್ಭಟ; ಸಿಡಿಲು ಬಡಿದು ಗದಗದಲ್ಲಿ 20, ಶಿವಮೊಗ್ಗದಲ್ಲಿ 18 ಕುರಿ ಸಾವು - Vistara News

ಪ್ರಮುಖ ಸುದ್ದಿ

Rain News: ರಾಜ್ಯದ ವಿವಿಧೆಡೆ ಮಳೆ ಆರ್ಭಟ; ಸಿಡಿಲು ಬಡಿದು ಗದಗದಲ್ಲಿ 20, ಶಿವಮೊಗ್ಗದಲ್ಲಿ 18 ಕುರಿ ಸಾವು

Rain News: ರಾಜ್ಯದ ಹಲವೆಡೆ ಶುಕ್ರವಾರದಂದು ಗುಡುಗು, ಸಿಡಿಲು ಸಹಿತ ಭಾರಿ ಮಳೆಯಾಗಿದೆ. ಮುಂದಿನ 24 ಗಂಟೆಯಲ್ಲಿ ಕರಾವಳಿಯ ದಕ್ಷಿಣ ಕನ್ನಡ, ಉಡುಪಿಯಲ್ಲಿ ಮಳೆಯ ಬೀಳಲಿದೆ. ಹಾಗೆ ಉತ್ತರ ಒಳನಾಡಿನ ಬಾಗಲಕೋಟೆ, ಬೀದರ್‌, ಗದಗ, ಕಲಬುರಗಿ ಸೇರಿದಂತೆ ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿಯಲ್ಲೂ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

VISTARANEWS.COM


on

Rain News
ಯಾದಗಿರಿ ಜಿಲ್ಲೆಯ ಶಹಾಪುರ ನಗರದಲ್ಲಿ ಶುಕ್ರವಾರ ರಾತ್ರಿ ಬಿರುಗಾಳಿ ಸಹಿತ ಭಾರಿ ಮಳೆ ಸುರಿಯಿತು.
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ಗದಗ/ಶಿವಮೊಗ್ಗ: ರಾಜ್ಯದ ವಿವಿಧೆಡೆ ಶುಕ್ರವಾರ ವರುಣ ಆರ್ಭಟಿಸಿದ್ದು, ಬಿಸಿಲ ಬೇಗೆಯಿಂದ ಬಸವಳಿದಿದ್ದ ಜನತೆಗೆ ತಂಪೆರೆದಿದ್ದಾನೆ. ಈ ನಡುವೆ ಸಿಡಿಲಿಗೆ ಗದಗದಲ್ಲಿ 20 ಮತ್ತು ಶಿವಮೊಗ್ಗದಲ್ಲಿ 18 ಕುರಿಗಳು ಬಲಿಯಾಗಿವೆ. ಸಂಜೆ ಮನೆಗೆ ಹಿಂತಿರುಗುವಾಗ ಮಳೆ ಸುರಿದಿದೆ, ಹೀಗಾಗಿ ಮರದ ಕೆಳಗೆ ಕುರಿ ಹಿಂಡು ನಿಂತಿದ್ದಾಗ ಸಿಡಿಲು ಬಡಿದು ದುರ್ಘಟನೆ ಸಂಭವಿಸಿದೆ.

ಗದಗದಲ್ಲಿ ಸಿಡಿಲಿಗೆ 20 ಕುರಿಗಳ ಬಲಿ

ಸಿಡಿಲು ಬಡಿದು 20ಕ್ಕೂ ಹೆಚ್ಚು ಕುರಿಗಳು ಮೃತಪಟ್ಟಿರುವ ಘಟನೆ ಗದಗ ತಾಲೂಕಿನ ಕಿರಟಗೇರಿ ಗ್ರಾಮದ ಹೊರ ವಲಯದಲ್ಲಿ ನಡೆದಿದೆ. ಮಳೆ ಬರುತ್ತಿದ್ದ ಹಿನ್ನೆಲೆ ಮರದ ಕೆಳಗೆ 200ಕ್ಕೂ ಕುರಿಗಳನ್ನು ಕುರಿಗಾಹಿಗಳು ನಿಲ್ಲಿಸಿದ್ದರು. ಮರದ ಬಳಿಯೇ ಸಿಡಿಲು ಬಡಿದಿದ್ದರಿಂದ 20 ಕುರಿಗಳು ಮೃತಪಟ್ಟಿವೆ. ಮುತ್ತಪ್ಪ ದೊಡ್ಡಮನಿ, ಶಿವಪ್ಪ ಹರಿಜನ ಅವರ ಕುರಿಗಳು ಮೃತಪಟ್ಟಿದ್ದು, ಸ್ಥಳಕ್ಕೆ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಶಿವಮೊಗ್ಗದಲ್ಲಿ ಸಿಡಿಲು ಬಡಿದು 18 ಕುರಿಗಳು ಮೃತ್ಯು

