Rain News: ರಾಜ್ಯದ ವಿವಿಧೆಡೆ ಗುಡುಗು ಸಹಿತ ಭಾರಿ ಮಳೆ; ಬೆಂಗಳೂರಿನಲ್ಲಿ ಹೊಳೆಯಂತಾದ ರಸ್ತೆಗಳು! - Vistara News

ಪ್ರಮುಖ ಸುದ್ದಿ

Rain News: ರಾಜ್ಯದ ವಿವಿಧೆಡೆ ಗುಡುಗು ಸಹಿತ ಭಾರಿ ಮಳೆ; ಬೆಂಗಳೂರಿನಲ್ಲಿ ಹೊಳೆಯಂತಾದ ರಸ್ತೆಗಳು!

Rain News: ಮುಂದಿನ ಮೂರು ದಿನಗಳ ಕಾಲ ಬೆಂಗಳೂರು ಸೇರಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

VISTARANEWS.COM


on

Rain News
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ಬೆಂಗಳೂರು: ರಾಜಧಾನಿ ಬೆಂಗಳೂರು, ಕೊಡಗು, ಚಿಕ್ಕಮಗಳೂರು ಸೇರಿ ರಾಜ್ಯದ ವಿವಿಧೆಡೆ ಬುಧವಾರ ಸಂಜೆ ಗುಡುಗು ಸಹಿತ ಭಾರಿ ಮಳೆಯಾಗಿದೆ. ಕೊಡಗು, ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಳೆಯಿಲ್ಲದೆ ಕಂಗೆಟ್ಟಿದ್ದ ಜನರ ಮೊಗದಲ್ಲಿ ಮಂದಹಾಸ ಮೂಡಿದೆ. ಇನ್ನು ಬೆಂಗಳೂರಿನ ಹಲವೆಡೆ ದಿಢೀರನೆ ಸುರಿದ ಮಳೆಯಿಂದ (Rain News) ರಸ್ತೆಗಳು ಜಲಾವೃತವಾಗಿ ಹೊಳೆಯಂತಾಗಿದ್ದರಿಂದ ವಾಹನ ಸವಾರರು ತೊಂದರೆ ಅನುಭವಿಸಿದರು.

ಬೆಂಗಳೂರಲ್ಲಿ ಮಳೆ ಆರ್ಭಟ; ಸಿಟಿಯಲ್ಲಿ ಕೂಲ್ ವೆದರ್

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕಳೆದ ಒಂದು ವಾರದಿಂದ ಭಾರಿ ಸುರಿಯುತ್ತಿದೆ. ಇನ್ನು ನಗರದಲ್ಲಿ ಬುಧವಾರ ಸಂಜೆಯಿಂದ ಹಲವೆಡೆ ಮಳೆ ಅರ್ಭಟ ಶುರು ಆಗಿದ್ದು, ಶಿವಾಜಿನಗರ, ವಸಂತನಗರ, ಶಾಂತಿನಗರ, ಜಯ ನಗರ, ವಿಜಯ ನಗರ, ಮಲ್ಲೇಶ್ವರಂ, ಶಿವಾನಂದ ಸರ್ಕಲ್, ಯಶವಂತಪುರ, ರಾಜಾಜಿ ನಗರ, ಶೇಷಾದ್ರಿಪುರಂ, ಎಂ.ಜಿ ರಸ್ತೆ, ಕಬ್ಬನ್ ಪಾರ್ಕ್ ಸೇರಿದಂತೆ ನಗರದ ಹಲವೆಡೆ ಭರ್ಜರಿ ಮಳೆಯ ಜೊತೆಗೆ ಗುಡುಗು-ಮಿಂಚು ಸಹ ಕಂಡು ಬಂದಿದೆ. ಬೇಸಿಗೆಯಲ್ಲಿ ಭಾರಿ ಮಳೆಯಿಂದ ರಾಜಧಾನಿಯ ವಾತಾವರಣ ತಂಪಾಗಿದ್ದರಿಂದ ಜನರು ಸಂತಸಪಡುತ್ತಿದ್ದಾರೆ.

