ಮಡಿಕೇರಿ: ಕೊಡುಗು ಸೇರಿದಂತೆ ರಾಜ್ಯದ ಎಲ್ಲೆಡೆ ಸತತ ನಾಲ್ಕು ದಿನಗಳಿಂದ ಮಳೆ ಸುರಿಯುತ್ತಿದೆ (Rain News). ಹೀಗಾಗಿ ಘಟ್ಟ ಪ್ರದೇಶಗಳಲ್ಲಿ ಗುಡ್ಡ ಕುಸಿತ ಪ್ರಕರಣಗಳು ಸಂಭವಿಸುತ್ತಿವೆ. ಗುಡ್ಡದ ಸುತ್ತಮುತ್ತಲಿನ ಪ್ರದೇಶದ ನಿವಾಸಿಗಳ ಆತಂಕ ಇದರಿಂದಾಗಿ ಹೆಚ್ಚಾಗಿದೆ. ಇದೇ ವೇಳೆ ಕರ್ನಾಟಕದ ಪ್ರಮುಖ ಘಾಟಿಗಳಲ್ಲಿ ಹಾದು ಹೋಗಿರುವ ರಸ್ತೆ ಇಕ್ಕೆಲಗಳಲ್ಲಿ ಮಣ್ಣು ಕುಸಿತ ಉಂಟಾಗುತ್ತಿರುವ ಕಾರಣ ಮಡಿಕೇರಿ ಮೂಲಕ ಮಂಗಳೂರಿಗೆ ಸಂಪರ್ಕ ಕಲ್ಪಿಸುವ 275 ಬಂದ್ ಮಾಡಲಾಗಿದೆ.
ಜಿಲ್ಲಾಧಿಕಾರಿ ಹೊರಡಿಸಿದ ಆದೇಶ ಪ್ರತಿ ಈ ಕೆಳಗೆ ಇದೆ
ಮಡಿಕೇರಿ ಮಂಗಳೂರು ರಸ್ತೆಯ ಕರ್ತೋಜಿ ಬಳಿ ಗುಡ್ಡ ಕುಸಿಯುವ ಭೀತಿ ಉಂಟಾಗಿದ್ದು, ಯಾವುದೇ ಕ್ಷಣದಲ್ಲಿ ಗುಡ್ಡ ಜಾರಿ ರಸ್ತೆಗೆ ಬರುವ ಸಾಧ್ಯತೆಗಳಿವೆ. ಹೀಗಾಗಿ ಜುಲೈ 18ರಿಂದ 22ರವರೆಗೆ ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿ 275 ಬಂದ್ ಮಾಡಲು ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಗುರುವಾರದಿಂದ 5 ದಿನಗಳ ಕಾಲ ರಾತ್ರಿ 8ರಿಂದ ಬೆಳಗ್ಗೆ 6 ಗಂಟೆವರೆಗೆ ಅಧಿಕಾರಿಗಳು ರಸ್ತೆ ಪ್ರಯಾಣಕ್ಕೆ ನಿರ್ಬಂಧ ಹೇರಿದ್ದಾರೆ ಕರ್ತವ್ಯ ನಿರತ ಅಧಿಕಾರಿಗಳ ವಾಹನ ಹೊರತುಪಡಿಸಿ ಉಳಿದ ವಾಹನ ಸಂಚಾರ ಇಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಗುಡ್ಡ ಕುಸಿಯು ಭೀತಿ ಹುಟ್ಟಿಸಿರುವ ಗುಡ್ಡದ ಮಣ್ಣು ತೆರವು ಕಾರ್ಯ ಆರಂಭ ಮಾಡಲಾಗಿದೆ. ಅದೇ ರೀತಿ ಮಡಿಕೇರಿ ಬಳಿ ಬ್ಯಾರಿಕೇಡ್ ಹಾಕಿ ವಾಹನಗಳು ಮುಂದಕ್ಕೆ ಸಾಗದಂತೆ ಅಧಿಕಾರಿಗಳು ತಡೆಯುತ್ತಿದ್ದಾರೆ ಅದೇ ರೀತಿ ದಕ್ಷಿಣ ಕನ್ನಡದ ಮಾಣಿ ಬಳಿಯಲ್ಲೇ ವಾಹನಗಳಿಗೆ ತಡೆದು ಚಾರ್ಮಾಡಿ ಮಾರ್ಗವಾಗಿ ಹೋಗುವಂತೆ ಸೂಚನೆ ನೀಡಲಾಗುತ್ತಿದೆ. ರಸ್ತೆ ಬಂದ್ ಮಾಡುವ ನಿರ್ಧಾರ ತೆಗೆದುಕೊಂಡಿರು ಕಾರಣ ವಾಹನ ಸವಾರರು ಪರದಾಡುವಂತಾಗಿದೆ, ಮಂಗಳೂರು ಕಡೆ ಹೋಗುವ ವಾಹನ ಸವಾರರ ಪರದಾಡುವಂತಾಗಿದೆ.