ಶಿವಮೊಗ್ಗ: ಸಿಡಿಲು ಬಡಿದು 18 ಕುರಿಗಳು ಮೃತಪಟ್ಟಿರುವ ಘಟನೆ ಶಿವಮೊಗ್ಗ ತಾಲೂಕಿನ ಆಯನೂರಿನಲ್ಲಿ ನಡೆದಿದೆ. ಸಂಜೆ ವೇಳೆ ಗುಡುಗು-ಸಿಡಿಲು ಸಹಿತ ಮಳೆ ಬರುತ್ತಿದ್ದಾಗ ಮಾವಿ‌ನ ಮರದ ಕೆಳಗಡೆ ಕುರಿಗಳನ್ನು ನಿಲ್ಲಿಸಲಾಗಿತ್ತು. ಈ ವೇಳೆ ಸಿಡಿಲು ಬಡಿದು ದುರಂತ ಸಂಭವಿಸಿದೆ. ಇದರಿಂದ ಜಾಕೀರ್ ಹುಸೇನ್ ಎಂಬುವವರಿಗೆ ಸುಮಾರು ಮೂರು ಲಕ್ಷ ಮೌಲ್ಯ ನಷ್ಟವಾಗಿದೆ.

ಯಾದಗಿರಿ ಜಿಲ್ಲೆಯಲ್ಲಿ ತಂಪೆರೆದ ವರುಣ ದೇವ

ಯಾದಗಿರಿ: ಜಿಲ್ಲೆಯಲ್ಲಿ ಶುಕ್ರವಾರ ವರುಣ ದೇವ ತಂಪೆರೆದಿದ್ದಾನೆ. ಜಿಲ್ಲೆಯ ಶಹಾಪುರ ನಗರದಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗಿದ್ದು, ಬಿಸಿಲಿಗೆ ತತ್ತರಿಸಿದ ಜನರಿಗೆ ಮಳೆರಾಯ ತಂಪೆರೆದಿದ್ದಾನೆ. ಅರ್ಧ ಗಂಟೆಗೂ ಹೆಚ್ಚು ಕಾಲ ಭರ್ಜರಿ ಮಳೆ ಸುರಿದಿದೆ.

ಕೊಪ್ಪಳ ಜಿಲ್ಲೆಯ ಹಲವೆಡೆ ಬಿರುಗಾಳಿ ಸಹಿತ ಮಳೆ

ಕೊಪ್ಪಳ: ಜಿಲ್ಲೆಯ ಕುಷ್ಟಗಿ ತಾಲೂಕಿನ ಹನುಮಸಾಗರ, ಕುಷ್ಟಗಿ ಪಟ್ಟಣ ಸೇರಿ ಹಲೆವೆಡೆ ಬಿರುಗಾಳಿ ಸಹಿತ ಮಳೆ ಸುರಿದಿದೆ. ಗಾಳಿಗೆ ಹನುಮಸಾಗರದಲ್ಲಿ ಬೋರ್‌ವೆಲ್‌ಗೆ ಹಾಕಿದ್ದ ವಿದ್ಯುತ್ ಕಂಬಗಳು ನೆಲಕ್ಕೆ ಉರುಳಿವೆ. ಕಂಬ ನೆಲಕ್ಕುರುಳಿದ್ದರಿಂದ ಕೆಲ ಹೊತ್ತು ಹನುಮಸಾಗರ- ಇಲಕಲ್ ರಸ್ತೆ ಸಂಚಾರ ಸ್ಥಗಿತಗೊಂಡಿತ್ತು.