ಮರ ಬಿದ್ದು 2 ಕಾರು ಜಖಂ

ಕೂಡ್ಲು ಗೇಟ್, ರೂಪೇನ ಅಗ್ರಹಾರದ ಬಳಿ ಮಳೆಯಿಂದ ರಸ್ತೆಯಲ್ಲಿ ವಾಹನಗಳು ಸಾಲುಗಟ್ಟಿ ನಿಂತಿದ್ದದ್ದು ಕಂಡುಬಂತು. ಇನ್ನು ಮಡಿವಾಳ ಸುತ್ತ ಮುತ್ತಲೂ ಭಾರಿ ಮಳೆಗಿದ್ದರಿಂದ ಸಂಚಾರ ದಟ್ಟಣೆ ಉಂಟಾಗಿತ್ತು. ಉಲ್ಲಾಳ ಹತ್ತಿರದ ಜ್ಞಾನಜ್ಯೋತಿ ನಗರದಲ್ಲಿ ಮರ ಬಿದ್ದಿದ್ದರಿಂದ ಮನೆ ಮುಂದೆ ನಿಲ್ಲಿಸಿದ್ದ 2 ಕಾರು ಜಖಂಗೊಂಡಿದೆ.

ಎಲೆಕ್ಟ್ರಾನಿಕ್ ಸಿಟಿ ಸಮೀಪ ಹೆದ್ದಾರಿ ಜಲಾವೃತ

ಎಲೆಕ್ಟ್ರಾನಿಕ್ ಸಿಟಿ ಸಮೀಪದ ವೀರಸಂದ್ರ ಸಿಗ್ನಲ್ ಬಳಿ ಬೆಂಗಳೂರು-ಹೊಸೂರು ರಾಷ್ಟ್ರೀಯ ಹೆದ್ದಾರಿ ಜಲಾವೃತವಾಗಿದ್ದರಿಂದ ಸವಾರರು ಪರದಾಡಿದರು. ಪ್ರತಿ ಬಾರಿ ಮಳೆ ಬಂದಾಗ ರಾಷ್ಟ್ರೀಯ ಹೆದ್ದಾರಿ ಹೊಳೆಯಂತಾಗುತ್ತದೆ. ಮಳೆ ನೀರು ಹೊರಹೋಗಲು ಸೂಕ್ತ ವ್ಯವಸ್ಥೆ ಮಾಡದ ಅಧಿಕಾರಿಗಳು ನಿರ್ಲಕ್ಷ್ಯವಹಿಸಿರುವುದರಿಂದ ಸಾರ್ವಜನಿಕರು ಸಮಸ್ಯೆ ಎದುರಿಸುವಂತಾಗಿದೆ ಎಂದು ಸ್ಥಳೀಯರು ಅಸಮಾಧಾನ ಹೊರಹಾಕಿದ್ದಾರೆ.

ಇದನ್ನೂ ಓದಿ | Karnataka Weather : ಬಿರುಗಾಳಿಯೊಂದಿಗೆ ಗುಡುಗು, ಮಿಂಚು ಸಹಿತ ಭಾರಿ ಮಳೆ ಎಚ್ಚರಿಕೆ

ಕೊಡಗು, ಚಿಕ್ಕಮಗಳೂರಿನಲ್ಲಿ ಮುಂದುವರಿದ ಮಳೆ

ಕೊಡಗು ಜಿಲ್ಲೆಯ ವಿವಿಧೆಡೆ ಗುಡುಗು ಸಹಿತ ಮಳೆ ಸುರಿದಿದ್ದು, ಜನರ ಮೊಗದಲ್ಲಿ ಮಂದಹಾಸ ಮೂಡಿದೆ. ಇನ್ನು ಚಿಕ್ಕಮಗಳೂರಿನಲ್ಲಿ ಮಳೆಯ ಆರ್ಭಟ ಮುಂದುವರಿದಿದ್ದು, ಮೂಡಿಗೆರೆ ಪಟ್ಟಣದಲ್ಲಿ ಧಾರಾಕಾರ ಮಳೆಯಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ. ಗುಡುಗು, ಸಿಡಿಲು, ಆಲಿಕಲ್ಲು ಸಹಿತ ಭಾರಿ ಮಳೆ ಸುರಿದಿದ್ದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಮೂಡಿಗೆರೆ ಸುತ್ತಮುತ್ತ ವಿದ್ಯುತ್ ಸಂಪರ್ಕ ಕಡಿತ ಮಾಡಲಾಗಿತ್ತು.