ಹಾಸನದಲ್ಲಿ ಚಲಿಸುತ್ತಿದ್ದ ಕಾರಿನ ಮೇಲೆ ಗುಡ್ಡ ಕುಸಿತ; ಬೆಳಗಾವಿಯಲ್ಲಿ ರಸ್ತೆಗೆ ಉರುಳಿದ ಬೃಹತ್ ಬಂಡೆಗಲ್ಲು
ಹಾಸನ: ಚಲಿಸುತ್ತಿದ್ದ ಕಾರಿನ ಮೇಲೆ ಗುಡ್ಡ ಕುಸಿದಿದ್ದು, ಕಾರಿನಲ್ಲಿದ್ದವರಿಗೆ ಸಣ್ಣ ಪುಟ್ಟ ಗಾಯದಿಂದ ಪಾರಾಗಿದ್ದಾರೆ. ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಎತ್ತಿನಹಳ್ಳ ಬಳಿ ಘಟನೆ (Karnataka Rain) ನಡೆದಿದೆ. ರಾಷ್ಟ್ರೀಯ ಹೆದ್ದಾರಿ 75 ಶಿರಾಡಿಘಾಟ್ ರಸ್ತೆಯಲ್ಲಿ ಚಲಿಸುತ್ತಿದ್ದ ಕಾರಿನ ಮೇಲೆ ಏಕಾಏಕಿ ಮಣ್ಣು ಕುಸಿದಿದೆ. ಪರಿಣಾಮ ಕೆಲಕಾಲ ವಾಹನ ಸಂಚಾರ ಸ್ಥಗಿತಗೊಂಡಿತ್ತು. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಕಂದಾಯ ಇಲಾಖೆ ಸಿಬ್ಬಂದಿ ಮಣ್ಣು ತೆರವುಗೊಳಿಸಿದರು.
ಹಾಸನದ ಸಕಲೇಶಪುರ ತಾಲೂಕಿನಲ್ಲಿ ಎಡಬಿಡದೆ ಸುರಿಯುತ್ತಿರುವ ಮಳೆಯಿಂದ ಹಳ್ಳ ಕೊಳ್ಳಗಳು ಉಕ್ಕಿ ಹರಿಯುತ್ತಿದೆ. ಮಠಸಾಗರದ ಬಳಿ ನೀರು ನಿಂತು ಕೃಷ್ಣಾಪುರ ಸಂಪರ್ಕ ಕಡಿತಗೊಂಡಿದೆ. ಹಳ್ಳ ಉಕ್ಕಿ ಹರಿದ ಪರಿಣಾಮ ಕಾಫಿ, ಅಡಿಕೆ ತೋಟಗಳು ಜಲಾವೃತಗೊಂಡಿದೆ. ರಸ್ತೆ ಸಂಪರ್ಕ ಕಡಿತ ಹಿನ್ನೆಲೆಯಲ್ಲಿ ರೋಗಿಗಳನ್ನೂ ಆಸ್ಪತ್ರೆಗೆ ಕರೆದೊಯ್ಯಲಾಗದೆ ಪರದಾಟ ಅನುಭವಿಸಿದರು.
ಇದನ್ನೂ ಓದಿ: Karnataka Rain : ಭಾರಿ ಮಳೆ ಎಫೆಕ್ಟ್; ಉಕ್ಕಿ ಹರಿಯುತ್ತಿದ್ದ ನದಿಯಲ್ಲಿ ಕೊಚ್ಚಿ ಹೋದ ರಾಸು
ಶಿರಾಡಿಘಾಟ್‌ನಲ್ಲಿ ಗುಡ್ಡ ಕುಸಿತ
ಭಾರಿ ಮಳೆಗೆ ಶಿರಾಡಿಘಾಟ್‌ನ ಮತ್ತೊಂದು ಕಡೆ ಗುಡ್ಡ ಕುಸಿದಿದೆ. ಹಾಸನದ ಸಕಲೇಶಪುರ ತಾಲೂಕಿನ ಮಾರನಹಳ್ಳಿ ಸಮೀಪ ಘಟನೆ ನಡೆದಿದೆ. ಒಂದು ನೂರಾರು ಮೀಟರ್ ಎತ್ತರದಿಂದ ಕೆಳಗೆ ಗುಡ್ಡ ಕುಸಿದಿದೆ. ಕೂದಲೆಳೆ ಅಂತರದಲ್ಲಿ ವಾಹನ ಸವಾರರು ಪಾರಾಗಿದ್ದಾರೆ. ಸ್ಥಳಕ್ಕೆ ಹೆದ್ದಾರಿ ಪ್ರಾಧಿಕಾರದ ಸಿಬ್ಬಂದಿ ದೌಡಾಯಿಸಿದ್ದು, ಕೆಲಕಾಲ ವಾಹನ ಸಂಚಾರ ಸ್ಥಗಿತಗೊಂಡಿದೆ.
ಗುಡ್ಡ ಕುಸಿತದಿಂದ ಸುಮಾರು 10 ಕಿಮಿ ಟ್ರಾಫಿಕ್ ಜಾಮ್ ಉಂಟಾಗಿದ್ದು, ಟ್ರಕ್, ಲಾರಿ ಟ್ಯಾಕರ್ ಓಡಾಟಕ್ಕೆ ತಾತ್ಕಾಲಿಕ ತಡೆಹಿಡಿಯಲಾಗಿದೆ. ಅತ್ತ ಚಾರ್ಮಾಡಿ ಘಾಟ್‌ನಲ್ಲೂ ಪ್ರಯಾಣ ದುಸ್ಥರ ಹಿನ್ನೆಲೆಯಲ್ಲಿ ಹಾಸನದಲ್ಲಿಯೇ ವಾಹನ ನಿಲ್ಲಿಸಲು ಸೂಚನೆ ನೀಡಲಾಗಿದೆ. ಸದ್ಯ ಸಕಲೇಶಪುರದವರೆಗೆ ತೆರಳಲು ಸಾರಿಗೆ ಬಸ್‌ಗಳಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. ಮಂಗಳೂರು ಕಡೆಗೆ ಹೋಗುವ ಬಸ್‌ಗಳಿಗೂ ಹಾಸನ ತಾಲೂಕಿನ ಕಂದಲಿ ಬಳಿ ತಡೆಹಿಡಯಲಾಗಿದೆ.