ಉತ್ತರ ಕರ್ನಾಟಕದಲ್ಲಿ ಭಾರಿ ವರ್ಷಧಾರೆ

ಬೆಂಗಳೂರು: ರಾಜ್ಯದ ಹಲವೆಡೆ ಏ.12ರ ಶುಕ್ರವಾರದಂದು ಗುಡುಗು, ಸಿಡಿಲು ಸಹಿತ ಭಾರಿ (Heavy Rain) ಮಳೆಯಾಗಿದೆ. ಬೆಳಗಾವಿ ನಗರದಲ್ಲಿಂದು ಒಂದು ಗಂಟೆಗೂ ಹೆಚ್ಚು ಕಾಲ ಗುಡುಗು ಸಹಿತ ಮಳೆಯು (Rain News) ಅಬ್ಬರಿಸುತ್ತಿದೆ. ಬಿಸಿಲು, ಧಗೆಯಿಂದ ಕಂಗೆಟ್ಟ ಜನರಿಗೆ ವರುಣ ತಂಪೆರೆದಿದ್ದಾನೆ. ನಗರದ ಚನ್ನಮ್ಮ ವೃತ್ತ, ಸದಾಶಿವ ನಗರ, ಕ್ಯಾಂಪ್, ಮಾರುಕಟ್ಟೆ ಪ್ರದೇಶದಲ್ಲಿ ವಿಪರೀತ ಮಳೆಯಾಗುತ್ತಿದೆ. ದಿಢೀರ್‌ ಮಳೆಯಿಂದಾಗಿ (Karnataka Weather Forecast) ಜನ-ಜೀವನ ಅಸ್ತವ್ಯಸ್ತವಾಗಿ, ವಾಹನ ಸವಾರರು ಪರದಾಡಿದರು. ಬೋವಿ ಗಲ್ಲಿಯಲ್ಲಿ ಮಳಿಗೆಗಳಿಗೆ ನೀರು ನುಗ್ಗಿತ್ತು. ಮಳೆ ನೀರು ಒಳಬಾರದಂತೆ ತಡೆಯಲು ಸಿಬ್ಬಂದಿ ಹರಸಾಹಸ ಪಡುತ್ತಿದ್ದರು.

ವಿಜಯಪುರ ನಗರದಲ್ಲೂ ಗುಡುಗು, ಸಿಡಿಲಿನ ಭಾರಿ ಮಳೆ ಸುರಿದಿದ್ದು, ತಗ್ಗು ಪ್ರದೇಶಗಳಿಗೆ ನೀರು ಹರಿದಿದೆ. ಸಿಡಿಲಿನ ಆರ್ಭಟಕ್ಕೆ ನಿನ್ನೆ ವಿಜಯಪುರ ಜಿಲ್ಲೆಯಲ್ಲಿ ಇಬ್ಬರ ಮೃತಪಟ್ಟಿದ್ದರು. ಶುಕ್ರವಾರವೂ ಸುರಿದ ಮಳೆಗೆ ನಗರ ಪ್ರದೇಶದ ಜನತೆ ಕೂಲ್‌ ಆಗಿದ್ದಾರೆ. ದಾವಣಗೆರೆಯಲ್ಲಿ ಬಿಸಿಲ ಬೇಗೆಯಿಂದ ಬೆಂದಿದ್ದ ಜನರಿಗೆ ಅರ್ಧ ಗಂಟೆಗೂ ಹೆಚ್ಚು ಕಾಲ‌ ಸುರಿದ ಮಳೆಯು ನಿಟ್ಟುಸಿರು ಬಿಡುವಂತಾಗಿದೆ. ದಾವಣಗೆರೆ ಸೇರಿದಂತೆ ಹಲವೆಡೆ ಮಳೆಯಾಗಿದ್ದು, ಒಣಗುತ್ತಿದ್ದ ತೋಟಗಳಿಗೆ ಮಳೆ ಆಸರೆ ಆಯಿತು.