ಇನ್ನು ಚಿಕ್ಕಬಳ್ಳಾಪುರದಲ್ಲಿ ಬಿಸಿಲಿಗೆ ನೀರಿಲ್ಲದೆ ಒಣಗುತಿದ್ದ ಬೆಳೆಗಳಿಗೆ ವರುಣ ತಂಪೆರೆದಿದ್ದಾನೆ. ರಣಬಿಸಿಲಿಗೆ ಕೃಷಿ ಚಟುವಟಿಕೆಗಳಿಂದ ಕಂಗೆಟ್ಟಿದ್ದ ಅನ್ನದಾತ, ಕೊನೆಗೂ ಒಂದಷ್ಟು ಮಳೆ ಬಂತಲ್ಲಾ ಎಂದು ನಿಟ್ಟುಸಿರು ಬಿಟ್ಟಿದ್ದಾನೆ.

ಕೆಜಿಎಫ್‌ನಲ್ಲಿ ಮನೆಗಳಿಗೆ ನುಗ್ಗಿದ ನೀರು

ಕೋಲಾರ: ಜಿಲ್ಲೆಯ ವಿವಿಧೆಡೆ ಬೆಳ್ಳಂ ಬೆಳಗ್ಗೆ ಬಿರುಗಾಳಿ ಸಹಿತ ಭಾರಿ ಮಳೆ ಸುರಿದಿದ್ದರಿಂದ ಮಾವು ಹಾಗೂ ತೋಟಗಾರಿಕೆ ಬೆಳೆಗಳಿಗೆ ಹಾನಿಯಾಗಿದೆ. ಇನ್ನು ಕೆಜಿಎಫ್ ನಗರದ ಹಲವು ಬಡಾವಣೆಗಳ ತಗ್ಗು ಪ್ರದೇಶ ಮನೆಗಳಿಗೆ ನೀರು ನುಗ್ಗಿ ಜನರು ಪರದಾಡುತ್ತಿದ್ದಾರೆ. ಕೆಜಿಎಫ್‌ನ ರಾಬರ್ಟ್‌ಸನ್ ಪೇಟೆ, ಮಾರಿಕುಪ್ಪಮ್, ಫಿಶ್ ಲೈನ್ ಬಡಾವಣೆಗಳಲ್ಲಿ ಮನೆಗಳಿಗೆ ಮಳೆನೀರು ನುಗ್ಗಿದ್ದ ಮನೆಯಲ್ಲಿನ ವಸ್ತುಗಳು ನೀರುಪಾಲಾಗಿವೆ. ಇದರಿಂದ ಜನರು ಸಂಕಷ್ಟ ಅನುಭವಿಸುವಂತಾಗಿದೆ.

ಮರ ಬಿದ್ದು ವ್ಯಕ್ತಿ ಸಾವು

ರಾತ್ರಿ ಸುರಿದ ಭಾರಿ ಮಳೆಗೆ ಮರ ಉರುಳಿದ್ದರಿಂದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ ಡೆಂಕಣಿಕೋಟೆ ಸಮೀಪದ ಅಂತೇವನಪಲ್ಲಿಯಲ್ಲಿ ನಡೆದಿದೆ. ಬೆಳಗ್ಗೆ 8 ಗಂಟೆ ವೇಳೆಗೆ ದ್ವಿಚಕ್ರ ವಾಹನದಲ್ಲಿದ್ದ ಇಬ್ಬರ ಮೇಲೆ ಮರದ ಬೇರು ಬಿದ್ದು ಒಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೊಬ್ಬರಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುವನ್ನು ಚಿಕಿತ್ಸೆಗಾಗಿ ಡೆಂಕಣಿಕೋಟೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇದನ್ನೂ ಓದಿ | Heavy Rain: ಕಳುವರಹಳ್ಳಿಯಲ್ಲಿ ಭಾರೀ ಗಾಳಿ ಮಳೆಗೆ ಶಾಲಾ ಚಾವಣಿ ಕುಸಿತ

ಇನ್ನು ಮುಂದಿನ ಮೂರು ದಿನಗಳಲ್ಲಿ ರಾಜ್ಯದ ಹಲವು ಜಿಲ್ಲೆಗಳಲ್ಲಿ, ಭಾರಿ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇನ್ನು ಮೇ 10ರಂದು ರಾಜ್ಯದಲ್ಲಿ ಉತ್ತಮ ಮಳೆಯಾಗಲಿದೆ ಎಂದು ಸಹ ತಿಳಿಸಿದೆ. ಬೆಂಗಳೂರಿನಲ್ಲಿ ಇಂದು ಮತ್ತು ನಾಳೆ ಮಳೆಯಾಗುವ ಸಾಧ್ಯತೆ ಇದ್ದು, ನಗರದಲ್ಲಿ ಗುಡುಗು ಮಿಂಚಿನೊಂದಿಗೆ ಮಳೆಯಾಗುವ ಮುನ್ಸೂಚನೆ ಇದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ

Latest

ಆಗಸ್ಟ್‌ 31ರ ಒಳಗೆ GBA ಚುನಾವಣೆ ನಡೆಸಿ- ಸುಪ್ರೀಂ ಕೋರ್ಟ್‌

VISTARANEWS.COM


on

ಆಗಸ್ಟ್‌ 31ರ ಒಳಗೆ ಜಿಬಿಎ ಚುನಾವಣೆ ನಡೆಸಲು ಸುಪ್ರೀಂ ಕೋರ್ಟ್‌ ರಾಜ್ಯ ಸರ್ಕಾರಕ್ಕೆ ಗಡುವು ನೀಡಿದೆ. ರಾಜ್ಯ ಸರ್ಕಾರ ಹಾಗೂ ಚುನಾವಣಾ ಆಯೋಗದ ಮನವಿಯನ್ನು ಪರಿಗಣಿಸಿದ ಸುಪ್ರೀಂಕೋರ್ಟ್‌, ಆಗಸ್ಟ್‌ 31ರವರೆಗೆ ಕಾಲಾವಕಾಶ ನೀಡಿದೆ. ಚುನಾವಣಾ ಪ್ರಕ್ರಿಯೆ ಪೂರ್ಣಗೊಳಿಸಲು ಇನ್ನೂ ಮೂರು ತಿಂಗಳ ಗಡುವು ವಿಸ್ತರಣೆ ಕೋರಿ ರಾಜ್ಯ ಸರ್ಕಾರ ಅರ್ಜಿ ಸಲ್ಲಿಸಿತ್ತು.

ಈ ಹಿಂದೆ ಜೂನ್‌ 30ರೊಳಗೆ ಜಿಬಿಎ ಚುನಾವಣೆ ನಡೆಸುವಂತೆ ಸುಪ್ರೀಂಕೋರ್ಟ್‌ ಸೂಚನೆ ನೀಡಿತ್ತು. ಆದರೆ ಇದೀಗ ಸರ್ಕಾರದ ಮನವಿ ಮೇರೆಗೆ ಚುನಾವಣಾ ಗಡುವನ್ನು ಆಗಸ್ಟ್‌ ಅಂತ್ಯದವರೆಗೆ ವಿಸ್ತರಿಸಲಾಗಿದೆ.