ಮಳೆಯಲ್ಲೆ ಭಕ್ತಾಧಿಗಳ ಭರ್ಜರಿ ಡ್ಯಾನ್ಸ್‌

ಕೊಡಗು ಜಿಲ್ಲೆಯ ಮೂರ್ನಾಡು, ನೆಲಜಿ, ಮರಂದೋಡ ಹಾಗೂ ಬಿಳಿಗೇರಿ ಸೇರಿ ಹಲವೆಡೆ ವರ್ಷಧಾರೆ ಆಗಿದೆ. ಮಳೆಗಾಗಿ ಕಾದುಕುಳಿತ್ತಿದ್ದ ರೈತರ ಮುಖದಲ್ಲಿ ಮಂದಹಾಸ ಮೂಡಿದೆ. ಇತ್ತ ಶ್ರೀಮಾರಿಯಮ್ಮ ಹಾಗೂ ಕೊರಗಜ್ಜದೇವರ ವಾರ್ಷಿಕ ಉತ್ಸವದ ವೇಳೆ ಮಳೆ ಬಂದ ಕಾರಣಕ್ಕೆ ಭಕ್ತಾಧಿಗಳು ಕುಣಿದು ಕುಪ್ಪಳಿಸಿದರು. ನಾಪೋಕ್ಲು ಸಮೀಪದ ಹೊದ್ದೂರು ಗ್ರಾಮದ ಭಗವತಿ ಕಾಲೋನಿಯಲ್ಲಿ ಜನರು ಮಳೆಯಲ್ಲಿ ನೆನೆದರು.

ಇದನ್ನೂ ಓದಿ: Beggary Rescue : ರಂಜಾನ್ ಹಬ್ಬದಂದು 40ಕ್ಕೂ ಹೆಚ್ಚು ಮಕ್ಕಳಿಂದ ಭಿಕ್ಷಾಟನೆ; ಸಿಕ್ಕಿಬಿದ್ದರು ಲೇಡಿ ಗ್ಯಾಂಗ್‌

ವೀಕೆಂಡ್‌ನಲ್ಲೂ ಭರ್ಜರಿ ಮಳೆ

ಮುಂದಿನ 24 ಗಂಟೆಯಲ್ಲಿ (ಏ.13) ಕರಾವಳಿಯ ದಕ್ಷಿಣ ಕನ್ನಡ, ಉಡುಪಿಯಲ್ಲಿ ಮಳೆಯ ಮುನ್ಸೂಚನೆ ನೀಡಲಾಗಿದೆ. ಹಾಗೆ ಉತ್ತರ ಒಳನಾಡಿನ ಬಾಗಲಕೋಟೆ, ಬೀದರ್‌, ಗದಗ, ಕಲಬುರಗಿ ಸೇರಿದಂತೆ ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿಯಲ್ಲೂ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆ ಇದೆ.

ದಕ್ಷಿಣ ಒಳನಾಡಿನ ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಶಿವಮೊಗ್ಗ, ಹಾಸನ, ಕೊಡಗು, ಮಂಡ್ಯ, ರಾಮನಗರ, ವಿಜಯನಗರ, ಮೈಸೂರಿನಲ್ಲೂ ಮಳೆಯಾಗಲಿದೆ.

ಉತ್ತರ ಒಳನಾಡಲ್ಲಿ ರಭಸವಾಗಿ ಬೀಸಲಿದೆ ಗಾಳಿ

ಇನ್ನೂ ಏಪ್ರಿಲ್‌ 12, 13 ಮತ್ತು 14ರಂದು ಗಂಟೆಗೆ 40-50 ಕಿ.ಮೀ ಮತ್ತು 30-40 ಕಿ.ಮೀ ವೇಗದಲ್ಲಿ ಗಾಳಿಯ ವೇಗವು ರಭಸವಾಗಿ ಇರಲಿದೆ. ಮುಂದಿನ 3 ದಿನಗಳು ದಕ್ಷಿಣ ಒಳನಾಡಿನಲ್ಲಿ ಗಾಳಿ ವೇಗವು 30-40 ಕಿ.ಮೀ ತಲುಪುವ ಸಾಧ್ಯತೆ ಇದೆ. ಏ.14ರವರೆಗೆ ರಾಜ್ಯದ ಒಂದೆರಡು ಕಡೆಗಳಲ್ಲಿ ಸಿಡಿಲು, ಗುಡುಗು ಕೂಡಿದ ಮಳೆಯಾಗಲಿದೆ.