ಸೆಪ್ಟೆಂಬರ್‌ ಅಂತ್ಯದವರೆಗೆ ಕಾಲಾವಕಾಶ ನೀಡಬೇಕೆಂದು ಕರ್ನಾಟಕ ಸರ್ಕಾರ ಹಾಗೂ ರಾಜ್ಯ ಚುನಾವಣಾ ಆಯೋಗದ ಸುಪ್ರೀಂ ಕೋರ್ಟ್‌ಗೆ ಮನವಿ ಸಲ್ಲಿಸಿದ್ದವು. ಮನವಿಯನ್ನು ಆಲಿಸಿದ ಸಿಜೆಐ ಅವರನ್ನು ಒಳಗೊಂಡ ನ್ಯಾಯಪೀಠ ಈ ಆದೇಶ ನೀಡಿದೆ. ರಾಜ್ಯ ಸರ್ಕಾರ ಮತ್ತು ರಾಜ್ಯ ಚುನಾವಣಾ ಆಯೋಗ ಸಲ್ಲಿಸಿದ್ದ ಎರಡು ಪ್ರತ್ಯೇಕ ಅರ್ಜಿಗಳಲ್ಲಿ, ರಾಜ್ಯದಲ್ಲಿ ಚುನಾವಣಾ ಸಿಬ್ಬಂದಿ ವರ್ಗ ಜನಗಣತಿ, ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ, ಎಸ್‌ಎಸ್‌ಎಲ್‌ಸಿ ಮತ್ತು ಪಿಯು ಪರೀಕ್ಷೆಗಳಲ್ಲಿ ನಿರತರಾಗಿದ್ದಾರೆ. ಹೀಗಾಗಿ ಜಿಬಿಎ ಚುನಾವಣೆ ನಡೆಸಲು ಮೂರು ತಿಂಗಳ ಕಾಲಾವಕಾಶ ನೀಡಬೇಕೆಂದು ಮನವಿ ಮಾಡಿದ್ದವು.

Continue Reading

Latest

ದೇಶಾದ್ಯಂತ ಇಂದು ಮೆಡಿಕಲ್‌ ಸ್ಟೋರ್‌ ಬಂದ್‌

VISTARANEWS.COM


on

ಇ-ಫಾರ್ಮಸಿ ಹಾಗೂ ಆನ್‌ಲೈನ್‌ ಮೂಲಕ ಔಷಧ ಮಾರಾಟ ನಿಲ್ಲಿಸುವಂತೆ ಆಗ್ರಹಿಸಿ ಕರ್ನಾಟಕ ಸೇರಿದಂತೆ ದೇಶಾದ್ಯಂತ ಇಂದು ಮೆಡಿಕಲ್‌ ಸ್ಟೋರ್‌ಗಳು ಬಂದ್‌ ಆಗಿವೆ. ಅಖಿಲ ಭಾರತ ಔಷಧ ವ್ಯಾಪಾರಿಗಳ ಸಂಘದ ಕರೆ ಮೇರೆಗೆ ಬೆಂಗಳೂರು ಸೇರಿದಂತೆ ರಾಜ್ಯದ ಎಲ್ಲಾ ಜಿಲ್ಲಾ ಹಾಗೂ ತಾಲೂಕು ಕೇಂದ್ರಗಳಲ್ಲಿ ಮೆಡಿಕಲ್‌ ಸ್ಟೋರ್‌ ಮಾಲೀಕರು ಪ್ರತಿಭಟನೆ ನಡೆಸುತ್ತಿದ್ದಾರೆ.

ಆನ್‌ಲೈನ್‌ ಔಷಧ ವ್ಯಾಪಾರಕ್ಕೆ ಕಟ್ಟುನಿಟ್ಟಾದ ನಿಯಮ ಜಾರಿಗೊಳಿಸಬೇಕು, ಕಾರ್ಪೊರೇಟ್‌ ಸಂಸ್ಥೆಗಳ ಭಾರಿ ರಿಯಾಯಿತಿ ದರ ಸಮರಕ್ಕೆ ಬ್ರೇಕ್‌ ಹಾಕಬೇಕು ಹಾಗೂ ಎಲ್ಲಾ ವ್ಯಾಪಾರಿಗಳಿಗೆ ಸಮಾನ ಮುಕ್ತ ಮಾರುಕಟ್ಟೆ ವ್ಯವಸ್ಥೆ ಕಲ್ಪಿಸಬೇಕು ಎಂಬ ಬೇಡಿಕೆಗಳನ್ನು ಅಖಿಲ ಭಾರತ ಕೆಮಿಸ್ಟ್‌ ಮತ್ತು ಡ್ರಗ್ಗಿಸ್ಟ್‌ ಸಂಘ ಮುಂದಿಟ್ಟಿದೆ.

ಈ ಬಂದ್‌ನಿಂದ ಅನೇಕ ಕಡೆಗಳಲ್ಲಿ ಔಷಧ ಖರೀದಿಗೆ ಸಾರ್ವಜನಿಕರು ತೊಂದರೆ ಅನುಭವಿಸುತ್ತಿದ್ದಾರೆ. ಆದರೆ ತುರ್ತು ಸೇವೆಗಳಿಗಾಗಿ ಕೆಲವು ಮೆಡಿಕಲ್‌ ಸ್ಟೋರ್‌ಗಳು ಮಾತ್ರ ಕಾರ್ಯನಿರ್ವಹಿಸುತ್ತಿವೆ.

Continue Reading

Latest

ನಾಳೆ ದೇಶಾದ್ಯಂತ ಮೆಡಿಕಲ್ ಶಾಪ್‌ ಬಂದ್‌

VISTARANEWS.COM


on

ಆನ್‌ಲೈನ್‌ನಲ್ಲಿ ಔಷಧ ಮಾರಾಟವನ್ನು ವಿರೋಧಿಸಿ ನಾಳೆ ದೇಶಾದ್ಯಂತ ಮೆಡಿಕಲ್ ಶಾಪ್‌ಗಳ ಬಂದ್‌ಗೆ ಕರೆ ನೀಡಲಾಗಿದೆ. ದೇಶದಾದ್ಯಂತ ಸುಮಾರು 9 ಲಕ್ಷ ಔಷಧ ಅಂಗಡಿಗಳು ಪ್ರತಿಭಟನೆಯಲ್ಲಿ ಭಾಗವಹಿಸುವ ಸಾಧ್ಯತೆ ಇದೆ.
ಕರ್ನಾಟಕದಲ್ಲೂ ಸುಮಾರು 26 ಸಾವಿರಕ್ಕೂ ಹೆಚ್ಚು ಮೆಡಿಕಲ್ ಶಾಪ್‌ಗಳು ಬಂದ್ ಆಗುವ ಸಾಧ್ಯತೆ ಇದ್ದು, ಗ್ರಾಹಕರು ಅಗತ್ಯ ಔಷಧಿಗಳನ್ನು ಮುಂಚಿತವಾಗಿ ಖರೀದಿಸಿಕೊಳ್ಳುವಂತೆ ಸಂಘಟನೆಗಳು ಮನವಿ ಮಾಡಿವೆ.

ಇ-ಫಾರ್ಮಸಿ ವೇದಿಕೆಗಳ ಮೂಲಕ ಭಾರಿ ರಿಯಾಯಿತಿಯಲ್ಲಿ ಔಷಧ ಮಾರಾಟವಾಗುತ್ತಿರುವುದು ಸಣ್ಣ ಹಾಗೂ ಮಧ್ಯಮ ಮಟ್ಟದ ಮೆಡಿಕಲ್ ಅಂಗಡಿಗಳಿಗೆ ಹೊಡೆತ ನೀಡುತ್ತಿದೆ ಎಂದು ವ್ಯಾಪಾರಿಗಳು ಆರೋಪಿಸಿದ್ದಾರೆ. ಜೊತೆಗೆ ಆನ್‌ಲೈನ್ ಮೂಲಕ ನಿಯಂತ್ರಣವಿಲ್ಲದೆ ಔಷಧ ವಿತರಣೆ ನಡೆಯುತ್ತಿರುವುದರಿಂದ ರೋಗಿಗಳ ಆರೋಗ್ಯಕ್ಕೂ ಅಪಾಯ ಉಂಟಾಗಬಹುದು ಎಂದು ಎಚ್ಚರಿಸಿದ್ದಾರೆ.
ಆನ್‌ಲೈನ್ ಮೂಲಕ ಔಷಧ ಖರೀದಿ ವ್ಯವಸ್ಥೆಯನ್ನು ನಿಯಂತ್ರಿಸುವುದು ಹಾಗೂ ಇ-ಫಾರ್ಮಸಿ ಕಂಪನಿಗಳ ವಿರುದ್ಧ ಕಠಿಣ ನಿಯಮ ಜಾರಿಗೊಳಿಸುವಂತೆ ಕೇಂದ್ರ ಸರ್ಕಾರಕ್ಕೆ ಆಗ್ರಹಿಸಲಾಗಿದೆ.