ಅಂತೂ ಬೆಂಗಳೂರಿಗೆ ಎಂಟ್ರಿ ಆಗಲಿರುವ ವರುಣ

ರಾಜಧಾನಿ ಬೆಂಗಳೂರಿಗರು ಮಳೆಯಿಲ್ಲದೆ ಬಿಸಿಲಿನಿಂದ ಕಂಗೆಟ್ಟಿದ್ದಾರೆ. ಶುಕ್ರವಾರ ಸಂಜೆ ವೇಳೆಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.

ಇದನ್ನೂ ಓದಿ: Physical Abuse : ಬಹಿರ್ದೆಸೆಗೆ ತೆರಳಿದ ಮಹಿಳೆ ಮೇಲೆ ಎರಗಿ ಬಲತ್ಕಾರ ಮಾಡಿದ ರಾಕ್ಷಸ

ಇನ್ನೂ ಶುಕ್ರವಾರ ಬಾಗಲಕೋಟೆ ಜಿಲ್ಲೆಯಲ್ಲಿ ಗರಿಷ್ಠ ತಾಪಮಾನ 40 ಡಿಗ್ರಿ ಸೆಲ್ಸಿಯಸ್ ದಾಖಲಾಗಿತ್ತು. ಬೆಂಗಳೂರು ನಗರ ವ್ಯಾಪ್ತಿಯಲ್ಲಿ 35.8 ಡಿ.ಸೆ ಹಾಗೂ ಬೆಂಗಳೂರು ಗ್ರಾಮಾಂತರದಲ್ಲಿ 36.4 ಡಿಗ್ರಿ ಸೆಲ್ಸಿಯಸ್ ತಾಪಮಾನ ಏರಿಕೆ ಆಗಿತ್ತು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
Continue Reading
Click to comment

Leave a Reply

Your email address will not be published. Required fields are marked *

Latest

ಆಗಸ್ಟ್‌ 31ರ ಒಳಗೆ GBA ಚುನಾವಣೆ ನಡೆಸಿ- ಸುಪ್ರೀಂ ಕೋರ್ಟ್‌

VISTARANEWS.COM


on

ಆಗಸ್ಟ್‌ 31ರ ಒಳಗೆ ಜಿಬಿಎ ಚುನಾವಣೆ ನಡೆಸಲು ಸುಪ್ರೀಂ ಕೋರ್ಟ್‌ ರಾಜ್ಯ ಸರ್ಕಾರಕ್ಕೆ ಗಡುವು ನೀಡಿದೆ. ರಾಜ್ಯ ಸರ್ಕಾರ ಹಾಗೂ ಚುನಾವಣಾ ಆಯೋಗದ ಮನವಿಯನ್ನು ಪರಿಗಣಿಸಿದ ಸುಪ್ರೀಂಕೋರ್ಟ್‌, ಆಗಸ್ಟ್‌ 31ರವರೆಗೆ ಕಾಲಾವಕಾಶ ನೀಡಿದೆ. ಚುನಾವಣಾ ಪ್ರಕ್ರಿಯೆ ಪೂರ್ಣಗೊಳಿಸಲು ಇನ್ನೂ ಮೂರು ತಿಂಗಳ ಗಡುವು ವಿಸ್ತರಣೆ ಕೋರಿ ರಾಜ್ಯ ಸರ್ಕಾರ ಅರ್ಜಿ ಸಲ್ಲಿಸಿತ್ತು.

ಈ ಹಿಂದೆ ಜೂನ್‌ 30ರೊಳಗೆ ಜಿಬಿಎ ಚುನಾವಣೆ ನಡೆಸುವಂತೆ ಸುಪ್ರೀಂಕೋರ್ಟ್‌ ಸೂಚನೆ ನೀಡಿತ್ತು. ಆದರೆ ಇದೀಗ ಸರ್ಕಾರದ ಮನವಿ ಮೇರೆಗೆ ಚುನಾವಣಾ ಗಡುವನ್ನು ಆಗಸ್ಟ್‌ ಅಂತ್ಯದವರೆಗೆ ವಿಸ್ತರಿಸಲಾಗಿದೆ.

ಸೆಪ್ಟೆಂಬರ್‌ ಅಂತ್ಯದವರೆಗೆ ಕಾಲಾವಕಾಶ ನೀಡಬೇಕೆಂದು ಕರ್ನಾಟಕ ಸರ್ಕಾರ ಹಾಗೂ ರಾಜ್ಯ ಚುನಾವಣಾ ಆಯೋಗದ ಸುಪ್ರೀಂ ಕೋರ್ಟ್‌ಗೆ ಮನವಿ ಸಲ್ಲಿಸಿದ್ದವು. ಮನವಿಯನ್ನು ಆಲಿಸಿದ ಸಿಜೆಐ ಅವರನ್ನು ಒಳಗೊಂಡ ನ್ಯಾಯಪೀಠ ಈ ಆದೇಶ ನೀಡಿದೆ. ರಾಜ್ಯ ಸರ್ಕಾರ ಮತ್ತು ರಾಜ್ಯ ಚುನಾವಣಾ ಆಯೋಗ ಸಲ್ಲಿಸಿದ್ದ ಎರಡು ಪ್ರತ್ಯೇಕ ಅರ್ಜಿಗಳಲ್ಲಿ, ರಾಜ್ಯದಲ್ಲಿ ಚುನಾವಣಾ ಸಿಬ್ಬಂದಿ ವರ್ಗ ಜನಗಣತಿ, ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ, ಎಸ್‌ಎಸ್‌ಎಲ್‌ಸಿ ಮತ್ತು ಪಿಯು ಪರೀಕ್ಷೆಗಳಲ್ಲಿ ನಿರತರಾಗಿದ್ದಾರೆ. ಹೀಗಾಗಿ ಜಿಬಿಎ ಚುನಾವಣೆ ನಡೆಸಲು ಮೂರು ತಿಂಗಳ ಕಾಲಾವಕಾಶ ನೀಡಬೇಕೆಂದು ಮನವಿ ಮಾಡಿದ್ದವು.

Continue Reading

Latest

ದೇಶಾದ್ಯಂತ ಇಂದು ಮೆಡಿಕಲ್‌ ಸ್ಟೋರ್‌ ಬಂದ್‌

VISTARANEWS.COM


on

ಇ-ಫಾರ್ಮಸಿ ಹಾಗೂ ಆನ್‌ಲೈನ್‌ ಮೂಲಕ ಔಷಧ ಮಾರಾಟ ನಿಲ್ಲಿಸುವಂತೆ ಆಗ್ರಹಿಸಿ ಕರ್ನಾಟಕ ಸೇರಿದಂತೆ ದೇಶಾದ್ಯಂತ ಇಂದು ಮೆಡಿಕಲ್‌ ಸ್ಟೋರ್‌ಗಳು ಬಂದ್‌ ಆಗಿವೆ. ಅಖಿಲ ಭಾರತ ಔಷಧ ವ್ಯಾಪಾರಿಗಳ ಸಂಘದ ಕರೆ ಮೇರೆಗೆ ಬೆಂಗಳೂರು ಸೇರಿದಂತೆ ರಾಜ್ಯದ ಎಲ್ಲಾ ಜಿಲ್ಲಾ ಹಾಗೂ ತಾಲೂಕು ಕೇಂದ್ರಗಳಲ್ಲಿ ಮೆಡಿಕಲ್‌ ಸ್ಟೋರ್‌ ಮಾಲೀಕರು ಪ್ರತಿಭಟನೆ ನಡೆಸುತ್ತಿದ್ದಾರೆ.