Continue Reading

Latest

ಸಾರಿಗೆ ಮಷ್ಕರಕ್ಕೆ ಹೈಕೋರ್ಟ್‌ ಬ್ರೇಕ್‌

VISTARANEWS.COM


on

ಸಾರಿಗೆ ನೌಕರರ ಮುಷ್ಕರಕ್ಕೆ ಹೈಕೋರ್ಟ್‌ ನಿರ್ಬಂಧ ವಿಧಿಸಿದೆ. ಸಾರಿಗೆ ನೌಕರರು ಮುಷ್ಕರವನ್ನು ನಡೆಸಬಾರದು ಎಂದು ಸಾರಿಗೆ ಸಂಘಟನೆಗಳಿಗೆ ಹೈಕೋರ್ಟ್‌ ಸೂಚನೆ ನೀಡಿದ್ದು, ಸರ್ಕಾರವು ಕೂಡಲೇ ಸಂಘಟನೆಗಳೊಂದಿಗೆ ಮಾತುಕತೆ ನಡೆಸಬೇಕು ಎಂದು ನಿರ್ದೇಶಿಸಿದೆ.

ಮೇ.20 ರಿಂದ ರಾಜ್ಯಾದ್ಯಂತ ಸರ್ಕಾರಿ ಸಾರಿಗೆ ನೌಕರರು ಮುಷ್ಕರ ನಡೆಸಲು ಮುಂದಾಗಿದ್ದರು. ಮುಷ್ಕರಕ್ಕೆ ನಿರ್ಬಂಧ ವಿಧಿಸಿರುವ ಹೈಕೋರ್ಟ್‌, ಸಾರ್ವಜನಿಕರಿಗೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳಬೇಕೆಂದು ಸರ್ಕಾರಕ್ಕೆ ಸೂಚಿಸಿದೆ. ಇದೇ ವೇಳೆ ಸಾರಿಗೆ ಸಚಿವರೊಂದಿಗೆ ಸಂಘಟನೆಗಳು ಮಾತುಕತೆ ನಡೆಸುವಂತೆ ಸಲಹೆ ನೀಡಿದೆ.

ಈ ಸಂಬಂಧ ಸಾರಿಗೆ ಸಂಘಟನೆಗಳು, ರಾಜ್ಯ ಸರ್ಕಾರ ಹಾಗೂ ಸಾರಿಗೆ ಸಚಿವರಿಗೆ ಹೈಕೋರ್ಟ್‌ ನೋಟಿಸ್‌ ಜಾರಿಗೊಳಿಸಿದೆ. ಸಾರ್ವಜನಿಕರ ಸಂಚಾರಕ್ಕೆ ಯಾವುದೇ ಅಡಚಣೆ ಆಗದಂತೆ ತಕ್ಷಣ ಕ್ರಮ ಕೈಗೊಳ್ಳುವಂತೆ ನ್ಯಾಯಾಲಯ ಅಭಿಪ್ರಾಯಪಟ್ಟಿದೆ. ವಿಚಾರಣೆಯನ್ನು ಮೇ 21ಕ್ಕೆ ಮುಂದೂಡಲಾಗಿದೆ.

Continue Reading
Advertisement
galipata neetu
ಕಿರುತೆರೆ2 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ3 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