ಆನ್‌ಲೈನ್‌ ಔಷಧ ವ್ಯಾಪಾರಕ್ಕೆ ಕಟ್ಟುನಿಟ್ಟಾದ ನಿಯಮ ಜಾರಿಗೊಳಿಸಬೇಕು, ಕಾರ್ಪೊರೇಟ್‌ ಸಂಸ್ಥೆಗಳ ಭಾರಿ ರಿಯಾಯಿತಿ ದರ ಸಮರಕ್ಕೆ ಬ್ರೇಕ್‌ ಹಾಕಬೇಕು ಹಾಗೂ ಎಲ್ಲಾ ವ್ಯಾಪಾರಿಗಳಿಗೆ ಸಮಾನ ಮುಕ್ತ ಮಾರುಕಟ್ಟೆ ವ್ಯವಸ್ಥೆ ಕಲ್ಪಿಸಬೇಕು ಎಂಬ ಬೇಡಿಕೆಗಳನ್ನು ಅಖಿಲ ಭಾರತ ಕೆಮಿಸ್ಟ್‌ ಮತ್ತು ಡ್ರಗ್ಗಿಸ್ಟ್‌ ಸಂಘ ಮುಂದಿಟ್ಟಿದೆ.

ಈ ಬಂದ್‌ನಿಂದ ಅನೇಕ ಕಡೆಗಳಲ್ಲಿ ಔಷಧ ಖರೀದಿಗೆ ಸಾರ್ವಜನಿಕರು ತೊಂದರೆ ಅನುಭವಿಸುತ್ತಿದ್ದಾರೆ. ಆದರೆ ತುರ್ತು ಸೇವೆಗಳಿಗಾಗಿ ಕೆಲವು ಮೆಡಿಕಲ್‌ ಸ್ಟೋರ್‌ಗಳು ಮಾತ್ರ ಕಾರ್ಯನಿರ್ವಹಿಸುತ್ತಿವೆ.

Continue Reading

Latest

ನಾಳೆ ದೇಶಾದ್ಯಂತ ಮೆಡಿಕಲ್ ಶಾಪ್‌ ಬಂದ್‌

VISTARANEWS.COM


on

ಆನ್‌ಲೈನ್‌ನಲ್ಲಿ ಔಷಧ ಮಾರಾಟವನ್ನು ವಿರೋಧಿಸಿ ನಾಳೆ ದೇಶಾದ್ಯಂತ ಮೆಡಿಕಲ್ ಶಾಪ್‌ಗಳ ಬಂದ್‌ಗೆ ಕರೆ ನೀಡಲಾಗಿದೆ. ದೇಶದಾದ್ಯಂತ ಸುಮಾರು 9 ಲಕ್ಷ ಔಷಧ ಅಂಗಡಿಗಳು ಪ್ರತಿಭಟನೆಯಲ್ಲಿ ಭಾಗವಹಿಸುವ ಸಾಧ್ಯತೆ ಇದೆ.
ಕರ್ನಾಟಕದಲ್ಲೂ ಸುಮಾರು 26 ಸಾವಿರಕ್ಕೂ ಹೆಚ್ಚು ಮೆಡಿಕಲ್ ಶಾಪ್‌ಗಳು ಬಂದ್ ಆಗುವ ಸಾಧ್ಯತೆ ಇದ್ದು, ಗ್ರಾಹಕರು ಅಗತ್ಯ ಔಷಧಿಗಳನ್ನು ಮುಂಚಿತವಾಗಿ ಖರೀದಿಸಿಕೊಳ್ಳುವಂತೆ ಸಂಘಟನೆಗಳು ಮನವಿ ಮಾಡಿವೆ.

ಇ-ಫಾರ್ಮಸಿ ವೇದಿಕೆಗಳ ಮೂಲಕ ಭಾರಿ ರಿಯಾಯಿತಿಯಲ್ಲಿ ಔಷಧ ಮಾರಾಟವಾಗುತ್ತಿರುವುದು ಸಣ್ಣ ಹಾಗೂ ಮಧ್ಯಮ ಮಟ್ಟದ ಮೆಡಿಕಲ್ ಅಂಗಡಿಗಳಿಗೆ ಹೊಡೆತ ನೀಡುತ್ತಿದೆ ಎಂದು ವ್ಯಾಪಾರಿಗಳು ಆರೋಪಿಸಿದ್ದಾರೆ. ಜೊತೆಗೆ ಆನ್‌ಲೈನ್ ಮೂಲಕ ನಿಯಂತ್ರಣವಿಲ್ಲದೆ ಔಷಧ ವಿತರಣೆ ನಡೆಯುತ್ತಿರುವುದರಿಂದ ರೋಗಿಗಳ ಆರೋಗ್ಯಕ್ಕೂ ಅಪಾಯ ಉಂಟಾಗಬಹುದು ಎಂದು ಎಚ್ಚರಿಸಿದ್ದಾರೆ.
ಆನ್‌ಲೈನ್ ಮೂಲಕ ಔಷಧ ಖರೀದಿ ವ್ಯವಸ್ಥೆಯನ್ನು ನಿಯಂತ್ರಿಸುವುದು ಹಾಗೂ ಇ-ಫಾರ್ಮಸಿ ಕಂಪನಿಗಳ ವಿರುದ್ಧ ಕಠಿಣ ನಿಯಮ ಜಾರಿಗೊಳಿಸುವಂತೆ ಕೇಂದ್ರ ಸರ್ಕಾರಕ್ಕೆ ಆಗ್ರಹಿಸಲಾಗಿದೆ.

Continue Reading

Latest

ಸಾರಿಗೆ ಮಷ್ಕರಕ್ಕೆ ಹೈಕೋರ್ಟ್‌ ಬ್ರೇಕ್‌

VISTARANEWS.COM


on

ಸಾರಿಗೆ ನೌಕರರ ಮುಷ್ಕರಕ್ಕೆ ಹೈಕೋರ್ಟ್‌ ನಿರ್ಬಂಧ ವಿಧಿಸಿದೆ. ಸಾರಿಗೆ ನೌಕರರು ಮುಷ್ಕರವನ್ನು ನಡೆಸಬಾರದು ಎಂದು ಸಾರಿಗೆ ಸಂಘಟನೆಗಳಿಗೆ ಹೈಕೋರ್ಟ್‌ ಸೂಚನೆ ನೀಡಿದ್ದು, ಸರ್ಕಾರವು ಕೂಡಲೇ ಸಂಘಟನೆಗಳೊಂದಿಗೆ ಮಾತುಕತೆ ನಡೆಸಬೇಕು ಎಂದು ನಿರ್ದೇಶಿಸಿದೆ.

ಮೇ.20 ರಿಂದ ರಾಜ್ಯಾದ್ಯಂತ ಸರ್ಕಾರಿ ಸಾರಿಗೆ ನೌಕರರು ಮುಷ್ಕರ ನಡೆಸಲು ಮುಂದಾಗಿದ್ದರು. ಮುಷ್ಕರಕ್ಕೆ ನಿರ್ಬಂಧ ವಿಧಿಸಿರುವ ಹೈಕೋರ್ಟ್‌, ಸಾರ್ವಜನಿಕರಿಗೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳಬೇಕೆಂದು ಸರ್ಕಾರಕ್ಕೆ ಸೂಚಿಸಿದೆ. ಇದೇ ವೇಳೆ ಸಾರಿಗೆ ಸಚಿವರೊಂದಿಗೆ ಸಂಘಟನೆಗಳು ಮಾತುಕತೆ ನಡೆಸುವಂತೆ ಸಲಹೆ ನೀಡಿದೆ.

ಈ ಸಂಬಂಧ ಸಾರಿಗೆ ಸಂಘಟನೆಗಳು, ರಾಜ್ಯ ಸರ್ಕಾರ ಹಾಗೂ ಸಾರಿಗೆ ಸಚಿವರಿಗೆ ಹೈಕೋರ್ಟ್‌ ನೋಟಿಸ್‌ ಜಾರಿಗೊಳಿಸಿದೆ. ಸಾರ್ವಜನಿಕರ ಸಂಚಾರಕ್ಕೆ ಯಾವುದೇ ಅಡಚಣೆ ಆಗದಂತೆ ತಕ್ಷಣ ಕ್ರಮ ಕೈಗೊಳ್ಳುವಂತೆ ನ್ಯಾಯಾಲಯ ಅಭಿಪ್ರಾಯಪಟ್ಟಿದೆ. ವಿಚಾರಣೆಯನ್ನು ಮೇ 21ಕ್ಕೆ ಮುಂದೂಡಲಾಗಿದೆ.

Continue Reading
Advertisement
galipata neetu
ಕಿರುತೆರೆ2 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ3 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